– ಸಿದ್ದರಾಮಯ್ಯಗೆ ಬಡವರ ಬಗ್ಗೆ ಕಾಳಜಿ ಇದ್ರೆ ಅಕ್ಕಿ ಖರೀದಿಸಲಿ ಎಂದ ಸಚಿವ
ಹುಬ್ಬಳ್ಳಿ: 10 ಕೆಜಿ ಅಕ್ಕಿ (Rice) ರಾಜ್ಯ ಸರ್ಕಾರ ನೀಡುತ್ತಿಲ್ಲ. ದರ ಕಡಿಮೆ ಮಾಡಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದ್ರೆ ರಾಜ್ಯ ಸರ್ಕಾರದಿಂದ ಯಾವುದೇ ಆರ್ಡರ್ ಬಂದಿಲ್ಲ. ಎಫ್‌ಸಿಐದಲ್ಲಿ ಅಕ್ಕಿ ಲಭ್ಯವಿದೆ, ರಾಜ್ಯ ಸರ್ಕಾರ ಬೇಕಾದ್ರೆ ಕಡಿಮೆ ದರದಲ್ಲಿ ಅಕ್ಕಿ ಕೊಂಡುಕೊಳ್ಳಬಹದು ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಡಿಮೆ ದರದಲ್ಲಿ ಅಕ್ಕಿ ನೀಡಿದ್ರೆ ರಾಜ್ಯ ಸರ್ಕಾರಕ್ಕೆ ನೂರಾರು ಕೋಟಿ ಹಣ ಉಳಿಯುತ್ತದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಬಡವರ ಬಗ್ಗೆ ಕಾಳಜಿ ಇದ್ರೆ ನಮ್ಮಿಂದ ಕಡಿಮೆ ದರದಲ್ಲಿ ಅಕ್ಕಿ ತೆಗೆದುಕೊಳ್ಳಬಹದು. ಈ ಹಿಂದೆ ರಾಜ್ಯ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಎರಡು ಬಾರಿ ಅಕ್ಕಿಗಾಗಿ ಕೇಂದ್ರ ಬಳಿ ಮನವಿ ಮಾಡಿದ್ದಾರೆ. ಹೀಗಾಗಿ ಕಡಿಮೆ ದರದಲ್ಲಿ ಅಕ್ಕಿ ಕೊಡಲು ಕೇಂದ್ರ ಮುಂದಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ – 18 ಟೆಂಟ್‌ಗಳು ಭಸ್ಮ, ಪರಿಸ್ಥಿತಿ ಅವಲೋಕಿಸಿದ ಮೋದಿ
ಇನ್ನೂ ಸ್ವಾಮಿತ್ವ ಯೋಜನೆ ಕುರಿತು ಮಾತನಾಡಿದ ಸಚಿವರು, ಇದು 100% ಭಾರತ ಸರ್ಕಾರದ ಯೋಜನೆ. ಆದರೆ ಈ ಯೋಜನೆಗೆ ರಾಜ್ಯ ಸರ್ಕಾರದ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ಕೊಟ್ಟಿದ್ದಾರೆ. ಇದು ಪ್ರಧಾನಿಗಳ ಬಹು ಆಕಾಂಕ್ಷೆಯ ಯೋಜನೆ. ಆರಂಭದಲ್ಲಿ ರಾಜ್ಯದಲ್ಲಿ 30,715 ಹಳ್ಳಿಗಳ ಸರ್ವೆ ಕಾರ್ಯ ಈ ಯೋಜನೆಯಡಿ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕುಮಾರಸ್ವಾಮಿ ರಾಜ್ಯದ ಹಿತ ನೋಡಿ ಮಾತನಾಡಲಿ – ಸಚಿವ ಎಂ.ಬಿ ಪಾಟೀಲ್
ಕೇಂದ್ರ ಸರ್ಕಾರದಿಂದ 560 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ದೇಶದಲ್ಲಿ 3 ಲಕ್ಷ ಹಳ್ಳಿಗಳ ಸರ್ವೆ ಕಾರ್ಯ ನಡೆದಿದೆ. ಗ್ರಾಮೀಣ ಭಾಗದಲ್ಲಿ ವ್ಯಾಜ್ಯ, ಗಡಿ ಸಮಸ್ಯೆ, ಕಡಿಮೆ ಆಗಿದೆ. ಆದರೆ ನಿನ್ನೆ ಉದ್ಘಾಟನೆ ಮಾಡಿದ ಆಹ್ವಾನ ಪತ್ರದಲ್ಲಿ ಪ್ರಧಾನಿ ಮಂತ್ರಿ ಫೋಟೋ ಇಲ್ಲ. ಇದು ಕರ್ನಾಟಕ ಸರ್ಕಾರದ ಚಿಲ್ಲರೆತನ. ಈ ಚಿಲ್ಲರೆ ರಾಜಕೀಯ ಬಿಡಬೇಕು. ಈ ಯೋಜನೆಗೆ ಡ್ರೋನ್ ಸರ್ವೆ ಮಾಡಿಸಿತ್ತಿರೋದು ಕೇಂದ್ರ ಸರ್ಕಾರ, ಹಣ ನೀಡುತ್ತಿರುವುದು ಕೇಂದ್ರ ಸರ್ಕಾರ, ಇದನ್ನ ಮರೆಮಾಚಿ ರಾಜ್ಯ ಸರ್ಕಾರ ಚಿಲ್ಲರೆ ತನ ತೋರಿಸಿದೆ ಅಂತ ಜೋಶಿ ವಾಗ್ದಾಳಿ ನಡೆಸಿದರು.
– 2030ರ ಹೊತ್ತಿಗೆ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ
ನವದೆಹಲಿ: ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ ಅಥವಾ ವೈಜಾಗ್ ಸ್ಟೀಲ್ ಕಂಪನಿಯನ್ನು (Visakhapatnam Steel Plant) 11,440 ಕೋಟಿ ರೂ. ವೆಚ್ಚದಲ್ಲಿ ಪುನಶ್ಚೇತನಗೊಳಿಸಲಾಗುವುದು ಎಂದು ಕೇಂದ್ರದ ಉಕ್ಕು -ಬೃಹತ್ ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ (HD kumaraswamy) ಅವರು ಘೋಷಿಸಿದರು.
ಇದು ಐತಿಹಾಸಿಕ ನಿರ್ಧಾರ ಎಂದು ಬಣ್ಣಿಸಿರುವ ಕುಮಾರಸ್ವಾಮಿ ಅವರು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನಾಯಕತ್ವದಲ್ಲಿ ಇದು ಸಾಧ್ಯವಾಗಿದೆ. ದೇಶೀಯ ಉಕ್ಕು ಕ್ಷೇತ್ರಕ್ಕೆ ಶಕ್ತಿ ತುಂಬುವ ದಿಟ್ಟ ಹೆಜ್ಜೆ ಇದಾಗಿದೆ ಎಂದರು.
The Visakhapatnam Steel Plant has a special place in the hearts and minds of the people of Andhra Pradesh. During yesterday’s Cabinet meeting, it was decided to provide equity support of over Rs. 10,000 crore for the plant. This has been done understanding the importance of the…
ನವದೆಹಲಿ ಉಕ್ಕು ಸಚಿವಾಲಯದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯಲ್ಲಿ ಕುಮಾರಸ್ವಾಮಿ ಅವರು, ತಮ್ಮ ಇಲಾಖೆಯ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ ಹಾಗೂ ಕೇಂದ್ರ ವಿಮಾನಯಾನ ಖಾತೆ ಸಚಿವ ರಾಮಮೋಹನ್ ನಾಯ್ಡು ಅವರ ಜೊತೆಗೂಡಿ ವೈಜಾಗ್ ಸ್ಟೀಲ್ ಪ್ಯಾಕೇಜ್ ಅನ್ನು ಘೋಷಣೆ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಗುರುವಾರ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (CCEA) ಸಭೆಯಲ್ಲಿ ವೈಜಾಗ್ ಸ್ಟೀಲ್ ಪುನಶ್ಚೇತನ ಪ್ಯಾಕೇಜ್‌ಗೆ ಅನುಮೋದನೆ ನೀಡಲಾಗಿದೆ. ಪ್ರಧಾನಿ ಮೋದಿ ಅವರು ಸಂಕ್ರಾಂತಿ ಹೊತ್ತಿಗೆ ಆಂಧ್ರ ಪ್ರದೇಶ ಜನತೆಗೆ ಶುಭ ಸುದ್ದಿ ಕೊಡುತ್ತೇವೆ ಎಂದು ಹೇಳಿದ್ದರು. ಅದರಂತೆ ವಿಶಾಖಪಟ್ಟಣ ಸ್ಟೀಲ್ ಕಾರ್ಖಾನೆಯ ಪುನಶ್ಚೇತನ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಪ್ರಧಾನಿಗಳಿಗೆ ಹಾಗೂ ನಮ್ಮ ಪ್ರಯತ್ನಗಳಿಗೆ ಸಂಪೂರ್ಣ ಸಹಕಾರ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ವಿಶೇಷ ಧನ್ಯವಾದ ಸಲ್ಲಿಸುವೆ ಎಂದು ಸಚಿವರು ಹೇಳಿದರು.
A heartfelt thanks to Hon’ble Finance Minister Smt. @nsitharaman avaru for her unwavering support in ensuring the revival of @RINL_VSP (Vizag Steel Plant). This crucial financial support reinforces the commitment to making India a global leader in steel production. Together, we… pic.twitter.com/XyLfuN80S9
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 17, 2025
ವಾರ್ಷಿಕ 7.3 ದಶಲಕ್ಷ ಟನ್ ಉಕ್ಕು ಉತ್ಪಾದನೆ
ಕಾರ್ಖಾನೆಯ ಪುನಚ್ಚೆತನ ಪ್ಯಾಕೇಜ್‌ನ ಪೂರ್ಣ ವಿವರಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು. ಎಲ್ಲಾ ಮೂರು ಬ್ಲಾಸ್ಟ್ ಪರ್ನೆಸ್‌ಗಳಿಗೆ ಚಾಲನೆ ಕೊಟ್ಟು ಕೆಲವೇ ತಿಂಗಳಲ್ಲಿ ಇಡೀ ಕಾರ್ಖಾನೆ ಪೂರ್ಣ ಪ್ರಮಾಣದಲ್ಲಿ ಉಕ್ಕು ಉತ್ಪಾದನೆಗೆ ಅಗತ್ಯವಾದ ಎಲ್ಲಾ ವ್ಯವಸ್ಥೆ ಮಾಡುತ್ತೇವೆ. ಅಲ್ಲದೆ, ಕಾರ್ಖಾನೆ ಹೊಂದಿರುವ ಸಾಲವನ್ನು ಗಮನದಲ್ಲಿಟ್ಟುಕೊಂಡು ಉತ್ಪಾದನೆಯ ದಕ್ಷತೆ, ಕ್ಷಮತೆಯನ್ನು ಹೆಚ್ಚಿಸುತ್ತೇವೆ. ವಾರ್ಷಿಕ 7.3 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ ಮುಟ್ಟಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಎಷ್ಟು ಹೂಡಿಕೆ?
ವೈಜಾಗ್ ಸ್ಟೀಲ್ ಕಾರ್ಖಾನೆಗೆ ಈ ಪ್ಯಾಕೇಜ್‌ನಲ್ಲಿ 10,300 ಕೋಟಿ ಹೂಡಿಕೆ ಮಾಡಲಾಗುವುದು ಹಾಗೂ 1,140 ಕೋಟಿಯನ್ನು ಷೇರು ರೂಪದಲ್ಲಿ ನಿರ್ವಹಣಾ ಬಂಡವಾಳವಾಗಿ ತೊಡಗಿಸಲಾಗುವುದು. ಈ 1,140 ಕೋಟಿಯನ್ನು 10 ವರ್ಷಗಳ ವರೆಗೂ ವಾಪಸ್ ಪಡೆಯಲು ಅವಕಾಶ ಇರುವುದಿಲ್ಲ. ಇದು ಮಹತ್ವದ ನಿರ್ಧಾರ ಆಗಿದೆ ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.
ಕಾರ್ಖಾನೆಯನ್ನು ಅತ್ಯಂತ ದಕ್ಷತೆ, ಕ್ಷಮತೆಯಿಂದ ಮುನ್ನಡೆಸುತ್ತೇವೆ. ಇದು ಸಂಪೂರ್ಣವಾಗಿ ಸರ್ಕಾರಿ ಸ್ವಾಮ್ಯದ ಕೈಗಾರಿಕೆಯಾಗಿದೆ. ಇದನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಾವು ಸಂಘಟಿತ ಪ್ರಯತ್ನ ನಡೆಸಿದ್ದೇವೆ. ಸಮುದ್ರ ದಂಡೆಯಲ್ಲಿರುವ ದೇಶದ ಅತ್ಯಂತ ವ್ಯೂಹಾತ್ಮಕ ಉಕ್ಕು ಸ್ಥಾವರವನ್ನು ರಕ್ಷಿಸಿಕೊಳ್ಳಲು ಹಾಗೂ ನಿರೀಕ್ಷಿತ ಗುರಿಗಳನ್ನು ಮುಟ್ಟಲು ನಾವು ಶ್ರಮಿಸುತ್ತೇವೆ ಎಂದು ಅವರು ಹೇಳಿದರು.
2025ರ ಜನವರಿ ವೇಳೆಗೆ ಎರಡು ಬ್ಲಾಸ್ಟ್ ಫರ್ನೇಸ್‌ಗಳೊಂದಿಗೆ ಮತ್ತು ಆಗಸ್ಟ್ 2025 ರ ವೇಳೆಗೆ ಮೂರು ಬ್ಲಾಸ್ಟ್ ಫರ್ನೇಸ್‌ಗಳೊಂದಿಗೆ ಕಾರ್ಯಾಚರಣೆಯನ್ನು ಪುನರಾರಂಭಿಸಲು ಯೋಜಿಸಿದ್ದೇವೆ. ದೇಶೀಯ ಉಕ್ಕು ಉತ್ಪಾದನೆ ಹಾಗೂ ಉಕ್ಕು ಮಾರುಕಟ್ಟೆಗೆ ಈ ಕ್ರಮ ದೊಡ್ಡ ಕೊಡುಗೆ ನೀಡುತ್ತದೆ. ಮುಖ್ಯವಾಗಿ ಸಾವಿರಾರು ಉದ್ಯೋಗಿಗಳು ಮತ್ತು ಅವರ ಅವಲಂಬಿತರ ಜೀವನೋಪಾಯಕ್ಕೆ ಅನುಕೂಲವಾಗಲಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
2030ರ ಹೊತ್ತಿಗೆ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ
ಪ್ರಧಾನಿ ನರೇಂದ್ರ ಮೋದಿ ಅವರು 2030ರ ಹೊತ್ತಿಗೆ ದೇಶೀಯವಾಗಿ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿಯನ್ನು ನಿಗದಿ ಮಾಡಿದ್ದಾರೆ. ಈ ಗುರಿ ಮುಟ್ಟಬೇಕಾದರೆ ಅನೇಕ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ವೈಜಾಗ್ ಸ್ಟೀಲ್ ಪುನಶ್ಚೇತನ ಯೋಜನೆಯನ್ನು ಇದೇ ಉದ್ದೇಶದಿಂದ ರೂಪಿಸಲಾಗಿದೆ. ದೇಶೀಯ ಉಕ್ಕು ಉದ್ಯಮಕ್ಕೆ ಈ ಕಾರ್ಖಾನೆಯ ಬಹುದೊಡ್ಡ ಕೊಡುಗೆ ನೀಡುತ್ತದೆ ಎಂದು ಅವರು ಹೇಳಿದರು.
ವಿಶಾಪಟ್ಟಣ ಉಕ್ಕು ಕಾರ್ಖಾನೆಯನ್ನು ಪುನಶ್ಚೇತನ ಮಾಡಬೇಕು ಎಂಬುದು ಆಂಧ್ರ ಪ್ರದೇಶ ಜನರ ಬಹುಕಾಲದ ಬೇಡಿಕೆ ಆಗಿತ್ತು. ನಾನು ಉಕ್ಕು ಸಚಿವನಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ನನ್ನ ಮೊದಲ ಅಧಿಕೃತ ಭೇಟಿಯನ್ನು ಈ ಕಾರ್ಖಾನೆಗೆ ನೀಡಿದೆ. ಇಡೀ ಕಾರ್ಖಾನೆ ವೀಕ್ಷಣೆ ಜತೆಗೆ ಆಡಳಿತ ಮಂಡಳಿ ಹಾಗೂ ಕಾರ್ಮಿಕ ಸಂಘಟನೆಗಳ ಜತೆ ಸಭೆ ನಡೆಸಿದ್ದೆ ಎಂದು ಅವರು ಹೇಳಿದರು.
ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ನೌಕರರ ವೇತನ ಮತ್ತು ಪಿಂಚಣಿದಾರರ ಭತ್ಯೆಗಳನ್ನು ಪರಿಷ್ಕರಿಸಲು 8 ನೇ ವೇತನ ಆಯೋಗವನ್ನು (8th Pay Commission) ರಚಿಸಲು ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 8 ನೇ ವೇತನ ಆಯೋಗವನ್ನು ರಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದ್ದಾರೆ.
#WATCH | Delhi: Union Minister Ashwini Vaishnaw says, “Prime Minister has approved the 8th Central Pay Commission for all employees of Central Government…” pic.twitter.com/lrVUD25hFu
ಆಯೋಗಕ್ಕೆ ಶೀಘ್ರದಲ್ಲೇ ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರನ್ನು ನೇಮಕ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರವು ಪ್ರತಿ 10 ವರ್ಷಕ್ಕೊಮ್ಮೆ ತನ್ನ ಉದ್ಯೋಗಿಗಳ ವೇತನವನ್ನು ಪರಿಷ್ಕರಿಸಲು ವೇತನ ಆಯೋಗವನ್ನು ರಚಿಸುತ್ತದೆ. ವೇತನ ಪರಿಷ್ಕರಿಸುವುದರ ಜೊತೆಗೆ, ಪ್ರತಿ ವೇತನ ಆಯೋಗವು ಒಂದು ಉಲ್ಲೇಖ ಅವಧಿಯನ್ನು (ToR) ಹೊಂದಿದೆ. ವೇತನ ಆಯೋಗಗಳು ಪಿಂಚಣಿ ಪಾವತಿಗಳನ್ನು ಸಹ ನಿರ್ಧರಿಸುತ್ತವೆ.
7ನೇ ವೇತನ ಆಯೋಗವನ್ನು 2016 ರಲ್ಲಿ ರಚಿಸಲಾಗಿತ್ತು. ಅದರ ಅವಧಿ 2026 ರಲ್ಲಿ ಕೊನೆಗೊಳ್ಳಲಿದೆ.
ನವದೆಹಲಿ: ಕರ್ನಾಟಕ ಮತ್ತು ಗುಜುರಾತ್‌ನಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಪತ್ತೆಯಾದ ಬೆನ್ನಲೆ ಉನ್ನತ ವೈದ್ಯಕೀಯ ಸಂಸ್ಥೆಯಾದ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಸ್ಪಷ್ಟನೆ ನೀಡಿದ್ದು, ಭಾರತ ಸೇರಿದಂತೆ ಜಾಗತಿಕವಾಗಿ ವೈರಸ್ ಪರಿಚಲನೆಯಲ್ಲಿದೆ ಎಂದು ಎಚ್ಚರಿಸಿದೆ.
ಬೆಂಗಳೂರಿನಲ್ಲಿ ಎಚ್‌ಎಂಪಿವಿಯ ಎರಡೂ ಪ್ರಕರಣಗಳು ವರದಿಯಾಗುತ್ತಿದ್ದಂತೆ ಐಎಂಸಿಆರ್‌ನ ಈ ಹೇಳಿಕೆ ಬಂದಿದೆ. ಸೋಂಕಿತ 3 ತಿಂಗಳ ಮಗು ಡಿಸ್ಚಾರ್ಜ್ ಆಗಿದ್ದು, 8 ತಿಂಗಳ ಮಗು ಚೇತರಿಸಿಕೊಳ್ಳುತ್ತಿದೆ. ಆರೋಗ್ಯ ಇಲಾಖೆಯು ಇತರ ಪ್ರದೇಶಗಳು ಅಥವಾ ದೇಶಗಳಿಂದ ವೈರಸ್ ಬರುವುದನ್ನು ತಳ್ಳಿಹಾಕಿದೆ. ಸೋಂಕಿತ ಶಿಶುಗಳು ಮತ್ತು ಅವರ ಕುಟುಂಬಗಳು ಇತ್ತೀಚೆಗೆ ಯಾವುದೇ ಪ್ರಯಾಣದ ಇತಿಹಾಸವನ್ನು ಹೊಂದಿಲ್ಲ ಎಂದು ಹೇಳಿದರು. ಇದನ್ನೂ ಓದಿ: `ಕೈ’ಗೆ 60% ಕಮೀಷನ್ ಆರೋಪ: ಹೆಚ್‌ಡಿಕೆಗೆ ಬಿಜೆಪಿ ಸಾತ್ – ಸಿಎಂ ಸಚಿವರು ಟಕ್ಕರ್
ಬಹು ಉಸಿರಾಟದ ವೈರಲ್ ರೋಗಕಾರಕಗಳ ವಾಡಿಕೆಯ ಕಣ್ಗಾವಲಿನ ಮೂಲಕ ಎರಡೂ ಪ್ರಕರಣಗಳನ್ನು ಗುರುತಿಸಲಾಗಿದೆ ಎಂದು ಅದು ಹೇಳಿದೆ. ಎಚ್‌ಎಂಪಿವಿ ಈಗಾಗಲೇ ಭಾರತವನ್ನು ಒಳಗೊಂಡಂತೆ ಜಾಗತಿಕವಾಗಿ ಚಲಾವಣೆಯಲ್ಲಿದೆ ಎಚ್‌ಎಂಪಿವಿಯೊಂದಿಗೆ ಸಂಬಂಧಿಸಿದ ಉಸಿರಾಟದ ಕಾಯಿಲೆಗಳ ಪ್ರಕರಣಗಳು ವಿವಿಧ ದೇಶಗಳಲ್ಲಿ ವರದಿಯಾಗಿದೆ ಎಂದು ಒತ್ತಿಹೇಳಲಾಗಿದೆ. ಇದಲ್ಲದೆ, ಐಸಿಎಂಆರ್ ಮತ್ತು ಇಂಟಿಗ್ರೇಟೆಡ್ ಡಿಸೀಸ್ ಸರ್ವೆಲೆನ್ಸ್ ಪ್ರೋಗ್ರಾಂ (ಐಡಿಎಸ್‌ಪಿ) ನೆಟ್ವರ್ಕ್‌ನ ಪ್ರಸ್ತುತ ಡೇಟಾವನ್ನು ಆಧರಿಸಿ, ಇನ್ಫ್ಲುಯೆನ್ಸ ತರಹದ ಕಾಯಿಲೆ (ಐಎಲ್‌ಐ) ಅಥವಾ ತೀವ್ರವಾದ ಉಸಿರಾಟದ ಕಾಯಿಲೆಯಲ್ಲಿ ಯಾವುದೇ ಅಸಾಮಾನ್ಯ ಉಲ್ಬಣವು ಕಂಡುಬಂದಿಲ್ಲ ಎಂದು ಐಸಿಎಂಆರ್ ಹೇಳಿದೆ.
ಕೇಂದ್ರ ಆರೋಗ್ಯ ಸಚಿವಾಲಯವು ಲಭ್ಯವಿರುವ ಎಲ್ಲಾ ಕಣ್ಗಾವಲು ಚಾನೆಲ್‌ಗಳ ಮೂಲಕ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿರುವಾಗ, ಐಸಿಎಂಆರ್ ವರ್ಷವಿಡೀ ಎಚ್‌ಎಂಪಿವಿ ಚಲಾವಣೆಯಲ್ಲಿರುವ ಪ್ರವೃತ್ತಿಯನ್ನು ಪತ್ತೆಹಚ್ಚುವುದನ್ನು ಮುಂದುವರಿಸುತ್ತದೆ ಎಂಬುದನ್ನು ಅದು ಗಮನಿಸಿದೆ.
ಚೀನಾದಲ್ಲಿ ಪ್ರಕರಣಗಳ ಉಲ್ಬಣದ ನಂತರ ಎಚ್‌ಎಂಪಿವಿ ಮತ್ತು ಇತರ ಉಸಿರಾಟದ ವೈರಸ್‌ಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಕೇಂದ್ರವು ಈ ಹಿಂದೆ ಘೋಷಿಸಿತ್ತು. ವಿಶ್ವ ಆರೋಗ್ಯ ಸಂಸ್ಥೆ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮತ್ತು ಇತರ ಆರೋಗ್ಯ ಸಂಸ್ಥೆಗಳ ಪ್ರತಿನಿಧಿಗಳು ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಲು ಜಂಟಿ ಮಾನಿಟರಿಂಗ್ ಗ್ರೂಪ್ ಅನ್ನು ನಡೆಸಿದರು. ಇದನ್ನೂ ಓದಿ: 40% ಆರೋಪಕ್ಕೆ ಕಾಂಗ್ರೆಸಿಗರು ಏನು ದಾಖಲೆ ಕೊಟ್ಟಿದ್ರು: ಬೊಮ್ಮಾಯಿ ಟಕ್ಕರ್
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಹೆಚ್ಚುತ್ತಿರುವ ಬಾಣಂತಿಯರ ಸಾವಿಗೆ (Maternal Death) ನ್ಯಾಯ ಕೊಡಿಸಲು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಹಾಗೂ ಕೇಂದ್ರ ಸರ್ಕಾರದಿಂದ ಸಂಶೋಧನಾ ತಂಡವನ್ನು ಕಳುಹಿಸಿ ಪರಿಶೀಲಿಸಬೇಕೆಂದು ಸಂಸದ ಡಾ.ಕೆ ಸುಧಾಕರ್ (K Sudhakar) ಅವರು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ (JP Nadda) ಅವರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಅವರು ಸಚಿವರಿಗೆ ಪತ್ರ ಬರೆದಿರುವ ಸುಧಾಕರ್, ಕಳೆದ ಕೆಲವು ತಿಂಗಳಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಮೃತಪಡುವ ಘಟನೆ ವರದಿಯಾಗುತ್ತಿದೆ. 2024ರ ನವೆಂಬರ್‌ವರೆಗೆ 348 ತಾಯಂದಿರು ಮೃತಪಟ್ಟಿದ್ದಾರೆ. ಆಗಸ್ಟ್‌ನಿಂದ ನವೆಂಬರ್‌ವರೆಗೆ ಕೇವಲ 4 ತಿಂಗಳಲ್ಲಿ 217 ಪ್ರಕರಣ ವರದಿಯಾಗಿದೆ. ಈ 217 ಪ್ರಕರಣಗಳಲ್ಲಿ 179 ಪ್ರಕರಣಗಳು ಸರ್ಕಾರಿ ಆಸ್ಪತ್ರೆಗಳಿಗೆ ಸಂಬಂಧಿಸಿದ್ದಾಗಿದೆ. ಹೆಚ್ಚಿನವು ಪಿಪಿಎಚ್ ಹಾಗೂ ಎಎಫ್‌ಇ, ಅನೀಮಿಯ ಹಾಗೂ ನಿರ್ವಹಣೆಯಲ್ಲಿ ಲೋಪಕ್ಕೆ ಸಂಬಂಧಿಸಿದೆ. ಆಂಟಿಬಯೋಟಿಕ್ ಕೊರತೆ, ತರಬೇತಿ ಹೊಂದಿರುವ ಸಿಬ್ಬಂದಿ ಕೊರತೆ ಮೊದಲಾದವು ಕೂಡ ಇದಕ್ಕೆ ಕಾರಣ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಬಜೆಟ್; ಆರ್ಥಿಕ ಸುಧಾರಣೆಗೆ ಐದು ವಲಯಗಳಲ್ಲಿ ಬದಲಾವಣೆ ನಿರೀಕ್ಷೆ
ಇದರಲ್ಲಿ ಲಿಂಜರ್ಸ್ ಲ್ಯಾಕ್ಟೇಟ್ ದ್ರಾವಣದಲ್ಲಿ ದೋಷ ಕೂಡ ಕಾರಣ ಎನ್ನಲಾಗುತ್ತಿದೆ. ಈ ಕುರಿತು ಸಮಗ್ರವಾದ ಪರಿಶೀಲನೆ ನಡೆಯುವ ಅಗತ್ಯವಿದೆ. ಮೊದಲಿಗೆ, ತಾಯಂದಿರ ಮರಣಕ್ಕೆ ಕಾರಣ ಪತ್ತೆ ಮಾಡಲು ತುರ್ತಾಗಿ ಕಾರ್ಯಯೋಜನೆ ರೂಪಿಸಬೇಕಿದೆ. ಜೊತೆಗೆ ಕೇಂದ್ರ ಸರ್ಕಾರದಿಂದ ಸಂಶೋಧನಾ ತಂಡವನ್ನು ಕಳುಹಿಸಿ, ಕಾರಣ ಪತ್ತೆ ಜೊತೆಗೆ, ಪರಿಹಾರ ಶಿಫಾರಸು ಮಾಡಬೇಕಿದೆ. ಗರ್ಭಿಣಿಯರ ಆರೈಕೆ ಹಾಗೂ ಹೆರಿಗೆ ಸಮಯದಲ್ಲಿ ಉತ್ತಮ ಸೇವೆ ನೀಡಲು ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಬೇಕಿದೆ. ಕಬ್ಬಿಣಾಂಶದ ಆಹಾರ ಸೇವನೆ, ತುರ್ತು ಆರೈಕೆ, ಪ್ರತಿ ದಿನ ಆರೋಗ್ಯ ತಪಾಸಣೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಗರ್ಭಿಣಿಯರಿಗೆ ಮಾಹಿತಿ ನೀಡಿ ಅರಿವು ಮೂಡಿಸಬೇಕು ಎಂದು ಅವರು ಪತ್ರದಲ್ಲಿ ಕೋರಿದ್ದಾರೆ. ಇದನ್ನೂ ಓದಿ: ಕ್ಯಾಲಿಫೋರ್ನಿಯಾದಲ್ಲಿ ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನ; 2 ಸಾವು
ದೇಶದ ಭವಿಷ್ಯದ ದೃಷ್ಟಿಯಿಂದ ನವಜಾತ ಶಿಶು ಹಾಗೂ ತಾಯಂದಿರ ಜೀವ ಕಾಪಾಡುವುದು ಬಹಳ ಅಗತ್ಯ. ಆದ್ದರಿಂದ ತಾವು ಈ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುವ ಮೂಲಕ ಕರ್ನಾಟಕದಲ್ಲಿ ಹಾಗೂ ಭಾರತದ ಯಾವುದೇ ಭಾಗದಲ್ಲಿ ತಾಯಂದಿರು ಮೃತಪಡದಂತೆ ಎಚ್ಚರ ವಹಿಸಲು ಸಾಧ್ಯವಾಗುತ್ತದೆ. ಈ ಎಲ್ಲ ಕಾರ್ಯಗಳಿಗೆ ನಾನು ಸಂಪೂರ್ಣ ಸಹಕಾರ ಹಾಗೂ ಬೆಂಬಲ ನೀಡುತ್ತೇನೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: BBK 11: 2ನೇ ಮಗುವಿನ ಬಗ್ಗೆ ಮಾತನಾಡಿದ ಧನರಾಜ್- ನಾಚಿ ನೀರಾದ ಪತ್ನಿ
ಬೆಂಗಳೂರು: ಕನಿಷ್ಠ ಬೆಂಬಲ ಬೆಲೆಯಲ್ಲಿ (MSP) ತೊಗರಿ ಮತ್ತು ಕಡಲೆ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರವು 3,06,150 ಮೆಟ್ರಿಕ್ ಟನ್ ತೊಗರಿ, 96,498 ಮೆಟ್ರಿಕ್ ಟನ್ ಕಡಲೆ ಖರೀದಿ ಮಾಡಲಿದೆ. ಪ್ರತಿ ಕ್ವಿಂಟಲ್‌ಗೆ ತೊಗರಿಗೆ 7,550 ರೂ. ಹಾಗೂ ಕಡಲೆಗೆ 5,650 ರೂ. ದರವನ್ನು ನಿಗದಿ ಮಾಡಲಾಗಿದೆ.
ಧಾರವಾಡ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಗದಗ, ಬೆಳಗಾವಿ, ವಿಜಯಪುರ ಕಲಬುರಗಿ, ಯಾದಗಿರಿ, ಬೀದರ್, ಬಾಗಲಕೋಟೆ, ದಾವಣಗೆರೆ, ಚಿಕ್ಕಮಗಳೂರು ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕಡಲೆಯನ್ನು ಖರೀದಿ ಮಾಡಲಾಗುತ್ತದೆ.
ಕೇಂದ್ರ ಸರ್ಕಾರದ ಅನುಮತಿ ಬೆನ್ನಲ್ಲೇ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭಿಸುವಂತೆ ಜವಳಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ (Shivanand Patil) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
– ಆರ್‌ಟಿಇ ಕಾಯ್ದೆಗೆ ಕೇಂದ್ರದಿಂದ ತಿದ್ದುಪಡಿ – ಫಲಿತಾಂಶ ಪ್ರಕಟವಾದ 2 ತಿಂಗಳ ಒಳಗಡೆ ಪರೀಕ್ಷೆ – ಸಪ್ಲಿಮೆಂಟರಿ ಪರೀಕ್ಷೆಯಲ್ಲೂ ಫೇಲ್ ಆದರೆ ಅದೇ ಕ್ಲಾಸ್‌ನಲ್ಲಿ ಓದಬೇಕು
ನವದೆಹಲಿ: 5 ಮತ್ತು 8ನೇ ತರಗತಿ ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ (Union Government) ಮಹತ್ವದ ತೀರ್ಮಾನವನ್ನು ಕೈಗೊಂಡಿದೆ. ಇನ್ನು ಮುಂದೆ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಫೇಲ್ ಆದರೆ ಅದೇ ತರಗತಿಯಲ್ಲೇ ಓದಬೇಕಾಗುತ್ತದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮಕ್ಕಳ ಹಕ್ಕು (RTE) ಕಾಯ್ದೆ ನಿಯಮಗಳು – 2010 ಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದೆ. ಹೊಸ ನಿಯಮಗಳ ಪ್ರಕಾರ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸುವ ಅಧಿಕಾರವನ್ನು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ನೀಡಿದೆ. ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಫೇಲ್ ಆದರೆ ಅವರು ಅದೇ ತರಗತಿಯಲ್ಲಿ ಮುಂದುವರಿಯಬೇಕಾಗುತ್ತದೆ.
ವಿದ್ಯಾರ್ಥಿ 5 ಮತ್ತು 8 ನೇ ತರಗತಿಯಲ್ಲಿ ಫೇಲ್ (Fail) ಆದರೆ ಫಲಿತಾಂಶ ಪ್ರಕಟವಾದ 2 ತಿಂಗಳ ಒಳಗಡೆ ಮತ್ತೊಮ್ಮೆ ಪರೀಕ್ಷೆ (Exam) ಬರೆಯಬೇಕಾಗುತ್ತದೆ. ಈ ಪರೀಕ್ಷೆಯಲ್ಲೂ ಫೇಲ್ ಆದರೆ ಆ ವಿದ್ಯಾರ್ಥಿ ಅದೇ ತರಗತಿಯಲ್ಲೇ ಓದಬೇಕಾಗುತ್ತದೆ. ಆದರೆ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿಯನ್ನು ಶಾಲೆಗಳು ಹೊರ ಹಾಕುವಂತಿಲ್ಲ ಎಂದು ಶಿಕ್ಷಣ ಸಚಿವಾಲಯ ಪ್ರಕಟಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ. ಇದನ್ನೂ ಓದಿ: 5 ರೂ. ಕುರ್ ಕುರೆಗಾಗಿ ಮಾರಾಮಾರಿ – 10ಕ್ಕೂ ಹೆಚ್ಚು ಜನ ಆಸ್ಪತ್ರೆ ಪಾಲು
ಕೇಂದ್ರೀಯ ವಿದ್ಯಾಲಯ, ನವೋದಯ ವಿದ್ಯಾಲಯ, ಮತ್ತು ಸೈನಿಕ ಶಾಲೆಗಳು ಸೇರಿದಂತೆ ಕೇಂದ್ರ ಸರ್ಕಾರವು ನಡೆಸುತ್ತಿರುವ 3,000 ಕ್ಕೂ ಹೆಚ್ಚು ಶಾಲೆಗಳಿಗೆ ಅಧಿಸೂಚನೆಯು ಅನ್ವಯವಾಗುತ್ತದೆ.
ಶಾಲಾ ಶಿಕ್ಷಣ ರಾಜ್ಯಕ್ಕೆ ಸಂಬಂಧಿಸಿದ ವಿಷಯವಾಗಿರುವ ಕಾರಣ ರಾಜ್ಯಗಳು ಈ ವಿಷಯದಲ್ಲಿ ತಮ್ಮ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಈಗಾಗಲೇ ದೆಹಲಿ ಸೇರಿದಂತೆ 16 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳು ಈ ನಿಯಮವನ್ನು ಜಾರಿ ಮಾಡಿದೆ. ಹರಿಯಾಣ ಮತ್ತು ಪುದುಚೇರಿ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಆದರೆ ಉಳಿದ ರಾಜ್ಯಗಳು ಮತ್ತು ಕೆಂದ್ರಾಡಳಿತ ಪ್ರದೇಶಗಳ ಈ ನೀತಿಯನ್ನು ಮುಂದುವರಿಸಲು ನಿರ್ಧರಿಸಿವೆ ಎಂದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನವದೆಹಲಿ: ʻಒಂದು ದೇಶ-ಒಂದು ಚುನಾವಣೆʼ ಮಸೂದೆಯನ್ನು (One Nation One Election Bill) ಪ್ರಸಕ್ತ ಅಧಿವೇಶನದಲ್ಲೇ ಮಂಡಿಸುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆಗಳು ವರದಿ ಮಾಡಿವೆ.
ʻಒಂದು ದೇಶ ಒಂದು ಚುನಾವಣೆʼ ಕುರಿತ ರಾಮನಾಥ್ ಕೋವಿಂದ್ ಸಮಿತಿಯ (Ram Nath Kovind Committee )ವರದಿಗೆ ಸಂಪುಟ ಈಗಾಗಲೇ ಅನುಮೋದನೆ ನೀಡಿದೆ. ಸರ್ಕಾರವು ಈಗ ಮಸೂದೆಯ ಬಗ್ಗೆ ಒಮ್ಮತವನ್ನು ರೂಪಿಸಲು ಬಯಸಿದೆ ಮತ್ತು ಅದನ್ನು ವಿವರವಾದ ಚರ್ಚೆಗಾಗಿ ಜಂಟಿ ಸಂಸದೀಯ ಸಮಿತಿ (JPC)ಗೆ ಕಳುಹಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ ಎನ್ನಲಾಗಿದೆ. ಇದನ್ನೂ ಓದಿ: ಎರಡೂವರೆ ತಿಂಗಳಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಪದೋನ್ನತಿ: ಮಧು ಬಂಗಾರಪ್ಪ
ಜಂಟಿ ಸಂಸದೀಯ ಸಮಿತಿ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಿದೆ. ಈ ಪ್ರಕ್ರಿಯೆಯಲ್ಲಿ ಇತರ ಮಧ್ಯಸ್ಥಗಾರರೂ ಭಾಗಿಯಾಗಲಿದ್ದಾರೆ. ದೇಶದಾದ್ಯಂತ ಇರುವ ಬುದ್ಧಿಜೀವಿಗಳು, ರಾಜಕೀಯ ತಜ್ಞರು ಹಾಗೂ ಎಲ್ಲಾ ರಾಜ್ಯಗಳ ವಿಧಾನಸಭಾ ಸ್ಪೀಕರ್‌ಗಳನ್ನು ಚರ್ಚೆಗೆ ಕರೆಯಲಿದೆ. ಸಾಮಾನ್ಯ ಜನರ ಅಭಿಪ್ರಾಯವನ್ನೂ ಸಮಿತಿ ಸಂಗ್ರಹಿಸಲಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಕೃಷಿ ವಿಸ್ತೀರ್ಣಾಧಿಕಾರಿಯಿಂದ ಭಾರಿ ವಂಚನೆ – ಬರೋಬ್ಬರಿ 40 ಲಕ್ಷ ಪಂಗನಾಮ
ʻಒಂದು ರಾಷ್ಟ್ರ, ಒಂದು ಚುನಾವಣೆʼ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರಕ್ಕೆ ಸಂಸತ್ತಿನಲ್ಲಿ 3ನೇ ಎರಡರಷ್ಟು ಬಹುಮತದ ಅವಶ್ಯಕತೆಯಿದೆ. ರಾಜ್ಯಸಭೆಯ 245 ಸ್ಥಾನಗಳಲ್ಲಿ ಎನ್‌ಡಿಎ 112, ವಿರೋಧ ಪಕ್ಷಗಳು 85 ಸ್ಥಾನಗಳನ್ನು ಒಳಗೊಂಡಿವೆ. 3ನೇ ಎರಡರಷ್ಟು ಬಹುಮತಕ್ಕೆ ಸರ್ಕಾರಕ್ಕೆ ಕನಿಷ್ಠ 164 ಮತಗಳ ಅಗತ್ಯವಿದೆ. ಇನ್ನೂ ಲೋಕಸಭೆಯಲ್ಲಿ ಎನ್‌ಡಿಎ 545 ಸ್ಥಾನಗಳಲ್ಲಿ 292 ಸ್ಥಾನಗಳನ್ನು ಹೊಂದಿದೆ. 3ನೇ ಎರಡರಷ್ಟು ಬಹುಮತಕ್ಕೆ 364 ಮತಗಳ ಅಗತ್ಯವಿದೆ. ಪ್ರಸ್ತುತ ಚುನಾವಣಾ ವ್ಯವಸ್ಥೆಯು ಹಣ, ಸಮಯ ಹಾಗೂ ಶ್ರಮವನ್ನು ವ್ಯರ್ಥ ಮಾಡುತ್ತಿವೆ. ಹಾಗಾಗಿ ಒಂದು ರಾಷ್ಟ್ರ ಒಂದು ಚುನಾವಣೆ ಕಾನೂನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ತಿಳಿಸಿದೆ.
ಇನ್ನೂ ಸಂಸತ್‌ನಲ್ಲಿ ಅದಾನಿ ವಿಚಾರದ ಚರ್ಚೆಗೆ ಪಟ್ಟು ಹಿಡಿದಿರುವ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಸದನದ ಹೊರಗೆ ಹೋರಾಟ ಮುಂದುವರೆಸಿವೆ. ಇವತ್ತು ಇನ್ನೊಂದು ಹೆಜ್ಜೆ ಮುಂದೆ ಹೋದ ರಾಹುಲ್ ಗಾಂಧಿ, ಅದಾನಿ-ಮೋದಿ ಮುಖವಾಡ ಧರಿಸಿದವರ ಅಣಕು ಸಂದರ್ಶನ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಬಿಜೆಪಿ ಕೌಂಟರ್ ಕೊಟ್ಟಿದೆ. ಭಾರತ ವಿರೋಧಿ ನಿಲುವು ಹೊಂದಿರುವ ಅಮೆರಿಕ ಉದ್ಯಮಿ ಸೊರೊಸ್ ಸಂಸ್ಥೆಯ ಜೊತೆ ಸೋನಿಯಾ ಗಾಂಧಿ ಕೈಜೋಡಿಸಿದ್ದಾರೆ ಎಂದು ಪುನರ್ ಆರೋಪ ಮಾಡಿದೆ.
ನವದೆಹಲಿ: ಕನಿಷ್ಠ ಬೆಂಬಲ ಬೆಲೆ (MSP) ಕುರಿತು ಚರ್ಚೆಗೆ ಒತ್ತಾಯಿಸಿ ಪಂಜಾಬ್‌ನ ರೈತರು ಈ ವಾರ ದೆಹಲಿಗೆ ಪ್ರತಿಭಟನಾ ಮೆರವಣಿಗೆ (farmers’ march) ನಡೆಸುವುದಾಗಿ ಘೋಷಿಸಿದ್ದಾರೆ. ಭಾರತೀಯ ಕಿಸಾನ್ ಪರಿಷತ್ (BKP) ನೇತೃತ್ವದ ರೈತರ ಮೊದಲ ಗುಂಪು ಇಂದು ತಮ್ಮ ನೋಯ್ಡಾದಿಂದ ದೆಹಲಿ ವರೆಗೆ ಮೆರವಣಿಗೆ ಪ್ರಾರಂಭಿಸಲಿದೆ. ಈ ಹಿನ್ನೆಲೆ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್‌ಗಳನ್ನ ಅಳವಡಿಸಿದ್ದಾರೆ.
ಅಲ್ಲದೆ, ನೋಯ್ಡಾದಿಂದ ದೆಹಲಿಗೆ (Dehli) ಪ್ರಯಾಣಿಸುವ ಪ್ರಯಾಣಿಕರಿಗೆ ಅನಗತ್ಯ ಪ್ರಯಾಣ ಕೈಗೊಳ್ಳದಂತೆ ಸಲಹೆಗಳನ್ನು ನೀಡಿದ್ದಾರೆ. ಯಮುನಾ ಎಕ್ಸ್‌ಪ್ರೆಸ್‌ವೇ ಮತ್ತು ನೋಯ್ಡಾ-ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇ ಮುಂತಾದ ಮಾರ್ಗಗಳಿಂದ ಭಾರೀ ವಾಹನಗಳ ಸಂಚಾರ ನಿಷೇಧಿಸಿ ಕ್ರಮ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಸಿಎಂ, ಡಿಸಿಎಂ ನಿಜವಾದ ಕಾನೂನು ಪಾಲಕರಾಗಿದ್ರೆ ನಾನು ಸಾಷ್ಟಾಂಗ ನಮಸ್ಕಾರ ಮಾಡ್ತೇನೆ – ಅಶ್ವಥ್ ನಾರಾಯಣ
ಫೆಬ್ರುವರಿ 13ರಿಂದ ರೈತರು, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮನ್ಸೂರ್ ಮೋರ್ಚಾ (ಕೆಎಂಎಂ) ನೇತೃತತ್ವದಲ್ಲಿ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿ ಪ್ರವೇಶಿಸದಂತೆ ಭದ್ರತಾ ಸಿಬ್ಬಂದಿ ಅವರನ್ನು ನಿರ್ಬಂಧಿಸಿದೆ. ಹೀಗಾಗಿ 200ಕ್ಕೂ ಹೆಚ್ಚು ಧರಣಿ ನಿರತ ರೈತರು ರಸ್ತೆಯಲ್ಲೇ ರಾತ್ರಿ ಕಳೆಯುವಂತಾಗಿದೆ.
ಪ್ರತಿಭಟನಾ ನಿರತ ರೈತರು ಮಧ್ಯಾಹ್ನದ ವೇಳೆಗೆ ನೋಯ್ಡಾದ ಮಹಾ ಮಾಯಾ ಮೇಲ್ಸೇತುವೆಯಿಂದ ತಮ್ಮ ಮೆರವಣಿಗೆ ಪ್ರಾರಂಭಿಸಲಿದ್ದಾರೆ. ಹೀಗಾಗಿ ದೆಹಲಿಗೆ ಹೋಗುವ ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಡಿಸೆಂಬರ್ 6 ರಿಂದ ಮತ್ತೊಂದು ಸುತ್ತಿನ ಪ್ರತಿಭಟನೆ ನಡೆಯಲಿದೆ. ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ಮೆರವಣಿಗೆ ನಡೆಯಲಿದ್ದು, ಹೆಚ್ಚಿನ ರೈತರು ಪ್ರತಿಭಟನೆಗೆ ಧುಮುಕಲಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಉತ್ತರ ಕನ್ನಡ| ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ 7ನೇ ತರಗತಿ ವಿದ್ಯಾರ್ಥಿ ದುರ್ಮರಣ
ರೈತರ ಬೇಡಿಕೆಗಳೇನು?
ಗುತ್ತಿಗೆ ಆಧಾರದಲ್ಲಿ ಕೃಷಿಯನ್ನ ತಿರಸ್ಕರಿಸಬೇಕು, ಕನಿಷ್ಠ ಬೆಂಬಲ ಬೆಲೆ ಜಾರಿಗೊಳಿಸಬೇಕು. 2014ರ ಜನವರಿ 1ರ ನಂತರ ಸ್ವಾಧೀನಪಡಿಸಿಕೊಂಡ ಭೂಮಿಯಲ್ಲಿ ಶೇ.10ರಷ್ಟು ನಿವೇಶನ ಹಂಚಿಕೆ, ಹಳೇ ಸ್ವಾಧೀನ ಕಾನೂನಿನಡಿ ಪರಿಹಾರ ನೀಡಬೇಕು, ಶೇ.20ರಷ್ಟು ನಿವೇಶನ ನೀಡಬೇಕು. ಭೂರಹಿತ ರೈತರಿಗೆ ಉದ್ಯೋಗ ಮತ್ತು ಪುನರ್ವಸತಿ ಕಲ್ಪಿಸಬೇಕು. ಅಲ್ಲದೇ ಕೃಷಿ ಸಾಲ ಮನ್ನಾ ಮಾಡಬೇಕು, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ಸೌಲಭ್ಯ ದರದಲ್ಲಿ ಕಡಿತ, ರೈತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ 2021ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಿಕೊಡಬೇಕು. ಭೂಸ್ವಾಧೀನ ಕಾಯಿದೆ, 2013 ಮತ್ತು ಹಿಂದಿನ ಆಂದೋಲನದ ವೇಳೆ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ಒದಗಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿರುವ ಕಿಸಾನ್ ಮಜ್ದೂರ್ ಮೋರ್ಚಾ (KMM) ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಫೆಬ್ರವರಿ 18 ರಿಂದ ರೈತರೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ. ರೈತರು ಗುತ್ತಿಗೆ ಕೃಷಿಯನ್ನು ತಿರಸ್ಕರಿಸುತ್ತಾರೆ, ಬದಲಿಗೆ ಬೆಳೆಗಳಿಗೆ ಎಂಎಸ್‌ಪಿ ಮೇಲೆ ಕಾನೂನು ಖಾತ್ರಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪಿಯೂಷ್ ಗೋಯಲ್ ಮತ್ತು ನಿತ್ಯಾನಂದ ರೈ ಅವರ ಮೂರು ಸದಸ್ಯರ ಸಮಿತಿ ಫೆಬ್ರವರಿ 18 ರಂದು ರೈತ ಪ್ರತಿನಿಧಿಗಳನ್ನು ಭೇಟಿ ಮಾಡಿತ್ತು, ಆದ್ರೆ ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿಯನ್ನು ಎಂಎಸ್‌ಪಿಯಲ್ಲಿ 5 ವರ್ಷಗಳವರೆಗೆ ಖರೀದಿಸುವ ಪ್ರಸ್ತಾಪವನ್ನು ಇಟ್ಟಿದ್ದರು. ಇದನ್ನು ರೈತರು ತಿರಸ್ಕರಿಸಿದರು.
ಇಂಫಾಲ್: ಹಿಂಸಾಚಾರ ಪೀಡಿತ ಮಣಿಪುರದಲ್ಲಿ (Manipur violence) ಶಾಂತಿ ಸುವ್ಯವಸ್ಥೆ ಕಾಪಾಡಲು 10,800 ಸೈನಿಕರನ್ನು (Soldiers) ಕಳುಹಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರಿಂದಾಗಿ ನಿಯೋಜಿಸಲಾದ ಕೇಂದ್ರೀಯ ಭದ್ರತಾ ಪಡೆಗಳ ಒಟ್ಟು ಸಂಖ್ಯೆ 288ಕ್ಕೆ ತಲುಪಿದೆ ಎಂದು ರಾಜ್ಯದ ಮುಖ್ಯ ಭದ್ರತಾ ಸಲಹೆಗಾರ ತಿಳಿಸಿದ್ದಾರೆ.
ನಾಗರಿಕರ ಜೀವ ಮತ್ತು ಆಸ್ತಿಗಳನ್ನು ರಕ್ಷಿಸಲು ಹಾಗೂ ದುರ್ಬಲ ಪ್ರದೇಶಗಳನ್ನು ಮೇಲ್ವಿಚಾರಣೆ ಮಾಡಲು ಹೆಚ್ಚುವರಿ ಸೈನಿಕರನ್ನು ನಿಯೋಜಿಸಲಾಗುತ್ತಿದೆ. ಜೊತೆಗೆ ಪ್ರತಿ ಜಿಲ್ಲೆಯಲ್ಲೂ ಸಮನ್ವಯ ಘಟಕಗಳು ಹಾಗೂ ಜಂಟಿ ನಿಯಂತ್ರಣ ಕೊಠಡಿಗಳನ್ನ ಸ್ಥಾಪಿಸಲಾಗುತ್ತದೆ. ಇನ್ನೂ ಕೆಲವೇ ದಿನಗಳಲ್ಲಿ ಎಲ್ಲಾ ಪ್ರದೇಶಗಳು ನಿಯಂತ್ರಣಕ್ಕೆ ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹಿಂಸಾಚಾರ ಭುಗಿಲೆದ್ದಿದ್ದು ಹೇಗೆ?
ಜಿರಿಬಾಮ್ ಜಿಲ್ಲೆಯಲ್ಲಿ ಉಗ್ರರು ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಹತ್ಯೆ ಮಾಡಿರುವುದಕ್ಕೆ ಆಕ್ರೋಶಗೊಂಡ ಜನರು ಮೂವರು ರಾಜ್ಯ ಸಚಿವರು ಮತ್ತು ಆರು ಶಾಸಕರ ನಿವಾಸಗಳ ಮೇಲೆ ದಾಳಿ ಮಾಡಿದ್ದರು. ಇದಾದ ಬಳಿಕ ರಾಜ್ಯದಲ್ಲಿ ಅನಿರ್ದಿಷ್ಟಾವಧಿ ಕರ್ಫ್ಯೂ ಜಾರಿಗೊಳಿಸಲಾಯಿತು.
ನಿಂಗ್‌ತೊಕೊಂಗ್‌ನಲ್ಲಿ ಲೋಕೋಪಯೋಗಿ ಸಚಿವ ಗೋವಿಂದಾಸ್ ಕೊಂತುಜಮ್, ಲಾಂಗ್‌ಮೇಡಾಂಗ್ ಬಜಾರ್‌ನಲ್ಲಿನ ಬಿಜೆಪಿ ಶಾಸಕ ವೈ ರಾಧೇಶ್ಯಾಮ್, ತೌಬಲ್ ಜಿಲ್ಲೆಯ ವಾಂಗ್‌ಜಿಂಗ್ ತೆಂತಾದ ಬಿಜೆಪಿ ಶಾಸಕ ಪಿ. ಬ್ರೋಜೆನ್ ಮತ್ತು ಇಂಫಾಲ್ ಪೂರ್ವ ಜಿಲ್ಲೆಯ ಖುಂಡ್ರಕ್‌ಪಾಮ್‌ನ ಕಾಂಗ್ರೆಸ್ ಶಾಸಕ ತೊಕ್ಚೋಮ್ ಲೋಕೇಶ್ವರ್ ಅವರ ಮನೆಗಳಿಗೆ ಉದ್ರಿಕ್ತರ ಗುಂಪು ಬೆಂಕಿ ಹಚ್ಚಿತ್ತು. ಇದರಿಂದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು.
ಮಣಿಪುರದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ ನ್ಯಾಷನಲ್ ಪೀಪಲ್ಸ್ ಪಾರ್ಟಿ (NPP) ಬಿಜೆಪಿ ನೇತೃತ್ವದ ಮಣಿಪುರ ಸರ್ಕಾರಕ್ಕೆ ನೀಡಿದ್ದ ತನ್ನ ಬೆಂಬಲವನ್ನು ಹಿಂತೆಗೆದುಕೊಂಡಿತು, ಶಾಂತಿಯನ್ನು ಮರುಸ್ಥಾಪಿಸುವಲ್ಲಿ ವಿಫಲವಾಗಿದೆ ಎಂದು ಮುಖ್ಯಮಂತ್ರಿಗಳನ್ನ ನೇರವಾಗಿ ಹೊಣೆ ಮಾಡಿತು. ಇದನ್ನೂ ಓದಿ: ಅಘಾಡಿಗೆ ಆಪರೇಷನ್ ಭೀತಿ – ಮತ್ತೆ ರೆಸಾರ್ಟ್ ಪಾಲಿಟಿಕ್ಸ್ , ಕರ್ನಾಟಕಕ್ಕೆ ಶಾಸಕರು?