Tag: ಕೇಂದ್ರ ಸರ್ಕಾರ

  • ಅಗ್ನಿಪಥ್‌ನಲ್ಲಿ ಬದಲಾವಣೆ? – ಯೋಜನೆ ಪರಿಷ್ಕರಣೆಗೆ ರಕ್ಷಣಾ ಇಲಾಖೆ ಶಿಫಾರಸು

    ಅಗ್ನಿಪಥ್‌ನಲ್ಲಿ ಬದಲಾವಣೆ? – ಯೋಜನೆ ಪರಿಷ್ಕರಣೆಗೆ ರಕ್ಷಣಾ ಇಲಾಖೆ ಶಿಫಾರಸು

    ನವದೆಹಲಿ: ಅಗ್ನಿವೀರ್ (Agniveers) ಯೋಜನೆಗೆ ಪ್ರತಿಪಕ್ಷಗಳ ಜೊತೆಗೆ ಎನ್‌ಡಿಎ (NDA) ಒಕ್ಕೂಟದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿರುವ ಹೊತ್ತಲ್ಲೇ ಯೋಜನೆಯಲ್ಲಿ ಪರಿಷ್ಕರಣೆ ಮಾಡಲು ರಕ್ಷಣಾ ಇಲಾಖೆ ನಿರ್ಧರಿಸಿದೆ. ಸೇನೆಯಲ್ಲಿ ಅಗ್ನಿವೀರ್ ಸಂಖ್ಯೆ ಹೆಚ್ಚಿಸಲು ವೇತನ ಮತ್ತು ಅರ್ಹತೆಗಳನ್ನು ಬದಲಾವಣೆ ಮಾಡಬಹುದು ಎಂದು ಕೇಂದ್ರ ಸರ್ಕಾರಕ್ಕೆ ಅದು ಶಿಫಾರಸು ಮಾಡಿದೆ.

    ಅಗ್ನಿಪಥ್ ಯೋಜನೆಯಲ್ಲಿ (Agnipath Scheme) ಪರಿಷ್ಕರಣೆ ಮಾಡಿರುವ ಕೇಂದ್ರ ರಕ್ಷಣಾ ಇಲಾಖೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಪ್ರಸ್ತುತ ಕೇವಲ 25 ಪ್ರತಿಶತದಷ್ಟು ಅಗ್ನಿವೀರರನ್ನು ಅವರ ಆರಂಭಿಕ ಸೇವಾ ಅವಧಿಯ ನಂತರ ಉಳಿಸಿಕೊಳ್ಳಲಾಗಿದೆ. ಮುಂದಿನ ನಾಲ್ಕು ವರ್ಷಗಳಲ್ಲಿ 50% ಅಗ್ನಿವೀರ್ ಸಂಖ್ಯೆ ಹೆಚ್ಚಿಸಬೇಕಿದ್ದು ಬದಲಾವಣೆ ಅಗತ್ಯ ಎಂದು ಹೇಳಿದೆ. ಇದನ್ನೂ ಓದಿ: ರಾಜಸ್ಥಾನ ಪೊಲೀಸ್‌ ಅಧೀನ ಸೇವೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ

    ವಿವಿಧ ಘಟಕಗಳು ಮತ್ತು ರಚನೆಗಳಲ್ಲಿ ನಡೆಸಿದ ಆಂತರಿಕ ಪ್ರತಿಕ್ರಿಯೆ ಮತ್ತು ಸಮೀಕ್ಷೆಗಳನ್ನು ಅನುಸರಿಸಿ ಸೇನೆಯು ಈ ಸಂಭಾವ್ಯ ಬದಲಾವಣೆಗಳ ಕುರಿತು ಸರ್ಕಾರಕ್ಕೆ ಈಗಾಗಲೇ ಶಿಫಾರಸುಗಳನ್ನು ಸಲ್ಲಿಸಿದೆ. ಪ್ರಕ್ರಿಯೆಯು ಸಮಯ ತೆಗೆದುಕೊಳ್ಳಬಹುದಾದರೂ, ಅಗ್ನಿಪಥ್ ಯೋಜನೆಯನ್ನು ಹೆಚ್ಚಿಸಲು ಅಗತ್ಯ ಪರಿಷ್ಕರಣೆಗಳನ್ನು ಮಾಡಲಾಗುವುದು ಎಂದು ಉನ್ನತ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

    ಸಶಸ್ತ್ರ ಪಡೆಗಳಲ್ಲಿ ಸಂಖ್ಯೆಯನ್ನು ಹೆಚ್ಚಿಸಲು ಮತ್ತು ರಕ್ಷಣಾ ವಲಯದ ಪಿಂಚಣಿ ಬಿಲ್ ಕಡಿಮೆ ಮಾಡುವ ಪ್ರಯತ್ನದಲ್ಲಿ ಕೇಂದ್ರ ಸರ್ಕಾರವು 2022 ರಲ್ಲಿ ಈ ಯೋಜನೆಯನ್ನು ಪರಿಚಯಿಸಿತು. ಯೋಜನೆಯ ಪ್ರಕಾರ, ಅಗ್ನಿವೀರ್ಸ್ ಎಂದು ಕರೆಯಲ್ಪಡುವ ಸಿಬ್ಬಂದಿಯನ್ನು ನಾಲ್ಕು ವರ್ಷಗಳ ಅಲ್ಪಾವಧಿಯ ಒಪ್ಪಂದದ ಮೇಲೆ ಸೇನೆ, ನೌಕಾಪಡೆ ಮತ್ತು ವಾಯುಪಡೆಗೆ ನೇಮಿಸಿಕೊಳ್ಳಲಾಗುತ್ತದೆ. ಒಟ್ಟು ವಾರ್ಷಿಕ ನೇಮಕಾತಿಗಳಲ್ಲಿ 25% ಸಿಬ್ಬಂದಿಯನ್ನು ಮಾತ್ರ ಶಾಶ್ವತವಾಗಿ ಮುಂದುವರಿಯಲು ಅನುಮತಿಸಲಾಗಿದೆ. ಇದನ್ನೂ ಓದಿ: ಪಕ್ಷಾಂತರ ಮಾಡುವ ಶಾಸಕರಿಗೆ ಪಿಂಚಣಿ ಇಲ್ಲ: ಹಿಮಾಚಲ ವಿಧಾನಸಭೆಯಲ್ಲಿ ಹೊಸ ಮಸೂದೆ ಅಂಗೀಕಾರ

    ಯೋಜನೆ ವಿರುದ್ಧ ಸಾಕಷ್ಟು ಆಕ್ಷೇಪ ಕೇಳಿ ಬಂದಿತ್ತು. ನಾಲ್ಕು ವರ್ಷಗಳ ಬಳಿಕ ಯುವಕರ ಜೀವನ ಅನಿಶ್ಚಿತತೆಯಿಂದ ಕೂಡಿದೆ ಎಂದು ಆರೋಪಿಸಿ ದೇಶದ್ಯಾಂತ ಪ್ರತಿಭಟನೆ ನಡೆಸಲಾಯಿತು. ವಿರೋಧ ಪಕ್ಷಗಳು ಸಾಕಷ್ಟು ಆಕ್ರೋಶ ಹೊರ ಹಾಕಿದ್ದವು. ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಗೆ ಇದು ಒಂದು ಕಾರಣ ಎನ್ನಲಾಗಿದ್ದು, ಎನ್‌ಡಿಎ ಒಕ್ಕೂಟದಲ್ಲಿನ ಕೆಲವು ಪಕ್ಷಗಳು ಯೋಜನೆಗೆ ಪರಿಷ್ಕರಣೆಗೆ ಆಗ್ರಹಿಸಿದ್ದವು.

  • ಕೇಂದ್ರ ವಕ್ಫ್ ತಿದ್ದುಪಡಿ ಕಾಯ್ದೆಗೆ ರಾಜ್ಯ ವಕ್ಫ್ ಬೋರ್ಡ್ ವಿರೋಧ – ಖಂಡನಾ ನಿರ್ಣಯ ಅಂಗೀಕರಿಸುವಂತೆ ಸಿಎಂಗೆ ಮನವಿ

    ಕೇಂದ್ರ ವಕ್ಫ್ ತಿದ್ದುಪಡಿ ಕಾಯ್ದೆಗೆ ರಾಜ್ಯ ವಕ್ಫ್ ಬೋರ್ಡ್ ವಿರೋಧ – ಖಂಡನಾ ನಿರ್ಣಯ ಅಂಗೀಕರಿಸುವಂತೆ ಸಿಎಂಗೆ ಮನವಿ

    ಬೆಂಗಳೂರು: ಕೇಂದ್ರದ ಉದ್ದೇಶಿತ ವಕ್ಫ್ ಕಾಯ್ದೆ ತಿದ್ದುಪಡಿ ಪ್ರಸ್ತಾವಕ್ಕೆ ರಾಜ್ಯ ವಕ್ಫ್ ಬೋರ್ಡ್‌ (Karnataka Waqf board) ವಿರೋಧ ವ್ಯಕ್ತಪಡಿಸಿದೆ.

    ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್‌ ಖಾನ್ (Zameer Ahmed Khan), ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ (Anwar Basha) ನೇತೃತ್ವದಲ್ಲಿ ನಡೆದ ವಕ್ಫ್ ಬೋರ್ಡ್ ಆಡಳಿತ ಮಂಡಳಿ ಸಭೆಯಲ್ಲಿ ತಿದ್ದುಪಡಿ ಕಾಯ್ದೆಗೆ ವಿರೋಧ ಪಡಿಸಿ ನಿರ್ಣಯ ಕೈಗೊಳ್ಳಲಾಯಿತು.

    ನಂತರ ಸಚಿವ ಜಮೀರ್ ಅಹಮದ್‌ ಖಾನ್ ಹಾಗೂ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ನೇತೃತ್ವದಲ್ಲಿ ಸಿಎಂಗೆ ಈ ಕುರಿತು ನಿರ್ಣಯದ ಪ್ರತಿ ನೀಡಿ ಕೇಂದ್ರಕ್ಕೆ ತಿದ್ದುಪಡಿ ಕಾಯ್ದೆ (Waqf Amendment Bill – 2024) ವಿರೋಧಿಸಿ ಪತ್ರ ಬರೆಯಲು ಮನವಿ ಮಾಡಿತು. ಇದನ್ನೂ ಓದಿ: ರಾಹುಲ್‌ ಗಾಂಧಿ – ಸೋಷಿಯಲ್‌ ಮೀಡಿಯಾದಲ್ಲಿ ಧೂಳೆಬ್ಬಿಸಿದ ವೀಡಿಯೋ!

    ಕೇಂದ್ರ ಸರ್ಕಾರ ರಚನೆ ಮಾಡಿರುವ ಜಂಟಿ ಸಲಹಾ ಸಮಿತಿಗೂ ಯಾವುದೇ ರೀತಿಯ ಮಾಹಿತಿ ಕೊಡುವುದಿಲ್ಲ. ನಮ್ಮದು ಸ್ವಾಯತ್ತ ಸಂಸ್ಥೆಯಾಗಿದ್ದು, ಉದ್ದೇಶಿತ ತಿದ್ದುಪಡಿ ಕಾಯ್ದೆ ಸಮುದಾಯದ ಹಿತಾಸಕ್ತಿಗೆ ವಿರುದ್ಧವಾಗಿದೆ. ಇದರ ಹಿಂದಿನ ಉದ್ದೇಶ ಬೇರೆ ಇದೆ ಎಂದು ವಕ್ಫ್ ಬೋರ್ಡ್ ಆಡಳಿತ ಮಂಡಳಿ ಸಭೆ ಅಭಿಪ್ರಾಯ ಪಟ್ಟಿದ್ದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು. ಜೊತೆಗೆ ಮುಂದಿನ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಖಂಡನಾ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಕೋರಲಾಯಿತು.

    ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ಸದಸ್ಯರಾದ ಮೌಲನಾ ಶಾಫಿ ಸಾದಿ, ಜಿ. ಯಾಕೂಬ್, ಅಡ್ವೋಕೆಟ್ ರಿಯಾಜ್, ಅಡ್ವೋಕೆಟ್ ಅಸೀಫ್ ಅಲಿ, ಮೌಲಾನಾ ಅಜರ್ ಅಭಿದಿ ಉಪಸ್ಥಿತರಿದ್ದರು. ಇದನ್ನೂ ಓದಿ: ಡ್ರೈ ರಾಜ್ಯ ಬಿಹಾರದಲ್ಲಿ ಕಳ್ಳಭಟ್ಟಿ ಸೇವಿಸಿ ಮೂವರ ಸಾವು – ಇಬ್ಬರು ಆಸ್ಪತ್ರೆಗೆ ದಾಖಲು

  • ಕೇಂದ್ರ ಮಧ್ಯಸ್ಥಿಕೆ ವಹಿಸಲಿ, ಮೇಕೆದಾಟು ಅಣೆಕಟ್ಟು ಕಟ್ಟಲು ಸಿದ್ಧ – ಸಿದ್ದರಾಮಯ್ಯ

    ಕೇಂದ್ರ ಮಧ್ಯಸ್ಥಿಕೆ ವಹಿಸಲಿ, ಮೇಕೆದಾಟು ಅಣೆಕಟ್ಟು ಕಟ್ಟಲು ಸಿದ್ಧ – ಸಿದ್ದರಾಮಯ್ಯ

    ಮೈಸೂರು: ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಲಿ ಮೇಕೆದಾಟು ಅಣೆಕಟ್ಟು (Mekedatu Dam) ಕಟ್ಟಲು ನಾವು ಸಿದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ಮೈಸೂರಿನಲ್ಲಿ (Mysuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ (Mekedatu Project) ವಿಚಾರಕ್ಕೆ ಪ್ರತಿಕ್ರಿಯಿಸಿದರು. ಮೇಕೆದಾಟು ಅಣೆಕಟ್ಟು ಕಟ್ಟಲು ನಾವು ಸಿದ್ಧರಿದ್ದೇವೆ. ತಮಿಳುನಾಡಿನವರು ರಾಜಕೀಯ ಕಾರಣಕ್ಕೆ ವಿರೋಧ ಮಾಡುತ್ತಿದ್ದಾರೆ. ಆದ್ದರಿಂದ ಕೇಂದ್ರದವರು (Union Government) ಮಧ್ಯಸ್ಥಿಕೆ ವಹಿಸಲಿ ಅಂತ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ದೇವೇಗೌಡರ ಕುಟುಂಬಕ್ಕೆ ಎಷ್ಟು ಸೈಟು ಬರೆಸಿಕೊಂಡಿದ್ದಾರೆ ಪಟ್ಟಿ ಕೊಡ್ಲಾ? – ಸಿದ್ದರಾಮಯ್ಯ

    ವಿತ್ತ ಸಚಿವರು ಕರ್ನಾಟಕದ ಋಣ ತೀರಿಸಬಾರದಾ?
    ಇದೇ ವೇಳೆ ನೀತಿ ಆಯೋಗದ ಸಭೆಗೆ ಗೈರಾದ ವಿಚಾರಕ್ಕೆ ಪ್ರತಿಕ್ರಿಯಿಸಿ, ಉದ್ದೇಶ ಪೂರ್ವಕವಾಗಿ ನೀತಿ ಆಯೋಗದ ಸಭೆಗೆ ಬಾಯ್ಕಾಟ್ ಮಾಡಿದ್ದೇನೆ. ನಾನು ಮಾತ್ರ ಅಲ್ಲ, ಬಿಜೆಪಿಯೇತರ ಸರ್ಕಾರದ ರಾಜ್ಯಗಳು ಬಾಯ್ಕಾಟ್ ಮಾಡಿದ್ದಾರೆ. ರಾಜ್ಯಕ್ಕೆ ನ್ಯಾಯವೇ ಸಿಗದಿದ್ದ ಮೇಲೆ ಸಭೆಗೆ ಹೋಗಿ ಏನು ಪ್ರಯೋಜನ? ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ. ಪ್ರತಿ ಬಾರಿಯೂ ನಿರ್ಮಾಲಾ ಸೀತಾರಾಮನ್ ರಾಜ್ಯಕ್ಕೆ ಬಂದು ಸುಳ್ಳು ಹೇಳಿ ಹೋಗುತ್ತಾರೆ. ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ. ಕರ್ನಾಟಕದ ಋಣ ತೀರಿಸಿಬಾರದಾ? ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ರಾಮನಗರ ಹೆಸರು ಬದಲಾವಣೆಗೆ ಸಂಘಟನೆಗಳ ವಿರೋಧ – ರಾಜ್ಯಪಾಲರಿಗೆ ಮನವಿ ಸಲ್ಲಿಸಲು ನಿರ್ಧಾರ

    ಕುಮಾರಸ್ವಾಮಿ ಮಂಡ್ಯದಿಂದ ಆಯ್ಕೆಯಾಗಿದ್ದಾರೆ. ಮಂಡ್ಯ ಕ್ಷೇತ್ರಕ್ಕೆ ಕಾರ್ಖಾನೆ ತಂದಿದ್ದಾರಾ? 15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯ ದೇಶದ ಯಾವ ರಾಜ್ಯಕ್ಕೂ ಆಗಿಲ್ಲ. ಅತಿ ಹೆಚ್ಚು ತೆರಿಗೆ ಕೊಡುವ 2ನೇ ರಾಜ್ಯ ಕರ್ನಾಟಕ ಇಂತಹ ರಾಜ್ಯಕ್ಕೆ ಅನ್ಯಾಯಾಗುತ್ತಿದೆ. ಅನ್ಯಾಯ ಆಗಿಲ್ಲ ಎಂದು ಕೇಂದ್ರ ಸಚಿವರು ಹೇಳುತ್ತಾರೆ. ಆಂಧ್ರ ಪ್ರದೇಶ, ಬಿಹಾರಕ್ಕೆ ಕೊಟ್ಟಿರುವ ಅನುದಾನ ಎಷ್ಟು? ನಮ್ಮದು ಎಷ್ಟು ಎಂದು ಹೇಳಲಿ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ಹಳೇಯ ಯಾವ ಯೋಜನೆಗಳಿಗೆ ದುಡ್ಡು ಕೊಟ್ಟಿಲ್ಲ. ನಮಗೆ ಪಾಠ ಮಾಡಲು ಬರುತ್ತಾರಾ? ನಿರ್ಮಾಲಾ ಸೀತಾರಾಮನ್ ವಿರುದ್ಧ ಸಿಎಂ ನಡೆದಿಸಿದರು.

    ಕರಪ್ಷನ್ ಸಂಪೂರ್ಣ ಹೋಗಿದೆ ಅಂತ ಹೇಳಲ್ಲ:
    ನನ್ನ ಅವಧಿಯಲ್ಲಿ ಕರಪ್ಷನ್ ಸಂಪೂರ್ಣ ಹೋಗಿದೆ ಎಂದು ಹೇಳಲ್ಲ. ಆದರೆ ಕಡಿಮೆಯಾಗಿದೆ ಎಂದು ಹೇಳಬಲ್ಲೆ. ಬಿಜೆಪಿಯ ಅವಧಿಯಲ್ಲಿ ಭ್ರಷ್ಟಾಚಾರ ಎಷ್ಟಿತ್ತು? ಅದನ್ನ ಇಡೀ ದೇಶವೇ ನೋಡಿದೆ. ಈಗ ಕರ್ನಾಟಕವನ್ನ ಭ್ರಷ್ಟ್ರ ರಾಜ್ಯ ಎಂದು ಬಿಂಬಿಸುವ ಯತ್ನವನ್ನ ಬಿಜೆಪಿ ಮಾಡುತ್ತಿದೆ. ಸಂಸತ್‌ನಲ್ಲಿ ಕರ್ನಾಟಕಕ್ಕೆ ಭ್ರಷ್ಟಚಾರದ ಹಣೆ ಪಟ್ಟಿ ಕಟ್ಟುವ ಯತ್ನ ನಡೆಯುತ್ತಿದೆ. ಬಿಜೆಪಿಗೆ ಮಾನ ಮರ್ಯಾದೆ ಇದ್ಯಾ? ಅಂತ ಪ್ರಶ್ನೆ ಮಾಡಿದರು. ಇದನ್ನೂ ಓದಿ: ಬಿಹಾರದಲ್ಲಿ ಮೀಸಲಾತಿ ಹೆಚ್ಚಿಸಿದ್ದ ನಿತೀಶ್‌ಗೆ ಹಿನ್ನಡೆ – ಹೈಕೋರ್ಟ್‌ ಆದೇಶಕ್ಕೆ ತಡೆ ನೀಡದ ಸುಪ್ರೀಂ

  • ಬಜೆಟ್‌ನಲ್ಲಿ ಯಾವ ರಾಜ್ಯಕ್ಕೂ ಏನನ್ನೂ ನಿರಾಕರಿಸಿಲ್ಲ, ಹಣ ತರಬೇಕೆಂದು ತೆರಿಗೆ ಹೆಚ್ಚಿಸಿಲ್ಲ: ನಿರ್ಮಲಾ ಸೀತಾರಾಮನ್‌

    ಬಜೆಟ್‌ನಲ್ಲಿ ಯಾವ ರಾಜ್ಯಕ್ಕೂ ಏನನ್ನೂ ನಿರಾಕರಿಸಿಲ್ಲ, ಹಣ ತರಬೇಕೆಂದು ತೆರಿಗೆ ಹೆಚ್ಚಿಸಿಲ್ಲ: ನಿರ್ಮಲಾ ಸೀತಾರಾಮನ್‌

    ನವದೆಹಲಿ: 2024ರ ಕೇಂದ್ರ ಬಜೆಟ್‌ನಲ್ಲಿ (Union Budget 2024) ಯಾವ ರಾಜ್ಯಗಳಿಗೂ ಏನನ್ನೂ ನಿರಾಕರಿಸಿಲ್ಲ ಕಡೆಗಣಿಸಿಲ್ಲ. ಹಿಂದಿನಂತೆಯೇ ಎಲ್ಲಾ ರಾಜ್ಯಗಳೂ ಹಂಚಿಕೆ ಪಡೆದಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಸ್ಪಷ್ಟಪಡಿಸಿದ್ದಾರೆ.

    ಖಾಸಗಿ ವಾಹಿನಿಯೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, 2024-25ರ ಕೇಂದ್ರ ಬಜೆಟ್‌ನಲ್ಲಿ ಕೇವಲ ಆಂಧ್ರ ಪ್ರದೇಶ (Andhra Pradesh) ಮತ್ತು ಬಿಹಾರ (Bihar) ರಾಜ್ಯಗಳನ್ನು ಮಾತ್ರ ಪರಿಗಣಿಸಿ, ಉಳಿದ ರಾಜ್ಯಗಳನ್ನು ಕಡೆಗಣಿಸಲಾಗಿದೆ ಎಂಬ ವಿಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಮೆಟ್ರೊಪಾಲಿಟನ್ ಸಿಟಿಗಳ ಪೈಕಿ ಬೆಂಗಳೂರಿನಲ್ಲಿ ಹೆಚ್ಚು ವಾಹನಗಳಿವೆ: ಪರಮೇಶ್ವರ್

    ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ. 2014 ರಲ್ಲಿ ಆಂಧ್ರಪ್ರದೇಶವನ್ನು ವಿಭಜಿಸಿದ ನಂತರ ಕೇಂದ್ರವು ಕಾನೂನಿನ ಪ್ರಕಾರ ಆಂಧ್ರಪ್ರದೇಶವನ್ನ ಬೆಂಬಲಿಸುವ ಅಗತ್ಯವಿದೆ. ಬಜೆಟ್‌ನಲ್ಲಿ ಎಲ್ಲಾ ರಾಜ್ಯಗಳು ಹಿಂದಿನಂತೆ ಹಂಚಿಕೆ ಸ್ವೀಕರಿಸಿವೆ. ಆಂಧ್ರ ಪ್ರದೇಶವು ಆಂಧ್ರ ಪ್ರದೇಶ ಮರುಸಂಘಟನೆ ಕಾಯ್ದೆ ಅಡಿಯಲ್ಲಿ ರಾಜಧಾನಿ ನಿರ್ಮಿಸಲು ಹಾಗೂ ಹಿಂದುಳಿದ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಲು ಕೇಂದ್ರದ ಬೆಂಬಲ ಬಯಸಿದೆ. ನಾವೂ ಸಹ ಹೊಸ ರಾಜಧಾನಿ ನಿರ್ಮಾಣವನ್ನು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.

    ಮುಂದುವರಿದು ಮಾತನಾಡಿದ ಅವರು, ಈ ಬಜೆಟ್ ಯುವ ಸಮೂಹದ ಅಭಿವೃದ್ಧಿಗೆ ಪೂರಕಗಿದೆ, ಸಮಗ್ರ ಪ್ಯಾಕೇಜ್‌ ಒದಗಿಸಿದೆ. ಅಸ್ತಿತ್ವದಲ್ಲಿರುವ ನಗರಗಳನ್ನು ಹೆಚ್ಚು ವಾಸಕ್ಕೆ ಯೋಗ್ಯ ಮತ್ತು ಫ್ಯೂಚರಿಸ್ಟಿಕ್ ಮಾಡಲು ನಾವು ತಂತ್ರಜ್ಞಾನ ಮತ್ತು ನವೀನ ನಗರ ಯೋಜನೆಗಳ ಮೇಲೆ ಕೇಂದ್ರೀಕರಿಸುತ್ತಿದ್ದೇವೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ರಾಮ ಅಲ್ಲೇ ಇರ್ತಾನೆ, ರಾಮನಗರವೂ ಅಲ್ಲೇ ಇರುತ್ತೆ – ಪರಮೇಶ್ವರ್ ತಿರುಗೇಟು

    ಅಲ್ಲದೇ ಸರ್ಕಾರಕ್ಕೆ ಹಣ ತರಬೇಕೆಂದು ತೆರಿಗೆ ಹೆಚ್ಚಿಸಿಲ್ಲ, ಅದು ಉತ್ತಮ ಮಾರ್ಗವೂ ಅಲ್ಲ. ಬೆಳೆಯುತ್ತಿರುವ ಆರ್ಥಿಕತೆಯು ಅದರ ಅಗತ್ಯತೆಗಳು ಮತ್ತು ಆಕಾಂಕ್ಷೆಗಳನ್ನು ಪೂರೈಸಲು ಸಾಲ ಪಡೆಯುವುದು ಅತ್ಯಗತ್ಯ. ಆದ್ರೆ ಆರ್ಥಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರದಂತೆ ಸಾಲ ಕಡಿಮೆಗೊಳಿಸುವುದು ಹಣಕಾಸು ಇಲಾಖೆಯ ಉದ್ದೇಶವಾಗಿದೆ. ಅಂತಿಮವಾಗಿ ವಿತ್ತೀಯ ಕೊರತೆಗೆ ಸಂಖ್ಯೆಯನ್ನು ನಿಗದಿಪಡಿಸುವುದು ಮತ್ತು ಪ್ರತಿ ವರ್ಷ ತಾತ್ಕಾಲಿಕ ಪರಿಹಾರಗಳೊಂದಿಗೆ ಅದರ ಕಡೆಗೆ ಕೆಲಸ ಮಾಡಬೇಕಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 2028ರೊಳಗೆ ಮತ್ತೆ ರಾಮನಗರ ಅಂತ ಬರುತ್ತೆ – ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ: ಹೆಚ್‌ಡಿಕೆ ತಿರುಗೇಟು

  • ಸುಪ್ರೀಂ ಕೋರ್ಟ್‌ಗೆ ಹೋಗಿ ರಾಜ್ಯ ಸರ್ಕಾರ ಬರ ಪರಿಹಾರ ಹಣ ಪಡೆದುಕೊಂಡು ಬಂದಿದೆ – ಕೃಷ್ಣಬೈರೇಗೌಡ

    ಸುಪ್ರೀಂ ಕೋರ್ಟ್‌ಗೆ ಹೋಗಿ ರಾಜ್ಯ ಸರ್ಕಾರ ಬರ ಪರಿಹಾರ ಹಣ ಪಡೆದುಕೊಂಡು ಬಂದಿದೆ – ಕೃಷ್ಣಬೈರೇಗೌಡ

    – ರಾಜ್ಯದಲ್ಲಿ 4,047 ಕೋಟಿ ರೂ. ಬರ ಪರಿಹಾರ ಕೊಟ್ಟಿದ್ದೇವೆ ಎಂದ ಸಚಿವ

    ಬೆಂಗಳೂರು: ರಾಜ್ಯದಲ್ಲಿ ಈವರೆಗೂ ಬರ ಪರಿಹಾರವಾಗಿ (Drought Relief) 4,047 ಕೋಟಿ ರೂ. ನೀಡಲಾಗಿದೆ ಅಂತ ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byregowda) ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಛಲವಾದಿ ನಾರಾಯಣಸ್ವಾಮಿ ಬದಲಾಗಿ, ಬಿಜೆಪಿ ಸದಸ್ಯ ಕೇಶವ ಪ್ರಸಾದ್ ಪ್ರಶ್ನೆ ಕೇಳಿದ್ರು.

    ಸರ್ಕಾರ ಎಲ್ಲಾ ರೈತರಿಗೆ ಬರ ಪರಿಹಾರ ಇನ್ನೂ ಬಿಡುಗಡೆ ಮಾಡಿಲ್ಲ. ಕೇಂದ್ರದಿಂದ ಪರಿಹಾರ ಬಿಡುಗಡೆ ಆಗಿದೆ. ಆದರೂ ರಾಜ್ಯ ಸರ್ಕಾರ ಪರಿಹಾರ ನೀಡಿಲ್ಲ. ಬೆಳೆ ವಿಮೆ ಪರಿಹಾರ ಕೂಡ ಸರಿಯಾಗಿ ಸಿಗುತ್ತಿಲ್ಲ. ಈ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರವೂ (Karnataka Govt) ಬರ ಪರಿಹಾರ ನೀಡಬೇಕು ಒತ್ತಾಯಿಸಿದರು. ಇದನ್ನೂ ಓದಿ: ಶಕ್ತಿ ಯೋಜನೆ ಅಡಿ ಸರ್ಕಾರದಿಂದ ಸಾರಿಗೆ ಇಲಾಖೆಗೆ 1,413 ಕೋಟಿ ರೂ. ಬಾಕಿ – ರಾಮಲಿಂಗಾರೆಡ್ಡಿ

    ಇದಕ್ಕೆ ಸಚಿವ ಕೃಷ್ಣಬೈರೇಗೌಡ ಉತ್ತರ ನೀಡಿ, ನಮ್ಮ ಸರ್ಕಾರ 38,78,525 ರೈತರಿಗೆ (Farmers) ಬರ ಪರಿಹಾರ ಕೊಟ್ಟಿದೆ. 3,535.30 ಕೋಟಿ ರೂ.ಗಳನ್ನ ಅರ್ಹ ರೈತಗೆ ಪರಿಹಾರ ನೀಡಲಾಗಿದೆ. ಡಿಜಿಟಲ್ ಸರ್ವೆ ಮೂಲಕ ಹಾನಿಯಾದ ರೈತರಿಗೆ ‌ಪರಿಹಾರ ಕೊಡಲಾಗಿದೆ. ಶೇ.33 ಕ್ಕಿಂತ ಹೆಚ್ಚು ಬೆಳೆ ಹಾನಿಯಾದ ರೈತರಿಗೆ ಪರಿಹಾರ ‌ನೀಡಲಾಗಿದೆ. ನಾಲೆಯಲ್ಲಿ ನೀರು ಹರಿಸಲು ಆಗದ ರೈತರಿಗೂ ಪರಿಹಾರ ಕೊಡಲಾಗಿದೆ. ಜೀವನೋಪಾಯಕ್ಕಾಗಿ 531 ಕೋಟಿ ರೂ.ಗಳನ್ನ 17 ಲಕ್ಷ ರೈತರಿಗೆ ಪಾವತಿ ಮಾಡ್ತಿದ್ದೇವೆ. 4,047 ಕೋಟಿ ರೂ. ಒಟ್ಟು ಪರಿಹಾರ ನೀಡಿದ್ದೇವೆ ಅಂತ ತಿಳಿಸಿದರು. ಇದನ್ನೂ ಓದಿ: ಯಾವ ರಾಜ್ಯವನ್ನೂ ಕಡೆಗಣಿಸಿಲ್ಲ, ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶಪೂರ್ವಕ: ನಿರ್ಮಲಾ ಸೀತಾರಾಮನ್

    ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡದೇ ಇದ್ದಾಗ 1,296 ಕೋಟಿ ರೂ. ರಾಜ್ಯ ಸರ್ಕಾರದಿಂದ ಮೊದಲೇ ಬರ ಪರಿಹಾರ ಕೊಟ್ಟಿದ್ದೇವೆ. ಕೇಂದ್ರ ಸರ್ಕಾರ ಬರ ಪರಿಹಾರ ಕೊಟ್ಡಿರಲಿಲ್ಲ. ನಾವು ಸುಪ್ರೀಂ ಕೋರ್ಟ್‌ಗೆ ಹೋಗದೇ ಇದ್ದಿದ್ದರೇ ನಮಗೆ ಕೇಂದ್ರ ಪರಿಹಾರ ಕೊಡುತ್ತಿರಲಿಲ್ಲ. ಸುಪ್ರೀಂ ಕೋರ್ಟ್ ನಿಂದ ನಾವು ಪರಿಹಾರ ಪಡೆದಿದ್ದೇವೆ ಅಂತ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: Nepal Plane Crash; ಟೇಕಾಫ್‌ ವೇಳೆ ವಿಮಾನ ಪತನ – 18 ಮಂದಿ ದಾರುಣ ಸಾವು

  • ಕೇಂದ್ರ ಸರ್ಕಾರವೇ ಕೋಣ: ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ

    ಕೇಂದ್ರ ಸರ್ಕಾರವೇ ಕೋಣ: ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ

    ಬೆಂಗಳೂರು: ಕೇಂದ್ರ ಸರ್ಕಾರವೇ (Union Govt) ಕೋಣ ಎಂದು ವಿಧಾನಸಭೆಯಲ್ಲಿ ಸ್ಪೀಕರ್ ಪೀಠದಲ್ಲಿದ್ದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ (Rudrappa Lamani) ಹೇಳಿದ್ದಾರೆ.

    ಭದ್ರಾ ಜಲಾಶಯದ (Bhadra Dam) ಮುಳುಗಡೆ ಸಂತ್ರಸ್ತರಿಗೆ ಮಂಜೂರಾಗಿರುವ ದರಖಾಸ್ತು ಜಮೀನುಗಳ ರೈತರನ್ನು ಒಕ್ಕಲೆಬ್ಬಿಸದಂತೆ ಹಾಗೂ ಸಂತ್ರಸ್ತರಿಗೆ ನೆರವು ನೀಡುವ ಬಗ್ಗೆ ತರೀಕೆರೆ ಶಾಸಕ ಜಿ.ಹೆಚ್. ಶ್ರೀನಿವಾಸ್‌ ಗಮನ ಸೆಳೆದರು. ಆಗ ಸಮಸ್ಯೆ ಕುರಿತು ಪಕ್ಷಾತೀತವಾಗಿ ಎಲ್ಲ ಶಾಸಕರು ಸರ್ಕಾರವನ್ನು ಆಗ್ರಹಿಸಿದರು. ಇದನ್ನೂ ಓದಿ: ಸರ್ಕಾರಿ ನೌಕರರು ಆರ್‌ಎಸ್‌ಎಸ್ ಸೇರಬಹುದು – ಇಂದಿರಾ ಗಾಂಧಿ ಅಂದು ನಿಷೇಧ ಹೇರಿದ್ದು ಯಾಕೆ?

     

    ಮಧ್ಯಪ್ರವೇಶ ಮಾಡಿದ ಡೆಪ್ಯುಟಿ ಸ್ಪೀಕರ್, ಸಂಸದರಿಗೆ ಹೇಳಿ ಕೇಂದ್ರ ಸರ್ಕಾರದ ಗಮನಕ್ಕೆ ತನ್ನಿ ಎಂದರು. ಅಲ್ಲದೇ ರಾಜ್ಯ ಸರ್ಕಾರಕ್ಕೆ ಕೂಡಾ ಸಭೆ ನಡೆಸಿ ಸೂಕ್ತ ನಿರ್ಧಾರಕ್ಕೆ ಬನ್ನಿ ಎಂದು ಸೂಚಿಸಿದ್ರು. ಇದನ್ನೂ ಓದಿ: ದರ್ಶನ್‌ಗೆ ಜೈಲೂಟವೇ ಗತಿ

    ಈ ವೇಳೆ ಕೋಣನ ಮುಂದೆ ಕಿನ್ನರಿ ಬಾರಿಸಿದಂತಾಗಿದೆ ಎಂದು ಡೆಪ್ಯುಟಿ ಸ್ಪೀಕರ್ ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಶಾಸಕ ಸುರೇಶ್ ಕುಮಾರ್, ಕೋಣ ಯಾರು ಅಂತಾ ಗೊತ್ತಾಗಲಿಲ್ಲ ಎಂದು ಕೇಳಿದರು. ಆಗ ಕೇಂದ್ರ ಸರ್ಕಾರವೇ ಕೋಣ ಎಂದು ಸ್ಪೀಕರ್ ಪೀಠದಲ್ಲಿದ್ದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ತಿರುಗೇಟು ನೀಡಿದರು.

     

  • ಪ್ರತಿವರ್ಷ ಜೂನ್‌ 25ರಂದು ʻಸಂವಿಧಾನ ಹತ್ಯಾ ದಿವಸ್‌ʼ ಆಚರಣೆ – ಅಮಿತ್‌ ಶಾ ಘೋಷಣೆ

    ಪ್ರತಿವರ್ಷ ಜೂನ್‌ 25ರಂದು ʻಸಂವಿಧಾನ ಹತ್ಯಾ ದಿವಸ್‌ʼ ಆಚರಣೆ – ಅಮಿತ್‌ ಶಾ ಘೋಷಣೆ

    ನವದೆಹಲಿ: ಪ್ರತಿವರ್ಷ ಜೂನ್‌ 25ರ ದಿನವನ್ನು ʻಸಂವಿಧಾನ ಹತ್ಯಾ ದಿವಸ್‌ʼ (Samvidhaan Hatya Diwas) ಆಗಿ ಆಚರಿಸಲಾಗುವುದು ಎಂದು ಸಚಿವ ಅಮಿತ್‌ ಶಾ (Amit Shah) ಘೋಷಣೆ ಮಾಡಿದ್ದಾರೆ.

    ತುರ್ತು ಪರಿಸ್ಥಿತಿಯ (Emergency Day) ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಅಮಿತ್‌ ಶಾ ಅವರಿಂದು ʻಸಂವಿಧಾನ ಹತ್ಯಾ ದಿವಸ್‌ʼ ಆಚರಣೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಕೇಂದ್ರ ಸಚಿವರು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದು, ಸುತ್ತೋಲೆ ಪ್ರತಿಯನ್ನೂ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಜು.15ರಿಂದ ವಿಧಾನಸಭೆ ಅಧಿವೇಶನ ಶುರು; ವಿಧಾನಸೌಧ ವಾಸ್ತುಪ್ರಕಾರವಾಗಿಯೇ ಇದೆ ಎಂದ ಹೊರಟ್ಟಿ

    ಪ್ರಜಾಪ್ರಭುತ್ವದ ಆತ್ಮದ ಕತ್ತು ಹಿಸುಕಿದರು:
    ಪ್ರತಿ ವರ್ಷ ʻಸಂವಿಧಾನ ಹತ್ಯಾ ದಿವಸ್ʼ ಆಚರಣೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. 1975ರ ಜೂನ್ 25 ರಂದು, ಅಂದಿನ ಪ್ರಧಾನಿ ಇಂದಿರಾಗಾಂಧಿ  (Indira Gandhi) ಸರ್ವಾಧಿಕಾರಿ ಮನಸ್ಥಿತಿಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದರು. ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ನಮ್ಮ ಪ್ರಜಾಪ್ರಭುತ್ವದ ಆತ್ಮದ ಕತ್ತು ಹಿಸುಕಿದರು. ಯಾವುದೇ ತಪ್ಪಿಲ್ಲದೇ ಲಕ್ಷಾಂತರ ಜನರನ್ನ ಕಂಬಿಯ ಹಿಂದೆ ಎಸೆಯಲಾಯಿತು. ಮಾಧ್ಯಮಗಳ ಧ್ವನಿಯನ್ನು ಮೌನಗೊಳಿಸಲಾಯಿತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪ್ರತಿ ವರ್ಷ ಜೂನ್ 25ರ ದಿನವನ್ನು ʻಸಂವಿಧಾನ ಹತ್ಯಾ ದಿವಸ್ʼ ಎಂದು ಆಚರಿಸಲು ನಿರ್ಧರಿಸಿದೆ ಎಂದು ಘೋಷಣೆ ಮಾಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ದಿನವು 1975ರ ತುರ್ತು ಪರಿಸ್ಥಿತಿಯ ಅಮಾನವೀಯ ನೋವುಗಳನ್ನು ಸಹಿಸಿಕೊಂಡ ಎಲ್ಲರ ಬೃಹತ್ ಕೊಡುಗೆಗಳನ್ನು ಸ್ಮರಿಸುತ್ತದೆ ಎಂದು ಅಮಿತ್‌ ಶಾ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಮೋದಿಯಿಂದಲೂ ವಾಗ್ದಾಳಿ:
    ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತುಪರಿಸ್ಥಿತಿಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ತುರ್ತು ಪರಿಸ್ಥಿತಿಯಿಂದ ಕಾಂಗ್ರೆಸ್ ಪಕ್ಷವು (Congress Party) ಮೂಲಭೂತ ಸ್ವಾತಂತ್ರ್ಯವನ್ನು ಹೇಗೆ ಬುಡಮೇಲು ಮಾಡಿತ್ತು? ಹಾಗೂ ಪ್ರತಿಯೊಬ್ಬ ಭಾರತೀಯರು ಗೌರವಿಸುವ ಸಂವಿಧಾನವನ್ನು (Constitution Of India) ಹೇಗೆ ತುಳಿಯಿತು? ಎಂಬುದನ್ನು ನಮಗೆ ನೆನಪಿಸುತ್ತದೆ. ಅಸಂಖ್ಯಾತ ಸಂದರ್ಭಗಳಲ್ಲಿ 356ನೇ ವಿಧಿ ಹೇರಿದವರು, ಪತ್ರಿಕಾ ಸ್ವಾತಂತ್ರ್ಯ ನಾಶಮಾಡುವ ಮಸೂದೆಯನ್ನು ಪಡೆದವರು, ಫೆಡರಲಿಸಂ ಅನ್ನು ನಾಶಪಡಿಸಿದರು ಮತ್ತು ಸಂವಿಧಾನದ ಪ್ರತಿಯೊಂದು ಅಂಶವನ್ನು ಉಲ್ಲಂಘಿಸಿದವರು ಇದೇ ಜನರು.

    ತುರ್ತು ಪರಿಸ್ಥಿತಿಯನ್ನು ಹೇರಲು ಕಾರಣವಾದ ಮನಸ್ಥಿತಿಯು ಇನ್ನೂ ಕಾಂಗ್ರೆಸ್ ಪಕ್ಷದಲ್ಲಿ ಜೀವಂತವಾಗಿದೆ. ಅವರು ತಮ್ಮ ಟೋಕನಿಸಂ ಮೂಲಕ ಸಂವಿಧಾನದ ಬಗ್ಗೆ ತಮ್ಮ ತಿರಸ್ಕಾರ ಮನೋಭಾವವನ್ನು ಮರೆಮಾಚುತ್ತಾರೆ. ತುರ್ತು ಪರಿಸ್ಥಿತಿ ಹೇರಿದವರಿಗೆ ನಮ್ಮ ಸಂವಿಧಾನದ ಮೇಲಿನ ಪ್ರೀತಿಯನ್ನು ಹೇಳಿಕೊಳ್ಳುವ ಹಕ್ಕು ಇಲ್ಲ. ಆದ್ರೆ ದೇಶದ ಜನರು ಅವರ ಭಾವನೆಗಳನ್ನು ವರ್ತನೆಗಳ ಮೂಲಕ ನೋಡಿಕೊಂಡಿದ್ದಾರೆ. ಅದಕ್ಕಾಗಿಯೇ ಅವರು ದೇಶದಲ್ಲಿ ಕಾಂಗ್ರೆಸ್‌ ಪಕ್ಷವನ್ನ ತಿರಸ್ಕಾರ ಮಾಡಿದ್ದಾರೆ ಎಂದು ಕಿಡಿ ಕಾರಿದ್ದರು. ಇದನ್ನೂ ಓದಿ: ಅದಿರು ಕೊರತೆ ಆಗದಿರಲಿ; NMDC ಅಧಿಕಾರಿಗಳಿಗೆ ಕೇಂದ್ರ ಸಚಿವ ಹೆಚ್‌ಡಿಕೆ ನಿರ್ದೇಶನ

    ತುರ್ತುಪರಿಸ್ಥಿತಿ ಕರಾಳ ನೆನಪು:
    ʻತುರ್ತು ಪರಿಸ್ಥಿತಿʼಯು (Emergency 1975) ಸ್ವತಂತ್ರ ಭಾರತದ ಇತಿಹಾಸದಲ್ಲೊಂದು ಕರಾಳ ಅಧ್ಯಾಯವಾಗಿ ಉಳಿದುಕೊಂಡಿದೆ. 1975ರ ಜೂನ್‌ 25ರಂದು ಅಂದಿನ ರಾಷ್ಟ್ರಪತಿ ಫಕ್ರುದ್ದೀನ್‌ ಅಲಿ ಅಹಮದ್‌ ಅವರು ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿದ್ದರು. ಅಂದಿನ ಪ್ರಧಾನಿ ಇಂದಿರಾಗಾಂಧಿ (Indira Gandhi) ಅವರ ಸಲಹೆ ಮೇರೆಗೆ ಈ ಕ್ರಮ ತೆಗೆದುಕೊಂಡಿದ್ದರು. ತುರ್ತು ಪರಿಸ್ಥಿತಿ ಜಾರಿಯಾಗಿ ಕಳೆದ ಜೂನ್‌ 25ಕ್ಕೆ 49 ವರ್ಷ ತುಂಬಿದ್ದು, 50ನೇ ವರ್ಷ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನೆದು ಅಮಿತ್‌ ಶಾ ಅವರು, ʻಸಂವಿಧಾನ ಹತ್ಯಾ ದಿವಸ್‌ʼ ಆಚರಣೆ ಮಾಡುವಂತೆ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ‘ಕೈ’ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ – ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

  • ಕೇಂದ್ರದ ಭಾರತ್‌ ರೈಸ್‌ ಮಾರಾಟ ತಾತ್ಕಾಲಿಕ ಸ್ಥಗಿತ

    ಕೇಂದ್ರದ ಭಾರತ್‌ ರೈಸ್‌ ಮಾರಾಟ ತಾತ್ಕಾಲಿಕ ಸ್ಥಗಿತ

    ಬೆಂಗಳೂರು: ಕೇಂದ್ರ ಸರ್ಕಾರ ಆರಂಭಿಸಿದ್ದ ಮಹತ್ವಾಕಾಂಕ್ಷಿಯ ಭಾರತ್‌ ರೈಸ್‌ (Bharat Rice) ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.

    ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್‌ ರೈಸ್‌ ಅಕ್ಕಿಯನ್ನು ಬಿಡುಗಡೆ ಮಾಡಿತ್ತು. ಲೋಕಸಭಾ ಚುನಾವಣೆ (Lok Sabha Election) ಸಂದರ್ಭದಲ್ಲಿ ಈ ಅಕ್ಕಿ ಮತದಾರರನ್ನು ಸೆಳೆದಿತ್ತು.

    ಈ ಯೋಜನೆಯ ಅಡಿ 29 ರೂ.ಗೆ 1 ಕೆಜಿ ಅಕ್ಕಿ, 27.50 ರೂ.ಗೆ 1 ಕೆಜಿ ಗೋಧಿ ಹಿಟ್ಟು, 60 ರೂ.ಗೆ 1 ಕೆಜಿ ಕಡಲೆ ಬೆಳೆ ಮಾರಾಟ ಮಾಡಲಾಗುತ್ತಿತ್ತು. ಜನ ಸಂದಣಿ ಹೆಚ್ಚಿನ ಜಾಗಗಳಲ್ಲಿ ಮೊಬೈಲ್‌ ವ್ಯಾನ್‌ ಮೂಲಕ ಅಕ್ಕಿ, ಬೆಳೆಗಳನ್ನು ಗ್ರಾಹಕರಿಗೆ ನೀಡಲಾಗುತ್ತಿತ್ತು. ಜೂನ್ 10 ರವರೆಗೆ ಕೇಂದ್ರ ಸರ್ಕಾರ ಆದೇಶದ ಅನ್ವಯ ದಾಸ್ತಾನುಗಳು ಮಾರಾಟವಾದ ನಂತರ ಪೂರೈಕೆಯನ್ನು ಸ್ಥಗಿತ ಮಾಡಲಾಗಿದೆ.

    ಯಾವ ಕಾರಣಕ್ಕೆ ಮಾರಾಟವನ್ನು ಸ್ಥಗಿತ ಮಾಡಲಾಗಿದೆ ಎನ್ನುವುದು ತಿಳಿದುಬಂದಿಲ್ಲ. ಭಾರತ್ ರೈಸ್‌ಗೆ ಗ್ರಾಹಕರಿಂದ ಬೇಡಿಕೆ ಇತ್ತು. ಇದುವರೆಗೂ 5 ಸಾವಿರ ಟನ್ ಮಾರಾಟ ಮಾಡಲಾಗಿದೆ. ಇದನ್ನೂ ಓದಿ: ‘ಭಾರತ್ ರೈಸ್’ಗೆ ಮುಗಿಬಿದ್ದ ಜನ- ಅರ್ಧಗಂಟೆಯಲ್ಲಿ 1 ಟನ್ ಅಕ್ಕಿ ಸೋಲ್ಡ್ ಔಟ್

    ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ʻಭಾರತ್‌ʼ ಬ್ರ್ಯಾಂಡ್‌ ಅಕ್ಕಿ (Bharat Rice) ಮಾರಾಟ ಆರಂಭಿಸುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ (Union Government) ತಿಳಿಸಿತ್ತು. ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (NAFED), ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ (NCCF) ಹಾಗೂ ಕೇಂದ್ರೀಯ ಭಂಡಾರಗಳು ಮತ್ತು ಇ-ಕಾಮರ್ಸ್‌ ವೇದಿಕೆಗಳ ಮೂಲಕ ಅಕ್ಕಿ ಮಾರಾಟವಾಗುತ್ತಿತ್ತು.

    ಕಳೆದ ವರ್ಷ ಮಳೆಯಾಗದ ಕಾರಣ ಭತ್ತದ ಉತ್ಪಾದನೆ ಕುಂಠಿತಗೊಂಡಿದೆ. ದೇಶಾದ್ಯಂತ ಈ ಯೋಜನೆ ಜಾರಿಯಲ್ಲಿರುವ ಕಾರಣ ಪೂರೈಕೆ ಮಾಡುವುದು ಕಷ್ಟವಾಗುತ್ತಿದೆ. ಭಾರತ್‌ ಅಕ್ಕಿ ವಿತರಣೆ ಸಂಬಂಧ ಕೇಂದ್ರ ಸರ್ಕಾರ ಹೊಸ ನೀತಿ ಜಾರಿಗೆ ತರಲು ಚಿಂತನೆ ಮಾಡಿದೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ತಾತ್ಕಾಲಿಕವಾಗಿ ಭಾರತ್‌ ರೈಸ್‌ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿದೆ.

    ಮೆಚ್ಚುಗೆ ವ್ಯಕ್ತವಾಗಿತ್ತು:
    ಬಿಪಿಎಲ್‌ ಕಾರ್ಡ್‌ ಇರುವವರಿಗೆ ಕೇಂದ್ರ ಸರ್ಕಾರ ಉಚಿತವಾಗಿ ಪ್ರತಿ ವ್ಯಕ್ತಿಗೆ ಐದು ಕೆ.ಜಿ. ಅಕ್ಕಿಯನ್ನು ಈಗಾಗಲೇ ನೀಡುತ್ತಿದೆ. ಎಪಿಎಲ್‌ ಪಡಿತರ ಚೀಟಿ ಹೊಂದಿದವರಿಗೆ ಕೆ.ಜಿ.ಗೆ 15 ರೂ.ನಂತೆ 10 ಕೆ.ಜಿ. ಅಕ್ಕಿ ವಿತರಿಸಲಾಗುತ್ತದೆ. ಈ ಎರಡೂ ಬಗೆಯ ಪಡಿತರ ಚೀಟಿ ಇಲ್ಲದ ಲಕ್ಷಾಂತರ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಡಿಮೆ ಬೆಲೆಗೆ ಈ ಭಾರತ್‌ ಬ್ರ್ಯಾಂಡ್‌ನ ಅಡಿಯಲ್ಲಿ ಅಕ್ಕಿ, ಬೆಳೆಗಳನ್ನು ಮಾರಾಟ ಮಾಡುತ್ತಿತ್ತು. ಕಡಿಮೆ ಬೆಲೆಗೆ ಗುಣಮಟ್ಟದ ಅಕ್ಕಿ, ಬೆಳೆ ಸಿಕ್ಕಿದ್ದಕ್ಕೆ ಗ್ರಾಹಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

     

  • ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಂಳ ಕಟ್ – ಕೇಂದ್ರ ಸರ್ಕಾರಿ ನೌಕರರಿಗೆ ಡಿಒಪಿಟಿ ಎಚ್ಚರಿಕೆ!

    ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಂಳ ಕಟ್ – ಕೇಂದ್ರ ಸರ್ಕಾರಿ ನೌಕರರಿಗೆ ಡಿಒಪಿಟಿ ಎಚ್ಚರಿಕೆ!

    ನವದೆಹಲಿ: ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಚಾಟೀ ಬೀಸಿದೆ. ಗರಿಷ್ಠ 15 ನಿಮಿಷಗಳ ವಿಳಂಬವನ್ನು ಕ್ಷಮಿಸಲು ನಿರ್ಧರಿಸಿದ್ದು, ದೇಶಾದ್ಯಂತ ಕೇಂದ್ರ ಸರ್ಕಾರದ ಉದ್ಯೋಗಿಗಳು (Government Employees) ಬೆಳಗ್ಗೆ 9.15ಕ್ಕೆ ಕಚೇರಿಗೆ ಹಾಜರಾಗಿ, ಹಾಜರಾತಿಯನ್ನು ದಾಖಲಿಸಲು ಸುತ್ತೊಲೆಯಲ್ಲಿ ತಿಳಿಸಿದೆ.

    ಕೇಂದ್ರ ಸರ್ಕಾರಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5.30 ಗಂಟೆ ವರೆಗೆ ತೆರೆದಿರುತ್ತವೆ. ಆದರೆ ಕಿರಿಯ ಹಂತದ ಉದ್ಯೋಗಿಗಳು ತಡವಾಗಿ ಬರುವುದು ಮತ್ತು ಬೇಗನೆ ಹೊರಡುವುದು ಸಹಜವಾಗಿದೆ. ಇದರಿಂದ ಸಾರ್ವಜನಿಕ ಕೆಲಸಗಳು (Public Work) ಸೇರಿದಂತೆ, ಜನರಿಗೆ ಅನಾನುಕೂಲವಾಗಿದೆ. ಈ ಹಿನ್ನೆಲೆಯಲ್ಲಿ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ ಎಂದು ತಿಳಿಸಲಾಗಿದೆ.

    ಕೊವೀಡ್ ಬಳಿಕ ಕೇಂದ್ರ ಸರ್ಕಾರದ ನೌಕರರು ಬಯೋಮೆಟ್ರಿಕ್ (Biometric) ಬಳಕೆ ಮಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಹಿರಿಯ ಅಧಿಕಾರಿಗಳು ಸಹಿತ ಎಲ್ಲರೂ ಬಯೋ ಮೆಟ್ರಿಕ್ ಮೂಲಕವೇ ಹಾಜರಾತಿ ದಾಖಲಿಸಬೇಕು ಎಂದು ಸೂಚಿಸಿದೆ. ಬೆಳಗ್ಗೆ 9.15 ರೊಳಗೆ ಬಾರದಿದ್ದಲ್ಲಿ ಅರ್ಧ ದಿನದ ವೇತನ ಕಡಿತಗೊಳಿಸಲಾಗುವುದು ಎಂದು ಸಹ ಎಚ್ಚರಿಕೆ ನೀಡಿದೆ.

    ಅನಿವಾರ್ಯ ಕಾರಣಗಳಿಂದ ಯಾವುದೇ ಉದ್ಯೋಗಿಗೆ ನಿರ್ದಿಷ್ಟ ದಿನದಂದು ಕಚೇರಿಗೆ ಹಾಜರಾಗಲು ಸಾಧ್ಯವಾಗದಿದ್ದರೆ ಅದನ್ನು ಮುಂಚಿತವಾಗಿ ತಿಳಿಸಬೇಕು ಮತ್ತು ಸಾಂದರ್ಭಿಕ ರಜೆಗೆ ಅರ್ಜಿ ಸಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ತಾಕೀತು ಮಾಡಿದೆ. ಹಿರಿಯ ಅಧಿಕಾರಿಗಳು ನೌಕರರ ಹಾಜರಾತಿ ಮತ್ತು ಸಮಯಪ್ರಜ್ಞೆಯನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಸುತ್ತೊಲೆಯಲ್ಲಿ ಹೇಳಲಾಗಿದೆ.

    GOVT EMPLOYEES
    ಸಾಂದರ್ಭಿಕ ಚಿತ್ರ

    2014 ರಲ್ಲಿ ನರೇಂದ್ರ ಮೋದಿ ಮೊದಲ ಬಾರಿ ಪ್ರಧಾನಿಯಾದ ಬಳಿಕ ಕಚೇರಿ ಸಮಯವನ್ನು ಕಡ್ಡಾಯವಾಗಿ ಜಾರಿಗೊಳಿಸಲು ಪ್ರಯತ್ನಿಸಿತು‌. ಇದನ್ನು ನೌಕರರು ವಿರೋಧಿಸಿದ್ದರು. ಅವರಲ್ಲಿ ಹಲವರು ದೂರದ ಪ್ರಯಾಣ ಮಾಡುತ್ತಾರೆ ಎಂದು ವಾದಿಸಿದ್ದರು. ಬಳಿಕ ಆಧಾರ್-ಸಕ್ರಿಯಗೊಳಿಸಿದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ, ಹಾಜರಾತಿ ಖಚಿತಪಡಿಸಿಕೊಳ್ಳಲು, ಮೇಲ್ವಿಚಾರಣೆ ಮಾಡಲಾಯಿತು ಸೂಚಿಸಿತ್ತು. ಕೋವಿಡ್ ಬಳಿಕ ಈ ವ್ಯವಸ್ಥೆ ಮತ್ತೆ ಹಾದಿ ತಪ್ಪಿದೆ ಎನ್ನಲಾಗಿದೆ‌.

  • ಪರೀಕ್ಷಾ ಅಕ್ರಮ ತಡೆಗಟ್ಟಲು ಕೇಂದ್ರ ಸರ್ಕಾರದಿಂದ ಹೊಸ ಕಾನೂನು; 5-10 ವರ್ಷ ಜೈಲು, ಒಂದು ಕೋಟಿ ಕನಿಷ್ಠ ದಂಡ

    ಪರೀಕ್ಷಾ ಅಕ್ರಮ ತಡೆಗಟ್ಟಲು ಕೇಂದ್ರ ಸರ್ಕಾರದಿಂದ ಹೊಸ ಕಾನೂನು; 5-10 ವರ್ಷ ಜೈಲು, ಒಂದು ಕೋಟಿ ಕನಿಷ್ಠ ದಂಡ

    ನವದೆಹಲಿ: ನೀಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಯಲ್ಲಿ (NEET, NET Row) ಅಕ್ರಮ ಶಂಕೆ ವ್ಯಕ್ತವಾದ ಬೆನ್ನಲ್ಲೇ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಬೆಳವಣಿಗೆಗಳನ್ನು ನಿಗ್ರಹಿಸಲು ಕೇಂದ್ರ ಸರ್ಕಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆ-2024 ಕಾನೂನು ಜಾರಿಗೆ ಅಧಿಸೂಚನೆ ಹೊರಡಿಸಿದೆ‌. ಈ ಮಸೂದೆಯನ್ನು ಕಳೆದ ಫೆಬ್ರವರಿಯಲ್ಲಿ ಸಂಸತ್ ಅಂಗೀಕರಿಸಿತ್ತು, ಜೂ.21 ರಿಂದ ಈ ಹೊಸ ಕಾನೂನು ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ‌. ಇದನ್ನೂ ಓದಿ: CSIR-UGC-NET ಪರೀಕ್ಷೆ ಮಂದೂಡಿಕೆ

    ಹೊಸ ಕಾನೂನು ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ತಡೆಯಲು ಕನಿಷ್ಠ ಮೂರರಿಂದ ಐದು ವರ್ಷಗಳ ಜೈಲು ಶಿಕ್ಷೆಯನ್ನು ಪ್ರಸ್ತಾಪಿಸುತ್ತದೆ. ಸಂಘಟಿತವಾಗಿ ನಿರಂತರವಾಗಿ ಅಪರಾಧಗಳಲ್ಲಿ ತೊಡಗಿರುವವರಿಗೆ ಐದರಿಂದ ಹತ್ತು ವರ್ಷಗಳ ಜೈಲು ಶಿಕ್ಷೆ ಮತ್ತು ಕನಿಷ್ಠ 1 ಕೋಟಿ ರೂ. ದಂಡ ವಿಧಿಸಲಿದೆ. ಒಬ್ಬ ವ್ಯಕ್ತಿ ಅಥವಾ ವ್ಯಕ್ತಿಗಳ ಗುಂಪು, ಪರೀಕ್ಷಾ ಪ್ರಾಧಿಕಾರ, ಸೇವಾ ಪೂರೈಕೆದಾರರು ಅಥವಾ ಯಾವುದೇ ಇತರ ಸಂಸ್ಥೆ ಸೇರಿದಂತೆ ಪರೀಕ್ಷಾ ಅಕ್ರಮ ಅಪರಾಧವನ್ನು ಮಾಡಿದರೆ ಅವರಿಗೆ ಐದು ವರ್ಷಗಳಿಗಿಂತ ಕಡಿಮೆಯಿಲ್ಲದ ಅಥವಾ ಹತ್ತು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. 1 ಕೋಟಿಗಿಂತ ಕಡಿಮೆಯಿಲ್ಲದ ದಂಡ ವಿಧಿಸಲಾಗುತ್ತದೆ ಎಂದು ಕಾನೂನು ಹೇಳುತ್ತದೆ.

    ಸಂಘಟಿತ ಪೇಪರ್ ಸೋರಿಕೆ ಅಪರಾಧದಲ್ಲಿ ಪರೀಕ್ಷಾ ಕೇಂದ್ರಗಳು ಭಾಗಿಯಾಗಿರುವುದು ಸಾಬೀತಾದರೆ ಸಂಸ್ಥೆಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಕಾನೂನಿನಲ್ಲಿ ಅವಕಾಶ ಕಲ್ಪಿಸಿದೆ. ಅಲ್ಲದೇ ಹೊಸ ಪರೀಕ್ಷೆಯ ಪ್ರಮಾಣಾನುಗುಣವಾದ ವೆಚ್ಚವನ್ನು ಸಹ ಅದರಿಂದ ವಸೂಲಿ ಮಾಡಲಾಗುತ್ತದೆ. ಪ್ರಶ್ನೆ ಪತ್ರಿಕೆಗಳು ಅಥವಾ ಉತ್ತರ ಕೀಗಳನ್ನು ಸೋರಿಕೆ ಮಾಡುವುದು, ಅನಧಿಕೃತ ಸಂವಹನದ ಮೂಲಕ ಅಭ್ಯರ್ಥಿಗಳಿಗೆ ಸಹಾಯ ಮಾಡುವುದು, ಕಂಪ್ಯೂಟರ್ ನೆಟ್‌ವರ್ಕ್‌ಗಳ ದುರ್ಬಳಕೆ, ನಕಲಿ ಪರೀಕ್ಷೆಗಳನ್ನು ನಡೆಸುವುದು ಅಥವಾ ನಕಲಿ ದಾಖಲೆಗಳನ್ನು ನೀಡುವುದು, ಅರ್ಹತೆಗಾಗಿ ದಾಖಲೆಗಳನ್ನು ತಿದ್ದುವುದನ್ನು ಅಕ್ರಮದ ವ್ಯಾಪ್ತಿಯಲ್ಲಿ ಸೇರಿಸಿದೆ. ಇದನ್ನೂ ಓದಿ: ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ ಆರೋಪ – ಸಿಬಿಐನಿಂದ ಎಫ್‍ಐಆರ್

    ಕಾನೂನಿನಡಿ ಬರುವ ಅಪರಾಧಗಳು ಜಾಮೀನು ರಹಿತವಾಗಿದ್ದು, ಉಪ ಪೊಲೀಸ್ ವರಿಷ್ಠಾಧಿಕಾರಿ ಅಥವಾ ಸಹಾಯಕ ಪೊಲೀಸ್ ಆಯುಕ್ತರ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿಯಿಂದ ಅಪರಾಧವನ್ನು ತನಿಖೆ ನಡೆಸಲಾಗುವುದು. ಹೆಚ್ಚುವರಿಯಾಗಿ, ಯಾವುದೇ ತನಿಖೆಯನ್ನು ಕೇಂದ್ರ ಏಜೆನ್ಸಿಗಳಿಗೆ ವರ್ಗಾಯಿಸುವ ಅಧಿಕಾರವನ್ನು ಕೇಂದ್ರ ಸರ್ಕಾರ ಹೊಂದಿದೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC), ಸ್ಟಾಫ್ ಸೆಲೆಕ್ಷನ್ ಕಮಿಷನ್, ರೈಲ್ವೇಸ್, ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳು ಮತ್ತು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ನಡೆಸುವ ಎಲ್ಲಾ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ಈ ಕಾನೂನು ವ್ಯಾಪ್ತಿಯಲ್ಲಿ ಒಳಗೊಂಡಿದೆ.