Tag: ಕೇಂದ್ರ ಸರ್ಕಾರ

  • ದಯಾಮರಣಕ್ಕೆ ಸುಪ್ರೀಂ ಅನುಮತಿ: ಏನಿದು ಲಿವಿಂಗ್ ವಿಲ್? ತೀರ್ಪಿನಲ್ಲಿ ಏನಿದೆ? ತಪ್ಪು ಮಾಡಿದ್ರೆ ಶಿಕ್ಷೆ ಏನು?

    ದಯಾಮರಣಕ್ಕೆ ಸುಪ್ರೀಂ ಅನುಮತಿ: ಏನಿದು ಲಿವಿಂಗ್ ವಿಲ್? ತೀರ್ಪಿನಲ್ಲಿ ಏನಿದೆ? ತಪ್ಪು ಮಾಡಿದ್ರೆ ಶಿಕ್ಷೆ ಏನು?

    ನವದೆಹಲಿ: ದಯಾಮರಣ ಆಯ್ಕೆ ಮಾಡುವುದು ಮೂಲಭೂತ ಹಕ್ಕು ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿಸಿದೆ.

    ಮುಖ್ಯ ನ್ಯಾ. ದೀಪಕ್ ಮಿಶ್ರಾ ಅವರನ್ನು ಒಳಗೊಂಡ ಪಂಚ ಪೀಠದ ನ್ಯಾಯಾಧೀಶರಾದ ಎಕೆ ಸಿಕ್ರಿ, ಎಎಂ ಖಾನ್ವಿಲ್ಕರ್, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್ ಅವರಿದ್ದ ಪೀಠ ಕೆಲ ಮಾರ್ಗಸೂಚಿಗಳನ್ನು ತಿಳಿಸಿ ದಯಾಮರಣಕ್ಕೆ ಅನುಮತಿ ನೀಡಿದೆ.

    ಯಾವುದೇ ಒಬ್ಬ ವ್ಯಕ್ತಿ ವೈದ್ಯಕೀಯ ಮಂಡಳಿ ಮತ್ತು ಹೈಕೋರ್ಟ್ ಅನುಮತಿ ಪಡೆದ ನಂತರ ದಯಾಮರಣ ಪಡೆಯಬಹುದು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ಪಟ್ಟಿದೆ. ಅಲ್ಲದೇ ಆ ವ್ಯಕ್ತಿಗೆ ತನ್ನ ಜೀವ ರಕ್ಷಿಸಲು ಬೇಕಾದ ಮದ್ದು ಮತ್ತು ವೈದ್ಯಕೀಯ ಸವಲತ್ತು ನಿರಾಕರಿಸುವ ಹಕ್ಕಿದೆ ಎಂದು ತಿಳಿಸಿದೆ. ಆದರೆ ಚುಚ್ಚುಮದ್ದು ನೀಡಿ ಸಾಯಿಸಲು ಅನುಮತಿ ನೀಡುವುದಿಲ್ಲ ಎಂದು ನ್ಯಾಯಾಲಯ ತನ್ನ ಐತಿಹಾಸಿಕ ತೀರ್ಪಿನಲ್ಲಿ ಉಲ್ಲೇಖಿಸಿದೆ.

    ದಯಾಮರಣ ಎಂದರೇನು?
    ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ರೋಗಿಯೊಬ್ಬ ಮುಂದೆ ಈ ಸಮಸ್ಯೆಯನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲದ ಸಂದರ್ಭದಲ್ಲಿ ತನಗೆ ಮರಣದ ದಯೆಯನ್ನು ನೀಡಿ ಎಂದು ಅರ್ಜಿ ಮೂಲಕ ಕೇಳಿಕೊಳ್ಳುವುದೆ ದಯಾಮರಣ. ಹಲವು ರಾಷ್ಟ್ರಗಳಲ್ಲಿ ದಯಾಮರಣಕ್ಕೆ ಅನುಮತಿ ಇದೆ.

    ಯುಥೆನೇಸಿಯಾ ಎಂದು ಕರೆಯುವುದು ಯಾಕೆ?
    ಯುಥೆನೇಸಿಯಾ ಮತ್ತು ದಯಾಮರಣ ಎರಡೂ ಒಂದೇ. ಗ್ರೀಕ್ ಭಾಷೆಯಲ್ಲಿ ಒಳ್ಳೆಯ ಸಾವು ಎನ್ನುವುದಕ್ಕೆ ಯುಥೆನೇಸಿಯಾ ಎಂದು ಕರೆಯಲಾಗುತ್ತದೆ.

    ಸುಪ್ರೀಂ ಹೇಳಿದ್ದು ಏನು?
    ವ್ಯಕ್ತಿಯ ಕಾಯಿಲೆ ಗುಣಮುಖವಾಗುವುದೇ ಇಲ್ಲ ಎಂದು ವೈದ್ಯಕೀಯ ಮಂಡಳಿ ದೃಢಪಡಿಸಿದರೆ ಜೀವ ರಕ್ಷಕ ವೈದ್ಯಕೀಯ ಸವಲತ್ತು ನಿರಾಕರಿಸುವ ಮೂಲಕ ನಿಷ್ಕ್ರಿಯ ದಯಾಮರಣ ಮಾತ್ರ ನೀಡಬಹುದು. ಆದರೆ ಚುಚ್ಚುಮದ್ದು ನೀಡಿ ಸಾಯಿಸುವಂತಿಲ್ಲ. ಇದೇ ವೇಳೆ ವೈದ್ಯಕೀಯ ಮಂಡಳಿ ವ್ಯಕ್ತಿಯ ಗುಣಪಡಿಸದ ಕಾಯಿಲೆ ಕುರಿತು ದೃಢಪಡಿಸಿದರೆ ವ್ಯಕ್ತಿಯ ಜೀವ ರಕ್ಷಿಸುವ ವೈದ್ಯಕೀಯ ಸವಲತ್ತು ನಿರಾಕರಿಸಬಹುದು ಎಂದು ಹೇಳಿದೆ.

    ಅರ್ಜಿ ಸಲ್ಲಿಸಿದವರು ಯಾರು?
    2005 ರಲ್ಲಿ ‘ಕಾಮನ್ ಕಾಸ್’ ಹೆಸರಿನ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಯೊಂದು `ಲಿವಿಂಗ್ ವಿಲ್’ ಮೂಲಕ ದಯಾಮರಣ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಬಹು ವರ್ಷಗಳಿಂದ ಕಾಯಿಲೆಯಿಂದ ನರಳುತ್ತಿರುವ ರೋಗಿಗಳಿಗೆ ಪರೋಕ್ಷ ದಯಾಮರಣಕ್ಕೆ ಅವಕಾಶ ನೀಡಬೇಕೆಂದು ಮನವಿ ಮಾಡಿತ್ತು. 2011ರಲ್ಲಿ ಭಾರತದ ಸುಪ್ರೀಂಕೋರ್ಟ್ 37 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ನರಳಿದ್ದ ನರ್ಸ್ ಅರುಣಾ ಶಾನ್‍ಭಾಗ್ ಪ್ರಕರಣಕ್ಕೆ ಸಂಬಂಧಿಸಿದಂತೆ `ಪರೋಕ್ಷ ದಯಾಮರಣ’ಕ್ಕೆ ಅನುಮತಿ ನೀಡಿರಲಿಲ್ಲ. ಈ ತೀರ್ಪು ಪ್ರಕಟವಾದ ಬಳಿಕ ದಯಾಮರಣವನ್ನು ತಪ್ಪಾಗಿ ಅರ್ಥೈಸಿಕೊಂಡಿದೆ ಎನ್ನುವ ಅಭಿಪ್ರಾಯ ಬಂದ ಹಿನ್ನೆಲೆಯಲ್ಲಿ ಕೋರ್ಟ್ ಐದು ಮಂದಿ ನ್ಯಾಯಧೀಶರ ಪಂಚಪೀಠವನ್ನು ರಚಿಸಿತ್ತು.

    ಪ್ರತ್ಯಕ್ಷ ಮತ್ತು ಪರೋಕ್ಷ ದಯಾಮರಣ ಎಂದರೇನು?
    ಅಂಗಾಂಗಗಳು ನಿಷ್ಕ್ರೀಯಗೊಂಡಿರುವ ರೋಗಿಗೆ ನೀಡಿರುವ ವೆಂಟಿಲೇಟರ್ ಸಹಿತ ಜೀವಾಧಾರ ವ್ಯವಸ್ಥೆಯನ್ನು ತೆಗೆಯುವುದು ಪರೋಕ್ಷ ದಯಾಮರಣ. ಒಬ್ಬ ವ್ಯಕ್ತಿಗೆ ಮಾರಣಾಂತಿಕ ರಾಸಾಯನಿಕವನ್ನು ನೀಡಿ ಹತ್ಯೆ ಮಾಡುವುದು ಪ್ರತ್ಯಕ್ಷ ದಯಾಮರಣ. ಪ್ರತ್ಯಕ್ಷ ದಯಾಮರಣ ಕಾನೂನುಬಾಹಿರ.

    ಏನಿದು ಲಿವಿಂಗ್ ವಿಲ್?
    ವ್ಯಕ್ತಿಯೊಬ್ಬ ನಾನು ಮೃತಪಟ್ಟ ನಂತರ ನನ್ನ ಆಸ್ತಿಯನ್ನು ಯಾರಿಗೆ ಹಂಚಬೇಕು ಇತ್ಯಾದಿ ವಿಚಾರಗಳನ್ನು ಲಿಖಿತವಾಗಿ ಬರೆಯುವುದಕ್ಕೆ ವಿಲ್ ಎಂದು ಕರೆಯುತ್ತಾರೆ. ಈ ವಿಲ್ ಎಲ್ಲರಿಗೂ ತಿಳಿದಿದ್ದರೂ ಲಿವಿಂಗ್ ವಿಲ್ ಸ್ವಲ್ಪ ಅದೇ ರೀತಿಯಾಗಿ ಬರುತ್ತದೆ. ಗಂಭೀರ ಚಿಕಿತ್ಸೆಗೆ ದಾಖಲಾಗುವ ಮೊದಲು ಅಥವಾ ಅನುಮತಿಯನ್ನು ನೀಡಲಾಗದ ಸ್ಥಿತಿಯಲ್ಲಿರುವ ಸಂದರ್ಭದಲ್ಲಿ ತನಗೆ ಯಾವ ರೀತಿಯ ಚಿಕಿತ್ಸೆಯನ್ನು ನೀಡಬೇಕು ಎನ್ನುವ ನಿರ್ಧಾರಗಳನ್ನು ಮುಂದೆ ಯಾರು ತೆಗೆದುಕೊಳ್ಳಬೇಕು ಎನ್ನುವುದನ್ನು ತಿಳಿಸುವ ಲಿಖಿತ ದಾಖಲೆಯೇ ಲಿವಿಂಗ್ ವಿಲ್. ಶುಕ್ರವಾರ ಕೋರ್ಟ್ ರೋಗಿ ಲಿವಿಂಗ್ ವಿಲ್ ನೀಡಿದ್ದರೆ ದಯಾಮರಣ ಕಲ್ಪಿಸಬಹುದು ಎಂದು ಹೇಳಿದೆ. ಲಿವಿಂಗ್ ವಿಲ್ ಮೂಲಕ ದಯಾಮರಣ ಕಲ್ಪಿಸಿದ್ದರೆ ರೋಗಿ, ವೈದ್ಯರು ಹಾಗೂ ಪರಿಚಾರಕರರಿಗೆ ಕಾನೂನು ರಕ್ಷಣೆ ಇರುತ್ತದೆ.

    ದಯಾಮರಣ ವಿರೋಧಿಗಳ ವಾದ ಏನಿತ್ತು?
    ಒತ್ತಡ ಹೇರಿ ಲಿವಿಂಗ್ ವಿಲ್ ಬರೆದುಕೊಂಡು ರೋಗಿಯ ದೇಹದ ಅಂಗಾಂಗವನ್ನು ದುರುಪಯೋಗ ಮಾಡಬಹುದು. ಒಂದು ವೇಳೆ ಅವಕಾಶ ನೀಡಿದರೆ ಇದು ಹಣ ಮಾಡುವ ದಂಧೆಯಾಗಬಹುದು. ಹೀಗಾಗಿ ಅವಕಾಶ ನೀಡಬಾರದು ಎಂದು ವಾದಿಸಿದ್ದರು.

    ಕೇಂದ್ರದ ತಿದ್ದುಪಡಿ ಮಸೂದೆಯಲ್ಲಿ ಏನಿದೆ?
    ದೀರ್ಘ ಕಾಲದ ವಾಸಿಯಾಗದ ಕಾಯಿಲೆಗಳಿಂದ ಮರಣಶಯ್ಯೆಯಲ್ಲಿರುವ ರೋಗಿಗಳಿಗೆ ದಯಾಮರಣ ನೀಡುವ ಸಂಬಂಧ, ಕಳೆದ ವರ್ಷ ಮಸೂದೆಗೆ ಸರ್ಕಾರ ತಿದ್ದುಪಡಿ ತಂದಿತ್ತು. ಈ ಮಸೂದೆಯಲ್ಲಿ ದಯಾಮರಣಕ್ಕೆ ಅನುಮತಿ ನೀಡಲು ಆಸ್ಪತ್ರೆಗಳಲ್ಲಿ ಸಮಿತಿ ರಚಿಸಿ ಗುಣಮುಖವಾಗದ ಕಾಯಿಲೆ ಎಂದು ವೈದ್ಯಕೀಯ ಮಂಡಳಿ ದೃಢಪಡಿಸಬೇಕು. ಜೀವ ರಕ್ಷಕ ವೈದ್ಯಕೀಯ ಸವಲತ್ತು ನಿರಾಕರಿಸಿ ದಯಾಮರಣ ಮಾತ್ರ ನೀಡಬಹುದು. ಆದರೆ ಚುಚ್ಚುಮದ್ದು ನೀಡಿ ಸಾಯಿಸುವಂತಿಲ್ಲ. ದಯಾಮರಣವನ್ನು ಸಹಜ ಮರಣ ಎಂದು ಪರಿಗಣಿಸಲಾಗುವುದು ಎನ್ನುವ ಅಂಶವಿತ್ತು.

    ಅಷ್ಟೇ ಅಲ್ಲದೇ ದಯಾಮರಣಕ್ಕೊಳಗಾದ ರೋಗಿ, ವೈದ್ಯರು, ಪರಿಚಾರಕರರಿಗೆ ಕಾನೂನು ರಕ್ಷಣೆ ಇರುತ್ತದೆ. ರೋಗಿಗೆ ಸ್ವಯಂ ನಿರ್ಧಾರ ಕೈಗೊಳ್ಳಲು ಸಾಧ್ಯವಾಗದ ಸ್ಥಿತಿಯಲ್ಲಿ ಚಿಕಿತ್ಸೆ ಬೇಡ ಎಂದು ಆಪ್ತ ಸಂಬಂಧಿಕರ ಮನವಿ ಅಗತ್ಯ. ಎಲ್ಲ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ದಯಾಮರಣ ಮನವಿ ಸ್ವೀಕರಿಸಿ ಅದಕ್ಕೆ ಅನುಮತಿ ನೀಡುವ ಸಮತಿ ರಚಿಸಬೇಕು. ಬದುಕುವ ಸಾಧ್ಯತೆ ಇಲ್ಲ, ಆಯಸ್ಸು ಮುಂದೂಡಲು ಇಷ್ಟವಿಲ್ಲ ಎನ್ನುವ `ಲಿವಿಂಗ್‍ವಿಲ್’ ಅರ್ಜಿಯನ್ನು ಸಮಿತಿ ಪರಿಶೀಲಿಸಬೇಕು. ಸಮಿತಿಗೆ ತಪ್ಪು ಮಾಹಿತಿ ನೀಡಿ ದಯಾ ಮರಣಕ್ಕೆ ಅನುಮತಿ ಪಡೆದಿರುವುದು ಸಾಬೀತಾದರೆ 5-10 ವರ್ಷ ಜೈಲು ಶಿಕ್ಷೆಯ ಜೊತೆ 20 ಲಕ್ಷದಿಂದ 1 ಕೋಟಿ ರೂ. ದಂಡ ವಿಧಿಸಲು ಪರಿಷ್ಕೃತ ಕರಡು ಮಸೂದೆಯಲ್ಲಿ ಅವಕಾಶವಿದೆ.

  • ಎಫ್‌ಆರ್‌ಡಿಐ ಜಾರಿಯಾದ್ರೆ ಜನರ ಹಣಕ್ಕೆ ರಕ್ಷಣೆ ಇಲ್ಲ: ಕೇಂದ್ರದ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ

    ಎಫ್‌ಆರ್‌ಡಿಐ ಜಾರಿಯಾದ್ರೆ ಜನರ ಹಣಕ್ಕೆ ರಕ್ಷಣೆ ಇಲ್ಲ: ಕೇಂದ್ರದ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ

    ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರ `ಹಣಕಾಸು ಪರಿಹಾರ ಮತ್ತು ಠೇವಣಿ ವಿಮೆ ಮಸೂದೆ’ (ಎಫ್‌ಆರ್‌ಡಿಐ) ಜಾರಿಗೆ ತರುವುದಕ್ಕೆ ಮುಂದಾಗಿದ್ದು, ಈ ಮಸೂದೆ ಜಾರಿಯಾದರೆ ಬ್ಯಾಂಕುಗಳ ರಕ್ಷಣೆಯಾಗಲಿದ್ದು, ಜನರ ಹಣಕ್ಕೆ ಮಾತ್ರ ಯಾವುದೇ ರಕ್ಷಣೆ ಇರುವುದಿಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಿ ಗುಂಡೂರಾವ್ ಆರೋಪಿಸಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬ್ಯಾಂಕ್ ದಿವಾಳಿಯಾದಾಗ ಬ್ಯಾಂಕ್ ಗಳನ್ನು ರಕ್ಷಿಸುವ ನಿಯಮಗಳನ್ನು ಎಫ್‌ಆರ್‌ಡಿಐ ಮಸೂದೆಯಲ್ಲಿ ಜಾರಿಗೆ ಮಾಡಲಾಗುತ್ತಿದೆ. ಈ ಬಿಲ್ ಬ್ಯಾಂಕುಗಳ ರಕ್ಷಣೆಗೆ ಅನುಕೂಲವಾಗಿದೆ. ಆದರೆ ಜನರಿಗೆ ಅನುಕೂಲಕರವಾಗಿಲ್ಲ. ಒಂದು ವೇಳೆ ಮಸೂದೆ ಜಾರಿಗೆ ಆದರೆ ಜನರ ಹಣಕ್ಕೆ ರಕ್ಷಣೆಯಿಲ್ಲ. ಬ್ಯಾಂಕ್ ಗಳಲ್ಲಿಟ್ಟಿರುವ ಹಣಕ್ಕೆ ರಕ್ಷಣೆ ಇಲ್ಲವಾಗುತ್ತದೆ. ಇದು ಜನಸಾಮಾನ್ಯರಿಗೆ ಅಸುರಕ್ಷಿತವಾಗಿದೆ. ಕೇವಲ ಬ್ಯಾಂಕ್ ಮತ್ತು ಕಂಪನಿಗಳಿಗೆ ಅನುಕೂಲಕರವಾಗಿರುವ ಈ ಬಿಲ್ ಜಾರಿ ತರುವುದು ಸರಿಯಲ್ಲ ಎಂದು ಆರೋಪಿಸಿದರು.

    ಇದೇ ವೇಳೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿಕಾರಿದ ಅವರು, ಬ್ಯಾಂಕ್ ವ್ಯವಸ್ಥೆ ಹದಗೆಟ್ಟಿದೆ. ಬ್ಯಾಂಕ್ ಗಳನ್ನು ಬಚಾವ್ ಮಾಡಲು ಕೇಂದ್ರ ಮುಂದಾಗಿದೆ. ಇದಕ್ಕಾಗಿ 2.5 ಲಕ್ಷ ಕೋಟಿ ಲಿಕ್ವಿಡಿಟಿ ಕೇಂದ್ರ ನೀಡಿದೆ. ಅಲ್ಲದೆ ಬೇಲ್ ಔಟ್ ಅನ್ನು ಬೇಲ್ ಇನ್ ಮಾಡಲು ಹೊರಟಿದೆ. ಈ ಕುರಿತ ನಿಯಮಗಳನ್ನು ಎಫ್‍ಡಿಆರ್ ಐ ಮಸೂದೆಯಲ್ಲಿ ಸೇರಿಸಿದೆ. ಒಂದು ವೇಳೆ ಬ್ಯಾಂಕ್ ದಿವಾಳಿಯಾದರೆ ಬ್ಯಾಂಕ್ ಸುಲಭವಾಗಿ ಜಾಮೀನು ಪಡೆಯಬಹುದು. ಮೊದಲು ಜಾಮೀನು ಪಡೆಯಲು ಅವಕಾಶವಿರಲಿಲ್ಲ. ಇದರಿಂದ ಸಣ್ಣ ಠೇವಣಿದಾರರ ಹಣವೂ ವಾಪಸ್ ಬರಲ್ಲ. ಬ್ಯಾಂಕ್ ದಿವಾಳಿಯಾದರೆ ಠೇವಣಿ ಹಣ ವಾಪಸ್ ನೀಡಲ್ಲ. ದಿವಾಳಿ ಎಂದು ತೋರಿಸಿ ಬ್ಯಾಂಕ್ ತಪ್ಪಿಸಿಕೊಳ್ಳಲು ಅವಕಾಶ ಲಭಿಸಿಸುತ್ತದೆ. ಹೀಗಾಗಿ ಈ ಮಸೂದೆ ಜಾರಿಗೆ ತರುವುದು ಸರಿಯಲ್ಲ ಎಂದರು.

    ಹಣಕಾಸು ಸಚಿವಾಲಯ ಹೇಳಿದ್ದೇನು?
    ದಿವಾಳಿ ಅಂಚಿಗೆ ತಲುಪುವ ಬ್ಯಾಂಕ್‍ಗಳು ತಮ್ಮ ನಷ್ಟದ ತೀವ್ರತೆ ತಗ್ಗಿಸಲು ಠೇವಣಿದಾರರ ಹಣವನ್ನು ಬಳಸಿಕೊಳ್ಳಲು ಅವಕಾಶ ಇರುವ ಪ್ರಸ್ತಾವವನ್ನು (ಬಿಲ್ ಇನ್) ನಿಯಮವನ್ನು ಎಫ್‌ಆರ್‌ಡಿಐ ಮಸೂದೆ ಒಳಗೊಂಡಿದೆ ಎಂಬ ಮಾಧ್ಯಮ ವರದಿಗಳಿಗೆ ಕೇಂದ್ರ ಹಣಕಾಸು ಸಚಿವಾಲಯ ಈ ಹಿಂದೆ ಸ್ಪಷ್ಟನೆ ನೀಡಿತ್ತು. ಮಸೂದೆಯೂ ಬ್ಯಾಂಕ್ ಠೇವಣಿದಾರರ ಸ್ನೇಹಿಯಾಗಿದ್ದು, ಠೇವಣಿದಾರರ ಹಿತರಕ್ಷಣೆಗೆ ಧಕ್ಕೆಯಾಗುವ ನಿಯಮಗಳನ್ನು ಬದಲಿಸಿಲ್ಲ. ಹೆಚ್ಚು ಪಾರದರ್ಶಕವಾದ ಮತ್ತು ಹೆಚ್ಚುವರಿ ರಕ್ಷಣೆ ನೀಡುವ ಬಗೆಯಲ್ಲಿ ಈ ನಿಯಮಗಳಿವೆ ಎಂಬ ಭರವಸೆ ನೀಡಿತ್ತು.

    ಈ ಮಸೂದೆಯನ್ನು ಆಗಸ್ಟ್ ನಲ್ಲಿ ಸಂಸತ್ತಿನಲ್ಲಿ ಮಂಡಿಸಲಾಗಿದೆ. ಮಸೂದೆಯಲ್ಲಿನ ವಿವಿಧ ಪ್ರಸ್ತಾವನೆಗಳ ಬಗ್ಗೆ ಸಮಿತಿಯು ಎಲ್ಲ ಭಾಗಿದಾರರ ಜತೆ ಚರ್ಚೆ ನಡೆಸುತ್ತಿದೆ. ದೇಶಿ ಬ್ಯಾಂಕ್‍ಗಳು ಅಗತ್ಯ ಇರುವಷ್ಟು ಬಂಡವಾಳ ಹೊಂದಿವೆ. ಅಲ್ಲದೇ ನಿಯಂತ್ರಣ ಮತ್ತು ಮೇಲ್ವಿಚಾರಣೆಗೂ ಒಳಪಟ್ಟಿವೆ. ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಸ್ಥಿರತೆಯೂ ಇದೆ ಎಂದು ಸಚಿವಾಲಯ ತಿಳಿಸಿತ್ತು.

    ಬಿಲ್ ಇನ್ ನಿಯಮ: ಬ್ಯಾಂಕ್ ನಲ್ಲಿ ಠೇವಣಿ ಇಡುವ ಗ್ರಾಹಕರ 1 ಲಕ್ಷ ರು ವರೆಗಿನ ಠೇವಣಿಗೆ ಸರ್ಕಾರದ ಖಾತರಿ ನೀಡಿತ್ತು. ಅಂದರೆ ಒಂದು ವೇಳೆ ಬ್ಯಾಂಕ್ ದಿವಾಳಿಯಾದರೆ ಸರ್ಕಾರ ಈ ಜವಾಬ್ದಾರಿಯನ್ನು ನಿರ್ವಹಿಸುತಿತ್ತು. ಆದರೆ ಮಸೂದೆಯಲ್ಲಿ ಈ ನಿಯಮ ತೆಗೆದು ಹಾಕಲಾಗಿದೆ ಎನ್ನಲಾಗಿದೆ ವರದಿ ಹಿನ್ನೆಲೆಯಲ್ಲಿ ಈ ಆರೋಪ ಈಗ ಕೇಳಿ ಬರುತ್ತಿದೆ.

    ಸರ್ಕಾರದ ಠೇವಣಿ ಹೊಣೆಗಾರಿಕೆ ನೋಡಿಕೊಳ್ಳಲು ಠೇವಣಿ ವಿಮೆ ಮತ್ತು ಸಾಲ ಖಾತರಿ ನಿಗಮವನ್ನು 1960ರ ಮುಂಚೆಯೇ ಸ್ಥಾಪಿಸಲಾಗಿದೆ. ಸರ್ಕಾರದ ಖಾತರಿಗೆ ಒಳಪಡುವ ಠೇವಣಿ ಮೊತ್ತ ಹೆಚ್ಚಿಸಲು ಒತ್ತಾಯಿಸಿದ್ದರೂ ಈ ಸಮಿತಿಯನ್ನು 1993 ರಿಂದ ಇದುವರೆಗೂ ಒಮ್ಮೆಯೂ ಪರಿಷ್ಕರಿಸಿಲ್ಲ.

  • ಹಜ್ ವಿಮಾನ ಪ್ರಯಾಣ ದರ ಕಡಿತಗೊಳಿಸಿದ ಕೇಂದ್ರ: ಹಿಂದೆ ಎಷ್ಟಿತ್ತು? ಈಗ ಎಷ್ಟಾಗಿದೆ?

    ಹಜ್ ವಿಮಾನ ಪ್ರಯಾಣ ದರ ಕಡಿತಗೊಳಿಸಿದ ಕೇಂದ್ರ: ಹಿಂದೆ ಎಷ್ಟಿತ್ತು? ಈಗ ಎಷ್ಟಾಗಿದೆ?

    ನವದೆಹಲಿ: ಹಜ್ ಸಬ್ಸಿಡಿ ಕಡಿತ ಗೊಳಿಸದ ಬೆನ್ನಲ್ಲೇ ಕೇಂದ್ರ ಸರ್ಕಾರ ಹಜ್ ಯಾತ್ರೆ ವಿಮಾನ ಪ್ರಯಾಣ ದರವನ್ನು ಕಡಿತಗೊಳಿಸಿದೆ. ಈ ಕುರಿತು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ಕೇಂದ್ರ ಅಲ್ಪ ಸಂಖ್ಯಾತ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಈ ಕುರಿತು ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ಕುರಿತು ಆಸಕ್ತಿ ಹೊಂದಿದ್ದಾರೆ. ಯಾವುದೇ ಶಿಫಾರಸ್ಸು ಇಲ್ಲದೇ ಈ ನಿರ್ಧರವನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

    ಭಾರತದ 21 ವಿಮಾನ ನಿಲ್ದಾಣಗಳಿಂದ ಹೊರಡುವ ಏರ್ ಇಂಡಿಯಾ, ಸೌದಿ ಏರ್ ಲೈನ್ಸ್ ಮತ್ತು ಫ್ಲೈನಾಸ್ ವಿಮಾನಯಾನ ಸಂಸ್ಥೆಗಳಲ್ಲಿ ಈ ನಿಯಮಗಳು ಅನ್ವಯಿಸುತ್ತವೆ ಎಂದರು.

    ಸರ್ಕಾರದ ಈ ಕ್ರಮದಿಂದ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಿಕರಿಗೆ ಆರ್ಥಿಕ ಹೊರೆ ಕಡಿಮೆಯಾಗಲಿದೆ. ಅಲ್ಲದೇ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಹಜ್ ಯಾತ್ರೆ ಹೆಸರಿನಲ್ಲಿ ನಡೆಸುತ್ತಿದ್ದ ಆರ್ಥಿಕ ಹಾಗೂ ರಾಜಕೀಯ ಶೋಷಣೆ ಕೊನೆಗೊಳ್ಳುತ್ತದೆ ಎಂದು ಹೇಳಿದರು.

    ಪ್ರಯಾಣ ದರ ಎಷ್ಟು? ಅಹಮದಾಬಾದ್ ನಿಂದ 2013-14 ನೇ ಸಾಲಿನಲ್ಲಿದ್ದ 98,750 ರೂ. ದರದಿಂದ 65,015 ರೂ.ಗೆ ಇಳಿಯಲಿದೆ. ಮುಂಬೈ ನಿಂದ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ 98,750 ರೂ. ಗಳಿಂದ ದರ 57,857 ರೂ. ಗೆ ಇಳಿಕೆ ಆಗಲಿದೆ.

    ಕಳೆದ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಆದೇಶ ಅನ್ವಯ ಕೇಂದ್ರ ಸರ್ಕಾರ ರಚಿಸಿದ ಸಮಿತಿಯ ಶಿಫಾರಸುಗಳ ವೇಳೆ 2018 ರಿಂದಲೇ ಹಜ್ ಯಾತ್ರೆಗೆ ನೀಡುತ್ತಿದ್ದ ಸಹಾಯಧನವನ್ನು ರದ್ದು ಪಡಿಸಲಾಗಿತ್ತು. ಈ ಹಣವನ್ನು ಅಲ್ಪಸಂಖ್ಯಾತ ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮಹಿಳೆಯರ ಅಭಿವೃದ್ಧಿಗೆ ಬಳಸುವುದಾಗಿ ಕೇಂದ್ರ ಸರ್ಕಾರ ತಿಳಿಸಿತ್ತು.

    ಸಬ್ಸಿಡಿ ರದ್ದಾಗಿದ್ದು ಯಾಕೆ?
    ಹಜ್ ಸಬ್ಸಿಡಿ ಹೆಸರಿನಲ್ಲಿ ಭಾರೀ ಅಕ್ರಮಗಳು ನಡೆಯುತ್ತಿದ್ದು, ತಲುಪುಬೇಕಾದವರಿಗೆ ಸಹಾಯಧನ ತಲುಪದೇ ಬೇರೆ ಯಾರಿಗೋ ತಲುಪುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದಿತ್ತು. 2022ರೊಳಗಾಗಿ ಹಜ್ ಸಬ್ಸಿಡಿಯನ್ನು ಹಂತ ಹಂತವಾಗಿ ಸ್ಥಗಿತಗೊಳ್ಳಿಸಬೇಕೆಂದು 2012ರಲ್ಲಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಸರ್ಕಾರಕ್ಕೆ ಸೂಚಿಸಿತ್ತು. ಖರ್ಚುಗಳನ್ನು ಭರಿಸಲು ಸಾಧ್ಯವಿರುವ ಮಂದಿ ಮಾತ್ರ ಹಜ್ ಯಾತ್ರೆಯನ್ನು ಮಾಡಬೇಕು ಎಂದು ಕುರಾನ್ ಹೇಳುತ್ತದೆ. ಹೀಗಾಗಿ ಸಬ್ಸಿಡಿ ಪಡೆದು ಯಾತ್ರೆ ಮಾಡುವುದು ಕುರಾನ್ ಬೋಧನೆಗೆ ವಿರುದ್ಧವಾಗುತ್ತದೆ ಅಲ್ಲವೇ ಎಂದು ಸುಪ್ರೀಂ ಪ್ರಶ್ನಿಸಿತ್ತು. ಹಜ್ ಯಾತ್ರೆಗೆ ಬಳಸುವ ಹಣವನ್ನು ಅಲ್ಪಸಂಖ್ಯಾತರ ಶಿಕ್ಷಣ, ಅಭಿವೃದ್ಧಿಗೆ ಬಳಸಬೇಕೆಂದು ಸಲಹೆ ನೀಡಿತ್ತು. 2012ರ ತನಕ ಪ್ರತೀ ವರ್ಷ ಹಜ್ ಯಾತ್ರೆಗೆ ಸುಮಾರು 650 ಕೋಟಿ ರೂ. ಮೀಸಲಿಡಲಾಗುತ್ತಿತ್ತು. ಸುಪ್ರೀಂ ಆದೇಶ ಬಳಿಕ ಇದನ್ನು 450 ಕೋಟಿ ರೂ. ಗೆ ಕಡಿತಗೊಳಿಸಲಾಗಿತ್ತು.

    ಸೌದಿ ಸರ್ಕಾರದ ಜೊತೆ ರಾಜತಾಂತ್ರಿಕ ಸಂಬಂಧ ಈಗ ಮತ್ತಷ್ಟು ಉತ್ತಮವಾಗಿರುವ ಕಾರಣ 2018ರಲ್ಲಿ ಹೆಚ್ಚುವರಿಯಾಗಿ 5 ಸಾವಿರ ಮಂದಿ ಯಾತ್ರೆಗೆ ಅವಕಾಶ ನೀಡಿದೆ. ಇದರಿಂದಾಗಿ ಈ ವರ್ಷ 1,75,025 ಮಂದಿ ಹಜ್ ಯಾತ್ರೆಯನ್ನು ಕೈಗೊಳ್ಳಲಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹೆಚ್ಚುವರಿಯಾಗಿ 40 ಸಾವಿರ ಮಂದಿಗೆ ಅವಕಾಶ ಸಿಕ್ಕಿದ್ದು, ಸ್ವಾತಂತ್ರ್ಯ ಸಿಕ್ಕಿದ ಬಳಿಕ ಅತಿ ಹೆಚ್ಚು ಮಂದಿ ಯಾತ್ರೆ ಕೈಗೊಳ್ಳಲಿದ್ದಾರೆ. ಕಾಂಗ್ರೆಸ್ ಅವಧಿಯಲ್ಲಿ 1,36,020 ಮಂದಿ ಹಜ್ ಯಾತ್ರೆಯನ್ನು ಕೈಗೊಂಡಿದ್ದರೆ ನಮ್ಮ ಸರ್ಕಾರದ ಅವಧಿಯಲ್ಲಿ ಈ ಸಂಖ್ಯೆ 1,75,025ಕ್ಕೆ ಏರಿಕೆಯಾಗಿದೆ ಎಂದು ನಖ್ವಿ ಹೇಳಿದ್ದರು.

  • ಗುಡ್‍ನ್ಯೂಸ್ ಮತ್ತೆ ಇಳಿಕೆ ಆಯ್ತು ಸ್ಟೆಂಟ್ ಬೆಲೆ

    ಗುಡ್‍ನ್ಯೂಸ್ ಮತ್ತೆ ಇಳಿಕೆ ಆಯ್ತು ಸ್ಟೆಂಟ್ ಬೆಲೆ

    ನವದೆಹಲಿ: ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ(ಎನ್‍ಪಿಪಿಎ) ಹೃದಯ ಶಸ್ತ್ರಚಿಕಿತ್ಸೆಯಲ್ಲಿ ಬಳಸುವ ಡ್ರಗ್ ಎಲುಟಿಂಗ್ ಸ್ಟೆಂಟ್ ಬೆಲೆ(ಡಿಇಎಸ್) ಬೆಲೆಯನ್ನು ಇಳಿಕೆ ಮಾಡಿದೆ.

    ಇಲ್ಲಿಯವರೆಗೆ ಡಿಇಎಸ್ ಸ್ಟೆಂಟ್ ಬೆಲೆ 30,180 ರೂ. ದರ ನಿಗದಿಯಾಗಿತ್ತು. ಈಗ 2,300 ರೂ. ಇಳಿಕೆಯಾಗಿ 27,880 ರೂ. ಗರಿಷ್ಟ ದರ ನಿಗದಿಯಾಗಿದೆ. ಬಾರ್ ಮೆಟಲ್ ಸ್ಟೆಂಟ್ ಗರಿಷ್ಠ ಬೆಲೆ 7,400 ರೂ. ನಿಂದ 7,660 ರೂಪಾಯಿಗೆ ಏರಿಕೆಯಾಗಿದೆ.

    ಜಿಎಸ್‍ಟಿ ಹೊರತುಪಡಿಸಿದ ದರ ಇದಾಗಿದ್ದು, 5% ಜಿಎಸ್‍ಟಿ ಹೇರಿದರೆ ಡಿಇಎಸ್ ಬೆಲೆ 29,285 ರೂ. ಆದರೆ ಬಾರ್ ಮೆಟಲ್ ಸ್ಟಂಟ್ ಗರಿಷ್ಟ ದರ 8,043 ರೂ. ಆಗಲಿದೆ.

    ದೇಶದಲ್ಲಿ ಹೃದಯದ ರಕ್ತನಾಳಗಳಲ್ಲಿ ರಕ್ತ ಸಂಚಲನದ ಅಡೆತಡೆ ನಿವಾರಿಸುವ ಶಸ್ತ್ರಚಿಕಿತ್ಸೆಗೆ 95% ಡಿಇಎಸ್ ಸ್ಟಂಟ್‍ಗಳನ್ನು ಬಳಸಲಾಗುತ್ತಿದೆ. ನೂತನ ಪರಿಷ್ಕೃತ ದರ ಮಂಗಳವಾರದಿಂದ ಜಾರಿಯಾಗಿದ್ದು 2019ರ ಮಾರ್ಚ್ 31ರವರೆಗೆ ಈ ಬೆಲೆ ಜಾರಿಯಲ್ಲಿರಲಿದೆ.

    ಕಳೆದ ವರ್ಷ ಫಬ್ರವರಿ 14 ರಂದು ಎನ್‍ಪಿಪಿಎ ಬಾರ್ ಮೆಟಲ್ ಗರಿಷ್ಟ ದರ 7,400 ರೂ. ನಿಗದಿ ಪಡಿಸಿದ್ದರೆ, ಡಿಇಎಸ್ ಗರಿಷ್ಟ ದರ 30,180 ರೂ. ನಿಗದಿ ಪಡಿಸಿ ಆದೇಶ ಹೊರಡಿಸಿತ್ತು.

    ಕೇಂದ್ರ ಸರ್ಕಾರ ಸ್ಟೆಂಟ್ ಗಳ ಬೆಲೆಯನ್ನು ಇಳಿಸಿದ್ದಕ್ಕೆ ಖಾಸಗಿ ಆಸ್ಪತ್ರೆಗಳಿಂದ ವಿರೋಧ ವ್ಯಕ್ತವಾಗಿದೆ. ಬಹಳಷ್ಟು ಆಸ್ಪತ್ರೆಗಳು ಸ್ಟೆಂಟ್‍ಗಳಿಗೆ ಭಾರೀ ದರವನ್ನು ವಿಧಿಸಿ ರೋಗಿಗಳಿಂದ ಹಣವನ್ನು ಲೂಟಿ ಮಾಡುತ್ತಿದ್ದವು. ಸರ್ಕಾರ ಸ್ಟೆಂಟ್ ಗಳ ಬೆಲೆಯನ್ನು ಇಳಿಸಿದ ಬಳಿಕ ಶಸ್ತ್ರಚಿಕಿತ್ಸೆಗೆ ಬಳಕೆಯಾಗುತ್ತಿರುವ ಕ್ಯಾಥೆಟ್ರೆಸ್, ಬಲೂನ್ ಗಳು, ಗೈಡ್ ವಯರ್ ಗಳ ಬೆಲೆ ಏರಿಕೆಯಾಗಿದೆ. ಸ್ಟೆಂಟ್ ಗಳಿಗಿಂತಲೂ ಈಗ ಇವುಗಳ ಬೆಲೆ ಜಾಸ್ತಿಯಾಗಿದೆ. ಇವುಗಳ ಬೆಲೆಯನ್ನು ನಿಯಂತ್ರಿಸಲು ಸರ್ಕಾರದ ಬಳಿ ಕಾನೂನು ಇಲ್ಲದ ಕಾರಣ ಆಸ್ಪತ್ರೆಗಳು ರೋಗಿಗಳಿಂದ ಜಾಸ್ತಿ ಹಣವನ್ನು ಪಡೆಯುತ್ತಿದೆ.

    ಆಲ್ ಇಂಡಿಯಾ ಡ್ರಗ್ ಆ್ಯಕ್ಷನ್ ನೆಟ್‍ವರ್ಕ್(ಎಐಡಿಎಎನ್) ತನ್ನ ಹೇಳಿಕೆಯನ್ನು ಪ್ರಕಟಿಸಿ ಎನ್‍ಪಿಪಿಎ ನಿರ್ಧಾರವನ್ನು ಸ್ವಾಗತಿಸಿದೆ. ಅಲ್ಲದೇ ಆಸ್ಪತ್ರೆಗಳು ಆಂಜಿಯೋ ಪ್ಲಾಸ್ಟ್ ಹೆಸರಲ್ಲಿ ಹಣವನ್ನು ರೋಗಿಗಳಿಂದ ಲೂಟಿ ಮಾಡುತ್ತಿರುವ ಬಗ್ಗೆ ಭಾರತೀಯ ಸ್ಪರ್ಧಾತ್ಮಕ ಆಯೋಗ(ಸಿಸಿಐ) ತನಿಖೆ ನಡೆಸಬೇಕೆಂದು ಎನ್‍ಪಿಇಎಗೆ ಪತ್ರದ ಮೂಲಕ ಬೇಡಿಕೆ ಇಟ್ಟಿದೆ.

  • 2021ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಭಾರತದಿಂದ ಕೈತಪ್ಪುತ್ತಾ?

    2021ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಭಾರತದಿಂದ ಕೈತಪ್ಪುತ್ತಾ?

    ನವದೆಹಲಿ: ಐಸಿಸಿ ಪೂರ್ವ ನಿಗದಿತ ನಿಯಮಗಳಂತೆ 2021 ರ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಭಾರತದಲ್ಲಿ ಆಯೋಜನೆಗೊಳ್ಳಬೇಕಾಗಿತ್ತು. ಆದರೆ ಕೇಂದ್ರ ಸರ್ಕಾರ ಟೂರ್ನಿಗೆ ತೆರಿಗೆ ವಿನಾಯಿತಿ ನಿರಾಕರಿಸಿದ ಕಾರಣ ಟೂರ್ನಿಯನ್ನು ಬೇರೆಡೆ ಸ್ಥಳಾಂತರಿಸಲು ಐಸಿಸಿ ಚಿಂತನೆ ನಡೆಸಿದೆ ಎನ್ನಲಾಗಿದೆ.

    ಈ ಕುರಿತು ಐಸಿಸಿ, ಬಿಸಿಸಿಐ ಭಾರತ ಸರ್ಕಾರದ ಜೊತೆ ತೆರಿಗೆ ವಿನಾಯಿತಿ ಪಡೆಯುವ ಕುರಿತು ಮಾತುಕತೆ ನಡೆಸುವಂತೆ ಸೂಚಿಸಿದೆ. ಒಂದು ವೇಳೆ ಸರ್ಕಾರದೊಂದಿಗೆ ಮಾತುಕತೆ ವಿಫಲವಾದರೆ ಅನಿರ್ವಾಯವಾಗಿ ಬೇರೆಡೆ ಟೂರ್ನಿಯನ್ನು ಆಯೋಜನೆ ಮಾಡಬೇಕಾಗುತ್ತದೆ ಎಂದು ತಿಳಿಸಿದೆ.

    ಇದೇ ಮೊದಲಲ್ಲ: 2002 ರಲ್ಲಿ ಭಾರತದಲ್ಲಿ ಆಯೋಜನೆ ಮಾಡಬೇಕಾಗಿದ್ದ ಐಸಿಸಿ ಚಾಂಪಿಯನ್ಸ್ ಟೂರ್ನಿ ವೇಳೆಯೂ ಕೇಂದ್ರ ಸರ್ಕಾರ ತೆರಿಗೆ ವಿನಾಯಿತಿ ನೀಡಲು ನಿರಾಕರಿಸಿತ್ತು. ಈ ವೇಳೆ ಐಸಿಸಿ ಟೂರ್ನಿಯನ್ನು ಶ್ರೀಲಂಕಾ ಕ್ಕೆ ವರ್ಗಾವಣೆ ಮಾಡಿತ್ತು. ಈ ಟೂರ್ನಿಯಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಫೈನಲ್ ಪ್ರವೇಶ ಪಡೆದಿದ್ದವು. ಶ್ರೀಲಂಕಾ 7 ವಿಕೆಟಿಗೆ 222 ರನ್ ಮಾಡಿದರೆ, ಗುರಿ ಬೆನ್ನತ್ತಿದ್ದ ಭಾರತಕ್ಕೆ 9ನೇ ಓವರ್ ವೇಳೆ ಮಳೆ ಅಡ್ಡಿ ಪಡಿಸಿತ್ತು. ಭಾರತ ಈ ವೇಳೆ ಒಂದು ವಿಕೆಟ್ ಗೆ 38 ರನ್ ಗಳಿಸಿತ್ತು. ಕೊನೆಗೆ ಫೈನಲ್ ಪಂದ್ಯ ಸಂಪೂರ್ಣ ಮಳೆಯಿಂದ ರದ್ದಾಗಿ ಇತ್ತಂಡಗಳು ಪ್ರಶಸ್ತಿಯನ್ನು ಹಂಚಿಕೊಂಡಿತ್ತು.

    ಐಸಿಸಿ ತನ್ನ ಪರಿಷ್ಕೃತ ಆರ್ಥಿಕ ವರ್ಷದ ಮೊತ್ತದಲ್ಲಿ ಅಫ್ಘಾನಿಸ್ತಾನ ಮತ್ತು ಐರ್ಲೆಂಡ್ ತಂಡಗಳಿಗೆ ಹೆಚ್ಚಿನ ಅನುದಾನ ನೀಡಿದೆ. 2017 ಜೂನ್ ನಿಂದ ಇತ್ತಂಡಗಳಿಗೂ ಶಾಶ್ವತ ಸದಸ್ಯತ್ವ ನೀಡಿರುವ ಕುರಿತ ಮಾಹಿತಿ ನೀಡಿದೆ. ವಾರ್ಷಿಕವಾಗಿ ಐಸಿಸಿ ಸುಮಾರು 40 ಸಾವಿರ ಅಮೆರಿಕನ್ ಡಾಲರ್( ಅಂದಾಜು 256 ಕೋಟಿ ರೂ.) ಪಡೆಯುವ ಸಾಧ್ಯತೆ ಇದೆ.

  • ಕರ್ನಾಟಕ ಹೈಕೋರ್ಟ್ ಗೆ ಜಡ್ಜ್ ನೇಮಿಸಿ: ಕಾನೂನು ಸಚಿವರಲ್ಲಿ ಡಿವಿಎಸ್ ಮನವಿ

    ಕರ್ನಾಟಕ ಹೈಕೋರ್ಟ್ ಗೆ ಜಡ್ಜ್ ನೇಮಿಸಿ: ಕಾನೂನು ಸಚಿವರಲ್ಲಿ ಡಿವಿಎಸ್ ಮನವಿ

    ನವದೆಹಲಿ: ಕರ್ನಾಟಕ ಹೈ ಕೋರ್ಟ್ ನಲ್ಲಿ ಖಾಲಿ ಇರುವ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೇಂದ್ರದ ಮಾಜಿ ಕಾನೂನು ಸಚಿವ ಹಾಲಿ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಸದಾನಂದ ಗೌಡ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರಲ್ಲಿ ಮನವಿ ಮಾಡಿದ್ದಾರೆ.

    ಖಾಲಿ ಇರುವ ನ್ಯಾಯಮೂರ್ತಿಗಳ ಹುದ್ದೆಗಳನ್ನು ಭರ್ತಿಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ಹೈಕೋರ್ಟ್ ನಲ್ಲಿ ಹಿರಿಯ ವಕೀಲರು ನಡೆಸುತ್ತಿರುವ ಸರಣಿ ಉಪವಾಸ ಸತ್ಯಾಗ್ರಹದ ಹಿನ್ನೆಲೆಯಲ್ಲಿ ಇಂದು ಸದಾನಂದಗೌಡ ಮತ್ತು ರವಿಶಂಕರ್ ಪ್ರಸಾದ್ ಚರ್ಚಿಸಿದರು. ಸದಾನಂದಗೌಡರು ಈ ಕುರಿತು ವಿವರಗಳನ್ನು ಕಾನೂನು ಸಚಿವರಿಗೆ ನೀಡಿ ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದರು.

    ಸತ್ಯಾಗ್ರಹಕ್ಕೆ ಸ್ಟೇಜ್ ಹಾಕಿರುವ ಅಡ್ವೋಕೇಟ್ಸ್ ಅಸೋಸಿಯೇಷನ್ ಆಫ್ ಬೆಂಗಳೂರು(ಎಎಬಿ) ಬೆಳಗ್ಗೆ 10:30 ರಿಂದ 5:30 ರ ವರೆಗೆ ಒಂದು ವಾರದ ಕಾಲ ಧರಣಿ ಮಾಡಲಿದ್ದು, ಪ್ರತಿಭಟನೆಗೆ ಸರ್ಕಾರ ಮಣಿಯದೆ ಹೋದರೆ ಇಡೀ ರಾಜ್ಯಾದ್ಯಂತ ಕೋರ್ಟ್ ಕಲಾಪ ಬಹಿಷ್ಕಾರ ಮಾಡುವುದಾಗಿ ಹಿರಿಯ ವಕೀಲರು ಎಚ್ಚರಿಕೆ ನೀಡಿದ್ದಾರೆ.

    ಬೇಡಿಕೆ ಏನು?
    ಹೈಕೋರ್ಟ್ ನ್ಯಾಯಾಧೀಶ ಹುದ್ದೆ ಖಾಲಿ ಇರುವುದರಿಂದ ಸುಮಾರು 3 ಲಕ್ಷ ಪ್ರಕರಣಗಳು ವಿಲೇವಾರಿಯಾಗದೇ ಉಳಿದಿದ್ದು, ವಕೀಲರಿಗೆ ಹಾಗೂ ಕಕ್ಷಿದಾರರಿಗೆ ನ್ಯಾಯದಾನ ವಿಳಂಬವಾಗುತ್ತಿದೆ. ಕಳೆದ ಮೂರು ವರ್ಷಗಳಿಂದ ಬೆಂಗಳೂರು ವಕೀಲರ ಸಂಘವು ರಾಷ್ಟ್ರಪತಿ, ಪ್ರಧಾನ ಮಂತ್ರಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ, ಕೇಂದ್ರ ಕಾನೂನು ಮಂತ್ರಿ ಮತ್ತು ಅಟಾರ್ನಿ ಜನರಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡಲು ಮನವಿ ಸಲ್ಲಿಸಿದ್ದರೂ ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ.

    ಸುಪ್ರೀಂ ಕೋರ್ಟ್ ಕರ್ನಾಟಕದ ಹೈಕೋರ್ಟ್ ಗೆ 62 ನ್ಯಾಯಮೂರ್ತಿಗಳನ್ನು ಅನುಮೋದಿಸಿದೆ. ಪ್ರಸ್ತುತ 24 ನ್ಯಾಯಮೂರ್ತಿಗಳೂ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಅದರಲ್ಲಿ 8 ನ್ಯಾಯಮೂರ್ತಿಗಳು ಧಾರವಾಡ ಮತ್ತು ಕಲಬುರುಗಿ ಸಂಚಾರಿ ಪೀಠದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಿನ್ಸಿಪಲ್ ಬೆಂಚ್‍ನಲ್ಲಿ 16 ನ್ಯಾಯಮೂರ್ತಿಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ 38 ನ್ಯಾಯಮೂರ್ತಿಗಳ ಹುದ್ದೆ ಖಾಲಿ ಇದೆ.

    ನೆರೆಯ ರಾಜ್ಯದ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಗೆ ಹೋಲಿಸಿದರೆ ರಾಜ್ಯದ ಹೈಕೋರ್ಟ್ ನಲ್ಲಿ ಸುಮಾರು ಶೇ.60 ರಷ್ಟು ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ನ್ಯಾಯಮೂರ್ತಿಗಳಿಗೆ ಕೆಲಸದ ಒತ್ತಡ ಹೆಚ್ಚಾಗಿದ್ದು, ಪ್ರಕರಣಗಳು ನಿಗದಿತ ಸಮಯಕ್ಕೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬರದೆ ಕಕ್ಷಿದಾರರಿಗೆ ತೊಂದರೆಯಾಗುತ್ತಿದೆ. ಅಲ್ಲದೇ ಅವರಿಗೆ ನ್ಯಾಯಾಂಗದ ಮೇಲೆ ನಂಬಿಕೆ ಕ್ರಮೇಣ ಕಡಿಮೆಯಾಗುತ್ತಿದೆ.

  • ಉಪವಾಸ ಸತ್ಯಾಗ್ರಹ ಆರಂಭಿಸಿದ ಹೈಕೋರ್ಟ್ ಹಿರಿಯ ವಕೀಲರು

    ಉಪವಾಸ ಸತ್ಯಾಗ್ರಹ ಆರಂಭಿಸಿದ ಹೈಕೋರ್ಟ್ ಹಿರಿಯ ವಕೀಲರು

    ಬೆಂಗಳೂರು: ಹೈಕೋರ್ಟ್ ನ್ಯಾಯಾಧೀಶರ ಶೀಘ್ರ ನೇಮಕಾತಿಗೆ ಆಗ್ರಹಿಸಿ ಹಿರಿಯ ವಕೀಲರು ಹೈಕೋರ್ಟ್ ಬಳಿಯ ಗೋಲ್ಡನ್ ಜ್ಯೂಬ್ಲಿ ಗೇಟ್ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

    ಮಾಜಿ ಅಡ್ವೊಕೇಟ್ ಜನರಲ್ ಬಿವಿ ಆಚಾರ್ಯ ಜೊತೆ ಹಿರಿಯ ವಕೀಲರಾದ ಸಜ್ಜನ್ ಪೂವಯ್ಯ, ನಂಜುಂಡ ರೆಡ್ಡಿ, ಬಿಎಲ್ ಜಗದೀಶ್ ಸೇರಿದಂತೆ ಹಲವು ಮಂದಿ ಭಾಗವಹಿಸಿ ಪ್ರತಿಭಟಿಸಿದ್ದರು.

    ಕೇಂದ್ರ ಸರ್ಕಾರ ಹೈಕೋರ್ಟ್‍ಗೆ ನ್ಯಾಯಮೂರ್ತಿಗಳ ಭರ್ತಿ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ. ಇದರಿಂದ ಕರ್ನಾಟಕದಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದರೂ ಭರ್ತಿ ಮಾಡಲು ಮೀನಮೇಷ ಎಣಿಸುತ್ತಿದೆ ಎಂದು ಹಿರಿಯ ವಕೀಲರು ಆರೋಪ ಮಾಡಿದರು. ಧರಣಿ ನಿರತ ಸ್ಥಳಕ್ಕೆ ಮಾಜಿ ಕಾನೂನು ಸಚಿವ, ಹಾಲಿ ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಸದಾನಂದಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಕೇಂದ್ರ ಸರ್ಕಾರದ ಜೊತೆ ಮಾತನಾಡಿ ಸಮಸ್ಯೆ ಪರಿಹರಿಸೋ ನಿಟ್ಟಿನಲ್ಲಿ ಕಾರ್ಯ ಮಾಡುತ್ತೇವೆ ಎಂದು ಹೇಳಿದರು.

    ಸತ್ಯಾಗ್ರಹಕ್ಕೆ ಸ್ಟೇಜ್ ಹಾಕಿರುವ ಅಡ್ವೋಕೇಟ್ಸ್ ಅಸೋಸಿಯೇಷನ್ ಆಫ್ ಬೆಂಗಳೂರು(ಎಎಬಿ) ಬೆಳಗ್ಗೆ 10:30 ರಿಂದ 5:30 ರ ವರೆಗೆ ಒಂದು ವಾರದ ಕಾಲ ಧರಣಿ ಮಾಡಲಿದ್ದು, ಪ್ರತಿಭಟನೆಗೆ ಸರ್ಕಾರ ಮಣಿಯದೆ ಹೋದರೆ ಇಡೀ ರಾಜ್ಯಾದ್ಯಂತ ಕೋರ್ಟ್ ಕಲಾಪ ಬಹಿಷ್ಕಾರ ಮಾಡುವುದಾಗಿ ಹಿರಿಯ ವಕೀಲರು ಎಚ್ಚರಿಕೆ ನೀಡಿದ್ದಾರೆ.

    ಬೇಡಿಕೆ ಏನು? ಹೈಕೋರ್ಟ್ ನ್ಯಾಯಾಧೀಶ ಹುದ್ದೆ ಖಾಲಿ ಇರುವುದರಿಂದ ಸುಮಾರು 3 ಲಕ್ಷ ಪ್ರಕರಣಗಳು ವಿಲೇವಾರಿಯಾಗದೇ ಉಳಿದಿದ್ದು, ವಕೀಲರಿಗೆ ಹಾಗೂ ಕಕ್ಷಿದಾರರಿಗೆ ನ್ಯಾಯದಾನ ವಿಳಂಬವಾಗುತ್ತಿದೆ. ಕಳೆದ ಮೂರು ವರ್ಷಗಳಿಂದ ಬೆಂಗಳೂರು ವಕೀಲರ ಸಂಘವು ರಾಷ್ಟ್ರಪತಿ, ಪ್ರಧಾನ ಮಂತ್ರಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ, ಕೇಂದ್ರ ಕಾನೂನು ಮಂತ್ರಿ ಮತ್ತು ಅಟಾರ್ನಿ ಜನರಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡಲು ಮನವಿ ಸಲ್ಲಿಸಿದ್ದರೂ ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ.

    ಸುಪ್ರೀಂ ಕೋರ್ಟ್ ಕರ್ನಾಟಕದ ಹೈಕೋರ್ಟ್ ಗೆ 62 ನ್ಯಾಯಮೂರ್ತಿಗಳನ್ನು ಅನುಮೋದಿಸಿದೆ. ಪ್ರಸ್ತುತ 24 ನ್ಯಾಯಮೂರ್ತಿಗಳೂ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಅದರಲ್ಲಿ 8 ನ್ಯಾಯಮೂರ್ತಿಗಳು ಧಾರವಾಡ ಮತ್ತು ಕಲಬುರುಗಿ ಸಂಚಾರಿ ಪೀಠದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಿನ್ಸಿಪಲ್ ಬೆಂಚ್‍ನಲ್ಲಿ 16 ನ್ಯಾಯಮೂರ್ತಿಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ 38 ನ್ಯಾಯಮೂರ್ತಿಗಳ ಹುದ್ದೆ ಖಾಲಿ ಇದೆ.

    ನೆರೆಯ ರಾಜ್ಯದ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಗೆ ಹೋಲಿಸಿದರೆ ರಾಜ್ಯದ ಹೈಕೋರ್ಟ್ ನಲ್ಲಿ ಸುಮಾರು ಶೇ.60 ರಷ್ಟು ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ನ್ಯಾಯಮೂರ್ತಿಗಳಿಗೆ ಕೆಲಸದ ಒತ್ತಡ ಹೆಚ್ಚಾಗಿದ್ದು, ಪ್ರಕರಣಗಳು ನಿಗದಿತ ಸಮಯಕ್ಕೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬರದೆ ಕಕ್ಷಿದಾರರಿಗೆ ತೊಂದರೆಯಾಗುತ್ತಿದೆ. ಅಲ್ಲದೇ ಅವರಿಗೆ ನ್ಯಾಯಾಂಗದ ಮೇಲೆ ನಂಬಿಕೆ ಕ್ರಮೇಣ ಕಡಿಮೆಯಾಗುತ್ತಿದೆ.

    ಕಣ್ಣೀರಿಟ್ಟಿದ್ದ ಸಿಜೆ: 2016ರ ನರೇಂದ್ರ ಮೋದಿ ಅವರ ಸ್ವಾತಂತ್ರ್ಯ ಭಾಷಣದಲ್ಲಿ ನ್ಯಾಯಾಧೀಶರ ನೇಮಕಕ್ಕೆ ಸಂಬಂಧಿಸಿದಂತೆ ಯಾವುದೇ ವಿಚಾರವನ್ನು ಪ್ರಸ್ತಾಪ ಮಾಡದಕ್ಕೆ ಅಂದಿನ ಮುಖ್ಯ ನ್ಯಾಯಾಧೀಶರಾಗಿದ್ದ ಟಿ.ಎಸ್.ಠಾಕೂರ್ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ನ್ಯಾಯಾಲಯಗಳಿಗೆ ನ್ಯಾಯಮೂರ್ತಿಗಳನ್ನು ನೇಮಿಸುವಲ್ಲಿ ಕೇಂದ್ರ ಸರ್ಕಾರದ ವಿಳಂಬ ನೀತಿಯಿಂದ ಬೇಸರಗೊಂಡು ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೆದುರೇ ಟಿ.ಎಸ್.ಠಾಕೂರ್ ಗದ್ಗದಿತರಾಗಿ ಕಣ್ಣೀರಿಟ್ಟಿದ್ದರು.

  • ಮೋದಿಗೆ 30 ಪತ್ರ ಬರೆದಿದ್ದೀನಿ, ಒಂದಕ್ಕೂ ಉತ್ತರವಿಲ್ಲ, ಪ್ರಧಾನಿ ಎಂಬ ಅಹಂ- ಅಣ್ಣಾ ಹಜಾರೆ

    ಮೋದಿಗೆ 30 ಪತ್ರ ಬರೆದಿದ್ದೀನಿ, ಒಂದಕ್ಕೂ ಉತ್ತರವಿಲ್ಲ, ಪ್ರಧಾನಿ ಎಂಬ ಅಹಂ- ಅಣ್ಣಾ ಹಜಾರೆ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ವಾಗ್ದಾಳಿ ನಡೆಸಿದ್ದು, ಮೋದಿಗೆ ತಾನು ಪ್ರಧಾನ ಮಂತ್ರಿ ಅನ್ನೋ ಅಹಂ ಇದೆ ಎಂದು ಹೇಳಿದ್ದಾರೆ.

    ಮಹಾರಾಷ್ಟ್ರದ ಸಾಂಗ್ಲಿಯ ಅಟ್ಪಾಡಿ ತೆಹಸಿಲ್‍ನಲ್ಲಿ ಭಾನುವಾರದಂದು ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಕಳೆದ ವರ್ಷಗಳಲ್ಲಿ ಪ್ರಧಾನಿ ಮೋದಿಗೆ ಸುಮಾರು 30 ಪತ್ರ ಬರೆದಿದ್ದೀನಿ. ಆದ್ರೆ ಈವರೆಗೆ ಒಂದಕ್ಕೂ ಉತ್ತರ ಬಂದಿಲ್ಲ. ಮೋದಿಗೆ ಪ್ರಧಾನಮಂತ್ರಿಗಿರಿಯ ಅಹಂ ಇದೆ. ಅದಕ್ಕಾಗಿ ನನ್ನ ಪತ್ರಗಳಿಗೆ ಪ್ರತಿಕ್ರಿಯೆ ನೀಡಿಲ್ಲ ಎಂದು ಹೇಳಿದ್ರು.

    ರೈತರ ಸಮಸ್ಯೆಗಳನ್ನ ಕುರಿತು ಮಾರ್ಚ್ 23 ರಂದು ಅಣ್ಣಾ ಹಜಾರೆ ಚಳವಳಿ ನಡೆಸಲು ಮುಂದಾಗಿದ್ದಾರೆ. ಇದಕ್ಕೆ ಮುನ್ನ ಚಳವಳಿಗಾಗಿ ಜನ ಬೆಂಬಲ ಒಗ್ಗೂಡಿಸಲು ಮೂರು ಸಮಾವೇಶಗಳನ್ನ ನಡೆಸಲಿದ್ದು, ಅಟ್ಪಾಡಿಯಲ್ಲಿ ಮೊದಲ ಸಮಾವೇಶ ಭಾನುವಾರದಂದು ನಡೆದಿದೆ.

    ಇದು ಹಿಂದೆಂದೂ ನಡೆದಿರದಂತಹ ಬೃಹತ್ ಚಳವಳಿ ಆಗಿರಲಿದ್ದು, ಸರ್ಕಾರಕ್ಕೆ ಇದು ಎಚ್ಚರಿಕೆಯಾಗಲಿದೆ ಎಂದು ಹಜಾರೆ ಹೇಳಿದ್ರು. ನನ್ನ ಸಮಾವೇಶ ಮತ್ತು ಚಳವಳಿಗಳ ಮೂಲಕ ಓಟು ಗಳಿಸುವ ಉದ್ದೇಶ ನನಗಿಲ್ಲ. ಜನ ಲೋಕ್‍ಪಾಲ್‍ಗೆ ಬೃಹತ್ ಜಾಥಾ ನಡೆದಂತೆಯೇ, ರೈತರ ಸಮಸ್ಯೆಗಳ ಬಗ್ಗೆಯೂ ಅದೇ ರೀತಿ ಚಳವಳಿ ನಡೆಯುತ್ತದೆ ಎಂದು ಭಾವಿಸಿದ್ದೇನೆ ಎಂದು ಅವರು ಹೇಳಿದ್ರು.

    ಲೋಕ್‍ಪಾಲ್ ಅನುಷ್ಠಾನ, ಲೋಕಾಯುಕ್ತ ನೇಮಕ, ರೈತರಿಗೆ 5 ಸಾವಿರ ರೂ. ಪಿಂಚಣಿ ಹಾಗೂ ರೈತರ ಬೆಳೆಗಳಿಗೆ ದರ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನ ಮುಂದಿಟ್ಟು ಅಣ್ಣಾ ಹಜಾರೆ ಹೋರಾಟಕ್ಕೆ ಮುಂದಾಗಿದ್ದಾರೆ.

  • ಈ ವರ್ಷದಿಂದಲೇ ಮುಸ್ಲಿಮರಿಗೆ ನೀಡಲಾಗ್ತಿದ್ದ ಹಜ್ ಸಬ್ಸಿಡಿ ರದ್ದು: ಅಬ್ಬಾಸ್ ನಖ್ವಿ

    ಈ ವರ್ಷದಿಂದಲೇ ಮುಸ್ಲಿಮರಿಗೆ ನೀಡಲಾಗ್ತಿದ್ದ ಹಜ್ ಸಬ್ಸಿಡಿ ರದ್ದು: ಅಬ್ಬಾಸ್ ನಖ್ವಿ

    ನವದೆಹಲಿ: ಹಜ್ ಯಾತ್ರೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನೀಡುತ್ತಿದ್ದ ಸಹಾಯಧನ ಈ ವರ್ಷದಿಂದ ರದ್ದಾಗಿದೆ ಎಂದು ಮಂಗಳವಾರ ಕೇಂದ್ರ ಅಲ್ಪಸಂಖ್ಯಾತ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

    ಕೇಂದ್ರ ಸರ್ಕಾರ ರಚಿಸಿದ ಸಮಿತಿಯ ಶಿಫಾರಸುಗಳ ಜಾರಿ ಕುರಿತು ಪತ್ರಿಕಾಗೋಷ್ಠಿ ಉದ್ದೇಶಿ ಮಾತನಾಡಿದ ಅವರು, 2018 ರಿಂದಲೇ ಹಜ್ ಯಾತ್ರೆಗೆ ನೀಡುತ್ತಿದ್ದ ಸಹಾಯಧನವನ್ನು ರದ್ದು ಪಡಿಸಲಾಗಿದ್ದು, ಈ ಹಣವನ್ನು ಅಲ್ಪಸಂಖ್ಯಾತ ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮಹಿಳೆಯರ ಅಭಿವೃದ್ಧಿಗೆ ಬಳಸುವುದಾಗಿ ತಿಳಿಸಿದರು.

    ಕೇಂದ್ರ ಸರ್ಕಾರ ಈಗಾಗಲೇ ಮುಸ್ಲಿಂ ಮಹಿಳೆಯರ ಹಜ್ ಯಾತ್ರೆಗೆ ಸಂಬಂಧಿಸಿದಂತೆ 45ಕ್ಕಿಂತ ಹೆಚ್ಚು ವರ್ಷ ವಯಸ್ಸಾಗಿರುವ ಮಹಿಳೆಯರು ಪುರುಷರು ಜೊತೆ ಇಲ್ಲದೆ ಕನಿಷ್ಠ ನಾಲ್ಕು ಮಂದಿಯ ಗುಂಪಿನಲ್ಲಿ ಹೋಗುವುದಕ್ಕೆ ಅವಕಾಶ ಕಲ್ಪಿಸಿದ ಮರು ದಿನವೇ ಸಬ್ಸಿಡಿ ರದ್ದು ಮಾಡುವ ನಿರ್ಣಯವನ್ನು ಘೋಷಿಸಿದೆ.

    ಕೇಂದ್ರ ಅಲ್ಪಸಂಖ್ಯಾತ ಅಭಿವೃದ್ಧಿ ಸಚಿವಾಲಯ ಕಳೆದ ವರ್ಷ ಹಜ್ ಯಾತ್ರೆ ಕೈಗೊಳ್ಳುವ 2018-22 ರ ವರ್ಷದ ನಿಯಮಗಳನ್ನು ರೂಪಿಸಲು ಕೇಂದ್ರದ ಮಾಜಿ ಕಾರ್ಯದರ್ಶಿ ಅಫ್ಜಲ್ ಅಮಾನುಲ್ಲಾ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಿತ್ತು. ಈ ಸಮಿತಿ ನೀಡಿದ ಶಿಪಾರಸ್ಸುಗಳ ಆಧಾರದ ಮೇಲೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

    ಅಫ್ಜಲ್ ಅಮಾನುಲ್ಲಾ ಸಮಿತಿಯ ಶಿಫಾರಸ್ಸುಗಳ ಆಧಾರದ ಮೇಲೆ 2018ರ ಹಜ್ ಯಾತ್ರೆಯು ಹೊಸ ನಿಯಮಗಳು ರೂಪುಗೊಳ್ಳುತ್ತವೆ. ಈ ಸಮಿತಿಯ ನಿಯಮಗಳು ಉತ್ತಮವಾಗಿದ್ದು, ಪಾರದರ್ಶಕ ಮತ್ತು ಜನಸ್ನೇಹಿಯಾಗಿವೆ. ಅಲ್ಲದೇ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಖಾತರಿಪಡಿಸುತ್ತದೆ. ಅಲ್ಲದೇ ಈ ನಿಯಮಗಳು ಅಲ್ಪ ಸಂಖ್ಯಾತರ ಘನತೆ ಹಾಗೂ ಮನಃಪೂರ್ವಕವಾಗಿ ಅಧಿಕಾರ ನೀಡುವುದು ಸಮಿತಿ ನೀತಿ ಭಾಗವಾಗಿದೆ ಎಂದು ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಸ್ಪಷ್ಟಪಡಿಸಿದರು.

    ಸೌದಿ ಸರ್ಕಾರದ ಜೊತೆ ರಾಜತಾಂತ್ರಿಕ ಸಂಬಂಧ ಈಗ ಮತ್ತಷ್ಟು ಉತ್ತಮವಾಗಿರುವ ಕಾರಣ 2018ರಲ್ಲಿ ಹೆಚ್ಚುವರಿಯಾಗಿ 5 ಸಾವಿರ ಮಂದಿ ಯಾತ್ರೆಗೆ ಅವಕಾಶ ನೀಡಿದೆ. ಇದರಿಂದಾಗಿ ಈ ವರ್ಷ 1,75,025 ಮಂದಿ ಹಜ್ ಯಾತ್ರೆಯನ್ನು ಕೈಗೊಳ್ಳಲಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹೆಚ್ಚುವರಿಯಾಗಿ 40 ಸಾವಿರ ಮಂದಿಗೆ ಅವಕಾಶ ಸಿಕ್ಕಿದ್ದು, ಸ್ವಾತಂತ್ರ್ಯ ಸಿಕ್ಕಿದ ಬಳಿಕ ಅತಿ ಹೆಚ್ಚು ಮಂದಿ ಯಾತ್ರೆ ಕೈಗೊಳ್ಳಲಿದ್ದಾರೆ ಎಂದು ನಖ್ವಿ ತಿಳಿಸಿದ್ದಾರೆ.

    ಕಾಂಗ್ರೆಸ್ ಅವಧಿಯಲ್ಲಿ 1,36,020 ಮಂದಿ ಹಜ್ ಯಾತ್ರೆಯನ್ನು ಕೈಗೊಂಡಿದ್ದರೆ ನಮ್ಮ ಸರ್ಕಾರದ ಅವಧಿಯಲ್ಲಿ ಈ ಸಂಖ್ಯೆ 1,75,025ಕ್ಕೆ ಏರಿಕೆಯಾಗಿದೆ ಎಂದು ನಖ್ವಿ ಹೇಳಿದರು.

    ರೋಷನ್ ಬೇಗ್ ಸ್ವಾಗತ: ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ರಾಜ್ಯ ವಕ್ಫ್ ಖಾತೆಯ ಸಚಿವ ರೋಷನ್ ಬೇಗ್ ಹೇಳಿದ್ದಾರೆ. ಹಜ್ ಪವಿತ್ರ ಯಾತ್ರೆಯಾಗಿದ್ದು, ಬೇರೆಯವರಿಂದ ಸಹಾಯ ಪಡೆದು ಯಾತ್ರೆ ಹೋಗಬಾರದು ಎಂದು ಅವರು ಅಭಿಪ್ರಾಯಪಟ್ಟರು.

    ಸುಪ್ರೀಂಕೋರ್ಟ್ ಹೇಳಿದ್ದೇನು?
    ಹಜ್ ಸಬ್ಸಿಡಿ ಹೆಸರಿನಲ್ಲಿ ಭಾರೀ ಅಕ್ರಮಗಳು ನಡೆಯುತ್ತಿದ್ದು, ತಲುಪುಬೇಕಾದವರಿಗೆ ಸಹಾಯಧನ ತಲುಪದೇ ಬೇರೆ ಯಾರಿಗೋ ತಲುಪುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದಿತ್ತು. 2022ರೊಳಗಾಗಿ ಹಜ್ ಸಬ್ಸಿಡಿಯನ್ನು ಹಂತ ಹಂತವಾಗಿ ಸ್ಥಗಿತಗೊಳ್ಳಿಸಬೇಕೆಂದು 2012ರಲ್ಲಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಸರ್ಕಾರಕ್ಕೆ ಸೂಚಿಸಿತ್ತು. ಖರ್ಚುಗಳನ್ನು ಭರಿಸಲು ಸಾಧ್ಯವಿರುವ ಮಂದಿ ಮಾತ್ರ ಹಜ್ ಯಾತ್ರೆಯನ್ನು ಮಾಡಬೇಕು ಎಂದು ಕುರಾನ್ ಹೇಳುತ್ತದೆ. ಹೀಗಾಗಿ ಸಬ್ಸಿಡಿ ಪಡೆದು ಯಾತ್ರೆ ಮಾಡುವುದು ಕುರಾನ್ ಬೋಧನೆಗೆ ವಿರುದ್ಧವಾಗುತ್ತದೆ ಅಲ್ಲವೇ ಎಂದು ಸುಪ್ರೀಂ ಪ್ರಶ್ನಿಸಿತ್ತು. ಹಜ್ ಯಾತ್ರೆಗೆ ಬಳಸುವ ಹಣವನ್ನು ಅಲ್ಪಸಂಖ್ಯಾತರ ಶಿಕ್ಷಣ, ಅಭಿವೃದ್ಧಿಗೆ ಬಳಸಬೇಕೆಂದು ಸಲಹೆ ನೀಡಿತ್ತು. 2012ರ ತನಕ ಪ್ರತೀ ವರ್ಷ ಹಜ್ ಯಾತ್ರೆಗೆ ಸುಮಾರು 650 ಕೋಟಿ ರೂ. ಮೀಸಲಿಡಲಾಗುತ್ತಿತ್ತು. ಸುಪ್ರೀಂ ಆದೇಶ ಬಳಿಕ ಇದನ್ನು 450 ಕೋಟಿ ರೂ. ಗೆ ಕಡಿತಗೊಳಿಸಲಾಗಿತ್ತು.

    ಅಫ್ಜಲ್ ಅಮಾನುಲ್ಲಾ ಸಮಿತಿಯ ಶಿಫಾರಸ್ಸುಗಳು ಏನಿತ್ತು?
    ಹಜ್ ಯಾತ್ರೆ ಕೈಗೊಳ್ಳಲು ಇದುವರೆಗೂ ವಿಮಾನ ಪ್ರಯಾಣದಲ್ಲಿ ಮಾತ್ರ ಅವಕಾಶ ನೀಡಲಾಗುತ್ತಿದೆ. ಇದರ ಜೊತೆಗೆ ಹಡಗು ಯಾನದ ಮೂಲಕ ಹಜ್ ಯಾತ್ರೆ ಕೈಗೊಳ್ಳಲು ಅವಕಾಶ ಕಲ್ಪಿಸಿಕೊಡಬೇಕು.

    ಯಾತ್ರೆಯ ವೇಳೆ ಮಹಿಳೆಯ ಯಾತ್ರಿಕರ ಜೊತೆ ಪುರುಷ ಸಂಬಂಧಿ ಇರಬೇಕು ಎಂಬ ನಿಯಮವನ್ನು ರದ್ದಾಗಬೇಕು. 45ಕ್ಕಿಂತ ಹೆಚ್ಚು ವರ್ಷ ಮೇಲ್ಪಟ್ಟ ಮಹಿಳೆಯರು ಪುರುಷರು ಜೊತೆ ಇಲ್ಲದೆ ಕನಿಷ್ಠ, ನಾಲ್ಕು ಮಂದಿಯ ಗುಂಪಿನಲ್ಲಿ ಹೋಗುವುದಕ್ಕೆ ಅವಕಾಶ ಕಲ್ಪಿಸಿಕೊಡಬೇಕು.

  • ಸಿನಿಮಾ ಮಂದಿರದಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯವಲ್ಲ: ಸುಪ್ರೀಂ

    ಸಿನಿಮಾ ಮಂದಿರದಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯವಲ್ಲ: ಸುಪ್ರೀಂ

    ನವದೆಹಲಿ: ಸಿನಿಮಾ ಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶ ಪ್ರಕಟಿಸಿದೆ.

    ಚಿತ್ರ ಮಂದಿರದಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸುವುದು ಬೇಡ ಎಂದು ಕೇಂದ್ರ ಸರ್ಕಾರ ಸೋಮವಾರ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿತ್ತು. ಇಂದು ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ತಾನು ಈ ಹಿಂದೆ ನೀಡಿದ್ದ ಆದೇಶವನ್ನು ಪರಿಷ್ಕರಿಸಿದೆ. ಇದನ್ನೂ ಓದಿ: ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ವಿರೋಧ ವ್ಯಕ್ತಪಡಿಸಿದ ಬಾಲಿವುಡ್ ಕಲಾವಿದರು!

    ಈ ಹಿಂದಿನ ವಿಚಾರಣೆ ವೇಳೆ ರಾಷ್ಟ್ರಗೀತೆ ವಿಚಾರದಲ್ಲಿ ಜನರ ದೇಶ ಭಕ್ತಿಯನ್ನು ಪರಿಶೀಲಿಸುವುದು ಎಷ್ಟ ಸರಿ? ತಮ್ಮ ಭುಜದ ಮೇಲೆ ದೇಶಭಕ್ತಿಯ ಸಂಕೇತವನ್ನು ಹೊಂದಿರಬೇಕು ಎಂದು ಯಾಕೆ ನೀವು ಬಯಸುತ್ತೀರಿ ಎಂದು ಪ್ರಶ್ನಿಸುವ ಮೂಲಕ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಅಷ್ಟೇ ಅಲ್ಲದೇ ದೇಶಪ್ರೇಮದ ಹೆಸರಿನಲ್ಲಿ ನಡೆಯುತ್ತಿರುವ ಅನೈತಿಕ ಪೊಲೀಸ್‍ಗಿರಿಗೆ ಕಡಿವಾಣ ಹಾಕಲು ರಾಷ್ಟ್ರಗೀತೆ ಕಡ್ಡಾಯ ಆದೇಶ ರದ್ದು ಮಾಡುವ ಬಗ್ಗೆ ಕೋರ್ಟ್ ಸುಳಿವು ನೀಡಿತ್ತು. ಇದನ್ನೂ ಓದಿ: ವಧುವಿನ ಕೈ ಹಿಡಿಯುವಾಗ ಚಿಕ್ಕಮಗಳೂರಿನ ಕಲ್ಯಾಣ ಮಂಟಪದಲ್ಲಿ ಮೊಳಗಿತು ರಾಷ್ಟ್ರಗೀತೆ

    ಸೋಮವಾರದ ವಿಚಾರಣೆಯಲ್ಲಿ ಅಟರ್ನಿ ಜನರಲ್ ವೇಣುಗೋಪಾಲ್ ರಾವ್, ಸಾರ್ವಜನಿಕ ಸ್ಥಳಗಳಲ್ಲಿ ರಾಷ್ಟ್ರಗೀತೆ ನುಡಿಸುವ, ಹಾಡುವ ವಿಷಯಕ್ಕೆ ಸಂಬಂಧಿಸಿ ವಿಧಿ, ವಿಧಾನ ರೂಪಿಸಲು 12 ಸದಸ್ಯರನ್ನೊಳಗೊಂಡ ಅಂತರ ಸಚಿವಾಲಯ ಸಮಿತಿ ರಚಿಸಲಾಗಿದೆ. ಆರು ತಿಂಗಳ ಒಳಗಾಗಿ ಸಮಿತಿ ವರದಿ ನೀಡಲಿದ್ದು, ಅಲ್ಲಿಯವರೆಗೆ ರಾಷ್ಟ್ರಗೀತೆ ಕಡ್ಡಾಯ ಬೇಡ ಎಂದು ಮನವಿ ಮಾಡಿದ್ದರು. ಇದನ್ನೂ ಓದಿ: ಚೀನಾದಲ್ಲಿ ರಾಷ್ಟ್ರಗೀತೆಗೆ ಅಗೌರವ ತೋರಿದವರಿಗೆ 3 ವರ್ಷ ಜೈಲು ಶಿಕ್ಷೆ! 

    ರಾಷ್ಟ್ರಗೀತೆ ಕಡ್ಡಾಯ ಎಂದು ಸುಪ್ರೀಂಕೋರ್ಟ್ 2016ರ ನವೆಂಬರ್ ನಲ್ಲಿ ಆದೇಶ ಪ್ರಕಟಿಸಿತ್ತು. ಈ ಸಂದರ್ಭದಲ್ಲಿ ಕೇಂದ್ರ ಪರ ಹಾಜರಿದ್ದ ಅಟಾರ್ನಿ ಜನರಲ್, ಸಿನೆಮಾ ಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಮಾಡುವುದು ನಿರ್ಧಾರ ಸರಿಯಾಗಿದ್ದು, ಇದರಿಂದ ಏಕತೆ ಸಾರುತ್ತದೆ ಎಂದು ವಾದಿಸಿದ್ದರು.