Tag: c t ravi

  • ಸಿ.ಟಿ ರವಿ, ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಕರಣದಲ್ಲಿ ನನ್ನ ನಿರ್ಧಾರ ನೂರಕ್ಕೆ ನೂರು ಸರಿಯಿದೆ: ಹೊರಟ್ಟಿ

    ಸಿ.ಟಿ ರವಿ, ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಕರಣದಲ್ಲಿ ನನ್ನ ನಿರ್ಧಾರ ನೂರಕ್ಕೆ ನೂರು ಸರಿಯಿದೆ: ಹೊರಟ್ಟಿ

    ಕಾರವಾರ: ಸಿ.ಟಿ ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪ್ರಕರಣವನ್ನು ಪರಿಷತ್ತಿನ ನೀತಿ ನಿರೂಪಣಾ ಸಮಿತಿಗೆ ನೀಡಲಾಗಿದೆ. ಅವರು ವೀಡಿಯೋ ಸೇರಿದಂತೆ ಇತರೆ ದಾಖಲೆಗಳನ್ನು ಪರಿಶೀಲಿಸಿ ವರದಿ ನೀಡಿದ ಬಳಿಕ ತಿರ್ಮಾನ ಕೈಗೊಳ್ಳಲಾಗುತ್ತದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

    ಶಿರಸಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷತ್ ಉಪ ಸಭಾಪತಿಗಳು ಅಧ್ಯಕ್ಷರಾಗಿರುವ ಸದನದ ನೀತಿ ನಿರೂಪಣಾ ಸಮಿತಿಗೆ ಪ್ರಕರಣವನ್ನು ವಹಿಸಲಾಗಿದೆ. ಅದರಲ್ಲಿ ಸಿ.ಟಿ ರವಿಯೂ ಸದಸ್ಯರಾಗಿದ್ದರು. ಅವರನ್ನು ಈಗ ಹೊರಗೆ ಇಡಲಾಗಿದೆ. ಸಮಿತಿಯವರು ಸದನದ ಆಡಿಯೋ, ವೀಡಿಯೋ ಪರಿಶೀಲನೆ ಮಾಡಲಿದ್ದಾರೆ. ಮಾಧ್ಯಮದವರೂ ಸಹ ವೀಡಿಯೋ ನೀಡಿದ್ದಾರೆ. ಅದನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು, ಅಲ್ಲಿಂದ ವರದಿ ಬಂದ ನಂತರದಲ್ಲಿ ಪ್ರಕರಣದ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.‌

    ಮೊದಲಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಿ.ಟಿ ರವಿ ವಿರುದ್ಧ ಅವಾಚ್ಯ ಪದ ಬಳಸಿದ ಕುರಿತು ದೂರು ದಾಖಲಿಸಿದ್ದರು. ಬಳಿಕ ಸಿ.ಟಿ ರವಿಯವರೂ ಸಹ ಪ್ರತಿ ದೂರು ನೀಡಿದ್ದಾರೆ. ಘಟನೆಗೆ ಸಂಬಂಧಿಸಿ ಈಗಾಗಲೇ ಸಮಿತಿಗೆ ಸತ್ಯಾಸತ್ಯತೆ ಪರಿಶೀಲನೆಗೆ ತಿಳಿಸಲಾಗಿದೆ. ಅಲ್ಲಿನ ವರದಿ ಆಧರಿಸಿ ಮುಂದಿನ ಕ್ರಮ ಆಗಲಿದೆ. ಸಭಾಪತಿಗಳು ನ್ಯಾಯಾಧೀಶರ ಸ್ಥಾನದಲ್ಲಿ ಕುಳಿತುಕೊಂಡಂತೆ. ಅವರು ಪಕ್ಷಪಾತ ಮಾಡಬಾರದು. ಸಿ.ಟಿ ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣದಲ್ಲಿ ನಾನು ತೆಗೆದುಕೊಂಡ ನಿರ್ಧಾರವನ್ನು ಬಿಹಾರದ ಶಾಸಕಸಭೆಯಲ್ಲೂ ಶ್ಲಾಘಿಸಲಾಗಿದೆ. ನಿರ್ಧಾರವು ನೂರಕ್ಕೆ ನೂರರಷ್ಟು ಸರಿಯಿದೆ. ಯಾರೇ ನಿರ್ಧಾರ ತಪ್ಪು ಎಂದರೂ ಅದು ಅವರ ಅಭಿಪ್ರಾಯ ಎಂದು ಪ್ರತಿಕ್ರಿಯಿಸಿದರು.

    ಸಭಾಪತಿಯಾಗಿ ಯಾವ ಪಕ್ಷದ ಪರವಾಗಿಯೂ ಇಲ್ಲ. ನಿಷ್ಪಕ್ಷಪಾತವಾಗಿ ಕಾರ್ಯ ಮಾಡುತ್ತಿದ್ದೇನೆ. ಯಾರಿಂದಲೂ ಒಂದೇ ಒಂದು ದೂರು ಇಲ್ಲ. ಸಭಾಪತಿಯಾಗಿ ಆಯ್ಕೆ ಆದ ತಕ್ಷಣ ನನ್ನ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ಅಂದೇ ರಾಜೀನಾಮೆ ನೀಡಿದ್ದೇನೆ. ಸಾಂವಿಧಾನಿಕ ಹುದ್ದೆ ಸಭಾಪತಿ, ಸಭಾಧ್ಯಕ್ಷ ಎಂಬುದು ಸರ್ಕಾರ ಬದಲಾದ ತಕ್ಷಣ ಬದಲಾಯಿಸುವುದು, ಅವಿಶ್ವಾಸ ಮಾಡುವುದು ಒಳ್ಳೆಯ ಸಂಪ್ರದಾಯ ಅಲ್ಲ. ನನ್ನನ್ನು ಬದಲಾಯಿಸುತ್ತಾರೆ ಎಂಬ ವರದಿಗಳನ್ನೂ ಮಾಧ್ಯಮಗಳಲ್ಲಿ ನೋಡಿದ್ದೇನೆ. ಅಧಿಕಾರ ಯಾರಿಗೂ ಶಾಶ್ವತವಲ್ಲ. ಸಭಾಪತಿ ಪಕ್ಷಾತೀತವಾಗಿ ಇರಬೇಕು. ನಾನೂ ಸಭಾಪತಿಯಾಗಿ ಹಾಗೇ ಇದ್ದೇನೆ. ವೈಯಕ್ತಿಕವಾಗಿ ಯಾರೆ ಏನೇ ಹೇಳಿದರೂ ನಾನು ಮಾತನಾಡುವುದಿಲ್ಲ ಎಂದರು.

  • ಲಕ್ಷ್ಮಿ ಹೆಬ್ಬಾಳ್ಕರ್‌ಗೆ ನಿಂದನೆ ಕೇಸ್ – ಸಿ.ಟಿ.ರವಿ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಹೈಕೋರ್ಟ್ ಆದೇಶ

    ಲಕ್ಷ್ಮಿ ಹೆಬ್ಬಾಳ್ಕರ್‌ಗೆ ನಿಂದನೆ ಕೇಸ್ – ಸಿ.ಟಿ.ರವಿ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಹೈಕೋರ್ಟ್ ಆದೇಶ

    ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ನಿಂದಿಸಿದ ಆರೋಪ ಕೇಸಲ್ಲಿ ಬಿಜೆಪಿಯ ಸಿ.ಟಿ.ರವಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣ ಸಂಬಂಧ ಸಿ.ಟಿ.ರವಿ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ಆದೇಶ ನೀಡಿದೆ.

    ಪ್ರಕರಣ ರದ್ದು ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜ.30ಕ್ಕೆ ಮುಂದೂಡಿದೆ. ಈ ಮಧ್ಯೆ, ಸಿಐಡಿ ತಂಡ ತನಿಖೆ ಭಾಗವಾಗಿ ಸ್ಥಳ ಮಹಜರಿಗೆ ಮತ್ತೊಮ್ಮೆ ಪ್ರಯತ್ನ ನಡೆಸಲು ಮುಂದಾಗಿದೆ. ಇದಕ್ಕೆ ಸಭಾಪತಿಗಳು ಗರಂ ಆಗಿದ್ದು, ಪ್ರಕರಣವನ್ನು ಎಥಿಕ್ಸ್ ಕಮಿಟಿಗೆ ಒಪ್ಪಿಸಿ ಆದೇಶಿಸಿದ್ದಾರೆ. ಸಿಐಡಿ ತನಿಖೆಯನ್ನು ಪ್ರಶ್ನೆ ಮಾಡಿದ್ದಾರೆ.

    ನ್ಯಾಯಾಲಯಕ್ಕೂ ಸಹ ಶಾಸಕಾಂಗಕ್ಕೆ ಆದೇಶ ನೀಡುವ ಅಧಿಕಾರ ಇಲ್ಲ. ಇಂತಹದರಲ್ಲಿ ನೀವು ಯಾವ ಆಧಾರದ ಮೇಲೆ ಸಿಐಡಿ ತನಿಖೆ ಪ್ರಕರಣ ನೀಡಿದ್ದೀರಿ? ಯಾವ ರೀತಿ ಸ್ಥಳ ಮಹಜರು ಮಾಡುತ್ತೀರಿ ಅಂತ ಸಿಐಡಿಗೆ ಪ್ರಶ್ನೆ ಮಾಡಿದ್ದೇನೆ? ಆದರೆ, ಇಲ್ಲಿಯವರೆಗೆ ಯಾವುದೇ ಉತ್ತರ ಬಂದಿಲ್ಲ. ಹೀಗಾಗಿ ಸದನ ಎಥಿಕ್ಸ್ ಕಮಿಟಿಗೆ ಪ್ರಕರಣ ವರ್ಗಾವಣೆ ಮಾಡಿದ್ದೇನೆ ಎಂದು ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

    ಈ ಮಧ್ಯೆ, ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣದ ಬಗ್ಗೆ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ನಾನಾ ಅನುಮಾನ ವ್ಯಕ್ತಪಡಿಸಿದ್ರು. ಇದಕ್ಕೆ ಗೃಹ ಸಚಿವರು ಮತ್ತು ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ತಿರುಗೇಟು ನೀಡಿದ್ದಾರೆ.

  • ಸಿ.ಟಿ ರವಿಯನ್ನ ಊರೆಲ್ಲ ತಿರುಗಿಸಿದ್ದೇ ಸಾಧನೆ ಅಲ್ಲ – ಸಾಲು ಸಾಲು ದರೋಡೆಗೆ ಕೋಟಾ ಕಿಡಿ

    ಸಿ.ಟಿ ರವಿಯನ್ನ ಊರೆಲ್ಲ ತಿರುಗಿಸಿದ್ದೇ ಸಾಧನೆ ಅಲ್ಲ – ಸಾಲು ಸಾಲು ದರೋಡೆಗೆ ಕೋಟಾ ಕಿಡಿ

    ಚಿಕ್ಕಮಗಳೂರು: ರಾಜ್ಯದಲ್ಲಿ ನಡೆದ ಸಾಲು-ಸಾಲು ದರೋಡೆ ಪ್ರಕರಣಗಳ ವಿಚಾರವಾಗಿ ಸರ್ಕಾರದ ವಿರುದ್ಧ ಸಂಸದ ಕೋಟಾ ಶ್ರೀನಿವಾಸ ಪೂಜಾರಿ (Kota Srinivas Poojary) ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ಚಿಕ್ಕಮಗಳೂರಿನಲ್ಲಿ (Chikkamagaluru) ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಪೊಲೀಸರನ್ನು ಯಕ್ಷಗಾನ ತಡೆಯುವುದಕ್ಕೆ ನಿಯೋಜನೆ ಮಾಡುವುದು ಬೇಡ. ಸಿ.ಟಿ ರವಿ (C.T Ravi) ಅವರನ್ನು ಪೊಲೀಸರ ಮೂಲಕ ಊರೆಲ್ಲಾ ತಿರುಗಿಸಿ ಏನೋ ಸಾಧನೆ ಮಾಡಿದ್ದೇವೆ ಎಂಬ ಭ್ರಮೆ ಬೇಡ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ವಿರೋಧ ಪಕ್ಷದಲ್ಲಿ ಆಂತರಿಕ ಕಚ್ಚಾಟ ಇದ್ರೆ ಪಕ್ಷದ ಮೇಲೆ ಮಾತ್ರ ಪರಿಣಾಮ ಬೀರುತ್ತೆ. ಆಡಳಿತ ಪಕ್ಷದಲ್ಲಿ ಆಂತರಿಕ ಕಚ್ಚಾಟ ಇರಬಾರದು. ಆಡಳಿತ ಪಕ್ಷದಲ್ಲಿ ಆಂತರಿಕ ಕಚ್ಚಾಟ ಜೋರಾದ್ರೆ ಜನರಿಗೆ ತೊಂದರೆ ಆಗುತ್ತದೆ ಎಂದು ಎಚ್ಚರಿಸಿದ್ದಾರೆ.

    ಕಾಂಗ್ರೆಸ್‍ನಲ್ಲಿ (Congress) ಒಂದು ಕಡೆ ಟಗರು ಮತ್ತೊಂದು ಕಡೆ ಬಂಡೆ ಗುದ್ದಾಡ್ತಾ ಇದ್ರೆ ಜನರಿಗೆ ತೊಂದರೆ ಆಗುತ್ತೆ. ಬಿಜೆಪಿ ಪಕ್ಷದಲ್ಲಿನ ಆಂತರಿಕ ಕಲಹದ ಬಗ್ಗೆ ಇಂದು ಅಥವಾ ನಾಳೆ ಎಲ್ಲವೂ ಕೂಡ ಸರಿ ಹೋಗಲಿದೆ ಎಂದಿದ್ದಾರೆ.

  • ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವುದು ಖಚಿತ – ಅಸಲಿ ವೀಡಿಯೋ CID ವಶಕ್ಕೆ

    ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವುದು ಖಚಿತ – ಅಸಲಿ ವೀಡಿಯೋ CID ವಶಕ್ಕೆ

    ಬೆಂಗಳೂರು: ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಎಂಎಲ್‌ಸಿ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವುದು ಖಚಿತ ಎಂದು ಸಿಐಡಿ ಮೂಲಗಳು ತಿಳಿಸಿವೆ. ಅಸಲಿ ವೀಡಿಯೋ ಇದೀಗ ಸಿಐಡಿಗೆ ಲಭ್ಯವಾಗಿದೆ.

    ಸಿ.ಟಿ.ರವಿ ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿತ್ತು. ಆದರೆ, ಅದಕ್ಕೆ ಸಿ.ಟಿ.ರವಿ ನಿರಾಕರಿಸಿದ್ದರು. ಕೊನೆಗೆ ಡಿಪಿಎಆರ್‌ನಿಂದ ಅಸಲಿ ವೀಡಿಯೋವನ್ನು ಸಿಐಡಿ ವಶಕ್ಕೆ ಪಡೆದಿತ್ತು.

    ಬೆಳಗಾವಿ ಅಧಿವೇಶನದ ವೇಳೆ ಮೇಲ್ಮನೆಯಲ್ಲಿ ನಡೆದಿದ್ದ ಘಟನಾವಳಿಗಳ ಕುರಿತು ವೀಡಿಯೋ-ಆಡಿಯೋ ದಾಖಲೆ ನೀಡುವಂತೆ ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆಗೆ (ಡಿಎಪಿಆರ್) ಸಿಐಡಿ ಮನವಿ ಮಾಡಿತ್ತು.

    ಸದನದಲ್ಲಿ ನಿಂದನೆ ಕೃತ್ಯ ನಡೆದ ವೇಳೆ ಚಿತ್ರೀಕರಿಸಿದ್ದ 4 ಗಂಟೆ ವೀಡಿಯೋವನ್ನು ಸಿಐಡಿಗೆ ಸಲ್ಲಿಸಲಾಗಿತ್ತು.

  • ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್‌, ಸಹೋದರ ಶೀಘ್ರ ಗುಣಮುಖರಾಗಲಿ: ಸಿ.ಟಿ.ರವಿ ಪ್ರಾರ್ಥನೆ

    ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್‌, ಸಹೋದರ ಶೀಘ್ರ ಗುಣಮುಖರಾಗಲಿ: ಸಿ.ಟಿ.ರವಿ ಪ್ರಾರ್ಥನೆ

    ಬೆಂಗಳೂರು: ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಅವರು ಶೀಘ್ರ ಗುಣಮುಖರಾಗಿ ಎಂದು ಎಂಎಲ್‌ಸಿ ಸಿ.ಟಿ.ರವಿ (C.T.Ravi) ಪ್ರಾರ್ಥಿಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಅವರು, ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ. ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರಾದ ಸಚಿವೆ

    ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಸಂಭವಿಸಿದ ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ ಹಾಗೂ ಸಹೋದರ ಚನ್ನರಾಜ ಹಟ್ಟಿಹೊಳಿ ಗಾಯಗೊಂಡಿದ್ದಾರೆ. ಇಬ್ಬರಿಗೂ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಈಚೆಗೆ ನಡೆದ ವಿಧಾನಮಂಡಲ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮತ್ತು ಎಂಎಲ್‌ಸಿ ಸಿ.ಟಿ.ರವಿ ನಡುವೆ ರಾಜಕೀಯ ಘರ್ಷಣೆಯಾಗಿತ್ತು. ಸದನದಲ್ಲೇ ಸಚಿವೆಯನ್ನು ಅಸಾಂವಿಧಾನಿಕ ಪದ ಬಳಸಿ ನಿಂದಿಸಿದ ಆರೋಪ ಸಿ.ಟಿ.ರವಿ ಅವರ ಮೇಲಿತ್ತು. ಇದು ಎರಡೂ ಪಕ್ಷಗಳ ನಡುವೆ ತಿಕ್ಕಾಟಕ್ಕೆ ಕಾರಣವಾಗಿತ್ತು. ತನ್ನ ಮೇಲೆ ಅವಾಚ್ಯ ಪದ ಬಳಕೆ ಮಾಡಲಾಗಿದೆ ಎಂದು ಸಚಿವೆ ಕಣ್ಣೀರಿಟ್ಟಿದ್ದರು. ಇದನ್ನೂ ಓದಿ: ಕಾರು ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಬೆನ್ನುಮೂಳೆ ಮುರಿತ – ಸಚಿವೆ ಆರೋಗ್ಯದ ಬಗ್ಗೆ ವೈದ್ಯರು ಹೇಳೋದೇನು?

    ಘಟನೆ ನಡೆದ ದಿನ ಪೊಲೀಸರು ಸಿ.ಟಿ.ರವಿ ಅವರನ್ನು ಬಂಧಿಸಿದ್ದರು. ಆ ದಿನ ರಾತ್ರಿ ಹಲವು ನಾಟಕೀಯ ಬೆಳವಣಿಗೆ ನಡೆದವು. ಮಾರನೇ ದಿನ ಕೋರ್ಟ್‌ನಲ್ಲಿ ಬಿಜೆಪಿ ನಾಯಕನಿಗೆ ಜಾಮೀನು ಸಿಕ್ಕಿತು. ಈ ಎಲ್ಲಾ ಬೆಳವಣಿಗೆಗಳ ಬಳಿಕ ಸಂದರ್ಶನವೊಂದರಲ್ಲಿ ಸಿ.ಟಿ.ರವಿ, ‘ಅಕ್ಕ ನಾನು ಹೃದಯದಿಂದ ಕೆಟ್ಟವನಲ್ಲ’ ಎಂದು ತಿಳಿಸಿದ್ದರು.

  • ಯಾರಾದ್ರೂ ಸಿಎಂ ಮನೆಗೆ ಬಂದೂಕು ತಂದು ಶರಣಾಗ್ತಾರಾ? ಕಾಮನ್ ಸೆನ್ಸ್ ಇರಬೇಕು: ಸಿ.ಟಿ ರವಿ ವಿರುದ್ಧ ಡಿಕೆಶಿ ಕಿಡಿ

    ಯಾರಾದ್ರೂ ಸಿಎಂ ಮನೆಗೆ ಬಂದೂಕು ತಂದು ಶರಣಾಗ್ತಾರಾ? ಕಾಮನ್ ಸೆನ್ಸ್ ಇರಬೇಕು: ಸಿ.ಟಿ ರವಿ ವಿರುದ್ಧ ಡಿಕೆಶಿ ಕಿಡಿ

    – ಸಿ.ಟಿ ರವಿ ದೊಡ್ಡ ಡ್ರಾಮಾ ಮಾಸ್ಟರ್

    ಚಿಕ್ಕಮಗಳೂರು: ಸಿ.ಟಿ ರವಿ (C.T Ravi) ಅವರನ್ನ ನ್ಯಾಷನಲ್ ಲೀಡರ್ ಎಂದು ತಿಳಿದುಕೊಂಡಿದ್ದೆ. ಆದರೆ ಅವರು ಸಿ.ಟಿ.ರವಿ ದೊಡ್ಡ ಡ್ರಾಮಾ ಮಾಸ್ಟರ್ ಎಂದು ಡಿಸಿಎಂ ಡಿ.ಕೆ ಶಿವಕುಮಾರ್  (D.K Shivakumar) ಹೇಳಿದ್ದಾರೆ.

    ಶೃಂಗೇರಿಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಸಿ.ಟಿ ರವಿ ಅವರಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ ಎಂಬ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದರು. ಅವರ ಮಾತು-ವಿಚಾರ ನೋಡಿದ್ರೆ ಈ ಮಟ್ಟಕ್ಕೆ ಇಳಿಯುತ್ತಾರೆ ಎಂದು ಭಾವಿಸಿರಲಿಲ್ಲ. ಬೇರೆ ಯಾರು ಒಪೆÇ್ಪೀದು ಬೇಡ, ಆತ್ಮಸಾಕ್ಷಿ ಒಪ್ಪಿದ್ರೆ ಸಾಕು. ಹಾಗೆ ಮಾತಾಡಬೇಕು ಎಂದಿದ್ದಾರೆ.

    100 ಜನ ಬಿಜೆಪಿ ನಾಯಕರು ಹಾಗೆ ಮಾತನಾಡಬಾರದಿತ್ತು ಎಂದು ಹೇಳಿದ್ದಾರೆ. ಕ್ಷಮೆ ಕೇಳಿದ್ರೆ ಮುಗಿದುಹೋಯ್ತು. ಸುಳ್ಳಿಗೆ ಸುಳ್ಳು ಹೇಳಿಕೊಂಡು ಹೋದ್ರೆ ಕೊನೆ ಇಲ್ಲ. ಅವರ ಹತ್ತಿರ ತನಿಖಾ ತಂಡ ಇದೆ, ತನಿಖೆ ಮಾಡಿಸಿಕೊಳ್ಳಲಿ ಎಂದಿದ್ದಾರೆ.

    ಸಿ.ಟಿ.ರವಿ ಬಂದೂಕಿನ ವಿಷಯ ಮಾತನಾಡಿದ್ದಾರೆ. ಯಾರಾದ್ರೂ ಸಿಎಂ ಮನೆಗೆ ಬಂದೂಕು ತಂದು ಶರಣಾಗ್ತಾರಾ? ಬೇಸಿಕ್ ಕಾಮನ್ ಸೆನ್ಸ್ ಇರಬೇಕು, ಪೆÇಲೀಸರು ಏನು ಮಾಡಬೇಕು ಅದನ್ನು ಮಾಡುತ್ತಾರೆ. ಗೌಪ್ಯ ಯಾವ ರೀತಿ ಕಾಪಾಡಬೇಕು. ಅವರ ಕೆಲಸ ಅವರು ಮಾಡ್ತಾರೆ. ನಾವು ಹಸ್ತಕ್ಷೇಪ ಮಾಡಲ್ಲ. ನಕ್ಸಲರನ್ನ ಶರಣಾಗತಿ ಮಾಡ್ಸಿದ್ದಾರೆ, ಅದಕ್ಕೆ ಖುಷಿ ಪಡಬೇಕು. ಮೊಸರಲ್ಲಿ ಕಲ್ಲು ಹುಡುಕೋದೇ ಆಯ್ತು ಅವರದ್ದು ಎಂದು ಕಿಡಿಕಾರಿದ್ದಾರೆ.

  • ನಕ್ಸಲರು ಚೀನಾ, ಪಾಕ್‌ನಿಂದ ಸಹಾಯ ಪಡೆದಿದ್ದಾರೆ: ಸಿ.ಟಿ ರವಿ ಗಂಭೀರ ಆರೋಪ

    ನಕ್ಸಲರು ಚೀನಾ, ಪಾಕ್‌ನಿಂದ ಸಹಾಯ ಪಡೆದಿದ್ದಾರೆ: ಸಿ.ಟಿ ರವಿ ಗಂಭೀರ ಆರೋಪ

    – ನಕ್ಸಲರಿಗೆ ಬ್ಯಾಲೆಟ್‌ಗಿಂತ ಬುಲೆಟ್ ಮೇಲೆ ನಂಬಿಕೆ ಜಾಸ್ತಿ

    ಬೆಂಗಳೂರು: ನಕ್ಸಲರು (Naxal) ಚೀನಾ (China), ಪಾಕಿಸ್ತಾನದ (Pakistan) ಐಎಸ್ಐ ಸಹಕಾರ ಪಡೆದಿದ್ದಾರೆ ಎಂದು ಎಂಎಲ್‌ಸಿ ಸಿ.ಟಿ ರವಿ (C.T. Ravi) ಗಂಭೀರ ಆರೋಪ ಮಾಡಿದ್ದಾರೆ.

    ನಗರದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ನಕ್ಸಲರು ಮೋಸ, ವಂಚನೆ ಮಾಡಲು ಬರುತ್ತಿದ್ದಾರೋ ಎಂಬುದು ಗೊತ್ತಾಗಬೇಕು. ಇದರ ಹಿಂದೆ ಯಾರು ಇದ್ದಾರೆ ಎಂಬುದು ಬಹಿರಂಗಪಡಿಸಬೇಕು. ಅವರ ಸಿದ್ಧಾಂತ ತಪ್ಪು ಎಂದು ಮನವರಿಕೆಯಾಗಿದ್ದರೆ ಸ್ವಾಗತಿಸುತ್ತೇನೆ. ಅವರನ್ನು ಸಂಪೂರ್ಣ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

    ನಕ್ಸಲ್ ಸಿದ್ಧಾಂತ ಪ್ರಜಾಪ್ರಭುತ್ವಕ್ಕೆ, ರಾಷ್ಟ್ರ, ಸಂವಿಧಾನಕ್ಕೆ ವಿರೋಧಿ ಸಿದ್ಧಾಂತವಾಗಿದೆ. ಅವರಿಗೆ ಬ್ಯಾಲೆಟ್ ಮೇಲೆ ನಂಬಿಕೆ ಇಲ್ಲ, ಬುಲೆಟ್ ಮೇಲೆ ನಂಬಿಕೆ ಜಾಸ್ತಿ. ಈ ಶರಣಾಗತಿ ಯಾವ ಕಾರಣಕ್ಕೆ? ಸಂದರ್ಭದ ದುರುಪಯೋಗ ಆಗ್ತಿದೆಯಾ? ಈ ನಕ್ಸಲರ ಕುರಿತು ಪೂರ್ಣ ತನಿಖೆ ನಡೆಯಬೇಕು. ನಿಜವಾಗಿ ಶರಣಾಗಿದ್ರೆ ಸಮಸ್ಯೆ ಇಲ್ಲ. ಆದರೆ ಸಂದರ್ಭದ ದುರುಪಯೋಗ ಆಗುವುದು ಬೇಡ ಎಂದು ಎಚ್ಚರಿಸಿದ್ದಾರೆ.

    ನಕ್ಸಲರು ರಾಷ್ಟ್ರ ಹಿತಕ್ಕಾಗಿ, ಸಂವಿಧಾನ, ಪ್ರಜಾಪ್ರಭುತ್ವ ರಕ್ಷಣೆಗೆ ಕೆಲಸ ಮಾಡಿದವರಲ್ಲ. ಇವರ ವಿರುದ್ಧ ಸಂಪೂರ್ಣವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

  • ಸಿ.ಟಿ ರವಿ ಕೇಸ್ ಸಿಐಡಿ ತನಿಖಾ ವರದಿ ಬಂದ ಬಳಿಕ ಕ್ರಮ: ಸಿದ್ದರಾಮಯ್ಯ

    ಸಿ.ಟಿ ರವಿ ಕೇಸ್ ಸಿಐಡಿ ತನಿಖಾ ವರದಿ ಬಂದ ಬಳಿಕ ಕ್ರಮ: ಸಿದ್ದರಾಮಯ್ಯ

    ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕ ಸಿ.ಟಿ ರವಿ ಅವಹೇಳನಕಾರಿ ಪದ ಬಳಕೆ ಆರೋಪದ ಕೇಸ್ ಸಿಓಡಿಗೆ ನೀಡಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

    ವಿಧಾನಸೌಧದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ರಾಜ್ಯಪಾಲರಿಗೆ ಸಿಟಿ ರವಿ ದೂರು ಕೊಟ್ಟಿರೋ ವಿಚಾರಚಾಗಿ ಪ್ರತಿಕ್ರಿಯಿಸಿದರು. ಸಿ.ಟಿ ರವಿ ರಾಜ್ಯಪಾಲರಿಗೆ ದೂರು ಕೊಡಲಿ. ಆ ಕೇಸನ್ನು CODಗೆ ಕೊಟ್ಟಿದ್ದೇವೆ. ಸಿ.ಟಿ ರವಿ ಅವಾಚ್ಯ ಪದ ಬಳಕೆ ಮಾಡಿದ್ದಾರಾ? ಇಲ್ಲವಾ? ಎಂಬುದು FSL ವರದಿ ಬರಲಿ, ಆಗ ಸತ್ಯಾಸತ್ಯತೆ ತಿಳಿಯಲಿದೆ ಎಂದಿದ್ದಾರೆ.

    ಮಹಿಳೆಗೆ ಅವಮಾನ ಆಗೋ ರೀತಿ ಮಾತಾಡಿದ್ದಾರೆ ಅನ್ನೋದು ಆರೋಪ. ಆರೋಪದ ಆಧಾರದಲ್ಲಿ ಸಿಟಿ ರವಿ ಮೇಲೆ FIR ದಾಖಲಾಗಿದೆ.‌ COD ತನಿಖೆಗೆ ಆದೇಶ ಮಾಡಲಾಗಿದೆ ವರದಿ ಬರಲಿ ನೋಡೋಣ ಎಂದಿದ್ದಾರೆ.

  • ನಾನು ಧರ್ಮಸ್ಥಳಕ್ಕೂ ಹೋಗ್ತೀನಿ, ಸವದತ್ತಿ ಯಲ್ಲಮ್ಮನ ಬಳಿಯೂ ಹೋಗ್ತೀನಿ: ಸಿ.ಟಿ ರವಿ

    ನಾನು ಧರ್ಮಸ್ಥಳಕ್ಕೂ ಹೋಗ್ತೀನಿ, ಸವದತ್ತಿ ಯಲ್ಲಮ್ಮನ ಬಳಿಯೂ ಹೋಗ್ತೀನಿ: ಸಿ.ಟಿ ರವಿ

    ಚಿಕ್ಕಮಗಳೂರು: ಬೆಳಗಾವಿಯಲ್ಲಿ ನನ್ನನ್ನು ಬಂಧಿಸಿದಾಗ ಸವದತ್ತಿ ಯಲ್ಲಮ್ಮನ ದೇವಸ್ಥಾನದ ಎದುರಿಗೆ ಕರೆದುಕೊಂಡು ಹೋದರು. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ನನ್ನನ್ನು ಕಾಪಾಡು ಎಂದು ಎಲ್ಲಮ್ಮನಿಗೆ ಹರಕೆ ಹೊತ್ತಿದ್ದೇನೆ. ಹರಕೆ ತೀರಿಸಲು ಅಲ್ಲಿಗೆ ಹೋಗುತ್ತೇನೆ. ಇನ್ನೂ ಧರ್ಮಸ್ಥಳಕ್ಕೂ ಹೋಗುತ್ತೇನೆ ಎಂದು ಎಂಎಲ್‌ಸಿ ಸಿ.ಟಿ ರವಿ (C.T Ravi) ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಸಿ.ಟಿ ರವಿ ಅವರು ನನಗೆ ಆಕ್ಷೇಪಾರ್ಹ ಶಬ್ದ ಬಳಸಿಲ್ಲ ಎನ್ನುವುದಾದರೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್‌ (akshmi Hebbalkar) ಹಾಕಿದ್ದ ಸವಾಲಿಗೆ ತಿರುಗೇಟು ನೀಡಿದ್ದಾರೆ. ಇನ್ನೂ ಇದೇ ವೇಳೆ, ಸದನದಲ್ಲಿ ನಡೆದ ಘಟನೆಯ ವೇಳೆ ಹಾಗೂ ಸಿಸಿಟಿವಿ ವಿಡಿಯೋ ಎಲ್ಲಾ ಇದೆ. ಹಲ್ಲೆ ಮಾಡಿದವರು ಯಾರು ಅಪರಿಚಿತರಲ್ಲ. ಎಲ್ಲರೂ ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ಅವರ ಜೊತೆಗೆ ಇದ್ದವರೇ ಹಲ್ಲೆ ಮಾಡಿದ್ದು. ನಾನು ಕಳೆದ 19ರಂದು ದೂರು ನೀಡಿದ್ದೇನೆ. ಈವರೆಗೂ ಎಫ್ಐಆರ್ ಆಗಿಲ್ಲ ಎಂದರೆ ಕಮಿಷನರ್ ಅಮಾನತ್ತಾಗಬೇಕು ಎಂದು ಕಿಡಿಕಾರಿದ್ದಾರೆ.

    ಸೆಕ್ಷನ್ 135 (A) ಶಾಸಕರಿಗೆ ವಿಶೇಷ ಸವಲತ್ತಿದೆ. ಆದರೆ, ಯಾವುದೇ ನೋಟಿಸ್ ಕೊಡದೆ ಬೆಳಗಾವಿ ಧಾರವಾಡ ಹುಬ್ಬಳ್ಳಿ ಸೇರಿದಂತೆ ಸುಮಾರು 400 ಕಿ.ಮೀ ನನ್ನನ್ನು ಸುಖಾ ಸುಮ್ಮನೆ ಸುತ್ತಿಸಿದ್ದಾರೆ. ಊಟ, ನೀರು, ಚಿಕಿತ್ಸೆ ಕೊಡದೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಖಾನಾಪುರ ಸಿಪಿಐ ಅಮಾನತು ವಿಚಾರವಾಗಿ, ಈ ಬಗ್ಗೆ ನನಗೆ ಸರಿಯಾದ ಮಾಹಿತಿ ಇಲ್ಲ. ಅಮಾನತು ಮಾಡಬೇಕಾಗಿರೋದು ಶಾರೀರಿಕ ಹಾಗೂ ಮಾನಸಿಕ ದೌರ್ಜನ್ಯ ಮಾಡಿದವರನ್ನು. ಪೊಲೀಸ್ ಠಾಣೆಯಲ್ಲಿ ಯಾವುದೇ ಬಿಜೆಪಿಯ ಸಭೆ ನಡೆದಿಲ್ಲ. ಘಟನೆಯ ಬಳಿಕ ಠಾಣೆಗೆ ಆಗಮಿಸಿದ್ದು ಬಿಜೆಪಿ (BJP) ನಾಯಕರು ಹಾಗೂ ಮುಖಂಡರು ಇದ್ದರು. ಅಲ್ಲಿ ಕಮಿಷನರ್ ಹಾಗೂ ವಿಪಕ್ಷ ನಾಯಕರು, ಶಾಸಕರು ಬಂದಿದ್ದರು. ಅದನ್ನ ಬಿಜೆಪಿ ಸಭೆ ಅನ್ನೋದು ಪೂರ್ವಗ್ರಹ ಪೀಡಿತ ಮನಸ್ಥಿತಿ ಅಷ್ಟೇ. ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಮಾಡಿರುವುದು ಸರಿಯಲ್ಲ. ನಿಜವಾಗಿಯೂ ಕ್ರಮ ಆಗಬೇಕಿರೋದು ಎಸ್‌ಪಿ ಹಾಗೂ ಕಮಿಷನರ್ ಮೇಲೆ ಎಂದಿದ್ದಾರೆ.

    ಬೆಳಗಾವಿ ಘಟನೆ ಜಾತಿ ಸಂಘರ್ಷಕ್ಕೆ ತಿರುಗಿದೆ ಎಂಬ ಪ್ರಶ್ನೆಗೆ, ನಾನು ಹಿಂದುತ್ವವಾದಿ ಹಿಂದುತ್ವಕ್ಕಾಗಿಯೇ ಬಂದವನು. ಜಾತಿ ಮಾಡಿಲ್ಲ, ಮುಂದೆಯೂ ಮಾಡಲ್ಲ ಎಂದಿದ್ದಾರೆ.

  • ಸಿ.ಟಿ.ರವಿ ಒಬ್ಬ ಡ್ರಗ್ ಅಡಿಕ್ಟ್, ದೇಶದ ರಾಜಕಾರಣಿಗಳಲ್ಲಿ ನಂ.1 ಸುಳ್ಳುಗಾರ: ಎಂ.ಲಕ್ಷ್ಮಣ್‌ ವಾಗ್ದಾಳಿ

    ಸಿ.ಟಿ.ರವಿ ಒಬ್ಬ ಡ್ರಗ್ ಅಡಿಕ್ಟ್, ದೇಶದ ರಾಜಕಾರಣಿಗಳಲ್ಲಿ ನಂ.1 ಸುಳ್ಳುಗಾರ: ಎಂ.ಲಕ್ಷ್ಮಣ್‌ ವಾಗ್ದಾಳಿ

    ಮಡಿಕೇರಿ: ಸಿ.ಟಿ.ರವಿ (C.T.Ravi) ಒಬ್ಬ ಡ್ರಗ್ ಅಡಿಕ್ಟ್, ಇಡೀ ದೇಶದ ರಾಜಕಾರಣಿಗಳಲ್ಲಿ ಎಲ್ಲೂ ನೋಡುವ ಹಾಗೆ ಇಲ್ಲ, ಟಾಪ್ 10 ನಲ್ಲಿ ನಂ.1 ಸುಳ್ಳುಗಾರ ಅವರೇ ಬರುತ್ತಾರೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ (M.Lakshman) ವಾಗ್ದಾಳಿ ನಡೆಸಿದ್ದಾರೆ.

    ಮಡಿಕೇರಿಯಲ್ಲಿ ಮಾತಾನಾಡಿದ ಅವರು, ಸಿಟಿ ರವಿ ಅವರು ಸದನದಲ್ಲಿ ಒಬ್ಬ ಹೆಣ್ಣುಮಗಳಿಗೆ ಆಕ್ಷೇಪಾರ್ಹ ಸಂಭಾಷಣೆ ಮಾಡಿ, ನಾನು ಹಾಗೆ ಅಂದಿಲ್ಲ ಎಂದು ಹೇಳಿಕೊಳ್ಳುತ್ತಾರೆ. ಅಲ್ಲದೇ, ಕಾನೂನಾತ್ಮಕವಾಗಿ ಅರೆಸ್ಟ್ ಮಾಡಿದ್ದರೆ, ಅರೆಸ್ಟ್ ಮಾಡಿರುವುದನ್ನೇ ವಿಚಿತ್ರವಾಗಿ ಬಿಂಬಿಸಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಹಾಗೂ ಸಿಟಿ ರವಿ ಅವರಿಗೆ ನಾಚಿಕೆಯಾಗಬೇಕು. ಅದರಲ್ಲೂ ಚಿಕ್ಕಮಗಳೂರಿನಲ್ಲಿ ಬಿಜೆಪಿ ಅವರು ಸಿಟಿ ರವಿ ಅವರನ್ನು ಸ್ವಾತಂತ್ರ‍್ಯ ಹೋರಾಟಗಾರ ಅನ್ನೋ ರೀತಿಯಲ್ಲಿ ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ಯಾವ ದೇಶಕ್ಕಾಗಿ ಹೋರಾಟ ಮಾಡಿದ್ದಾರೆ ಎಂದು ಬಿಂಬಿಸುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸಿ.ಟಿ.ರವಿ ಪ್ರಕರಣದಲ್ಲಿ ಸರ್ಕಾರದ ನಡೆ ಖಂಡನೀಯ – ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಬಿಜೆಪಿ ಮನವಿ

    ಸಭಾಪತಿ ಬಸವರಾಜ ಹೊರಟ್ಟಿ ಅವರು ಆರಂಭದಲ್ಲಿ ಚಂದ ಇದ್ರು. ಆಮೇಲೆ ಅವರನ್ನು ಬಿಜೆಪಿ ಅವರೇ ಅವರನ್ನು ಎದುರಿಸಿ ಅವರ ಕೈಯಲ್ಲಿ ಬೇರೆ ರೀತಿಯಲ್ಲಿ ಹೇಳಿಕೆ ಕೊಡಿಸುವ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಮಹಜರು ಮಾಡಲು ಅವಕಾಶ ಕೊಡುತ್ತಿಲ್ಲ. ಇದು ಯಾಕೆ ಹೀಗೆ ಮಾಡುತ್ತಿದ್ದಾರೆ. ನಮ್ಮ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸ್ ಹಾಕಿ ಅವರನ್ನು ಎದುರಿಸುವ ಕೆಲಸ ಮಾಡಿಸುತ್ತ ಇದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಈ ಹಿಂದೆ ಸಿಟಿ ರವಿ ಅವರು ಸಿದ್ದರಾಮುಲ್ಲಾ ಖಾನ್, ರಾಹುಲ್ ಗಾಂಧಿ ಅವರನ್ನು ಡ್ರಗ್ ಅಡಿಕ್ಟ್ ಎಂದು ಹೇಳಿಕೊಂಡು ಇರುತ್ತಿದ್ರು. ಅದ್ರೆ ಈಗ ಸಿಟಿ ರವಿ ಅವರೇ ಒಬ್ಬ ಡ್ರಗ್ ಅಡಿಕ್ಟ್‌ಗೆ ಒಳಗಾಗಿರಬೇಕು. ಇಂತಹ ಮನಸ್ಥಿತಿ ವ್ಯಕ್ತಿಯೇ ಡ್ರಗ್ ಅಡಿಕ್ಟ್ ಒಬ್ಬರಾಗಿದ್ದಾರೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಆ ರೀತಿ ಹೇಳಿಲ್ಲ ಅನ್ನೋದಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ – ಸಿ.ಟಿ ರವಿಗೆ ಲಕ್ಷ್ಮಿ ಹೆಬ್ಬಾಳ್ಕರ್‌ ಸವಾಲ್‌

    ಸದನದಲ್ಲಿ ಹೊರಟ್ಟಿ ಮೇಲೆ ಬಿಜೆಪಿ ನಾಯಕರು ಪ್ರಭಾವ ಬೀರಿ ಪ್ರಕರಣವನ್ನು ತಿರುಚುವ ಕೆಲಸಕ್ಕೆ ಮುಂದಾಗಿದ್ದಾರೆ. ಹೊರಟ್ಟಿ ಅವರು ಮುಗಿದ ಅಧ್ಯಾಯ ಅನ್ನುತ್ತೀರಿ. ಅದರೆ, ಕಾಂಗ್ರೆಸ್ ಈ ಪ್ರಕರಣದಲ್ಲಿ ಕಾನೂನು ರೀತಿಯಲ್ಲಿ ಹೋರಾಟ ಮಾಡಲು ಮುಂದಾಗಿದೆ ಎಂದು ತಿಳಿಸಿದ್ದಾರೆ.