Tag: 10 ರೂ. ನಾಣ್ಯ

  • ಉತ್ತರ ಕನ್ನಡದ ಬ್ಯಾಂಕ್‍ಗಳಲ್ಲಿ ಕೊಳೆಯುತ್ತಿವೆ ನಾಲ್ಕೂವರೆ ಕೋಟಿ ರೂ.ಗಳ ಹತ್ತು ರೂ. ನಾಣ್ಯ

    ಉತ್ತರ ಕನ್ನಡದ ಬ್ಯಾಂಕ್‍ಗಳಲ್ಲಿ ಕೊಳೆಯುತ್ತಿವೆ ನಾಲ್ಕೂವರೆ ಕೋಟಿ ರೂ.ಗಳ ಹತ್ತು ರೂ. ನಾಣ್ಯ

    ಕಾರವಾರ: ಹತ್ತು ರೂ. ನಾಣ್ಯದ ಕುರಿತ ಅಪ ಪ್ರಚಾರದಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಬ್ಯಾಂಕ್‍ಗಳಲ್ಲಿ ನಾಲ್ಕೂವರೆ ಕೋಟಿ ರೂ. ಮೊತ್ತದ ಹತ್ತು ರೂಪಾಯಿ ಮುಖಬೆಲೆಯ ನಾಣ್ಯಗಳು ಚಲಾವಣೆಯಾಗದೇ ಉಳಿದಿವೆ.

    ಹತ್ತು ರೂ. ನಾಣ್ಯವನ್ನು ಆರ್ ಬಿಐ ರದ್ದುಪಡಿಸಿದೆ ಎಂಬ ಸುಳ್ಳು ವದಂತಿಯಿಂದಾಗಿ ಗ್ರಾಹಕರು ಇವುಗಳನ್ನು ತೆಗೆದುಕೊಳ್ಳುತ್ತಿಲ್ಲ. ಈ ಸುಳ್ಳು ಸುದ್ದಿಯಿಂದಾಗಿ ಜಿಲ್ಲೆಯ ವಿವಿಧ ಬ್ಯಾಂಕ್ ಗಳಲ್ಲಿ ಕೂಡಲ್ಪಟ್ಟ 10 ರೂ. ನಾಣ್ಯ ಜಿಲ್ಲೆಯ ವಿವಿಧ ಕರೆನ್ಸಿ ಚೆಸ್ಟ್ ಗಳಲ್ಲಿ (ಹಣ ಪೂರೈಸುವ ಬ್ಯಾಂಕ್ ಗಳು)ನಾಲ್ಕೂವರೆ ಕೋಟಿ ರೂ. ಮೊತ್ತದ 10 ರೂ. ನಾಣ್ಯಗಳು ಸಂಗ್ರಹಗೊಂಡು ಕೊಳೆಯುತ್ತಿದೆ.

    ರಿಸವ್ ಬ್ಯಾಂಕ್ ಗೂ ಬೇಡವಾದ ಹತ್ತುರೂ ನಾಣ್ಯ!
    ಜಿಲ್ಲೆಯ ವಿವಿಧ ಬ್ಯಾಂಕ್‍ಗಳಲ್ಲಿ ಸಂಗ್ರಹವಾದ ನಾಲ್ಕೂವರೆ ಕೋಟಿ ರೂ. ಮೊತ್ತದ ಹಣವನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕೂಡ ಪಡೆಯಲು ಸಿದ್ಧವಿಲ್ಲ. ಇತ್ತ ಮಾರುಕಟ್ಟೆಗೆ ಬಿಡಲು ಜನರು ಈ ನಾಣ್ಯವನ್ನು ಸ್ವೀಕರಿಸುತ್ತಿಲ್ಲ. ಕಳೆದ ವರ್ಷ ನೋಟ್ ಬ್ಯಾನ್ ಸಂದರ್ಭದಲ್ಲಿ ಹತ್ತು ರೂ. ನಾಣ್ಯ ಸಹ ಬ್ಯಾನ್ ಆಗಿದೆ ಎಂಬ ಸುಳ್ಳು ವದಂತಿಯಿಂದಾಗಿ ಜಿಲ್ಲೆಯ ಗ್ರಾಹಕರು ಅನುಮಾನದಿಂದ ನೋಡುವಂತಾಗಿದೆ. ಸರ್ಕಾರ ನಾಣ್ಯವನ್ನು ರದ್ದುಪಡಿಸಿಲ್ಲ ಎಂದು ಅಧಿಕೃತ ಪ್ರಕಟಣೆ ನೀಡಿದರೂ, ಜನ ಮಾತ್ರ ನಂಬುತ್ತಿಲ್ಲ. ತಮ್ಮ ಬಳಿ ಇದ್ದ ನಾಣ್ಯವನ್ನು ಸಹ ಬ್ಯಾಂಕ್‍ಗೆ ಜಮಾವಣೆ ಮಾಡಿದ್ದಾರೆ.

    ಇದೆಲ್ಲದರ ಮಧ್ಯೆ ನಕಲಿ ನಾಣ್ಯಗಳು ಚಲಾವಣೆಯಾಗಿದೆ ಎಂಬ ಸುಳ್ಳು ಸುದ್ದಿ ಹರಿದಾಡಿ, ಹತ್ತು ರೂ. ನಾಣ್ಯ ಸಂಪೂರ್ಣವಾಗಿ ಅಘೋಷಿತ ರದ್ದಾಗಿದೆ. ಜಿಲ್ಲೆಯ ವಿವಿಧ ಕರೆನ್ಸಿ ಚೆಸ್ಟ್ ಗಳಲ್ಲಿ 4.5ಕೋಟಿ ರೂ. ಜಮಾವಣೆಯಾಗಿದೆ ಎನ್ನುತ್ತದೆ ಲೀಡ್ ಬ್ಯಾಂಕ್. ಆರ್ ಬಿಐ ಸಹ ಬ್ಯಾಂಕ್ ನಿಂದ ಈ ಕಾಯಿನ್‍ಗಳನ್ನು ತೆಗೆದಯಕೊಳ್ಳದೆ ಮರು ಚಲಾವಣೆ ಮಾಡಿ ಎಂದು ಹೇಳುತ್ತದೆ. ಆದರೆ ಗ್ರಾಹಕರು ಬ್ಯಾಂಕ್‍ನಿಂದ ಈ ನ್ಯಾಣ್ಯಗಳನ್ನು ಪಡೆಯುತ್ತಿಲ್ಲ. ಹೀಗಾಗಿ ಖಜಾನೆಯಲ್ಲಿಯೇ ಉಳಿಯುವಂತಾಗಿದೆ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪಿ.ಎಸ್.ಪಿಂಜಾರಾ ಬೇಸರ ವ್ಯಕ್ತಪಡಿಸಿದ್ದಾರೆ.

    10-20 ರೂ. ನೋಟಿಗೂ ಬಂತು ಬರ
    ಹತ್ತು ಮತ್ತು ಇಪ್ಪತ್ತು ರೂ. ನೋಟುಗಳಿಗೆ ಜಿಲ್ಲೆಯಲ್ಲಿ ಬೇಡಿಕೆ ಹೆಚ್ಚಿದೆ. ಹೋಟೆಲ್, ಅಂಗಡಿ ಮುಂಗಟ್ಟಿನಲ್ಲಿ ಗ್ರಾಹಕರಿಗೆ ಚಿಲ್ಲರೆ ನೀಡಲು ದೊಡ್ಡ ಕೊರತೆ ಎದುರಾಗಿದ್ದು, ವ್ಯಾಪಾರಸ್ಥರು ಪರದಾಡುವಂತಾಗಿದೆ.

    ಜಿಲ್ಲೆಯ ಬ್ಯಾಂಕ್‍ಗಳಿಗೂ ಈ ನೋಟುಗಳ ಸರಬರಾಜು ಇಳಿಮುಖವಾಗಿದ್ದು, ನಾಲ್ಕು ತಿಂಗಳಿಗೊಮ್ಮೆ ಆರ್ ಬಿಐನಿಂದ ಬ್ಯಾಂಕ್‍ಗಳಿಗೆ ಸರಬರಾಜು ಮಾಡಲಾಗುತ್ತಿದೆ. ಈ ವೇಳೆ ದೊಡ್ಡ ಮೊತ್ತದ ನೋಟುಗಳು ಅಧಿಕ ಸರಬರಾಜಾಗುತ್ತಿವೆ. ನಂತರ ಚಿಕ್ಕ ಮೊತ್ತದ ನೋಟುಗಳು ಸರಬರಾಜಾಗುತ್ತಿವೆ. ಕಳೆದ ದೀಪಾಳಿಯಲ್ಲಿ ಜಿಲ್ಲೆಗೆ 40 ಲಕ್ಷ ರೂ.ನಷ್ಟು ಮೊತ್ತದ ಸಣ್ಣ ಮುಖಬೆಲೆಯ ನೋಟುಗಳು ಪೂರೈಕೆಗೊಂಡಿದ್ದವು. ನಂತರ ಈ ನೋಟುಗಳ ಪೂರೈಕೆಯಾಗಿಲ್ಲ ಎಂಬುದು ಬ್ಯಾಂಕ್ ಮೂಲದ ಮಾಹಿತಿ.

  • 10 ರೂ. ನಾಣ್ಯ ಪಡೆಯದ್ದಕ್ಕೆ ಅಂಗಡಿ ಮಾಲೀಕನಿಗೆ ದಂಡ!

    10 ರೂ. ನಾಣ್ಯ ಪಡೆಯದ್ದಕ್ಕೆ ಅಂಗಡಿ ಮಾಲೀಕನಿಗೆ ದಂಡ!

    ಭೋಪಾಲ್: ಮಧ್ಯಪ್ರದೇಶದ ಮೊರೆನಾ ಜಿಲ್ಲಾ ನ್ಯಾಯಾಲಯವು 10 ರೂಪಾಯಿ ನಾಣ್ಯ ಸ್ವೀಕರಿಸದ್ದಕ್ಕೆ ಅಂಗಡಿ ಮಾಲೀಕನಿಗೆ 200 ರೂ. ದಂಡ ವಿಧಿಸಿದೆ.

    10 ರೂ. ನಾಣ್ಯ ಸ್ವೀಕರಿಸದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲಾದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಪಿ. ಚಿದಲ್ ರವರು ಮಂಗಳವಾರ ನಾಣ್ಯವನ್ನು ಸ್ವೀಕರಿಸದ್ದಕ್ಕೆ 200 ರೂ. ದಂಡ ವಿಧಿಸಿದ್ದಾರೆ. ಅಷ್ಟೇ ಅಲ್ಲದೇ ನಾಣ್ಯ ನಿಷೇಧವಾಗಿದೆ ಎಂದು ಸುಳ್ಳು ಹೇಳಿದ್ದಕ್ಕೆ ಮಂಗಳವಾರದ ಕಲಾಪ ಮುಗಿಯುವವರೆಗೂ ಕೋರ್ಟ್ ನಲ್ಲೇ ಇರಬೇಕೆಂಬ ಶಿಕ್ಷೆಯನ್ನು ವಿಧಿಸಿದ್ದಾರೆ.

    ಏನಿದು ಪ್ರಕರಣ?
    2017ರ ಅಕ್ಟೋಬರ್ 17ರಂದು ಗ್ರಾಹಕ ಆಕಾಶ್ ಪರಾಸ ಎಂಪೋರಿಯಂ ನಲ್ಲಿ 10 ರೂ. ಮೌಲ್ಯದ ಎರಡು ಕರವಸ್ತ್ರಗಳನ್ನು ಖರೀದಿಸಿದ್ದಾರೆ. ಈ ವೇಳೆ ಅಂಗಡಿ ಮಾಲೀಕನಿಗೆ 10 ರೂ. ಮೌಲ್ಯದ ಎರಡು ನಾಣ್ಯಗಳನ್ನು ನೀಡಿದ್ದರು. ಆದರೆ ಅಂಗಡಿ ಮಾಲೀಕ ಆಕಾಶ್ 10. ರೂ ನಾಣ್ಯಗಳನ್ನು ಸ್ವೀಕರಿಸಲು ನಿರಾಕರಿಸಿದ್ದು ಅಲ್ಲದೇ ಅವುಗಳು ಚಲಾವಣೆಯಲಿಲ್ಲ ಎಂದು ಹೇಳಿದ್ದ.

    10 ರೂ. ನಾಣ್ಯ ಚಲಾವಣೆಯಲ್ಲಿದೆ ಎಂದು ಸರ್ಕಾರವೇ ತಿಳಿಸಿದ್ದು, ನಾಣ್ಯವನ್ನು ಪಡೆಯಲು ನಿರಾಕರಿಸಿದ ಅಂಗಡಿ ಮಾಲೀಕನ ವಿರುದ್ಧ ಆಕಾಶ್ ಜುವಾರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಐಪಿಸಿ ಸೆಕ್ಷನ್ 188ರ(ಸರ್ಕಾರದ ಆದೇಶದ ಉಲ್ಲಂಘನೆ) ಅಡಿ ಗ್ರಾಹಕರೊಂದಿಗೆ ಅನುಚಿತ ವರ್ತನೆ ತೋರಿದ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿದ್ದರು.

    ಆರ್ ಬಿಐ ಆದೇಶದಲ್ಲಿ ಏನಿದೆ?
    10 ರೂಪಾಯಿ ಕಾಯಿನ್ ಬ್ಯಾನ್ ಆಗಿಲ್ಲ, ಸ್ಚೀಕರಿಸಬಹುದು ಅಂತ ಆರ್ ಬಿಐ 2016 ನವೆಂಬರ್ 20ರಂದೇ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟವಾಗಿ ತಿಳಿಸಿದೆ. ಚಾಲ್ತಿಯಲ್ಲಿರುವ ನಾಣ್ಯ ಅಥವಾ ನೋಟುಗಳನ್ನು ನಿರಾಕರಿಸುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಒಂದು ವೇಳೆ ಚಾಲ್ತಿಯಲ್ಲಿರುವ ನಾಣ್ಯ ಅಥವಾ ನೋಟುಗಳನ್ನು ಸ್ವೀಕರಿಸಲು ನಿರಾಕರಿಸಿದರೆ ಅಂತವರ ವಿರುದ್ಧ ದೂರು ಸಲ್ಲಿಸಬಹುದಾಗಿದೆ.

  • 10 ರೂಪಾಯಿ ನಾಣ್ಯ ತೆಗೆದುಕೊಳ್ಳಲು ನಿರಾಕರಿಸಿದ ಅಂಗಡಿ ಮಾಲೀಕನ ವಿರುದ್ಧ ಕೇಸ್

    10 ರೂಪಾಯಿ ನಾಣ್ಯ ತೆಗೆದುಕೊಳ್ಳಲು ನಿರಾಕರಿಸಿದ ಅಂಗಡಿ ಮಾಲೀಕನ ವಿರುದ್ಧ ಕೇಸ್

    ಲಕ್ನೋ: 10 ರೂಪಾಯಿ ನಾಣ್ಯಗಳನ್ನು ತೆಗೆದುಕೊಳ್ಳಲು ನಿರಾಕರಿಸಿದ ಅಂಗಡಿ ಮಾಲೀಕನ ವಿರುದ್ಧ ದೂರು ದಾಖಲಾಗಿರುವ ಘಟನೆ ಮಧ್ಯಪ್ರದೇಶದ ಮೊರೇನಾ ಜಿಲ್ಲೆಯ ಜೌರಾ ನಗರದಲ್ಲಿ ನಡೆದಿದೆ.

    ಗುರುವಾರ ಸಂಜೆ ಜೌರಾ ಪಟ್ಟಣದಲ್ಲಿರುವ ಅಂಗಡಿಗೆ ಒಬ್ಬ ಗ್ರಾಹಕ ಹ್ಯಾಂಡ್ ಕರ್ಚಿಫ್ ತೆಗೆದುಕೊಳ್ಳಲು ಹೋಗಿದ್ದರು. ಹ್ಯಾಂಡ್ ಕರ್ಚಿಫ್ ಖರೀದಿಸಿ ಎರಡು 10 ರೂ. ನಾಣ್ಯಗಳನ್ನು ಅಂಗಡಿ ಮಾಲೀಕನಿಗೆ ನೀಡಿದ್ದರು. ಆದರೆ ಮಾಲೀಕ ನಾಣ್ಯಗಳನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾಗಿ ಜೌರಾ ಪೊಲೀಸ್ ಠಾಣೆಯ ಮೇಲ್ವಿಚಾರಕ ಪ್ರವೀಣ್ ತ್ರಿಪಾಠಿ ತಿಳಿಸಿದ್ದಾರೆ.

    ಅಂಗಡಿ ಮಾಲೀಕನ ವಿರುದ್ಧ ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಕಾಯ್ದೆಯಡಿ ಆರೋಪಿಗೆ ಸುಮಾರು 6 ತಿಂಗಳವರೆಗೆ ಜೈಲು ಶಿಕ್ಷೆ ಆಗಬಹುದು.

    ಅಂಗಡಿಯವರು 10 ರೂ. ನಾಣ್ಯಗಳನ್ನು ಸ್ವೀಕರಿಸುತ್ತಿಲ್ಲ ಎಂಬ ಮಾಹಿತಿ ತಿಳಿದ ನಂತರ ಇಲ್ಲಿನ ಜಿಲ್ಲಾಧಿಕಾರಿ ಸುತ್ತೋಲೆ ಹೊರಡಿಸಿ, ಈ ರೀತಿ 10 ರೂ. ನಾಣ್ಯಗಳನ್ನು ಯಾರಾದರೂ ತೆಗೆದುಕೊಳ್ಳಲು ನಿರಾಕರಿಸಿದರೆ ಅದು ಭಾರತೀಯ ಕರೆನ್ಸಿಗೆ ಮಾಡುವ ಅಪಮಾನ ಎಂದು ಪರಿಗಣಿಸಲಾಗುತ್ತದೆ ಎಂದಿದ್ದರು ಅಂತ ತ್ರಿಪಾಠಿ ಹೇಳಿದ್ದಾರೆ.

  • ಉತ್ತರ ಕರ್ನಾಟಕದಲ್ಲಿ 10 ರೂ. ಕಾಯಿನ್ ತಗೊಳ್ಳೋಕ್ಕೆ ಹೆದರ್ತಾರೆ ಜನ!

    ಹುಬ್ಬಳ್ಳಿ: ನೋಟ್ ಬ್ಯಾನ್‍ನಿಂದ ಕಂಗೆಟ್ಟಿದ್ದ ಜನಕ್ಕೆ ಮತ್ತೊಂದು ಶಾಕ್ ಎದುರಾಗಿದೆ. 10 ರೂಪಾಯಿ ಕಾಯಿನ್ ಬ್ಯಾನ್ ಆಗಿದೆ ಎಂಬ ಸುಳ್ಳು ಸುದ್ದಿ ಹರಿದಾಡ್ತಿದ್ದು, ಇದ್ರಿಂದ ಉತ್ತರ ಕರ್ನಾಟಕದ ಜನ 10 ರೂ, ಕಾಯಿನ್ ಸ್ವೀಕರಿಸೋಕೆ ಹಿಂಜರಿಯುತ್ತಿದ್ದಾರೆ.

    ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ 10 ರೂಪಾಯಿ ನಾಣ್ಯವನ್ನ ಯಾರೂ ಸ್ವೀಕರಿಸ್ತಿಲ್ಲ. ಕೇಂದ್ರವಾಗಲೀ ಅಥವಾ ಆರ್‍ಬಿಐ ಆಗಲೀ ಕಾಯಿನ್ ಬ್ಯಾನ್ ಬಗ್ಗೆ ಆದೇಶ ಹೊರಡಿಸಿಲ್ಲ. ಆದಾಗ್ಯೂ, ಜನ 10 ರೂಪಾಯಿ ನಾಣ್ಯ ಸ್ವೀಕರಿಸಲು ಹಿಂದೇಟು ಹಾಕ್ತಿದ್ದಾರೆ.

    ಹುಬ್ಬಳ್ಳಿ ನಗರದ ಕೆಲ ಬ್ಯಾಂಕ್‍ಗಳಲ್ಲಿಯೂ 10 ರೂಪಾಯಿ ಕಾಯಿನ್‍ಗಳನ್ನ ತೆಗೆದುಕೊಳ್ಳುತಿಲ್ಲ ಅನ್ನೋ ಆರೋಪ ಕೇಳಿ ಬಂದಿದೆ. ಚಿಲ್ಲರೆ ವ್ಯಾಪಾರಿಗಳು, ಬಸ್ ಕಂಡಕ್ಟರ್‍ಗಳು ಈ ಸುಳ್ಳು ಸುದ್ದಿಯಿಂದ ಪರದಾಡ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಕೋಲಾರ ಮತ್ತು ಆನೇಕಲ್‍ನಲ್ಲೂ ಇಂಥದ್ದೇ ಸುದ್ದಿ ಹರಿದಾಡಿತ್ತು.