Tag: 108 ambulance staff

  • 108 ಅಂಬುಲೆನ್ಸ್‌ ಸಿಬ್ಬಂದಿ ಬಾಕಿ ವೇತನ ಪಾವತಿಗೆ ಕ್ರಮ – ಮುಷ್ಕರ ನಡೆಸದಂತೆ ಸಚಿವ ದಿನೇಶ್ ಗುಂಡೂರಾವ್ ಕರೆ

    108 ಅಂಬುಲೆನ್ಸ್‌ ಸಿಬ್ಬಂದಿ ಬಾಕಿ ವೇತನ ಪಾವತಿಗೆ ಕ್ರಮ – ಮುಷ್ಕರ ನಡೆಸದಂತೆ ಸಚಿವ ದಿನೇಶ್ ಗುಂಡೂರಾವ್ ಕರೆ

    ಬೆಂಗಳೂರು: 108 ಅಂಬುಲೆನ್ಸ್‌ (Ambulance) ಸಿಬ್ಬಂದಿ ಬಾಕಿ ವೇತನ ಪಾವತಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಮುಷ್ಕರ ನಡೆಸದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರು ಆರೋಗ್ಯ ವಾಹಿನಿ ಸಿಬ್ಬಂದಿಗೆ ಕರೆ ನೀಡಿದ್ದಾರೆ.

    ಸಚಿವರ ಸೂಚನೆಯ ಮೇರೆಗೆ 108 ಅಂಬುಲೆನ್ಸ್‌ ಸಿಬ್ಬಂದಿ (Ambulance Staff) ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಬಾಕಿ ವೇತನದ ಮೊದಲ ಕಂತಿನ 14 ಕೋಟಿ ರೂ. ಬಿಡುಗಡೆಗೊಳಿಸಿದ್ದಾರೆ. ಉಳಿದ ಕಂತುಗಳನ್ನು ಶೀಘ್ರದಲ್ಲಿ ಪಾವತಿಸುವ ಭರವಸೆ ನೀಡಿದರು. ಇದನ್ನೂ ಓದಿ: ಅಮರನಾಥ ಯಾತ್ರೆ: ಗುಡ್ಡ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರೋ 80 ಮಂದಿ ಕನ್ನಡಿಗರು

    ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಸೇರಿದಂತೆ 108 ಅಂಬುಲೆನ್ಸ್‌ ಸಿಬ್ಬಂದಿ ಜೊತೆ ಸೋಮವಾರ ಸಭೆ ನಡೆಸಲಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವೇತನ ಬಾಕಿ ಇರುವ ಸಮಸ್ಯೆಯನ್ನ ಪರಿಹರಿಸುವುದಾಗಿ ಹೇಳಿದ್ದಾರೆ. ಸಿಬ್ಬಂದಿ ಸಮಸ್ಯೆಗಳನ್ನ ಆಲಿಸಲಿರುವ ಸಚಿವರು, ಅವರ ಬೇಡಿಕೆಗಳ ಬಗ್ಗೆಯೂ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದರು.‌

    ಹಿಂದಿನ ಸರ್ಕಾರದ ಅವಧಿಯಲ್ಲಿ 108 ಅಂಬುಲೆನ್ಸ್‌ ಗುತ್ತಿಗೆಯಲ್ಲಿ ಆದ ಎಡವಟ್ಟುಗಳಿಂದ ವೇತನ ಪಾವತಿಯಲ್ಲಿ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ಈಗಾಗಲೇ ಸಿಎಂ ಜೊತೆ ಚರ್ಚಿಸಿದ್ದು, ಸಿಬ್ಬಂದಿಗೆ ವೇತನದ ಸಮಸ್ಯೆಯಾಗದಂತೆ ಕ್ರಮ ವಹಿಸುವ ಬಗ್ಗೆ ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದ ಆರೋಗ್ಯ ಸಚಿವ ಗುಂಡೂರಾವ್, ಬಾಕಿ ವೇತನ ಪಾವತಿಗೆ ಕ್ರಮ ಕೈಗೊಳ್ಳಲು ಸೂಚಿಸಿದ್ದರು. ಇದನ್ನೂ ಓದಿ: ಹೊರಗುತ್ತಿಗೆ ನೌಕರಿಯಲ್ಲೂ ಮೀಸಲಾತಿ ಜಾರಿಗೆ ಚಿಂತನೆ: ಸಿದ್ದರಾಮಯ್ಯ ಘೋಷಣೆ

    40 ಕೋಟಿ ವೇತನ ಪಾವತಿ ಬಾಕಿಯಿದ್ದು, ಇಂದು ಮೊದಲ ಕಂತು 14 ಕೋಟಿ ಬಿಡುಗಡೆಗೊಳಿಸಲಾಗಿದೆ. ಸೋಮವಾರ ಸಂಜೆಯೊಳಗೆ ಉಳಿದ ಬಾಕಿ ವೇತನ ಪಾವತಿಗೆ ಕ್ರಮ ವಹಿಸುವುದಾಗಿ ಆಯುಕ್ತ ರಂದೀಪ್ ಸಿಬ್ಬಂದಿಗೆ ಭರವಸೆ ನೀಡಿದ್ದಾರೆ.

    ಆರೋಗ್ಯ ಸಚಿವರು ಸಿಬ್ಬಂದಿ ಜೊತೆ ಸಭೆ ನಡೆಸುವ ಭರವಸೆ ಸಿಕ್ಕ ಹಿನ್ನೆಲೆಯಲ್ಲಿ ಮುಷ್ಕರ ನಡೆಸದಿರಲು 108 ಅಂಬುಲೆನ್ಸ್‌ ಸಿಬ್ಬಂದಿ ನಿರ್ಧರಿಸಿದ್ದಾರೆ. 15% ರಷ್ಟು ವೇತನ ಹೆಚ್ಚಳಕ್ಕೆ ಸಿಬ್ಬಂದಿ ಬೇಡಿಕೆಯಿಟ್ಟಿದ್ದು, ಈ ಬಗ್ಗೆಯೂ ಆರೋಗ್ಯ ಸಚಿವರು ಚರ್ಚಿಸಲಿದ್ದಾರೆ ಎಂದು ಆರೋಗ್ಯ ಆಯುಕ್ತ ರಂದೀಪ್ ಸಿಬ್ಬಂದಿಗೆ ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೃತನ ಹಣ ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಅಂಬುಲೆನ್ಸ್ ಸಿಬ್ಬಂದಿ

    ಮೃತನ ಹಣ ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಅಂಬುಲೆನ್ಸ್ ಸಿಬ್ಬಂದಿ

    – 13 ಸಾವಿರ ನಗದು, 3 ಮೊಬೈಲ್ ಪತ್ತೆಯಾಗಿತ್ತು

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದ ವ್ಯಕ್ತಿಯ ಬ್ಯಾಗಿನಲ್ಲಿ ಪತ್ತೆಯಾಗಿದ್ದ 13 ಸಾವಿರ ಹಣ ಹಾಗೂ 3 ಮೊಬೈಲ್‍ನನ್ನು 108 ಅಂಬುಲೆನ್ಸ್ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

    ಮಂಗಳವಾರ ಮೆಜೆಸ್ಟಿಕ್ ಬಳಿ ಓರ್ವ ವ್ಯಕ್ತಿ ಅನ್ಯಾರೋಗ್ಯದಿಂದ ಬಳಲುತ್ತಿದ್ದಾನೆ ತುರ್ತಾಗಿ ಬನ್ನಿ ಎಂದು 108ಗೆ ಕರೆ ಬಂದಿತ್ತು. ಹೀಗಾಗಿ ಸಿಬ್ಬಂದಿ ಪ್ರಶಾಂತ್ ಹಾಗೂ ಈರಣ್ಣ ಅಂಗಡಿ ಅವರು ಅಂಬುಲೆನ್ಸ್‌ನಲ್ಲಿ ಸ್ಥಳಕ್ಕೆ ತೆರೆಳಿದ್ದರು. ಆದರೆ ವಾಹನ ಸ್ಥಳಕ್ಕೆ ಬರುವಷ್ಟರಲ್ಲಿ ರೋಗಿ ಮೃತಪಟ್ಟಿದ್ದರು. ಸ್ಥಳಕ್ಕೆ ಬಂದ ಸಿಬ್ಬಂದಿ ಮೃತನ ಬಳಿಯಿದ್ದ ಬ್ಯಾಗ್ ತೆರೆದು ನೋಡಿದಾಗ, ಅದರಲ್ಲಿ 13 ಸಾವಿರ ಹಣ, 3 ಮೊಬೈಲ್ ಹಾಗೂ ಐಡಿ ಕಾರ್ಡ್ ಪತ್ತೆಯಾಗಿತ್ತು. ಇದನ್ನೂ ಓದಿ:1 ಲಕ್ಷ ರೂ. ಮೌಲ್ಯದ ಬಂಗಾರದ ಒಡವೆ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

    ಈ ಹಣವನ್ನು ಸಿಬ್ಬಂದಿ ದುರ್ಬಳಕೆ ಮಾಡಿಕೊಳ್ಳದೆ ಪ್ರಾಮಾಣಿಕರಾಗಿ ಮೃತನ ಬಳಿ ಪತ್ತೆಯಾಗಿದ್ದ ನಗದು ಹಾಗೂ ವಸ್ತುಗಳನ್ನು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದಾರೆ. ಇದನ್ನೂ ಓದಿ:6.50 ಲಕ್ಷ ಮೌಲ್ಯದ ಒಡವೆಯನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್

    ಹಣ ಕಂಡರೆ ಹೆಣಾನೂ ಬಾಯಿ ಬಿಡುತ್ತೆ ಎನ್ನುವ ಮಾತಿದೆ. ಹಣಕ್ಕಾಗಿ ಅದೇಷ್ಟೋ ಜನರನ್ನು ಕೊಲೆ ಮಾಡಿರುವ ಪ್ರಕರಣಗಳು ನಡೆಯುತ್ತಲೇ ಇರುತ್ತದೆ. ಹೀಗಿರುವಾಗ ತಮಗೆ ಸಿಕ್ಕ ಹಣವನ್ನು ತೆಗೆದುಕೊಳ್ಳದೆ ಪ್ರಶಾಂತ್ ಹಾಗೂ ಈರಣ್ಣ ಅವರು ಪ್ರಾಮಾಣಿಕತೆ ಮೆರೆದಿರುವುದು ಎಲ್ಲರ ಮನ ಗೆದ್ದಿದೆ. ಅಂಬುಲೆನ್ಸ್ ಸಿಬ್ಬಂದಿಯ ಕಾರ್ಯಕ್ಕೆ ಉಪ್ಪಾರಪೇಟೆ ಪೊಲೀಸರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.