Tag: 108 Ambulance

  • ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆಯಿಂದ ಕ್ರಮ: ಸುಧಾಕರ್

    ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆಯಿಂದ ಕ್ರಮ: ಸುಧಾಕರ್

    ಬೆಂಗಳೂರು: ತಾಂತ್ರಿಕ ಸಮಸ್ಯೆಯಿಂದ 108 ಆರೋಗ್ಯ ಕವಚ ಅಂಬುಲೆನ್ಸ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ತಾಂತ್ರಿಕ ಅಡಚಣೆಗಳನ್ನು ನಿವಾರಿಸಲು ಹಾಗೂ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆ ವತಿಯಿಂದ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯದಲ್ಲಿ ಅಂಬುಲೆನ್ಸ್ ಸಮಸ್ಯೆಯ ಬಗ್ಗೆ ಟ್ವೀಟ್ ಮೂಲಕ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ತಾಂತ್ರಿಕ ಸಮಸ್ಯೆಯಿಂದ 108 ಆರೋಗ್ಯ ಕವಚ ಅಂಬುಲೆನ್ಸ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ತಾಂತ್ರಿಕ ಅಡಚಣೆಗಳನ್ನು ನಿವಾರಿಸಲು ಹಾಗೂ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆ ವತಿಯಿಂದ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ: ರಾಜ್ಯದಲ್ಲಿ ಅಂಬುಲೆನ್ಸ್ ಸೇವೆ ವ್ಯತ್ಯಯ – ನಿನ್ನೆ ಸಂಜೆಯಿಂದ ಕರೆ ಸ್ವೀಕರಿಸದ 108

    ಸ್ವಯಂಚಾಲಿತ ಕಾಲ್ ಸೆಂಟರ್ ವ್ಯವಸ್ಥೆ ಮೂಲಕ ಕರೆಗಳ ವಿತರಣೆಗೆ ಪರ್ಯಾಯವಾಗಿ ಮ್ಯಾನುವಲ್ ಐಡಿಗಳನ್ನು ಸೃಷ್ಟಿಸಿ ಅಂಬುಲೆನ್ಸ್‌ಗಳನ್ನು ನಿಯೋಜಿಸಲಾಗುತ್ತಿದ್ದು, ಇದರೊಂದಿಗೆ 104 ಕಾಲ್ ಸೆಂಟರ್‌ನಲ್ಲಿ 108 ಅಂಬುಲೆನ್ಸ್ ಸೇವೆಗೆ ಓವರ್ ಫೋನ್‌ ಕಾಲ್ ಸೆಂಟರ್ ಸ್ಥಾಪಿಸಲು ಸಹ ಸೂಚನೆ ನೀಡಲಾಗಿದೆ. 108 ಹಾಗೂ 112 ಕಾಲ್ ಸೆಂಟರ್‌ಗಳಲ್ಲಿ ಅಧಿಕ ಕರೆ ಸ್ವೀಕರಿಸಲು ಅನುಕೂಲವಾಗುವಂತೆ ಪ್ರಸ್ತುತ ಇರುವ ಸಿಬ್ಬಂದಿಗಳ ಜೊತೆಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಅಂಬುಲೆನ್ಸ್ ಡ್ರೈವರ್‌ಗಳಿಗೆ ತಮ್ಮ ಮೊಬೈಲ್ ಮೂಲಕ ಆಸ್ಪತ್ರೆಗಳಿಂದ ನೇರವಾಗಿ ಕರೆಗಳನ್ನು ಸ್ವೀಕರಿಸಲು ಸಹ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಊಹಾಪೋಹಗಳಿಗೆ ಕಿವಿಗೊಡದಂತೆ SMK ನಿವಾಸದಿಂದ ಸಂದೇಶ

    ತಾಂತ್ರಿಕ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಲು ಸಮರೋಪಾದಿಯಲ್ಲಿ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಪರ್ಯಾಯ ವ್ಯವಸ್ಥೆಗಳ ಮೂಲಕ ಸೇವೆಯಲ್ಲಿ ಉಂಟಾಗಿರುವ ತಾತ್ಕಾಲಿಕ ವ್ಯತ್ಯಯವನ್ನು ಕನಿಷ್ಠ ಮಟ್ಟದಲ್ಲಿಡಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜನ ಸಾಮಾನ್ಯರ ಸಿಎಂ ಬೊಮ್ಮಾಯಿ: ಡಾ.ಕೆ ಸುಧಾಕರ್

    ಜನ ಸಾಮಾನ್ಯರ ಸಿಎಂ ಬೊಮ್ಮಾಯಿ: ಡಾ.ಕೆ ಸುಧಾಕರ್

    ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ 710 ಅಂಬುಲೆನ್ಸ್ ಇವೆ. ಇದರ ಜೊತೆ ಮತ್ತೆ 120 ಹೊಸದಾಗಿ ಸೇರ್ಪಡೆ ಮಾಡಲಾಗಿದೆ. ಆರೋಗ್ಯ ಸೇವೆಯಲ್ಲಿ ಇದೊಂದು ಮೈಲಿಗಲ್ಲು. ಈ ಸೇವೆಯನ್ನು ಮತ್ತಷ್ಟು ಸುಧಾರಣೆ ಮಾಡಲು ಸಿಎಂ ಮನಸ್ಸು ಮಾಡಿದ್ದಾರೆ ಅವರು ಜನ ಸಾಮಾನ್ಯರ ಸಿಎಂ ಎಂದು ಬಸವರಾಜ ಬೊಮ್ಮಾಯಿ ಅವರನ್ನು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹಾಡಿ ಹೊಗಳಿದ್ದಾರೆ.

    ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ 120 ನೂತನ 108 ಆರೋಗ್ಯ ಕವಚ ಅಂಬುಲೆನ್ಸ್ ಲೋಕಾರ್ಪಣೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ನೆರವೇರಿಸಿದರು. ಇದನ್ನೂ ಓದಿ: ಲಸಿಕಾಕರಣದಲ್ಲಿ ವಿದೇಶಗಳಿಂತ ಕರ್ನಾಟಕವೇ ಫಾಸ್ಟ್ ಅಂಡ್ ಬೆಸ್ಟ್

    ಬಳಿಕ ಮಾತನಾಡಿದ ಸುಧಾಕರ್, ರಾಜ್ಯಕ್ಕೆ ಹೊಸದಾಗಿ 120 ಅಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡ್ತಿದ್ದೇವೆ. ಈಗಾಗಲೇ 710 ಆಂಬ್ಯುಲೆನ್ಸ್ ಇವೆ. ಇದರ ಜೊತೆ ಮತ್ತೆ 120 ಹೊಸದಾಗಿ ಸೇರ್ಪಡೆ ಮಾಡಲಾಗಿದೆ. 120 ಅಂಬುಲೆನ್ಸ್ ಗಳು ಅಡ್ವಾನ್ಸ್ ಸಿಸ್ಟಮ್ ಇರೋ ಅಂಬುಲೆನ್ಸ್ ಗಳು. ಆರೋಗ್ಯ ಸೇವೆಯಲ್ಲಿ ಇದೊಂದು ಮೈಲಿಗಲ್ಲು. ಈ ಸೇವೆಯನ್ನು ಮತ್ತಷ್ಟು ಸುಧಾರಣೆ ಮಾಡಲು ಸಿಎಂ ಮನಸ್ಸು ಮಾಡಿದ್ದಾರೆ. ಹೊಸದಾಗಿ ಟೆಂಡರ್ ಚಾಲನೆ ಮಾಡಲಾಗಿದೆ. ಈ ಟೆಂಡರ್ ನಲ್ಲಿ ಆಸ್ಪತ್ರೆಗಳನ್ನು ಮ್ಯಾಪಿಂಗ್ ಮಾಡಲಾಗುತ್ತಿದೆ. ಸಾರ್ವಜನಿಕರಿಗೆ ಆರೋಗ್ಯ ಸೇವೆ ಮುಖ್ಯ. ಅದರೊಂದಿಗೆ ಈ ಅಂಬುಲೆನ್ಸ್ ಸೇವೆ ಕೂಡ ಬಹಳ ಪ್ರಮುಖವಾದ ಭಾಗವಾಗಿದೆ. ಹಾಗಾಗಿ ನಾವು ರಾಜ್ಯದ ಜನರ ಸೇವೆಗಾಗಿ ಇದೀಗ ಮತ್ತೆ ಮುಂದಾಗಿದ್ದೇವೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ಮುಂದಿನ ದಿನಗಳಲ್ಲಿ ರೋಗಿಯನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲು ಕಮಾಂಡ್ ಕೊಡುವ ಕೆಲಸ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ. ಈಗ 1 ಲಕ್ಷ ಜನಸಂಖ್ಯೆಗೆ ಒಂದು ಆಂಬ್ಯುಲೆನ್ಸ್ ಇದೆ. ಮುಂದೆ ಇದನ್ನು 40-50 ಸಾವಿರ ಜನರಿಗೆ ಒಂದು ಅಂಬುಲೆನ್ಸ್ ನೀಡುವ ಉದ್ದೇಶ ಇದೆ. ಮತ್ತೆ 410 ಅಂಬುಲೆನ್ಸ್ ಖರೀದಿ ಮಾಡುತ್ತೇವೆ. ಕೋವಿಡ್-19 ಲಸಿಕೆಯಲ್ಲೂ ನಾವು ಸಾಧನೆ ಮಾಡಿದ್ದೇವೆ. ಲಸಿಕೆ ನಿಡೋದ್ರಲ್ಲಿ ರಷ್ಯಾವನ್ನು ನಮ್ಮ ರಾಜ್ಯ ಮೀರಿಸಿದೆ. ನಿತ್ಯ 3.8 ಲಕ್ಷ ಲಸಿಕೆ ನೀಡುತ್ತಿದ್ದೇವೆ. ಶೀಘ್ರವೇ 5 ಕೋಟಿ ಲಸಿಕೆ ನಮ್ಮ ರಾಜ್ಯದಲ್ಲಿ ಆಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಲ್ಯಾಬ್ ಉಪಕರಣ ಖರೀದಿಯಲ್ಲಿ 34 ಕೋಟಿ ರೂ. ಕಿಕ್ ಬ್ಯಾಕ್- ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ

    ಕಾರ್ಯಕ್ರಮದಲ್ಲಿ ಸಚಿವರಾದ ಶ್ರೀರಾಮುಲು, ಮುನಿರತ್ನ, ಭೈರತಿ ಬಸವರಾಜ್, ಎಸ್.ಟಿ. ಸೋಮಶೇಖರ್, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

  • ಕೊರೊನಾಗೆ 108 ಅಂಬುಲೆನ್ಸ್ ಚಾಲಕ ಬಲಿ- ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

    ಕೊರೊನಾಗೆ 108 ಅಂಬುಲೆನ್ಸ್ ಚಾಲಕ ಬಲಿ- ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

    – ಸೂಕ್ತ ಸೌಲಭ್ಯ ಕಲ್ಪಿಸುವಂತೆ ಚಾಲಕರ ಮನವಿ

    ಬೆಂಗಳೂರು: ಮಹಾಮಾರಿ ಕೊರೊನಾಗೆ ವಾರಿಯರ್ಸ್‍ಗಳೂ ನಲುಗಿ ಹೋಗಿದ್ದು, ಇದೀಗ 108 ಅಂಬುಲೆನ್ಸ್ ಚಾಲಕ ಸಾವನ್ನಪ್ಪಿದ್ದಾರೆ. ಚಾಲಕನ ಸಾವಿಗೆ ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ.

    ಕೊರೊನಾ ಸಮಯದಲ್ಲಿ ವಾರಿಯರ್ ಆಗಿ ಕೆಲಸ ಮಾಡುತ್ತಿದ್ದ ಚಾಲಕ ಜಗದೀಶ್ ಇಂದು ಸಾವನ್ನಪ್ಪಿದ್ದಾರೆ. ಮೃತ ಜಗದೀಶ್ ಅಗಲಿಕೆಗೆ 108 ವಾಹನ ಚಾಲಕರು ಕಂಬನಿ ಮಿಡಿದಿದ್ದಾರೆ. ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಚಾಲಕ ಬಲಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸ್ತಿದ್ದ ಜಗದೀಶ್, ಸೋಂಕಿನಿಂದ ಮೃತಪಟ್ಟಿದ್ದಾರೆ.

    ಕೋವಿಡ್ ಸಮಯದಲ್ಲಿ ಚಾಲಕರಿಗೆ ಕೊಡಬೇಕಾದ ಮುನ್ನೆಚ್ಚರಿಕೆ ಸಲಕರಣೆಗಳನ್ನ ಕೊಟ್ಟಿಲ್ಲ. ಹೀಗಾಗಿ ಕೊರೊನಾ ಪಾಸಿಟಿವ್ ರೋಗಿಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡುವ ಸಮಯದಲ್ಲಿ ಸೋಂಕು ತಗುಲಿದೆ.ಬೆಂಗಳೂರಿನಲ್ಲಿ ಸಹ ಇದೇ ರೀತಿ ಹಲವು ಪ್ರಕರಣಗಳು ಬೆಳಕಿಗೆ ಬಂದಿದ್ದವು. ಈ ಕುರಿತು ಸರ್ಕಾರಕ್ಕೆ ಹಲವು ಬಾರಿ ಮನವಿ ಸಹ ಮಾಡಲಾಗಿತ್ತು, ಆದರೂ ಪ್ರಯೋಜನವಾಗಿಲ್ಲ. ಹೀಗಾಗಿ ರಾಜ್ಯದಲ್ಲಿ ಕೊರೊನಾ ವಾರಿಯರ್ಸ್ ಸಾವು ಸಂಭವಿಸುತ್ತಿವೆ.

    ಜೀವವನ್ನು ಪಣಕ್ಕಿಟ್ಟು ದುಡಿಯುವ ಚಾಲಕರ ಜೀವಕ್ಕೆ ಬೆಲೆ ಇಲ್ಲವೆ, ಆರೋಗ್ಯ ಸಚಿವರು ಈ ಕುರಿತು ಗಮನಹರಿಸಬೇಕು. ನಮ್ಮ ಪಾಡು, ತೀರ ದಯನೀಯ ಸ್ಥಿತಿ ತಲುಪಿದೆ. ಮಾಸ್ಕ್ ಇಲ್ಲ, ಕಿಟ್ ಇಲ್ಲ. ಹೀಗಾಗಿ ನಮ್ಮ ಜೀವಕ್ಕೆ ಗ್ಯಾರಂಟಿ ಇಲ್ಲದಂತಾಗಿದೆ. ಮೃತ ಜಗದೀಶ್ ಕುಟುಂಬಕ್ಕೆ ಪರಿಹಾರ ನೀಡಿ, ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳಬೇಕು. ಕೊರೊನಾ ಹೊಡೆತಕ್ಕೆ ಸಹಸ್ರಾರು ಕುಟುಂಬಗಳು ಬೀದಿ ಪಾಲಾಗುತ್ತಿವೆ ಎಂದು 108 ಅಂಬುಲೆನ್ಸ್ ರಾಜ್ಯ ಚಾಲಕರ ಸಂಘದ ಉಪಾಧ್ಯಕ್ಷ ಸೇರಿ 3 ಸಾವಿರ ಚಾಲಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

  • 108 ಅಂಬುಲೆನ್ಸ್‌ನಲ್ಲಿ ಒಂದೇ ದಿನ ಎರಡು ಹೆರಿಗೆ: ಗಂಡು ಮಕ್ಕಳಿಗೆ ಜನ್ಮ ನೀಡಿದ ತಾಯಂದಿರು

    108 ಅಂಬುಲೆನ್ಸ್‌ನಲ್ಲಿ ಒಂದೇ ದಿನ ಎರಡು ಹೆರಿಗೆ: ಗಂಡು ಮಕ್ಕಳಿಗೆ ಜನ್ಮ ನೀಡಿದ ತಾಯಂದಿರು

    ರಾಯಚೂರು: ಜಿಲ್ಲೆಯಲ್ಲಿ ಒಂದೇ ದಿನ ಎರಡು ಕಡೆ 108 ಆರೋಗ್ಯ ಕವಚ ವಾಹನದಲ್ಲಿ ಗರ್ಭಿಣಿಯರು ಮಗುವಿಗೆ ಜನ್ಮ ನೀಡಿದ್ದಾರೆ.

    ದೇವದುರ್ಗ ತಾಲೂಕಿನ ಕೊತ್ತದೊಡ್ಡಿಯ ಮಾನಸಮ್ಮ ಹಾಗೂ ಸಿರವಾರ ತಾಲೂಕಿನ ಮಾಡಗಿರಿಯ ಪದ್ದಮ್ಮ ಅವರಿಗೆ 108 ವಾಹನದಲ್ಲೇ ಹೆರಿಗೆಯಾಗಿದೆ. ವಿಶೇಷವೆಂದರೆ ಗರ್ಭಿಣಿಯರಿಬ್ಬರೂ ಸಹ ಗಂಡು ಮಗುವಿಗೆ ಜನ್ಮನೀಡಿದ್ದಾರೆ.

    ಇಬ್ಬರನ್ನೂ ಪ್ರತ್ಯೇಕವಾಗಿ 108ರಲ್ಲಿ ರಾಯಚೂರಿನ ರಿಮ್ಸ್‌ಗೆ ಕರೆತರುವಾಗ ಹೆರಿಗೆಯಾಗಿವೆ. 108 ಆರೋಗ್ಯ ಕವಚ ವಾಹನದ ಸಿಬ್ಬಂದಿ ಇಬ್ಬರಿಗೂ ಸುರಕ್ಷಿತ ಹೆರಿಗೆ ಮಾಡಿಸಿದ್ದಾರೆ. ಸದ್ಯ ತಾಯಂದಿರು ರಾಯಚೂರಿನ ರಿಮ್ಸ್‌ಗೆ ದಾಖಲಾಗಿದ್ದಾರೆ. ಶಿಶುಗಳು ಹಾಗೂ ಬಾಣಂತಿಯರು ಆರೋಗ್ಯದಿಂದಿದ್ದಾರೆ.

    108 ವಾಹನದಲ್ಲಿ ಹೆರಿಗೆಯಾಗುವುದು ಜಿಲ್ಲೆಯಲ್ಲಿ ಹೊಸದೇನಲ್ಲವಾದರೂ ಒಂದೇ ದಿನ ಎರಡು ಕಡೆಗಳಲ್ಲಿ ಹೆರಿಗೆಯಾಗಿರುವುದು ವಿಶೇಷವಾಗಿದೆ. ಹಾಳಾದ ರಸ್ತೆಗಳಿಂದಾಗಿ ಗರ್ಭಿಣಿಯರು ಆಸ್ಪತ್ರೆ ಮಾರ್ಗಮಧ್ಯೆ ಮಗುವಿಗೆ ಜನ್ಮ ನೀಡಿದ ಉದಾಹರಣೆಗಳು ಸಹ ಇದೆ. ಆದರೆ ಈ ಎರಡು ಪ್ರಕರಣಗಳಲ್ಲಿ ಗರ್ಭಿಣಿಯರು ಹೆರಿಗೆ ನೋವು ಕಾಣಿಸಿಕೊಂಡು ಸಹಜವಾಗಿ ಮಗುವಿಗೆ ಜನ್ಮ ನೀಡಿದ್ದಾರೆ.