Tag: 12th day programme

  • ಅನ್ನ ಸಂತರ್ಪಣೆ ವೇಳೆ ಪುನೀತ್ ನೆನೆದು ಕಣ್ಣೀರಿಟ್ಟ ಅಶ್ವಿನಿ

    ಅನ್ನ ಸಂತರ್ಪಣೆ ವೇಳೆ ಪುನೀತ್ ನೆನೆದು ಕಣ್ಣೀರಿಟ್ಟ ಅಶ್ವಿನಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಮಾಡುವ ವೇಳೆ  ಅಶ್ವಿನಿ ಗಳಗಳನೇ ಕಣ್ಣೀರಿಟ್ಟಿದ್ದಾರೆ.

    ದೊಡ್ಮನೆ ಹುಡುಗ ನಟ ಪುನೀತ್ ರಾಜ್‍ಕುಮಾರ್ ಅಗಲಿ ಇಂದಿಗೆ 12 ದಿನ ಕಳೆದಿದೆ. ಪುನೀತ್ ಸವಿ ನೆನಪಿನಲ್ಲಿ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಮಾನಿಗಳಿಗೆ ಅನ್ನಸಂತರ್ಪಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್, ಸಹೋದರ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್, ಅವರ ಪತ್ನಿ ಮಂಗಳ ಅಭಿಮಾನಿಗಳಿಗೆ ಊಟ ಬಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ಇದೇ ವೇಳೆ ಅಭಿಮಾನಿಗಳಿಗೆ ಊಟ ಬಡಿಸುತ್ತಿದ್ದ ಅಶ್ವಿನಿ, ಪತಿ ಪುನೀತ್ ರಾಜ್‍ಕುಮಾರ್ ಅವರನ್ನು ನೆನೆದು ಗಳಗಳನೇ ಕಣ್ಣೀರಿಟ್ಟಿದ್ದಾರೆ. ಕೊಂಚ ಸಮಯ ಊಟ ಬಡಿಸಿ ಅಶ್ವಿನಿ ಅವರು ನಂತರ ಭಾವುಕರಾಗಿ ಮನೆಗೆ ವಾಪಸ್ ತೆರಳಿದರು. ಇದನ್ನೂ ಓದಿ: ರಾಜರತ್ನ ಅಪ್ಪು ಅಗಲಿ 12ನೇ ದಿನ – ಅರಮನೆ ಮೈದಾನದಲ್ಲಿ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ

    ಅಪ್ಪು ಅಭಿಮಾನಿಗಳಿಗೆ ಅನ್ನ ಸಂತರ್ಪಣಾ ಕಾರ್ಯಕ್ರಮಕ್ಕೆ ವೆಜ್ ಜೊತೆಗೆ ನಾನ್ ವೆಜ್ ವ್ಯವಸ್ಥೆಯನ್ನು ಸಹ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದಾರೆ.