Tag: 1st Class

  • 1ನೇ ತರಗತಿಗೆ ದಾಖಲಾತಿ ವಯಸ್ಸು ಸಡಿಲಿಕೆಯಿಲ್ಲ – ಮಧು ಬಂಗಾರಪ್ಪ

    1ನೇ ತರಗತಿಗೆ ದಾಖಲಾತಿ ವಯಸ್ಸು ಸಡಿಲಿಕೆಯಿಲ್ಲ – ಮಧು ಬಂಗಾರಪ್ಪ

    ಬೆಂಗಳೂರು: ಒಂದನೇ ತರಗತಿ (1st Class) ದಾಖಲಾತಿಗೆ 6 ವರ್ಷ ವಯಸ್ಸು ಕಡ್ಡಾಯ ನಿಯಮ ಸಡಿಲಿಕೆ ಸಾಧ್ಯವಿಲ್ಲ ಅಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಸ್ಪಷ್ಟಪಡಿಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, 6 ವರ್ಷದ ನಿಯಮ ಸಡಿಲಿಕೆ ಸಾಧ್ಯವಿಲ್ಲ. ನಾನೇನು ಮಾಡಲು ಆಗೊಲ್ಲ. ಅನೇಕರು ಈ ಸಂಬಂಧ ಕೋರ್ಟ್ ಗೆ ಹೋಗಿದ್ರು. ಕೋರ್ಟ್ ಕೂಡಾ ಅವರ ಅರ್ಜಿ ವಜಾ ಮಾಡಿದೆ. ಕೋರ್ಟ್ ನಲ್ಲಿ ಏನೇ ಆದೇಶ ಬಂದರೂ ನಾವು ಪಾಲನೆ ಮಾಡ್ತೀವಿ ಅಂತ ತಿಳಿಸಿದರು.

    6 ವರ್ಷದ ನಿಯಮದಿಂದ ಬೇಜಾರ್ ಆಗುತ್ತದೆ. ಆದರೆ ನಿಯಮದ ಪ್ರಕಾರ ನಾವು ನಡೆಯಬೇಕು. 1 ತಿಂಗಳು, 2 ತಿಂಗಳು ಕಡಿಮೆ ಇರೋರಿಗೆ ಕೊಟ್ಟರೆ ಮತ್ತೊಬ್ಬರು ಕೇಳ್ತಾರೆ. ಇದೆಲ್ಲವೂ ಬಹಳ ಚರ್ಚೆ ಆಗೋ ವಿಷಯ. ಎಷ್ಟೋ ಪೋಷಕರು 7 ದಿನ ಕಡಿಮೆ ಅಂತಿದ್ದಾರೆ. ಆದರೆ ಅದು ಕಾನೂನಿನಲ್ಲಿ ಇಲ್ಲ‌. ನಾವು ಅದನ್ನು ಪರಿಗಣಿಸಲು ಸಾಧ್ಯವಿಲ್ಲ. ಈಗ ಈ ವಿಷಯ ಕೋರ್ಟ್ ನಲ್ಲಿ ಇದೆ. ಕೋರ್ಟ್ ನಲ್ಲಿ ನಿರ್ಧಾರ ಬಂದರೆ ನಾವು ತೀರ್ಮಾನ ಮಾಡಬಹುದು. ಕೋರ್ಟ್ ತೀರ್ಮಾನದಂತೆ ನಾವು ನಡೆದುಕೊಳ್ತೀವಿ ಅಂತ ತಿಳಿಸಿದರು.

    ಈ ವಯಸ್ಸಿನ ಮಿತಿ ಬಗ್ಗೆ ದೊಡ್ಡ ಚರ್ಚೆ ಆಗಬೇಕು. ಮಕ್ಕಳ ವಿಷಯದಲ್ಲಿ ನಾವು ಹುಷಾರಾಗಿ ನಿರ್ಧಾರ ಮಾಡಬೇಕು. ಮಗು ಹುಟ್ಟಿದ 3 ವರ್ಷ ಒಂದನೇ ತರಗತಿಗೆ ಸೇರಿಸಿದ್ರೆ ಕಷ್ಟ ಆಗುತ್ತದೆ. ನಿಯಮ ಸಡಿಲ ಮಾಡಿ ಅಂತ ಕೇಳ್ತಾರೆ. ಆದರೆ ನಾವು ಅದನ್ನ ಮಾಡಲು ಸಾಧ್ಯವಿಲ್ಲ ಅಂತ ಸ್ಪಷ್ಟಪಡಿಸಿದರು.

  • ಮಕ್ಕಳನ್ನು 1ನೇ ಕ್ಲಾಸಿಗೆ ಸೇರಿಸಲು 6 ವರ್ಷ ಕಡ್ಡಾಯ – ಸರ್ಕಾರದಿಂದ ಅಧಿಕೃತ ಆದೇಶ

    ಮಕ್ಕಳನ್ನು 1ನೇ ಕ್ಲಾಸಿಗೆ ಸೇರಿಸಲು 6 ವರ್ಷ ಕಡ್ಡಾಯ – ಸರ್ಕಾರದಿಂದ ಅಧಿಕೃತ ಆದೇಶ

    ಬೆಂಗಳೂರು: ಒಂದನೇ ತರಗತಿ (class 1st) ಸೇರ್ಪಡೆಗೆ ವಿದ್ಯಾರ್ಥಿಗೆ 6 ವರ್ಷ ಕಡ್ಡಾಯ ಎಂಬ ನಿಯಮವನ್ನು ಜಾರಿಗೊಳಿಸಿ ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ.

    ವಿದ್ಯಾರ್ಥಿ ಒಂದನೇ ತರಗತಿ ಸೇರಬೇಕಾದರೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು. 2025-26 ನೇ ಸಾಲಿನಿಂದ ನಿಯಮ ಅನ್ವಯವಾಗಲಿದೆ ಎಂದು ಸರ್ಕಾರ ಅಧಿಕೃತ ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ `ಸಿಎಂ ಅಂಕಲ್’ ಅಭಿಯಾನ – ಭುಗಿಲೆದ್ದ ಕೇಸರಿ ವಿವಾದ, ಸರ್ಕಾರಕ್ಕೆ ಹಲವು ಪ್ರಶ್ನೆ

    2025-26ನೇ ಸಾಲಿನಿಂದ ಅನ್ವಯವಾಗುವಂತೆ ಜೂನ್ 1 ಕ್ಕೆ 6 ವರ್ಷ ತುಂಬಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶಿಸಿದೆ. ಹಳೆಯ ಆದೇಶಕ್ಕೆ ತಿದ್ದುಪಡಿ ಮಾಡಿ ಸರ್ಕಾರ ಪ್ರಕಟಣೆ ಹೊರಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • 1ನೇ ತರಗತಿ ಸೇರಲು ಮಕ್ಕಳಿಗೆ ಹೊಸದಾಗಿ ವಯೋಮಿತಿ ನಿಗದಿ – ಸರ್ಕಾರದಿಂದ ಆದೇಶ

    1ನೇ ತರಗತಿ ಸೇರಲು ಮಕ್ಕಳಿಗೆ ಹೊಸದಾಗಿ ವಯೋಮಿತಿ ನಿಗದಿ – ಸರ್ಕಾರದಿಂದ ಆದೇಶ

    ಬೆಂಗಳೂರು: ಇನ್ನು ಮುಂದೆ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಅವರಿಗೆ 6 ವರ್ಷ ತುಂಬಲೇಬೇಕು ಎಂದು ರಾಜ್ಯ ಸರ್ಕಾರ ಹೊಸ ಹಾಗೂ ಮಹತ್ವದ ಆದೇಶ ಹೊರಡಿಸಿದೆ.

    ರಾಜ್ಯ ಸರ್ಕಾರ ನೂತನ ವಯೋಮಿತಿ ನಿಗದಿಪಡಿಸಿ, 1ನೇ ತರಗತಿಗೆ ಸೇರುವ ಮಕ್ಕಳಿಗೆ ಜೂನ್ 1ನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷ ತುಂಬಬೇಕು ಎಂದು ಸರ್ಕಾರ ತಿಳಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿಂದು 1,425 ಮಂದಿಗೆ ಕೊರೊನಾ ಸೋಂಕು – ಓರ್ವ ಸಾವು

    ಈ ಹಿಂದೆ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು 5 ವರ್ಷ, 5 ತಿಂಗಳು ಹಾಗೂ 5 ವರ್ಷ 10 ತಿಂಗಳು ಆಗಿರಬೇಕು ಎಂಬ ನಿಯಮವಿತ್ತು. ಇದೀಗ ಆರ್‌ಟಿಇ ಶಿಕ್ಷಣ ಕಾಯ್ದೆ, ಕಡ್ಡಾಯ ಶಿಕ್ಷಣ ನಿಯಮ 2012 ಅನ್ವಯ ಸರ್ಕಾರ ಹೊಸ ವಯೋಮಿತಿಯನ್ನು ನಿಗದಿ ಮಾಡಿದೆ. ಇದನ್ನೂ ಓದಿ: ಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾಗಿರುವ ಬೇಬಿಬೆಟ್ಟದ ಆ ಜಾಗ ಮೈಸೂರು ಅರಮನೆಗೆ ಸೇರಿದ್ದು: ಯದುವೀರ್

    Live Tv
    [brid partner=56869869 player=32851 video=960834 autoplay=true]