Tag: 200 Unit Electricity

  • ಕರುನಾಡಿಗೆ ಬಿಗ್ ಶಾಕ್ – ಇಂದು ಸಂಜೆ ವಿದ್ಯುತ್‌ ದರ ಪರಿಷ್ಕರಣೆ ಪ್ರಕಟ

    ಕರುನಾಡಿಗೆ ಬಿಗ್ ಶಾಕ್ – ಇಂದು ಸಂಜೆ ವಿದ್ಯುತ್‌ ದರ ಪರಿಷ್ಕರಣೆ ಪ್ರಕಟ

    ಬೆಂಗಳೂರು: ಲೋಕಸಭಾ ಚುನಾವಣೆ (LokSabha Elections) ಹಿನ್ನೆಲೆಯಲ್ಲಿ ಈ ಬಾರಿ ಅವಧಿಗೆ ಮುಂಚಿತವಾಗಿಯೇ ವಿದ್ಯುತ್‌ ದರ ಪರಿಷ್ಕರಣೆ ಮಾಡಲು ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗ ಮುಂದಾಗಿದೆ.

    ಇಂದು (ಬುಧವಾರ) ಸಂಜೆಯೇ ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗ (KERC) ವಿದ್ಯುತ್‌ ದರ ಪರಿಷ್ಕರಣೆ ಪ್ರಕಟಿಸಲಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಪರಿಷತ್‌ನಲ್ಲಿ ‘ಪಾಕಿಸ್ತಾನ್‌ ಜಿಂದಾಬಾದ್‌’ ಗದ್ದಲ – ಕಾಂಗ್ರೆಸ್‌ ಸರ್ಕಾರ ವಜಾಕ್ಕೆ ಬಿಜೆಪಿ ಒತ್ತಾಯ

    ಪ್ರತಿ ವರ್ಷ ಏರ್ಪಿಲ್‌ನಲ್ಲಿ ವಿದ್ಯುತ್‌ ದರ (Electricity Price) ಪರಿಷ್ಕರಣೆಯಾಗುತ್ತಿತ್ತು. ಆದ್ರೆ ಈ ಬಾರಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅವಧಿಗೆ ಮುಂಚಿತವಾಗಿಯೇ ವಿದ್ಯುತ್‌ ದರ ಪರಿಷ್ಕರಣೆಯಾಗಲಿದೆ. ಬುಧವಾರ ಪರಿಷ್ಕೃತ ದರ ಪ್ರಕಟವಾದರೂ ಏಪ್ರಿಲ್‌ನಿಂದ ಅನ್ವಯವಾಗಲಿದೆ. ಗೃಹಜ್ಯೋತಿ (Gruha Jyothi Scheme) ನಡುವೆಯೂ ವಿದ್ಯುತ್‌ ದರ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

    ಕಳೆದ ವರ್ಷ ಆಗಸ್ಟ್‌ 5ರಂದು ಗೃಹಜ್ಯೋತಿ ಯೋಜನೆಗೆ ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿತ್ತು. ವಿದ್ಯುತ್‌ ಪೂರೈಕೆಗಾಗಿ ಬೆಸ್ಕಾಂ 235.07 ಮೆಸ್ಕಾಂ 52.73, ಹೆಸ್ಕಾಂ 82.02, ಜೆಸ್ಕಾಂ 53.46, ಚೆಸ್ಕಾಂ 51.26, ಹುಕ್ಕೇರಿ 1.46 ಕೋಟಿ ರೂ. ಸಹಾಯಧನ ಬಿಡುಗಡೆ ಮಾಡಿತ್ತು. ಇದನ್ನೂ ಓದಿ: ಪಾಕ್‌ ಪರ ಘೋಷಣೆ ಆರೋಪ; ಎಫ್‌ಎಸ್‌ಎಲ್‌ಗೆ ವೀಡಿಯೋ ಕಳುಹಿಸಲು ಪೊಲೀಸರ ತಯಾರಿ

    ಗೃಹಜ್ಯೋತಿಗೆ ಇರುವ ಷರತ್ತುಗಳೇನು?
    ಗೃಹಜ್ಯೋತಿ ಯೋಜನೆಗೆ ವಾರ್ಷಿಕ ಸರಾಸರಿ ಮಾನದಂಡವಿದೆ. 12 ತಿಂಗಳ ಸರಾಸರಿ ಪಡೆದುಕೊಂಡು ಅದರ ಮೇಲೆ 10% ರಷ್ಟು ವಿದ್ಯುತ್‌ ಉಚಿತವಾಗಿ ನೀಡಲಾಗುವುದು. ಯಾರು ಎಷ್ಟು ವಿದ್ಯುತ್ ಬಳಸುತ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ 10% ರಷ್ಟು ವಿದ್ಯುತ್ ಉಚಿತವಾಗಿ ಕೊಡಲಾಗುವುದು. ಉದಾಹರಣೆಗೆ, 70 ಯೂನಿಟ್‌ ಬಳಸುವವರು ಅದಕ್ಕೆ 10% (ಅಂದರೆ ಒಟ್ಟು 80%) ಬಳಕೆ ಮಾಡಬಹುದು. ಕಳೆದ ವರ್ಷ ಸರಾಸರಿ ತಿಂಗಳಿಗೆ 100 ಯೂನಿಟ್ ಬಳಸಿದ್ದವರು ಈಗ 110 ಯೂನಿಟ್ ಬಳಸಿದ್ರೆ ವಿದ್ಯುತ್ ಉಚಿತವಾಗಿ ಸಿಗುತ್ತದೆ. ಒಂದು ವೇಳೆ 110ಕ್ಕಿಂತ ಹೆಚ್ಚು ಯೂನಿಟ್ ಬಳಸಿದ್ರೆ ಹೆಚ್ಚುವರಿ ಯೂನಿಟ್‌ಗೆ ಬಿಲ್ ಕಟ್ಟಬೇಕು. ಹೀಗೆ 200 ಯೂನಿಟ್‌ ವರೆಗೆ ವಿದ್ಯುತ್‌ ಬಳಸುವವರು ಬಿಲ್‌ ಕಟ್ಟುವಂತಿಲ್ಲ. 200 ಯೂನಿಟ್‌ ಉಚಿತ ಅಂತ ಎಲ್ಲರೂ ಬೇಕಾಬಿಟ್ಟಿ ವಿದ್ಯುತ್‌ ಬಳಸುವಂತಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು. ಇದನ್ನೂ ಓದಿ: ಅಬ್ದುಲ್ ಕಲಾಂ ವಸತಿ ಪ್ರಾಂಶುಪಾಲರ ಎಡವಟ್ಟು- ಕ್ರೂಸರ್ ಟಾಪ್‍ನಲ್ಲಿ ಮಕ್ಕಳ ಡೇಂಜರ್ ಜರ್ನಿ 

  • ಹೊಸ ಮನೆ, ಹೊಸ ಬಾಡಿಗೆ ಮನೆಗಳಿಗೂ ಫ್ರೀ ಕರೆಂಟ್ – ಕೆ.ಜೆ.ಜಾರ್ಜ್ ಸ್ಪಷ್ಟನೆ

    ಹೊಸ ಮನೆ, ಹೊಸ ಬಾಡಿಗೆ ಮನೆಗಳಿಗೂ ಫ್ರೀ ಕರೆಂಟ್ – ಕೆ.ಜೆ.ಜಾರ್ಜ್ ಸ್ಪಷ್ಟನೆ

    ಬೆಂಗಳೂರು: ಹೊಸ ಮನೆಯವರು ಹಾಗೂ ಹೊಸ ಮನೆ ಬಾಡಿಗೆದಾರರಿಗೂ ಉಚಿತ ವಿದ್ಯುತ್ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ (K.J.George) ತಿಳಿಸಿದರು.

    ಗೃಹಜ್ಯೋತಿ ಕಾರ್ಯಕ್ರಮ ಅನುಷ್ಠಾನ ವಿಚಾರವಾಗಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಹೊಸ ಮನೆಗಳಿಗೆ ದಾಖಲೆ ಇರಲ್ಲ. ಹಾಗಾಗಿ ಹೊಸ ಮನೆಗಳಿಗೂ ಫ್ರೀ ಕರೆಂಟ್ ನೀಡಲಾಗುವುದು. ಹೊಸದಾಗಿ ಸಂಪರ್ಕದ ಮನೆಗಳಿಗೆ, ಹೊಸ ಮನೆ ಬಾಡಿಗೆದಾರರಿಗೂ ಇದು ಅನ್ವಯವಾಗಲಿದೆ. ಒಂದು ವರ್ಷದ ತನಕ ಈ ನಿಯಮ ಇರುತ್ತದೆ. ಆ ಬಳಿಕ ಅವರು ಬಳಸಿದ ವಾರ್ಷಿಕ ಸರಾಸರಿ ಆಧಾರದ ಮೇಲೆ ಯೂನಿಟ್ ಮರು ಪರಿಷ್ಕರಣೆ ಮಾಡಲಾಗುವುದು. ಉಳಿದಂತೆ ಎಲ್ಲ ಉಚಿತ ಕರೆಂಟ್ ಮಾರ್ಗಸೂಚಿಗಳು ಹೊಸ ಮನೆ ಸಂಪರ್ಕ, ಹೊಸ ಮನೆ ಬಾಡಿಗೆದಾರರಿಗೆ ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ವಿದೇಶಿ ಪ್ರಜೆ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆಸಿದ್ದ ಪುಂಡ ಅರೆಸ್ಟ್‌

    ಹೊಸ ಮನೆಗೆ ಬರುವವರಿಗೆ ದಾಖಲೆ ಇರಲ್ಲ. ಅವರಿಗೆ 12 ತಿಂಗಳ ಸರಾಸರಿಯಂತೆ 53 ಯುನಿಟ್ ಮತ್ತು 10% ಹೆಚ್ಚುವರಿ ಸೇರಿಸಿ ಒಟ್ಟು 58 ಅಥವಾ 59 ಯೂನಿಟ್ ನೀಡಲಾಗುವುದು. ಹೊಸ ಮನೆಯ ಬಾಡಿಗೆದಾರರಿಗೂ ಇದು ಅನ್ವಯ. ಜೊತೆಗೆ ಆ ಆರ್‌ಆರ್ ನಂಬರ್‌ನಲ್ಲಿ ಇರುವ ಹಳೆಯ ಬಾಡಿಗೆದಾರರಿಗೂ ಅನ್ವಯವಾಗಲಿದೆ. ಅಂದಾಜು ಸಿಗದಿರುವ, ಹೊಸದಾಗಿ ಬಾಡಿಗೆಗೆ ಬರುವ ಮನೆಯವರಿಗೆ ಇದು ಅನ್ವಯಿಸುತ್ತದೆ. ಹೊಸ ಮನೆಯವರಿಗೆ, ಹೊಸ ಬಾಡಿಗೆಯವರಿಗೆ ಏನ್ ಮಾಡ್ತೀರಾ ಅನ್ನೋ ಪ್ರಶ್ನೆ ಬಂತು. ಅದಕ್ಕೆ ಈ ಹೊಸ ಸೂತ್ರ ಜಾರಿಗೆ ಬರಲಿದೆ. ಈ ಸರಾಸರಿ ಯುನಿಟ್ ಏಪ್ರಿಲ್ 1 ರಿಂದ ಮಾರ್ಚ್ 31 ರವರೆಗೆ ಅನ್ವಯಿಸಿ ಸರಾಸರಿ ಮಾಡಲಾಗ್ತಿದೆ ಎಂದು ಹೇಳಿದರು.

    ವಿದ್ಯುತ್ ದರ ಹೆಚ್ಚಳ ಕುರಿತು ಮಾತನಾಡಿ, ಅದು ಕೆಇಆರ್‌ಸಿ ತೀರ್ಮಾನ. ಅದನ್ನ ಸರ್ಕಾರ ಮಾಡಿಲ್ಲ. ಮೊದಲು ಮೂರು ಹಂತದಲ್ಲಿ ಸ್ಲಾಬ್ ಇತ್ತು. ಈಗ ಎರಡು ಹಂತದಲ್ಲಿ ಸ್ಲಾಬ್ ಮಾಡಲಾಗಿದೆ. ಈಗ 0-100 ಯೂನಿಟ್‌ಗೆ 4.75 ಪೈಸೆ ದರ ಹೆಚ್ಚಳ ಆಗಿದೆ. 101- ಎಲ್ಲಾ ಯೂನಿಟ್‌ಗೆ 7 ರೂ. ಹೆಚ್ಚಳವಾಗಿದೆ. ಈ ಹೊರೆ ಯಾವ ಗ್ರಾಹಕರಿಗೂ ಹೋಗ್ತಿಲ್ಲ. ರಾಜ್ಯ ಸರ್ಕಾರವೇ ಭರಿಸಿಕೊಳ್ತಿದೆ. ಯಾರ ಮೇಲೂ ಹೊರೆ ಮಾಡುವುದಿಲ್ಲ. ಹಿಂದೆ ಇದ್ದ ನಾಲ್ಕು ಸ್ಲಾಬ್‌ಗೆ ಹೋಗಬಹುದಾ ಅಂತ ಚರ್ಚೆ ಮಾಡುತ್ತೇವೆ. ಸಾಧ್ಯವಾದರೆ ಹಿಂದಿನ ರೀತಿ ಮಾಪನಕ್ಕೆ ಹೋಗಲು ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ ವ್ಯಾಪಾರಸ್ಥರಿಗೆ ಶಾಕ್ – ದರ ಏರಿಕೆ ಖಂಡಿಸಿ ಅಘೋಷಿತ ಬಂದ್

    ಮುಂಗಾರು ಕುರಿತು ಮಾತನಾಡಿ, ಸದ್ಯ ಮಳೆ ಕೊರತೆ ಅಂತ ಈಗಲೇ ಹೇಳಲು ಸಾಧ್ಯವಿಲ್ಲ. ಮಳೆ ಬರಲು ಇನ್ನೂ ಸಮಯ ಇದೆ. ಸೋಲಾರ್ ಮತ್ತು ವಿಂಡ್ ಎನರ್ಜಿ ಬಳಕೆ ಆಗ್ತಿದೆ. ಸದ್ಯಕ್ಕೆ ವಿದ್ಯುತ್ ಕೊರತೆ ಇಲ್ಲ. ಆಗಸ್ಟ್ ವರೆಗೂ ಮಳೆ ಬರುವ ನಿರೀಕ್ಷೆ ಇದೆ. ದೇವರ ಮೇಲೆ ಭಾರ ಹಾಕಿದ್ದೇವೆ ಎಂದರು.

  • 200 ಯೂನಿಟ್‌ ವಿದ್ಯುತ್‌ ಫ್ರೀ – ಷರತ್ತುಗಳು ಅನ್ವಯ

    200 ಯೂನಿಟ್‌ ವಿದ್ಯುತ್‌ ಫ್ರೀ – ಷರತ್ತುಗಳು ಅನ್ವಯ

    ಬೆಂಗಳೂರು: ಮೊದಲ ಗ್ಯಾರಂಟಿಯಾಗಿ ಗೃಹಜ್ಯೋತಿ (Gruha Jyoti) ಯೋಜನೆ ಮಾಡಲಾಗುವುದು. 200 ಯೂನಿಟ್‌ (200 Unit Electricity) ವರೆಗೆ ವಿದ್ಯುತ್‌ ಉಚಿತವಾಗಿ ನೀಡಲಾಗುವುದು. ಆಗಸ್ಟ್‌ ತಿಂಗಳಿಂದ ಬರುವ ಬಿಲ್‌ನಿಂದ ಯೋಜನೆ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

    ಗೃಹಜ್ಯೋತಿ ಯೋಜನೆಗೆ ವಾರ್ಷಿಕ ಸರಾಸರಿ ಮಾನದಂಡವಿದೆ. 12 ತಿಂಗಳ ಸರಾಸರಿ ಪಡೆದುಕೊಂಡು ಅದರ ಮೇಲೆ 10% ರಷ್ಟು ವಿದ್ಯುತ್‌ ಉಚಿತವಾಗಿ ನೀಡಲಾಗುವುದು. ಯಾರು ಎಷ್ಟು ವಿದ್ಯುತ್ ಬಳಸುತ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ 10% ರಷ್ಟು ವಿದ್ಯುತ್ ಉಚಿತವಾಗಿ ಕೊಡಲಾಗುವುದು. ಉದಾಹರಣೆಗೆ, 70 ಯೂನಿಟ್‌ ಬಳಸುವವರು ಅದಕ್ಕೆ 10% (ಅಂದರೆ ಒಟ್ಟು 80%) ಬಳಕೆ ಮಾಡಬಹುದು. ಕಳೆದ ವರ್ಷ ಸರಾಸರಿ ತಿಂಗಳಿಗೆ 100 ಯೂನಿಟ್ ಬಳಸಿದ್ದವರು ಈಗ 110 ಯೂನಿಟ್ ಬಳಸಿದ್ರೆ ವಿದ್ಯುತ್ ಉಚಿತವಾಗಿ ಸಿಗುತ್ತದೆ. ಒಂದು ವೇಳೆ 110ಕ್ಕಿಂತ ಹೆಚ್ಚು ಯೂನಿಟ್ ಬಳಸಿದ್ರೆ ಹೆಚ್ಚುವರಿ ಯೂನಿಟ್‌ಗೆ ಬಿಲ್ ಕಟ್ಟಬೇಕು. ಹೀಗೆ 200 ಯೂನಿಟ್‌ ವರೆಗೆ ವಿದ್ಯುತ್‌ ಬಳಸುವವರು ಬಿಲ್‌ ಕಟ್ಟುವಂತಿಲ್ಲ. 200 ಯೂನಿಟ್‌ ಉಚಿತ ಅಂತ ಎಲ್ಲರೂ ಬೇಕಾಬಿಟ್ಟಿ ವಿದ್ಯುತ್‌ ಬಳಸುವಂತಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: 180 ದಿನಗಳಾದರೂ ಕೆಲಸ ಸಿಗದ ನಿರುದ್ಯೋಗಿಗಳಿಗೆ ಯುವ ನಿಧಿ

    ಜು.1 ರಿಂದ ಆಗಸ್ಟ್ ವರೆಗಿನ ಖರ್ಚಿಗೆ ಇದು ಲೆಕ್ಕ. ಜುಲೈನಿಂದ ಮಾಡಿರುವ ಖರ್ಚಿನ ಬಿಲ್ ಆಗಸ್ಟ್‌ನಲ್ಲಿ ಬರಲಿದೆ. ಜುಲೈವರೆಗೆ ವಿದ್ಯುತ್‌ ಬಿಲ್ ಬಾಕಿ ಉಳಿಸಿಕೊಂಡವರಿಗೆ ಸಮಯ ಕೊಡುತ್ತೇವೆ.‌ ಹಳೇ ವಿದ್ಯುತ್‌ ಬಾಕಿಯನ್ನು ಗ್ರಾಹಕರೇ ಪಾವತಿಸಬೇಕು. ಆಗಸ್ಟ್‌ನಿಂದ ಬರುವ ಬಿಲ್‌ನ್ನು ಜನರು ಕಟ್ಟುವ ಅಗತ್ಯವಿಲ್ಲ ಎಂದು ಹೇಳಿದರು.

    ಆರ್‌ಆರ್‌ ನಂಬರ್‌ ಕೌಂಟ್‌ ಮಾಡುವಾಗ ಒಂದೇ ಆರ್‌ಆರ್‌ ನಂಬರ್‌ ಆಗಿದ್ದರೆ ಹೆಚ್ಚುವರಿ ಮೀಟರ್‌ ಬಾಡಿಗೆ ಮನೆ ಮೀಟರ್‌ಗಳಿಗೆ ಅನ್ವಯ ಆಗಲ್ಲ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಆಗಸ್ಟ್ 15 ರಿಂದ ಗೃಹಲಕ್ಷ್ಮಿ ಯೋಜನೆ ಜಾರಿ: ಯಾರು ಅರ್ಜಿ ಸಲ್ಲಿಕೆ ಮಾಡಬಹುದು?

  • ಹಾಸನದಲ್ಲೂ ʻಗ್ಯಾರಂಟಿʼ ಗಲಾಟೆ – ವಿದ್ಯುತ್‌ ಬಿಲ್‌ ಕೇಳಿದ ಸಿಬ್ಬಂದಿ ಮೇಲೆ ಕೋಳಿ ಅಂಗಡಿ ಮಾಲೀಕನಿಂದ ಹಲ್ಲೆ

    ಹಾಸನದಲ್ಲೂ ʻಗ್ಯಾರಂಟಿʼ ಗಲಾಟೆ – ವಿದ್ಯುತ್‌ ಬಿಲ್‌ ಕೇಳಿದ ಸಿಬ್ಬಂದಿ ಮೇಲೆ ಕೋಳಿ ಅಂಗಡಿ ಮಾಲೀಕನಿಂದ ಹಲ್ಲೆ

    ಹಾಸನ: ಕಾಂಗ್ರೆಸ್‌ ಸರ್ಕಾರ 200 ಯೂನಿಟ್‌ ಉಚಿತ ವಿದ್ಯುತ್‌ (200 Unit Electricity Free) ಭರವಸೆ ನೀಡಿರುವ ಹಿನ್ನೆಲೆ ಹಾಸನ ಜಿಲ್ಲೆಯಲ್ಲೂ ವಿದ್ಯುತ್ ಬಿಲ್ (Electricity Bill) ಪಾವತಿಸಲು ಜನರು ನಿರಾಕರಿಸುತ್ತಿದ್ದಾರೆ.

    ಬಿಲ್ ಕಲೆಕ್ಷನ್‌ಗೆ ಹೋಗಿದ್ದ ಚೆಸ್ಕಾಂ ಸಿಬ್ಬಂದಿ ಮೇಲೆ ತಂದೆ ಹಾಗೂ ಆತನ ಅಪ್ರಾಪ್ತ ಮಗನಿಂದ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ‌. ಇದನ್ನೂ ಓದಿ: ಗ್ಯಾರಂಟಿ ಗೊಂದಲದ ನಡುವೆ ಕರೆಂಟ್ ಬಿಲ್ ಗೋಲ್‌ಮಾಲ್: ಜೆಸ್ಕಾಂಗೆ ಲಕ್ಷಾಂತರ ರೂಪಾಯಿ ನಷ್ಟ

    ಹಾಸನ (Hassan) ಜಿಲ್ಲೆಯ ಅರಕಲಗೂಡು ತಾಲ್ಲೂಕಿನ, ಹಳೇ ಕೋರ್ಟ್ ರಸ್ತೆಯಲ್ಲಿರುವ ಕೋಳಿ ಅಂಗಡಿ ಮಾಲೀಕ ಸುರೇಶ್ ಎಂಬವರು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಬುಧವಾರ ಚೆಸ್ಕಾಂ ಸಿಬ್ಬಂದಿ (Chescom Employee) ಸಂತೋಷ್ ಹಾಗೂ ಇತರರು ಸುರೇಶ್ ಮನೆ ಬಳಿ ತೆರಳಿ ಬಾಕಿ 1,150 ರೂ. ವಿದ್ಯುತ್ ಬಿಲ್ ಪಾವತಿಸುವಂತೆ ಕೇಳಿದ್ದಾರೆ. ಆದ್ರೆ ಸುರೇಶ್‌ ನಾವು ಹಣ ಕಟ್ಟಲ್ಲ, ಸರ್ಕಾರ ಹೇಳಿದೆ ಆದರೂ ನೀನು ಬಿಲ್ ಕೇಳಲು ಬಂದಿದ್ದೀಯಾ ಅಂತಾ ಚೆಸ್ಕಾಂ ಸಿಬ್ಬಂದಿಯನ್ನ ಹಾಗೂ ಆತನ ಪತ್ನಿ ನಿಂದಿಸಿ ಜಗಳ ತೆಗಿದಿದ್ದಾನೆ. ಇದನ್ನೂ ಓದಿ: ಗೃಹಲಕ್ಷ್ಮಿ ಹಣ ಯಾರಿಗೆ ಅಂತ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತೆ: ಹೆಬ್ಬಾಳ್ಕರ್ ಹೇಳಿಕೆ ಒಪ್ಪದ ಡಿಕೆಶಿ

    ಇದು ಅತಿರೇಕಕ್ಕೆ ತಿರುಗಿ ಬಿಲ್ ಕಲೆಕ್ಟರ್ ಸಂತೋಷ್ ಮೇಲೆ ಸುರೇಶ್ ಹಾಗೂ ಆತನ ಅಪ್ರಾಪ್ತ ಪುತ್ರ ಏಕಾಏಕಿ ಹಲ್ಲೆ ಮಾಡಿದ್ದಾರೆ ಎಂದು ಸಂತೋಷ್ ಆರೋಪಿಸಿದ್ದಾರೆ. ಸಂತೋಷ್‌ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಆಸ್ಪತ್ರೆಗೆ ಪೊಲೀಸರು ಭೇಟಿ ನೀಡಿ ಹೇಳಿಕೆ ಪಡೆದಿದ್ದಾರೆ. ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯಾವುದೇ ಪ್ರಕರಣ ದಾಖಲಾಗಿಲ್ಲ.

  • ನನ್ನ ಅಸ್ತಿತ್ವವೇ ಹೊರಟೋಗಿದೆ, ನಾನೇನು ಕಡುಬು ತಿನ್ನೋಕೆ ರಾಜಕೀಯ ಮಾಡ್ತಿದ್ದೀನಾ – HDK ಪ್ರಶ್ನೆ

    ನನ್ನ ಅಸ್ತಿತ್ವವೇ ಹೊರಟೋಗಿದೆ, ನಾನೇನು ಕಡುಬು ತಿನ್ನೋಕೆ ರಾಜಕೀಯ ಮಾಡ್ತಿದ್ದೀನಾ – HDK ಪ್ರಶ್ನೆ

    ಬೆಂಗಳೂರು: ನಾನೇನು ಊಟ ಮಾಡ್ಕೊಂದು, ಕಡುಬು ತಿನ್ನೋಕೆ ರಾಜಕೀಯ (Politics) ಮಾಡ್ತಿದ್ದೀನಾ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಪ್ರಶ್ನಿಸಿದ್ದಾರೆ.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಗ್ಯಾರಂಟಿ (Congress Guarantee) ಘೋಷಣೆಗಳ ವಿರುದ್ಧ ಕಿಡಿ ಕಾರಿದ್ದಾರೆ. ನನ್ನ ಅಸ್ತಿತ್ವವೇ ಹೊರಟೋಗಿದೆ. ಚುನಾವಣೆಯಲ್ಲಿ ನನ್ನ ಅಸ್ತಿತ್ವವನ್ನು ಕುಂಟಿತಗೊಳಿಸಿದ್ದು ಇದೇ ಗ್ಯಾರಂಟಿ ಅಲ್ಲವೇ? ಆವತ್ತು ರಸ್ತೆಯಲ್ಲಿ ನಿಂತು ನನಗೂ ಫ್ರೀ, ನಿನಗೂ ಫ್ರೀ, ಹೇ ಕಾಕಾ ಪಾಟೀಲ್‌ ನಿನಗೂ ಫ್ರೀ ಅಂತಾ ಕೂಗಿ ಹೇಳಿದವರು ಇವರೇ ಅಲ್ಲವೇ? ಯಾವ ಆಧಾರದ ಮೇಲೆ ಗ್ಯಾರಂಟಿ ಘೋಷಣೆ ಮಾಡಿದ್ರು. ಈಗ ಹೇಳಿದ ಮೇಲೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ಮೇಲೆ ಬಿಜೆಪಿ ಕಾರ್ಯಕರ್ತರು ಅಪಾಯದಲ್ಲಿದ್ದಾರೆ – ಪ್ರತಾಪ್‌ ಸಿಂಹ

    ನಿದ್ಯೋಗಿಗಳಿಗೆ ಮೂರು ಸಾವಿರ ರೂ. ಕೊಡ್ತೀನಿ ಅಂದಿದ್ರು, ಈಗ 2022-23ನೇ ಸಾಲಿನಲ್ಲಿ ಪಾಸಾದವರಿಗೆ ಅಂತಿದ್ದಾರೆ. ಕಾಂಗ್ರೆಸ್‌ ಗ್ಯಾರಂಟಿ ನಂಬಿ ಹೊಟ್ಟೆಗೆ ಇಟ್ಟಿಲ್ಲದವನು ಕಾಂಗ್ರೆಸ್‌ಗೆ (Congress) ವೋಟ್‌ ಹಾಕಿದ್ದಾನೆ, ಅವನಿಗೆ ಕೊಡಬೇಕು. ಇದೆಲ್ಲವನ್ನು ಮುಂದಿಟ್ಟುಕೊಂಡೇ ರಾಜಕೀಯ ಮಾಡ್ತಿರೋದು. ಅದು ಬಿಟ್ಟು ನಾನೇನು ಊಟ ಮಾಡ್ಕೊಂಡು, ಕಡುಬು ತಿನ್ನೋಕೆ ರಾಜಕೀಯ ಮಾಡ್ತಿದ್ದೀನಾ? ಜನತೆಯ ಸಮಸ್ಯೆ ಹಾಗೂ ಜನರಿಗೆ ಆಗುವ ದ್ರೋಹದ ಬಗ್ಗೆ ನನ್ನ ಧ್ವನಿ ಇರಬೇಕು. ಅದಕ್ಕಾಗಿ ನಾವು ಹೋರಾಟ ಮಾಡ್ತೀವಿ ಎಂದು ಹೇಳಿದ್ದಾರೆ. ಇದನ್ನೂ ಓದಿ: The Kerala Story: ದಾವಣಗೆರೆಯಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಸಿನಿ ಪ್ರದರ್ಶನ

  • ಗ್ಯಾರಂಟಿ ಗೊಂದಲದ ನಡುವೆ ಕರೆಂಟ್ ಬಿಲ್ ಗೋಲ್‌ಮಾಲ್: ಜೆಸ್ಕಾಂಗೆ ಲಕ್ಷಾಂತರ ರೂಪಾಯಿ ನಷ್ಟ

    ಗ್ಯಾರಂಟಿ ಗೊಂದಲದ ನಡುವೆ ಕರೆಂಟ್ ಬಿಲ್ ಗೋಲ್‌ಮಾಲ್: ಜೆಸ್ಕಾಂಗೆ ಲಕ್ಷಾಂತರ ರೂಪಾಯಿ ನಷ್ಟ

    ರಾಯಚೂರು: ಕಾಂಗ್ರೆಸ್ ಸರ್ಕಾರ (Congress Government) ಘೋಷಿಸಿರುವ 200 ಯೂನಿಟ್‌ ಉಚಿತ ವಿದ್ಯುತ್ (200 Unit Electricity) ಗ್ಯಾರಂಟಿ ಗೊಂದಲದ ನಡುವೆ ರಾಯಚೂರಿನ ಗ್ರಾಮೀಣ ಭಾಗದಲ್ಲಿ ಲಕ್ಷಾಂತರ ರೂಪಾಯಿ ವಿದ್ಯುತ್ ಬಿಲ್ ಗೋಲ್‌ಮಾಲ್ ನಡೆದಿರುವುದು ಬೆಳಕಿಗೆ ಬಂದಿದೆ. ಜೆಸ್ಕಾಂಗೆ (GESCOM) ಲಕ್ಷಾಂತರ ರೂಪಾಯಿ ಆರ್ಥಿಕ ನಷ್ಟ ಉಂಟಾಗಿದೆ.

    ಗ್ರಾಮಿಣ ಭಾಗದಲ್ಲಿ ಗ್ರಾಮಸ್ಥರು, ಬಡ ರೈತರಿಂದ (Farmers) ವಸೂಲಿ ಮಾಡಿದ ವಿದ್ಯುತ್ ಬಿಲ್‌ಗೆ ರಶೀದಿ ಕೊಡದೇ ಸಂಗ್ರಹಿಸಿದ ಹಣವನ್ನ ಬ್ಯಾಂಕ್‌ಗೂ ಕಟ್ಟದೇ ಗ್ರಾಮ ವಿದ್ಯುತ್ ಬಿಲ್‌ ಕಲೆಕ್ಟರ್‌ಗಳೇ ಗುಳುಂ ಮಾಡಿರುವುದು ಬಯಲಾಗಿದೆ. ತಕ್ಷಣದ ಮಾಹಿತಿ ಪ್ರಕಾರ ರಾಯಚೂರು ತಾಲೂಕಿನ ಚಂದ್ರಬಂಡಾ ಜೆಸ್ಕಾಂ ಶಾಖೆ ಸೇರಿ ಸುಮಾರು 20 ಲಕ್ಷ ರೂಪಾಯಿ ವಂಚನೆಯಾಗಿರುವುದು ಕಂಡುಬಂದಿದೆ ಎಂದು ಜೆಸ್ಕಾಂ ಇಇ ಚಂದ್ರಶೇಖರ ದೇಸಾಯಿ ಹೇಳಿದ್ದಾರೆ. ಇದನ್ನೂ ಓದಿ: ವಿಪಕ್ಷಗಳ ಬಹಿಷ್ಕಾರಕ್ಕೆ ದೊಡ್ಡಗೌಡರ ಡೋಂಟ್ ಕೇರ್ – ಸಂಸತ್ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ನಿರ್ಧಾರ

    ಆರ್.ಆರ್ ಸಂಖ್ಯೆಗಳ ವಸೂಲಾತಿ ಹಾಗೂ ಬ್ಯಾಂಕ್‌ಗೆ ಹಣ ಸಂದಾಯವಾದ ಕುರಿತು ಜೆಸ್ಕಾಂ ಅಧಿಕಾರಿಗಳು ಪರಿಶೀಲಿಸಿದಾಗ ನಕಲಿ ದಾಖಲೆಗಳ ಮೂಲಕ ಗೋಲ್‌ಮಾಲ್ ಮಾಡಿರುವುದು ಕಂಡುಬಂದಿದೆ. ಹೀಗಾಗಿ ಚಂದ್ರಬಂಡಾ ಗ್ರಾಮದ ವಿದ್ಯುತ್ ಬಿಲ್‌ ಕಲೆಕ್ಟರ್‌ ಮಲ್ಲೇಶ್‌ಗೆ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ನೋಟಿಸ್ ನೀಡಿದ್ದು ಕ್ರಮಕ್ಕೆ ಮುಂದಾಗಿದ್ದಾರೆ. ಆದ್ರೆ ಚಂದ್ರಬಂಡಾ ಮಾತ್ರವಲ್ಲದೇ ಹಲವೆಡೆ ಇದೇ ರೀತಿ ಗೋಲ್ ಮಾಲ್ ನಡೆದಿದ್ದು ಕೋಟ್ಯಾಂತರ ರೂಪಾಯಿ ವಂಚಿಸಿರುವ ಅನುಮಾನ ಮೂಡಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಅಮುಲ್ ಹಾಲು ಸಂಗ್ರಹಿಸುವುದನ್ನು ನಿಲ್ಲಿಸಿ: ಅಮಿತ್‌ ಶಾಗೆ ಸ್ಟಾಲಿನ್‌ ಪತ್ರ

    ಗ್ರಾಮೀಣ ಭಾಗದ ಬಹುತೇಕ ಬಡ ರೈತರು ಉಚಿತ ವಿದ್ಯುತ್ ಭರವಸೆ ಇಟ್ಟುಕೊಂಡು ಕುಳಿತಿರುವಾಗ ತಮ್ಮ ಹಣ ದುರ್ಬಳಕೆಯಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮಗೆ ಬಿಲ್ ಕೊಡದೇ, ಹಣವನ್ನ ಬ್ಯಾಂಕ್‌ಗೂ ಕಟ್ಟದೇ ಇರುವ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಅಂತಾ ಒತ್ತಾಯಿಸಿದ್ದಾರೆ.

  • 200 ಯೂನಿಟ್ ಫ್ರೀ – ವಿದ್ಯುತ್‌ ಉಪಕರಣ ಖರೀದಿಗೆ ಫುಲ್ ಡಿಮ್ಯಾಂಡ್

    200 ಯೂನಿಟ್ ಫ್ರೀ – ವಿದ್ಯುತ್‌ ಉಪಕರಣ ಖರೀದಿಗೆ ಫುಲ್ ಡಿಮ್ಯಾಂಡ್

    ಕಾರವಾರ: ಕಾಂಗ್ರೆಸ್ (Congress) ಸರ್ಕಾರ ಬರುತ್ತಿದ್ದಂತೆ 200 ಯೂನಿಟ್ ವಿದ್ಯುತ್ (200 Unit Electricity) ಫ್ರೀ ನೀಡುವುದಾಗಿ ಘೋಷಣೆ ಮಾಡಿದೆ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ (Uttara Kannada) ವಿದ್ಯುತ್ ಉಕರಣಗಳಿಗೆ (Electrical Equipment) ಬೇಡಿಕೆ ಹೆಚ್ಚಾಗಿದ್ದು ಮನೆಗೆ ಬೇಕಾದ ಫ್ರಿಜ್, ಎಸಿ, ಎಲೆಕ್ಟ್ರಿಕ್ ಒಲೆ, ಫ್ಯಾನ್‌ಗಳ ಖರೀದಿ ಭರಾಟೆ ಜೋರಾಗಿದೆ.

     

    ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿಗಳನ್ನು (Guarantee) ಘೋಷಣೆ ಮಾಡಿತ್ತು. ಇದರ ಫಲವಾಗಿ ಅಧಿಕಾರದ ಚುಕ್ಕಾಣಿ ಸಹ ಹಿಡಿದಿದ್ದು ತಾನು ಘೋಷಣೆ ಮಾಡಿದ 5 ಗ್ಯಾರಂಟಿಗಳನ್ನು ಜಾರಿಗೆ ತರಲು ಮುಂದಾಗಿದೆ. ಹೀಗಾಗಿ ಪಕ್ಷ ನೀಡಿದ್ದ ಗ್ಯಾರಂಟಿಗಳನ್ನು ನಂಬಿ ಮತಹಾಕಿದ ಜನ ಈಗ ಅವುಗಳ ಪ್ರಯೋಜನ ಪಡೆಯಲು ಹಾತೊರೆಯುತ್ತಿದ್ದಾರೆ. ಅದರಲ್ಲೂ ಪ್ರಮುಖವಾಗಿ 200 ಯೂನಿಟ್ ಉಚಿತ ವಿದ್ಯುತ್ ಸದ್ಬಳಕೆಗೆ ಜನ ಮುಂದಾಗಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಹಳ್ಳಿ ಮತ್ತು ನಗರ ಪ್ರದೇಶದ ಜನ ಕಳೆದ ತಿಂಗಳಿಗಿಂತ ಈ ತಿಂಗಳು ಅತಿ ಹೆಚ್ಚು ವಿದ್ಯುತ್ ಬಳಕೆ ವಸ್ತುಗಳನ್ನು ಖರೀದಿ ಮಾಡುತ್ತಿದ್ದಾರೆ. ಪ್ರತಿ ಮನೆಗಳಲ್ಲಿ ತಿಂಗಳಿಗೆ ಅಂದಾಜು 35 ರಿಂದ 50 ಯೂನಿಟ್ ಒಳಗೆ ವಿದ್ಯುತ್ ಉಪಯೋಗವಾಗುತ್ತದೆ. ಆದರೆ ಕಾಂಗ್ರೆಸ್ ಪಕ್ಷ 200 ಯೂನಿಟ್‌ಗಳ ಉಚಿತ ವಿದ್ಯುತ್ ಘೋಷಣೆ ಮಾಡಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳಲು ಜನ ಮುಂದಾಗಿದ್ದಾರೆ. ಇದನ್ನೂ ಓದಿ: ಹಾಪ್‌ಕಾಮ್ಸ್‌ನಲ್ಲಿ ಮೇ 26 ರಿಂದ ಮಾವು, ಹಲಸು ಮೇಳ

    ಹಳ್ಳಿ ಪ್ರದೇಶದ ಜನ ವಿದ್ಯುತ್ ಬಳಕೆ ವಸ್ತುಗಳನ್ನು ಖರೀದಿ ಮಾಡುತ್ತಿದ್ದಾರೆ. ಕಳೆದ 10 ದಿನಗಳಲ್ಲಿ ಎಲೆಕ್ಟ್ರಿಕ್ ಉತ್ಪನ್ನಗಳ ಖರೀದಿ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ ಎಂದು ಮಾಲೀಕರು ತಿಳಿಸಿದ್ದಾರೆ. ಇದನ್ನೂ ಓದಿ: ಸಂಸತ್‌ ಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ವಿಪಕ್ಷಗಳ ಬಹಿಷ್ಕಾರ – ಭಾಗವಹಿಸುತ್ತೇವೆ ಎಂದ 2 ಪಕ್ಷಗಳು

  • ಗ್ಯಾರಂಟಿ ನಂಬಿ BPL ಕಾರ್ಡ್‌ಗೆ ಮುಗಿಬಿದ್ದ ಜನ – ಅರ್ಜಿ ಸ್ವೀಕರಿಸೋದನ್ನೇ ನಿಲ್ಲಿಸಿದ ಇಲಾಖೆ!

    ಗ್ಯಾರಂಟಿ ನಂಬಿ BPL ಕಾರ್ಡ್‌ಗೆ ಮುಗಿಬಿದ್ದ ಜನ – ಅರ್ಜಿ ಸ್ವೀಕರಿಸೋದನ್ನೇ ನಿಲ್ಲಿಸಿದ ಇಲಾಖೆ!

    ಮಡಿಕೇರಿ: ಕಾಂಗ್ರೆಸ್ ಸರ್ಕಾರ (Congress Government) ವಿಧಾನಸಭೆ ಚುನಾವಣೆ ವೇಳೆ ಜನರಿಗೆ ನೀಡಿದ್ದ ಉಚಿತ ಕೊಡುಗೆಗಳ ಭರವಸೆಗಳನ್ನ ಈಡೇರಿಸುವುದು ನಿಚ್ಚಳವಾಗಿದೆ. ಆದ್ರೆ ಆ ಕೊಡುಗೆಗಳನ್ನ ಬಡವರಿಗೆ ಮಾತ್ರ ಸೀಮಿತಗೊಳಿಸುವ ಎಲ್ಲ ಸಾಧ್ಯತೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಈ ಉಚಿತ ಕೊಡುಗೆಗಳ ಲಾಭ ಪಡೆಯಲು ಉತ್ಸುಕರಾಗಿರುವ ಜನರು, ಬಿಪಿಎಲ್ ಕಾರ್ಡ್‌ (BPL Card) ಮಾಡಿಸಿಕೊಳ್ಳಲು ಮುಗಿಬೀಳುತ್ತಿದ್ದಾರೆ.

    ಇದರಿಂದ ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನರಿಗೆ ಇದೀಗ ಅರ್ಜಿ ಸ್ವೀಕಾರವನ್ನೇ ಅಹಾರ ಇಲಾಖೆ ಸ್ಥಗಿತಗೊಳಿಸಿದೆ. ಇದರಿಂದ ಕಾಂಗ್ರೆಸ್ ಪಕ್ಷವನ್ನು ‌ನಂಬಿಕೆಟ್ಟವು ಅನ್ನೋ ಅನುಮಾನ ಜನರಲ್ಲಿ ಕಾಡತೋಡಗಿದೆ. ಇದನ್ನೂ ಓದಿ: ಕೊನೆಗೂ ಡಿಕೆಶಿಗೆ ಸಿಕ್ತು ಅದೃಷ್ಟದ ಮನೆ – ಕಾವೇರಿ ನಿವಾಸಕ್ಕೆ ಸಿಎಂ ಶಿಫ್ಟ್ – ಯಾರಿಗೆ ಯಾವ ಮನೆ?

    ಕಾಂಗ್ರೆಸ್ ಪಕ್ಷ ಅಧಿಕಾರ ಬಂದ ಕೂಡಲೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಪ್ರತಿ ಮನೆಗೂ 200 ಯೂನಿಟ್‌ ವಿದ್ಯುತ್‌ ಉಚಿತ, ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ರೂ, ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ, ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಉಚಿತ ನೀಡುವುದಾಗಿ 5 ಗ್ಯಾರಂಟಿಗಳನ್ನ ಕಾಂಗ್ರೆಸ್ ಘೋಷಣೆ ಮಾಡಿದೆ. ಈಗಾಗಲೇ ಮೊದಲ ಕ್ಯಾಬಿನೆಟ್‌ ಸಭೆಯಲ್ಲೇ ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ ನೀಡಿದ್ದು, ಮುಂದಿನ ಸಭೆಯಲ್ಲೇ ಅನುಷ್ಠಾನಗೊಳಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

    ಇದಕ್ಕೆ ಪೂರಕವಾಗಿ ನೂತನ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಮೊದಲ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡುವ ನಿರ್ಧಾರಗಳನ್ನು ಕೈಗೊಂಡು ಅಧಿಕೃತ ಆದೇಶಗಳನ್ನ ಹೊರಡಿಸಿದ್ದಾರೆ. ಆದರೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತ್ರ, ಹಾದಿಬೀದಿಯಲ್ಲಿ ಹೋಗುವವರಿಗೆಲ್ಲ ಈ ಯೋಜನೆಗಳ ಲಾಭ ಸಿಗುವುದಿಲ್ಲ. ನಿಜಕ್ಕೂ ಬಡವರಿಗೆ, ಅರ್ಹರಿಗೆ ಮಾತ್ರ ಸಿಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಶುರುವಾಯ್ತು ಬಿಜೆಪಿ ಕಾಲದ ಅಕ್ರಮದ ತನಿಖೆ – ಮೊದಲ ಎಫ್‌ಐಆರ್‌ ದಾಖಲು

    ಇದೆಲ್ಲವನ್ನೂ ಗಮನಿಸಿರುವ ಕೊಡಗಿನ ಸಾರ್ವಜನಿಕರು ತಮ್ಮ ಹೆಸರಿನಲ್ಲಿ ಬಿಪಿಎಲ್ ಕಾರ್ಡ್ ಗಳನ್ನು ಮಾಡಿಸಿಕೊಳ್ಳಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವೆಬ್ ಸೈಟ್ ಗೆ ಮೊರೆ ಹೋಗಿದ್ದಾರೆ. ಕೆಲವರು ತಮ್ಮ ಮೊಬೈಲ್ ಮತ್ತು ಕಂಪ್ಯೂಟರ್ ಗಳ ಸಹಾಯದಿಂದ ಆಹಾರ ahar.kar.nic.in ವೆಬ್ ಸೈಟ್ ಓಪನ್ ಮಾಡಲು ಪ್ರಯತ್ನಿಸುತ್ತಿದ್ದರೆ, ಇನ್ನೂ ಕೆಲವರು ಸಮೀಪದ ಸೈಬರ್ ಸೆಂಟರ್ ಗಳಿಗೆ ಹೋಗಿ ಬಿಪಿಎಲ್ ಕಾರ್ಡ್ ಗಳನ್ನೂ ಮಾಡಿಸಿಕೊಳ್ಳಲು ಮುಂದಾಗುತ್ತಿದ್ದಾರೆ. ಹೆಚ್ಚಿನ ಜನರು ಏಕಕಾಲಕ್ಕೆ ಅರ್ಜಿ ಸಲ್ಲಿಸಲು ಮುಂದಾಗುತ್ತಿದ್ದು, ಇಲಾಖೆ ತಾತ್ಕಾಲಿಕವಾಗಿ ಅರ್ಜಿ ಸ್ವೀಕಾರವನ್ನ ಸ್ಥಗಿತಗೊಳಿಸಿದೆ ಎಂದು ತಮ್ಮ ವೆಬ್ ಸೈಟ್ ನಲ್ಲೆ ಸ್ಪಷ್ಟವಾಗಿ ನಮೂದಿಸಿಬಿಟ್ಟಿದ್ದಾರೆ.

    ಇನ್ನೂ ಈ ಸಮಸ್ಯೆ ಬಗ್ಗೆ ಆಹಾರ ಇಲಾಖೆ ಅಧಿಕಾರಿಗಳನ್ನು ಕೇಳಿದ್ರೆ. ಬಿಪಿಎಲ್ ಕಾರ್ಡ್ ತಿದ್ದುಪಡಿ ಸಂಬಂಧಿಸಿದಂತೆ ಆಹಾರ ಇಲಾಖೆಯಲ್ಲಿ ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ಕಾರ್ಡ್ ತಿದ್ದುಪಡಿಗೆ ಸರ್ವರ್‌ ಒಪನ್ ಇತ್ತು. ಮಾಚ್ 9ರಿಂದ ನೀತಿ ಸಂಹಿತೆ ಜಾರಿಯಾಗುವ ವರೆಗೂ GSC ಅಪ್ಲಿಕೇಶನ್ ಹಾಕುವುದಕ್ಕೆ ಅವಕಾಶ ನೀಡಲಾಗಿತ್ತು. ಮೇ ತಿಂಗಳಲ್ಲೂ 17 ಹಾಗೂ 18ರ ವರೆಗೂ ಸರ್ವರ್ ಒಪನ್ ಇತ್ತು. ಇದೀಗ ಸ್ಥಗಿತಗೊಳಿಸಲಾಗಿದೆ. ಮುಂದೆ ಸರ್ಕಾರ ನಿರ್ದೇಶನ ನೀಡುವವರೆಗೂ ಅರ್ಜಿಗಳನ್ನ ಸ್ಥಗಿತಗೊಳಿಸಲಾಗುತ್ತದೆ. ದೂರದ ಊರಿನ ಬಂದವರು ವಾಪಸ್‌ ಹೋಗುತ್ತಿದ್ದಾರೆ. ಸರ್ಕಾರದ ಅದೇಶ ಬರುವವರೆಗೂ ಜನರು ಕಾಯಲೇಬೇಕು ಎಂದು ಇಲಾಖೆಯ ಆಧಿಕಾರಿಗಳು ತಿಳಿಸಿದ್ದಾರೆ.