Tag: 2002 Gujarat riots

  • L2: Empuraan | ವಿವಾದ ಸುಳಿಯಲ್ಲಿ ಬ್ಲಾಕ್‌ಬಸ್ಟರ್‌ ಸಿನಿಮಾ – 17 ದೃಶ್ಯಗಳಿಗೆ ಕತ್ತರಿ

    L2: Empuraan | ವಿವಾದ ಸುಳಿಯಲ್ಲಿ ಬ್ಲಾಕ್‌ಬಸ್ಟರ್‌ ಸಿನಿಮಾ – 17 ದೃಶ್ಯಗಳಿಗೆ ಕತ್ತರಿ

    ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ (Mohan Lal) ಅಭಿನಯದ ಎಲ್‌2: ಎಂಪೂರನ್‌ (L2: Empuraan) ಸಿನಿಮಾ ತೆರೆ ಕಂಡ ಮೂರೇ ದಿನಕ್ಕೆ ವಿವಾದದ ಸುಳಿಯಲ್ಲಿ ಸಿಲುಕಿದೆ. ಎರಡೇ ದಿನದಲ್ಲಿ 100 ಕೋಟಿ ಕ್ಲಬ್‌ ಸೇರಿರುವ ಈ ಸಿನಿಮಾ 3ನೇ ದಿನ ವಿವಾದಕ್ಕೆ ಸಿಲುಕಿದೆ. ಹೀಗಾಗಿ ಸಿನಿಮಾದ 17 ದೃಶ್ಯಗಳಿಗೆ ಕತ್ತರಿ ಹಾಕಲು ಚಿತ್ರತಂಡ ನಿರ್ಧರಿಸಿದೆ.

    ಹೌದು. ಮಾರ್ಚ್‌ 27ರಂದು ತೆರೆ ಕಂಡ ಮೋಹನ್‌ ಲಾಲ್‌ ಅಭಿನಯದ ಎಲ್‌2: ಎಂಪೂರನ್‌ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾದಲ್ಲಿ 2002ರ ಗುಜರಾತ್‌ ಗಲಭೆಯ ದೃಶ್ಯಗಳನ್ನು ತಿರುಚಿ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಸಿನಿಮಾದ 17 ದೃಶ್ಯಗಳಿಗೆ ಕತ್ತರಿ ಹಾಕಲು ಚಿತ್ರತಂಡ ನಿರ್ಧರಿಸಿದೆ. ಇಂದು ಯುಗಾದಿ ಹಬ್ಬ, ನಾಳೆ ರಂಜಾನ್‌ ಹಬ್ಬದ ಹಿನ್ನೆಲೆ ರಜೆ ಇರುವ ಕಾರಣ, ಹೊಸ ಆವೃತ್ತಿಯನ್ನು ಮಂಗಳವಾರ ಸೆನ್ಸಾರ್‌ ಮಂಡಳಿಗೆ ನೀಡಲಾಗುವುದು. ಬುಧವಾರದ ಒಳಗೆ ಎಲ್ಲ ಚಿತ್ರಮಂದಿರಗಳಲ್ಲಿ ಹೊಸ ಆವೃತ್ತಿ ತಲುಪಲಿದೆ ಎಂದು ಚಿತ್ರತಂಡ ಹೇಳಿದೆ. ಇದನ್ನೂ ಓದಿ: L2 Empuraan: ರಿಲೀಸ್ ಆದ ಎರಡೇ ದಿನಕ್ಕೆ 100 ಕೋಟಿ ಬಾಚಿದ ಮೋಹನ್‌ ಲಾಲ್‌

    mohan lal

    ‌ಚಿತ್ರದಲ್ಲಿರುವ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಗಲಭೆಗಳನ್ನು ಬಿಂಬಿಸುವ ಕೆಲವು ದೃಶ್ಯಗಳಿಗೆ ಕತ್ತರಿ ಹಾಕಲಾಗುವುದು, ವಿರೋಧಿ ಬಾಬಾ ಬಜರಂಗಿ ಹೆಸರನ್ನು ಬದಲಾಯಿಸಲಾಗುವುದು ಮತ್ತು ಜೊತೆಗೆ ಕೆಲವು ಸಂಭಾಷಣೆಗಳನ್ನು ಮ್ಯೂಟ್ ಮಾಡಲಾಗುವುದು ಚಿತ್ರತಂಡ ಪ್ರಕಟಿಸಿದೆ. ನಿರ್ದೇಶಕ, ನಟ-ನಿರ್ಮಾಪಕ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಸಹ ಇದಕ್ಕೆ ಒಪ್ಪಿದ್ದಾರೆ ಅಂತ ತಿಳಿದುಬಂದಿದೆ. ಇದನ್ನೂ ಓದಿ: ಮಚ್ಚು ಹಿಡಿದು ರೀಲ್ಸ್ ಮಾಡಬಾರದಿತ್ತು, ನನ್ನಿಂದ ತಪ್ಪಾಗಿದೆ: ವಿನಯ್ ಫಸ್ಟ್ ರಿಯಾಕ್ಷನ್

    MOHANLAL

    ಕೇಂದ್ರ ಸಚಿವ ಭಾರೀ ನಿರಾಸೆ:
    ಸದ್ಯ ಚಿತ್ರತಂಡದ ವಿರುದ್ಧ ಬಿಜೆಪಿ ಪ್ರತಿಭಟನೆ ಕೈಬಿಟ್ಟಿದ್ದರೂ ಬಿಜೆಪಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಭಾರೀ ನಿರಾಸೆ ಹೊರಹಾಕಿದ್ದಾರೆ. ಇದನ್ನೂ ಓದಿ: ನಾನು ಸಿನಿಮಾ ಸಕ್ಸಸ್‌ಗೆ ಪ್ರಾರ್ಥಿಸಲ್ಲ: ಸೀಕ್ರೆಟ್ ಬಿಚ್ಚಿಟ್ಟ ಸಲ್ಮಾನ್ ಖಾನ್

    mohan lal 1

    ನಾನು ಲೂಸಿಫರ್ ಚಿತ್ರ ನೋಡಿದ್ದೇನೆ ಮತ್ತು ಅದನ್ನು ಇಷ್ಟಪಟ್ಟಿದ್ದೇನೆ. ನಾನು ಎಂಪುರಾನ್ ಚಿತ್ರವನ್ನು ಲೂಸಿಫರ್‌ನ ಮುಂದುವರಿದ ಭಾಗ ಎಂದು ಕೇಳಿದಾಗ ನೋಡುತ್ತೇನೆ ಎಂದು ಹೇಳಿದ್ದೆ. ಆದ್ರೆ ಈಗ ಚಿತ್ರದ ನಿರ್ಮಾಪಕರು ಸ್ವತಃ ಚಲನಚಿತ್ರದಲ್ಲಿ 17 ತಿದ್ದುಪಡಿಗಳನ್ನು ಮಾಡಿದ್ದಾರೆ ಮತ್ತು ಚಲನಚಿತ್ರವನ್ನು ಮರು-ಸೆನ್ಸಾರ್ಶಿಪ್ ಮಾಡಲಾಗುತ್ತಿದೆ ಎಂದು ನನಗೆ ತಿಳಿದಿದೆ. ಮೋಹನ್‌ಲಾಲ್ ಅಭಿಮಾನಿಗಳು ಮತ್ತು ಇತರ ವೀಕ್ಷಕರನ್ನು ತೊಂದರೆಗೀಡುಮಾಡುವ ವಿಷಯಗಳು ಚಿತ್ರದಲ್ಲಿವೆ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಚಲನಚಿತ್ರವನ್ನು ಚಲನಚಿತ್ರವಾಗಿ ನೋಡಬೇಕು. ಅದನ್ನು ಇತಿಹಾಸವಾಗಿ ನೋಡಲಾಗುವುದಿಲ್ಲ. ಅಲ್ಲದೇ, ಸತ್ಯವನ್ನು ತಿರುಚಿ ಕಥೆಯನ್ನು ನಿರ್ಮಿಸಲು ಪ್ರಯತ್ನಿಸುವ ಯಾವುದೇ ಚಲನಚಿತ್ರವು ವಿಫಲಗೊಳ್ಳುತ್ತದೆ. ಹಾಗಾಗಿ, ನಾನು ಲೂಸಿಫರ್‌ನ ಈ ಸೀಕ್ವೆಲ್ ಅನ್ನು ನೋಡುತ್ತೇನೆಯೇ? ಖಂಡಿತಾ ಇಲ್ಲ. ಈ ರೀತಿಯ ಚಲನಚಿತ್ರ ನಿರ್ಮಾಣದಿಂದ ನಾನು ನಿರಾಶೆಗೊಂಡಿದ್ದೇನೆ ಎಂದು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

  • 2002 ರ ಗುಜರಾತ್‌ ಗಲಭೆ ಪ್ರಕರಣ – ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಜಾಮೀನು

    2002 ರ ಗುಜರಾತ್‌ ಗಲಭೆ ಪ್ರಕರಣ – ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಜಾಮೀನು

    ನವದೆಹಲಿ: 2002 ರ ಗುಜರಾತ್‌ ಗಲಭೆ (2002 Gujarat Riots) ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರ್ತಿ ಹಾಗೂ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ (Teesta Setalvad) ಅವರಿಗೆ ಸುಪ್ರೀಂ ಕೋರ್ಟ್‌ (Supreme Court) ಬುಧವಾರ ಜಾಮೀನು ನೀಡಿದೆ.

    ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿ.ಆರ್‌. ಗವಾಯಿ, ಎ.ಎಸ್‌. ಬೋಪಣ್ಣ ಮತ್ತು ದೀಪಂಕರ್‌ ದತ್ತಾ ಅವರಿದ್ದ ತ್ರಿಸದಸ್ಯ ಪೀಠವು, ತೀಸ್ತಾ ಸೆಟಲ್ವಾಡ್‌ ಅವರಿಗೆ ಜಾಮೀನು ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ ಆದೇಶವನ್ನು ರದ್ದುಗೊಳಿಸಿದೆ. ಅಲ್ಲದೇ ತೀಸ್ತಾ ಅವರಿಗೆ ಜಾಮೀನು ನೀಡಿದೆ. ಇದನ್ನೂ ಓದಿ: ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ಜಾಮೀನು ಮಂಜೂರು

    ಸೆಟಲ್ವಾಡ್‌ ವಿರುದ್ಧ ಚಾರ್ಜ್‌ಸೀಟ್‌ ಸಲ್ಲಿಸಿರುವುದನ್ನು ನ್ಯಾಯಾಲಯ ಅವಲೋಕಿಸಿದೆ. ಕಸ್ಟಡಿ ವಿಚಾರಣೆಯ ಅಗತ್ಯವನ್ನು ತೆಗೆದುಹಾಕಲಾಗಿದೆ. ಆದಾಗ್ಯೂ, ಪ್ರಕರಣದಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಸೆಟಲ್ವಾಡ್‌ ಅವರಿಗೆ ಸುಪ್ರೀಂ ಕೋರ್ಟ್‌ ಷರತ್ತು ವಿಧಿಸಿ ಜಾಮೀನು ನೀಡಿದೆ.

    ಗುಜರಾತ್‌ ಗಲಭೆ ಪ್ರಕರಣದಲ್ಲಿ ನಿರಪರಾಧಿಗಳಿಗೆ ಶಿಕ್ಷೆಯಾಗಲು ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ತೀಸ್ತಾರನ್ನು ಗುಜರಾತ್‌ ಪೊಲೀಸರು ಬಂಧಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಸುಪ್ರೀಂ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಸಿಕ್ಕಿತ್ತು. ಇದನ್ನೂ ಓದಿ: ಅಹ್ಮದ್ ಪಟೇಲ್ ಸೂಚನೆ ಮೇರೆಗೆ ಮೋದಿ ವಿರುದ್ಧ ತೀಸ್ತಾ ಸೆಟಲ್ವಾಡ್ ಸಂಚು: ತನಿಖಾ ತಂಡ

    ಜಾಮೀನು ಅವಧಿ ಮುಗಿದಿದ್ದರಿಂದ ನ್ಯಾಯಾಲಯಕ್ಕೆ ಶರಣಾಗುವಂತೆ ಗುಜರಾತ್‌ ಹೈಕೋರ್ಟ್‌ ಜು. 1 ರಂದು ಸೂಚಿಸಿತ್ತು. ಇದನ್ನು ಪ್ರಶ್ನಿಸಿ ತೀಸ್ತಾ ಅವರು ಮತ್ತೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗುಜರಾತ್ ಗಲಭೆ- ಸಿಎಂ ಮೋದಿಗೆ ನಾನಾವತಿ ಆಯೋಗದಿಂದ ಕ್ಲೀನ್ ಚಿಟ್

    ಗುಜರಾತ್ ಗಲಭೆ- ಸಿಎಂ ಮೋದಿಗೆ ನಾನಾವತಿ ಆಯೋಗದಿಂದ ಕ್ಲೀನ್ ಚಿಟ್

    ಅಲಹಾಬಾದ್: ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನಾವತಿ ಆಯೋಗ ಅಂದಿನ ಸಿಎಂ ನರೇಂದ್ರ ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿದೆ.

    2002ರ ಗಲಭೆ ಪ್ರಕರಣ ಸಂಬಂಧ ನಾನಾವತಿ ಆಯೋಗದ ವರದಿ 5 ವರ್ಷದ ಹಿಂದೆ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದು ಇಂದು ಗುಜರಾತ್ ಗೃಹ ಸಚಿವ ಪ್ರದೀಪ್ ಸಿನ್ಹಾ ಜಡೇಜಾ ಅವರು ರಾಜ್ಯ ವಿಧಾನಸಭೆಯಲ್ಲಿ ಮಂಡನೆ ಮಾಡಿದ್ದಾರೆ.

    ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ. ಇದು ಪೂರ್ವನಿಯೋಜಿತ ದಂಗೆಯಲ್ಲ. ಈ ದಂಗೆಯನ್ನು ನಿಯಂತ್ರಿಸಲು ಮೋದಿಯವರು ಪ್ರಯತ್ನ ನಡೆಸಿದ್ದರು. ದಂಗೆ ಕುರಿತು ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಸುಳ್ಳು ಹೇಳಿದ್ದಾರೆ ಎಂದು 1500 ಪುಟಗಳ ವರದಿಯಲ್ಲಿ ತಿಳಿಸಿದೆ.

    ಪೊಲೀಸರಿಗಿಂತಲೂ ಪ್ರತಿಭಟನಾಕಾರರ ಸಂಖ್ಯೆ ಜಾಸ್ತಿ ಇತ್ತು. ಇದರ ಜೊತೆಗೆ ಪೊಲೀಸರು ಶಸ್ತ್ರಸಜ್ಜಿತರಾಗಿ ಇರಲಿಲ್ಲ. ಈ ಕಾರಣದಿಂದ ಕೆಲವೊಂದು ಪ್ರದೇಶದಲ್ಲಿ ಪೊಲೀಸರು ಗಲಭೆಯನ್ನು ಸರಿಯಾಗಿ ನಿಯಂತ್ರಿಸುವಲ್ಲಿ ವಿಫಲರಾಗಿದ್ದರು ಎಂದು ಹೇಳಿದೆ.

    ಏನಿದು ಪ್ರಕರಣ?
    2002ರ ಫೆಬ್ರವರಿ 22 ರಂದು ಗೋದ್ರಾದಲ್ಲಿ ಸಬರಮತಿ ಎಕ್ಸ್ ಪ್ರೆಸ್ ರೈಲಿನ ಎಸ್6 ಬೋಗಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಪರಿಣಾಮ ಆಯೋಧ್ಯೆಯಿಂದ ಗುಜರಾತಿಗೆ ಮರಳುತ್ತಿದ್ದ 59 ಕರಸೇವಕರು ಸಜೀವವಾಗಿ ದಹನವಾಗಿದ್ದರು. ಈ ಹತ್ಯಾಕಾಂಡದ ನಂತರ ಗುಜರಾತ್‍ನ ಅನೇಕ ಕಡೆಗಳಲ್ಲಿ ಕೋಮುಗಲಭೆ ಸಂಭವಿಸಿ 1,200 ಕ್ಕೂ ಹೆಚ್ಚು ಮಂದಿಯ ಹತ್ಯೆಯಾಗಿತ್ತು.

    ಗಲಭೆ ಪ್ರಕರಣ ಕುರಿತು 2002ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ನಿವೃತ್ತ ನ್ಯಾ. ನಾನಾವತಿ ಮತ್ತು ಅಕ್ಷಯ್ ಮೆಹ್ತಾ ನೇತೃತ್ವದಲ್ಲಿ ಆಯೋಗವನ್ನು ರಚಿಸಿತ್ತು. ಗುಜರಾತ್ ಸರ್ಕಾರ ಈ ಪ್ರಕರಣದ ತನಿಖೆಗಾಗಿ ರಚಿಸಿದ್ದ ನಾನಾವತಿ ಆಯೋಗದ ವರದಿ ಮೊದಲ ಬಾರಿಗೆ 2008ರಲ್ಲಿ ಮಂಡನೆಯಾಗಿತ್ತು. ಸಬರಮತಿ ಎಕ್ಸ್‍ಪ್ರೆಸ್ ರೈಲಿನ ಎಸ್-6 ಬೋಗಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಲ್ಲ. ಪೆಟ್ರೋಲ್ ಸುರಿದು ಬೋಗಿಗೆ ಬೆಂಕಿ ಹಚ್ಚಲಾಗಿದೆ. ಇದೊಂದು ಯೋಜಿತ ಪಿತೂರಿಯಾಗಿದ್ದು, ಗೋದ್ರಾ ರೈಲ್ವೇ ಸಮೀಪದಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ಎಂದು ವರದಿಯನ್ನು ಸಲ್ಲಿಸಿತ್ತು. 2014ರಲ್ಲಿ ಆನಂದಿ ಬೆನ್ ನೇತೃತ್ವದ ಸರ್ಕಾರದ ಮುಂದೆ ಅಂತಿಮ ವರದಿಯನ್ನು ಸಲ್ಲಿಸಿತ್ತು.