Tag: 2002 riot

  • ಗ್ಯಾಂಗ್ ರೇಪ್ ಸಂತ್ರಸ್ತೆಗೆ ಮನೆ, 50 ಲಕ್ಷ ಕೊಡಿ – ಗುಜರಾತ್ ಸರ್ಕಾರಕ್ಕೆ ಸುಪ್ರೀಂ ತಾಕೀತು

    ಗ್ಯಾಂಗ್ ರೇಪ್ ಸಂತ್ರಸ್ತೆಗೆ ಮನೆ, 50 ಲಕ್ಷ ಕೊಡಿ – ಗುಜರಾತ್ ಸರ್ಕಾರಕ್ಕೆ ಸುಪ್ರೀಂ ತಾಕೀತು

    ನವದೆಹಲಿ: 2002ರಲ್ಲಿ ನಡೆದ ಹಿಂಸಾಚಾರದ ವೇಳೆ ಗ್ಯಾಂಗ್ ರೇಪ್‍ಗೆ ಒಳಗಾಗಿದ್ದ ಸಂತ್ರಸ್ತೆ ಬಿಲ್ಕಿಸ್ ಬಾನೊಗೆ ಉದ್ಯೋಗ, ಮನೆ ಹಾಗೂ 50 ಲಕ್ಷ ರೂ. ಹಣವನ್ನು ಪರಿಹಾರದ ರೂಪದಲ್ಲಿ ನೀಡುವಂತೆ ಸುಪ್ರೀಂಕೋರ್ಟ್ ಗುಜರಾತ್ ಸರ್ಕಾರಕ್ಕೆ ಆದೇಶಿಸಿದೆ.

    ರಾಧಿಕ್ ಪುರ ಗ್ರಾಮದಲ್ಲಿ 2002ರ ಮಾರ್ಚ್ ನಲ್ಲಿ ಗೋಧ್ರಾ ಗಲಭೆಯ ಬಳಿಕ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನೊ ಮೇಲೆ 11 ಮಂದಿ ದುಷ್ಕರ್ಮಿಗಳು ಗ್ಯಾಂಗ್ ರೇಪ್ ಮಾಡಿದ್ದರು. ಅಲ್ಲದೆ ಆಕೆಯ ಕುಟುಂಬದ 7 ಮಂದಿ ಸದಸ್ಯರನ್ನು ಹತ್ಯೆಗೈದಿದ್ದರು.

    ಇಂದು ಕೋರ್ಟ್ ಗುಜರಾತ್ ಸರ್ಕಾರಕ್ಕೆ ಸಂತ್ರಸ್ತೆಯಾಗಿರುವ ಬಿಲ್ಕಿಸ್ ಬಾನೋಗೆ 50 ಲಕ್ಷ ರೂ. ಪರಿಹಾರ, ಉದ್ಯೋಗ ಮತ್ತು ಮನೆಯನ್ನು ನೀಡುವಂತೆ ಆದೇಶಿಸಿದೆ.

    ಈ ಪ್ರಕರಣದ ವಿಚಾಣೆ ನಡೆಸಿದ್ದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ವಿಶೇಷ ನ್ಯಾಯಪೀಠ ಕಳೆದ ತಿಂಗಳು ಗುಜರಾತ್ ಸರ್ಕಾರಕ್ಕೆ, ಬಾಂಬೆ ಹೈಕೋರ್ಟ್ ತಪ್ಪಿತಸ್ಥರು ಎಂದು ಘೋಷಿಸಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿತ್ತು. ಆದಾದ ಬಳಿಕ ಗುಜರಾತ್ ಸರ್ಕಾರ ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ನೀಡಲು ಮುಂದಾಗಿದ್ದಾದ ಬಿಲ್ಕಿಸ್ ಬಾನೊ ನಿರಾಕರಿಸಿದ್ದರು.

    2008ರಲ್ಲಿ ಪ್ರಕರಣದ ವಿಚಾರಣೆ ನಡೆಸಿದ ವಿಚಾರಣಾ ನ್ಯಾಯಾಲಯವೂ ಕೃತ್ಯದಲ್ಲಿ ಶಾಮೀಲಾಗಿದ್ದ 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ, ಕೃತ್ಯದಲ್ಲಿ ಕೈಜೋಡಿಸಿದ ಆರೋಪ ಹೊಂದಿದ್ದ ಐವರು ಪೊಲೀಸ್ ಅಧಿಕಾರಿಗಳು ಹಾಗೂ ಇಬ್ಬರು ಸರ್ಕಾರಿ ವೈದ್ಯರನ್ನು ಬಿಡುಗಡೆಗೊಳಿಸಿತ್ತು. ಈ ಹಿಂದಿನ ವಿಚಾರಣೆ ವೇಳೆ ನ್ಯಾಯಪೀಠ ಕೃತ್ಯದಲ್ಲಿ ಭಾಗಿಯಾಗಿದ್ದ ಐಪಿಎಸ್ ಅಧಿಕಾರಿಗಳನ್ನು ಹಿಂಬಡ್ತಿ ಮಾಡುವಂತೆ ಆದೇಶ ಹೊರಡಿಸಿತ್ತು.