Tag: 2024 lok sabha election

  • ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ – ವಯನಾಡ್‌ನಿಂದಲೇ ಸ್ಪರ್ಧೆ ಯಾಕೆ?

    ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ – ವಯನಾಡ್‌ನಿಂದಲೇ ಸ್ಪರ್ಧೆ ಯಾಕೆ?

    ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್‌ನ ಯುವರಾಜ ರಾಹುಲ್ ಗಾಂಧಿ (Rahul Gandhi) ಕೇರಳದ ವಯನಾಡ್‌ನಿಂದ ಎರಡನೇ ಬಾರಿಗೆ ಸ್ಪರ್ಧೆಗಿಳಿದಿದ್ದಾರೆ. ಕಳೆದ ಬಾರಿ ನಾಲ್ಕು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದ ಅವರು ಈಗ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದು ಇಂದು ಚುನಾವಣೆ ಸ್ಪರ್ಧೆಗೆ ನಾಮಪತ್ರ ಸಲ್ಲಿಸಿದ್ದಾರೆ.

    ನಾಮಪತ್ರ ಸಲ್ಲಿಕೆಗೂ ಮುನ್ನ ಕಾರ್ಯಕರ್ತರು, ಬೆಂಬಲಿಗರ ಸಮೂಹದಲ್ಲಿ ವಯನಾಡಿನ ಕಲ್ಪೆಟ್ಟಾದಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ, ಕೆಸಿ ವೇಣುಗೋಪಾಲ್, ಕೇರಳದ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಹಂಗಾಮಿ ಅಧ್ಯಕ್ಷ ಎಂಎಂ ಹಾಸನ್, ಪಕ್ಷದ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಸೇರಿದಂತೆ ಇತರ ರಾಜ್ಯ ನಾಯಕರು ಸಾಥ್ ನೀಡಿದರು. ಇದನ್ನೂ ಓದಿ: ಇವಿಎಂ ಜೊತೆಗೆ ವಿವಿಪ್ಯಾಟ್ ಮತ ಎಣಿಕೆಗೆ ಆಗ್ರಹ – ವಿಚಾರಣೆಗೆ ಒಪ್ಪಿದ ಸುಪ್ರೀಂ

    ಬೃಹತ್ ರೋಡ್ ಶೋ ಉದ್ದೇಶಿಸಿ ಮಾತನಾಡಿದ ಅವರು ಸಂಸತ್‌ನಲ್ಲಿ ವಯನಾಡ್ ಪ್ರತಿನಿಧಿಸುವುದು ಗೌರವ ತಂದಿದೆ. ನಾನು ಚುನಾಯಿತ ಪ್ರತಿನಿಧಿಯಲ್ಲ. ನಾನು ನಿಮ್ಮ ಕುಟುಂಬ ಸದಸ್ಯನಂತೆ. ನನ್ನ ಸಹೋದರಿ ಪ್ರಿಯಾಂಕಾ ಗಾಂಧಿಯನ್ನು ಹೇಗೆ ನೋಡುತ್ತೇನೆ ಹಾಗೇಯೇ ನಾನು ನಿಮ್ಮನ್ನು ನೋಡುತ್ತೇನೆ. ಹೀಗಾಗೀ ಕ್ಷೇತ್ರದಲ್ಲಿ ತಂದೆ-ತಾಯಿ ಸಹೋದರಿಯರಿದ್ದಾರೆ ಎಂದರು.

    ಮುಂದುವರಿದು, ಕ್ಷೇತ್ರದ ಜನತೆ ಎದುರಿಸುತ್ತಿರುವ ಸಮಸ್ಯೆಗಳನ್ನು ರಾಷ್ಟ್ರ ಹಾಗೂ ವಿಶ್ವದ ಗಮನಕ್ಕೆ ತರಲು ನಾನು ಸದಾ ಸಿದ್ಧ. ಮನುಷ್ಯ-ಪ್ರಾಣಿ ಸಂಘರ್ಷ, ವೈದ್ಯಕೀಯ ಕಾಲೇಜು ಸಮಸ್ಯೆಗಳು ಈ ಹೋರಾಟದಲ್ಲಿ ನಾನು ವಯನಾಡು ಜನರೊಂದಿಗೆ ನಿಲ್ಲುತ್ತೇನೆ. ನಾವು ವೈದ್ಯಕೀಯ ಕಾಲೇಜಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದೇವೆ. ನಾನು ಸಿಎಂಗೆ ಪತ್ರ ಬರೆದಿದ್ದೇನೆ. ಆದರೆ, ದುರದೃಷ್ಟವಶಾತ್ ಅವರು ಮುಂದೆ ಹೋಗಲಿಲ್ಲ. ಇದನ್ನೂ ಓದಿ: ಬರ ಪರಿಹಾರ; ಕೇಂದ್ರ V/S ಕರ್ನಾಟಕ ಸರ್ಕಾರ – ರಾಜ್ಯ ‘ಸುಪ್ರೀಂ’ ಮೆಟ್ಟಿಲೇರಿದ್ಯಾಕೆ?

    ದೆಹಲಿಯಲ್ಲಿ ನಮ್ಮ ಸರ್ಕಾರವಿದ್ದರೆ ಮತ್ತು ಕೇರಳದಲ್ಲಿ ನಮ್ಮ ಸರ್ಕಾರ ಬಂದಾಗ, ಇವೆರಡನ್ನೂ ನಾವು ಮಾಡುತ್ತೇವೆ. ನಾವು ಈ ಸಮಸ್ಯೆಗಳನ್ನು ಪರಿಹರಿಸುತ್ತೇವೆ ಎಂದು ನನಗೆ ಸಂಪೂರ್ಣವಾಗಿ ಭರವಸೆ ಇದೆ. ನಾನು ಕೇವಲ ರಾಜಕೀಯ ಭಾಷಣ ಮಾಡುತ್ತಿಲ್ಲ. ಪಕ್ಷಗಳು, ಸಮುದಾಯಗಳು, ವಯಸ್ಸಿನ ಹೊರತಾಗಿಯೂ, ವಯನಾಡಿನ ಪ್ರತಿಯೊಬ್ಬ ವ್ಯಕ್ತಿಯೂ ನನಗೆ ಪ್ರೀತಿ, ಮಮತೆ, ಗೌರವವನ್ನು ನೀಡಿದ್ದಾರೆ. ನನ್ನನ್ನು ಅವರವರಂತೆ ನೋಡಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.

    ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಅಭ್ಯರ್ಥಿ ಅನ್ನಿ ರಾಜಾ ಅವರು ಇಲ್ಲಿ ಕಾಂಗ್ರೆಸ್ ಪಕ್ಷದ ಹಾಲಿ ಸಂಸದ ರಾಹುಲ್ ಗಾಂಧಿ ವಿರುದ್ಧ ವಯನಾಡ್‌ಗೆ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ತನ್ನ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಅವರನ್ನು ವಯನಾಡಿನಿಂದ ಕಣಕ್ಕಿಳಿಸಿದೆ. ಇದನ್ನೂ ಓದಿ: ಜೈಲು ಸೇರಿದ ಕೇಜ್ರಿವಾಲ್‌ 4.5 ಕೆಜಿ ಕಳೆದುಕೊಂಡಿದ್ದಾರೆ: ಆಪ್‌ ಗಂಭೀರ ಆರೋಪ

    ರಾಹುಲ್ ಗಾಂಧಿಗೆ ವಯನಾಡು ಯಾಕೆ ಭದ್ರ
    ಉತ್ತರ ಪ್ರದೇಶದ ಅಮೇಥಿಯಿಂದ ಸ್ಪರ್ಧಿಸುತ್ತಿದ್ದ ರಾಹುಲ್ ಗಾಂಧಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಅಮೇಥಿಯಿಂದಲೂ ಸ್ಪರ್ಧಿಸಲು ನಿರ್ಧರಿಸಿದರು. ಅಮೇಥಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ತೀವ್ರ ಪೈಪೋಟಿ ಹಿನ್ನಲೆ ಕೇರಳದ ವಯನಾಡಿನಿಂತಹ ಭದ್ರ ಕ್ಷೇತ್ರವನ್ನು ರಾಹುಲ್ ಗಾಂಧಿ ಹುಡುಕಿಕೊಂಡರು.

    ವಯನಾಡಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ಪ್ರಾಬಲ್ಯ ಹೊಂದಿದೆ. ವಯನಾಡಿನ ಜನಸಂಖ್ಯೆಯಲ್ಲಿ ಮುಸ್ಲಿಮರು 32% ಮತ್ತು ಕ್ರಿಶ್ಚಿಯನ್ನರು 13% ರಷ್ಟಿದ್ದಾರೆ. ಈ ಕಾರಣಕ್ಕೆ ಕಳೆದ ಬಾರಿ ನಾಲ್ಕು ಲಕ್ಷ ಅಧಿಕ ಮತಗಳ ಅಂತರದಲ್ಲಿ ರಾಹುಲ್ ಗಾಂಧಿ ಗೆದ್ದು ಬೀಗಿದ್ದರು. ಇದನ್ನೂ ಓದಿ: ಮಹುವಾ ಮೊಯಿತ್ರಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

    ಆದರೆ ಈ ಬಾರಿ ಪರಿಸ್ಥಿತಿ ಕಳೆದ ಬಾರಿಯಂತಿಲ್ಲ. ಸಿಪಿಐ ನಿಂದ ಸ್ಪರ್ಧಿಸಿರುವ ಅನ್ನಿ ರಾಜಾ ಜನಪ್ರಿಯ ನಾಯಕಿಯಾಗಿದ್ದು ತೀವ್ರ ಪೈಪೊಟಿ ಕೊಡಲಿದ್ದಾರೆ. 6%-9% ಗೆ ಮತ ಪ್ರಮಾನ ಏರಿಸಿಕೊಂಡಿರುವ ಬಿಜೆಪಿ ಕೂಡಾ ಒಂದಷ್ಟು ಸೆಳೆಯುವ ಪ್ರಯತ್ನ ನಡೆಸಿದೆ. ಈ ನಡುವೆ ರಾಹುಲ್ ಗಾಂಧಿ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರಚಾರ ಮಾಡಿದ್ದಾರೆ.

  • ಲೋಕಸಭಾ ಚುನಾವಣೆಗೂ ಮುನ್ನ I.N.D.I.A ಒಕ್ಕೂಟದಲ್ಲಿ ಒಡಕು – ಚೂರನ್ನು ಮತ್ತೆ ಜೋಡಿಸುತ್ತಾ ಕಾಂಗ್ರೆಸ್‌?

    ಲೋಕಸಭಾ ಚುನಾವಣೆಗೂ ಮುನ್ನ I.N.D.I.A ಒಕ್ಕೂಟದಲ್ಲಿ ಒಡಕು – ಚೂರನ್ನು ಮತ್ತೆ ಜೋಡಿಸುತ್ತಾ ಕಾಂಗ್ರೆಸ್‌?

    ಲೋಕಸಭಾ ಚುನಾವಣೆಗೆ (General Elections 2024) ವೇದಿಕೆ ಸಿದ್ಧವಾಗಿದೆ. ಅಖಾಡದಲ್ಲಿ ಸೆಣಸಾಡಲು ಪೈಲ್ವಾನರು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಒಂದೆಡೆ ಆಡಳಿತಾರೂಢ ಬಿಜೆಪಿ (BJP) ನೇತೃತ್ವದ ಎನ್‌ಡಿಎ ಒಕ್ಕೂಟ (NDA) ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ. ಮತ್ತೊಂದೆಡೆ ಎನ್‌ಡಿಎ ಒಕ್ಕೂಟವನ್ನು ಮಟ್ಟಹಾಕಲು ಒಂದಾಗಿದ್ದ ಯುಪಿಎ ನೇತೃತ್ವದ ಇಂಡಿಯಾ ಮೈತ್ರಿಕೂಟ ಈಗ ನಾಲ್ಕು ದಿಕ್ಕಿಗೂ ಹರಿದು ಹಂಚಿಹೋಗಿದೆ. ಒಡೆದ ಮಡಿಕೆಯಂತಾಗಿರುವ ಮೈತ್ರಿಕೂಟವನ್ನು ಮತ್ತೆ ಜೋಡಿಸುತ್ತಾ ಕಾಂಗ್ರೆಸ್?

    ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ ಮತ್ತೊಂದು ಗೆಲುವು ಸಾಧಿಸುವುದನ್ನು ತಡೆಯಲು ರಚಿಸಲಾಗಿದ್ದ ‘ಇಂಡಿಯಾ’ ಬಣವು (INDIA Alliance) ಶಿಥಿಲಗೊಳ್ಳುತ್ತಿರುವಂತೆ ತೋರುತ್ತಿದೆ. ಮೈತ್ರಿಕೂಟದ ಭಾಗವಾಗಿದ್ದ ತೃಣಮೂಲ ಕಾಂಗ್ರೆಸ್ ಸಮಿತಿ (ಟಿಎಂಸಿ), ಜೆಡಿಯು, ಆರ್‌ಎಲ್‌ಡಿ ಪಕ್ಷಗಳು ಸೀಟು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್‌ಗೆ ನೀಡಿದ್ದ ತಮ್ಮ ಬೆಂಬಲವನ್ನು ಹಿಂತೆಗೆದುಕೊಂಡಿವೆ. ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿಯೇ ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿದ್ದ ಎಸ್‌ಪಿ ಮತ್ತು ಎಎಪಿ ಸಂಧಾನ ಮಾತುಕತೆ ಬಳಿಕ ಮತ್ತೆ ಮೈತ್ರಿಕೂಟಕ್ಕೆ ವಾಪಸ್ ಆಗಿವೆ. ಮೈತ್ರಿಕೂಟದಲ್ಲಿ ತಲೆದೋರಿರುವ ಭಿನ್ನಾಭಿಪ್ರಾಯವನ್ನು ಕಾಂಗ್ರೆಸ್‌ ಹೇಗೆ ನಿಭಾಯಿಸಲಿದೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ. ಇದನ್ನೂ ಓದಿ: I.N.D.I.A ಮೈತ್ರಿಕೂಟದ ಜವಾಬ್ದಾರಿ ಮಲ್ಲಿಕಾರ್ಜುನ್‌ ಖರ್ಗೆ ಹೆಗಲಿಗೆ

    ಕಮಲ ಮುಡಿದ ಜೆಡಿಯು!
    ವಿಪಕ್ಷಗಳ ಮೈತ್ರಿಕೂಟಕ್ಕೆ ಐಎನ್‌ಡಿಐಎ ಹೆಸರು ಸೇರಿದಂತೆ ಹಲವು ವಿಚಾರಗಳಿಗಾಗಿ ಮುನಿಸಿಕೊಂಡು ಬಿಹಾರ ಸಿಎಂ ನಿತೀಶ್ ಕುಮಾರ್ ಮಹಾಘಟಬಂಧನದಿಂದ ಹೊರಬಂದರು. ನಂತರ ಮಹಾಘಟಬಂಧನ ಜೊತೆಗಿನ ಮೈತ್ರಿ ತೊರೆದು ಬಿಜೆಪಿ ಸೇರಿ ಬಿಹಾರದಲ್ಲಿ ಸರ್ಕಾರ ರಚಿಸಿದರು. ಇಂಡಿಯಾ ಮೈತ್ರಿಕೂಟದ ಕಥೆ ಈಗ ಮುಗಿದ ಅಧ್ಯಾಯ ಎಂಬ ಮಾತುಗಳನ್ನು ನಿತೀಶ್ ಕುಮಾರ್ ಆಡುತ್ತಿದ್ದಾರೆ. ಇಂಡಿಯಾ ಒಕ್ಕೂಟದ ಅವಿಭಾಜ್ಯ ಅಂಗವೇ ಆಗಿದ್ದ ಜೆಡಿಯು ಇನ್ಮುಂದೆ ಮೈತ್ರಿಯ ಭಾಗವಾಗಿಲ್ಲ. ಅಲ್ಲಿ ಎಲ್ಲವೂ ಸರಿಯಿಲ್ಲ ಎಂದು ನಿತೀಶ್ ಕುಮಾರ್ ಮೈತ್ರಿಕೂಟದಿಂದ ಹೊರಬರುತ್ತಿದ್ದಂತೆ ಅನೇಕ ರಾಜಕೀಯ ಬೆಳವಣಿಗೆಗಳು ನಡೆದವು. ಇದು ಇಂಡಿಯಾ ಬಣಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿತು.

    ಟಿಎಂಸಿ ಜೊತೆಗಿನ ಮೈತ್ರಿ ಏನಾಯ್ತು?
    ಮೈತ್ರಿಕೂಟದಿಂದ ಜೆಡಿಯು ಹೊರಬರುತ್ತಿದ್ದಂತೆ ಇತ್ತ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯಲ್ಲೂ ಅಸಮಾಧಾನ ಸ್ಫೋಟಿಸಿತು. ಲೋಕಸಭೆ ಚುನಾವಣೆಯಲ್ಲಿ ಬಂಗಾಳದಲ್ಲಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಜೊತೆಗೆ ಯಾವುದೇ ಮೈತ್ರಿ ಇಲ್ಲ ಎಂದು ಕಳೆದ ತಿಂಗಳು ಬ್ಯಾನರ್ಜಿ ಘೋಷಿಸಿದ್ದರು. ಮೈತ್ರಿಕೂಟದ ಜೊತೆಗಿನ ಟಿಎಂಸಿ ಮುನಿಸು ಇನ್ನೂ ಶಮನವಾದಂತೆ ಕಾಣುತ್ತಿಲ್ಲ. ಇದನ್ನೂ ಓದಿ: I.N.D.I.A ಮೈತ್ರಿಕೂಟದಿಂದ ಹೊರಬಂದ ಆಪ್‌

    2019 ರ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ 18 ಹಾಗೂ ಕಾಂಗ್ರೆಸ್ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದವು. ಈ ಹಿನ್ನೆಲೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಟಿಎಂಸಿ ಮತ್ತು ಕಾಂಗ್ರೆಸ್ ನಡುವೆ ಒಮ್ಮತ ಮೂಡಲಿಲ್ಲ. ಕಾಂಗ್ರೆಸ್ ಹೆಚ್ಚಿನ ಸ್ಥಾನಗಳಿಗೆ ಪಟ್ಟು ಹಿಡಿದಿದೆ. ಟಿಎಂಸಿ ಕೂಡ ತನ್ನ ಹಠ ಬಿಡುತ್ತಿಲ್ಲ. ಹೀಗಾಗಿ ಎರಡೂ ಪಕ್ಷಗಳ ನಡುವೆ ಅಸಮಾಧಾನ ಹಾಗೆಯೇ ಮುಂದುವರಿದಿದೆ.

    ಎಎಪಿ ಜೊತೆ ಸಂಧಾನ?
    ಪಂಜಾಬ್‌ನಲ್ಲಿ 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 8, ಎಸ್‌ಎಡಿ ಮತ್ತು ಬಿಜೆಪಿ ತಲಾ 2 ಸ್ಥಾನಗಳನ್ನು ಗೆದ್ದಿದ್ದವು. ಈ ಬಾರಿ ಸೀಟು ಹಂಚಿಕೆ ಸಂಬಂಧ ಎಎಪಿ-ಕಾಂಗ್ರೆಸ್ ನಡುವೆ ಹಗ್ಗಜಗ್ಗಾಟ ನಡೆದಿತ್ತು. ಸಾರ್ವತ್ರಿಕ ಚುನಾವಣೆಗೆ ಪಂಜಾಬ್‌ನಲ್ಲಿ 13 ಮತ್ತು ಚಂಡೀಗಢದಲ್ಲಿ 1 ಸ್ಥಾನಕ್ಕಾಗಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಯಾವುದೇ ಉದ್ದೇಶವಿಲ್ಲ ಎಂದು ಕೆಲದಿನಗಳ ಹಿಂದಷ್ಟೇ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದರು. ಮೈತ್ರಿಕೂಟದ ಒಡಕಿನಿಂದ ಎಚ್ಚೆತ್ತ ಕಾಂಗ್ರೆಸ್ ಕೇಜ್ರಿವಾಲ್ ಜೊತೆಗೆ ಸಂಧಾನ ಮಾತುಕತೆಯಾಡಿತು. ಈಗ ಎರಡೂ ಪಕ್ಷಗಳ ನಡುವೆ ಸೀಟು ಹಂಚಿಕೆ ಮಾತುಕತೆ ಅಂತಿಮ ಹಂತದಲ್ಲಿದೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

    ಎಸ್‌ಪಿ-ಕಾಂಗ್ರೆಸ್ ಮುನಿಸು ಶಮನ?
    ಚುನಾವಣೆಯಲ್ಲಿ ಸೀಟು ಹಂಚಿಕೆ ಸಂಬಂಧವೇ ಮೈತ್ರಿಕೂಟದಿಂದ ದೂರವಾಗಿದ್ದ ಸಮಾಜವಾದಿ ಪಕ್ಷ ಈಗ ಮತ್ತೆ ಒಂದಾಗಿದೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಪ್ರಕ್ರಿಯೆ ಮುಗಿಸಿದೆ. ಯುಪಿ ಯಲ್ಲಿ ಕಾಂಗ್ರೆಸ್‌ಗೆ 11 ಕ್ಷೇತ್ರಗಳನ್ನು ಬಿಟ್ಟುಕೊಡುವುದಾಗಿ ಎಸ್‌ಪಿ ಹೇಳಿತ್ತು. ಆದರೆ ಇದಕ್ಕೆ ಕಾಂಗ್ರೆಸ್ ತಕರಾರು ತೆಗೆದು ಹೆಚ್ಚಿನ ಸ್ಥಾನಕ್ಕೆ ಬೇಡಿಕೆ ಇಟ್ಟಿತ್ತು. ಇದಕ್ಕೆ ಎಸ್‌ಪಿ ಒಪ್ಪಿಗೆ ಸೂಚಿಸಿರಲಿಲ್ಲ. ಅಲ್ಲದೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದೂ ಸಹ ಅಖಿಲೇಶ್ ಯಾದವ್ ಘೋಷಿಸಿದ್ದರು. ಆದರೀಗ ಎರಡೂ ಪಕ್ಷಗಳು ಒಂದಾಗಿವೆ. ಇದನ್ನೂ ಓದಿ: INDIA ಮೈತ್ರಿಕೂಟ ನಮ್ಮ ನಂಬಿಕೆಗೆ ಧಕ್ಕೆ ತರುತ್ತಿದೆ: ಮೋದಿ

    ಯುಪಿಯಲ್ಲಿ ರಾಷ್ಟ್ರೀಯ ಲೋಕದಳ ಕೈ ಕೊಟ್ಟ ಕಾರಣ, ಕಾಂಗ್ರೆಸ್‌ಗೆ 17 ಕ್ಷೇತ್ರಗಳನ್ನು ಬಿಟ್ಟುಕೊಡಲು ಎಸ್‌ಪಿ ಒಪ್ಪಿಗೆ ಸೂಚಿಸಿದೆ. ಸಂಧಾನ ಮಾತುಕತೆ ಯಶಸ್ವಿಯಾದ ಬೆನ್ನಲ್ಲೇ ಉತ್ತರ ಪ್ರದೇಶ ತಲುಪಿದ್ದ ರಾಹುಲ್ ಗಾಂಧಿ ಯಾತ್ರೆಯನ್ನು ಅಖಿಲೇಶ್ ಯಾದವ್ ಸೇರಿಕೊಂಡರು. ಉಭಯ ಪಕ್ಷಗಳ ನಾಯಕರೂ ಶಕ್ತಿ ಪ್ರದರ್ಶನ ಮಾಡಿದರು. ಮೈತ್ರಿಕೂಟದೊಂದಿಗೆ ಚುನಾವಣೆ ಎದುರಿಸಲಾಗುವುದು ಎಂದು ಅಖಿಲೇಶ್ ಘೋಷಿಸಿದ್ದಾರೆ.

    ಕಾಂಗ್ರೆಸ್ ನಿಲುವೇನು?
    ಟಿಎಂಸಿ ಇಲ್ಲದ ಮೈತ್ರಿಕೂಟವನ್ನು ಪಕ್ಷವು ಊಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹಿರಿಯ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಹೇಳಿದ್ದಾರೆ. ಮುಂಬರುವ ಚುನಾವಣೆಯಲ್ಲಿ 255 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಕಳೆದ ತಿಂಗಳು ಘೋಷಿಸಿತ್ತು. ಇದು 2019 ರ ಲೋಕಸಭೆ ಚುನಾವಣೆಗಿಂತ ಕಡಿಮೆ ಸಂಖ್ಯೆಯ ಸ್ಥಾನಗಳನ್ನು ಹೊಂದಿದೆ. ಇದನ್ನೂ ಓದಿ: ಇಂಡಿಯಾ ಮೈತ್ರಿಕೂಟದಲ್ಲಿ ಯಾವುದೇ ಪ್ರಗತಿ ಕಾಣುತ್ತಿಲ್ಲ: ನಿತೀಶ್‌ ಕುಮಾರ್‌ ಬೇಸರ

    ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 421 ಸ್ಥಾನಗಳಲ್ಲಿ ಸ್ಪರ್ಧಿಸಿ 52 ಸ್ಥಾನಗಳನ್ನು ಗೆದ್ದಿತ್ತು. ಇದು ಬಿಹಾರದ ಆರ್‌ಜೆಡಿ, ಮಹಾರಾಷ್ಟ್ರದ ಎನ್‌ಸಿಪಿ, ಕರ್ನಾಟಕದ ಜೆಡಿಎಸ್, ಜಾರ್ಖಂಡ್‌ನ ಜೆಎಂಎಂ ಮತ್ತು ತಮಿಳುನಾಡಿನ ಡಿಎಂಕೆ ಜೊತೆ ಮೈತ್ರಿಯ ಭಾಗವಾಗಿತ್ತು. ಸ್ಥಳೀಯ ಪಕ್ಷಗಳ ಪ್ರಭಾವವನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರತಿ ರಾಜ್ಯಗಳಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳ ಜೊತೆ ಮಾತುಕತೆ ನಡೆಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಪಕ್ಷಗಳ ಭಿನ್ನಾಭಿಪ್ರಾಯಗಳನ್ನು ಶಮನ ಮಾಡಿ, ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಪರಸ್ಪರ ಟೀಕೆ ಮಾಡದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

    ಮುಂದಿನ ನಡೆ ಏನು?
    7 ತಿಂಗಳ ಹಿಂದೆ ಪಾಟ್ನಾದಲ್ಲಿ ರಚನೆಯಾದಾಗಿನಿಂದ 28 ವಿಪಕ್ಷಗಳ ಇಂಡಿಯಾ ಬಣವು ಮತದಾರರನ್ನು ಸೆಳೆಯಲು ಯಾವುದೇ ದೊಡ್ಡ ಕಾರ್ಯಕ್ರಮವನ್ನು ಹಮ್ಮಿಕೊಂಡಿಲ್ಲ. ಆದರೆ ಒಕ್ಕೂಟದ ಪಕ್ಷಗಳಲ್ಲೇ ಆಂತರಿಕ ಭಿನ್ನಾಭಿಪ್ರಾಯದಿಂದಾದ ಗಾಯವೇ ದೊಡ್ಡದಾಗಿದೆ. ಗಾಯಕ್ಕೆ ಮುಲಾಮು ಹಚ್ಚಿ, ಚುನಾವಣೆಯಲ್ಲಿ ಒಕ್ಕೂಟದ ಪಕ್ಷಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಸವಾಲು ಕಾಂಗ್ರೆಸ್ ಮುಂದಿದೆ.

    ಸೀಟು ಹಂಚಿಕೆ ಒಪ್ಪಂದಗಳು ಮತ್ತು ಚುನಾವಣೋತ್ತರ ಮೈತ್ರಿಯನ್ನು ಅವಲಂಬಿಸಿ ರಾಜ್ಯಗಳ ಜೊತೆಗಿನ ಮೈತ್ರಿಯನ್ನು ಕಾಂಗ್ರೆಸ್ ನೋಡಬೇಕಿದೆ. ಪ್ರಮುಖ ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢವನ್ನು ಕಾಂಗ್ರೆಸ್ ಕಳೆದುಕೊಂಡಿರುವುದು, ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವಿನ ಸಂಘರ್ಷ, ಆಡಳಿತ ವಿರೋಧಿ ಅಲೆ (ಹಿರಿಯ ನಾಯಕ ಕಮಲ್ ನಾಥ್), ಅತಿಯಾದ ಆತ್ಮವಿಶ್ವಾಸ (ಭೂಪೇಶ್ ಬಘೇಲ್) ಮತ್ತು ರಾಜ್ಯ ನಾಯಕತ್ವಕ್ಕೆ ಪ್ರಾಮುಖ್ಯತೆ ಇಲ್ಲದಿರುವುದು ಕಾಂಗ್ರೆಸ್ ಅವನತಿಗೆ ಕಾರಣವಾಗಬಹುದು. ಇದೆಲ್ಲವನ್ನೂ ಅರಿತು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾದ ಮತ್ತೊಂದು ಸವಾಲು ಕೂಡ ಕಾಂಗ್ರೆಸ್ ಮುಂದೆ ಈಗ ಇದೆ. ಇದನ್ನೂ ಓದಿ: INDIA ಮೈತ್ರಿಕೂಟ ನಮ್ಮ ನಂಬಿಕೆಗೆ ಧಕ್ಕೆ ತರುತ್ತಿದೆ: ಮೋದಿ

  • ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ?

    ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ?

    ನವದೆಹಲಿ: 2014 ರ ಡಿಸೆಂಬರ್‌ಗೂ ಮೊದಲು ಭಾರತದಲ್ಲಿ ನೆಲೆಸಿರುವ ಮೂರು ನೆರೆಯ ದೇಶಗಳ ಧಾರ್ಮಿಕ ಅಲ್ಪಸಂಖ್ಯಾತರಿಗೆ ಪೌರತ್ವವನ್ನು ನೀಡುವ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯು (CAA) ಮುಂದಿನ ತಿಂಗಳಿನಿಂದ ಜಾರಿಗೆ ಬರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

    ನೋಂದಣಿಗಾಗಿ ಆನ್‌ಲೈನ್ ಪೋರ್ಟಲ್ ಸಿದ್ಧವಾಗಿದೆ. ಈ ನಿಯಮವು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದೂಗಳು, ಸಿಖ್ಖರು, ಬೌದ್ಧರು ಮತ್ತು ಕ್ರಿಶ್ಚಿಯನ್ನರಿಗೆ ಅನ್ವಯಿಸುತ್ತದೆ. ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಇದು ಜಾರಿಗೆ ಬರಲಿದೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: 2026 ರ ಅಸೆಂಬ್ಲಿ ಚುನಾವಣೆ ಹೊತ್ತಿಗೆ ಕೆಲವೇ ಮುಸ್ಲಿಮರು ಕಾಂಗ್ರೆಸ್‌ನಲ್ಲಿ ಉಳಿಯುತ್ತಾರೆ: ಅಸ್ಸಾಂ ಸಿಎಂ

    ಸಿಎಎ ಅನುಷ್ಠಾನವು 2019 ರ ಲೋಕಸಭೆ ಚುನಾವಣೆ ಮತ್ತು ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಪ್ರಮುಖ ಚುನಾವಣಾ ಕಾರ್ಯಸೂಚಿಯಾಗಿತ್ತು. ಅಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸಿಎಎ ಜಾರಿಗೆ ವಿರೋಧಿಸಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸಿಎಎ ಅನುಷ್ಠಾನ ತಡೆಯಲು ಸಾಧ್ಯವಿಲ್ಲ. ಏಕೆಂದರೆ ಇದು ದೇಶದ ಕಾನೂನು ಎಂದು ಘೋಷಿಸಿದ್ದರು. ಬಹುಸಂಖ್ಯಾತರ ಭಾವನೆಗಳನ್ನೇ ಬಂಡವಾಳ ಮಾಡಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ ಎಂಬ ಆರೋಪ ಬಿಜೆಪಿ ವಿರುದ್ಧ ಕೇಳಿ ಬರುತ್ತಿದೆ.

    ದಾಖಲೆಗಳನ್ನು ಹೊಂದಿರದ ಈ ನೆರೆಯ ದೇಶಗಳ ನಿರಾಶ್ರಿತರಿಗೆ ಸಿಎಎ ಸಹಾಯ ಮಾಡುತ್ತದೆ ಎಂದು ಮೂಲಗಳು ತಿಳಿಸಿವೆ. ಸಚಿವಾಲಯವು ಸ್ವೀಕರಿಸಿದ ದೀರ್ಘಾವಧಿಯ ವೀಸಾಗಳಿಗಾಗಿ ಗರಿಷ್ಠ ಸಂಖ್ಯೆಯ ಅರ್ಜಿಗಳು ಪಾಕಿಸ್ತಾನದಿಂದ ಬಂದವು. ಇದನ್ನೂ ಓದಿ: ಕೇವಲ 100 ರೂ. ಕ್ಯಾನ್ಸರ್‌ಗೆ ಚಿಕಿತ್ಸೆ – ಟಾಟಾ ಸಂಸ್ಥೆಯಿಂದ ಮಾತ್ರೆ ಅಭಿವೃದ್ಧಿ

    ಕಳೆದ ಎರಡು ವರ್ಷಗಳಲ್ಲಿ ಪೌರತ್ವ ಕಾಯಿದೆ-1955 ರ ಅಡಿಯಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬರುವ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವವನ್ನು ನೀಡಲು ಒಂಬತ್ತು ರಾಜ್ಯಗಳ 30 ಕ್ಕೂ ಹೆಚ್ಚು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು ಗೃಹ ಕಾರ್ಯದರ್ಶಿಗಳಿಗೆ ಅಧಿಕಾರವನ್ನು ನೀಡಲಾಗಿದೆ.

    ಕೇಂದ್ರ ಗೃಹ ಸಚಿವಾಲಯದ ವಾರ್ಷಿಕ ವರದಿಯ ಪ್ರಕಾರ, 2021 ರ ಏ.1 ರಿಂದ ಡಿಸೆಂಬರ್ 31 ರ ವರೆಗೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಒಟ್ಟು 1,414 ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಪೌರತ್ವ ಕಾಯ್ದೆ 1955 ರ ಅಡಿಯಲ್ಲಿ ನೋಂದಣಿ ಅಥವಾ ನೈಸರ್ಗಿಕೀಕರಣದ ಮೂಲಕ ಭಾರತೀಯ ಪೌರತ್ವ ನೀಡಲಾಗಿದೆ. ಇದನ್ನೂ ಓದಿ: ಮಹಿಳೆಯರು ಏನನ್ನು ಧರಿಸಬೇಕು ಅನ್ನೋದು ಅವರ ವೈಯಕ್ತಿಕ ವಿಚಾರ – ಹಿಜಬ್‌ ಬಗ್ಗೆ ಕೇಳಿದ್ದಕ್ಕೆ ರಾಹುಲ್‌ ಉತ್ತರ

    CAA, NRC ಮತ್ತು NPR ದೇಶಾದ್ಯಂತ ಪ್ರತಿಭಟನೆಯ ಬಿರುಗಾಳಿ ಎಬ್ಬಿಸಿತ್ತು. ಕೋವಿಡ್‌ ಸಾಂಕ್ರಾಮಿಕದಿಂದಾಗಿ ಪ್ರತಿಭಟನೆಗಳು ಅಂತ್ಯಗೊಂಡವು. ಪ್ರತಿಭಟನೆ ನಿಲ್ಲುವ ಮೊದಲು ದೇಶದಾದ್ಯಂತ ಹೊರತರಬೇಕಾಗಿದ್ದ ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ಕೇಂದ್ರವು ತಡೆಹಿಡಿಯಿತು.

  • ಮಂಡ್ಯ ಲೋಕಸಭೆ ಟಿಕೆಟ್‌ ಜೆಡಿಎಸ್‌ಗೆ ಕನ್ಫರ್ಮ್‌: ಜಿ.ಟಿ.ದೇವೇಗೌಡ

    ಮಂಡ್ಯ ಲೋಕಸಭೆ ಟಿಕೆಟ್‌ ಜೆಡಿಎಸ್‌ಗೆ ಕನ್ಫರ್ಮ್‌: ಜಿ.ಟಿ.ದೇವೇಗೌಡ

    ರಾಮನಗರ: ಮಂಡ್ಯ (Mandya) ಲೋಕಸಭೆ ಟಿಕೆಟ್‌ ಜೆಡಿಎಸ್‌ಗೆ (JDS) ಕನ್ಫರ್ಮ್‌. ಅಭ್ಯರ್ಥಿ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸುತ್ತೇವೆ ಎಂದು ಶಾಸಕ ಜಿ.ಟಿ.ದೇವೇಗೌಡ (G.T.Deve Gowda) ಹೇಳಿಕೆ ನೀಡಿದರು.

    ಬಿಡದಿಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ತೋಟದ ಮನೆಯಲ್ಲಿ ಭಾನುವಾರ ಮಂಡ್ಯ ಜೆಡಿಎಸ್ ನಾಯಕರ ಸಭೆ ನಡೆಸಲಾಯಿತು. ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ, ಮಂಡ್ಯ ಸ್ಥಳೀಯ ನಾಯಕರ ಸಭೆ ಮಾಡಿ ಚುನಾವಣೆಗೆ ಸಿದ್ಧತೆ ಮಾಡ್ತಿದ್ದೇವೆ. ಅಭ್ಯರ್ಥಿ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮೋದಿ ಅವ್ರು ನನ್ನ ಪರವಾಗಿ ಕೆಲಸ ಮಾಡಿದ್ದಾರೆ: ಸುಮಲತಾ

    ಟಿಕೆಟ್‌ಗಾಗಿ ಸುಮಲತಾ ಸಭೆ ವಿಚಾರವಾಗಿ ಮಾತನಾಡಿ, ಸುಮಲತಾ ಅವರು ಬಿಜೆಪಿ ಅಧಿಕೃತ ಮೆಂಬರ್ ಅಲ್ಲ. ಆದರೂ ಅವರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ಮಂಡ್ಯ ಕೇಳಿದರೆ ಬೆಂಗಳೂರು ಉತ್ತರ ಕೊಡಬಹುದು ಎಂಬ ಲೆಕ್ಕಾಚಾರ ಇರಬಹುದು. ನನಗೂ ಕೆಲವರು ಈ ಬಗ್ಗೆ ಹೇಳ್ತಿದ್ದಾರೆ. ಅಭ್ಯರ್ಥಿ ಯಾರೆಂದು ಇನ್ನೂ ನಿರ್ಧಾರ ಆಗಿಲ್ಲ ಎಂದು ಹೇಳಿದರು.

    ಮಾಜಿ ಶಾಸಕ ಸುರೇಶ್ ಗೌಡ ಮಾತನಾಡಿ, ಮಂಡ್ಯ ಟಿಕೆಟ್ ಬಗ್ಗೆ ಸಭೆ ಮಾಡಲಾಗ್ತಿದೆ. ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ಆಗಲಿದೆ. ಸುಮಲತಾ ಅವರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ಅಂತಿಮವಾಗಿ ಮೈತ್ರಿ ನಾಯಕರು ಈ ಬಗ್ಗೆ ನಿರ್ಧಾರ ಮಾಡ್ತಾರೆ ಎಂದು ಮಾತನಾಡಿದರು. ಇದನ್ನೂ ಓದಿ: ಈಗ ನಡೆಯುವುದು ಗ್ಯಾರಂಟಿ ಬೇಕಾ? ಬೇಡವಾ? ಎನ್ನುವ ಚುನಾವಣೆ: ಹೆಚ್.ಸಿ.ಬಾಲಕೃಷ್ಣ

  • ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆದ್ದರೆ ಕಾಂಗ್ರೆಸ್ ಸರ್ಕಾರ ತೆಗೆಯುವ ಗ್ಯಾರಂಟಿ: ಬೊಮ್ಮಾಯಿ

    ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆದ್ದರೆ ಕಾಂಗ್ರೆಸ್ ಸರ್ಕಾರ ತೆಗೆಯುವ ಗ್ಯಾರಂಟಿ: ಬೊಮ್ಮಾಯಿ

    ಕೋಲಾರ: ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನ ಗೆದ್ದರೆ ನಾವು ಕಾಂಗ್ರೆಸ್ (Congress) ಸರ್ಕಾರವನ್ನು ಒಂದೇ ತಿಂಗಳಲ್ಲಿ ತೆಗೆಯುವ ಗ್ಯಾರಂಟಿ ಕೊಡುತ್ತೇವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

    ಕೋಲಾರದಲ್ಲಿ (Kolar) ಬಿಜೆಪಿ (BJP) ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಕೋಲಾರ ಸೇರಿದಂತೆ ರಾಜ್ಯದ ಎಲ್ಲಾ ಕಡೆ ಲೋಕಸಭಾ ಚುನಾವಣೆಯಲ್ಲಿ (2024 Lok Sabha Election) ಬಿಜೆಪಿ ಗೆಲ್ಲಬೇಕು. ಕೇಂದ್ರದ ಮೋದಿ ಕೈ ಬಲಪಡಿಸುವ ನಿಟ್ಟಿನಲ್ಲಿ ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಜನ ಬೆಂಬಲಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಕೆರಗೋಡು ಹನುಮ ಧ್ವಜ ತೆರವಿಗೆ ಆಕ್ರೋಶ- ಮಂಡ್ಯದಲ್ಲಿ ಕಲ್ಲು ತೂರಾಟ, ಲಾಠಿಚಾರ್ಜ್

    ಜಾತಿ ಗಣತಿ ವರದಿ ಬಗ್ಗೆ ಸಿಎಂ ಮಾತಾಡುತ್ತಿದ್ದಾರೆ. ಹಿಂದುಳಿದ ವರ್ಗಗಳಿಗೆ ಸಿದ್ದರಾಮಯ್ಯ ಕಾಣಿಕೆ ಏನು? ಸಂವಿಧಾನ ಹಕ್ಕು ಕೊಟ್ಟಿದ್ದು ಪ್ರಧಾನಿ ಮೋದಿ, ಎಸ್ಸಿ ಎಸ್ಟಿಗೆ ಖೋಟಾ ಹಂಚಿಕೆ ಮಾಡಿದ್ದು ನಾವು. ಇದರಿಂದ ಅವರಿಗೆ 3500 ಹೆಚ್ಚುವರಿ ಸೀಟು ಲಭ್ಯವಾಗಿದೆ. ಸ್ವಾತಂತ್ರ್ಯ ಬಂದ ಮೇಲೆ ಬರಿ ಜಾತಿಗಳನ್ನು ಕಾಂಗ್ರೆಸ್‍ನವರು ಸೇರಿಸುತ್ತಾ, ಹೆಚ್ಚಿಗೆ ಮಾಡಿದ್ದಾರೆ ಎಂದಿದ್ದಾರೆ.

    11,300 ಕೋಟಿ ರೂ. ದಲಿತರ ಹಣವನ್ನು ಕಾಂಗ್ರೆಸ್‍ನ ಗ್ಯಾರಂಟಿಗೆ ಕೊಟ್ಟಿದ್ದಾರೆ. ಅತ್ಯಂತ ಹಿಂದುಳಿದ ವರ್ಗದವರು ಇದ್ದಾರೆ ಅವರಿಗೆ ನ್ಯಾಯ ಕೊಡಲಿ. ಮೀಸಲಾತಿಯನ್ನು ಕೆಲವು ಜನರು ಮಾತ್ರ ಪಡೆಯುತ್ತಿದ್ದಾರೆ. ಅದಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಲಿ. ಕಾಂತರಾಜ್ ವರದಿ ಬಗ್ಗೆ ಚುನಾವಣೆ ಗಿಮಿಕ್ ಮಾಡ್ತಿದ್ದಾರೆ ಅಷ್ಟರಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದಿದ್ದಾರೆ. ಇದನ್ನೂ ಓದಿ: ಶೆಟ್ಟರ್ ಡೀಸೆಂಟ್ ಜಂಟಲ್‍ ಮ್ಯಾನ್, ಕಾಂಗ್ರೆಸ್ಸಿಗರು ಉಳಿಸಿಕೊಳ್ಳಬೇಕಾಗಿತ್ತು: ಹರಿಪ್ರಸಾದ್

  • 2024ರ ಲೋಕಸಭಾ ಚುನಾವಣೆಗೆ ಮಾಡಲು ಸಾಕಷ್ಟು ಕೆಲಸಗಳಿವೆ: ಕುಸ್ತಿ ಫೆಡರೇಷನ್‌ನಿಂದ ಬ್ರಿಜ್‌ ಭೂಷಣ್‌ ‘ಸನ್ಯಾಸತ್ವ’

    2024ರ ಲೋಕಸಭಾ ಚುನಾವಣೆಗೆ ಮಾಡಲು ಸಾಕಷ್ಟು ಕೆಲಸಗಳಿವೆ: ಕುಸ್ತಿ ಫೆಡರೇಷನ್‌ನಿಂದ ಬ್ರಿಜ್‌ ಭೂಷಣ್‌ ‘ಸನ್ಯಾಸತ್ವ’

    ನವದೆಹಲಿ: ಮುಂಬರುವ 2024 ರ ಲೋಕಸಭಾ ಚುನಾವಣೆಯಲ್ಲಿ ಮಾಡುವ ಕೆಲಸಗಳು ಸಾಕಷ್ಟಿವೆ. ಮತ್ತೆ ಭಾರತೀಯ ಕುಸ್ತಿ ಫೆಡರೇಷನ್‌ (WFI) ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ (Brij Bhushan Sharan Singh) ಸ್ಪಷ್ಟಪಡಿಸಿದ್ದಾರೆ.

    ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬ್ರಿಜ್‌ ಭೂಷಣ್‌ ಕುಸ್ತಿ ಫೆಡರೇಷನ್‌ನಿಂದ ‘ಸನ್ಯಾಸತ್ವ’ ಸ್ವೀಕರಿಸಿರುವುದಾಗಿ ಘೋಷಿಸಿದ್ದಾರೆ. ಕ್ರೀಡಾ ಸಚಿವಾಲಯ ನೂತನ ಕುಸ್ತಿ ಫೆಡರೇಷನ್‌ ಸಮಿತಿಯನ್ನೇ ಅಮಾನತುಗೊಳಿಸಿದ ಬಳಿಕ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ನೂತನ ಕುಸ್ತಿ ಫೆಡರೇಶನ್‌ ಸಮಿತಿಯನ್ನೇ ಅಮಾನತುಗೊಳಿಸಿದ ಕ್ರೀಡಾ ಸಚಿವಾಲಯ

    ಬಿಜೆಪಿ ರಾಷ್ಟ್ರ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ (J.P.Nadda) ಅವರನ್ನು ಭೇಟಿಯಾದ ನಂತರ ಪತ್ರಿಕಾಗೋಷ್ಠಿಯಲ್ಲಿ ಬ್ರಿಜ್‌ ಭೂಷಣ್‌ ಈ ಸೂಚನೆ ಕೊಟ್ಟಿದ್ದಾರೆ. ಬ್ರಿಜ್ ಭೂಷಣ್ ಅವರು ಕುಸ್ತಿಯಿಂದ ಸನ್ಯಾಸತ್ವ ಅಥವಾ ನಿವೃತ್ತಿ ತೆಗೆದುಕೊಂಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ಗಮನ ಕೇಂದ್ರೀಕರಿಸಿದ್ದಾರೆ.

    ಜೆ.ಪಿ.ನಡ್ಡಾ ಅವರೊಂದಿಗಿನ ಸಂಭಾಷಣೆಯಲ್ಲಿ ಡಬ್ಲ್ಯುಎಫ್‌ಐ ಬಗ್ಗೆ ಮಾತನಾಡಿಲ್ಲ. ತಾವು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ವರದಿಗಳನ್ನು ಬ್ರಿಜ್‌ ಭೂಷಣ್‌ ಸಿಂಗ್‌ ನಿರಾಕರಿಸಿದ್ದಾರೆ. ಇದನ್ನೂ ಓದಿ: ಬಜರಂಗ್‌ ಪುನಿಯಾ ಬೆನ್ನಲ್ಲೇ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಕುಸ್ತಿಪಟು ವೀರೇಂದ್ರ ಸಿಂಗ್‌

    ಕುಸ್ತಿಪಟು ಸಾಕ್ಷಿ ಮಲಿಕ್ ಸೇರಿದಂತೆ ಹಲವಾರು ಕ್ರೀಡಾಪಟುಗಳು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಬೀದಿಗಿಳಿದ ಪ್ರತಿಭಟಿಸಿದ ನಂತರ ಬ್ರಿಜ್ ಭೂಷಣ್, WFI ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಆ ಸ್ಥಾನಕ್ಕೆ ತಮ್ಮ (ಬ್ರಿಜ್‌ ಭೂಷಣ್) ಆಪ್ತರೇ ಆಯ್ಕೆಯಾಗುವಂತೆ ಮಾಡಿದ್ದಕ್ಕೆ‌, ಮತ್ತೆ ಕುಸ್ತಿಪಟುಗಳು ವಿರೋಧ ವ್ಯಕ್ತಪಡಿಸಿದರು. ಸಾಕ್ಷಿ ಮಲಿಕ್‌ ಕುಸ್ತಿಗೆ ಕಣ್ಣೀರ ವಿದಾಯ ಹೇಳಿದ್ದಾರೆ. ಬಜರಂಗ್‌ ಪುನಿಯಾ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ.

  • 2024ರ ಲೋಕಸಭಾ ಚುನಾವಣೆ ವರೆಗೆ BJP ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ.ನಡ್ಡಾ ಮುಂದುವರಿಕೆ

    2024ರ ಲೋಕಸಭಾ ಚುನಾವಣೆ ವರೆಗೆ BJP ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ.ನಡ್ಡಾ ಮುಂದುವರಿಕೆ

    ನವದೆಹಲಿ: 2024ರ ಜೂನ್‌ವರೆಗೂ ಜೆ.ಪಿ.ನಡ್ಡಾ (J.P.Nadda) ಅವರೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ (BJP National President) ಮುಂದುವರಿಯಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರು ಘೋಷಿಸಿದ್ದಾರೆ. 2024ರಲ್ಲಿ ಲೋಕಸಭಾ ಚುನಾವಣೆ (Lok Sabha Election 2024) ನಡೆಯಲಿದ್ದು, ಅಲ್ಲಿವರೆಗೂ ನಡ್ಡಾ ಅವರನ್ನೇ ಮುಂದುವರಿಸಿರುವುದು ಕುತೂಹಲ ಮೂಡಿಸಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿಯಲು ಪಣತೊಟ್ಟಿದೆ. ಹೀಗಾಗಿ ಸಾರ್ವತ್ರಿಕ ಚುನಾವಣೆಯಲ್ಲಿ ನಡ್ಡಾ ಅವರ ಪ್ರಾಮುಖ್ಯತೆ ಅರಿತು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

    ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಗೃಹ ಸಚಿವ ಅಮಿತ್‌ ಶಾ ಅವರು, ಮುಂದಿನ ವರ್ಷದ ಜೂನ್‌ ವರೆಗೂ ನಡ್ಡಾ ಅವರೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರ ಅವಧಿಯನ್ನು ವಿಸ್ತರಿಸಲು ಸರ್ವಾನುಮತದಿಂದ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ನಡ್ಡಾ ನೇತೃತ್ವದಲ್ಲಿ ಪಕ್ಷವು 2024 ರ ಲೋಕಸಭೆ ಚುನಾವಣೆಯಲ್ಲಿ 2019 ಕ್ಕಿಂತ ದೊಡ್ಡ ಜನಾದೇಶದೊಂದಿಗೆ ಗೆಲ್ಲುತ್ತದೆ ಎಂದು ನಮಗೆ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಾಸಕ ಯತ್ನಾಳ್ ನಡೆ ಬಗ್ಗೆ ಪಕ್ಷದ ಆಂತರಿಕ ಸಭೆಯಲ್ಲಿ ಚರ್ಚಿಸಿದೆ: ಸಿ.ಟಿ ರವಿ

    2020 ರಲ್ಲಿ ಅಮಿತ್ ಶಾ ಅವರಿಂದ ಪಕ್ಷದ ಉನ್ನತ ಹುದ್ದೆಯನ್ನು ವಹಿಸಿಕೊಂಡ ನಡ್ಡಾ ಅವರ ಅವಧಿಯು ಈ ವರ್ಷದ ಜನವರಿಯಲ್ಲಿ ಕೊನೆಗೊಳ್ಳಲಿದೆ. ಆದರೆ ಈ ವರ್ಷ ಒಂಭತ್ತು ರಾಜ್ಯಗಳ ಚುನಾವಣೆ ಮತ್ತು 2024 ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ನಡ್ಡಾ ಅವರ ಅವಧಿಯನ್ನು ವಿಸ್ತರಿಸಲಾಗುವುದು ಎಂಬ ನಿರೀಕ್ಷೆ ಈ ಮೊದಲೇ ಇತ್ತು.

    ನಡ್ಡಾ ಅವರು ಪ್ರಧಾನಿ ಮೋದಿಯವರ ವಿಶ್ವಾಸವನ್ನು ಹೊಂದಿದ್ದಾರೆ. ಅವರ ಉತ್ತಮ ಕಾರ್ಯನಿರ್ವಹಣೆಯು ಪಕ್ಷದ ವಿಸ್ತರಣೆಯನ್ನು ನಿರ್ಧರಿಸಲು ಅನುವು ಮಾಡಿಕೊಟ್ಟಿದೆ ಎಂದು ಬಿಜೆಪಿ ನಾಯಕರು ಬಣ್ಣಿಸಿದ್ದಾರೆ. ನಡ್ಡಾ ಅವರ ನಾಯಕತ್ವದಲ್ಲಿ ಬಿಜೆಪಿ ಅನೇಕ ರಾಜ್ಯ ಚುನಾವಣೆಗಳನ್ನು ಗೆದ್ದಿದೆ. 2024 ರಲ್ಲಿ 2019 ಕ್ಕಿಂತ ದೊಡ್ಡ ಜನಾದೇಶವನ್ನು ಸಾಧಿಸುತ್ತದೆ ಎಂದು ಅಮಿತ್‌ ಶಾ ಸಭೆಯಲ್ಲಿ ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಜೋಡೋ ಯಾತ್ರೆ ವೇಳೆ ಭದ್ರತಾ ಲೋಪ – ರಾಗಾ ಅಪ್ಪಿಕೊಳ್ಳಲು ಓಡಿದ ವ್ಯಕ್ತಿ

    ಬಿಜೆಪಿ ಸಂವಿಧಾನದ ಪ್ರಕಾರ, ಒಬ್ಬ ಪಕ್ಷದ ಅಧ್ಯಕ್ಷರು ತಲಾ ಮೂರು ವರ್ಷಗಳಂತೆ ಸತತ ಎರಡು ಅವಧಿಯನ್ನು ಪಡೆಯಬಹುದು. ಕನಿಷ್ಠ ಶೇ.50ರಷ್ಟು ರಾಜ್ಯ ಘಟಕಗಳಲ್ಲಿ ಸಾಂಸ್ಥಿಕ ಚುನಾವಣೆ ನಡೆದ ಬಳಿಕ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭವಾಗಬಹುದು ಎಂಬ ನಿಬಂಧನೆಯೂ ಇದೆ.

    ಈ ವರ್ಷ ನಡೆಯಲಿರುವ ಎಲ್ಲಾ ಒಂಭತ್ತು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ನಾಯಕರು ಗೆಲುವು ಸಾಧಿಸಬೇಕು ಎಂದು ಸೋಮವಾರ ನಡ್ಡಾ ಒತ್ತಿ ಹೇಳಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k