Tag: 2025 Champions Trophy

  • ಆರ್‌ಸಿಬಿ ಫ್ಯಾನ್ಸ್‌ಗೆ ಚಾಂಪಿಯನ್ ಟ್ರೋಫಿ ತೋರಿಸಿ ಖುಷಿಪಟ್ಟ ಕಿಂಗ್ ಕೊಹ್ಲಿ

    ಆರ್‌ಸಿಬಿ ಫ್ಯಾನ್ಸ್‌ಗೆ ಚಾಂಪಿಯನ್ ಟ್ರೋಫಿ ತೋರಿಸಿ ಖುಷಿಪಟ್ಟ ಕಿಂಗ್ ಕೊಹ್ಲಿ

    ಬೆಂಗಳೂರು: ಇದೀಗ ಬೆಂಗಳೂರಿಗೆ ಬಂದಿಳಿದ ಆರ್‌ಸಿಬಿ ತಂಡವು ಹೆಚ್‌ಎಎಲ್‌ನಿಂದ ತಾಜ್ ವೆಸ್ಟೆಂಡ್ ಹೊಟೇಲ್‌ಗೆ ತೆರಳುತ್ತಿದ್ದ ವೇಳೆ ಅಭಿಮಾನಿಗಳನ್ನ ಕಂಡ ವಿರಾಟ್ ಕೊಹ್ಲಿ, ಚಾಂಪಿಯನ್ ಟ್ರೋಫಿಯನ್ನು ತೋರಿಸಿ ಸಂತಸಪಟ್ಟರು.

    18 ವರ್ಷಗಳ ಬಳಿಕ ಮೊದಲ ಬಾರಿಗೆ ಕಪ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಅಭಿಮಾನಿಗಳು ಭರ್ಜರಿಯಾಗಿ ಸ್ವಾಗತಿಸಿದರು. ಹೆಚ್‌ಎಎಲ್‌ನಿಂದ ತಾಜ್ ವೆಸ್ಟೆಂಡ್‌ವರೆಗಿನ ದಾರಿಯುದ್ದಕ್ಕೂ ಅಭಿಮಾನಿಗಳ ಸಾಗರವೇ ನೆರೆದಿತ್ತು. ಇದನ್ನೂ ಓದಿ: ಆರ್‌ಸಿಬಿ ಸ್ಟಾರ್‌ ಕೊಹ್ಲಿಗೆ ಕನ್ನಡದ ಬಾವುಟ ನೀಡಿದ ಡಿಕೆಶಿ – ಧ್ವಜ ಹಾರಿಸಿ ಸಂಭ್ರಮಿಸಿದ ವಿರಾಟ್‌

    ರಸ್ತೆ ಇಕ್ಕೆಲಗಳಲ್ಲೆಲ್ಲಾ ಫ್ಯಾನ್ಸ್ ನಿಂತು `ಆರ್‌ಸಿಬಿ.. ಆರ್‌ಸಿಬಿ.. ಕೊಹ್ಲಿ.. ಕೊಹ್ಲಿ’ ಎಂದು ಕೂಗಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು. ಈ ವೇಳೆ ಫ್ಯಾನ್ಸ್‌ಗಳ ಹರುಷವನ್ನು ಕಂಡ ವಿರಾಟ್ ಕೊಹ್ಲಿ ಅವರು ಬಸ್‌ನಲ್ಲೇ ಕುಳಿತು ಅಭಿಮಾನಿಗಳಿಗೆ ಚಾಂಪಿಯನ್ ಟ್ರೋಫಿ ತೋರಿಸಿ ಖುಷಿಪಟ್ಟರು. ಇದನ್ನೂ ಓದಿ: ಬೆಂಗಳೂರಿಗೆ ʻರಾಯಲ್‌ʼ ಆಗಿ ಎಂಟ್ರಿ ಕೊಟ್ಟ ಆರ್‌ಸಿಬಿ ತಂಡ

    ಟ್ರೋಫಿ ಮೇಲೆ ಕೈತಟ್ಟಿ ‘ಈ ಸಲ ಕಪ್ ನಮ್ದು’ ಎಂಬಂತೆ ಸನ್ನೆ ಮಾಡಿದರು. ಕೊಹ್ಲಿಯನ್ನು ಕಂಡು ಅಭಿಮಾನಿಗಳು ಫುಲ್ ಥ್ರಿಲ್ ಆದರು. ಇದನ್ನೂ ಓದಿ: ಆರ್‌ಸಿಬಿ ವಿಜಯೋತ್ಸವ – ಟಿಕೆಟ್‌, ಪಾಸ್‌ ಹೊಂದಿದವರಿಗೆ ಮಾತ್ರ ಚಿನ್ನಸ್ವಾಮಿಗೆ ಎಂಟ್ರಿ

  • Champions Trophy Final: ಟೀಂ ಇಂಡಿಯಾ ಗೆಲುವಿಗಾಗಿ ಅಭಿಮಾನಿಗಳಿಂದ ದೇವರಿಗೆ ವಿಶೇಷ ಪೂಜೆ

    Champions Trophy Final: ಟೀಂ ಇಂಡಿಯಾ ಗೆಲುವಿಗಾಗಿ ಅಭಿಮಾನಿಗಳಿಂದ ದೇವರಿಗೆ ವಿಶೇಷ ಪೂಜೆ

    ಮೈಸೂರು: ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದ್ದು, ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಟ್ರೋಫಿಗಾಗಿ ಹಣಾಹಣಿ ನಡೆಯಲಿದೆ. ಟೀಂ ಇಂಡಿಯಾ ಗೆಲುವಿಗಾಗಿ ಮೈಸೂರಿನಲ್ಲಿ (Mysuru) ಕ್ರಿಕೆಟ್ ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

    ಕ್ರಿಕೆಟ್ ಪ್ರೇಮಿಗಳಿಗಿಂದು ಸೂಪರ್ ಸಂಡೇಯಾಗಿದ್ದು, ಚಾಂಪಿಯನ್ಸ್ ಟ್ರೋಫಿ ಪಂದ್ಯ ವೀಕ್ಷಿಸಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಭಾರತದ ಗೆಲುವಿಗಾಗಿ ಮೈಸೂರಿನಲ್ಲಿ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ಅಗ್ರಹಾರದ ಗಣಪತಿ ದೇಗುಲದಲ್ಲಿ 101 ಈಡುಗಾಯಿ ಹೊಡೆದು ಹರಕೆ ಪೂರೈಸಿದರು. ಇದನ್ನೂ ಓದಿ: Champions Trophy 2025: ಮತ್ತೆರಡು ದಾಖಲೆಗಳ ಹೊಸ್ತಿಲಲ್ಲಿ ಚೇಸಿಂಗ್ ಮಾಸ್ಟರ್ ಕೊಹ್ಲಿ

    ಅಭಿಮಾನಿಗಳು ಟೀಂ ಇಂಡಿಯಾ ಆಟಗಾರರ ಪೋಸ್ಟರ್ ಹಿಡಿದು ಘೋಷಣೆ ಕೂಗಿದರು. ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕನ್ನಡಿಗ ಕೆ.ಎಲ್.ರಾಹುಲ್ ಪೋಸ್ಟರ್ ಹಿಡಿದು ಘೋಷಣೆ ಹಾಕಿದರು. ಬಳಿಕ ಟೀಂ ಇಂಡಿಯಾ ಆಟಗಾರರಿಗೆ ಶಕ್ತಿ ನೀಡುವಂತೆ ವಿಘ್ನ ನಿವಾರಕನಿಗೆ ಪ್ರಾರ್ಥನೆ ಸಲ್ಲಿಸಿದರು. ಇದನ್ನೂ ಓದಿ: ಚಾಂಪಿಯನ್ಸ್ ಪಟ್ಟಕ್ಕಾಗಿ ದುಬೈನಲ್ಲಿ ಗುದ್ದಾಟ – ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಲು ಟೀಂ ಇಂಡಿಯಾ ಸನ್ನದ್ಧ

    ಹೈವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿಂದು ಭಾರತ ಪಡೆ ನ್ಯೂಜಿಲೆಂಡ್ ತಂಡವನ್ನ ಎದುರಿಸಲಿದೆ. 25 ವರ್ಷಗಳ ಬಳಿಕ ಎರಡು ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿದ್ದು, ವಿಶ್ವ ಕ್ರಿಕೆಟ್ ಚಾಂಪಿಯನ್‌ಶಿಪ್‌ಗಾಗಿ ಎರಡು ತಂಡಗಳು ಸೆಣಸಾಡಲಿವೆ. ಇದನ್ನೂ ಓದಿ: ಬೆಂಗಳೂರಲ್ಲಿ ಪ್ರೇಯಸಿ, ಆಕೆಯ ಮಗನನ್ನ ಹತ್ಯೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

    ಇಡೀ ವಿಶ್ವದ ಚಿತ್ತವೇ ಇವತ್ತು ದುಬೈನತ್ತ ನೆಟ್ಟಿದೆ. ಚಾಂಪಿಯನ್ಸ್ ಪಟ್ಟಕ್ಕಾಗಿ ಇಂದು ದುಬೈ ರಣಾಂಗಣದಲ್ಲಿ ಮಹಾಕದನವೇ ನಡೆಯಲಿದೆ. ಒಂದೆಡೆ ಸೋಲಿಗೆ ಪ್ರತೀಕಾರವಾದರೆ, ಮತ್ತೊಂದೆಡೆ 12 ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರಲು ಟೀಂ ಇಂಡಿಯಾ ಸನ್ನದ್ಧವಾಗಿದೆ.

  • ಸೆಮಿಫೈನಲ್‌ನಲ್ಲಿ ಭಾರತದ ವಿರುದ್ಧ ಸೋತ ಬೆನ್ನಲ್ಲೇ ಏಕದಿನ ಕ್ರಿಕೆಟ್‌ಗೆ ಸ್ಟೀವ್‌ ಸ್ಮಿತ್‌ ನಿವೃತ್ತಿ

    ಸೆಮಿಫೈನಲ್‌ನಲ್ಲಿ ಭಾರತದ ವಿರುದ್ಧ ಸೋತ ಬೆನ್ನಲ್ಲೇ ಏಕದಿನ ಕ್ರಿಕೆಟ್‌ಗೆ ಸ್ಟೀವ್‌ ಸ್ಮಿತ್‌ ನಿವೃತ್ತಿ

    ಮುಂಬೈ: ಚಾಂಪಿಯನ್ಸ್‌ ಟ್ರೋಫಿ ಸೆಮಿಫೈನಲ್‌ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ಸೋತ ಬೆನ್ನಲ್ಲೇ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಆಸೀಸ್‌ ಸ್ಟಾರ್‌ ಬ್ಯಾಟರ್‌ ಸ್ಟೀವ್‌ ಸ್ಮಿತ್‌ (Steve Smith) ನಿವೃತ್ತಿ ಘೋಷಿಸಿದ್ದಾರೆ.

    ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳಿದ್ದಾರೆ. ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಭಾರತ ವಿರುದ್ಧದ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ತಮ್ಮ ಕೊನೆಯ ಏಕದಿನ ಪಂದ್ಯವನ್ನು ಆಡಿದರು. ಆಸ್ಟ್ರೇಲಿಯಾ ಪರ 73 ರನ್ ಗಳಿಸಿ ಸೋಲಿನ ಹಾದಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದರು. ಇದನ್ನೂ ಓದಿ: ಸಚಿನ್‌ ದಾಖಲೆ ಬ್ರೇಕ್‌ – ವಿಶ್ವದಾಖಲೆ ಬರೆದ ಕೊಹ್ಲಿ

    35 ವಯಸ್ಸಿನ ಸ್ಮಿತ್ 170 ಏಕದಿನ ಪಂದ್ಯಗಳಲ್ಲಿ ಆಡಿದ್ದು, 43.28 ಸರಾಸರಿಯಲ್ಲಿ 5800 ರನ್ ಗಳಿಸಿದ್ದಾರೆ. 12 ಶತಕಗಳು ಮತ್ತು 35 ಅರ್ಧಶತಕಗಳನ್ನು ಬಾರಿಸಿದ್ದಾರೆ. ಆಸ್ಟ್ರೇಲಿಯಾ ಪರ ಏಕದಿನ ಪಂದ್ಯಗಳಲ್ಲಿ 12 ನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿ ಹೊರಹೊಮ್ಮಿದ್ದಾರೆ. 2016 ರಲ್ಲಿ ನ್ಯೂಜಿಲೆಂಡ್ ವಿರುದ್ಧ 164 ರನ್ ಗಳಿಸಿದ್ದು ಅವರ ಅತ್ಯಧಿಕ ಸ್ಕೋರ್. ಲೆಗ್ ಸ್ಪಿನ್ನಿಂಗ್ ಆಲ್‌ರೌಂಡರ್ ಆಗಿ ಪಾದಾರ್ಪಣೆ ಮಾಡಿದ ಅವರು 28 ವಿಕೆಟ್‌ಗಳನ್ನು ಪಡೆದಿದ್ದಾರೆ. 90 ಕ್ಯಾಚ್‌ಗಳನ್ನು ಹಿಡಿದಿದ್ದಾರೆ.

    ಕ್ರಿಕೆಟ್ ಆಸ್ಟ್ರೇಲಿಯಾ ಮಾಧ್ಯಮ ಪ್ರಕಟಣೆಯ ಪ್ರಕಾರ, ಸೆಮಿಫೈನಲ್ ಸೋಲಿನ ನಂತರ ಸ್ಮಿತ್ ತಮ್ಮ ತಂಡದ ಆಟಗಾರರಿಗೆ ‘ಏಕದಿನ ಪಂದ್ಯಗಳಿಂದ ನಿವೃತ್ತರಾಗುವುದಾಗಿ’ ಹೇಳಿದ್ದರು. ಸ್ಮಿತ್ ಟೆಸ್ಟ್ ಕ್ರಿಕೆಟ್ ಮತ್ತು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಲಭ್ಯವಿರಲಿದ್ದಾರೆ. ಇದನ್ನೂ ಓದಿ: ಬಲಿಷ್ಠ ಆಸ್ಟ್ರೇಲಿಯಾ ಬಗ್ಗು ಬಡಿದು ಫೈನಲ್‌ ಪ್ರವೇಶಿಸಿದ ಭಾರತ

    ಸ್ಮಿತ್‌ 2015 ಮತ್ತು 2023 ರಲ್ಲಿ ಆಸ್ಟ್ರೇಲಿಯಾದ ಏಕದಿನ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು. ಮೈಕೆಲ್ ಕ್ಲಾರ್ಕ್ ನಿವೃತ್ತರಾದ ನಂತರ ಸ್ಮಿತ್ 50 ಓವರ್‌ಗಳ ತಂಡದ ನಾಯಕತ್ವ ವಹಿಸಿಕೊಂಡರು. ಅವರು 64 ಪಂದ್ಯಗಳಲ್ಲಿ ಆಸ್ಟ್ರೇಲಿಯಾವನ್ನು ಮುನ್ನಡೆಸಿ, ಆ ಪೈಕಿ 32 ಪಂದ್ಯಗಳಲ್ಲಿ ಗೆದ್ದರು ಮತ್ತು 28 ಪಂದ್ಯಗಳಲ್ಲಿ ಸೋತರು. ನಾಲ್ಕು ಪಂದ್ಯಗಳಲ್ಲಿ ಯಾವುದೇ ಫಲಿತಾಂಶವಿಲ್ಲ. ಗಾಯಗೊಂಡಿದ್ದ ಪ್ಯಾಟ್ ಕಮ್ಮಿನ್ಸ್ ಬದಲಿಗೆ ಚಾಂಪಿಯನ್ಸ್ ಟ್ರೋಫಿಗೆ ಅವರು ಮಧ್ಯಂತರ ಆಧಾರದ ಮೇಲೆ ನಾಯಕತ್ವ ವಹಿಸಿಕೊಂಡಿದ್ದರು.

  • Champions Trophy: ರೋಹಿತ್‌ ಶರ್ಮಾ ಪಾಕಿಸ್ತಾನಕ್ಕೆ ಹೋಗಲ್ಲ – ಬಿಸಿಸಿಐ ಸ್ಪಷ್ಟ ಸಂದೇಶ

    Champions Trophy: ರೋಹಿತ್‌ ಶರ್ಮಾ ಪಾಕಿಸ್ತಾನಕ್ಕೆ ಹೋಗಲ್ಲ – ಬಿಸಿಸಿಐ ಸ್ಪಷ್ಟ ಸಂದೇಶ

    ಮುಂಬೈ: ಚಾಂಪಿಯನ್ಸ್‌ ಟ್ರೋಫಿ (Champions Trophy 2025) ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ (Rohit Sharma) ಅವರನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಬಿಸಿಸಿಐ ನಿರ್ಧರಿಸಿದೆ.

    ರೋಹಿತ್ ಶರ್ಮಾ ಪಾಕಿಸ್ತಾನಕ್ಕೆ ಪ್ರಯಾಣಿಸುತ್ತಾರೋ ಇಲ್ಲವೋ ಎಂಬುದು ದೊಡ್ಡ ಪ್ರಶ್ನೆಯಾಗಿತ್ತು. ಅದಕ್ಕೀಗ ಬಿಸಿಸಿಐ ತೆರೆ ಎಳೆದಿದೆ. ನಾಯಕನ ಭೇಟಿ ಮತ್ತು ಫೋಟೋಶೂಟ್‌ಗಾಗಿ ರೋಹಿತ್ ಶರ್ಮಾ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಬಿಸಿಸಿಐ ದೃಢ ನಿರ್ಧಾರ ತೆಗೆದುಕೊಂಡಿದೆ ಎಂದು ಗೌರವ್‌ ಗುಪ್ತ ತಿಳಿಸಿದ್ದಾರೆ. ಇದನ್ನೂ ಓದಿ: ಇಂದಿನಿಂದ ಭಾರತ VS ಇಂಗ್ಲೆಂಡ್‌ ಟಿ20 ಕದನ – ಶುಭಾರಂಭದ ನಿರೀಕ್ಷೆಯಲ್ಲಿ ಸೂರ್ಯನ ಸೈನ್ಯ

    ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸಲು ಭಾರತ ನಿರಾಕರಿಸಿದ ನಂತರ, ಟೂರ್ನಮೆಂಟ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗಿದೆ. ರೋಹಿತ್ ಶರ್ಮಾ ಟೂರ್ನಮೆಂಟ್ ಪೂರ್ವ ನಾಯಕರ ಸಭೆಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸುವ ಬಗ್ಗೆ ಕೆಲವು ಪ್ರಶ್ನೆಗಳು ಉದ್ಭವಿಸಿದ್ದವು.

    ಎಲ್ಲಾ ತಂಡಗಳ ನಾಯಕರು ಯಾವುದೇ ಐಸಿಸಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಮೊದಲು ಒಟ್ಟುಗೂಡುತ್ತಾರೆ. ಅವರ ಯೋಜನೆಗಳು ಮತ್ತು ಗುರಿಗಳ ಬಗ್ಗೆ ಮಾತನಾಡುತ್ತಾರೆ. ಆದರೆ, ಸೆಕ್ಯೂರಿಟಿ ದೃಷ್ಟಿಯಿಂದ ಟೀಂ ಇಂಡಿಯಾ ಆಟಗಾರರನ್ನು ಪಾಕಿಸ್ತಾನಕ್ಕೆ ಕಳುಹಿಸಲು ಬಿಸಿಸಿಐ ಒಪ್ಪಿಗೆ ಸೂಚಿಸಿಲ್ಲ. ಇದನ್ನೂ ಓದಿ: ಜ.22ರಿಂದ ಭಾರತ Vs ಇಂಗ್ಲೆಂಡ್‌ ಹೈವೋಲ್ಟೇಜ್‌ ಸರಣಿ – ಇಲ್ಲಿದೆ ಡಿಟೇಲ್ಸ್

  • ವಿಶ್ವಕಪ್‌ನ ಟಾಪ್‌ 7 ತಂಡಗಳು 2025 ರ ಚಾಂಪಿಯನ್ಸ್‌ ಟ್ರೋಫಿಗೆ – ಪಾಕಿಸ್ತಾನ ಡೈರೆಕ್ಟ್‌ ಎಂಟ್ರಿ

    ವಿಶ್ವಕಪ್‌ನ ಟಾಪ್‌ 7 ತಂಡಗಳು 2025 ರ ಚಾಂಪಿಯನ್ಸ್‌ ಟ್ರೋಫಿಗೆ – ಪಾಕಿಸ್ತಾನ ಡೈರೆಕ್ಟ್‌ ಎಂಟ್ರಿ

    – ಹಾಲಿ ಚಾಂಪಿಯನ್‌ ಇಂಗ್ಲೆಂಡ್‌ ಟ್ರೋಫಿಯಿಂದ ಹೊರಗುಳಿಯುತ್ತಾ?

    ನವದೆಹಲಿ: ಈ ಬಾರಿಯ ಏಕದಿನ ವಿಶ್ವಕಪ್‌ನ (World Cup 2023) ಲೀಗ್‌ ಹಂತದಲ್ಲಿ ಅಗ್ರ 7 ಸ್ಥಾನ ಪಡೆಯುವ ತಂಡಗಳು 2025 ರ ಚಾಂಪಿಯನ್ಸ್‌ ಟ್ರೋಫಿಗೆ (2025 Champions Trophy) ಅರ್ಹತೆ ಪಡೆಯಲಿವೆ ಎಂದು ಐಸಿಸಿ ತಿಳಿಸಿದೆ.

    2025 ರ ಚಾಂಪಿಯನ್ಸ್‌ ಟ್ರೋಫಿ ಆತಿಥ್ಯವನ್ನು ಪಾಕಿಸ್ತಾನ (Pakistan) ವಹಿಸಲಿದೆ. ಹೀಗಾಗಿ ಟ್ರೋಫಿಗೆ ಪಾಕಿಸ್ತಾನ ನೇರ ಪ್ರವೇಶ ಪಡೆಯಲಿದೆ. ಭಾರತದಲ್ಲಿ ಈಗ ನಡೆಯುತ್ತಿರುವ ವಿಶ್ವಕಪ್‌ನಲ್ಲಿ ಲೀಗ್‌ ಹಂತದ ಮುಕ್ತಾಯಕ್ಕೆ ಅಗ್ರ 7 ಸ್ಥಾನ ಪಡೆಯುವ ತಂಡಗಳು ಚಾಂಪಿಯನ್ಸ್‌ ಟ್ರೋಫಿ ಟಿಕೆಟ್‌ ಪಡೆಯಲಿವೆ. ಇದನ್ನೂ ಓದಿ: ಇಂಗ್ಲೆಂಡ್‌ ವಿರುದ್ಧ 100 ರನ್‌ಗಳ ಭರ್ಜರಿ ಜಯ – 20 ವರ್ಷಗಳ ಬಳಿಕ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ

    ಒಂದು ವೇಳೆ ಈ ಟೂರ್ನಿಯಲ್ಲಿ ಪಾಕಿಸ್ತಾನ ಅಗ್ರ 7 ತಂಡಗಳ ಸಾಲಿನಲ್ಲಿ ಸ್ಥಾನ ಪಡೆದರೆ, ಆಗ 8 ನೇ ಸ್ಥಾನ ಗಳಿಸುವ ತಂಡಕ್ಕೂ ಟ್ರೋಫಿಗೆ ಅರ್ಹತೆ ಸಿಗಲಿದೆ. 2025 ಚಾಂಪಿಯನ್ಸ್ ಟ್ರೋಫಿಗೆ ಅರ್ಹತಾ ಮಾದರಿಯನ್ನು 2021 ರಲ್ಲೇ ICC ಮಂಡಳಿಯು ಅನುಮೋದಿಸಿತ್ತು. ಆದರೆ ಹಲವು ತಂಡಗಳಿಗೆ ಈ ಬಗ್ಗೆ ಮಾಹಿತಿ ಇರಲಿಲ್ಲ.

    ಟ್ರೋಫಿಯಿಂದ ಹೊರಗುಳಿಯುತ್ತಾ ಇಂಗ್ಲೆಂಡ್?‌
    ವಿಶ್ವಕಪ್‌ನ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ಈ ಬಾರಿಯ ಟೂರ್ನಿಯಲ್ಲಿ ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನಕ್ಕೆ ಕುಸಿದಿದೆ. ಅಗ್ರ ಏಳು ತಂಡಗಳಲ್ಲಿ ಸ್ಥಾನ ಪಡೆಯಲು ವಿಫಲವಾದರೆ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿಯುವ ಅಪಾಯವಿದೆ. ಇದನ್ನೂ ಓದಿ: ಡಚ್ಚರ ವಿರುದ್ಧ ಬಾಂಗ್ಲಾಕ್ಕೆ ಹೀನಾಯ ಸೋಲು – ತನ್ನ ಶೂನಿಂದ ತಾನೇ ಹೊಡೆದುಕೊಂಡ ಅಭಿಮಾನಿ

    2025 ರ ಚಾಂಪಿಯನ್ಸ್ ಟ್ರೋಫಿಯ ಅರ್ಹತಾ ವಿಧಾನವು ಪ್ರಪಂಚದಾದ್ಯಂತದ ಅನೇಕ ಕ್ರಿಕೆಟ್ ಮಂಡಳಿಗಳ ಅಚ್ಚರಿಗೆ ಕಾರಣವಾಗಿದೆ. ಅದರಲ್ಲೂ ವಿಶೇಷವಾಗಿ ಭಾರತದಲ್ಲಿ ನಡೆಯುತ್ತಿರುವ ವಿಶ್ವಕಪ್‌ಗೆ ಅರ್ಹತೆ ಪಡೆಯಲು ವಿಫಲವಾದ ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ತಂಡಗಳು ತಮ್ಮ ಸ್ಥಾನಕ್ಕಾಗಿ ಹೋರಾಡಲು ಸಾಧ್ಯವಾಗುತ್ತದೆ. ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ವಿಶ್ವಕಪ್ ಲೀಗ್‌ ಹಂತದ ಅಗ್ರ 7 ರಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾದರೆ, ವೆಸ್ಟ್ ಇಂಡೀಸ್ ಮತ್ತು ಜಿಂಬಾಬ್ವೆಯಂತಹ ಪೂರ್ಣ ಸದಸ್ಯ ರಾಷ್ಟ್ರಗಳ ಭವಿಷ್ಯವು ಪಂದ್ಯಾವಳಿಯಿಂದ ಹೊರಗುಳಿಯುವ ಸಾಧ್ಯತೆ ಇದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]