Tag: 2nd puc

  • SSLC, 2nd PUC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ – ಯಾವ ದಿನ, ಯಾವ ಪರೀಕ್ಷೆ?

    SSLC, 2nd PUC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ – ಯಾವ ದಿನ, ಯಾವ ಪರೀಕ್ಷೆ?

    ಬೆಂಗಳೂರು: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಬ್ಲಿಕ್‌ ಪರೀಕ್ಷೆಗೆ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.

    ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ SSLC ಪರೀಕ್ಷೆ- 1 ಹಾಗೂ ಮಾರ್ಚ್ 1 ರಿಂದ, ಮಾರ್ಚ್ 20 ರ ವರೆಗೆ ದ್ವೀತಿಯ ಪಿಯುಸಿ- 1 ಪರೀಕ್ಷೆ ನಡೆಯಲಿದೆ.

    SSLC ಪರೀಕ್ಷೆ -1 ವೇಳಾಪಟ್ಟಿ
    ಮಾರ್ಚ್ 21- ಪ್ರಥಮ ಭಾಷೆ
    ಮಾರ್ಚ್ 24- ಗಣಿತ
    ಮಾರ್ಚ್ 26- ದ್ವಿತೀಯ ಭಾಷೆ
    ಮಾರ್ಚ್ 29- ಸಮಾಜ ವಿಜ್ಞಾನ
    ಏಪ್ರಿಲ್ 2- ವಿಜ್ಞಾನ
    ಏಪ್ರಿಲ್ 4- ತೃತೀಯ ಭಾಷೆ

    ದ್ವೀತಿಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ
    ಮಾರ್ಚ್ 1- ಕನ್ನಡ, ಅರೇಬಿಕ್
    ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
    ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
    ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
    ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ
    ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ
    ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
    ಮಾರ್ಚ್ 13- ಅರ್ಥಶಾಸ್ತ್ರ
    ಮಾರ್ಚ್ 15- ಇಂಗ್ಲಿಷ್
    ಮಾರ್ಚ್ 17- ಭೂಗೋಳಶಾಸ್ತ್ರ
    ಮಾರ್ಚ್ 18- ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
    ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್
    ಮಾರ್ಚ್ 20- ಹಿಂದಿ

  • ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ: KEA

    ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ: KEA

    ಬೆಂಗಳೂರು : ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆಯ (CET-24) ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಸೋಮವಾರ (ಮೇ 20) ಫಲಿತಾಂಶ ಪ್ರಕಟಿಸುತ್ತಾರೆ ಎಂದು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿರುವುದು ಸತ್ಯಕ್ಕೆ ದೂರವಾದುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.

    ದ್ವಿತೀಯ ಪಿಯುಸಿಯ ವಿಜ್ಞಾನ ವಿಷಯಗಳಲ್ಲಿ ವಿದ್ಯಾರ್ಥಿಗಳು ಪಡೆದ 50%ರಷ್ಟು ಅಂಕಗಳನ್ನು ಸೇರಿಸಿಯೇ ಸಿಇಟಿ ರಾಂಕ್‌ (Rank) ಪಟ್ಟಿಯನ್ನು ಪ್ರಕಟಿಸಬೇಕಾಗುತ್ತದೆ. ಇದು ಮೊದಲಿನಿಂದಲೂ ಪಾಲಿಸುತ್ತಿರುವ ನಿಯಮ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

    ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆ ಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ CET ರಾಂಕ್ ಗೆ (Rank) ಪರಿಗಣಿಸಬೇಕಾಗುತ್ತದೆ. ಹೀಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯವಾಗಿದೆ ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: DCET-2024: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

    ಬಿಎಸ್‌ಸಿ ಕೃಷಿ ಪದವಿಗೆ ಪ್ರವೇಶ ನೀಡಲು ಕೃಷಿ ವಿಶ್ವವಿದ್ಯಾಲಯ ಕೃಷಿ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25ಕ್ಕೆ ನಿಗದಿ ಮಾಡಿದ್ದು, ಅದರ ಫಲಿತಾಂಶ ಕೂಡ ಬರಬೇಕಾಗುತ್ತದೆ. ಇದು ಸಿಇಟಿ ರಾಂಕ್ ಗೂ (Rank) ಬೇಕಾಗುತ್ತದೆ ಎಂದು ಅವರು ತಿಳಿಸಿದರು.

  • 2nd PUC Result: ವಿಜ್ಞಾನ ವಿಭಾಗದಲ್ಲಿ ಟಾಪ್ ಅಂಕ ಗಳಿಸಿದ ವಿದ್ಯಾರ್ಥಿಗಳು

    2nd PUC Result: ವಿಜ್ಞಾನ ವಿಭಾಗದಲ್ಲಿ ಟಾಪ್ ಅಂಕ ಗಳಿಸಿದ ವಿದ್ಯಾರ್ಥಿಗಳು

    ಬೆಂಗಳೂರು: ಈ ವರ್ಷ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ವಿಜ್ಞಾನ ವಿಭಾಗದಲ್ಲಿ ಇಬ್ಬರು ವಿದ್ಯಾರ್ಥಿಗಳು 596 ಅಂಕಗಳನ್ನು ಗಳಿಸುವ ಮೂಲಕ ಪ್ರಥಮ ರ‍್ಯಾಂಕ್ ಅನ್ನು ಗಿಟ್ಟಿಸಿಕೊಂಡಿದ್ದಾರೆ. ಈ ಬಾರಿ ರಾಜ್ಯದಲ್ಲಿ ವಿಜ್ಞಾನ ವಿಭಾದಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಸಾಧನೆ ಮಾಡಿರುವ ವಿದ್ಯಾರ್ಥಿಗಳ ಪಟ್ಟಿ ಹೀಗಿದೆ.

    596 ಅಂಕ ಪಡೆದ ವಿದ್ಯಾರ್ಥಿಗಳು:
    ಎಸ್‌ಎಮ್ ಕೌಶಿಕ್ – ಗಂಗೋತ್ರಿ ಪಿಯು ಕಾಲೇಜು ಶ್ರೀನಿವಾಸಪುರ, ಕೋಲಾರ ಜಿಲ್ಲೆ

    ಸುರಭಿ ಎಸ್ – ಆರ್‌ವಿ ಪಿಯು ಕಾಲೇಜು ಎನ್‌ಎಮ್‌ಕೆಆರ್‌ವಿ ಕ್ಯಾಂಪಸ್ 3ನೇ ಬ್ಲಾಕ್ ಜಯನಗರ, ಬೆಂಗಳೂರು

    595 ಅಂಕ ಪಡೆದ ವಿದ್ಯಾರ್ಥಿಗಳು:
    ಕಟ್ಟೋಜು ಜಯಿಶಿಕ – ಆರ್‌ವಿ ಪಿಯು ಕಾಲೇಜು ಎನ್‌ಎಮ್‌ಕೆಆರ್‌ವಿ ಕ್ಯಾಂಪಸ್ 3ನೇ ಬ್ಲಾಕ್ ಜಯನಗರ, ಬೆಂಗಳೂರು

    ಸಾತ್ವಿಕ್ ಪದ್ಮನಾಭ ಭಟ್ – ಮಹಾತ್ಮಗಾಂಧಿ ಮೆಮೋರಿಯಲ್ ಪಿಯು ಕಾಲೇಜು, ಉಡುಪಿ

    ಜೆಸ್ವಿತ ದಿಯಾಸ್ – ಪೂರ್ಣಪ್ರಜ್ಞಾ ಪಿಯು ಕಾಲೇಜು, ಉಡುಪಿ

    594 ಅಂಕ ಪಡೆದ ವಿದ್ಯಾರ್ಥಿಗಳು:
    ಹರ್ಷಿತ ಆರ್ – ನಾರಾಯಣ ಪಿಯು ಕಾಲೇಜು, ಬೆಂಗಳೂರು

    ನೇಹಾ ರಾವ್ – ಶ್ರೀ ವೆಂಕಟರಮಣ ಪಿಯು ಕಾಲೇಜು, ಕುಂದಾಪುರ, ಉಡುಪಿ

    ಅದಿತಿ ಆರ್ – ಎನ್‌ಎಮ್‌ಕೆಆರ್‌ವಿ ಪಿಯು ಕಾಲೇಜು, ಜಯನಗರ, ಬೆಂಗಳೂರು

    ರುಚಿತಾ ಎಂ – ಸರ್ವೋದಯ ಪಿಯು ಕಾಲೇಜು, ತುಮಕೂರು

    ಸಮಯ ಸದಾನಂದ ಮಬೆನ್ – ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜು, ಉಡುಪಿ

    ಯೋಗೇಶ್ ತುಕರಾಮ್ ಬಡಚಿ – ಸತ್ಯಸಾಯಿ ಲೋಕಸೇವಾ ಪಿಯು ಕಾಲೇಜು ದಕ್ಷಿಣ ಕನ್ನಡ ಜಿಲ್ಲೆ

    ರಜತ ಎಂ ಹೆಗಡೆ – ಎಂಇಎಸ್ ಚೈತನ್ಯ ಪಿಯು ಕಾಲೇಜು, ಉತ್ತರ ಕನ್ನಡ ಜಿಲ್ಲೆ

    ಸಿರಿ ಆರ್ ಆಚಾರ್ಯ – ಆರ್‌ವಿ ಪಿಯು ಕಾಲೇಜು, ಎನ್‌ಎಮ್‌ಕೆಆರ್‌ವಿ ಕ್ಯಾಂಪಸ್ 3ನೇ ಬ್ಲಾಕ್ ಜಯನಗರ, ಬೆಂಗಳೂರು

    ಪ್ರಚಿತ ಎಂ – ಆಳ್ವಾಸ್ ಪಿಯು ಕಾಲೇಜು, ಮೂಡುಬಿದಿರೆ, ದಕ್ಷಿಣ ಕನ್ನಡ ಜಿಲ್ಲೆ

    
    
  • ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ- ಯಾವ ದಿನ, ಯಾವ ಪರೀಕ್ಷೆ?

    ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ- ಯಾವ ದಿನ, ಯಾವ ಪರೀಕ್ಷೆ?

    ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ (2nd PUC) ಪರೀಕ್ಷೆಯ (Exam) ಅಂತಿಮ ವೇಳಾಪಟ್ಟಿ (Time Table) ಪ್ರಕಟವಾಗಿದ್ದು, 2023 ಮಾರ್ಚ್ 9 ರಿಂದ ಮಾರ್ಚ್‌ 29 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.

    ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. ಈ ಬಗ್ಗೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಇದನ್ನೂ ಓದಿ: ತರಗತಿಯಲ್ಲಿ ವಿದ್ಯಾರ್ಥಿಯನ್ನ `ಟೆರರಿಸ್ಟ್’ ಎಂದ ಪ್ರೊಫೆಸರ್ ಅಮಾನತು

    ವೇಳಾಪಟ್ಟಿ ಹೀಗಿದೆ:
    ಮಾರ್ಚ್ 9- ಕನ್ನಡ, ಅರೇಬಿಕ್
    ಮಾರ್ಚ್ 11- ಗಣಿತಶಾಸ್ತ್ರ, ಶಿಕ್ಷಣ
    ಮಾರ್ಚ್ 13- ಅರ್ಥಶಾಸ್ತ್ರ
    ಮಾರ್ಚ್ 14- ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
    ಮಾರ್ಚ್ 15- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು,ಸಂಸ್ಕೃತ, ಫ್ರೆಂಚ್
    ಮಾರ್ಚ್ 16- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
    ಮಾರ್ಚ್ 17-ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
    ಮಾರ್ಚ್‌ 18- ಭೂಗೋಳಶಾಸ್ತ್ರ, ಜೀವಶಾಸ್ತ್ರ
    ಮಾರ್ಚ್ 20- ಇತಿಹಾಸ ಭೌತಶಾಸ್ತ್ರ
    ಮಾರ್ಚ್ 21- ಹಿಂದಿ
    ಮಾರ್ಚ್‌ 23- ಇಂಗ್ಲಿಷ್
    ಮಾರ್ಚ್ 25- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
    ಮಾರ್ಚ್ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ,ಗೃಹ ವಿಜ್ಞಾನ
    ಮಾರ್ಚ್ 29- ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

    Live Tv
    [brid partner=56869869 player=32851 video=960834 autoplay=true]

  • ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ- ಬಾಲಕಿಯರೇ‌ ಮೇಲುಗೈ

    ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ- ಬಾಲಕಿಯರೇ‌ ಮೇಲುಗೈ

    ಬೆಂಗಳೂರು: ಕಳೆದ ಆಗಸ್ಟ್‌ನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ(2nd PUC) ಪೂರಕ ಪರೀಕ್ಷೆ(Exam) ಫಲಿತಾಂಶ(Result) ಪ್ರಕಟಗೊಂಡಿದೆ. ಈ ಬಾರಿಯ ಪೂರಕ ಪರೀಕ್ಷೆಯಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

    ಪೂರಕ ಪರೀಕ್ಷೆಯಲ್ಲಿ ಸುಮಾರು 1,75,905 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರ ಪೈಕಿ 65,233 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಒಟ್ಟಾರೆ ಫಲಿತಾಂಶ 37.08% ಬಂದಿದೆ. ಪಾಸ್ ಆದವರ ಪೈಕಿ ಬಾಲಕರು 36,637 (34.91%) ಹಾಗೂ ಬಾಲಕಿಯರು 28,596 (40.30%) ಪಾಸ್ ಆಗಿದ್ದಾರೆ. ಇದನ್ನೂ ಓದಿ: ಷರತ್ತು ವಿಧಿಸಿ ಭಾರತಕ್ಕೆ ಇನ್ನಷ್ಟು ಡಿಸ್ಕೌಂಟ್ ದರದಲ್ಲಿ ತೈಲ ನೀಡಲು ಮುಂದಾದ ರಷ್ಯಾ

    ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿಗೆ ಅರ್ಜಿ ಸಲ್ಲಿಕೆ ಕೊನೆ ದಿನ ಸೆಪ್ಟೆಂಬರ್ 15ಕ್ಕೆ‌ ನಿಗದಿ ಮಾಡಲಾಗಿದೆ. ಮರು ಎಣಿಕೆ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಕೆ ಕೊನೆ ದಿನ ಸೆಪ್ಟೆಂಬರ್ 21 ರಿಂದ 25 ನೀಡಲಾಗಿದೆ. ಸ್ಕ್ಯಾನಿಂಗ್ ಪ್ರತಿ ಪಡೆದವರು ಮಾತ್ರ ಮರು ಎಣಿಕೆ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬೇಕು ಅಂತ ನಿಯಮ ರೂಪಿಸಲಾಗಿದೆ. ಇದನ್ನೂ ಓದಿ: ಸದನದ ಸಮಯ ಹಾಳು ಮಾಡಲಾರೆ: ಹೆಚ್‌ಡಿಕೆ

    Live Tv
    [brid partner=56869869 player=32851 video=960834 autoplay=true]

  • ಸೆಪ್ಟೆಂಬರ್ 12ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

    ಸೆಪ್ಟೆಂಬರ್ 12ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

    ಬೆಂಗಳೂರು: ದ್ವಿತೀಯ ಪಿಯುಸಿ (PUC) ಪೂರಕ ಪರೀಕ್ಷೆ (Exam) ಫಲಿತಾಂಶ ಸೆಪ್ಟೆಂಬರ್ 12ಕ್ಕೆ ಪ್ರಕಟಿಸುವುದಾಗಿ ಪಿಯುಸಿ ಬೋರ್ಡ್ ತಿಳಿಸಿದೆ.

    ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12 ರಂದು ಪ್ರಕಟಿಸಲಾಗುತ್ತದೆ. ಬೆಳಗ್ಗೆ 11 ಗಂಟೆ ನಂತರ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಇಂಡಿಯಾ ಗೇಟ್‌ನಲ್ಲಿ ಸುಭಾಷ್‌ ಚಂದ್ರ ಬೋಸ್ ಪ್ರತಿಮೆ ಅನಾವರಣ; ಕರ್ತವ್ಯ ಪಥ ಉದ್ಘಾಟಿಸಿದ ಪ್ರಧಾನಿ ಮೋದಿ

    ಸೆಪ್ಟೆಂಬರ್ 12 ಬೆಳಗ್ಗೆ 11 ಗಂಟೆಗೆ ಇಲಾಖೆ ವೆಬ್ ಸೈಟ್‍ನಲ್ಲಿ ಪಿಯುಸಿ ಬೋರ್ಡ್ ಫಲಿತಾಂಶ ಪ್ರಕಟಿಸಲಿದೆ. karresults.nic.in ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಆಗಸ್ಟ್‌ 12 ರಿಂದ 25ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆದಿತ್ತು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ 1,85,270 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇದನ್ನೂ ಓದಿ: ರಾಜಕಾಲುವೆ ಒತ್ತುವರಿ ಬಗ್ಗೆ ಬಿಗ್‍ ಬುಲೆಟಿನ್‍ನಲ್ಲಿ ಪ್ರಸ್ತಾಪ – ಸಿದ್ದರಾಮಯ್ಯ ಪ್ರಶಂಸೆ

    Live Tv
    [brid partner=56869869 player=32851 video=960834 autoplay=true]

  • ದ್ವಿತೀಯ ಪಿಯು ಫಲಿತಾಂಶ ಪ್ರಕಟ – ಟಾಪರ್ಸ್ ಯಾರ‍್ಯಾರು ಗೊತ್ತಾ?

    ದ್ವಿತೀಯ ಪಿಯು ಫಲಿತಾಂಶ ಪ್ರಕಟ – ಟಾಪರ್ಸ್ ಯಾರ‍್ಯಾರು ಗೊತ್ತಾ?

    ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಿಮ್ರಾನ್ ಶೇಷರಾವ್ 600 ಅಂಕಗಳಿಗೆ 598 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

    ಸಿಮ್ರಾನ್ ಶೇಷರಾವ್ ಬೆಂಗಳೂರಿನ ಎನ್‍ಎಂಕೆಆರ್‌ವಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ಇವರು ವಿಜ್ಞಾನ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕರೆ ಮಾಡಿ ಶುಭ ಕೋರಿದ್ದಾರೆ. ಈ ವೇಳೆ ಎಂಜಿನಿಯರಿಂಗ್ ಓದುವ ಆಸೆ ಇದೆ ಎಂದು ತನ್ನ ಕನಸನ್ನು ವಿದ್ಯಾರ್ಥಿನಿ ಸಚಿವರಿಗೆ ತಿಳಿಸಿದರು.

    ಇನ್ನುಳಿದಂತೆ ವಾಣಿಜ್ಯ ವಿಭಾಗದಲ್ಲಿ 4 ವಿದ್ಯಾರ್ಥಿಗಳು 600 ಅಂಕಗಳಿಗೆ 596 ಅಂಕ ಗಳಿಸಿ ಟಾಪರ್ಸ್ ಆಗಿದ್ದು, ಬೆಂಗಳೂರಿನ ಜೈನ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮಾನವ ವಿನಯ್ ಕೇಜ್ರಿವಾಲ್, ಬೆಂಗಳೂರಿನ ಬಿಜಿಎಸ್ ಕಾಲೇಜಿನ ನೀಲು ಸಿಂಗ್, ಬೆಂಗಳೂರಿನ ಸೆಂಟ್ ಕ್ಲಾರಟ್ ಪಿಯು ಕಾಲೇಜಿನ ಆಕಾಶ್ ದಾಸ್ ಹಾಗೂ ಚಿಕ್ಕಬಳ್ಳಾಪುರ ಕಾಲೇಜಿನ ನೇಹಾ ಈ ಸಾಧನೆಯನ್ನು ಮಾಡಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಪಠ್ಯಪುಸ್ತಕ ಪರಿಷ್ಕರಣೆ ವಾಪಸ್ ಪಡೆಯಲ್ಲ: ಬಿಸಿ ನಾಗೇಶ್

    ಕಲಾ ವಿಭಾಗದ ಇಬ್ಬರು ವಿದ್ಯಾರ್ಥಿಗಳು ಟಾಪರ್ಸ್ ಆಗಿದ್ದಾರೆ. ಬಳ್ಳಾರಿ ಕಾಲೇಜಿನ ಶ್ವೇತಾ ಭೀಮಾ ಶಂಕರ್ ಭೈರಗೊಂಡ ಹಾಗೂ ಮಡಿವಾಳರಾ ಸಹನಾ 600 ಅಂಕಗಳಿಗೆ 594 ಅಂಕಗಳನ್ನು ಪಡೆದು ಕಲಾ ವಿಭಾಗದಲ್ಲೇ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇದನ್ನೂ ಓದಿ: 2nd PUC ಫಲಿತಾಂಶ ‌ಪ್ರಕಟ- 61.88% ಮಕ್ಕಳು ಪಾಸ್‌, ವಿದ್ಯಾರ್ಥಿನಿಯರೇ ಮೇಲುಗೈ

    Live Tv

  • ನಾನು ಹೃದಯದಿಂದ ಮುಸ್ಲಿಂ ಮಗಳು, ಹಿಜಬ್‍ನಿಂದಲ್ಲ: ಕಾಶ್ಮೀರ ಟಾಪರ್

    ನಾನು ಹೃದಯದಿಂದ ಮುಸ್ಲಿಂ ಮಗಳು, ಹಿಜಬ್‍ನಿಂದಲ್ಲ: ಕಾಶ್ಮೀರ ಟಾಪರ್

    ಶ್ರೀನಗರ: ನಾನು ಹೃದಯದಿಂದ ಮುಸ್ಲಿಂ ಮಗಳು ಆದರೆ ಹಿಜಬ್‍ನಿಂದಲ್ಲ. ಹೀಗಾಗಿ ನಾನು ಉತ್ತಮ ಮುಸ್ಲಿಂ ಎಂದು ಸಾಬೀತು ಪಡಿಸುವ ಅಗತ್ಯವಿಲ್ಲ ಎಂದು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಕಾಶ್ಮೀರಕ್ಕೆ ಪ್ರಥಮ ಸ್ಥಾನ ಪಡೆದ ಶ್ರೀನಗರದ ಆರೂಸಾ ಪರ್ವೇಜ್ ತಿಳಿಸಿದ್ದಾರೆ.

    ಫೆ. 8ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿತ್ತು. ಇದರಲ್ಲಿ ಆರೂಸಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗಕ್ಕೆ 500ಕ್ಕೆ 499 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಆರೂಸಾಗೆ ಸನ್ಮಾನ ಕಾರ್ಯಕ್ರಮವೊಂದು ನಡೆದಿತ್ತು. ಆದರೆ ಆರೂಸಾ ಹಿಜಬ್ ಧರಿಸದ ಕಾರಣ ಅವರನ್ನು ಟ್ರೋಲ್ ಮಾಡಲಾಗಿತ್ತು. ಜೊತೆಗೆ ಅವರಿಗೆ ಅನೇಕ ಕೊಲೆ ಬೆದರಿಕೆಗಳು ಬಂದಿದ್ದವು.

    ಇದಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ನನ್ನ ಧರ್ಮ, ನನ್ನ ಹಿಜಬ್ ಮತ್ತು ನನ್ನ ಅಲ್ಲಾ ಇವೆಲ್ಲವೂ ನನ್ನ ವೈಯಕ್ತಿಕ. ನನ್ನ ಧರ್ಮದ ಶ್ರೇಷ್ಠತೆಯನ್ನು ನಂಬುವವರಿಗೆ ನಾನು ಹಿಜಬ್ ಧರಿಸಬೇಕು ಅಥವಾ ಧರಿಸಬಾರದು ಎಂದು ಏಕೆ ಒತ್ತಾಯಿಸಬೇಕು. ಈ ಕಾಮೆಂಟ್‍ಗಳು ನನಗೆ ಅಪ್ರಸ್ತುತವಾಗುತ್ತದೆ. ಆದರೆ ನನ್ನ ಪೋಷಕರು ಆಘಾತಕ್ಕೆ ಒಳಗಾಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದ ಜನತೆಗೆ ಕರೆಂಟ್ ಶಾಕ್ – ಪ್ರತಿ ಯೂನಿಟ್‍ಗೆ 30 ಪೈಸೆ ಹೆಚ್ಚಳ?

    ನೀವು ಟ್ರೋಲ್ ಮಾಡುವುದಕ್ಕಿಂತಲೂ ಹೆಚ್ಚಾಗಿ ನಾನು ಅಲ್ಲಾಹುನನ್ನು ನಂಬುವೆ ಮತ್ತು ಇಸ್ಲಾಮಿಕ್ ತತ್ವಗಳನ್ನು ಪಾಲಿಸುತ್ತೇನೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ನಾಳೆ ಹೈಕೋರ್ಟ್‍ನಲ್ಲಿ ಹಿಜಬ್ ಸಂಘರ್ಷ ವಿಚಾರಣೆ – ಪೊಲೀಸ್ ಭದ್ರತೆಯಲ್ಲಿ ಹೈಸ್ಕೂಲ್ ಓಪನ್

  • ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಅಗತ್ಯ ಸೂಚನೆ: ಬಿ.ಸಿ ನಾಗೇಶ್

    ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಅಗತ್ಯ ಸೂಚನೆ: ಬಿ.ಸಿ ನಾಗೇಶ್

    ಬೆಂಗಳೂರು: ಆಗಸ್ಟ್-ಸೆಪ್ಟೆಂಬರ್‍ ನಲ್ಲಿ 2021ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಮತ್ತು ದೋಷರಹಿತವಾಗಿ ನಡೆಸಲು ಪ್ರತಿ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಈ ಬಗ್ಗೆ ಅಗತ್ಯ ಸಲಹೆ ಸೂಚನೆ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

    ದ್ವಿತೀಯ ಪಿಯುಸಿ ಪರೀಕ್ಷೆ ಆಗಸ್ಟ್ 19ರಿಂದ ಸೆಪ್ಟೆಂಬರ್ 3ರವರೆಗೆ ನಡೆಯಲಿದೆ. ಈ ಸಂಬಂಧ ಇಂದು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ತಮ್ಮ ವಿಧಾನಸೌಧದ ಕಚೇರಿಯಲ್ಲಿ ಸಭೆ ನಡೆಸಿದ ಬಿ.ಸಿ ನಾಗೇಶ್, ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳು ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಿದರು. ರಾಜ್ಯದಲ್ಲಿ ಒಟ್ಟು 5,546 ಕಾಲೇಜುಗಳಿಂದ 18,414 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಇದಕ್ಕಾಗಿ 187 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಕೇಂದ್ರಗಳಲ್ಲಿ ಆಗಸ್ಟ್ 17ರ ಒಳಗೆ ಪೂರ್ವಸಿದ್ಧತೆ ಆಗಿರುವ ಬಗ್ಗೆ ಜಿಲ್ಲಾಧಿಕಾರಿಗಳು ಖಚಿತ ಮಾಡಿಕೊಳ್ಳಬೇಕೆಂದು ಸೂಚಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡರು.

    ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಮ್ ಪ್ರಕಾರ ಪರೀಕ್ಷೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಪತಿಗೆ ದೇವಸ್ಥಾನ ನಿರ್ಮಿಸಿದ ಪತ್ನಿ

    ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್, ಪದವಿ ಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕರಾದ ಸ್ನೇಹಲ್ ಸೇರಿದಂತೆ ಇಲಾಖೆಯ ಉನ್ನತ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

    ವೀಡಿಯೋ ಕಾನ್ಫರೆನ್ಸ್:
    ಪರೀಕ್ಷೆಗೆ ಸಂಬಂಧಿಸಿದಂತೆ ವಿಕಾಸ ಸೌಧದದಲ್ಲಿ ಆಯೋಜಿಸಿದ್ದ ವೀಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ ಸಚಿವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿ ಅವರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಗತ್ಯ ಸಲಹೆ ಸೂಚನೆ ನೀಡಿದರು.

  • ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಎಲ್ಲ ವಿದ್ಯಾರ್ಥಿಗಳು ಪಾಸ್

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಎಲ್ಲ ವಿದ್ಯಾರ್ಥಿಗಳು ಪಾಸ್

    – ಒಟ್ಟು 2,239 ಮಂದಿಗೆ 600 ಅಂಕ
    – ದಕ್ಷಿಣ ಕನ್ನಡದ 445 ಮಂದಿಗೆ 600 ಅಂಕ

    ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು ಎಲ್ಲ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ತಜ್ಞರ ಸಮಿತಿ ನೀಡಿದ ಶಿಫಾರಸ್ಸಿನ ಆಧಾರದಲ್ಲಿ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ.

    ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಕುರಿತು ಮಾಹಿತಿ ನೀಡಿದ್ದಾರೆ. ದ್ವಿತೀಯ ಪಿಯುಸಿಯಲ್ಲಿ 38 ವಿಷಯಗಳಿವೆ. ಅಲ್ಲದೆ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದ ಕಾರಣ ಪರೀಕ್ಷೆ ನಡೆಸಿಲ್ಲ. ಎಲ್ಲ ಮಕ್ಕಳನ್ನು ಪಾಸ್ ಮಾಡಲು ತೀರ್ಮಾನ ಮಾಡಲಾಯಿತು. ಅದರಂತೆ ಪ್ರಥಮ ಪಿಯುಸಿ, ಎಸ್‍ಎಸ್‍ಎಲ್‍ಸಿ ಯಲ್ಲಿ ಪಡೆದ ಅಂಕಗಳು, ದ್ವೀತಿಯ ಪಿಯುಸಿಯಲ್ಲಿನ ಅಸೆಸ್ಮೆಂಟ್ ಅಂಕಗಳು ಮತ್ತು ಶೇ.5ರಷ್ಟು ಗ್ರೇಸ್ ಅಂಕ ನಿಗದಿ ಮಾಡಲಾಗಿದೆ. ಯಾವುದೇ ಮಗುವಿಗೆ ಅನ್ಯಾಯ ಆಗದಂತೆ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

    ಖಾಸಗಿ ಅಭ್ಯರ್ಥಿಗಳಿಗೂ ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಸಿ ಫಲಿತಾಂಶ ನೀಡಲಾಗುತ್ತದೆ. ತಜ್ಞರ ಸಮಿತಿ ಶಿಫಾರಸ್ಸಿನ ಆಧಾರದಲ್ಲಿ ಅಂಕಗಳ ಮಾನದಂಡವನ್ನು ಅನುಸರಿಸಿ ಫಲಿತಾಂಶ ಪ್ರಕಟ ಮಾಡಲಾಗಿದೆ. ಎಸ್‍ಎಸ್‍ಎಲ್‍ಸಿ ಯಲ್ಲಿ ಶೇ.45 ಅಂಕ, ವಿಷಯವಾರು ಅಂಕ ಹಾಗೂ ಪ್ರಥಮ ಪಿಯುಸಿ ಪರೀಕ್ಷೆಯ ಶೇ.45ರಷ್ಟು ಪ್ರತಿ ವಿಷಯವಾರು ಅಂಕ ಪಡೆಯಲಾಗಿದೆ. ಶೇ.10ರಷ್ಟು ದ್ವೀತಿಯ ಪಿಯುಸಿಯ ವಿದ್ಯಾರ್ಥಿ ಶೈಕ್ಷಣಿಕ ಚಟುವಟಿಕೆ ಗೆ ಇಂಟರ್ನಲ್ ಅಸೆಸ್ಮೆಂಟ್ ಅಂಕ ನೀಡಲಾಗಿದೆ. ಅದರ ಜೊತೆ ಪ್ರಥಮ ಪಿಯುಸಿ ಪಡೆದ ಅಂಕಗಳಿಗೆ ಶೇ.5 ಗ್ರೇಸ್ ಅಂಕ ನೀಡಿ ಫಲಿತಾಂಶ ನೀಡಲಾಗಿದೆ

    ರಿಪೀಟರ್ಸ್ ಗಳನ್ನು ಪಾಸ್ ಮಾಡಲಾಗಿದೆ. ಕನಿಷ್ಠ ಉತೀರ್ಣ ಅಂಕ ಮತ್ತು ಶೇ.5ರಷ್ಟು ಗ್ರೇಸ್ ಅಂಕ ನೀಡಿ ಪಾಸ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. 3,35,138 ಬಾಲಕರು, 3,31,359 ಬಾಲಕಿಯರು ಸೇರಿ ಒಟ್ಟು 6,66,497 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 95,628 ಉನ್ನತ ಶ್ರೇಣಿ, 3,55,078 ಪ್ರಥಮ ದರ್ಜೆ, 1,47,055 ದ್ವಿತೀಯ ದರ್ಜೆ ಹಾಗೂ 68,729 ಜನ ತೃತೀಯ ದರ್ಜೆ ಹಾಗೂ ಜಸ್ಟ್ ಪಾಸ್ ಆಗಿದ್ದಾರೆ ಎಂದು ತಿಳಿಸಿದರು. ರಿಪೀಟರ್ಸ್ 76344 ಜನ ಉತ್ತೀರ್ಣರಾಗಿದ್ದಾರೆ.

    600-600 ಅಂಕ ಪಡೆದ 5 ಜಿಲ್ಲೆಗಳ ವಿದ್ಯಾರ್ಥಿಗಳು:
    ದಕ್ಷಿಣ ಕನ್ನಡ – 445
    ಬೆಂಗಳೂರು ದಕ್ಷಿಣ – 302
    ಬೆಂಗಳೂರು ಉತ್ತರ – 261
    ಉಡುಪಿ- 149
    ಹಾಸನ- 104

    600-600 ಅಂಕ ಪಡೆದವರು:
    ಕಲಾ ವಿಭಾಗ – 18
    ವಾಣಿಜ್ಯ – 292
    ವಿಜ್ಞಾನ – 1929
    ಒಟ್ಟು ವಿದ್ಯಾರ್ಥಿಗಳು – 2239 ವಿದ್ಯಾರ್ಥಿಗಳು 600 ಅಂಕ