Tag: 2nd PUC Result

  • 2nd PUC ಫಲಿತಾಂಶ ‌ಪ್ರಕಟ- 61.88% ಮಕ್ಕಳು ಪಾಸ್‌, ವಿದ್ಯಾರ್ಥಿನಿಯರೇ ಮೇಲುಗೈ

    2nd PUC ಫಲಿತಾಂಶ ‌ಪ್ರಕಟ- 61.88% ಮಕ್ಕಳು ಪಾಸ್‌, ವಿದ್ಯಾರ್ಥಿನಿಯರೇ ಮೇಲುಗೈ

    ಬೆಂಗಳೂರು: 2021-2022ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ‌ಪ್ರಕಟವಾಗಿದ್ದು, ರಾಜ್ಯದಲ್ಲಿ 61.88% ಮಕ್ಕಳು ಪಾಸ್‌ ಆಗಿದ್ದಾರೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

    ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಫಲಿತಾಂಶ ಪ್ರಕಟಿಸಿದ್ದು, ಈ ವೇಳೆ ಮಾತನಾಡಿದ ಅವರು, ಮಕ್ಕಳು ನಿರೀಕ್ಷೆಗಿಂತ ಚೆನ್ನಾಗಿ ಮಾಡಿದ್ದಾರೆ. ಕೋವಿಡ್ ಮಧ್ಯೆ ಉತ್ತಮವಾಗಿ ಮಕ್ಕಳು ಪರೀಕ್ಷೆ ಬರೆದಿದ್ದಾರೆ. ಮಕ್ಕಳು ಸ್ಪೋಟೀವ್ ಆಗಿ ಫಲಿತಾಂಶ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

    bc nagesh

    ದಕ್ಷಿಣ ಕನ್ನಡ ಮೊದಲ ಸ್ಥಾನ (88.02%) ಪಡೆದಿದ್ದು, 2 ಹಾಗೂ 3 ನೇ ಸ್ಥಾನದಲ್ಲಿ ಕ್ರಮವಾಗಿ ಉಡುಪಿ (86.38%) ವಿಜಯಪುರ (77.14%) ಪಡೆದಿದ್ದು, ಕೊನೆ ಸ್ಥಾನ ಚಿತ್ರದುರ್ಗ (49.31%) ಪಡೆದುಕೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು www.karresults.nic.in ಹಾಗೂ www.pue.kar.nic.in ವೆಬ್‌ಸೈಟ್‌ ಮೂಲಕ ವೀಕ್ಷಿಸಬಹುದು.

    81 ಮೌಲ್ಯಮಾಪನ ಕೇಂದ್ರದಲ್ಲಿ ಪರೀಕ್ಷೆ ನಡೆದಿತ್ತು. ಒಟ್ಟು 5,99,794 ಹೊಸ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 4,02,697 ವಿದ್ಯಾರ್ಥಿ ಪಾಸ್ ಆಗಿದ್ದಾರೆ ಹಾಗೂ ರಿಪೀಟರ್ಸ್ 61,838ರಲ್ಲಿ 14,403 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಇನ್ನುಳಿದಂತೆ 21,931 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, 5,866 ಮಂದಿ ಪಾಸ್ ಆಗಿದ್ದಾರೆ. ಒಟ್ಟಾರೆ 6,83,563 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

    4,22,966 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಅದರಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳೇ ಹೆಚ್ಚು ಪಾಸ್‌ ಆಗಿದ್ದಾರೆ. ವಿಜ್ಞಾನ ವಿಭಾಗದ ಶೇ. 72.53ರಷ್ಟು ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದ ಶೇ. 64.97ರಷ್ಟು ವಿದ್ಯಾರ್ಥಿಗಳು ಹಾಗೂ ಕಲಾ ವಿಭಾಗದಲ್ಲಿ ಶೇ. 48.71ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6,810 ವಿದ್ಯಾರ್ಥಿಗಳು ಗ್ರೇಸ್ ಅಂಕ ಪಡೆದು ಪಾಸ್ ಆಗಿದ್ದಾರೆ. ಈ ಬಾರಿ ಒಂದೇ ಒಂದು ಕಾಲೇಜಿನಲ್ಲೂ ಶೂನ್ಯ ಫಲಿತಾಂಶ ದಾಖಲಾಗಿಲ್ಲ. ಇದನ್ನೂ ಓದಿ: ಪ್ರಧಾನಿ ಮೋದಿ ವೇದಿಕೆಯಲ್ಲಿ ಯೋಗ ಮಾಡಲು ಯದುವೀರ್‌ಗೆ ಆಹ್ವಾನ

    ಸರ್ಕಾರಿ ಕಾಲೇಜುಗಳಲ್ಲಿ 52.84% ಫಲಿತಾಂಶ ಬಂದಿದ್ದು, ಅನುದಾನಿತ ಕಾಲೇಜು 62.05% ಹಾಗೂ ಖಾಸಗಿ ಕಾಲೇಜುಗಳು 76.50% ಫಲಿತಾಂಶ ಪಡೆದುಕೊಂಡಿವೆ. ಇನ್ನುಳಿದಂತೆ ಕಾರ್ಪೊರೇಷನ್ ಕಾಲೇಜು 55.72% ಫಲಿತಾಂಶ ಪಡೆದುಕೊಂಡಿದೆ. ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪಡೆಯಲು ಜೂನ್ 30 ಕೊನೆ ದಿನವಾಗಿದ್ದು, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಜುಲೈ 13 ಕೊನೆ ದಿನವಾಗಿದೆ. ಇದನ್ನೂ ಓದಿ: ‘ಅಗ್ನಿಪಥ್’ ವಿರೋಧದ ನಡುವೆ ಗೃಹ ಇಲಾಖೆಯಿಂದ ಮಹತ್ವದ ನಿರ್ಧಾರ

    Live Tv

  • 2nd PUC ಫಲಿತಾಂಶ ನಾಳೆ ಪ್ರಕಟ

    2nd PUC ಫಲಿತಾಂಶ ನಾಳೆ ಪ್ರಕಟ

    ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶವನ್ನು ನಾಳೆ (ಜೂ.18) ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

    ಈ ಕುರಿತು ಬಿ.ಸಿ.ನಾಗೇಶ್‌ ಅವರು ಟ್ವೀಟ್‌ ಮಾಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ‘ಅಗ್ನಿಪಥ್’ ದೇಶ ಸೇವೆ ಮಾಡಲು ಯುವಕರಿಗೆ ಸುವರ್ಣ ಅವಕಾಶ: ರಾಜನಾಥ್ ಸಿಂಗ್

    ಕಳೆದ ಏಪ್ರಿಲ್-ಮೇ ತಿಂಗಳಲ್ಲಿ ನಡೆದಿದ್ದ ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುವುದು. 6.80 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

    6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಆಗಿದ್ದರು. ಅವರಲ್ಲಿ 3,46,936 ವಿದ್ಯಾರ್ಥಿಗಳು ಹಾಗೂ 3,37,319 ವಿದ್ಯಾರ್ಥಿನಿಯರು ಆಗಿದ್ದಾರೆ. ರಾಜ್ಯದ 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಶಿಕ್ಷಣ ಸಚಿವರ ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

    Live Tv

  • ಕಡು ಬಡತನದಲ್ಲೂ ಛಲ ಬಿಡದೇ ಶಿಕ್ಷಣದಲ್ಲಿ ಸಾಧನೆಗೈದ ವಿದ್ಯಾರ್ಥಿ

    ಕಡು ಬಡತನದಲ್ಲೂ ಛಲ ಬಿಡದೇ ಶಿಕ್ಷಣದಲ್ಲಿ ಸಾಧನೆಗೈದ ವಿದ್ಯಾರ್ಥಿ

    ಬಳ್ಳಾರಿ: ಕಡು ಬಡತನ, ಕಷ್ಟಗಳ ನಡುವೆಯೂ ವಿದ್ಯಾರ್ಥಿಯೊರ್ವ ಛಲ ಬಿಡದೇ ಓದಿ ದ್ವಿತೀಯ ಪಿಯುಸಿ ಶಿಕ್ಷಣ ವಿಭಾಗದಲ್ಲಿ 571 ಅಂಕಗಳನ್ನು ಪಡೆದು ಬಡ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾನೆ.

    ಹೌದು. ಬಳ್ಳಾರಿ ಜಿಲ್ಲೆ ಹೂವಿನಹಡಗಲಿಯ ದಾದು ಖಲಂದರ್ ದ್ವಿತೀಯ ಪಿಯುಸಿಯಲ್ಲಿ 571 ಅಂಕಗಳಿಸಿ ಉತ್ತೀರ್ಣನಾಗುವ ಮೂಲಕ ಬಡ ವಿಧ್ಯಾರ್ಥಿಗಳಿಗೆ ಮಾದರಿಯಾಗಿದ್ದಾನೆ. ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಪಡೆಯುವ ಮೂಲಕ ಬಡತನ ಶಾಪವಲ್ಲ. ಬಡತನವನ್ನು ಮೆಟ್ಟಿ ನಿಂತರೆ ಸಾಧನೆಯ ಹಾದಿ ದೂರವಲ್ಲ ಎಂಬುದನ್ನು ಸಾಬೀತು ಮಾಡಿದ್ದಾನೆ. ನನ್ನ ತಂದೆಯ ಅಕಾಲಿಕ ಮರಣದಿಂದ ತಾಯಿಗೆ ಎದುರಾದ ಸಂಕಷ್ಠ ನನ್ನ ಇಂದಿನ ಸಾಧನೆಗೆ ಕಾರಣ. ಇಂದು ತುಂಬಾ ಖುಷಿಯಾಗುತ್ತಿದೆ ಎಂದು ವಿದ್ಯಾರ್ಥಿ ಸಂತೋಷವನ್ನು ಹಂಚಿಕೊಂಡಿದ್ದಾನೆ. ಇದನ್ನೂ ಓದಿ:ಹಾರ್ಡ್‌ವರ್ಕ್‌ಗೆ ತಕ್ಕ ಪ್ರತಿಫಲ ಸಿಕ್ಕಿದೆ: ಖುಷಿ ಹಂಚಿಕೊಂಡ ಉಡುಪಿಯ ಸ್ವಾತಿ

    ಕೊಟ್ಟೂರಿನ ಇಂದು ಪಿಯು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ದಾದು ತನ್ನ ತಾಯಿ ಕಷ್ಟವನ್ನ ಕಣ್ಣಾರೆ ಕಂಡು ನೊಂದುಕೊಳ್ಳದ ದಿನವೇ ಇಲ್ಲ, ತಾಯಿ ಪಟ್ಟ ಕಷ್ಟಕ್ಕೆ ಪ್ರತಿಫಲವಾಗಿ ದಾದು ದ್ವಿತೀಯ ಪಿಯು ಶಿಕ್ಷಣ ವಿಭಾಗದಲ್ಲಿ 571 ಅಂಕಗಳಿಸುವ ಮೂಲಕ ಉತ್ತಮ ಸಾಧನೆಗೈದಿದ್ದಾನೆ. ಇದನ್ನೂ ಓದಿ:ಬಳ್ಳಾರಿಯ ಇಂದು ಕಾಲೇಜಿನ ವಿದ್ಯಾರ್ಥಿಗಳಿಗೆ ರ್‍ಯಾಂಕ್ ಕಟ್ಟಿಟ್ಟ ಬುತ್ತಿ – ಈ ಕಾಲೇಜಿನ ವಿಶೇಷತೆ ಏನು?

    ಕಳೆದ ಹತ್ತು ವರ್ಷಗಳ ಹಿಂದೆ ತಂದೆಯನ್ನ ಕಳೆದುಕೊಂಡ ದಾದು ತಾಯಿ ಆಶ್ರಯದಲ್ಲಿ ಬೆಳೆದನು. ಹೂವಿನಹಡಗಲಿ ಪುರಸಭೆಯಲ್ಲಿ ತಂದೆ ಮಾಬುಸಾಬು ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದರು. ಆದ್ರೆ ಮಾಬುಸಾಬ್ ಅಕಾಲಿಕ ಮರಣ ಹೊಂದಿದ ನಂತರ ತಾಯಿ ಮಾಬುನ್ನಿ ಕೂಡ ಅದೇ ಪುರಸಭೆಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮುಂದುವರೆಸಿದರು. ಕಷ್ಟ ಪಟ್ಟು ತನ್ನ ಮಗನಿಗೆ ಶಿಕ್ಷಣ ಕೊಡಿಸಿ, ಆತನ ಸಾಧನೆಗೆ ಬೆನ್ನೆಲುಬಾಗಿ ಜೊತೆಗೆ ನಿಂತರು. ಇದೀಗ ಬಡ ತಾಯಿ ಮತ್ತು ಮಗ ದಾದು ಖಲಂದರ್ ಸಾಧನೆಗೆ ಹೂವಿನಹಡಗಲಿಯ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.