ಹಾಸನ: ಮೇಕೆದಾಟು ಪಾದಯಾತ್ರೆಗೆ ಹಾಸನ ಜಿಲ್ಲೆಯಿಂದ ಸುಮಾರು 6 ಸಾವಿರ ಜನ ಹೊರಟಿದ್ದು, ಕಾಂಗ್ರೆಸ್ ಮುಖಂಡರಿಂದ ಕೊರೊನಾ ನಿಯಮಗಳನ್ನು ಸಂಪೂರ್ಣ ಗಾಳಿಗೆ ತೂರಿದಂತಾಗಿದೆ.
ಮಾಜಿ ಎಂಎಲ್‍ಸಿ ಗೋಪಾಲಸ್ವಾಮಿ, ಮಾಜಿ ಶಾಸಕ ಪುಟ್ಟೇಗೌಡ, ಬಾಗೂರು ಮಂಜೇಗೌಡ, ಕೃಷ್ಣೇಗೌಡ ನೇತೃತ್ವದಲ್ಲಿ ಸುಮಾರು 300 ವಾಹನದಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ಕಾರ್ಯಕರ್ತರು ಹೊರಟಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊರೊನಾ ಪಾಸಿಟಿವ್
ಬಳ್ಳಾರಿ: ಜಿಂದಾಲ್ ಕಂಪನಿಗೆ ನೋಟಿಸ್ ನೀಡುವ ಮೂಲಕ ಹೊರರಾಜ್ಯದ ಕಾರ್ಮಿಕರನ್ನು ಸದ್ಯಕ್ಕೆ ನಿಷೇಧಿಸಿ ಎಂದು ಬಳ್ಳಾರಿ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ನಗರದ 3ನೇ ಅಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಾಗಲು ವಲಸೆ ಕಾರ್ಮಿಕರೇ ಕಾರಣರಾದ ಹಿನ್ನೆಲೆ ಬೆಳ್ಳಂಬೆಳಿಗ್ಗೆ ಜಿಂದಾಲ್ ಕಂಪನಿಗೆ ನೋಟಿಸ್ ನೀಡುವ ಮೂಲಕ ಶಾಕ್ ನೀಡಿದ್ದಾರೆ. ಕೊರೊನಾ 3ನೇ ಅಲೆಯ ಈ ವೇಳೆ ಕಳೆದ ಐದು ದಿನಗಳಲ್ಲಿ ಪ್ರಕರಣಗಳ ಸಂಖ್ಯೆ 500ಕ್ಕೇರಿದೆ. ಇದನ್ನೂ ಓದಿ: ಯುಪಿ ಬಿಜೆಪಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ
100ರ ಅಸುಪಾಸು ಇದ್ದ ಕೊರೊನಾ ಪ್ರಕರಣಗಳು ಕಳೆದ ಐದು ದಿನಗಳಲ್ಲಿ 500ರ ಗಡಿ ತಲುಪಿದೆ.ಇದರಲ್ಲಿ ಜಿಂದಾಲ್ ಕಂಪನಿಯ ಆಸುಪಾಸಿನಲ್ಲಿ ಮತ್ತು ಸಂಡೂರು ತಾಲೂಕಿನಲ್ಲಿ ಹೆಚ್ಚು ಪ್ರಕರಣ ಕಂಡುಬಂದ ಹಿನ್ನೆಲೆ ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: ಫಸ್ಟ್ ಟೈಂ ಮನುಷ್ಯನಿಗೆ ಹಂದಿ ಹೃದಯ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ
ನಗರದ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪತಿಯವರು ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗ: ಕೋವಿಡ್-19 ಹೆಚ್ಚಳ ಹಿನ್ನೆಲೆ ಸರ್ಕಾರ ರಾಜ್ಯದೆಲ್ಲೆಡೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿರುವುದಕ್ಕಾಗಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಜಾಸ್ತಿ ಇರೋದು ಹೌದು, ನಾನು ಇಲ್ಲ ಅಂತಾ ಹೇಳಿಲ್ಲ. ರಾಜ್ಯದ ಎಲ್ಲಾ ಕಡೆಯೂ ಇದು ಇಲ್ಲ. ಕೆಲವೆಡೆ 2-3-4-5 ಈ ರೀತಿ ಇದೆ. ಜಾಸ್ತಿ ಅಂದರೆ 10 ರವರೆಗೆ ಈ ಪ್ರಕರಣಗಳಿವೆ. ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ಆದರೆ ರಾಜಧಾನಿಯಲ್ಲಿ ತುಂಬಾ ಜಾಸ್ತಿ ಇದೆ ಅಂದುಕೊಂಡು ಇಡೀ ರಾಜ್ಯಕ್ಕೆ ರೂಲ್ಸ್ ತರುವುದು ಸರಿನಾ ಅಂತಾ ಅನೇಕರು ನನಗೆ ಪ್ರಶ್ನೆ ಮಾಡ್ತಿದ್ದಾರೆ ಎಂದರು. ಇದನ್ನೂ ಓದಿ: ಹುಟ್ಟೂರಿಗೆ ನೆರವಾದ ಸೋನು ಸೂದ್-1,000 ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಣೆ
ಉದಾಹರಣೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಅಷ್ಟಿಲ್ಲ. ಅಷ್ಟು ಇಲ್ಲದಿರುವ ಸಂದರ್ಭದಲ್ಲಿ ನಮ್ಮ ಮೇಲೆ ಹೇರಿದರೆ ನಮ್ಮ ವ್ಯವಹಾರಕ್ಕೆ ತೊಂದರೆ ಆಗುತ್ತದೆ. ಸಾರ್ವಜನಿಕರು ಇದಕ್ಕೆ ಮುಂಜಾಗ್ರತೆ ತೆಗೆದುಕೊಳ್ಳುತ್ತಿದ್ದೇವೆ. ಖಂಡಿತಾ ಮಾಸ್ಕ್ ಧರಿಸುತ್ತೇವೆ. ಸ್ಯಾನಿಟೈಸರ್ ಬಳಸುತ್ತೇವೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತೇವೆ. ದಯವಿಟ್ಟು ನಮಗೆ ತೊಂದರೆ ಕೊಡಬೇಡಿ ಎನ್ನುತ್ತಿದ್ದಾರೆ. ಈ ನಿಟ್ಟಿನಲ್ಲಿ ನಾಳೆ ಕ್ಯಾಬಿನೆಟ್‍ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಉಳಿದವರ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ನೂತನ ದಾಖಲೆ ಬರೆದ ಭಾರತ ಮೂಲದ ಹರ್‌ಪ್ರೀತ್ ಚಂಡಿ
ಬೆಂಗಳೂರಿನಲ್ಲಿ ಬಿಗಿ ಮಾಡಬೇಕು. ಗಡಿ ಜಿಲ್ಲೆಗಳಲ್ಲಿ ಸರ್ಕಾರ ಬಿಗಿ ಮಾಡಲೇ ಬೇಕು. ಇಂತಹ ಸಲಹೆಯನ್ನು ನಾಳೆ ಸಚಿವ ಸಂಪುಟದಲ್ಲಿ ಕೊಡುತ್ತೇನೆ. ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ ಎಲ್ಲಾ ಕಡೆಯಿಂದ ನನಗೆ ಅನೇಕರು ಕರೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಬಿಗಿ ಮಾಡಿ ನಾವು ಸಹಕಾರ ಕೊಡುತ್ತೇವೆ. ನಾವು ಯಾವುದೇ ಖರೀದಿಗೂ ಬೆಂಗಳೂರಿಗೆ ಹೋಗುವುದಿಲ್ಲ ಎಂದು ವ್ಯಾಪಾರಸ್ಥರು ಹೇಳುತ್ತಿದ್ದಾರೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ ಶಾಲೆಗಳಿಗೆ ಹೋಗುವುದಕ್ಕೆ ಅವಕಾಶ ಮಾಡಿಕೊಡಿ ಎಂದು ಕೇಳುತ್ತಿದ್ದಾರೆ. ಸಾರ್ವಜನಿಕರ ಅಭಿಪ್ರಾಯವನ್ನು ನಾನು ನಾಳೆ ಕ್ಯಾಬಿನೆಟ್ ಮುಂದೆ ಇಡುತ್ತೇನೆ ಎಂದರು.
ಆಟೋ ರಿಕ್ಷಾ ಡ್ರೈವರ್, ಹಮಾಲರು ಅವರ ಜೀವನಕ್ಕೆ ಎಲ್ಲಿ ಹೋಗಬೇಕು. ಕೂಲಿ ಕಾರ್ಮಿಕರು, ಟೈಲರ್ ಎಲ್ಲರಿಗೂ ತೊಂದರೆ ಆಗುತ್ತದೆ. ಇಡೀ ರಾಜ್ಯದ ಜನರ ಅಭಿಪ್ರಾಯವನ್ನು ಸಚಿವ ಸಂಪುಟದ ಮುಂದೆ, ಮುಖ್ಯಮಂತ್ರಿ ಅವರ ಮುಂದೆ ಇಡುತ್ತೇನೆ ಎಂದು ನುಡಿದರು.
ಹಾವೇರಿ: ರಾಜ್ಯದಲ್ಲಿ ಲಾಕ್‍ಡೌನ್ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದರು.
ನಗರದ ಮುನ್ಸಿಪಲ್ ಹೈಸ್ಕೂಲ್ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಾಕ್‍ಡೌನ್ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಜನರು ಮೈಮರೆತು ಓಡಾಡಬಾರದು. ಕೋವಿಡ್ ನಿಯಮಗಳನ್ನ ಪಾಲನೆ ಮಾಡಬೇಕು. ಜನರು ಲಾಕ್‍ಡೌನ್ ಮಾಡುವ ಪರಿಸ್ಥಿತಿ ತರಬಾರದು. ಒಂದು ವೇಳೆ ಕೊರೊನಾ ಕೇಸ್‍ಗಳು ಹೆಚ್ಚಾದರೆ ಲಾಕ್‍ಡೌನ್ ಮಾಡಬಹುದು ಎಂದರು. ಇದನ್ನೂ ಓದಿ: ರಾಜಕೀಯ ಬಿಕ್ಕಟ್ಟು – ಸುಡಾನ್ ಪ್ರಧಾನಿ ರಾಜೀನಾಮೆ ಘೋಷಣೆ
ಕಾಂಗ್ರೆಸ್ ನಿಂದ ಮೇಕೆದಾಟು ಯೋಜನೆ ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪಾದಯಾತ್ರೆ ವಿಚಾರದಲ್ಲಿ ಕಾಂಗ್ರೆಸ್ ನವರು ನಾಟಕ ಮಾಡುತ್ತಿದ್ದಾರೆ. ಈ ಯೋಜನೆ ಕಾರ್ಯಗತಗೊಳಿಸಲು ಬಿಜೆಪಿ ಸರ್ಕಾರ ಬದ್ಧವಾಗಿದೆ. ನಮ್ಮ ಸರ್ಕಾರ ಯೋಜನೆ ಕಾರ್ಯಗತ ಮಾಡಲು ಬದ್ಧವಾಗಿದೆ ಅಂತಾ ಗೊತ್ತಾಗುತ್ತಿದ್ದಂತೆ ಕಾಂಗ್ರೆಸ್‍ನವರು ಹೋರಾಟ ಮಾಡುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್‍ನವರು ಇದನ್ನ ಮಾಡುತ್ತಿದ್ದಾರೆ ಎಂದು ನುಡಿದರು. ಇದನ್ನೂ ಓದಿ: YSRPC ಸದಸ್ಯನಿಂದ NTR ಪ್ರತಿಮೆ ಧ್ವಂಸಗೊಳಿಸಲು ಯತ್ನ – ವೀಡಿಯೋ ವೈರಲ್
ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೀರಾವರಿ ಮಂತ್ರಿಗಳಾಗಿದ್ದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ 5 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿದ್ದರು. ಆಗ ಯಾರೂ ಕೂಡ ಮೇಕೆದಾಟು ಬಗ್ಗೆ ಮಾತನಾಡಲಿಲ್ಲ. ಮೇಕೆದಾಟು ಕಾರ್ಯಗತ ಮಾಡಲು ಮುಂದಾಗಲಿಲ್ಲ. ಆದರೆ ಈ ಯೋಜನೆ ಕಾರ್ಯಗತ ಮಾಡಲು ನಾವು ಬದ್ಧರಿರೋದಾಗಿ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಎಂದು ತಿಳಿಸಿದರು.
ಲಂಡನ್: ಕೊರೊನಾ ಮೂರನೇ ಅಲೆಯಲ್ಲಿ ಹೆಚ್ಚು ಮಕ್ಕಳು ಸೋಂಕಿಗೆ ಒಳಗಾಗುವ ಸಾಧ್ಯತೆ ಇದೆ ಎಂದು ಭಾರತವೂ ಸೇರಿದಂತೆ ಅನೇಕ ರಾಷ್ಟ್ರದ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಈ ನಡುವೆ ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಪರಿಣಾಕಾರಿಯಲ್ಲ ಎಂದು ಲಂಡನ್ ಕಾಲೇಜಿನ ಅಧ್ಯಯನ ತಂಡವೊಂದು ವರದಿ ಮಾಡಿದೆ.
ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳೇ ಟಾರ್ಗೆಟ್ ಎಂದು ಹೇಳಲಾಗುತ್ತಿದೆ. ಅದರೆ ಮಕ್ಕಳ ಮೇಲೆ ಕೊರೊನಾ ಎಫೆಕ್ಟ್ ಕಡಿಮೆ ಎಂದು ಲಂಡನ್‍ನ ತಜ್ಞರು, ಲಂಡನ್ ನ ಸಂಶೋಧಕರು ನಡೆಸಿರುವ ಅಧ್ಯಯನದಿಂದ ಸಿಹಿ ಸುದ್ದಿ ಹೊರಬಿದ್ದಿದೆ. ಲಂಡನ್‍ನ ಕಿಂಗ್ಸ್ ಕಾಲೇಜಿನ ತಜ್ಞರ ತಂಡವೊಂದು ಕೋವಿಡ್-19 ಮಕ್ಕಳ ಮೇಲೆ ಹೇಗೆ ಪರಿಣಾಮವನ್ನು ಬೀರಿದೆ ಎನ್ನುವುದರ ಮೇಲೆ ಅಧ್ಯಯನ ನಡೆಸಿದೆ.
ಅಧ್ಯಯನದಲ್ಲಿ ಮಕ್ಕಳ ಮೇಲೆ ಕೊರೊನಾ ಎಫೆಕ್ಟ್ ಕಡಿಮೆ ಎಂಬ ವರದಿ ಮಾಡಲಾಗಿದ್ದು, ಸೋಂಕಿಗೆ ಒಳಗಾಗಿದ್ದ 25 ಸಾವಿರ ಮಕ್ಕಳ ಬಗ್ಗೆ ಅಧ್ಯಯನ ಮಾಡಿರುವ ತಂಡವೂ ಸೆಪ್ಟೆಂಬರ್ 2020 ರಿಂದ ಫೆಬ್ರವರಿ 2021 ರ ಅವಧಿಯಲ್ಲಿ ಸೋಂಕಿಗೆ ಒಳಗಾದ ಮಕ್ಕಳ ಬಗ್ಗೆ ಮಾಹಿತಿ ಕಲೆ ಹಾಕಿದೆ. ಸೋಂಕಿಗೆ ಒಳಗಾದ ಪೋಷಕರಿಂದ ಮಾಹಿತಿ ಕಲೆ ಹಾಕಿ ಮಕ್ಕಳ ಮೇಲೆ ಕೋವಿಡ್ ಯಾವ ರೀತಿ ಪ್ರಭಾವ ಬೀರಿತ್ತು, ಮತ್ತು ಎಷ್ಟು ದಿನಗಳಲ್ಲಿ ಮಕ್ಕಳು ಗುಣಮುಖರಾಗಿದ್ದರು. ಎನ್ನುವುದನ್ನು ಡೇಟಾ ಸಂಗ್ರಹ ಮಾಡಿ ವರದಿ ಸಿದ್ಧಪಡಿಸಿದೆ. ಇದನ್ನೂ ಓದಿ: ಕೊರೊನಾ 3ನೇ ಅಲೆ ಮಕ್ಕಳನ್ನು ಬಾಧಿಸುವ ಬಗ್ಗೆ ಪುರಾವೆಗಳಿಲ್ಲ: ಡಾ.ವಿ.ಕೆ.ಪೌಲ್
ಕೋವಿಡ್‍ಗೆ ಒಳಗಾದ ಮಕ್ಕಳು 4 ರಿಂದ 6 ದಿನಗಳಲ್ಲಿ ಗುಣಮುಖರಾಗಿದ್ದಾರೆ. ಜೊತೆಗೆ 4 ವಾರಕ್ಕಿಂತ ಹೆಚ್ಚು ದಿನಗಳಲ್ಲಿ ಕೋವಿಡ್ ನ ಲಕ್ಷಣಗಳಿಂದ ಸಂಪೂರ್ಣವಾಗಿ ಗುಣಮುಖರಾಗುತ್ತಿದ್ದಾರೆ. ಹಿರಿಯರಲ್ಲಿ ದೀರ್ಘಾವಧಿಯರೆಗೆ ರೋಗ ಲಕ್ಷಣಗಳು ಇರುತ್ತದೆ. ಆದರೆ ಮಕ್ಕಳಿಗೆ ಸೋಂಕು ತಗುಲಿದ ಕೆಲವೇ ದಿನಗಳಲ್ಲಿ ಸೋಂಕಿನ ಲಕ್ಷಣಗಳಿಂದ ಮುಕ್ತರಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.