Tag: 45 ಕನ್ನಡ ಸಿನಿಮಾ

  • ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗೆ ಅರ್ಜುನ್ ಜನ್ಯ ಆ್ಯಕ್ಷನ್ ಕಟ್

    ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗೆ ಅರ್ಜುನ್ ಜನ್ಯ ಆ್ಯಕ್ಷನ್ ಕಟ್

    ರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ 60ನೇ ವರ್ಷದ ಜನ್ಮ ದಿನದ ಸಂಭ್ರಮದಲ್ಲಿದ್ದಾರೆ. ನೆಚ್ಚಿನ ನಟನ ಹೊಸ ಚಿತ್ರದ ಅಪ್‌ಡೇಟ್ಸ್ ಕೇಳಿ ಥ್ರಿಲ್ ಆಗಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವಣ್ಣಗೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆ್ಯಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ.

    ತಮ್ಮ ಹಾಡುಗಳ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಲೆ ಸೃಷ್ಟಿಸಿದ ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶನಕ್ಕೆ ಇಳಿದಿದ್ದಾರೆ. ಕನ್ನಡ ಚಿತ್ರರಂಗದ ಲೆಜೆಂಡ್ ಶಿವರಾಜ್‌ಕುಮಾರ್ ಅರ್ಜುನ್ ಜನ್ಯ ಡೈರೆಕ್ಷನ್ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಈಗ ಟೈಟಲ್ ಅನೌನ್ಸ್ ಆಗಿದೆ. `45’ಎಂದು ಈ ಚಿತ್ರಕ್ಕೆ ಟೈಟಲ್ ಇಡಲಾಗಿದೆ. ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಮೂಡಿ ಬರಲಿರುವ ಈ ಚಿತ್ರದ ಟೈಟಲ್ ಅನ್ನು ಕನ್ನಡದಲ್ಲಿ ಶಿವಣ್ಣ ಶೀರ್ಷಿಕೆ ಅನಾವರಣ ಮಾಡಿದ್ದಾರೆ. ಇದನ್ನೂ ಓದಿ:ಶಿವರಾಜ್ ಕುಮಾರ್ ಬರ್ತಡೇ : ಏನೆಲ್ಲ ಸ್ಪೆಷಲ್ ಗೊತ್ತಾ?

    ಮೊದಲ ಬಾರಿಗೆ ಶಿವಣ್ಣ ಮತ್ತು ಅರ್ಜುನ್ ಜನ್ಯ ಕಾಂಬಿನೇಷನ್‌ನಲ್ಲಿ ಚಿತ್ರವೊಂದು ಮೋಡಿ ಬರುತ್ತಿದ್ದು, ಏನಿದು `45′ ಅಂತ ಈಗಾಗಲೇ ಅಭಿಮಾನಿಗಳ ತಲೆಯಲ್ಲಿ ಹುಳ ಬಿಟ್ಟಿದ್ದಾರೆ. ತಮ್ಮ ಚೊಚ್ಚಲ ಚಿತ್ರದಲ್ಲೇ ಅರ್ಜುನ್ ಜನ್ಯ ಯಾವ ರೀತಿ ಕಥೆ ಹೇಳಲಿದ್ದಾರೆ ಅಂತಾ ಫ್ಯಾನ್ಸ್‌ಗೆ ಕುತೂಹಲ ಮೂಡಿದೆ. ಇನ್ನು ಈ ಚಿತ್ರಕ್ಕೆ ಎಂ. ರಮೆಶ್ ರೆಡ್ಡಿ ಬಂಡವಾಳ ಹೂಡಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಇವರ ಚಿತ್ರ ಹೇಗೆಲ್ಲಾ ಕಮಾಲ್ ಮಾಡಬಹುದು ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]