ಬೆಂಗಳೂರು: ರಾಜ್ಯ ಪಠ್ಯಕ್ರಮ ಹೊಂದಿದ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟ ಬೆನ್ನಲ್ಲೇ, ಪರೀಕ್ಷೆ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್‌ನಿಂದ ವೇಳಾಪಟ್ಟಿ ಪ್ರಕಟವಾಗಿದೆ. ಹೈಕೋರ್ಟ್ ಆದೇಶದ ಮೇರೆಗೆ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
5ನೇ ತರಗತಿಗೆ ಮಾರ್ಚ್ 27 ರಿಂದ ಮಾರ್ಚ್ 30ರ ವರೆಗೆ ಹಾಗೂ 8ನೇ ತರಗತಿಗೆ ಮಾರ್ಚ್ 27 ರಿಂದ ಏಪ್ರಿಲ್ 1ರ ವರೆಗೆ ಪರೀಕ್ಷೆ ನಡೆಯಲಿದೆ. ಆಯಾ ಶಾಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ಫಲಿತಾಂಶ ವಿದ್ಯಾರ್ಥಿಗೆ ಮಾತ್ರ ತಿಳಿಸಬೇಕು. ಗೌಪ್ಯತೆ ಕಾಪಾಡಲು ಶಿಕ್ಷಣ ಇಲಾಖೆ ಸೂಚಿಸಿದೆ.
5ನೇ ತರಗತಿ ವೇಳಾಪಟ್ಟಿ
ಮಾ.27 – ಪ್ರಥಮ ಭಾಷೆ
ಮಾ.28 – ದ್ವಿತೀಯ ಭಾಷೆ
ಮಾ.29 – ಪರಿಸರ ಅಧ್ಯಯನ
ಮಾ.30 – ಗಣಿತ
8ನೇ ತರಗತಿ ವೇಳಾಪಟ್ಟಿ
ಮಾ.27 – ಪ್ರಥಮ ಭಾಷೆ
ಮಾ.28 – ದ್ವಿತೀಯ ಭಾಷೆ
ಮಾ.29 – ತೃತೀಯ ಭಾಷೆ
ಮಾ.30 – ಗಣಿತ
ಮಾ.31 – ವಿಜ್ಞಾನ
ಏ.1 – ಸಮಾಜ ವಿಜ್ಞಾನ
ಬೆಂಗಳೂರು: 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. 10 ದಿನಗಳ ಬಳಿಕ ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ. ಆ ಮೂಲಕ ಪೋಷಕರ ಗೊಂದಲಕ್ಕೂ ತೆರೆ ಎಳೆದಿದೆ.
ಬೋರ್ಡ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದ್ದು, ಬೋರ್ಡ್ ಪರೀಕ್ಷೆ ನಡೆಸಲು ಆದೇಶ ಹೊರಡಿಸಿದೆ.
10 ದಿನದ ಬಳಿಕ ಪರೀಕ್ಷೆ ನಡೆಸಬೇಕು. ಮಾ.27 ನೇ ತಾರೀಖಿನಿಂದ ಪರೀಕ್ಷೆ ಪ್ರಾರಂಭಿಸಬೇಕು. ಆದರೆ ಯಾವುದೇ ವಿದ್ಯಾರ್ಥಿಗಳನ್ನು ಫೇಲ್ ಮಾಡುವಂತಿಲ್ಲ ಎಂದು ಸೂಚಿಸಿದೆ.
ನ್ಯಾ.ನರೇಂದರ್ ಹಾಗೂ ನ್ಯಾ. ಅಶೋಕ್ ಕಿಣಗಿ ಅವರಿದ್ದ ಪೀಠವು ಅರ್ಜಿ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದೆ. ಕುಸ್ಮಾ ಪರವಾಗಿ ವಕೀಲ ಕೆ.ವಿ.ಧನಂಜಯ ಹಾಗೂ ಸರ್ಕಾರದ ಪರವಾಗಿ ಎಎಜಿ ಧ್ಯಾನ್‌ಚಿನ್ನಪ್ಪ ವಾದ ಮಂಡಿಸಿದರು.
ಇದೇ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು.
ಬೆಂಗಳೂರು: ಇದೇ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ (5 and 8th class) ಬೋರ್ಡ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ (Karnataka High Court) ಆದೇಶ ಹೊರಡಿಸಿದೆ. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ.
5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಶಾಲಾ ಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ ಮಟ್ಟದ ಮಂಡಳಿ ಪರೀಕ್ಷೆ ನಡೆಸುವ ರಾಜ್ಯ ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಆದೇಶ ಈ ವರ್ಷಕ್ಕೆ ಮಾತ್ರ ಅನ್ವಯ. ಈ ವರ್ಷ ಮಾತ್ರ ಬೋರ್ಡ್ ಎಕ್ಸಾಂ ರದ್ದುಪಡಿಸಲಾಗಿದೆ. ಮುಂದಿನ ವರ್ಷ ಎಲ್ಲಾ ನಿಯಮಗಳನ್ನ ಪಾಲಿಸಿ. ಪೋಷಕರ ಅಭಿಪ್ರಾಯವನ್ನು ಪಡೆದು, ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮವಾಗಿ ನಿರ್ಧರಿಸಿ ಎಂದು ಶಿಕ್ಷಣ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ. ಇದನ್ನೂ ಓದಿ: ಊರಲ್ಲಿರೋ ಮಕ್ಕಳೆಲ್ಲಾ ನನ್ನವೇ ಅಂದ್ರೆ ಕಾಲಲ್ಲಿರೋದು ಕೈಗೆ ತಗೋತಾರೆ – ಸಿ.ಟಿ ರವಿ ಕಿಡಿ
2022-23ನೇ ಶೈಕ್ಷಣಿಕ ಸಾಲಿನಲ್ಲಿ 5 ಮತ್ತು 8ನೇ ತರಗತಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಕುರಿತಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಂಘವು ತಕರಾರು ಅರ್ಜಿ ಸಲ್ಲಿಸಿತ್ತು. 5, 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಕ್ರಮವಹಿಸಲು ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘದ (ರುಪ್ಸಾ) ಅಧ್ಯಕ್ಷರು ಮೇಲ್ಮನವಿ ಸಲ್ಲಿಸಿದ್ದರು.
ಫೆ.23 ರಂದು ವಿಚಾರಣೆ ನಡೆಸಿದ್ದ ಪೀಠವು ಸರ್ಕಾರದ ನಿರ್ಧಾರಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿತ್ತು. ಹೀಗಾಗಿ ವಿಭಾಗೀಯ ಪೀಠಕ್ಕೆ ರುಪ್ಸಾ ಮೇಲ್ಮನವಿ ಸಲ್ಲಿಸಿತ್ತು.
ಮೇಲ್ಮನವಿಯನ್ನು ವಿಚಾರಣೆಗೆ ಪರಿಗಣಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ವಿಭಾಗೀಯ ಪೀಠವು ತುರ್ತಾಗಿ ಅರ್ಜಿ ಇತ್ಯರ್ಥಪಡಿಸಿ ಎಂದು ಸೂಚಿಸಿತ್ತು. ಅದರಂತೆ ಏಕಸದಸ್ಯ ಪೀಠವು ಈ ತೀರ್ಪು ನೀಡಿದೆ.