Tag: 6G

  • ಭಾರತ ಎಲ್ಲರಿಗಿಂತ ಮೊದಲು 6G ಅಭಿವೃದ್ಧಿಪಡಿಸಿ ಬಿಡುಗಡೆ ಮಾಡಲಿದೆ: ಪಿಯೂಷ್ ಗೋಯಲ್

    ಭಾರತ ಎಲ್ಲರಿಗಿಂತ ಮೊದಲು 6G ಅಭಿವೃದ್ಧಿಪಡಿಸಿ ಬಿಡುಗಡೆ ಮಾಡಲಿದೆ: ಪಿಯೂಷ್ ಗೋಯಲ್

    ನವದೆಹಲಿ: 6ಜಿಯನ್ನು ಬೇರೆಯವರು ಅಭಿವೃದ್ಧಿ ಪಡಿಸುವ ಮೊದಲು ಭಾರತ (India) ಅಭಿವೃದ್ಧಿ ಪಡಿಸಿ ಬಿಡುಗಡೆಗೊಳಿಸಲು ಆಶಿಸುತ್ತದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ (Piyush Goyal) ಹೇಳಿದ್ದಾರೆ.

    ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 3ಜಿ ಮತ್ತು 4ಜಿ ಸೇವೆ ಪ್ರಾರಂಭಿಸುವಾಗ ಇತರ ರಾಷ್ಟ್ರಗಳಿಗಿಂತ ಭಾರತ ಹಿಂದೆ ಇತ್ತು. ಆದರೆ ಈಗ ನಾವು ಪ್ರಪಂಚದ ಇತರ ಭಾಗಗಳನ್ನು ಅನುಸರಿಸುತ್ತಿದ್ದ ದಿನಗಳು ಬದಲಾಗುತ್ತಿವೆ. ನಾವು 6G ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಜಗತ್ತನ್ನು ಮುನ್ನಡೆಸುತ್ತಿದ್ದೇವೆ ಎಂದರು. ಇದನ್ನೂ ಓದಿ: 2030ರ ವೇಳೆಗೆ ಭಾರತಕ್ಕೆ 6ಜಿ ನೆಟ್‌ವರ್ಕ್ – ಪ್ರಧಾನಿ ಮೋದಿ

    ಮುಂದಿನ ಮೂರು ವರ್ಷಗಳಲ್ಲಿ ದೇಶವು ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ. ಇಡೀ ಜಗತ್ತು ವ್ಯಾಪಾರ ಮಾಡಲು ಮತ್ತು ಭಾರತದೊಂದಿಗೆ ಆರ್ಥಿಕ (Economy) ಸಂಬಂಧಗಳನ್ನು ವಿಸ್ತರಿಸಲು ಬಯಸುತ್ತದೆ. ಅವರು ತಮ್ಮ ಆರ್ಥಿಕತೆಯನ್ನು ಬಲಪಡಿಸಲು ಭಾರತೀಯ ಕೌಶಲ್ಯಗಳನ್ನು ನೋಡುತ್ತಿದ್ದಾರೆ ಎಂದು ಗೋಯಲ್ ಹೇಳಿದರು.

    ಐಎಂಎಫ್‌ (IMF) ಮತ್ತು ವಿಶ್ವ ಬ್ಯಾಂಕ್ (World Bank) ಪ್ರಕಾರ ಹಣಕಾಸು ವರ್ಷ 25ರಲ್ಲಿ ಭಾರತೀಯ ಆರ್ಥಿಕತೆಯು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗುವ ಸಾಧ್ಯತೆಯಿದೆ. ದೇಶವು 7 ಪ್ರತಿಶತದಷ್ಟು ಬೆಳವಣಿಗೆಯನ್ನು ದಾಖಲಿಸುವ ನಿರೀಕ್ಷೆಯಿದೆ.

     

  • ಅಕ್ಟೋಬರ್‌ ಎರಡನೇ ವಾರ 5G ಸೇವೆ ಆರಂಭ – 2030ರ ಒಳಗಡೆ ಭಾರತದಲ್ಲಿ 6G: ಮೋದಿ

    ಅಕ್ಟೋಬರ್‌ ಎರಡನೇ ವಾರ 5G ಸೇವೆ ಆರಂಭ – 2030ರ ಒಳಗಡೆ ಭಾರತದಲ್ಲಿ 6G: ಮೋದಿ

    ನವದೆಹಲಿ: ದೇಶದಲ್ಲಿ 5ಜಿ ಸೇವೆ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಅಕ್ಟೋಬರ್ ಎರಡನೇ ವಾರದಲ್ಲಿ 5ಜಿ ಸೇವೆ ಆರಂಭಿಸುತ್ತೇವೆ. ಜೊತೆಗೆ 6ಜಿ ಸೇವೆ ಬಗ್ಗೆ ಈಗಾಗಲೇ ಕೆಲಸ ಆರಂಭವಾಗಿದ್ದು 2030ರ ಒಳಗಾಗಿ 6ಜಿ ಸೇವೆ ಆರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

    ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2022 ರ ಗ್ರ್ಯಾಂಡ್ ಫಿನಾಲೆಯಲ್ಲಿ ಮಾತನಾಡಿದ ಮೋದಿ, ದೇಶದಲ್ಲಿ ತಂತ್ರಜ್ಞಾನಗಳ ಬೆಳವಣಿಗೆ ಸಾಕಷ್ಟು ವೇಗವಾಗಿ ನಡೆಯುತ್ತಿದೆ. ಈಗಾಗಲೇ ಡ್ರೋನ್‌ಗಳನ್ನು ಕೃಷಿ ಮತ್ತು ಆರೋಗ್ಯ ವಿಭಾಗದಲ್ಲಿ ಬಳಕೆ ಮಾಡಲಾಗುತ್ತಿದೆ. ದೇಶದಲ್ಲಿ ಗೇಮಿಂಗ್ ಮತ್ತು ತಂತ್ರಜ್ಞಾನಗಳ ಬೆಳವಣಿಗೆಯಿಂದ ಯುವ ಸಮೂಹಕ್ಕೆ ಬೆಂಬಲ ನೀಡುತ್ತಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಫಸ್ಟ್‌ ಟೈಂ ರಷ್ಯಾ ವಿರುದ್ಧ ಮತ ಚಲಾಯಿಸಿದ ಭಾರತ

    ಯುವ ಸಮೂಹ ತಂತ್ರಜ್ಞಾನಗಳ ಸದುಪಯೋಗ ಪಡೆದುಕೊಳ್ಳಬೇಕು. ಈ ಮೂಲಕ ದೇಶದ ಪ್ರಗತಿಗೆ ಸಹಕಾರಿಯಾಗಬೇಕು. ಗ್ರಾಮೀಣ ಭಾಗಗಳಲ್ಲೂ ಕೂಡ 5ಜಿ ಸೇವೆ ಆರಂಭಕ್ಕೆ ಸರ್ಕಾರ ಸಿದ್ಧವಿದೆ. ಕಳೆದ 7-8 ವರ್ಷಗಳಿಂದ ದೇಶದಲ್ಲಿ ತಂತ್ರಜ್ಞಾನಗಳ ಉನ್ನತ ಮಟ್ಟದ ಬೆಳವಣಿಗೆ ಆಗುತ್ತಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 3 ವರ್ಷಗಳ ನಂತರ ದಲೈಲಾಮಾ ದೆಹಲಿಗೆ ಭೇಟಿ

    ಆಕ್ಟೋಬರ್‌ 12ಕ್ಕೆ 5ಜಿ ಸೇವೆ ಆರಂಭ:
    ದೇಶದಲ್ಲಿ ಅಕ್ಟೋಬರ್ 12ರಿಂದ 5ಜಿ ಸೇವೆ ಆರಂಭಗೊಳ್ಳಲಿದ್ದು, ಮುಂದಿನ ಕೆಲವರ್ಷಗಳಲ್ಲಿ ಗ್ರಾಮೀಣ ಭಾಗಗಳಲ್ಲೂ 5ಜಿ ಸೇವೆ ದೊರಕುವಂತೆ ಮಾಡುತ್ತೇವೆ ಎಂದು ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

    ಮೂಲಗಳ ಪ್ರಕಾರ ಮೊದಲ ಭಾಗವಾಗಿ ದೇಶದ 13 ನಗರಗಳಲ್ಲಿ 5ಜಿ ಸೇವೆ ಆರಂಭವಾಗುತ್ತಿದೆ. ಅಹಮದಾಬಾದ್, ಬೆಂಗಳೂರು, ಚಂಡೀಗಢ, ಚೆನ್ನೈ, ದೆಹಲಿ, ಗಾಂಧಿನಗರ, ಗುರುಗ್ರಾಮ್, ಹೈದರಾಬಾದ್, ಜಾಮ್‍ನಗರ, ಕೋಲ್ಕತ್ತಾ, ಲಕ್ನೋ, ಮುಂಬೈ ಮತ್ತು ಪುಣೆಯಲ್ಲಿ ಮೊದಲ ಹಂತದ 5ಜಿ ಸೇವೆ ಆರಂಭವಾಗಲಿದೆ. ಈ ನಗರಗಳಲ್ಲಿ ಆಯ್ದ ಕೆಲ ಪ್ರದೇಶಗಳಲ್ಲಿ ಜನರಿಗೆ 5ಜಿ ಸೇವೆ ದೊರಕುವ ಸಾಧ್ಯತೆ ಇದೆ.

    Live Tv
    [brid partner=56869869 player=32851 video=960834 autoplay=true]