Tag: 7ನೇ ವೇತನ ಆಯೋಗ

  • ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ – 7ನೇ ವೇತನ ಆಯೋಗದ ಶಿಫಾರಸು ಜಾರಿ: ಸಿಎಂ ಘೋಷಣೆ

    ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ – 7ನೇ ವೇತನ ಆಯೋಗದ ಶಿಫಾರಸು ಜಾರಿ: ಸಿಎಂ ಘೋಷಣೆ

    ಬೆಂಗಳೂರು: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. 7ನೇ ವೇತನ ಆಯೋಗದ (7th Pay Commission) ವೇತನ ಪರಿಷ್ಕರಣೆಯನ್ನು ಆಗಸ್ಟ್‌ 1 ರಿಂದಲೇ ಅನ್ವಯವಾಗುವಂತೆ ಜಾರಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ.

    ವಿಧಾನಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆಗೆ ಏಳನೇ ವೇತನ ಆಯೋಗ ರಚನೆ ಮಾಡಲಾಗಿತ್ತು. ಏಳನೇ ವೇತನ ಆಯೋಗ ವರದಿ ನೀಡಿ, ಶಿಫಾರಸು ಮಾಡಿದೆ. ಆ.1 ರಿಂದ ಅನ್ವಯ ಆಗುವಂತೆ ವೇತನ ಪರಿಷ್ಕರಣೆ ಜಾರಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ – ಎಂ.ಬಿ ಪಾಟೀಲ್ ಘೋಷಣೆ

    30% ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ. 27.5% ವೇತನ ಹೆಚ್ಚಳ ಮಾಡಲಾಗುವುದು. ಮೂಲವೇತನ 17 ಸಾವಿರದಿಂದ 27 ಸಾವಿರ ವರೆಗೆ ಹೆಚ್ಚಳವಾಗಲಿದೆ. ಗರಿಷ್ಠ 1,50,600 ದಿಂದ 2,43,000 ವರೆಗೂ ವೇತನ ಹೆಚ್ಚಳವಾಗಲಿದೆ. ಪಿಂಚಣಿ ಕನಿಷ್ಠ 8 ಸಾವಿರದಿಂದ 13 ಸಾವಿರಕ್ಕೆ ಹೆಚ್ಚಾಗಲಿದೆ. ಗರಿಷ್ಠ ಪಿಂಚಣಿ 75,300 ರೂ. ನಿಂದ 1,20,600 ವರೆಗೂ ಹೆಚ್ಚಳವಾಗಲಿದೆ ಎಂದು ಹೇಳಿದ್ದಾರೆ.

    ಸರ್ಕಾರಿ ನೌಕರರ ವೇತನ ಹೆಚ್ಚಳದಿಂದ ವಾರ್ಷಿಕವಾಗಿ 20,208 ಕೋಟಿ ಹೆಚ್ಚುವರಿ ವೆಚ್ಚ ಆಗಲಿದೆ ಎಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಸದನದಲ್ಲಿ ವಾಲ್ಮೀಕಿ ನಿಗಮ ಹಗರಣ ಗದ್ದಲ – ಸಿಎಂ, ಸಚಿವರ ವಿರುದ್ಧ ಬಿಜೆಪಿ ನಾಯಕರ ಕಿಡಿ

  • ರಾಜ್ಯ 7ನೇ ವೇತನ ಆಯೋಗ ಜಾರಿ ವಿಚಾರ- ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್!

    ರಾಜ್ಯ 7ನೇ ವೇತನ ಆಯೋಗ ಜಾರಿ ವಿಚಾರ- ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್!

    ಬೆಂಗಳೂರು: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಬಹುತೇಕ ಖಚಿತವಾಗಿದ್ದು, 7ನೇ ವೇತನ ಆಯೋಗದ (7th Pay Commission) ಶಿಫಾರಸು ಜಾರಿಗೆ ಸರ್ಕಾರ ಮುಂದಾಗಿದೆ. ವೇತನ ಆಯೋಗ ಜಾರಿ ಮಾಡಲು ಕ್ಯಾಬಿನೆಟ್ ಸಭೆಯಲ್ಲಿ (Cabinet Meeting) ಚರ್ಚೆ ನಡೆದಿದೆ ಎಂಬುದು ಮೂಲಗಳ ಮಾಹಿತಿ.

    25% ರಷ್ಟು ವೇತನ ಹೆಚ್ಚಳಕ್ಕೆ ಕೆಲ ಸಚಿವರು ಸಲಹೆ ನೀಡಿದರೆ, 27% ವೇತನ ಹೆಚ್ಚಳಕ್ಕೆ ಕೆಲ ಸಚಿವರು ಸಲಹೆ ನೀಡಿದ್ದು, 27% ವೇತನ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಒಲವು ತೋರಿದ್ದಾರೆ ಎನ್ನಲಾಗಿದೆ. ಆದರೆ ಅಂತಿಮವಾಗಿ ವೇತನ ಆಯೋಗ ಜಾರಿ ಜವಾಬ್ದಾರಿಯನ್ನು ಸಿಎಂಗೆ ನೀಡಿದ್ದು, ಈ ತಿಂಗಳ ಅಂತ್ಯದೊಳಗೆ ರಾಜ್ಯ ಸರ್ಕಾರ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಇದನ್ನೂ ಓದಿ: ಗ್ಯಾರಂಟಿಗಾಗಿ ಅಲ್ಲ, ರಾಜ್ಯದ ಅಭಿವೃದ್ಧಿಗಾಗಿ ಪೆಟ್ರೋಲ್-ಡೀಸೆಲ್ ದರ ಏರಿಕೆ: ಸಿಎಂ

    ಅಂದಹಾಗೆ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ್ ರಾವ್ ನೇತೃತ್ವದ ಏಳನೇ ವೇತನ ಆಯೋಗ ಮಾರ್ಚ್ 16 ರಂದು ಅಂತಿಮ ವರದಿ ಸಲ್ಲಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಅಂತಿಮ ವರದಿ ಸಲ್ಲಿಸಿದ್ದ ಆಯೋಗ, ಕರ್ನಾಟಕ ಸರ್ಕಾರಿ ನೌಕರರಿಗೆ 27.5% ವೇತನವನ್ನು ಹೆಚ್ಚಿಸಲು ಶಿಫಾರಸು ಮಾಡಿತ್ತು. ಒಂದು ವೇಳೆ ಸರ್ಕಾರ ಅಂತಿಮ ವರದಿಯನ್ನೇ ಯಥಾವತ್ತಾಗಿ ಜಾರಿಗೊಳಿಸಿದರೆ ಮಾತ್ರ ಸರ್ಕಾರಿ ನೌಕರರ ಕನಿಷ್ಠ ವೇತನವು ತಿಂಗಳಿಗೆ 17,000 ರಿಂದ 27,000ಕ್ಕೆ ಏರುತ್ತದೆ. ಇದನ್ನೂ ಓದಿ: ರಾಹುಲ್ ಗಾಂಧಿ ಬಿಳಿ ಬಣ್ಣದ ಟೀ ಶರ್ಟ್ ಧರಿಸೋ ಹಿಂದಿನ ಸೀಕ್ರೆಟ್ ರಿವೀಲ್

  • 7ನೇ ವೇತನ ಆಯೋಗದ ವರದಿ ಸ್ವೀಕಾರ – ಸರ್ಕಾರಿ ನೌಕರರ ಸಂಘ ಸ್ವಾಗತ

    7ನೇ ವೇತನ ಆಯೋಗದ ವರದಿ ಸ್ವೀಕಾರ – ಸರ್ಕಾರಿ ನೌಕರರ ಸಂಘ ಸ್ವಾಗತ

    ಬೆಂಗಳೂರು: ರಾಜ್ಯ ಏಳನೇ ಆಯೋಗದ (7th Pay Commission) ವರದಿ ಸ್ವೀಕಾರ ಆಗಿದೆ. ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಅಂತಾ ಕಾದು ನೋಡಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ (Shadakshari C S) ಹೇಳಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಈ ಸರ್ಕಾರದಿಂದ ಒಳ್ಳೆಯ ಸೂಚನೆ ಸಿಗುತ್ತದೆ ಎನ್ನುವ ಭರವಸೆ ಇದೆ.ನಾವು ಕೂಡ ಕಾತುರದಿಂದ ಕಾಯುತ್ತಿದ್ದೇವೆ. ಈಗ 27.5% ವೇತನ ಹೆಚ್ಚಳಕ್ಕೆ ಆಯೋಗ ಶಿಫಾರಸ್ಸು ಮಾಡಿದೆ ಎಂದರು. ಇದನ್ನೂ ಓದಿ: Lok Sabha Election 2024: ಕರ್ನಾಟಕದಲ್ಲಿ ಏ.26, ಮೇ 7ಕ್ಕೆ ಮತದಾನ

    ಅಲ್ಲದೆ ಈ ಹಿಂದೆ ಸಿದ್ದರಾಮಯ್ಯ (Siddaramaiah) ಸರ್ಕಾರ ಇದ್ದಾಗ 30% ವೇತನ ಹೆಚ್ಚಳ ಮಾಡಿತ್ತು. ಈಗ ವರದಿ ಸ್ವೀಕಾರ ಮಾಡಿದ್ದಕ್ಕೆ ಸಂತೋಷ ಇದೆ ಎಂದು ಹೇಳಿದರು.  ಇದನ್ನೂ ಓದಿ: Lok Sabha Election 2024 – 7 ಹಂತದಲ್ಲಿ ಚುನಾವಣೆ, ಜೂನ್‌ 4 ರಂದು ಮತ ಎಣಿಕೆ

  • 7ನೇ ವೇತನ ಆಯೋಗದ ಶಿಫಾರಸುಗಳಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 17,500 ಕೋಟಿ ಹೊರೆ: ಸುಧಾಕರ್ ರಾವ್ ಸ್ಪಷ್ಟನೆ

    7ನೇ ವೇತನ ಆಯೋಗದ ಶಿಫಾರಸುಗಳಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 17,500 ಕೋಟಿ ಹೊರೆ: ಸುಧಾಕರ್ ರಾವ್ ಸ್ಪಷ್ಟನೆ

    ಬೆಂಗಳೂರು: 7ನೇ ವೇತನ ಆಯೋಗದಿಂದ (7th Pay Commission) ಸಿಎಂಗೆ ವರದಿ ಸಲ್ಲಿಸಿದ್ದೇವೆ. ಸರ್ಕಾರಿ ನೌಕರರ ಮೂಲ ವೇತನದ ಮೇಲೆ 27.5% ವೇತನ ಹೆಚ್ಚಳ ಮಾಡಲು ಶಿಫಾರಸು ಮಾಡಿದ್ದೇವೆ ಎಂದು ರಾಜ್ಯ 7ನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ (K Sudhakar Rao) ಹೇಳಿದ್ದಾರೆ.

    ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಕನಿಷ್ಠ ಮೂಲ ವೇತನವನ್ನು 17,000 ದಿಂದ 27,000ಕ್ಕೆ ಹೆಚ್ಚಳ ಮಾಡಲು ಶಿಫಾರಸು ಮಾಡಿದ್ದೇವೆ. ಪ್ರಮುಖವಾಗಿ ಎಲ್ಲ ಭತ್ಯೆಗಳ ಹೆಚ್ಚಳಕ್ಕೂ ಶಿಫಾರಸು ಮಾಡಿದ್ದೇವೆ. ಒಟ್ಟಾರೆ 7ನೇ ವೇತನ ಆಯೋಗದ ಶಿಫಾರಸುಗಳಿಂದ ಸರ್ಕಾರಕ್ಕೆ ವಾರ್ಷಿಕ 17,500 ಕೋಟಿ ಹೆಚ್ಚುವರಿ ಹೊರೆ ಆಗಲಿದೆ. ಅಂತಿಮ ವರದಿ ಜಾರಿಗೆ ಬಂದಾಗ ಹಾಲಿ ಕೊಡುತ್ತಿರುವ ಮಧ್ಯಂತರ ಪರಿಹಾರ ಇರಲ್ಲ. ಅಂತಿಮ ವರದಿ ಜಾರಿ ಆಗುವ ತನಕ ಮಧ್ಯಂತರ ಪರಿಹಾರ ಮುಂದುವರಿಯುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಯದುವೀರ್ ವಿರುದ್ಧ ತುಟಿ ಬಿಚ್ಚಬೇಡಿ: ‘ಕೈ’ ನಾಯಕರಿಗೆ ಸಿಎಂ ಎಚ್ಚರಿಕೆ

    5 ವರ್ಷಕೊಮ್ಮೆ ವೇತನ ಆಯೋಗ ರಚನೆ, ಶಿಫಾರಸುಗಳ ಬಗ್ಗೆ ಕೆಲವರಿಗೆ ಅಸಮಾಧಾನ ಇರಬಹುದು. ಹಾಗಾಗಿ ಕೇಂದ್ರ ಸರ್ಕಾರದ ಮಾದರಿಯಲ್ಲಿ ವೇತನ ಹೆಚ್ಚಳದ ಬಗ್ಗೆ ರಾಜ್ಯ ಸರ್ಕಾರ ವರದಿ ಕೇಳಿತ್ತು. ಕೇಂದ್ರದ ವೇತನ ಹೆಚ್ಚಳ ರೀತಿ ರಾಜ್ಯದಲ್ಲಿಯೂ ಜಾರಿ ಹೇಗೆ ಮಾಡಬಹುದು ಎಂಬ ಬಗ್ಗೆಯೂ ವರದಿ ನೀಡಿದ್ದೇವೆ ಎಂದು ಸುಧಾಕರ್ ರಾವ್ ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಏಳನೇ ವೇತನ ಆಯೋಗ ವರದಿ ಸಲ್ಲಿಕೆ; 27.5% ರಷ್ಟು ಹೆಚ್ಚಳಕ್ಕೆ ಶಿಫಾರಸು

  • ಬಿಜೆಪಿ ಮಾಡದಿದ್ರೆ, ನಾವು ಅಧಿಕಾರಕ್ಕೆ ಬಂದ್ಮೇಲೆ 7ನೇ ವೇತನ ಆಯೋಗ ಜಾರಿ ಮಾಡ್ತೀವಿ: ಸಿದ್ದರಾಮಯ್ಯ

    ಬಿಜೆಪಿ ಮಾಡದಿದ್ರೆ, ನಾವು ಅಧಿಕಾರಕ್ಕೆ ಬಂದ್ಮೇಲೆ 7ನೇ ವೇತನ ಆಯೋಗ ಜಾರಿ ಮಾಡ್ತೀವಿ: ಸಿದ್ದರಾಮಯ್ಯ

    ಬೆಳಗಾವಿ: ಒಂದು ವೇಳೆ ಬಿಜೆಪಿಯವರು (BJP) ಮಾಡದೇ ಇದ್ದರೆ, ನಾವು ಅಧಿಕಾರಕ್ಕೆ ಬಂದು 7ನೇ ವೇತನ ಆಯೋಗ (7th Pay Commission) ಜಾರಿ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದರು.

    7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರು ಸುಮ್ಮನೇ ದುಡ್ಡು ಇಟ್ಟಿದ್ದೀವಿ ಅಂತಾ ಹೇಳ್ತಾರೆ. ಎಲ್ಲಿ ದುಡ್ಡು‌ ಇಟ್ಟಿದ್ದಾರೆ? 7ನೇ ವೇತನ ಜಾರಿಗೆ ಅಗತ್ಯ ಇರುವಷ್ಟು ದುಡ್ಡು ಇಟ್ಟಿಲ್ಲ. ಕೂಡಲೇ ಮಧ್ಯಂತರ ವರದಿ ಪಡೆದು 7ನೇ ವೇತನ ಆಯೋಗ ಜಾರಿ ಮಾಡಬೇಕಿತ್ತು ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ಏಪ್ರಿಲ್ 1 ರಿಂದಲೇ ವೇತನ ಹೆಚ್ಚಳ ಜಾರಿಗೆ- ಸರ್ಕಾರದಿಂದ ಅಧಿಕೃತ ಆದೇಶ

    ಒಂದು ವೇಳೆ ಬಿಜೆಪಿಯವರು ಮಾಡದೇ ಹೋದ್ರೆ, ನಾವು ಬಂದ್ಮೇಲೆ ಮಾಡ್ತೀವಿ. ಐದು ವರ್ಷಗಳ ಹಿಂದೆ ನೌಕರರಿಗೆ ಆರನೇ ವೇತನ ಆಯೋಗ ಜಾರಿ ಮಾಡಿದ್ದೇನೆ. 10,600 ಕೋಟಿ ಹೊರೆಯಾದರೂ ನಾನು ಮಾಡಿದ್ದೆ. 6ನೇ ವೇತನ ಆಯೋಗ ಅನೌನ್ಸ್ ಮಾಡಿದ್ದೆ. ಎಲೆಕ್ಷನ್‌ಗೂ ಮುನ್ನ ಜಾರಿಗೆ ತಂದಿದ್ದೇನೆ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ, ಸುಳ್ಳು ಹೇಳುತ್ತಾರೆ. ಸುಳ್ಳು ಹೇಳಿ ಮೂಗಿಗೆ ತುಪ್ಪ ಸವರೋದು ಇವರ ಕೆಲಸವಾಗಿದೆ ಎಂದು ಟೀಕಿಸಿದರು.

    ನೀತಿ ಸಂಹಿತೆ ಜಾರಿ ಆಗಲು 20 ದಿನ ಇರಬಹುದಷ್ಟೇ. ಮತ್ತೆ ಒಂದೂವರೆ ತಿಂಗಳು ಸರ್ಕಾರಿ ಕಚೇರಿಗಳು ಸ್ಥಗಿತ ಆಗುತ್ತವೆ. ಯಾವುದೇ ಕೆಲಸ ನಡೆಯಲ್ಲ. ಬಜೆಟ್ ಮಂಡಿಸುವರೆಗೂ ಬಜೆಟ್‌ನಲ್ಲಿದ್ದ 54 ಪರ್ಸೆಂಟ್ ಹಣ ಮಾತ್ರ ಖರ್ಚು ಮಾಡಿದ್ದಾರೆ. ಇನ್ನು 46 ಪರ್ಸೆಂಟ್ ಖರ್ಚು ಮಾಡಿರಲಿಲ್ಲ. ಒಂದು ತಿಂಗಳಲ್ಲಿ ನಿಮ್ಮ ಕೈಯಲ್ಲಿ ಖರ್ಚು ಮಾಡೋಕೆ ಆಗಲ್ಲರೀ ಅಂತಾ ಹೇಳಿದ್ದೇನೆ. ಈಗ ಸರ್ಕಾರಿ ನೌಕರರು ಕೆಲಸಕ್ಕೆ ಹೋಗಲಿಲ್ಲ ಅಂದ್ರೆ ಆಡಳಿತ ಯಂತ್ರ ಕುಸಿಯುತ್ತದೆ, ಕೆಲಸ ಆಗಲ್ಲ ಎಂದರು. ಇದನ್ನೂ ಓದಿ: ಎಎಪಿಗೆ ಗುಡ್‌ಬೈ; ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಬಿಜೆಪಿ ಸೇರ್ಪಡೆ

    ಶೇ.17 ವೇತನ ಹೆಚ್ಚಿಸಿ ಸರ್ಕಾರ ಆದೇಶ ಕುರಿತು ಮಾತನಾಡಿ, ಅವರು ಹೇಳೋದು ಬೇಡ. ಮಧ್ಯಂತರ ವರದಿ ಜನರ ಮುಂದೆ ಇಡಬೇಕು. ಹಳೆಯ ಪಿಂಚಣಿ ವ್ಯವಸ್ಥೆ ನಿನ್ನೆ ಮೊನ್ನೆಯದ್ದಲ್ಲ. ಅದರ ಬಗ್ಗೆ ಚರ್ಚೆ ಮಾಡಬೇಕು. ಹಳೆಯ ಪಿಂಚಣಿ ವ್ಯವಸ್ಥೆ ಬಗ್ಗೆ 7ನೇ ವೇತನ ಆಯೋಗದ ಅಧ್ಯಕ್ಷರು ಎಕ್ಸಾಮಿನ್ ಮಾಡಬೇಕು ಎಂದ ತಿಳಿಸಿದರು.

  • ಸರ್ಕಾರಿ ನೌಕರರಿಗೆ ಗುಡ್‍ನ್ಯೂಸ್- ಮಾರ್ಚ್‍ನಲ್ಲಿ 7ನೇ ವೇತನ ಆಯೋಗದ ಶಿಫಾರಸು ಜಾರಿ

    ಸರ್ಕಾರಿ ನೌಕರರಿಗೆ ಗುಡ್‍ನ್ಯೂಸ್- ಮಾರ್ಚ್‍ನಲ್ಲಿ 7ನೇ ವೇತನ ಆಯೋಗದ ಶಿಫಾರಸು ಜಾರಿ

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದೆ.

    ಏಳನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮಾರ್ಚ್ 1ರಿಂದ ಮುಷ್ಕರಕ್ಕೆ ಮುಂದಾಗಿದ್ರು. ಮಾಜಿ ಸಿಎಂ ಯಡಿಯೂರಪ್ಪ (B S Yediyurappa) ಆದಿಯಾಗಿ ಬಹುತೇಕ ನಾಯಕರು ರಾಜ್ಯ ಸರ್ಕಾರಿ ನೌಕರರ ಪರ ಬ್ಯಾಟ್ ಬೀಸಿದ್ರು. ಈ ಬೆಳವಣಿಗೆ ಚುನಾವಣೆ ಮೇಲೆ ಪರಿಣಾಮ ಬೀರುವ ಆತಂಕವೂ ಬಿಜೆಪಿ(BJP) ಗೆ ವ್ಯಕ್ತವಾಗಿತ್ತು. ಹೀಗಾಗಿಯೇ ಅಧಿವೇಶನ ಮುಗಿಯಲು ಒಂದು ದಿನ ಇರುವಾಗಲೇ ವಿಧಾನಸಭೆ ಸಾಕ್ಷಿಯಾಗಿ ಸಿಎಂ ಬೊಮ್ಮಾಯಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ.

    ಮಾರ್ಚ್ ತಿಂಗಳಲ್ಲಿ 7ನೇ ವೇತನ ಆಯೋಗದ ಮಧ್ಯಂತರ ವರದಿ ಅನ್ವಯ ನಿರ್ಧಾರ ತೆಗೆದುಕೊಳ್ಳುವ ಘೋಷಣೆಯನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಆದರೆ ಯಾವ ಪ್ರಮಾಣದಲ್ಲಿ ವೇತನ ಹೆಚ್ಚಳ ಆಗಲಿದೆ ಎಂಬ ಗುಟ್ಟನ್ನು ಸಿಎಂ ಬೊಮ್ಮಾಯಿ ಬಿಟ್ಟುಕೊಟ್ಟಿಲ್ಲ. ಇದನ್ನೂ ಓದಿ: ನಮ್ಮದು ಜನಕಲ್ಯಾಣ, ಆರ್ಥಿಕ ಸ್ಥಿರತೆ ಸಾಧಿಸುವ ವಾಸ್ತವಿಕತೆಯ ಬಜೆಟ್: ಬೊಮ್ಮಾಯಿ

    ಇದೇ ವೇಳೆ ಬಜೆಟ್‍ (Budget) ನಲ್ಲಿ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಘೋಷಿಸಿದ್ದ 500 ರೂಪಾಯಿ ಮಾಸಿಕ ಸಹಾಯಧವನ್ನು ಸಾವಿರ ರೂಪಾಯಿಗೆ ಹೆಚ್ಚಿಸಲು ಸಿಎಂ ತೀರ್ಮಾನಿಸಿದ್ದಾರೆ. ಅಲ್ಲದೇ, ಶಾಲೆಗೆ ಹೋಗುವ ಮಕ್ಕಳಿಗೆ ಬಸ್ ಸಮಸ್ಯೆ ನೀಗಿಸಲು ಬಜೆಟ್‍ನಲ್ಲಿ ಘೋಷಿಸಿದ್ದ 1 ಸಾವಿರ ಬಸ್‍ಗೆ ಬದಲಾಗಿ 2ಸಾವಿರ ಬಸ್ ಒದಗಿಸುವ ಹೊಸ ಘೋಷಣೆಯನ್ನು ಸಿಎಂ ಮಾಡಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಾ.1 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸರ್ಕಾರಿ ನೌಕರರ ಕರೆ

    ಮಾ.1 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸರ್ಕಾರಿ ನೌಕರರ ಕರೆ

    ಬೆಂಗಳೂರು: 7ನೇ ವೇತನ ಆಯೋಗ (7th Pay Commission) ಜಾರಿ ವಿಚಾರವಾಗಿ ಸರ್ಕಾರದ ನಡೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (KSGEA) ತೀವ್ರ ಅಸಮಾಧಾನ ಹೊರಹಾಕಿದೆ. ಸಂಘದ ಬೇಡಿಕೆ ಈಡೇರಿಸದಿದ್ದರೆ ಮಾ.1 ರಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಕರೆ ನೀಡಿದೆ.

    ರಾಜ್ಯ ಬಜೆಟ್‌ ಮಂಡನೆ ವೇಳೆ ಏಳನೇ ವೇತನ ಆಯೋಗ ಜಾರಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಪ್ರಸ್ತಾಪಿಸದಿರುವುದಕ್ಕೆ ನೌಕರರ ಸಂಘ ಸರ್ಕಾರದ ವಿರುದ್ಧ ಕಿಡಿಕಾರಿದೆ. ಈ ಹಿನ್ನೆಲೆಯಲ್ಲಿ ಸಂಘವು ಮಂಗಳವಾರ ತುರ್ತು ಕಾರ್ಯಕಾರಿಣಿ ಸಭೆ ಕರೆದು ಕೆಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ. ಇದನ್ನೂ ಓದಿ: ಸಿದ್ದರಾಮಯ್ಯ ನಮ್ಮ ನಾಯಕ, ರಾಜ್ಯಕ್ಕೆ ಅನ್ನದಾತ – ಡಿಕೆಶಿ ಗುಣಗಾನ

    ಸಂಘದ ಬೇಡಿಕೆಗಳೇನು?
    ಏಳನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು 40% ಫಿಟ್ಮೆಂಟ್‌ನ್ನು ದಿನಾಂಕ 1.07.2022 ರಿಂದ ಜಾರಿಗೆ ತರುವುದು, ರಾಜಸ್ತಾನ, ಛತ್ತೀಸಗಢ, ಜಾರ್ಖಂಡ್, ಪಂಜಾಬ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಎನ್‌ಪಿಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ತಂದಿರುವಂತೆಯೇ ಕರ್ನಾಟಕ ರಾಜ್ಯದಲ್ಲಿಯೂ ಮಾಡಬೇಕು ಎಂದು ಬೇಡಿಕೆಯಿಟ್ಟಿದೆ.

    ಈ ಎರಡು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಏಳು ದಿನಗಳ ಕಾಲಾವಕಾಶ ನೀಡಲಾಗುವುದು. ಬೇಡಿಕೆ ಈಡೇರಿಸದಿದ್ದರೆ ಮಾ.1 ರಿಂದ ರಾಜ್ಯದ ಎಲ್ಲಾ ಸರ್ಕಾರಿ ನೌಕರರು, ನಿಗಮ ಮತ್ತು ಮಂಡಳಿಗಳು ಅನುದಾನಿತ ಸಂಸ್ಥೆಯ ಎಲ್ಲ ನೌಕರರು ಅನಿರ್ದಿಷ್ಟಾವಧಿ ವರೆಗೆ ಕರ್ತವ್ಯಕ್ಕೆ ಗೈರು ಹಾಜರಾಗುವುದರ ಮೂಲಕ ಮುಷ್ಕರ ಮಾಡಲಾಗುವುದು ಎಂದು ಸಂಘವು ತಿಳಿಸಿದೆ. ಇದನ್ನೂ ಓದಿ: ರಾಜ್ಯಾದ್ಯಂತ ಬಿಜೆಪಿ ಡಬಲ್ ಎಂಜಿನ್ ಸರ್ಕಾರಗಳ ಸಾಧನೆ ಸಾರಲಿವೆ `ಪ್ರಗತಿ ರಥ’ – ಎಸ್.ವಿ. ರಾಘವೇಂದ್ರ

    ಮಾ.1 ರಿಂದ ಅನಿರ್ಧಿಷ್ಟಾವಧಿ ವರೆಗೆ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮುಂದಾಗಿದೆ. ಇಂದು ಜರುಗಿದ ಕಾರ್ಯಕಾರಿಣಿ ಸಭೆಯಲ್ಲಿ ಮೇಲಿನ ತೀರ್ಮಾನ ಕೈಗೊಳ್ಳಲಾಗಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ – 7ನೇ ವೇತನ ಆಯೋಗ ಜಾರಿ

    ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ – 7ನೇ ವೇತನ ಆಯೋಗ ಜಾರಿ

    ಬೆಂಗಳೂರು: ಎಲೆಕ್ಷನ್ ಸನಿಹದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ(Karnataka Government) ಗುಡ್ ನ್ಯೂಸ್ ಕೊಟ್ಟಿದೆ. ಸರ್ಕಾರಿ ನೌಕರರ ಬಹಳ ದಿನಗಳಿಂದ ಎದಿರು ನೋಡುತ್ತಿದ್ದ ಏಳನೇ ವೇತನ ಆಯೋಗದ(7th Pay Commission) ರಚನೆ ಮಾಡಿದೆ.

    ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದಲ್ಲಿ ಆಯೋಗದ ಸಮಿತಿ ರಚಿಸಲಾಗಿದೆ. ಈ ಆಯೋಗ ರಚನೆಯಿಂದ 5.40 ಲಕ್ಷ ಸರ್ಕಾರಿ ನೌಕರರು, 3 ಲಕ್ಷ ನಿಗಮ ಮಂಡಳಿ, ಪ್ರಾಧಿಕಾರ, ವಿವಿಗಳ ಸಿಬ್ಬಂದಿ ಮತ್ತು 4 ಲಕ್ಷ ನಿವೃತ್ತ ನೌಕರರಿಗೆ ಅನುಕೂಲ ಆಗಲಿದೆ. ಇದನ್ನೂ ಓದಿ:  ನನ್ನ ತೇಜೋವಧೆ ಆಗ್ತಿದೆ – ವಿವಾದಿತ ಹೇಳಿಕೆಯನ್ನು ಹಿಂಪಡೆದ ಸತೀಶ್ ಜಾರಕಿಹೊಳಿ

    ಈ ಸಂಬಂಧ ಸರ್ಕಾರ ಇನ್ನಷ್ಟೇ ಅಧಿಸೂಚನೆ ಹೊರಡಿಸಬೇಕಿದೆ. ಈ ಆಯೋಗ ಫೆಬ್ರವರಿ ಹೊತ್ತಿಗೆ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆ ಇದೆ. ಎಲೆಕ್ಷನ್‍ಗೂ ಮೊದಲೇ ಏಳನೇ ವೇತನ ಆಯೋಗದ ಅನ್ವಯ ವೇತನ ಪರಿಷ್ಕರಣೆ ಆಗುವ ಸಂಭವ ಇದೆ.

    Live Tv
    [brid partner=56869869 player=32851 video=960834 autoplay=true]