ಕರ್ತವ್ಯ ಪಥದಲ್ಲಿ ನಡೆದ 90 ನಿಮಿಷಗಳ ಪರೇಡ್‌ನಲ್ಲಿ ದೇಶದ ನಾರಿ ಶಕ್ತಿ ಅನಾವರಣಗೊಂಡಿತು. ದೇಶದ ಮೂರು ಸೇನೆಗಳ ಮಹಿಳಾ ತುಕಡಿಗಳು ಮೊಟ್ಟ ಮೊದಲ ಬಾರಿಗೆ ಪರೇಡ್‌ನಲ್ಲಿ ಪಾಲ್ಗೊಂಡಿದ್ದವು.
ನವದೆಹಲಿ: 75ನೇ ಗಣರಾಜ್ಯೋತ್ಸವ ಅಂಗವಾಗಿ ಕರ್ತವ್ಯ ಪಥದಲ್ಲಿ ಶುಕ್ರವಾರ ನಡೆದ ಪಥಸಂಚಲನದ ವೇಳೆ ಆಕಾಶದಲ್ಲಿ ಯುದ್ಧವಿಮಾನಗಳು ಹಾರಾಟ ನಡೆಸಿ ಭಾರತದ ವಾಯುಸೇನೆ ಶಕ್ತಿ ಪ್ರದರ್ಶಿಸಿದವು. ಐಎಎಫ್‌ನ (IAF) ಮಹಿಳಾ ಪೈಲಟ್‌ಗಳು ಫ್ಲೈಪಾಸ್ಟ್ ಸಮಯದಲ್ಲಿ ಯುದ್ಧವಿಮಾನಗಳ ಹಾರಾಟ ನಡೆಸಿ ತಾವೂ ಸಮರ್ಥರಿದ್ದೇವೆ ಎಂಬುದನ್ನು ಸಾಬೀತುಪಡಿಸಿದರು. ಪರಾಕ್ರಮ, ಕೌಶಲದ ಮಹಿಳಾ ಪೈಲಟ್‌ಗಳ ಪೈಕಿ ಮೈಸೂರಿನ ಅಸಾಧಾರಣ ಪ್ರತಿಭೆ, ಕೊಡಗಿನ ಕೊಲುವಂಡ ಪುಣ್ಯಾ ನಂಜಪ್ಪ (Punya Nanjappa) ಯುದ್ಧ ವಿಮಾನ ಯಶಸ್ವಿ ಹಾರಾಟ ನಡೆಸಿ ಗಮನ ಸೆಳೆದಿದ್ದಾರೆ.
ಪುಣ್ಯಾ ನಂಜಪ್ಪ, MiG-29 ಫೈಟರ್ ಜೆಟ್ ಹಾರಾಟ ನಡೆಸಿ ವಾಯುಪಡೆಯ ನಾರಿ ಶಕ್ತಿ ಪ್ರದರ್ಶಿಸಿದರು. ವಾಯುಪಡೆಯ 46 ವಿಮಾನಗಳು ಆಕಾಶದಲ್ಲಿ ವಿವಿಧ ಕಸರತ್ತು ಪ್ರದರ್ಶಿಸಿದವು. 29 ಯುದ್ಧ ವಿಮಾನಗಳು, 7 ಸರಕು ಸಾಗಣೆ ವಿಮಾನಗಳು, 9 ಹೆಲಿಕಾಪ್ಟರ್‌ಗಳು ಕೂಡ ಪ್ರದರ್ಶನದಲ್ಲಿ ಭಾಗಿಯಾಗಿದ್ದವು. ಇದನ್ನೂ ಓದಿ: ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಒಂದಿಷ್ಟು ಝಲಕ್‌ಗಳು..
ದೇಶೀಯವಾಗಿ ತಯಾರಿಸಿರುವ ಅತ್ಯಾಧುನಿಕ ಯುದ್ಧವಿಮಾನ ‘ತೇಜಸ್’ ಪ್ರದರ್ಶನ ಪಥಸಂಚಲನದ ಮೆರುಗು ಹೆಚ್ಚಿಸಿತ್ತು.
ವಿಜಯನಗರದ ಸೇಂಟ್ ಜೋಸೆಫ್ ಸೆಂಟ್ರಲ್ ಸ್ಕೂಲ್‌ನಲ್ಲಿ ಶಾಲಾ ಶಿಕ್ಷಣ, ಸರಸ್ವತಿಪುರಂನ ವಿಜಯ ವಿಟ್ಲ ಪಿಯು ಕಾಲೇಜಿನಲ್ಲಿ ಪಿಯುಸಿ ಮತ್ತು ಮೈಸೂರಿನ NIE ನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಪುಣ್ಯಾ ಅವರು ಫ್ಲೈಯಿಂಗ್ ಬ್ರಾಂಚ್‌ನಲ್ಲಿ ಅಧಿಕಾರಿಗಳ ನೇಮಕಾತಿಗಾಗಿ ನಡೆಸಲಾಗಿದ್ದ ಏರ್ ಫೋರ್ಸ್ ಕಾಮನ್ ಅಡ್ಮಿಷನ್ ಟೆಸ್ಟ್ (AFCAT) ಪರೀಕ್ಷೆ ಬರೆದರು. 1,000 ಅಭ್ಯರ್ಥಿಗಳ ಶಾರ್ಟ್‌ಲಿಸ್ಟ್‌ನಲ್ಲಿ ಪುಣ್ಯಾ ನಂಜಪ್ಪ 135 ನೇ ಸ್ಥಾನ ಪಡೆದರು.
ಮೈಸೂರಿನಲ್ಲಿ ನಡೆದ ಐಎಎಫ್ ಸೇವಾ ಆಯ್ಕೆ ಮಂಡಳಿ ಪರೀಕ್ಷೆಯಲ್ಲೂ ಆಯ್ಕೆಯಾದರು. 2018 ರಲ್ಲಿ AFCAT ನಲ್ಲಿ ಉತ್ತೀರ್ಣರಾದ ಅವರು ನಂತರ ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಯಲ್ಲಿ ತೇರ್ಗಡೆಯಾಗಿ, ಟ್ರೈನಿ ಪೈಲಟ್ ಆಗಿ ಆಯ್ಕೆಯಾದರು. ನಂತರ ತೆಲಂಗಾಣದ ದುಂಡಿಗಲ್‌ನಲ್ಲಿರುವ ಇಂಡಿಯನ್ ಏರ್ ಫೋರ್ಸ್ ಅಕಾಡೆಮಿಯಲ್ಲಿ ಕಠಿಣ ತರಬೇತಿ ಪಡೆದಿರುವ ಪುಣ್ಯಾ ನಂಜಪ್ಪ ಅವರು ಈಗ IAF ನಲ್ಲಿ ಹೆಮ್ಮೆಯ ಯುದ್ಧವಿಮಾನ ಪೈಲಟ್ ಆಗಿದ್ದಾರೆ. ಗಣರಾಜ್ಯೋತ್ಸವ ಪರೇಡ್ ಸಂದರ್ಭದಲ್ಲಿ MiG-29 ಫೈಟರ್ ಜೆಟ್ ಅನ್ನು ಯಶಸ್ವಿಯಾಗಿ ಹಾರಿಸಿ ನಾಡಿಗೆ ಕೀರ್ತಿ ತಂದಿದ್ದಾರೆ. ಇದನ್ನೂ ಓದಿ: ಕರ್ತವ್ಯ ಪಥದ ಪರೇಡ್‍ನಲ್ಲಿ ಮಿಂಚಿದ ಬಾಲಕರಾಮ!
ನವದೆಹಲಿ: 2024ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಪಟ್ಟಿ ಗುರುವಾರ ಪ್ರಕಟಗೊಂಡಿದೆ. ಕರ್ನಾಟಕದ 9 ಮಂದಿ ಸೇರಿ ಒಟ್ಟು 132 ಸಾಧಕರನ್ನು ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ.
5 ಜನರಿಗೆ ಪದ್ಮ ವಿಭೂಷಣ, 17 ಜನರಿಗೆ ಪದ್ಮಭೂಷಣ ಹಾಗೂ 110 ಜನರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
‘ಪದ್ಮ’ ಪ್ರಶಸ್ತಿ ಭಾಜನರಾದ 9 ಕನ್ನಡಿಗರು
ಪದ್ಮಭೂಷಣ ಪ್ರಶಸ್ತಿಗೆ ಕನ್ನಡಿಗರಾದ ಸೀತಾರಾಮ್ ಜಿಂದಾಲ್ (ವ್ಯಾಪಾರ ಮತ್ತು ಕೈಗಾರಿಕೆ) ಭಾಜನರಾಗಿದ್ದಾರೆ. ಪದ್ಮಶ್ರೀ ಪ್ರಶಸ್ತಿಗೆ ರೋಹನ್ ಮಾಚಂಡ ಬೋಪಣ್ಣ (ಕ್ರೀಡೆ), ಪ್ರೇಮಾ ಧನರಾಜ್ (ವೈದ್ಯಕೀಯ), ಅನುಪಮಾ ಹೊಸಕೆರೆ (ಕಲೆ), ಶ್ರೀಧರ್ ಮಕಮ್ ಕೃಷ್ಣಮೂರ್ತಿ (ಸಾಹಿತ್ಯ ಮತ್ತು ಶಿಕ್ಷಣ), ಕೆ.ಎಸ್.ರಾಜಣ್ಣ (ಸಾಮಾಜಿಕ ಕಾರ್ಯ), ಚಂದ್ರಶೇಖರ್ ಚನ್ನಪಟ್ಟಣ ರಾಜಣ್ಣಾಚಾರ್ (ವೈದ್ಯಕೀಯ), ಸೋಮಣ್ಣ (ಸಾಮಾಜಿಕ ಕಾರ್ಯ), ಶಶಿ ಸೋನಿ (ವ್ಯಾಪಾರ ಮತ್ತು ಕೈಗಾರಿಕೆ).
– 75ನೇ ಗಣರಾಜ್ಯೋತ್ಸವಕ್ಕೂ ಮುನ್ನ ದಿನ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮಾತು
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 75 ನೇ ಗಣರಾಜ್ಯೋತ್ಸವದ ಮುನ್ನಾದಿನದಂದು (ಬುಧವಾರ) ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಇದು ಯುಗ ಬದಲಾವಣೆಯ ಅವಧಿಯಾಗಿದೆ ಆಶಯ ವ್ಯಕ್ತಪಡಿಸಿದ್ದಾರೆ.
ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ರಾಷ್ಟ್ರಪತಿ ಸ್ಮರಿಸಿದ್ದಾರೆ. ಅಲ್ಲದೇ ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯು ದೇಶಕ್ಕೆ ಐತಿಹಾಸಿಕ ಮತ್ತು ಮಹತ್ವದ ಕ್ಷಣವಾಗಿದೆ ಎಂದು ಬಣ್ಣಿಸಿದ್ದಾರೆ.
ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭವನ್ನು ಭವಿಷ್ಯದ ಇತಿಹಾಸಕಾರರು ಭಾರತದ ನಾಗರಿಕತೆಯ ಪರಂಪರೆಯ ಮರು ಅನ್ವೇಷಣೆಯಲ್ಲಿ ಹೆಗ್ಗುರುತಾಗಿ ನೋಡುತ್ತಾರೆ. ಭೂ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರ ದೇವಾಲಯದ ನಿರ್ಮಾಣವು ಪ್ರಾರಂಭವಾಯಿತು. ಈಗ ಅದು ಭವ್ಯ ಸೌಧವಾಗಿ ನಿಂತಿದೆ. ಇದು ಜನರ ನಂಬಿಕೆಗೆ ಸೂಕ್ತವಾದ ಅಭಿವ್ಯಕ್ತಿಯನ್ನು ನೀಡುತ್ತದೆ. ಜೊತೆಗೆ ನ್ಯಾಯಾಂಗ ವ್ಯವಸ್ಥೆಯಲ್ಲಿ ಜನರ ಅಗಾಧ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕರ್ಪೂರಿ ಜೀ ಅವರ ಕೊಡುಗೆಯಿಂದ ಸಾರ್ವಜನಿಕ ಜೀವನವನ್ನು ಶ್ರೀಮಂತಗೊಳಿಸಿದ್ದಕ್ಕಾಗಿ ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರು ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದು, ಅವರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ ಎಂದು ದ್ರೌಪದಿ ಮುರ್ಮು ತಿಳಿಸಿದ್ದಾರೆ.
1988 ರಲ್ಲಿ ನಿಧನರಾದ ಎರಡು ಅವಧಿಗೆ ಬಿಹಾರ ಮುಖ್ಯಮಂತ್ರಿಯಾಗಿದ್ದ ಕರ್ಪೂರಿ ಠಾಕೂರ್ ಅವರು ಬಡವರು ಮತ್ತು ಹಿಂದುಳಿದ ವರ್ಗಗಳ ಉನ್ನತಿಗೆ ನೀಡಿದ ಕೊಡುಗೆಗಾಗಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನಕ್ಕೆ ಭಾಜನರಾಗಿದ್ದಾರೆ. ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಘೋಷಿಸಲಾಗಿದೆ.
ಜ.22 ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪನೆ ನೆರವೇರಿತು.
-ವಸ್ತು ಪ್ರದರ್ಶನ ಗ್ರೌಂಡ್‌ನಲ್ಲಿ ಟ್ಯಾಬ್ಲೋ ಇಡಲು ಸೂಚನೆ -ಸಿಎಂ ಸಿದ್ದರಾಮಯ್ಯ ಮನವಿಯಿಂದಲೂ ಆಗಿಲ್ಲ ಪ್ರಯೋಜನ
ಬೆಂಗಳೂರು: 75ನೇ ಗಣರಾಜ್ಯೋತ್ಸವದ (Republic Day) ಅಂಗವಾಗಿ ದೆಹಲಿಯಲ್ಲಿ ಪಥ ಸಂಚಲನ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಾರಿ ಪಥ ಸಂಚಲನದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಸ್ತಬ್ಧಚಿತ್ರಕ್ಕೆ (Karnataka Tableau) ಅವಕಾಶ ನಿರಾಕರಿಸಲಾಗಿದೆ.
ಕರ್ತವ್ಯ ಪಥದಲ್ಲಿ ನಡೆಯಲಿರುವ 2024ರ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕವನ್ನು ಸೇರಿಸಲಾಗಿಲ್ಲ. ಬದಲಾಗಿ ಟ್ಯಾಬ್ಲೋವನ್ನು ಕೆಂಪು ಕೋಟೆಯ ಭಾರತ್ ಪರ್ವ್ ವಿಭಾಗದಲ್ಲಿ ಇರಿಸಲಾಗಿದೆ. ಈ ಸಂಬಂಧ ಕೇಂದ್ರ ರಕ್ಷಣಾ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕ ಟ್ಯಾಬ್ಲೋಗೆ ಅವಕಾಶ ನೀಡದಿರುವ ನಿರ್ಧಾರವು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ. ಸ್ತಬ್ಧಚಿತ್ರವನ್ನು ಪರೇಡ್‌ನಿಂದ ಹೊರಗಿಟ್ಟಿರುವುದು ಕರ್ನಾಟಕದ ಜನತೆಗೆ ತೀವ್ರ ನಿರಾಶೆಯನ್ನುಂಟು ಮಾಡಿದೆ. ಏಳು ಕೋಟಿ ಕನ್ನಡಿಗರ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಲು, 2024 ರ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಾಂಡ್ ಬೆಂಗಳೂರು ಸ್ತಬ್ದಚಿತ್ರ ಪ್ರದರ್ಶಿಸಲು ಅನುವು ಮಾಡಿಕೊಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸ್ತಬ್ಧಚಿತ್ರ ರಾಜಕಾರಣ ಸಿಎಂಗೆ ಶೋಭೆ ತರಲ್ಲ: ಪ್ರಹ್ಲಾದ್ ಜೋಶಿ