Tag: A. Narayana Swamy

  • ಮೂರನೇ ಅಲೆಯಲ್ಲಿ ಮಕ್ಕಳ ಸಾವು ಹೆಚ್ಚಾದ್ರೆ ಜನ ಸುಮ್ನೆ ಇರಲ್ಲ: ಎ. ನಾರಾಯಣಸ್ವಾಮಿ

    ಮೂರನೇ ಅಲೆಯಲ್ಲಿ ಮಕ್ಕಳ ಸಾವು ಹೆಚ್ಚಾದ್ರೆ ಜನ ಸುಮ್ನೆ ಇರಲ್ಲ: ಎ. ನಾರಾಯಣಸ್ವಾಮಿ

    ಚಿತ್ರದುರ್ಗ: ಕೋವಿಡ್-19 ಮೂರನೇ ಅಲೆಯು ಹೆಚ್ಚಾಗಿ ಮಕ್ಕಳಲ್ಲಿ ಸೋಂಕು ಕಂಡುಬರುವ ಸಾಧ್ಯತೆ ಇರುವುದರಿಂದ ಒಂದು ತಿಂಗಳೊಳಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳೊಂದಿಗೆ ಕೋವಿಡ್-19 ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಒಂದು ವೇಳೆ ಮೂರನೇ ಅಲೆಯಲ್ಲಿ ಮಕ್ಕಳು ಹೆಚ್ಚಾಗಿ ಸಾವನ್ನಪ್ಪಿದರೆ ಜನರು ಸಮ್ಮನೆ ಇರಲ್ಲ ಅಂತ ಸಂಸದ ಎ.ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್-19ರ ಸಂಭಾವ್ಯ ಮೂರನೇ ಅಲೆಯ ನಿಯಂತ್ರಣ ಸಂಬಂಧ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್-19ರ ಎರಡನೇ ಅಲೆಯ ಸಂದರ್ಭದಲ್ಲಿ ಎದುರಿಸಿರುವ ಲೋಪದೋಷಗಳನ್ನು ಸರಿಪಡಿಸಿಕೊಂಡು ಕೋವಿಡ್-19ರ ಸಂಭಾವ್ಯ ಮೂರನೇ ಅಲೆಯ ನಿಯಂತ್ರಣಕ್ಕೆ ಸಿದ್ಧರಾಗಬೇಕು ಎಂದು ತಾಕೀತು ಮಾಡಿದರು.

    ಪ್ರಸ್ತಾವನೆ ಸಲ್ಲಿಸಿ: ಕೋವಿಡ್-19ರ ಮೂರನೇ ಅಲೆಯ ನಿಯಂತ್ರಣಕ್ಕಾಗಿ ಜಿಲ್ಲೆಗೆ ಅಗತ್ಯವಾಗಿ ಬೇಕಾಗಿರುವ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ತಜ್ಞ ವೈದ್ಯರು, ಸಿಬ್ಬಂದಿ, ಹಾಸಿಗೆ, ಆಕ್ಸಿಜನ್, ವೆಂಟಿಲೇಟರ್ ಹಾಗೂ ಔಷಧಿಗಳ ವಿವರಗಳನ್ನೊಳಗೊಂಡಂತೆ ಇದಕ್ಕೆ ಬೇಕಾಗುವ ಬಜೆಟ್‍ನ ಸಂಪೂರ್ಣ ವಿವರದ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಸಂಸದರು ಸೂಚನೆ ನೀಡಿದರು. ಇದನ್ನೂ ಓದಿ: ಕೊಂಚ ಏರಿಕೆ ಕಂಡ ಕೊರೊನಾ ಪ್ರಕರಣ- ರಾಜ್ಯದಲ್ಲಿಂದು 3,222 ಮಂದಿಗೆ ಪಾಸಿಟಿವ್

    ಜಿಲ್ಲೆಗೆ ಅಗತ್ಯವಿರುವ ಸಿಬ್ಬಂದಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಶೀಘ್ರದಲ್ಲಿ ಅರ್ಜಿ ಆಹ್ವಾನಿಸಬೇಕು. ಶೇ.10ರಷ್ಟು ಅಗತ್ಯವಿರುವ ಔಷಧಿಯನ್ನು ಖರೀದಿಸಬೇಕು. ಕೋವಿಡ್-19ರ ಮೂರನೇ ಅಲೆಯಲ್ಲಿ ಮಕ್ಕಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಅಗತ್ಯ ಕ್ರಮವಹಿಸಬೇಕು. ಹಾಗಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.

    ಸೆಮಿನಾರ್, ತರಬೇತಿಗೆ ಸೂಚನೆ: ಕೋವಿಡ್-19 ಮೂರನೇ ಅಲೆಯ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಕೋವಿಡ್ ಸೋಂಕಿತ ಮಕ್ಕಳಿಗೆ ಯಾವ ರೀತಿಯಲ್ಲಿ ಚಿಕಿತ್ಸೆ ನೀಡಬೇಕು ಎನ್ನುವುದರ ಕುರಿತು ತಜ್ಞರಿಂದ ಸೆಮಿನಾರ್ ಹಾಗೂ ತರಬೇತಿ ನೀಡುವಂತೆ ಸಂಸದರು ಸೂಚಿಸಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್, ಕೋವಿಡ್-19 ಚಿಕಿತ್ಸೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ತರಬೇತಿ ನೀಡಲು ಇಂದಿರಾ ಗಾಂಧಿ ಮಕ್ಕಳ ತರಬೇತಿ ಸಂಸ್ಥೆಯೊಂದಿಗೆ ಚರ್ಚಿಸಲಾಗಿದ್ದು, ಸಿಬ್ಬಂದಿಗೆ ತರಬೇತಿ ನೀಡಲು ಅಗತ್ಯ ಕ್ರಮವಹಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು. ತಾಲ್ಲೂಕುವಾರು ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೆಮಿನಾರ್ ಹಾಗೂ ತರಬೇತಿ ನೀಡಬೇಕು. ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಆಪರೇಟಿಂಗ್ ಹಾಗೂ ಆಕ್ಸಿಜನ್ ಬಳಕೆ ಕುರಿತು ತರಬೇತಿ ನೀಡಬೇಕು ಎಂದು ಸಂಸದರು ತಿಳಿಸಿದರು.

    ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಹೆಚ್.ಜೆ.ಬಸವರಾಜಪ್ಪ, ಆರ್ಸಿಹೆಚ್ ಅಧಿಕಾರಿ ಡಾ.ಕುಮಾರಸ್ವಾಮಿ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

  • ಸೋಕಿನಿಂದ ಹಲವು ಕುಟುಂಬಗಳು ವಿನಾಶದ ಅಂಚಿನಲ್ಲಿವೆ – ಸಂಸದ ಎ.ನಾರಾಯಣ ಸ್ವಾಮಿ

    ಸೋಕಿನಿಂದ ಹಲವು ಕುಟುಂಬಗಳು ವಿನಾಶದ ಅಂಚಿನಲ್ಲಿವೆ – ಸಂಸದ ಎ.ನಾರಾಯಣ ಸ್ವಾಮಿ

    – ಸಿಎಂ ಸ್ಥಾನ ಬದಲಾವಣೆ ವಿಚಾರ ಮುಗಿದ ಅಧ್ಯಾಯ

    ಚಿತ್ರದುರ್ಗ: ಕೊರೊನಾ ಎರಡನೇ ಅಲೆ ಆರ್ಭಟ ದಿಂದಾಗಿ ಹಲವು ಕುಟುಂಬಗಳು ಮನೆಯ ಸದಸ್ಯರನ್ನು ಕಳೆದುಕೊಂಡು ವಿನಾಶದ ಅಂಚಿನಲ್ಲಿವೆ ಆದರು ಸಾರ್ವಜನಿಕವಾಗಿ ಜನರು ಜಾಗೃತರಾಗಿಲ್ಲವೆಂದು ಚಿತ್ರದುರ್ಗ ಸಂಸದ ಎ.ನಾರಾಯಣ ಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸೋಂಕಿನಿಂದ ನಿಧನರಾದವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಅರವಿಂದ ಲಿಂಬಾವಳಿ

    ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪಟ್ಟಣದ ಬಿಎಂ ಜಿಹೆಚ್ ಪ್ರೌಢಶಾಲಾ ಆವರಣದಲ್ಲಿ ಪೌರಕಾರ್ಮಿಕರಿಗೆ ಹಮ್ಮಿಕೊಂಡಿದ್ದ ಆಹಾರ ಕಿಟ್ ವಿತರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಎರಡನೇ ಅಲೆಯ ಬಗ್ಗೆ ಯಾರು ಸಹ ಗಂಭೀರವಾಗಿ ಪರಿಗಣಿಸಲಿಲ್ಲ. ಈಗಾಗಲೇ ಕೋರೊನಾದಿಂದಾಗಿ ಹಲವರು ತಂದೆ ತಾಯಿಗಳನ್ನು ಕಳೆದುಕೊಂಡಿದ್ದಾರೆ. ಕೆಲವರು ಮಕ್ಕಳು ಅಣ್ಣತಮ್ಮರನ್ನು ಕಳೆದುಕೊಂಡಿದ್ದಾರೆ. ಇಂತಹ ಸಮಯದಲ್ಲೂ ನಿರ್ಲಕ್ಷ್ಯವಹಿಸದೇ ಎಲ್ಲರು ತಪ್ಪದೇ ಕೊರೊನಾ ವ್ಯಾಕ್ಸಿನ್ ಪಡೆದು ಜೀವ ರಕ್ಷಣೆ ಮಾಡಿಕೊಳ್ಳಬೇಕು ಎಂದು ಮನವಿಯನ್ನು ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ರೇಣುಕಾಚಾರ್ಯರನ್ನ ಪತಿಯಾಗಿ ಪಡೆದ ನಾನೇ ಅದೃಷ್ಟವಂತೆ: ಕೊಂಡಾಡಿದ ಪತ್ನಿ ಸುಮಿತ್ರಾ

    ಸಾರ್ವಜನಿಕರು ಎಲ್ಲೆಡೆ ಕಡ್ಟಾಯವಾಗಿ ಮಾಸ್ಕ್ ಹಾಕಿಕೊಂಡು, ಸಾಮಾಜಿಕ ಅಂತರ ಕಾಯ್ದುಕೊಂಡ ಕೊರೊನಾವನ್ನು ಹಿಮ್ಮೆಟ್ಟಿಸಬೇಕು. ಪೌರಕಾರ್ಮಿಕರು ಇಲ್ಲದಿದ್ದರೆ ನಗರ ಪರಸ್ಥಿತಿ ಹೇಳತೀರದಾಗಿರುತ್ತು. ನಗರ ಸ್ವಚ್ಚ ಕಾರ್ಯದಲ್ಲಿ ತೋಡಗುವ ಕಾರ್ಮಿಕರು ವೈಯಕ್ತಿಕ ಬದುಕನ್ನು ಬದಿಗೊತ್ತಿ ನಗರ ಸ್ವಚ್ಚತೆಗೆ ಆದ್ಯತೆ ನೀಡುತ್ತಾರೆ. ಮೊದಲು ಪೌರಕಾರ್ಮಿರು ಲಸಿಕೆಯನ್ನು ಪಡೆಯಿರಿ ತಮ್ಮ ಅರೋಗ್ಯ ಕಾಪಾಡುವ ಕೊಳ್ಳಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ವೀಡಿಯೋ ವೈರಲ್: ಸೀರೆಯುಟ್ಟು ಮ್ಯಾನ್‍ಹೋಲ್‍ಗೆ ಇಳಿದ ಮುನ್ಸಿಪಲ್ ಆಫೀಸರ್

    ಸಿಎಂ ಸ್ಥಾನ ಬದಲಾವಣೆ ವಿಚಾರ ಮುಗಿದ ಅಧ್ಯಾಯ ಎನಿಸಿದೆ. ನಿನ್ನೆ ರಾಜ್ಯ ಉಸ್ತುವಾರಿ ಅರುಣ್ ಜಿ ಯವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದ ಸಿಎಂ ಬದಲಾವಣೆ ವಿಚಾರ ಕೇಂದ್ರದಲ್ಲೂ ಇಲ್ಲ, ರಾಜ್ಯದಲ್ಲೂ ಇಲ್ಲ ಹೀಗಾಗಿ ಸಾಮಾನ್ಯ ಕಾರ್ಯಕರ್ತನಿಂದ ರಾಜ್ಯ ನಾಯಕರವರೆಗೆ ಇದೇ ಧೋರಣೆ ನಮ್ಮಲ್ಲಿದೆ. ಸಿಎಂ ಸ್ಥಾನದಿಂದ ಬಿಎಸ್‍ವೈ ಬದಲಾವಣೆ ಚರ್ಚೆ ನಮ್ಮಲ್ಲಿ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದರು.

    ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ, ತಾಲ್ಲೂಕು ಬಿಜೆಪಿ ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ನಗರಸಭೆ ಸದಸ್ಯ ಜಯಣ್ಣ,ಶಿವಕುಮಾರ್, ಬಿಜೆಪಿ ಮುಖಂಡರಾದ ಜಯಪಾಲ ಬಾಳೆಮಂಡಿ ರಾಮದಾಸ್, ದೇವರಾಜ್, ತಿಮ್ಮರಾಜ್, ಶಿಮಮೂರ್ತಿ ತಹಸೀಲ್ದಾರ್ ಎಂ. ಮಲ್ಲಿಕಾರ್ಜುನ್ ಇತರರಿದ್ದರು.