Tag: A.P.Arjun

  • ಉಪಾಧ್ಯಕ್ಷ ಚಿಕ್ಕಣ್ಣ ಈಗ ‘ಲಕ್ಷ್ಮೀಪುತ್ರ’- ‌’ಮಾರ್ಟಿನ್‌’ ಡೈರೆಕ್ಟರ್‌ ಎ.ಪಿ ಅರ್ಜುನ್ ಸಾಥ್

    ಉಪಾಧ್ಯಕ್ಷ ಚಿಕ್ಕಣ್ಣ ಈಗ ‘ಲಕ್ಷ್ಮೀಪುತ್ರ’- ‌’ಮಾರ್ಟಿನ್‌’ ಡೈರೆಕ್ಟರ್‌ ಎ.ಪಿ ಅರ್ಜುನ್ ಸಾಥ್

    ಅಂಬಾರಿ, ಅದ್ಧೂರಿ, ಐರಾವತ, ರಾಟೆಯಂತಹ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿರುವ ಎ.ಪಿ.ಅರ್ಜುನ್ ತಮ್ಮದೇ ಎ.ಪಿ ಅರ್ಜುನ್ (A.P Arjun) ಫಿಲ್ಮಂಸ್ ನಡಿ ಕಿಸ್, ಅದ್ಧೂರಿ ಲವರ್ಸ್ ನಂತಹ ಸದಭಿರುಚಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ಕೊಡುಗೆಯಾಗಿ ಕೊಟ್ಟಿದ್ದಾರೆ. ಇದೇ ಎ.ಪಿ ಅರ್ಜುನ್ ಫಿಲ್ಮಂಸ್‌ನ 3ನೇ ಸಿನಿಮಾ ಅನೌನ್ಸ್ ಆಗಿದೆ. ಇದನ್ನೂ ಓದಿ:ನಾನು ಕ್ಷೇಮವಾಗಿದ್ದೇನೆ: ಚೂರಿ ಇರಿತದ ಬಳಿಕ ಸೈಫ್ ಅಲಿ ಖಾನ್ ಫಸ್ಟ್ ರಿಯಾಕ್ಷನ್

    ಎ.ಪಿ ಅರ್ಜುನ್ ನಿರ್ಮಾಣ ಸಂಸ್ಥೆಯ 3ನೇ ಪ್ರಯತ್ನಕ್ಕೆ ʻಲಕ್ಷ್ಮೀಪುತ್ರʼ (Laksmiputra) ಎಂಬ ಟೈಟಲ್ ಇಡಲಾಗಿದ್ದು, ಚಿತ್ರಕ್ಕೆ ಅರ್ಜುನ್ ಕಥೆ ಹಾಗೂ ಸಾಹಿತ್ಯ ಬರೆಯುತ್ತಿದ್ದಾರೆ. ‘ಲಕ್ಷ್ಮೀಪುತ್ರ’ನಾಗಿ ಸ್ಯಾಂಡಲ್‌ವುಡ್ ‘ಉಪಾಧ್ಯಕ್ಷ’ ಚಿಕ್ಕಣ್ಣ ಅಭಿನಯಿಸುತ್ತಿದ್ದಾರೆ. ಎ.ಪಿ ಅರ್ಜುನ್ ಗರಡಿಯಲ್ಲಿ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ವಿಜಯ್ ಎಸ್ ಸ್ವಾಮಿ ಈ ಸಿನಿಮಾ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸುತ್ತಿದ್ದಾರೆ. ಅರ್ಜುನ್ ಅವರಿಂದ ನಿರ್ದೇಶನದ ಪಟುಗಳನ್ನು ಕಲಿತಿರುವ ವಿಜಯ್ ಅವರೀಗ ಪೂರ್ಣಪ್ರಮಾಣದ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.

    ಚಿಕ್ಕಣ್ಣ ಹಾಗೂ ಸ್ಟಾರ್ ಡೈರೆಕ್ಟರ್ ಎ.ಪಿ ಅರ್ಜುನ್ ಕಾಂಬೋದ ಮೊದಲ ಸಿನಿಮಾವನ್ನು ಅರ್ಜುನ್ ಮಡದಿ ಅನ್ನಪೂರ್ಣ ಎಪಿ ಅರ್ಜುನ್ ನಿರ್ಮಾಣ ಮಾಡುತ್ತಿದ್ದಾರೆ. ಸಚಿವ ಸಂತೋಷ್ ಲಾಡ್ ಲಕ್ಷ್ಮೀಪುತ್ರ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ರವಿಕಿರಣ್ ಗೌಡ ಸಹ ನಿರ್ಮಾಪಕರಾಗಿ ಸಾಥ್ ಕೊಡುತ್ತಿದ್ದಾರೆ. ಗಿರೀಶ್ ಆರ್ ಗೌಡ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ, ದೀಪು ಎಸ್ ಕುಮಾರ್ ಸಂಕಲನ, ಡಾ.ಕೆ.ರವಿ ವರ್ಮಾ ಸಾಹಸ ನಿರ್ದೇಶನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಎ.ಪಿ ಅರ್ಜುನ್, ಪ್ರಶಾಂತ್ ರಾಜಪ್ಪ ಹಾಗೂ ವಿಜಯ್ ಈಶ್ವರ್ ಸಂಭಾಷಣೆ, ರಾಜೇಶ್ ರಾವ್ ಸಹ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದೆ.

    ಇದೇ ಜ.24ಕ್ಕೆ ಲಕ್ಷ್ಮೀಪುತ್ರನಿಗೆ ಮುಹೂರ್ತ ನಡೆಯಲಿದೆ. ‘ಲಕ್ಷ್ಮೀಪುತ್ರ’ ಎಂಬ ಕ್ಯಾಚಿ ಟೈಟಲ್‌ನೊಂದಿಗೆ ಚಿಕ್ಕಣ್ಣ ಹಾಗೂ ಎ.ಪಿ ಅರ್ಜುನ್ ಅಖಾಡಕ್ಕೆ ಇಳಿಯುತ್ತಿದ್ದು, ಇದೇ ತಿಂಗಳ ಜ.24ಕ್ಕೆ ಚಿತ್ರದ ಮುಹೂರ್ತ ನೆರವೇರಿಸಲು ಚಿತ್ರತಂಡ ಸಜ್ಜಾಗಿದೆ.

  • ‘ಮಾರ್ಟಿನ್’ ನಿರ್ದೇಶಕನ ಸಿನಿಮಾದಲ್ಲಿ ಚಿಕ್ಕಣ್ಣ

    ‘ಮಾರ್ಟಿನ್’ ನಿರ್ದೇಶಕನ ಸಿನಿಮಾದಲ್ಲಿ ಚಿಕ್ಕಣ್ಣ

    ‘ಉಪಾಧ್ಯಕ್ಷ’ ನಟ ಚಿಕ್ಕಣ್ಣ (Chikkanna) ಮತ್ತೆ ಹೀರೋ ಆಗಿ ಬರುತ್ತಿದ್ದಾರೆ. ಕಾಮಿಡಿ ಪಾತ್ರಗಳ ಮೂಲಕ ಸೈ ಎನಿಸಿಕೊಂಡಿದ್ದ ಚಿಕ್ಕಣ್ಣ ನಾಯಕ ನಟನಾಗಿ ಕೂಡ ಗಮನ ಸೆಳೆದಿದ್ದಾರೆ. ಹೀರೋ ಆಗಿ 2ನೇ ಸಿನಿಮಾ ಮಾಡಲು ಮುಂದಾಗಿದ್ದಾರೆ. ‘ಮಾರ್ಟಿನ್’ (Martin) ಡೈರೆಕ್ಟರ್ ಎ.ಪಿ ಅರ್ಜುನ್ (A.P Arjun) ಜೊತೆ ಕೈಜೋಡಿಸಿದ್ದಾರೆ.

    ಉಮಾಪತಿ ಶ್ರೀನಿವಾಸ್ ನಿರ್ಮಾಣದ ‘ಉಪಾಧ್ಯಕ್ಷ’ ಸಿನಿಮಾದಲ್ಲಿ ನಾಯಕನಾಗಿ ಚಿಕ್ಕಣ್ಣ ನಟಿಸಿದ್ದರು. ಮಲೈಕಾ ವಸುಪಾಲ್ ಜೊತೆ ಚಿಕ್ಕಣ್ಣ ಡ್ಯುಯೇಟ್ ಹಾಡಿದ್ದರು. ಈ ಚಿತ್ರದ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಬಂಪರ್ ಚಾನ್ಸ್ ಗಿಟ್ಟಿಸಿಕೊಂಡಿದ್ದಾರೆ. ಇದನ್ನೂ ಓದಿ:ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬೀಗಿದ ಸಿನಿಮಾ ತಾರೆಯರು ಯಾರು?

    ಕಿಸ್, ಮಾರ್ಟಿನ್ ಸಿನಿಮಾ ನಿರ್ದೇಶಕ ಎ.ಪಿ ಅರ್ಜುನ್ ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ಕೆರೆಬೇಟೆ’ ನಿರ್ದೇಶಕ ರಾಜಗುರು ಚಿಕ್ಕಣ್ಣಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಮೂವರ ಕಾಂಬಿನೇಷನ್ ಸಿನಿಮಾ ಬಗ್ಗೆ ಅಧಿಕೃತ ಘೋಷಣೆ ಆಗಬೇಕಿದೆ. ಸದ್ಯ ಈ ನ್ಯೂಸ್‌ ಕೇಳಿ ಫ್ಯಾನ್ಸ್‌ ಥ್ರಿಲ್‌ ಆಗಿದ್ದಾರೆ.

  • ಪ್ರೀತಿಯಲ್ಲಿ ಸೋತ ಹೃದಯಗಳಿಗೆ ಹಾಡಿನ ಕಿಸ್!

    ಪ್ರೀತಿಯಲ್ಲಿ ಸೋತ ಹೃದಯಗಳಿಗೆ ಹಾಡಿನ ಕಿಸ್!

    ಬೆಂಗಳೂರು: ಈವರೆಗೆ ಬಿಡುಗಡೆಯಾಗಿರೋ ಎ.ಪಿ ಅರ್ಜುನ್ ನಿದೇಶನದ ಕಿಸ್ ಚಿತ್ರದ ಎಲ್ಲ ಹಾಡುಗಳೂ ಹಿಟ್ ಆಗಿವೆ. ಮಿಲಿಯನ್ನುಗಟ್ಟಲೆ ವೀವ್ಸ್ ಪಡೆದುಕೊಳ್ಳೋ ಮೂಲಕ ದಾಖಲೆಯನ್ನೂ ಬರೆದಿವೆ. ಇನ್ನೇನು ಕಿಸ್ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಹೊತ್ತಿನಲ್ಲಿ ಮತ್ತೊಂದು ಲಿರಿಕಲ್ ವೀಡಿಯೋ ಸಾಂಗ್ ಅನಾವರಣಗೊಂಡಿದೆ. ಎಲ್ಲ ಥರದ ವಿರಹದ ನೋವಿನ ಆತ್ಮನಿವೇದನೆಯಂತಿರೋ ಈ ಹಾಡೂ ಕೂಡಾ ಇದುವರೆಗೆ ಬಂದಿರೋ ಹಾಡುಗಳಂತೆಯೇ ಹಿಟ್ ಆಗೋ ಹಾದಿಯಲ್ಲಿ ಮುಂದುವರೆಯುತ್ತಿದೆ. ಇದರೊಂದಿಗೇ ಎ.ಪಿ ಅರ್ಜುನ್ ಪ್ರೀತಿಯಲ್ಲಿ ಸೋತ ಹೃದಯಗಳಿಗೆಲ್ಲ ಕಿಸ್ ಕೊಟ್ಟು ಸಮಾಧಾನಿಸಿದ್ದಾರೆ!

    ಅಷ್ಟಕ್ಕೂ ನಿರ್ದೇಶಕ ಎ.ಪಿ ಅರ್ಜುನ್ ಪ್ರೀತಿಯ ನವಿರು ಭಾವಗಳನ್ನು ಸೊಗಸಾದ ಕಥೆಗಳ ಮೂಲಕ ಕಟ್ಟಿಕೊಡುವಲ್ಲಿ ಸಿದ್ಧಹಸ್ತರು. ಅಂಬಾರಿಯಿಂದ ಇಲ್ಲಿಯವರೆಗೂ ಅರ್ಜುನ್ ನಿರ್ದೇಶನ ಮಾಡಿರೋ ಚಿತ್ರಗಳೆಲ್ಲವೂ ಪ್ರೀತಿಯ ಪುಳಕ ಹೊದ್ದ ಕಥೆಗಳ ಮೂಲಕವೇ ಗೆದ್ದಿವೆ. ಇದೀಗ ಅವರು ನಿರ್ದೇಶನ ಮಾಡಿ ಬಿಡುಗಡೆಗೆ ರೆಡಿಯಾಗಿರೋ ಕಿಸ್ ಕೂಡಾ ಪ್ರೇಮದ ಮತ್ತೊಂದು ಮಜಲಿನ ಕಥಾನಕ. ಅದರ ಪ್ಯಾಥೋ ಶೈಲಿಯ ಹಾಡೀಗ ಎಲ್ಲರ ಮನಸಿಗೂ ಕಿಸ್ ಕೊಟ್ಟಿದೆ. ಈ ಹಾಡನ್ನು ಅರ್ಜುನ್ ಪ್ರೀತಿಯಲ್ಲಿ ಸೋತ ಹೃದಯಗಳಿಗೆ ಅರ್ಪಿಸಿದ್ದಾರೆ.

    ಎ.ಪಿ. ಅರ್ಜುನ್ ಅವರೇ ಬರೆದಿರೋ ಈ ಹಾಡಿಗೆ ವಿ ಹರಿಕೃಷ್ಣ ಸಂಗೀತ ನೀಡಿದ್ದಾರೆ. ಸಂತೋಷ್ ವೆಂಕಿ ಧ್ವನಿಯಲ್ಲಿ ಮೂಡಿ ಬಂದಿರೋ ಕಣ್ಣ ನೀರಿದು ಜಾರುತಾ ಇದೆ ನೀನು ಇಲ್ಲದೆ ತುಂಬ ನೋವಾಗಿದೆ ಎಂಬ ಲಿರಿಕಲ್ ವೀಡಿಯೋ ಸಾಂಗ್ ಡಿ ಬೀಟ್ಸ್ ಯೂಟ್ಯೂಬ್ ಚಾನೆಲ್ ಮೂಲಕ ಬಿಡುಗಡೆಯಾಗಿದೆ. ಸದರಿ ಪ್ಯಾಥೋ ಮೂಡಿನ ಹಾಡಿಗೆ ಯೂಟ್ಯೂಬ್‍ನಲ್ಲಿ ವ್ಯಾಪಕ ಮೆಚ್ಚುಗೆ, ವೀಕ್ಷಣೆಗಳು ಸಿಗುತ್ತಿವೆ. ವೇಗವಾಗಿ ಹೆಚ್ಚು ಹೆಚ್ಚು ವೀವ್ಸ್ ಪಡೆಯುತ್ತಲೇ ಈ ಹಿಂದಿನ ಹಾಡುಗಳ ದಾಖಲೆಗಳನ್ನು ಬೀಟ್ ಮಾಡೋ ಆವೇಗದೊಂದಿಗೆ ಸಾಗುತ್ತಿದೆ. ಅಂದಹಾಗೆ ಕಿಸ್ ಚಿತ್ರ ಇದೇ ತಿಂಗಳ 27ರಂದು ಬಿಡುಗಡೆಯಾಗಲಿದೆ.

  • ಶುಕ್ರವಾರ ರಾಕಿಂಗ್ ಸ್ಟಾರ್ ಯಶ್ ‘ಕಿಸ್’ ಕೊಡ್ತಾರಂತೆ!

    ಶುಕ್ರವಾರ ರಾಕಿಂಗ್ ಸ್ಟಾರ್ ಯಶ್ ‘ಕಿಸ್’ ಕೊಡ್ತಾರಂತೆ!

    ಬೆಂಗಳೂರು: ಎ.ಪಿ. ಅರ್ಜುನ್ ನಿರ್ದೇಶನದ ಕಿಸ್ ಚಿತ್ರ ರೊಮ್ಯಾಂಟಿಕ್ ಹಾಡುಗಳೊಂದಿಗೆ ಬಹುನಿರೀಕ್ಷಿತ ಚಿತ್ರವಾಗಿ ನೆಲೆ ಕಂಡುಕೊಂಡಿದೆ. ತಡವಾದಷ್ಟೂ ಕಾತರವನ್ನು ಹೆಚ್ಚಾಗಿಸುತ್ತಿರೋ ಈ ಸಿನಿಮಾ ಇದೀಗ ಬಿಡುಗಡೆಯ ನಿರ್ಣಾಯಕ ಹಂತ ತಲುಪಿಕೊಂಡಿದೆ. ಅದರ ಭಾಗವಾಗಿ ಚೆಂದದ್ದೊಂದು ಟ್ರೇಲರ್ ಬಿಡುಗಡೆಗೊಳಿಸಲು ಚಿತ್ರತಂಡ ರೆಡಿಯಾಗಿದೆ. ಈ ಟ್ರೇಲರ್ ಅನ್ನು ರಾಕಿಂಗ್ ಸ್ಟಾರ್ ಯಶ್ ಪ್ರೀತಿಯಿಂದ ಬಿಡುಗಡೆ ಮಾಡಲಿದ್ದಾರೆ.

    ಇದೇ ಶುಕ್ರವಾರ, 23ನೇ ತಾರೀಕಿನಂದು ರಾಕಿಂಗ್ ಸ್ಟಾರ್ ಯಶ್ ಕಿಸ್ ಚಿತ್ರದ ಟ್ರೇಲರ್ ಅನ್ನು ಬಿಡುಗಡೆಗೊಳಿಸಲಿದ್ದಾರೆ. ನಿರ್ದೇಶಕ ಎ.ಪಿ ಅರ್ಜುನ್ ಮತ್ತು ಯಶ್ ಬಹು ಕಾಲದ ಸ್ನೇಹಿತರು. ಈ ಸೆಳೆತದಿಂದಲೇ ತಮ್ಮ ಬ್ಯುಸಿಯಾದ ಶೆಡ್ಯೂಲ್ ನಡುವೆಯೂ ಬಿಡುವು ಮಾಡಿಕೊಂಡು ಕಿಸ್ ಟ್ರೇಲರ್ ಲಾಂಚ್ ಮಾಡಲು ಅವರೊಪ್ಪಿಕೊಂಡಿದ್ದಾರೆ. ಈ ಮೂಲಕವೇ ಕಿಸ್ ಚಿತ್ರಕ್ಕೆ ಮತ್ತಷ್ಟು ಬಲ ಬಂದಂತೆಯೂ ಆಗಿದೆ. ಕಿಸ್ ಈವರೆಗೂ ಸೃಷ್ಟಿಸಿರೋ ಕ್ರೇಜ್ ಕಂಡು ಯಶ್ ಸಂತಸಗೊಂಡಿದ್ದಾರಂತೆ.

    ವಿರಾಟ್ ಮತ್ತು ಶ್ರೀಲೀಲಾ ಕಿಸ್‍ನಲ್ಲಿ ನಾಯಕ ನಾಯಕಿಯರಾಗಿ ನಟಿಸಿದ್ದಾರೆ. ಇವರಿಬ್ಬರ ಕಾಂಬಿನೇಷನ್ನಿನಲ್ಲಿ ಮೂಡಿ ಬಂದಿರೋ ಶೀಲ ಸುಶೀಲ ಯೂ ಡೋಂಟುವರಿ ಎಂಬ ಹಾಡಂತೂ ಈ ಕ್ಷಣಕ್ಕೂ ಟ್ರೆಂಡಿಂಗ್‍ನಲ್ಲಿದೆ. ಆ ನಂತರ ಬಂದಿರೋ ಹಾಡುಗಳೂ ಕೂಡಾ ಮಿಲಿಯನ್ನುಗಟ್ಟಲೆ ವೀವ್ಸ್‍ನೊಂದಿಗೆ ದಾಖಲೆ ಬರೆದಿವೆ. ಆದರೆ ಈ ಸಿನಿಮಾದ ಕಥೆ ಏನಿರಬಹುದೆಂಬ ಕುತೂಹಲ ಮಾತ್ರ ಹಾಗೆಯೇ ಉಳಿದು ಕೊಂಡಿದೆ. ಶುಕ್ರವಾರ ಯಶ್ ಬಿಡುಗಡೆಗೊಳಿಸಲಿರೋ ಟ್ರೇಲರ್‍ನಲ್ಲಿ ಅದರ ಸಿಳಿವಿರಬಹುದಾ? ಅಥವಾ ಆ ಮೂಲಕವೇ ಮತ್ತಷ್ಟು ಕ್ಯೂರಿಯಾಸಿಟಿಗೆ ಕಾರಣವಾಗುವಂತೆ ಈ ಟ್ರೇಲರ್ ಅನ್ನು ರೂಪಿಸಿದ್ದಾರಾ ಅನ್ನೋದೆಲ್ಲ ಜಾಹೀರಾಗಲು ಇನ್ನೊಂದು ದಿನ ಕಾಯಬೇಕಿದೆಯಷ್ಟೆ!