Tag: Aadu Jeevitham

  • ‘ಆಡುಜೀವಿತಂ’ ಬಾಕ್ಸ್ ಆಫೀಸಿನಲ್ಲೂ ಅಚ್ಚರಿಯ ಗಳಿಕೆ

    ‘ಆಡುಜೀವಿತಂ’ ಬಾಕ್ಸ್ ಆಫೀಸಿನಲ್ಲೂ ಅಚ್ಚರಿಯ ಗಳಿಕೆ

    ಗುರುವಾರವಷ್ಟೇ ಪೃಥ್ವಿರಾಜ್ ಸುಕುಮಾರನ್ ನಟನೆಯ ಆಡುಜೀವಿತಂ ಸಿನಿಮಾ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ಪ್ರೇಕ್ಷಕರು ಸಿನಿಮಾವನ್ನು ಮೆಚ್ಚಿಕೊಂಡಿದ್ದಲ್ಲದೇ, ಬಾಕ್ಸ್ ಆಫೀಸಿಗೂ (Box Office)  ಹಣ ಹರಿದು ಬಂದಿದೆ. ಚಿತ್ರದ ಮೊದಲ ದಿನದ ಗಳಿಕೆಯೇ ಬರೋಬ್ಬರಿ 16.07 ಕೋಟಿ ಎಂದು ಅಂದಾಜಿಸಲಾಗಿದೆ. ಎರಡನೇ ವಾರದ ಗಳಿಕೆಯನ್ನು ನಿರೀಕ್ಷೆ ಮಾಡಲಾಗುತ್ತಿದೆ. ಪೃಥ್ವಿರಾಜ್ ಸುಕುಮಾರನ್, ಅಮಲಾ ಪೌಲ್ (Amala Paul) ನಟನೆಯ ‘ಆಡುಜೀವಿತಂ’ ಸಿನಿಮಾ ಮಾ.28ರಂದು ರಿಲೀಸ್ ಆಗಿದೆ. ಈ ಸಿನಿಮಾ ನೋಡಿದ ಪ್ರೇಕ್ಷಕರು ಸೇರಿದಂತೆ ಹಲವು ನಟ-ನಟಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಸೌತ್‌ನ ಲೆಜೆಂಡರಿ ಡೈರೆಕ್ಟರ್ ಮಣಿರತ್ನಂ (Maniratnam) ಅವರು ‘ಆಡುಜೀವಿತಂ’ (Aadujeevitham) ಸಿನಿಮಾ ನೋಡಿ ಹಾಡಿ ಹೊಗಳಿದ್ದಾರೆ.

    ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಅವರು ಆ ಪಾತ್ರವೇ ತಾವಾಗಿ ನಟಿಸುವ ಪ್ರತಿಭಾನ್ವಿತ ಕಲಾವಿದ. ಅದಕ್ಕೆ ತಾಜಾ ಉದಾಹರಣೆಯಾಗಿ ಆಡುಜೀವಿತಂ ಸಿನಿಮಾದಲ್ಲಿನ ಅವರ ನಟನೆಯೇ ಸಾಕ್ಷಿ. ಇದೀಗ ಅವರ ನಟನೆ, ಚಿತ್ರದ ಬಗ್ಗೆ ಮಣಿರತ್ನಂ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ನಿಮ್ಮ ಸಿನಿಮಾಗೆ ಅಭಿನಂದನೆಗಳು, ನೀವು ಇದನ್ನು ಹೇಗೆ ನಿಭಾಯಿಸಿದ್ದೀರಿ ನನಗೆ ತಿಳಿದಿಲ್ಲ. ನಿಮ್ಮೆಲ್ಲರ ಶ್ರಮ ತೆರೆಯ ಮೇಲೆ ಕಾಣುತ್ತಿದೆ. ಸಿನಿಮಾವನ್ನು ಸುಂದರವಾಗಿ ಚಿತ್ರೀಸಲಾಗಿದೆ ಎಂದು ಮಣಿರತ್ನಂ ಸಿನಿಮಾವನ್ನು ಬಣ್ಣಿಸಿದ್ದಾರೆ.  ಬಳಿಕ ಮರುಭೂಮಿಯಲ್ಲಿ ಎದುರಿಸುವ ವಿವಿಧ ಕಷ್ಟಗಳನ್ನು ತೋರಿಸಿದ್ದೀರಿ. ನಿಮ್ಮ ಮತ್ತು ಸುನೀಲ್ ಕೆಲಸ ಅದ್ಭುತವಾಗಿದೆ ಎಂದು ಮಣಿರತ್ನಂ ತಂಡಕ್ಕೆ ಭೇಷ್ ಎಂದಿದ್ದಾರೆ. ಪೃಥ್ವಿರಾಜ್ ಸುಕುಮಾರನ್ ನಟನೆ ನೋಡಿ ಕೊಂಡಾಡಿದ್ದಾರೆ. ಇದು ನಿಜವಾಗಿಯೂ ಸಂಭವಿಸಿದೆ ಎಂದು ಯೋಚಿಸಲು ಭಯಾನಕವಾಗಿದೆ ಎಂದಿದ್ದಾರೆ. ಈ ಚಿತ್ರವು ಸೆಂಟಿಮೆಂಟಲ್ ಆಗಿ ಮೂಡಿ ಬಂದಿದೆ. ಚಿತ್ರದ ಫಿನಿಶಿಂಗ್ ತುಂಬಾ ಇಷ್ಟವಾಯಿತು. ಚಿತ್ರತಂಡಕ್ಕೆ ಶುಭವಾಗಲಿ ಎಂದು ಮಣಿರತ್ನಂ ತಿಳಿಸಿದ್ದಾರೆ.

    ಮಣಿರತ್ನಂ ಅವರ ಬೆಂಬಲಕ್ಕೆ ಆಡುಜೀವಿತಂ ನಿರ್ದೇಶಕ ಬ್ಲೆಸ್ಸಿ ಕೂಡ ಪ್ರತಿಕ್ರಿಯಿಸಿ, ಧನ್ಯವಾದಗಳು ಸರ್ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ನಿರ್ದೇಶಕ ಬ್ಲೆಸ್ಸಿ ಶೇರ್‌ ಮಾಡಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಈ ‘ಆಡು ಜೀವಿತಂ’ ಚಿತ್ರದ ಕಥೆ ಇಮಿಗ್ರಟ್ಸ್ ಸುತ್ತವೇ ಸಾಗುತ್ತದೆ. ತನ್ನ ಹೊಟ್ಟೆ ಪಾಡಿಗಾಗಿ ಕೆಲಸ ಅರಸಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಅನುಭವಿಸುವ ಕಷ್ಟ, ಎದುರಿಸುವ ಸಮಸ್ಯೆ ಹೈಲೆಟ್. ಇನ್ನು ಆತನ ಪಾಸ್ಪೋರ್ಟ್ ಕಸಿದು ಆತನಿಗೆ ಕೊಡುವ ಹಿಂಸೆಗಳು ಆ ಬಿಸಿಲಿನ ಮರುಭೂಮಿಯಲ್ಲಿ ಆತ ಪಡುವ ಯಾತನೆ ಕುರಿತು ಸಾಗುವ ಕಥೆ ಇಲ್ಲಿದೆ.

    ನಿರ್ದೇಶಕ ಬ್ಲೆಸ್ಸಿ ಅವರ ಹದಿನೈದು ವರ್ಷದ ಕನಸಿನ ಕಥೆ ಇದು. ಅವರ ಕಲ್ಪನೆಯ ಪಾತ್ರದಲ್ಲಿ ವಲಸಿಗ ವ್ಯಕ್ತಿಯಾಗಿ ಹೊಸ ಲುಕ್ ಮೂಲಕ ಕಾಣಿಸಿಕೊಂಡಿರುವ ಪೃಥ್ವಿರಾಜ್ ಸುಕುಮಾರನ್, ಹಲವಾರು ವರ್ಷಗಳಿಂದ ಈ ಚಿತ್ರಕ್ಕಾಗಿ ದುಡಿದಿದ್ದಾರೆ. ಇಡೀ ಚಿತ್ರತಂಡ ಹಗಲು ರಾತ್ರಿ ಎನ್ನದೆ ಚಿತ್ರದ ಔಟ್ಪುಟ್ ಗಾಗಿ ದುಡಿದಿದೆ. ಪೃಥ್ವಿರಾಜ್ ನಿರೀಕ್ಷೆಯ ಚಿತ್ರ ಇದಾಗಿದ್ದು, ಬ್ಲೆಸ್ಸಿ ನಿರ್ದೇಶನದ `ಆಡುಜೀವಿತಂ’ 2008ರಲ್ಲಿ ಬೆನ್ಯಾಮಿನ್ ಬರೆದ ಅದೇ ಹೆಸರಿನ ಮಲಯಾಳಂ ಕಾದಂಬರಿ ಸಿನಿಮಾ ಇದು. ನಜೀಬ್ ಎಂಬ ವಲಸಿಗ ಕಾರ್ಮಿಕನ ಕಥೆಯನ್ನು ಮತ್ತು ಸೌದಿ ಅರೇಬಿಯಾದ ಮರುಭೂಮಿಯಲ್ಲಿ ಅವನು ಅನುಭವಿಸುವ ದುಃಸ್ಥಿತಿ ಮತ್ತು ಅಸಹಾಯಕತೆಯ ಕಥೆ ಚಿತ್ರದ ಸಾರಾಂಶ ಎನ್ನುತ್ತಾರೆ. ಪೃಥ್ವಿರಾಜ್ ನಜೀಬ್ ಪಾತ್ರ ನಿರ್ವಹಿಸಿದ್ದಾರೆ.

     

    ಚಿತ್ರದ ನಜೀಬ್ ಪಾತ್ರಕ್ಕಾಗಿ ಪೃಥ್ವಿರಾಜ್ ಸಾಕಷ್ಟು ದೇಹವನ್ನು ದಂಡಿಸಿದ್ದಾರೆ. ಅವರು ಸಿನುಮಾಗಾಗಿ ಸುಮಾರು 30 ಕೆಜಿ ತೂಕ ಇಳಿಸಿಕೊಂಡಿದ್ದಾರೆ ಕಳೆದ ಚಿತ್ರ ಐದು ವರ್ಷಗಳಿಂದ ತಯಾರಾಗುತ್ತಿದೆ ಎಂಬುದು ವಿಶೇಷ. ಚಿತ್ರದ ತಾಂತ್ರಿಕ ವಿಭಾಗದಲ್ಲಿ ಎ.ಆರ್.ರೆಹಮಾನ್ ಅವರ ಸಂಗೀತ, ಸುನಿಲ್ ಕೆ.ಎಸ್ ಅವರ ಕ್ಯಾಮೆರಾ ಕೈಚಳಕ, ರೆಸುಲ್ ಪೂಕುಟ್ಟಿ ಅವರ ಸೌಂಡ್ ಡಿಸೈನ್ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನ ಕೆಲಸವಿದೆ.

  • ಬಟ್ಟೆ ಮ್ಯಾಟರ್‌ಗೆ ಟ್ರೋಲ್‌ ಆದ ಪ್ರೆಗ್ನೆಂಟ್ ಅಮಲಾ ಪೌಲ್‌

    ನ್ನಡದ ‘ಹೆಬ್ಬುಲಿ’ (Hebbuli) ನಟಿ ಅಮಲಾ ಪೌಲ್ (Amala Paul) ಅವರು ಸದ್ಯ ‘ಆಡುಜೀವಿತಂ’ (Aadujeevitham) ಚಿತ್ರದಲ್ಲಿ ಪೃಥ್ವಿರಾಜ್ ಸುಕುಮಾರ್‌ಗೆ ನಾಯಕಿಯಾಗಿದ್ದಾರೆ. ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಬೋಲ್ಡ್ ಬಟ್ಟೆಯಲ್ಲಿ ಕಾಣಿಸಿಕೊಂಡ ಅಮಲಾಗೆ ನೆಟ್ಟಿಗರು ಕಾಲೆಳೆದಿದ್ದಾರೆ. ಬಟ್ಟೆ ಮ್ಯಾಟರ್‌ಗೆ ನಟಿಯ ಹಿಗ್ಗಾಮುಗ್ಗಾ ಟ್ರೋಲ್‌ ಮಾಡಿದ್ದಾರೆ.

    ಇತ್ತೀಚೆಗೆ ನಟಿ ಅಮಲಾ ಅವರು ಉದ್ಯಮಿ ಜಗತ್ ದೇಸಾಯಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದುವೆಯಾಗಿ ಒಂದು ತಿಂಗಳ ನಂತರ ತಾಯಿಯಾಗಿರುವ ಗುಡ್ ನ್ಯೂಸ್ ತಿಳಿಸಿದ್ದರು. ಚೊಚ್ಚಲ ಮಗುವಿನ ಆಗಮನಕ್ಕೆ ಎದುರು ನೋಡ್ತಿರುವಾಗ ತಾವು ನಟಿಸಿರುವ ಸಿನಿಮಾಗೂ ಪ್ರಚಾರಕ್ಕೆ ನಟಿ ಸಾಥ್ ನೀಡುತ್ತಿದ್ದಾರೆ. ಇದನ್ನೂ ಓದಿ:ಆತ್ಮವಾಗಿ ಕಾಣಿಸಿಕೊಂಡ ಅನುಷ್ಕಾ ಶೆಟ್ಟಿ

    ಇದೀಗ ಸಂದರ್ಶನಕ್ಕೆ ಬರುವಾಗ ಕಡುನೀಲಿ ಬಣ್ಣದ ಸ್ಲೀವ್‌ಲೆಸ್ ಡ್ರೆಸ್ ಧರಿಸಿ ಬಂದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನೆಗೆಟಿವ್ ಕಾಮೆಂಟ್ ಹಾಕಿದ್ದಾರೆ. ಇದೆಂಥಾ ಡ್ರೆಸ್ ಬೆಡ್‌ನಿಂದ ಎದ್ದ ಕೂಡಲೇ ಬಾತ್‌ರೂಮ್‌ಗೆ ಹಾಕಿಕೊಂಡು ಹೋಗುವ ಡ್ರೆಸ್ ಎಂದು ನೆಟ್ಟಿಗರೊಬ್ಬರು ಕುಟುಕಿದ್ದಾರೆ. ನಾನು ಅಮಲಾ ಪೌಲ್ ದೊಡ್ಡ ಅಭಿಮಾನಿಯಾಗಿದ್ದೆ. ಈಗ ಅಭಿಮಾನಿಯಲ್ಲ ಎಂದು ಮತ್ತೊಬ್ಬರು ಹೇಳಿದ್ದಾರೆ. ನಟಿಯ ವಿಡಿಯೋ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದೆ. ಆದರೆ ನೆಗೆಟಿವ್ ಕಾಮೆಂಟ್‌ಗೆ ನಟಿ ಕ್ಯಾರೆ ಎನ್ನದೇ ತಮ್ಮ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಈ ‘ಆಡುಜೀವಿತಂ’ ಚಿತ್ರದ ಕಥೆ ಇಮಿಗ್ರಟ್ಸ್ ಸುತ್ತವೇ ಸಾಗುತ್ತದೆ. ತನ್ನ ಹೊಟ್ಟೆ ಪಾಡಿಗಾಗಿ ಕೆಲಸ ಅರಸಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಅನುಭವಿಸುವ ಕಷ್ಟ, ಎದುರಿಸುವ ಸಮಸ್ಯೆ ಹೈಲೆಟ್. ಇನ್ನು ಆತನ ಪಾಸ್ಪೋರ್ಟ್ ಕಸಿದು ಆತನಿಗೆ ಕೊಡುವ ಹಿಂಸೆಗಳು ಆ ಬಿಸಿಲಿನ ಮರುಭೂಮಿಯಲ್ಲಿ ಆತ ಪಡುವ ಯಾತನೆ ಕುರಿತು ಸಾಗುವ ಕಥೆ ಇಲ್ಲಿದೆ.

    ನಿರ್ದೇಶಕ ಬ್ಲೆಸ್ಸಿ ಅವರ 15 ವರ್ಷದ ಕನಸಿನ ಕಥೆ ಇದು. ಅವರ ಕಲ್ಪನೆಯ ಪಾತ್ರದಲ್ಲಿ ವಲಸಿಗ ವ್ಯಕ್ತಿಯಾಗಿ ಹೊಸ ಲುಕ್ ಮೂಲಕ ಕಾಣಿಸಿಕೊಂಡಿರುವ ಪೃಥ್ವಿರಾಜ್ ಸುಕುಮಾರನ್, ಹಲವಾರು ವರ್ಷಗಳಿಂದ ಈ ಚಿತ್ರಕ್ಕಾಗಿ ದುಡಿದಿದ್ದಾರೆ. ಇಡೀ ಚಿತ್ರತಂಡ ಹಗಲು ರಾತ್ರಿ ಎನ್ನದೆ ಚಿತ್ರದ ಔಟ್ಪುಟ್ ಗಾಗಿ ದುಡಿದಿದೆ. ಪೃಥ್ವಿರಾಜ್ ನಿರೀಕ್ಷೆಯ ಚಿತ್ರ ಇದಾಗಿದ್ದು, ಬ್ಲೆಸ್ಸಿ ನಿರ್ದೇಶನದ ;ಆಡುಜೀವಿತಂ’ 2008ರಲ್ಲಿ ಬೆನ್ಯಾಮಿನ್ ಬರೆದ ಅದೇ ಹೆಸರಿನ ಮಲಯಾಳಂ ಕಾದಂಬರಿ ಸಿನಿಮಾ ಇದು.

    ನಜೀಬ್ ಎಂಬ ವಲಸಿಗ ಕಾರ್ಮಿಕನ ಕಥೆಯನ್ನು ಮತ್ತು ಸೌದಿ ಅರೇಬಿಯಾದ ಮರುಭೂಮಿಯಲ್ಲಿ ಅವನು ಅನುಭವಿಸುವ ದುಃಸ್ಥಿತಿ ಮತ್ತು ಅಸಹಾಯಕತೆಯ ಕಥೆ ಚಿತ್ರದ ಸಾರಾಂಶ ಎನ್ನುತ್ತಾರೆ. ಪೃಥ್ವಿರಾಜ್ ನಜೀಬ್ ಪಾತ್ರ ನಿರ್ವಹಿಸಿದ್ದಾರೆ.

    ಚಿತ್ರದ ನಜೀಬ್ ಪಾತ್ರಕ್ಕಾಗಿ ಪೃಥ್ವಿರಾಜ್ ಸಾಕಷ್ಟು ದೇಹವನ್ನು ದಂಡಿಸಿದ್ದಾರೆ. ಅವರು ಸಿನುಮಾಗಾಗಿ ಸುಮಾರು 30 ಕೆಜಿ ತೂಕ ಇಳಿಸಿಕೊಂಡಿದ್ದಾರೆ ಕಳೆದ ಚಿತ್ರ 5 ವರ್ಷಗಳಿಂದ ತಯಾರಾಗುತ್ತಿದೆ ಎಂಬುದು ವಿಶೇಷ. ಚಿತ್ರದ ತಾಂತ್ರಿಕ ವಿಭಾಗದಲ್ಲಿ ಎ.ಆರ್.ರೆಹಮಾನ್ ಅವರ ಸಂಗೀತ, ಸುನಿಲ್ ಕೆ.ಎಸ್ ಅವರ ಕ್ಯಾಮೆರಾ ಕೈಚಳಕ, ರೆಸುಲ್ ಪೂಕುಟ್ಟಿ ಅವರ ಸೌಂಡ್ ಡಿಸೈನ್ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನ ಕೆಲಸವಿದೆ. ಇದೇ ಮಾರ್ಚ್ 28ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ.

  • ಅಗತ್ಯವಿತ್ತು, ಲಿಪ್ ಲಾಕ್ ಮಾಡಿದೆ : ಅಮಲಾ ಪೌಲ್ ಬೋಲ್ಡ್ ಮಾತು

    ಅಗತ್ಯವಿತ್ತು, ಲಿಪ್ ಲಾಕ್ ಮಾಡಿದೆ : ಅಮಲಾ ಪೌಲ್ ಬೋಲ್ಡ್ ಮಾತು

    ನ್ನಡದಲ್ಲಿ ಹೆಬ್ಬುಲಿ ಸಿನಿಮಾದಲ್ಲಿ ನಟಿಸಿದ್ದ ನಟಿ ಅಮಲಾ ಪೌಲ್ (Amala Paul) ಹಾಗೂ ಪೃಥ್ವಿರಾಜ್ (Prithviraj) ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ‘ಆಡು ಜೀವಿತಂ’ (Aadu Jivitham) ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಈ ಟ್ರೈಲರ್ ನಲ್ಲಿ ಅಮಲಾ ಪೌಲ್ ಮತ್ತು ನಾಯಕ ಪೃಥ್ವಿರಾಜ್ ಲಿಪ್ ಲಾಕ್ (Lip Lock) ಮಾಡಿದ್ದರು. ಈ ದೃಶ್ಯ ಸಖತ್ ವೈರಲ್ ಕೂಡ ಆಗಿದೆ. ಇಂಥದ್ದೇ ಕಾರಣಗಳಿಂದಾಗಿ ಸದಾ ಸುದ್ದಿಯಾಗುವ ಅಮಲಾರನ್ನು ನೆಟ್ಟಿಗರು ಸಾಕಷ್ಟು ಪ್ರಶ್ನೆಗಳನ್ನೇ ಕೇಳಿದ್ದಾರೆ.

    ಈ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅಮಲಾ, ‘ದೃಶ್ಯಗಳು ಏನನ್ನು ಕೇಳುತ್ತವೆಯೋ ಅದನ್ನು ಮಾಡಲೇಬೇಕು. ಮೊದಲೇ ನಾವು ಕಥೆ ಕೇಳಿ, ಪಾತ್ರಗಳ ಹಿನ್ನೆಲೆ ತಿಳಿದುಕೊಂಡು ಸಿನಿಮಾ ಒಪ್ಪಿಕೊಂಡಿರುತ್ತೇವೆ. ನಿರ್ದೇಶಕರು ಈ ಮೊದಲು ದೃಶ್ಯದ ಕುರಿತು ವಿವರಿಸಿದ್ದರು. ದೃಶ್ಯ ಕೇಳಿದ್ದರಿಂದ ಲಿಪ್ ಲಾಕ್ ಮಾಡಲೇಬೇಕಾಯಿತು’ ಎಂದಿದ್ದಾರೆ. ಇದನ್ನೂ ಓದಿ:ವಿಜಯ್‌ ವರ್ಮಾ ಜೊತೆ KGF ನಟಿ ತಮನ್ನಾ ಡಿನ್ನರ್‌ ಡೇಟ್‌

    ಲಿಪ್ ಲಾಕ್ ದೃಶ್ಯವನ್ನು ನೋಡಿದ ಪಡ್ಡೆಗಳು ಮೈ ಬೆಚ್ಚಗೆ ಮಾಡಿಕೊಂಡರೆ, ನೆಟ್ಟಿಗರು ಇಂತಹ ದೃಶ್ಯಗಳಲ್ಲಿ ನಟಿಸುವುದಕ್ಕೆ ಏನೂ ಅನಿಸುವುದಿಲ್ಲವಾ? ಎಂದು ಮೊನ್ನೆಯಷ್ಟೇ ಪ್ರಶ್ನೆ ಮಾಡಿದ್ದರು. ಇಂತಹ ಸೀನ್ ಗಳಲ್ಲಿ ಅಷ್ಟೊಂದು ಸಖತ್ತಾಗಿ ನಟಿಸ್ತಿರಲ್ಲ ಹೇಗೆ? ಎಂದು ಇನ್ನೂ ಕೆಲವರು ಕಾಲೆಳೆದಿದ್ದಾರೆ. ಇಷ್ಟೆಲ್ಲ ಪ್ರಶ್ನೆಗಳನ್ನು ಓದಿಕೊಂಡು ಅಮಲಾ ಸುಮ್ಮನೆ ಕೂತಿಲ್ಲ. ತಮ್ಮದೇ ಆದ ರೀತಿಯಲ್ಲೂ ಸೋಷಿಯಲ್ ಮೀಡಿಯಾದಲ್ಲಿ ಉತ್ತರಿಸಿದ್ದರು.

    ಲಿಪ್ ಲಾಕ್ ದೃಶ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಅಮಲಾ ಪೌಲ್, ಈ ಹಿಂದಿನ ಸಿನಿಮಾದಲ್ಲಿ ಬೆತ್ತಲೆಯಾಗಿಯೇ ನಟಿಸಿದ್ದೇನೆ. ಲಿಕ್ ಲಾಕ್ ನನಗೆ ಲೆಕ್ಕಕ್ಕೇ ಇಲ್ಲ ಎಂದು ಬೋಲ್ಡ್ ಉತ್ತರವನ್ನೇ ಕೊಟ್ಟಿದ್ದಾರೆ. ಈ ಮೂಲಕ ಇಂತಹ ದೃಶ್ಯಗಳಲ್ಲಿ ಕಾಣಿಸಿಕೊಳ್ಳಲು ತಮಗೆ ಯಾವುದೇ ಮುಜುಗರವಿಲ್ಲವೆಂದು ಹೇಳಿಕೊಂಡಿದ್ದಾರೆ.

    ಪೃಥ್ವಿರಾಜ್ ಮತ್ತು ಅಮಲಾ ಪೌಲ್ ಕಾಂಬಿನೇಷನ್ ನ ಈ ಮಲಯಾಳಂ (Malayalam) ಸಿನಿಮಾ ಆಡು ಜೀವಿದಂ ಕೃತಿಯನ್ನು ಆಧರಿಸಿದೆ. ಪೃಥ್ವಿರಾಜ್ ಈ ಸಿನಿಮಾದಲ್ಲಿ ನಜೀಬ್ ಮೊಹಮ್ಮೊದ್ ಪಾತ್ರದಲ್ಲಿ ನಟಿಸಿದ್ದರೆ, ಅವರ ಪತ್ನಿಯಾಗಿ ಅಮಲಾ ಕಾಣಿಸಿಕೊಂಡಿದ್ದಾರೆ. ಎ.ಆರ್.ರೆಹಮಾನ್ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿವೆ.