Tag: Aaftab Poonawala

  • ಬಿಷ್ಣೋಯ್‌ ಗ್ಯಾಂಗ್‌ ಹಿಟ್‌ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್‌ ಕೊಲೆ ಆರೋಪಿ ಅಫ್ತಾಬ್‌

    ಬಿಷ್ಣೋಯ್‌ ಗ್ಯಾಂಗ್‌ ಹಿಟ್‌ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್‌ ಕೊಲೆ ಆರೋಪಿ ಅಫ್ತಾಬ್‌

    ನವದೆಹಲಿ: 2022 ರಲ್ಲಿ ತನ್ನ ಲಿವ್ ಇನ್ ಪಾಲುದಾರ ಶ್ರದ್ಧಾ ವಾಕರ್ (Shraddha Walkar) ಅವರನ್ನು ಕೊಲೆ ಮಾಡಿದ ಆರೋಪಿ ಅಫ್ತಾಬ್ ಪೂನಾವಾಲಾ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ (Lawrence Bishnoi Gang) ಹಿಟ್ ಲಿಸ್ಟ್‌ನಲ್ಲಿದ್ದಾನೆ ಎಂದು ಮುಂಬೈ ಪೊಲೀಸ್ ಮೂಲಗಳು ಹೇಳಿವೆ. ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರ ಹತ್ಯೆಯ ತನಿಖೆಯ ಸಮಯದಲ್ಲಿ ಈ ಮಾಹಿತಿ ಹೊರ ಬಂದಿದೆ.

    ಸದ್ಯ ತಿಹಾರ್ ಜೈಲಿನಲ್ಲಿರುವ ಆರೋಪಿ ಅಫ್ತಾಬ್ ಪೂನಾವಾಲಾ (Aftab Poonawalla) ಕೊಠಡಿಯ ಸುತ್ತ ಭದ್ರತೆಯನ್ನು ಹೆಚ್ಚಿಸಿದೆ ಎಂದು ವರದಿಯಾಗಿದೆ. ಆದರೆ ಮುಂಬೈ ಪೊಲೀಸರಿಂದ ತಮಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆ ಪತ್ನಿಯ ಜೊತೆಗಿನ ಸಮ್ಮತಿಯ ಲೈಂಗಿಕ ಕ್ರಿಯೆ ಅತ್ಯಾಚಾರಕ್ಕೆ ಸಮ – ಬಾಂಬೆ ಹೈಕೋರ್ಟ್

    ದೆಹಲಿಯಲ್ಲಿ 27 ವರ್ಷದ ಶ್ರದ್ಧಾ ವಾಕರ್ ಅವರನ್ನು ಕತ್ತು ಹಿಸುಕಿ, ನಂತರ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಅಫ್ತಾಬ್ ಪೂನಾವಾಲಾ ಕೊಲೆ ಮಾಡಿದ್ದ. ಶ್ರದ್ಧಾ ಮದುವೆಯಾಗುವಂತೆ ಒತ್ತಡ ಹೇರಿದ ನಂತರ ಆರೋಪಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಈ ಭಯಾನಕ ಘಟನೆಯು ದೇಶಾದ್ಯಂತ ಆಘಾತ ಮೂಡಿಸಿತ್ತು.

    ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂಲಗಳ ಪ್ರಕಾರ, ಬಿಷ್ಣೋಯ್ ಗ್ಯಾಂಗ್ ತನ್ನ ಅಪರಾಧ ಚಟುವಟಿಕೆಗಳ ಭಾಗವಾಗಿ ಹಲವಾರು ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡಿದೆ. ಇದು ಸೇಡು ಮತ್ತು ಪೈಪೋಟಿಯಿಂದ ಪ್ರೇರೇಪಿಸಲ್ಪಟ್ಟಿದೆ. ಅವರ ಪ್ರಾಥಮಿಕ ಗುರಿಗಳಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಸೇರಿದ್ದಾರೆ. ಇದನ್ನೂ ಓದಿ: ಡೆಹ್ರಾಡೂನ್‌ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ 6 ವಿದ್ಯಾರ್ಥಿಗಳು ಬಲಿ

    ಇನ್ನು ಅಫ್ತಾಬ್ ಜೊತೆಗೆ ಹಿಟ್ ಲಿಸ್ಟ್‌ನಲ್ಲಿರುವ ಇತರರಲ್ಲಿ ಬಿಷ್ಣೋಯ್ ಗ್ಯಾಂಗ್‌ನಿಂದ ಹತ್ಯೆಗೀಡಾದ ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಅವರ ಮ್ಯಾನೇಜರ್ ಶಗನ್‌ಪ್ರೀತ್ ಸಿಂಗ್ ಸೇರಿದ್ದಾರೆ. ಪ್ರಸ್ತುತ ಗುರುಗ್ರಾಮ್‌ನಲ್ಲಿ ಜೈಲಿನಲ್ಲಿರುವ ದರೋಡೆಕೋರ ಕೌಶಲ್ ಚೌಧರಿ ಮತ್ತು ಪ್ರತಿಸ್ಪರ್ಧಿ ದರೋಡೆಕೋರ ಅಮಿತ್ ದಾಗರ್ ಕೂಡ ಬಿಷ್ಣೋಯಿ ತನ್ನ ಶತ್ರುಗಳ ಲಿಸ್ಟ್‌ನಲ್ಲಿ ಇಟ್ಟುಕೊಂಡಿದೆ.

  • ಶ್ರದ್ಧಾ ಹತ್ಯೆ ಪ್ರಕರಣ- ಮಾಂಸ ಸಂರಕ್ಷಣೆಯ ತರಬೇತಿ ಪಡೆದಿದ್ದ ಅಫ್ತಾಬ್

    ಶ್ರದ್ಧಾ ಹತ್ಯೆ ಪ್ರಕರಣ- ಮಾಂಸ ಸಂರಕ್ಷಣೆಯ ತರಬೇತಿ ಪಡೆದಿದ್ದ ಅಫ್ತಾಬ್

    ನವದೆಹಲಿ: ಲಿವ್ ಇನ್ ಗೆಳತಿ (Live-In Partner) ಶ್ರದ್ಧಾ ವಾಕರ್‌ನನ್ನು ಹತ್ಯೆ ಮಾಡಿದ್ದ ಅಫ್ತಾಬ್ ಬಾಣಸಿಗನಾಗಿದ್ದು, ಮಾಂಸವನ್ನು ಹೇಗೆ ಸಂರಕ್ಷಿಸಬೇಕು ಎಂಬುದನ್ನು ತರಬೇತಿ ಪಡೆದಿದ್ದ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

    ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ದೆಹಲಿಯಲ್ಲಿ (Delhi) ಶ್ರದ್ಧಾ ವಾಕರ್ (Shraddha Walkar) ಹತ್ಯೆಗೆ ಸಂಬಂಧಿಸಿ ಆರೋಪಿ ಅಫ್ತಾಬ್ ಪೂನಾವಾಲಾನನ್ನು (Aaftab Poonawala) ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಕೆಲವು ವಿಷಯಗಳನ್ನು ಬಾಯ್ಬಿಟ್ಟಿದ್ದು, ಈ ಬಗ್ಗೆ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಅಫ್ತಾಬ್ ತಾಜ್ ಹೋಟೆಲ್‍ನಲ್ಲಿ ತರಬೇತಿ ಪಡೆಯುತ್ತಿದ್ದು, ಮಾಂಸವನ್ನು ಹೇಗೆ ರಕ್ಷಿಸಬೇಕು ಎನ್ನುವುದನ್ನು ತಿಳಿದಿದ್ದ. ಅಷ್ಟೇ ಅಲ್ಲದೇ ಅಫ್ತಾಬ್ ತನ್ನ ಗೆಳತಿ ಶ್ರದ್ಧಾಳನ್ನು ಕೊಂದ ನಂತರ ನೆಲವನ್ನು ಸ್ವಚ್ಛಗೊಳಿಸಲು ಡ್ರೈ ಐಸ್, ಅಗರ ಬತ್ತಿ ಹಾಗೂ ರಾಸಾಯನಿಕಗಳನ್ನು ಬಳಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಅಫ್ತಾಬ್ ತನ್ನ ಗೆಳತಿ ಶ್ರದ್ಧಾ ವಾಲ್ಕರ್ ಕತ್ತು ಹಿಸುಕಿ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ್ದ. ನಂತರ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ತನ್ನ ನಿವಾಸದಲ್ಲಿ ಸುಮಾರು 3 ವಾರಗಳ ಕಾಲ 300 ಲೀ. ಫ್ರಿಡ್ಜ್‍ನಲ್ಲಿ ಇರಿಸಿದ್ದ ಎಂಬ ಆರೋಪ ಕೇಳಿಬಂದಿತ್ತು. ಇದನ್ನೂ ಓದಿ: ವಿಧಾನಸೌಧದಲ್ಲಿನ ಎಣ್ಣೆ ಬಾಟ್ಲಿ ಹಿಂದಿನ ಕಥೆ ರಿವೀಲ್

    ಶ್ರದ್ಧಾಳನ್ನು ಕೊಂದ ವಾರದೊಳಗೆ ಅಫ್ತಾಬ್ ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ. ತನ್ನ ಹೊಸ ಗೆಳತಿಗೆ ಶ್ರದ್ಧಾಳ ಉಂಗುರವನ್ನೇ ನೀಡಿದ್ದನೆಂದು ನ್ಯಾಯಾಲಯಕ್ಕೆ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರೀತಂ ಗೌಡರಿಂದ ಭರಪೂರ ಕೊಡುಗೆ – ಬಾಗಿನ ಹೆಸರಲ್ಲಿ ಸೀರೆ, ಬೆಳ್ಳಿಯ ದೇವರ ಫೋಟೋ ಹಂಚಿಕೆ

  • ಶ್ರದ್ಧಾ ಹತ್ಯೆ ಕೇಸ್ – ಮೂಳೆಗಳನ್ನು ಮಿಕ್ಸಿಯಲ್ಲಿ ಪುಡಿ ಮಾಡಿದ್ದ ಅಫ್ತಾಬ್

    ಶ್ರದ್ಧಾ ಹತ್ಯೆ ಕೇಸ್ – ಮೂಳೆಗಳನ್ನು ಮಿಕ್ಸಿಯಲ್ಲಿ ಪುಡಿ ಮಾಡಿದ್ದ ಅಫ್ತಾಬ್

    ನವದೆಹಲಿ: ಕಳೆದ ವರ್ಷ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ನಡೆದಿದ್ದ ಯುವತಿ ಶ್ರದ್ಧಾಳ (Shraddha Walkar) ಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಘಟನೆಯ ಕುರಿತು 6,600 ಪುಟಗಳ ಚಾರ್ಜ್‌ಶೀಟ್‌ನಲ್ಲಿ ಇನ್ನೂ ಅನೇಕ ಭಯಾನಕ ವಿವರಗಳು ಬಹಿರಂಗವಾಗಿದೆ.

    ಶ್ರದ್ಧಾಳನ್ನು ಕೊಲೆ ಮಾಡಿದ್ದ ಆಕೆಯ ಲಿವ್‌ಇನ್ ಪಾರ್ಟ್‌ನರ್ ಅಫ್ತಾಬ್ ಪೂನಾವಾಲ (Aaftab Poonawala) ಆಕೆಯ ಮೂಳೆಗಳನ್ನು ಮಿಕ್ಸಿಯಲ್ಲಿ (Mixer) ಹಾಕಿ ಪುಡಿ ಮಾಡಿದ್ದ. ಮೇ 18 ರಂದು ಅಫ್ತಾಬ್ ಕೊಲೆ ಮಾಡಿದ ಬಳಿಕ ಝೊಮಾಟೋದಿಂದ ಚಿಕನ್ ರೋಲ್ ಅನ್ನು ತರಿಸಿಕೊಂಡು ಊಟ ಮಾಡಿದ್ದ ಎಂದು ಉಲ್ಲೇಖಿಸಲಾಗಿದೆ.

    ಕಳೆದ ವರ್ಷ ಮೇ ತಿಂಗಳಿನಲ್ಲಿ ಶ್ರದ್ಧಾ ವಾಕರ್ ಮತ್ತು ಆಫ್ತಾಬ್ ಪೂನಾವಾಲಾ ದೆಹಲಿಗೆ ತೆರಳಿದ್ದರು. ಆದರೆ ಇಬ್ಬರ ಸಂಬಂಧದಲ್ಲಿ ಬಿರುಕು ಮೂಡಿತ್ತು. ತಮ್ಮ ಖರ್ಚು ವೆಚ್ಚಗಳು ಹಾಗೂ ಅಫ್ತಾಬ್‌ಗೆ ಇತರ ಯುವತಿಯರೊಂದಿಗಿದ್ದ ಸಂಬಂಧದ ಬಗ್ಗೆ ಆಗಾಗ ಜಗಳವಾಗುತ್ತಿತ್ತು. ಆತನಿಗೆ ದೆಹಲಿಯಿಂದ ದುಬೈ ತನಕವೂ ಗೆಳತಿಯರಿದ್ದರು ಎನ್ನಲಾಗಿದೆ.

    ಮೇ 18 ರಂದು ಅಫ್ತಾಬ್ ಹಾಗೂ ಶ್ರದ್ಧಾ ಇಬ್ಬರೂ ಮುಂಬೈಗೆ (Mumbai) ಹೋಗಲು ಯೋಜಿಸಿದ್ದರು. ಆದರೆ ಅಫ್ತಾಬ್ ಇದ್ದಕ್ಕಿದ್ದಂತೆ ಟಿಕೆಟ್ ಅನ್ನು ರದ್ದುಗೊಳಿಸಿದ್ದ. ಬಳಿಕ ಇಬ್ಬರ ನಡುವೆ ಮತ್ತೊಂದು ಖರ್ಚಿನ ವಿಚಾರವಾಗಿ ಜಗಳ ಏರ್ಪಟ್ಟಿತ್ತು. ಆ ಕ್ಷಣದ ಕೋಪದಲ್ಲಿ ಅಫ್ತಾಬ್ ಶ್ರದ್ಧಾಳ ಕತ್ತು ಹಿಸುಕಿ ಕೊಂದಿದ್ದ.

    ಗೆಳತಿಯ ಕೊಲೆ ಮಾಡಿದ ಬಳಿಕ ಅಫ್ತಾಬ್ ಆಕೆಯ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ವಿಲೇವಾರಿ ಮಾಡಲು ಯೋಜಿಸಿದ್ದ. ಇದಕ್ಕಾಗಿ ಆತ ಒಂದು ಚೀಲವನ್ನೂ ಖರೀದಿಸಿದ್ದ. ಆದರೆ ಇದರಿಂದ ಆತ ತಕ್ಷಣ ಸಿಕ್ಕಿಬೀಳುತ್ತಾನೆ ಎಂದು ಭಾವಿಸಿ, ಈ ಯೋಜನೆಯನ್ನು ಕೈಬಿಟ್ಟಿದ್ದ. ಬಳಿಕ ಶ್ರದ್ಧಾಳ ದೇಹವನ್ನು ತುಂಡು ತುಂಡಾಗಿ ಕತ್ತರಿಸಲು ಯೋಜಿಸಿ, ಇದಕ್ಕಾಗಿ ಗರಗಸ, ಸುತ್ತಿಗೆ, 3 ಚಾಕುಗಳು ಮಾತ್ರವಲ್ಲದೇ ಬ್ಲೋಟಾರ್ಚ್‌ಗಳನ್ನೂ ಖರೀದಿಸಿದ್ದ. ಇದನ್ನೂ ಓದಿ: ಬೆಂಗಳೂರಿನ ಸಾಫ್ಟ್‌ವೇರ್ ಕಂಪನಿಯಲ್ಲಿ ಅಗ್ನಿ ಅವಘಡ – ಎದ್ನೋ ಬಿದ್ನೋ ಎಂದು ಹೊರ ಓಡಿದ ಸಿಬ್ಬಂದಿ

    ಅಫ್ತಾಬ್ ಶ್ರದ್ಧಾಳ ದೇಹವನ್ನು 35 ತಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ. ಆತನ ಇತರ ಗೆಳತಿಯರು ಮನೆಗೆ ಭೇಟಿ ನೀಡುತ್ತಿದ್ದಾಗಲೆಲ್ಲಾ ಅವುಗಳನ್ನು ಅಲ್ಲಿಂದ ತೆಗೆದು ಅಡುಗೆ ಮನೆಯಲ್ಲಿ ಇಡುತ್ತಿದ್ದ. ಆಕೆಯ ಮೊಬೈಲ್ ಅನ್ನು ತಾನೇ ಇಟ್ಟುಕೊಂಡಿದ್ದು, ನಂತರ ಮುಂಬೈನಲ್ಲಿ ಅದನ್ನು ಎಸೆದಿದ್ದ. ಮೇ 18ರ ಬಳಿಕ ಶ್ರದ್ಧಾಳ ಸಾಮಾಜಿಕ ಮಾಧ್ಯಮಗಳ ಖಾತೆಗಳು ಆತನ ಫೋನ್‌ನಿಂದ ಚಾಲನೆಯಾಗುತ್ತಿದ್ದ ವಿಚಾರ ತನಿಖೆಯಿಂದ ಬೆಳಕಿಗೆ ಬಂದಿದೆ.

    ಕೊಲೆಯಾದ ಶ್ರದ್ಧಾಳ ದೇಹವನ್ನು 35 ತುಂಡುಗಳಾಗಿ ಕತ್ತರಿಸಲಾಗಿದೆ ಎಂದು ಹೇಳಿಕೆ ನೀಡಲಾಗಿದೆಯಾದರೂ ಇಲ್ಲಿಯವರೆಗೆ ಕೇವಲ 20 ದೇಹದ ಭಾಗಗಳು ಮಾತ್ರವೇ ಪತ್ತೆಯಾಗಿವೆ. ಆಕೆಯ ತಲೆ ಇನ್ನೂ ಪತ್ತೆಯಾಗಿಲ್ಲ. ಕಳೆದ ವರ್ಷಾಂತ್ಯದಲ್ಲಿ ಪಾಲಿಗ್ರಾಫ್ ಹಾಗೂ ನಾರ್ಕೋ-ಅನಾಲಿಸಿಸ್ ಪರೀಕ್ಷೆಗಳಲ್ಲಿ ಅಫ್ತಾಬ್ ತಾನು ಕೊಲೆ ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಕಾರು, ಟ್ಯಾಂಕರ್ ನಡುವೆ ಭೀಕರ ಅಪಘಾತ – ಪ್ರವಾಸಕ್ಕೆ ತೆರಳುತ್ತಿದ್ದ ಮೂವರು ಮಸಣಕ್ಕೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶ್ರದ್ಧಾ ಕೊಲೆ ಪ್ರಕರಣ – ಜಾಮೀನು ಅರ್ಜಿಯನ್ನು ವಾಪಸ್ ಪಡೆದ ಪೀಸ್ ಪೀಸ್ ಪ್ರೇಮಿ

    ಶ್ರದ್ಧಾ ಕೊಲೆ ಪ್ರಕರಣ – ಜಾಮೀನು ಅರ್ಜಿಯನ್ನು ವಾಪಸ್ ಪಡೆದ ಪೀಸ್ ಪೀಸ್ ಪ್ರೇಮಿ

    ನವದೆಹಲಿ: ಲೀವ್ ಇನ್ ಗೆಳತಿ ಶ್ರದ್ಧಾ ವಾಲ್ಕರ್ (Shraddha Walkar) ಅನ್ನು ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿ ಅಫ್ತಾಬ್ ಪೂನಾವಾಲಾ (Aaftab Poonawala) ಇಂದು ತನ್ನ ವಕೀಲರೊಂದಿಗೆ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾನೆ.

    ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಅಫ್ತಾಬ್ ನ. 17ರಂದು ಜಾಮಿನು ಅರ್ಜಿ ಸಲ್ಲಿಸಿದ್ದ. ಆದರೆ ದೆಹಲಿ ನ್ಯಾಯಾಲಯ (Delhi Court) ವಿಚಾರಣೆಯನ್ನು ಮುಂದೂಡಿತ್ತು. ಈ ಮಧ್ಯೆ ಅಫ್ತಾಬ್ ಜಾಮೀನು ಅರ್ಜಿಯನ್ನು ಹಿಂದಕ್ಕೆ ತೆಗೆದುಕೊಂಡಿದ್ದಾನೆ. ತನ್ನ ಒಪ್ಪಿಗೆಯಿಲ್ಲದೇ ಜಾಮೀನು ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾನೆ.

    ಅಫ್ತಾಬ್‍ನೊಂದಿಗೆ 50 ನಿಮಿಷಗಳ ಸುದೀರ್ಘ ಚರ್ಚೆಯ ನಂತರ ಜಾಮೀನು ಅರ್ಜಿಯನ್ನು ಹಿಂಪಡೆಯಲು ನಿರ್ಧರಿಸಿರುವುದಾಗಿ ಅಫ್ತಾಬ್ ಪರ ವಕೀಲ ಎಂ.ಎಸ್ ಖಾನ್ ನ್ಯಾಯಾಲಯಕ್ಕೆ ತಿಳಿಸಿದರು. ಇದನ್ನೂ ಓದಿ: ಮಗಳ ಹುಟ್ಟುಹಬ್ಬಕ್ಕೆ ಸುವರ್ಣಸೌಧ ಬಾಡಿಗೆ ಕೊಡಿ – ಸಭಾಪತಿ, ಡಿಸಿಗೆ ಪತ್ರ ಬರೆದ ತಂದೆ

    ಪ್ರಕರಣದ ಪ್ರಾಥಮಿಕ ತನಿಖೆ ಪೂರ್ಣಗೊಂಡಿದ್ದು, ಚಾರ್ಜ್ ಶೀಟ್ ಸಲ್ಲಿಕೆಯಾಗದ ಕಾರಣ ಆರೋಪಿಯನ್ನು ನ್ಯಾಯಾಂಗ ಬಂಧನದಲ್ಲಿಡುವ ಉದ್ದೇಶವಿಲ್ಲ ಎಂದು ಜಾಮೀನು ಅರ್ಜಿಯನ್ನು ಸಲ್ಲಿಸುವ ಮೊದಲು ವಕೀಲರು ಆರೋಪಿಸಿದ್ದರು. ಅಫ್ತಾಬ್ ಪೂನಾವಾಲಾ ಆತನ ನ್ಯಾಯಾಂಗ ಬಂಧನವನ್ನು ಡಿ. 9ರಂದು 14 ದಿನಗಳವರೆಗೆ ವಿಸ್ತರಿಸಲಾಗಿತ್ತು. ಇದನ್ನೂ ಓದಿ: ಟೆಲಿಕಾಂ ಆಯ್ತು ಇನ್ನು FMCG – ಮುಕೇಶ್‌ ಅಂಬಾನಿಯಿಂದ ಈಗ ಮೆಟ್ರೋ ಕ್ಯಾಶ್‌ & ಕ್ಯಾರಿ ಶಾಪಿಂಗ್‌

    ಘಟನೆಯೇನು?: ಅಫ್ತಾಬ್ ಅಮಿನ್ ಪೂನಾವಾಲಾ ತನ್ನ ಪ್ರೇಯಸಿ ಶ್ರದ್ಧಾವಾಕರ್ ಹತ್ಯೆ ಮಾಡಿ, ದೇಹವನ್ನು 35 ತುಂಡುಗಳಾಗಿ ಪೀಸ್ ಪೀಸ್ ಮಾಡಿ ದೆಹಲಿಯ ಕಾಡಿನಲ್ಲಿ ಎಸೆದಿದ್ದ, ಶ್ರದ್ಧಾ ಪೋಷಕರು ನೀಡಿದ ದೂರು ಆಧರಿಸಿ ತನಿಖೆ ನಡೆಸಿದ್ದ ಪೊಲೀಸರಿಗೆ ಅಫ್ತಾಬ್ ಭೀಕರವಾಗಿ ಹತ್ಯೆ ಮಾಡಿರುವುದು ತಿಳಿದುಬಂದಿತ್ತು.

    Live Tv
    [brid partner=56869869 player=32851 video=960834 autoplay=true]