Tag: Aakar Patel

  • ಲೇಖಕ ಆಕಾರ್ ಪಟೇಲ್ ವಿರುದ್ಧ ಎಫ್‍ಐಆರ್ ದಾಖಲು

    ಲೇಖಕ ಆಕಾರ್ ಪಟೇಲ್ ವಿರುದ್ಧ ಎಫ್‍ಐಆರ್ ದಾಖಲು

    ಬೆಂಗಳೂರು: ಟ್ವಿಟರ್‌ ಮೂಲಕ ಪ್ರತಿಭಟನೆಗೆ ಕರೆ ನೀಡಿದ ಆರೋಪದಡಿ ಲೇಖಕ ಆಕಾರ್ ಪಟೇಲ್ ಅವರ ವಿರುದ್ಧ ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕೊರೊನಾ ವೈರಸ್ ಹರಡುವ ಭೀತಿಯಿಂದಾಗಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಹೀಗಿದ್ದರೂ ಅಮೆರಿಕ ಮಾದರಿಯಲ್ಲಿ ಭಾರತದಲ್ಲಿಯೂ ದಲಿತರು ಪ್ರತಿಭಟನೆ ಮಾಡುವಂತೆ ಲೇಖಕ ಆಕಾರ್ ಪಟೇಲ್ ಕರೆ ನೀಡಿದ್ದರು. ಈ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡಿದ್ದಕ್ಕೆ ಜೆಸಿ ನಗರ ಪೊಲೀಸರು ಸ್ವಯಂ ಪ್ರೇರಿತ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?:
    ಅಮೆರಿಕದಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿಡಿಯೋವನ್ನು ಅಲ್ಲಿನ ಮಾಧ್ಯಮವೊಂದು ಟ್ವೀಟ್ ಮಾಡಿದೆ. ಇದನ್ನೂ ರಿಟ್ವೀಟ್ ಮಾಡಿರುವ ಲೇಖಕ ಆಕಾರ್ ಪಟೇಲ್, “ದಲಿತರು, ಮುಸ್ಲಿಮರು, ಆದಿವಾಸಿಗಳು, ಬಡವರು ಮತ್ತು ಮಹಿಳೆಯರಿಂದ ಭಾರತದಲ್ಲಿ ಈ ರೀತಿಯ ಪ್ರತಿಭಟನೆಗಳು ನಡೆಯಬೇಕಿದೆ. ಇದರಿಂದಾಗಿ ಜಗತ್ತು ನಮ್ಮತ್ತ ಗಮನಿಸುತ್ತದೆ. ಪ್ರತಿಭಟನೆ ಒಂದು ಕರಕುಶಲ” ಎಂದು ಬರೆದುಕೊಂಡಿದ್ದಾರೆ.

    ಲೇಖಕ ಆಕಾರ್ ಪಟೇಲ್ ಅವರ ಈ ಹೇಳಿಕೆಗೆ ಕೆಲ ನೆಟ್ಟಿಗರು ಬೆಂಬಲ ವ್ಯಕ್ತಪಡಿಸಿದೆ, ಕೆಲವರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. “ಕೋವಿಡ್-19 ಸಂದರ್ಭದಲ್ಲಿ ಇಂತಹ ಹೇಳಿಕೆ ನೀಡುವುದು ಎಷ್ಟು ಸರಿ? ಪ್ರತಿಭಟನೆ ಈಗ ಅಗತ್ಯವಿದೆಯೇ” ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

    https://twitter.com/mehta24772485/status/1267287366131056641