Tag: aap

  • ದೆಹಲಿಯಲ್ಲಿ ನೀರಿನ ಬಿಕ್ಕಟ್ಟು – 2ನೇ ದಿನಕ್ಕೆ ಕಾಲಿಟ್ಟ ಸಚಿವೆ ಅತಿಶಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

    ದೆಹಲಿಯಲ್ಲಿ ನೀರಿನ ಬಿಕ್ಕಟ್ಟು – 2ನೇ ದಿನಕ್ಕೆ ಕಾಲಿಟ್ಟ ಸಚಿವೆ ಅತಿಶಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

    ನವದೆಹಲಿ: ನೀರಿನ ಬಿಕ್ಕಟ್ಟು ಇತ್ಯರ್ಥಪಡಿಸಲು (Delhi Water Crisis) ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶಿಸದ ಹಿನ್ನೆಲೆ ಸಚಿವೆ ಅತಿಶಿ ಆರಂಭಿಸಿರುವ ಉಪವಾಸ ಸತ್ಯಾಗ್ರಹ (Hunger Strike) ಎರಡನೇ ದಿನಕ್ಕೆ ಕಾಲಿಟ್ಟಿದೆ. ದೆಹಲಿಯ 28 ಲಕ್ಷ ಜನರಿಗೆ ಹರಿಯಾಣದಿಂದ ತಮ್ಮ ಪಾಲಿನ ನೀರು ಸಿಗದವರೆಗೂ ಉಪವಾಸ ಮುಂದುವರಿಸುವುದಾಗಿ ಅವರು ಹೇಳಿದ್ದಾರೆ.

    ದೆಹಲಿಯಲ್ಲಿ ನೀರಿನ ಕೊರತೆಯಾಗಿದ್ದು ನಿಗದಿತ ಪ್ರಮಾಣದ ನೀರು ಬಿಡದೇ ಹರಿಯಾಣ ಮತ್ತು ಹಿಮಾಚಲಪ್ರದೇಶ ಸರ್ಕಾರಗಳು ಅನ್ಯಾಯ ಮಾಡುತ್ತಿವೆ. ಮೋದಿ ಅವರು ಮಧ್ಯಪ್ರವೇಶ ಮಾಡಿ ಸಮಸ್ಯೆ ಇತ್ಯರ್ಥಪಡಿಸಬೇಕು ಎಂದು ಅತಿಶಿ (Atishi) ಆಗ್ರಹಿಸುತ್ತಿದ್ದಾರೆ.

    ಎರಡನೇ ದಿನ ಉಪವಾಸ ಆರಂಭಕ್ಕೂ ಮುನ್ನ ಶಿವನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಅವರು ಹೋರಾಟ ಮುಂದುವರಿಸುವುದಾಗಿ ಹೇಳಿದರು. ದೆಹಲಿಗೆ ಒಟ್ಟು 1005 MGD ನೀರಿನ ಅಗತ್ಯವಿದೆ, ಅದರಲ್ಲಿ 613 MGD ಹರಿಯಾಣದ ಮೂಲವಾಗಿದೆ. ಕಳೆದ ಕೆಲ ವಾರಗಳಲ್ಲಿ ಈ ಮಟ್ಟದ ನೀರಿನ ಪೂರೈಕೆಯು ಗಣನೀಯವಾಗಿ ಕಡಿಮೆಯಾಗಿದೆ. ಕೇವಲ 513 MGD ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಒಂದು MGD ನೀರು 28,500 ಜನರ ಬಳಕೆಗೆ ಬರಲಿದೆ. ಹರಿಯಾಣ 100 MGD ಕಡಿಮೆ ನೀರನ್ನು ನೀಡಿದರೆ 28 ಲಕ್ಷಕ್ಕೂ ಹೆಚ್ಚು ಜನರಿಗೆ ದಿನದ ನೀರಿನ ಕೊರತೆಯಾಗಲಿದೆ. ಇದನ್ನೂ ಓದಿ: ಹಣಕಾಸು ಆಯೋಗದ ಶಿಫಾರಸಿನ ಅನುದಾನವನ್ನು ಕರ್ನಾಟಕಕ್ಕೆ ನೀಡಿ – ಕೇಂದ್ರದ ಮುಂದೆ ರಾಜ್ಯ ಸರ್ಕಾರ ಡಿಮ್ಯಾಂಡ್!

    ಶುಕ್ರವಾರ ಹರಿಯಾಣವು ದೆಹಲಿಗೆ 110 ಎಂಜಿಡಿ ಕಡಿಮೆ ನೀರನ್ನು ಕಳುಹಿಸಿದೆ, ನಾನು ದೆಹಲಿಯ ನೀರಿನ ಸರಿಯಾದ ಪಾಲನ್ನು ಪಡೆಯಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ ಹರಿಯಾಣದ ಬಿಜೆಪಿ ಸರ್ಕಾರವು ದೆಹಲಿಯ ಜನರನ್ನು ನಿರ್ಲಕ್ಷಿಸಿದೆ. ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಕುಳಿತುಕೊಳ್ಳುವುದನ್ನು ಬಿಟ್ಟು ನನಗೆ ಬೇರೆ ದಾರಿಯೇ ಇಲ್ಲ ಎಂದು ಅವರು ಹೇಳಿದರು. ಇದನ್ನೂ ಓದಿ: ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಂಳ ಕಟ್ – ಕೇಂದ್ರ ಸರ್ಕಾರಿ ನೌಕರರಿಗೆ ಡಿಒಪಿಟಿ ಎಚ್ಚರಿಕೆ!

    ಉಪವಾಸ ಸತ್ಯಾಗ್ರಹದ ಬಗ್ಗೆ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಪ್ರತಿಕ್ರಿಯಿಸಿದ್ದಾರೆ. ರಾಷ್ಟ್ರ ರಾಜಧಾನಿಗೆ ನೀರು ಪೂರೈಕೆಯ ವಿಷಯದಲ್ಲಿ ನಡೆಯುತ್ತಿರುವ ತಾರತಮ್ಯದ ಆರೋಪಗಳನ್ನು ಅವರು ನಿರಾಕರಿಸಿದರು. ನೀರಿನ ಬಿಕ್ಕಟ್ಟನ್ನು ʻಅಸಮರ್ಪಕ ಮತ್ತು ಅಸಮರ್ಥʼ ಎಂದು ಆಪ್‌ ಸರ್ಕಾರವನ್ನು ದೂಷಿಸಿದರು. ಈ ನಡುವೆ ದೆಹಲಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ಕಾರ್ಯಕರ್ತರು ದೆಹಲಿಯ ಜಲ ಬೋರ್ಡ್ ಎದರು ಪ್ರತಿಭಟನೆ ನಡೆಸಿದರು. ಪೊಲೀಸ್ ಬ್ಯಾರಿಕೇಡ್ ಗಳನ್ನು ತಳ್ಳಿ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರ ಮೇಲೆ ಜಲಫಿರಂಗಿ ಪ್ರಯೋಗಿಸಲಾಯಿತು. ಇದನ್ನೂ ಓದಿ: ನಿರ್ಮಾಣ ಹಂತದಲ್ಲಿದ್ದ YSR ಕಾಂಗ್ರೆಸ್‌ ಪಕ್ಷದ ಕಚೇರಿ ಧ್ವಂಸ – ಸೇಡಿನ ರಾಜಕಾರಣ ಎಂದು ಆಕ್ರೋಶ

  • ಭ್ರಷ್ಟಾಚಾರ, ಕಮಿಷನ್ ದಂಧೆ ನಿಲ್ಲಿಸಿದ್ರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತೆ: ಎಎಪಿ

    ಭ್ರಷ್ಟಾಚಾರ, ಕಮಿಷನ್ ದಂಧೆ ನಿಲ್ಲಿಸಿದ್ರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತೆ: ಎಎಪಿ

    ಬೆಂಗಳೂರು: ಗ್ಯಾರಂಟಿ ಯೋಜನೆಗಳ (Guarantee Scheme) ಹೆಸರಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ ಇನ್ನೊಂದು ಕೈಯಲ್ಲಿ ಜನಸಾಮಾನ್ಯರ ಹಣವನ್ನು ತೆರಿಗೆ ರೂಪದಲ್ಲಿ ಕಿತ್ತುಕೊಳ್ಳುತ್ತಿದೆ. ಸಮರ್ಪಕವಾಗಿ ಸಂಪನ್ಮೂಲ ಕ್ರೋಡಿಕರಣ ಮಾಡಿದರೆ ಭ್ರಷ್ಟಾಚಾರ ಮತ್ತು ಕಮಿಷನ್ ದಂಧೆಯನ್ನು ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಇತರೆ ಎಲ್ಲಾ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಹಣ ಉಳಿಯುತ್ತದೆ ಎಂದು ಎಎಪಿ ಪಕ್ಷದ ನಾಯಕ ಮೋಹನ್ ದಾಸರಿ (Mohan Dasari) ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

    ತೈಲ ಬೆಲೆ ಏರಿಸಿರುವ (Price Hike) ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಮುಖಂಡರು, ಸ್ವಾತಂತ್ರ‍್ಯ ಉದ್ಯಾನವನ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು. ದ್ವಿಚಕ್ರ ವಾಹನಗಳಿಗೆ ಹೂವಿನ ಹಾರಗಳನ್ನು ಹಾಕಿ ಅಣುಕು ಅಂತ್ಯಕ್ರಿಯೆ ನಡೆಸುವ ಮೂಲಕ ಗಮನ ಸೆಳೆದರು. ಸೈಕಲ್‌ಗಳನ್ನು ಏರಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿದರು. ಇದನ್ನೂ ಓದಿ: ಠಾಣೆಯಲ್ಲಿ ಪವಿತ್ರಾ ಗೌಡ ಕುಸಿದು ಬಿದ್ದಿದ್ದು ಲೋ ಬಿಪಿಯಿಂದ: ವೈದ್ಯೆ

    ಈ ಸಂದರ್ಭ ಮಾತನಾಡಿದ ಪಕ್ಷದ ಪ್ರಧಾನಕಾರ್ಯದರ್ಶಿ ಮೋಹನ್ ದಾಸರಿ, ಮೇ 2023ರಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ 1 ವರ್ಷದ ಅವಧಿಯೊಳಗೆ ಅಬಕಾರಿ ತೆರಿಗೆಯನ್ನು ಮೂರು ಬಾರಿ ಹೆಚ್ಚಿಸಿದ್ದಾರೆ. ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಗರಿಷ್ಠ 25% ರವರೆಗೆ ಏರಿಕೆ ಮಾಡಿದ್ದಾರೆ. ನಾನಾ ಹಂತದ ವಾಹನಗಳಿಗೆ ವಿಧಿಸುವ ತೆರಿಗೆಯನ್ನು ಹೆಚ್ಚಳ ಮಾಡಿದ್ದಾರೆ. ಬೇರೆ ಯಾವೆಲ್ಲ ಮೂಲಗಳಿಂದ ತೆರಿಗೆ ಹೆಸರಲ್ಲಿ ಜನಸಾಮಾನ್ಯರನ್ನು ಹಿಂಡಬಹುದು ಎಂದು ಹುಡುಕುತ್ತಿದ್ದಾರೆ. ಇದರರ್ಥ, ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕವಾಗಿ ಸುರಿಯುತ್ತಿರುವ 52 ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒದ್ದಾಡುತ್ತಿದ್ದಾರೆ ಎಂಬುದಾಗಿದೆ. ಅಧಿಕಾರಕ್ಕೆ ಬರಬೇಕು ಎಂಬ ಹಪಾಹಪಿಯಲ್ಲಿ ಅಧ್ಯಯನ ರಹಿತವಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿರುವುದೇ ಇದಕ್ಕೆಲ್ಲ ಮೂಲ ಕಾರಣ ಎಂದು ಆರೋಪಿಸಿದರು. ಇದನ್ನೂ ಓದಿ: ಜನರ ದುಡ್ಡು ತಗೊಂಡು ಜನರಿಗೆ ಕೊಡೋಕೆ ನೀವೇ ಆಡಳಿತ ಮಾಡಬೇಕಾ?- ಸಿಎಂ ವಿರುದ್ಧ ಹೆಚ್‌ಡಿಕೆ ಕಿಡಿ 

    ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ಅನುಷ್ಠಾನಕ್ಕೆ ತಂದಿರುವ ಉಚಿತ ಯೋಜನೆಗಳು ಭಾರಿ ಯಶಸ್ಸು ಕಂಡಿವೆ. ಕಾರಣ ಸಮರ್ಪಕ ಸಂಪನ್ಮೂಲ ಕ್ರೋಡೀಕರಣ, ಭ್ರಷ್ಟಾಚಾರ ರಹಿತ ಆಡಳಿತ, ಅಧ್ಯಯನಶೀಲ ಉಚಿತ ಯೋಜನೆಗಳ ಅನುಷ್ಠಾನಗಳಾಗಿವೆ. ಆದರೆ ಈ ಯೋಜನೆಗಳನ್ನು ಕಾಪಿ ಮಾಡಿದ ಕಾಂಗ್ರೆಸ್ ಸರ್ಕಾರ ತರಾತುರಿಯಲ್ಲಿ ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಳ್ಳುವ ಸಲುವಾಗಿ ಉಚಿತ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಭ್ರಷ್ಟಾಚಾರ, ಕಮಿಷನ್ ದಂಧೆ ಎಂದಿನಂತೆ ಎಗ್ಗಿಲ್ಲದೆ ಮುಂದುವರಿದಿದೆ. ಮೊದಲು ಭ್ರಷ್ಟಾಚಾರ, ಕಮಿಷನ್‌ಗಿರಿಯನ್ನು ನಿಲ್ಲಿಸಿ. ಗ್ಯಾರಂಟಿ ಯೋಜನೆಗಳು ಸುಗಮವಾಗಿ ಸಾಗುತ್ತವೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಿಸಾನ್ ಸಮ್ಮಾನ್ ಯೋಜನೆಯಡಿ 20 ಸಾವಿರ ಕೋಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

  • ದೆಹಲಿಯಲ್ಲಿ ನೀರಿಗೆ ಹಾಹಾಕಾರ – ಜಲಮಂಡಳಿ ಕಚೇರಿ ಧ್ವಂಸಗೊಳಿಸಿದ ಪ್ರತಿಭಟನಾಕಾರರು

    ದೆಹಲಿಯಲ್ಲಿ ನೀರಿಗೆ ಹಾಹಾಕಾರ – ಜಲಮಂಡಳಿ ಕಚೇರಿ ಧ್ವಂಸಗೊಳಿಸಿದ ಪ್ರತಿಭಟನಾಕಾರರು

    ನವದೆಹಲಿ: ದಿಲ್ಲಿಯಲ್ಲಿ ನೀರಿಗಾಗಿ ಹಾಹಾಕಾರ (Delhi Water Crisis) ಎದುರಾಗಿದ್ದು, ರಾಷ್ಟ್ರ ರಾಜಧಾನಿಯಾದ್ಯಂತ ಪ್ರತಿಭಟನೆ, ವಿಧ್ವಂಸಕ ಕೃತ್ಯಗಳು ಜರುಗುತ್ತಿವೆ.

    ಅಪರಚಿತರು ಛತ್ತಪುರಿಯಲ್ಲಿರುವ ದೆಹಲಿ (New Delhi) ಜಲ ಮಂಡಳಿ (ಡಿಜೆಪಿ) ಕಚೇರಿಯನ್ನು ಜನರು ಧ್ವಂಸಗೊಳಿಸಿದ್ದಾರೆ. ಡಿಜೆಪಿ ಕಚೇರಿಯಲ್ಲಿ ಒಡೆದ ಕಿಟಕಿಯ ಗಾಜು ಮತ್ತು ಮಣ್ಣಿನ ಮಡಿಕೆಗಳು ಒಡೆಯಲಾಗಿದೆ. ವಿಧ್ವಂಸಕ ಕೃತ್ಯದಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಇದ್ದರು ಎಂದು ಎಎಪಿ ವೀಡಿಯೋ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಫ್ರಿಡ್ಜ್‌ನಲ್ಲಿಟ್ಟಿದ್ದ ಗೋಮಾಂಸ ವಶ- ಅಕ್ರಮವಾಗಿ ನಿರ್ಮಿಸಿದ್ದ 11 ಮನೆಗಳು ನೆಲಸಮ

    ‘ಬಿಜೆಪಿ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗುತ್ತಾ ಬಿಜೆಪಿ ಕಾರ್ಯಕರ್ತರು ದೆಹಲಿ ಜಲ ಮಂಡಳಿಯ ಕಚೇರಿಯನ್ನು ಹೇಗೆ ಒಡೆಯುತ್ತಿದ್ದಾರೆ ಎಂಬುದನ್ನು ನೋಡಿ ಎಂದು ಎಎಪಿ ಎಕ್ಸ್‌ನಲ್ಲಿ ಬರೆದು ಆರೋಪಿಸಿದೆ.

    ಒಂದೆಡೆ ಹರಿಯಾಣದ ಬಿಜೆಪಿ ಸರ್ಕಾರವು ದೆಹಲಿಯ ನ್ಯಾಯಯುತ ಪಾಲನ್ನು ತಡೆಹಿಡಿಯುತ್ತಿದ್ದರೆ ಮತ್ತೊಂದೆಡೆ, ಬಿಜೆಪಿಯು ದೆಹಲಿಯ ಜನರ ಆಸ್ತಿಯನ್ನು ಹಾನಿಗೊಳಿಸುತ್ತಿದೆ ಎಂದು ಎಎಪಿ ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ತನ್ನ ಉಗುಳಿನಿಂದ ಗ್ರಾಹಕನ ಮುಖಕ್ಕೆ ಮಸಾಜ್‌ ಮಾಡಿದ ಕ್ಷೌರಿಕ!

    ಇದು ಸಹಜ. ಜನರು ಕೋಪಗೊಂಡಾಗ ಏನು ಬೇಕಾದರೂ ಮಾಡಬಹುದು. ಆ ಜನರನ್ನು ನಿಯಂತ್ರಿಸಿದ ಕಾರ್ಯಕರ್ತರಿಗೆ ನಾನು ಆಭಾರಿಯಾಗಿದ್ದೇನೆ. ಇದು ಸರ್ಕಾರದ ಮತ್ತು ಜನರ ಆಸ್ತಿ. ಈ ಆಸ್ತಿಗೆ ಹಾನಿ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಬಿಜೆಪಿ ಮುಖಂಡ ರಮೇಶ್ ಬಿಧುರಿ ತಿಳಿಸಿದ್ದಾರೆ.

  • ಇಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಹಾರ್‌ ಜೈಲಿಗೆ ವಾಪಸ್

    ಇಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಹಾರ್‌ ಜೈಲಿಗೆ ವಾಪಸ್

    ನವದೆಹಲಿ: ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಜಾಮೀನು ಪಡೆದಿದ್ದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಇಂದು ಮತ್ತೆ ತಿಹಾರ್‌ ಜೈಲಿಗೆ ಹೋಗಲಿದ್ದಾರೆ.

    ದೆಹಲಿ ಮದ್ಯ ನೀತಿ ಹಗರಣದಲ್ಲಿ (Delhi Liquor Scam Case) ಕೇಜ್ರಿವಾಲ್‌ ಜೈಲು ಪಾಲಾಗಿದ್ದಾರೆ. ಚುನಾವಣೆ ಪ್ರಚಾರ ಕಾರಣಕ್ಕೆ ಮಧ್ಯಂತರ ಜಾಮೀನು ಮೇರೆಗೆ ಹೊರ ಬಂದಿದ್ದರು. ಚುನಾವಣಾ ಪ್ರಚಾರಕ್ಕಾಗಿ ಕೋರ್ಟ್‌ ಜಾಮೀನು ನೀಡಿತ್ತು. ನಿನ್ನೆಗೆ ಜಾಮೀನು ಅವಧಿ ಅಂತ್ಯಗೊಂಡಿದೆ. ಈ ಹಿನ್ನೆಲೆ ಇಂದು ತಿಹಾರ್ ಜೈಲಿಗೆ ದೆಹಲಿ ಸಿಎಂ ಮರಳಲಿದ್ದಾರೆ. ಇದನ್ನೂ ಓದಿ: ಹಳೇ ಮೈಸೂರು ಭಾಗದಲ್ಲಿ ಮೈತ್ರಿಯಿಂದ 10 ಸ್ಥಾನ ಗೆಲುವು: ಬಿಜೆಪಿ ವಿಶ್ವಾಸ

    ಜಾಮೀನು ವಿಸ್ತರಣೆ ಕೋರಿ ಸುಪ್ರೀಂ ಕೋರ್ಟ್‌ಗೆ ಕೇಜ್ರಿವಾಲ್‌ ಈಚೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು.

    ದೆಹಲಿ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅರ್ಜಿಯ ವಿಚಾರಣೆ ಜೂನ್ 5 ರಂದು ನಡೆಯಲಿದೆ. ಎಎಪಿ ನಾಯಕ ಶರಣಾಗಲು ಮಧ್ಯಾಹ್ನ 3 ಗಂಟೆಗೆ ಮನೆಯಿಂದ ಹೊರಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಕಾಡುಗಳ್ಳ ವೀರಪ್ಪನ್ ಕೊಂದಿದ್ದ ಪೊಲೀಸ್ ಅಧಿಕಾರಿ ನಿವೃತ್ತಿ ಹಿಂದಿನ ದಿನವೇ ಸಸ್ಪೆಂಡ್

    ಮರುದಿನ, ಶರಣಾಗಲು ನಾನು ಮಧ್ಯಾಹ್ನ 3 ಗಂಟೆಗೆ ನನ್ನ ಮನೆಯಿಂದ ಹೊರಡುತ್ತೇನೆ. ನಾವು ದೌರ್ಜನ್ಯದ ವಿರುದ್ಧ ಹೋರಾಡುತ್ತಿದ್ದೇವೆ. ನಾನು ದೇಶಕ್ಕಾಗಿ ನನ್ನ ಪ್ರಾಣವನ್ನು ತ್ಯಾಗ ಮಾಡಬೇಕಾದರೆ, ಶೋಕಿಸಬೇಡಿ ಎಂದು ಕೇಜ್ರಿವಾಲ್ ಸಾರ್ವಜನಿಕ ಭಾಷಣದಲ್ಲಿ ಮಾತನಾಡಿದ್ದರು.

  • ಕೇಜ್ರಿವಾಲ್‌ಗೆ ಕ್ಯಾನ್ಸರ್ ಗಂಭೀರ ಹಂತದಲ್ಲಿಯೇ?- ಜಾಮೀನು ವಿಸ್ತರಣೆ ಅರ್ಜಿಯ ಕುರಿತು ಅತಿಶಿ ಹೇಳಿದ್ದೇನು?

    ಕೇಜ್ರಿವಾಲ್‌ಗೆ ಕ್ಯಾನ್ಸರ್ ಗಂಭೀರ ಹಂತದಲ್ಲಿಯೇ?- ಜಾಮೀನು ವಿಸ್ತರಣೆ ಅರ್ಜಿಯ ಕುರಿತು ಅತಿಶಿ ಹೇಳಿದ್ದೇನು?

    ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಮಧ್ಯಂತರ ಜಾಮೀನನ್ನು ಇನ್ನೂ 7 ದಿನಗಳವರೆಗೆ ವಿಸ್ತರಿಸಬೇಕೆಂದು ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಿದ್ದಾರೆ. ತನ್ನ ಹೊಸ ಮನವಿಯಲ್ಲಿ, ಆರೋಗ್ಯ ಸಮಸ್ಯೆ ಇರುವ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ವಿಸ್ತರಿಸುವಂತೆ ಕೋರಿದ್ದಾರೆ. ಮಾರ್ಚ್‌ನಲ್ಲಿ ಬಂಧಿಸಿದಾಗಿನಿಂದ ಅವರು 7 ಕೆಜಿ ತೂಕವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಎಎಪಿ ಸಚಿವೆ ಅತಿಶಿ (Atishi), ದೆಹಲಿ ಮುಖ್ಯಮಂತ್ರಿಯ ಹಠಾತ್ ತೂಕ ಇಳಿಕೆ ಹಾಗೂ ಕೀಟೋನ್ ಮಟ್ಟ (Ketone Level) ಹೆಚ್ಚಾಗಿರುವುದು ವೈದ್ಯರಿಗೆ ಕಳವಳಕಾರಿಯಾಗಿದೆ.‌ ಅವರ ಹಠಾತ್ ತೂಕ ನಷ್ಟ ಮತ್ತು ಹೆಚ್ಚಿನ ಕೀಟೋನ್ ಮಟ್ಟಗಳು ಮೂತ್ರಪಿಂಡದ ಹಾನಿ ಮತ್ತು ಕ್ಯಾನ್ಸರ್ ಸೇರಿದಂತೆ ಕೆಲವು ಗಂಭೀರ ಕಾಯಿಲೆಗಳ ಸಂಕೇತವಾಗಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಇಂದು ಜವಾಹರಲಾಲ್ ನೆಹರು 60ನೇ ಪುಣ್ಯತಿಥಿ- ಪ್ರಧಾನಿ ಮೋದಿ ಗೌರವ ನಮನ

    ಗಂಭೀರವಾದ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಪಿಇಟಿ-ಸಿಟಿ ಸ್ಕ್ಯಾನ್ ಮತ್ತು ಇತರ ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸುವುದು ಅತ್ಯಗತ್ಯ. ಇವುಗಳು ಶೀಘ್ರವಾಗಿ ಪ್ರಗತಿ ಹೊಂದುತ್ತಿರುವ ರೋಗಗಳಾಗಿರುವುದರಿಂದ ಅವುಗಳನ್ನು ಮೊದಲೇ ಪತ್ತೆಹಚ್ಚುವುದು ಬಹಳ ಮುಖ್ಯ. ಅದಕ್ಕಾಗಿಯೇ ನಾವು 7 ದಿನಗಳ ವಿಸ್ತರಣೆಯನ್ನು ಕೇಳಿದ್ದೇವೆ. ವಿಸ್ತರಣೆ ಮಾಡಿದ್ದಲ್ಲಿ ಅವರು ಈ ಪರೀಕ್ಷೆಗಳನ್ನು ಮಾಡಬಹುದಾಗಿದೆ ಮತ್ತು ಔಷಧಿಗಳನ್ನು ಪ್ರಾರಂಭಿಸಬಹುದಾಗಿದೆ. ಹೀಗಾಗಿ ಅವರು ಜೂನ್ 2 ರ ಬದಲಾಗಿ ಜೂನ್ 9 ರಂದು ಒಂದು ವಾರದ ನಂತರ ಶರಣಾಗುತ್ತಾರೆ ಎಎಪಿ ಸಚಿವೆ ಹೇಳಿದರು.

    ಲೋಕಸಭಾ ಚುನಾವಣೆಗೆ (Loksabha Elections 2024) ಪ್ರಚಾರ ಮಾಡಲು ಅನುಕೂಲವಾಗುವಂತೆ ಮೇ 10 ರಂದು ಸುಪ್ರೀಂ ಕೋರ್ಟ್ ಅವರಿಗೆ 21 ದಿನಗಳ ಅವಧಿಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2 ರಂದು ಶರಣಾಗಲು ಮತ್ತು ಜೈಲಿಗೆ ಮರಳಲು ಸೂಚಿಸಿದೆ. ಈಗ ಅರವಿಂದ್ ಕೇಜ್ರಿವಾಲ್ ಇನ್ನೂ ಏಳು ದಿನಗಳ ಕಾಲ ಜಾಮೀನು ವಿಸ್ತರಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

  • ಯೂಟ್ಯೂಬರ್ ಧ್ರುವ್ ರಾಠಿ ವಿಡಿಯೋ ಬಳಿಕ ಅತ್ಯಾಚಾರ, ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

    ಯೂಟ್ಯೂಬರ್ ಧ್ರುವ್ ರಾಠಿ ವಿಡಿಯೋ ಬಳಿಕ ಅತ್ಯಾಚಾರ, ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

    ನವದೆಹಲಿ: ಆಪ್ (AAP) ನಾಯಕರು ಮತ್ತು ಸ್ವಯಂಸೇವಕರಿಂದ ನನ್ನ ಚಾರಿತ್ರ್ಯ ಹರಣದ ಅಭಿಯಾನದ ನಂತರ ತನಗೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ಆಪ್ ಸಂಸದೆ ಸ್ವಾತಿ ಮಲಿವಾಲ್ (Swati Maliwal‌) ಹೇಳಿದ್ದಾರೆ. ಯೂಟ್ಯೂಬರ್ ಧ್ರುವ್ ರಾಠಿ (Dhruv Rathee) ತನ್ನ ವಿರುದ್ಧ ಏಕಪಕ್ಷೀಯವಾಗಿ ವಿಡಿಯೊವನ್ನು ಪೋಸ್ಟ್ ಮಾಡಿದ ನಂತರ ಈ ಬೆದರಿಕೆ ಹೆಚ್ಚಾಗಿದೆ ಎಂದು ಅವರು ಆರೋಪಿಸಿದ್ದಾರೆ.

    ಧ್ರುವ್ ರಾಠಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದು, ಅವರು ತನ್ನ ಕರೆಗಳು ಮತ್ತು ಸಂದೇಶಗಳನ್ನು ನಿರ್ಲಕ್ಷಿಸಿದ್ದಾರೆ. ಸ್ವತಂತ್ರ ಪತ್ರಕರ್ತರು ಎಂದು ಹೇಳಿಕೊಳ್ಳುವ ಇವರು, ಇತರ ಎಎಪಿ ವಕ್ತಾರರಂತೆ ವರ್ತಿಸುವುದು ನಾಚಿಕೆಗೇಡಿನ ಸಂಗತಿಯಾಗಿದೆ. ನಾನು ಈಗ ತೀವ್ರ ನಿಂದನೆ ಮತ್ತು ಬೆದರಿಕೆಗಳನ್ನು ಎದುರಿಸುತ್ತಿದ್ದೇನೆ. ನನ್ನ ದೂರನ್ನು ಹಿಂಪಡೆಯುವಂತೆ ಹೆದರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಸ್ವಾತಿ ಮಲಿವಾಲ್‌ ಪ್ರಕರಣ – ಕೇಜ್ರಿವಾಲ್‌ ಆಪ್ತನಿಗೆ 4 ದಿನ ನ್ಯಾಯಾಂಗ ಬಂಧನ

    ಧ್ರುವ್ ರಾಠಿ ಅವರ 2.5 ನಿಮಿಷಗಳ ವೀಡಿಯೊದಲ್ಲಿ ನಿರ್ಲಕ್ಷಿಸಲಾಗಿದೆ ಎನ್ನಲಾದ ಹಲವಾರು ಅಂಶಗಳನ್ನು ಸ್ವಾತಿ ಮಲಿವಾಲ್ ಪಟ್ಟಿ ಮಾಡಿದ್ದಾರೆ. ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ಒಪ್ಪಿಕೊಂಡ ನಂತರ ಎಎಪಿ ಏಕೆ ಯು-ಟರ್ನ್ ತೆಗೆದುಕೊಂಡಿತು? ವೈದ್ಯಕೀಯ ವರದಿಯಲ್ಲಿ ಹಲ್ಲೆಯಿಂದಾದ ಗಾಯಗಳನ್ನು ಬಹಿರಂಗಪಡಿಸುತ್ತದೆ. ನಾನು ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿದ್ದೆ. ಇದಾದ ನಂತರ ಆರೋಪಿಯ ಫೋನ್‍ನ್ನು ಫಾಮ್ರ್ಯಾಟ್ ಮಾಡಲಾಗಿದೆ. ಆರೋಪಿಯನ್ನು ಕೃತ್ಯ ನಡೆದ ಸ್ಥಳದಿಂದ (ಸಿಎಂ ಮನೆ) ಬಂಧಿಸಲಾಗಿದೆ. ಭದ್ರತೆಯಿಲ್ಲದೆ ಒಂಟಿಯಾಗಿ ಮಣಿಪುರಕ್ಕೆ ಹೋದ ಮಹಿಳೆಯನ್ನು ಬಿಜೆಪಿಯಿಂದ (BJP) ಹೇಗೆ ಕೊಂಡುಕೊಳ್ಳಲು ಸಾಧ್ಯ? ಈ ವಿಚಾರವನ್ನು ಧ್ರುವ ರಾಠಿ ವಿಡಿಯೋದಲ್ಲಿ ನಿರ್ಲಕ್ಷಿಸಲಾಗಿದೆ ಎಂದು ಸ್ವಾತಿ ಹೇಳಿಕೊಂಡಿದ್ದಾರೆ.

    ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳ ಬಗ್ಗೆ ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ಅವರು ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಯಾವುದೇ ಸಂದರ್ಭದಲ್ಲಿ, ನನಗೆ ಏನಾದರೂ ಸಂಭವಿಸಿದರೆ, ಅದನ್ನು ಪ್ರಚೋದಿಸಿದವರು ಯಾರು ಎಂದು ನಮಗೆ ತಿಳಿದಿದೆ ಎಂದು ಅವರು ಹೇಳಿದ್ದಾರೆ.

    ಮೇ 13 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಭವ್ ಕುಮಾರ್ ಅವರನ್ನು ಮೇ 18 ರಂದು ಬಂಧಿಸಲಾಯಿತು. ಬಿಭವ್ ಜಾಮೀನು ಕೋರಿ ಸ್ಥಳೀಯ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಕೋರ್ಟ್ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದು, ಉತ್ತರ ಕೇಳಿದೆ. ಇದನ್ನೂ ಓದಿ: ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಸ್ವಾತಿ ಮಲಿವಾಲ್‌

  • ಮತಗಟ್ಟೆಯೊಳಗೆ ಬಿಜೆಪಿಯವರು ಕರಪತ್ರ ತರುತ್ತಿದ್ದಾರೆ: ಆಪ್‌ ಆರೋಪ

    ಮತಗಟ್ಟೆಯೊಳಗೆ ಬಿಜೆಪಿಯವರು ಕರಪತ್ರ ತರುತ್ತಿದ್ದಾರೆ: ಆಪ್‌ ಆರೋಪ

    ನವದೆಹಲಿ: ಇಂದು ಲೋಕಸಭಾ ಚುನಾವಣೆಗೆ (Loksabha Elections 2024) 6ನೇ ಹಂತದ ಮತದಾನ ನಡೆಯುತ್ತಿದ್ದು, ಈ ನಡುವೆ ಆಮ್‌ ಆದ್ಮಿ ಪಕ್ಷವು ಬಿಜೆಪಿ ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದೆ.

    ಬಿಜೆಪಿಯವರು (BJP) ಮತಗಟ್ಟೆಯೊಳಗೆ ಅಭ್ಯರ್ಥಿಗಳ ಕರಪತ್ರಗಳನ್ನು ಹೊತ್ತೊಯ್ಯುತ್ತಿದ್ದಾರೆ. ಮತಗಟ್ಟೆ ಏಜೆಂಟ್ ಗಳು ಬಿಜೆಪಿ ಕರಪತ್ರ ತರುತ್ತಿದ್ದಾರೆ. ಯಾರಿಗೂ ಹೆದರದೆ, ನಾಚಿಕೆಯಿಲ್ಲದೆ ಪ್ರದರ್ಶಿಸುತ್ತಿದ್ದಾರೆ. ಇದು ಮತಗಟ್ಟೆ ಸಂಖ್ಯೆ 134, 135, 137, 138ರಲ್ಲಿ ನಡೆಯುತ್ತಿದೆ. ಇದು ಆಘಾತಕಾರಿ ಬೆಳವಣಿಗೆ ಯಾಗಿದೆ. ಚುನಾವಣಾ ಆಯೋಗದ (Election Commission) ಮೂಗಿನ ನೇರಕ್ಕೆ ಆಗುತ್ತಿದೆ ಎಂದು ಎಎಪಿ ಅಭ್ಯರ್ಥಿ ಸೋಮನಾಥ್ ಭಾರ್ತಿಯವರು ವೀಡಿಯೋ ಸಮೇತ ಎಕ್ಸ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

    ದೆಹಲಿಯ ಎಲ್ಲಾ 7 ಸ್ಥಾನಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಆಮ್ ಆದ್ಮಿ ಪಕ್ಷದಿಂದ (AAP) ಮೂರು ಬಾರಿ ಶಾಸಕರಾಗಿರುವ ಮತ್ತು ವೃತ್ತಿಯಲ್ಲಿ ವಕೀಲರಾಗಿರುವ ಸೋಮನಾಥ್ ಭಾರ್ತಿ ಅವರು ತಮ್ಮ ಚೊಚ್ಚಲ ಲೋಕಸಭಾ ಚುನಾವಣೆಯಲ್ಲಿ ನವದೆಹಲಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ವಕೀಲರೂ ಆಗಿರುವ ಬಿಜೆಪಿ ನಾಯಕ ಬಾನ್ಸುರಿ ಸ್ವರಾಜ್ ವಿರುದ್ಧ ಮಾಳವೀಯ ನಗರ ಶಾಸಕ ಕಣಕ್ಕಿಳಿದಿದ್ದಾರೆ. ಇದನ್ನೂ ಓದಿ: ಇಂದು ಆರನೇ ಹಂತದ ಚುನಾವಣೆ- 58 ಕ್ಷೇತ್ರಗಳಿಗೆ ಮತದಾನ

  • ಸ್ವಾತಿ ಮಲಿವಾಲ್‌ ಪ್ರಕರಣ – ಕೇಜ್ರಿವಾಲ್‌ ಆಪ್ತನಿಗೆ 4 ದಿನ ನ್ಯಾಯಾಂಗ ಬಂಧನ

    ಸ್ವಾತಿ ಮಲಿವಾಲ್‌ ಪ್ರಕರಣ – ಕೇಜ್ರಿವಾಲ್‌ ಆಪ್ತನಿಗೆ 4 ದಿನ ನ್ಯಾಯಾಂಗ ಬಂಧನ

    ನವದೆಹಲಿ: ಸ್ವಾತಿ ಮಲಿವಾಲ್ (Swati Maliwal) ಅವರ ಮೇಲಿನ ಹಲ್ಲೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಸಹಾಯಕ ಬಿಭವ್ ಕುಮಾರ್ ಅವರನ್ನು ದೆಹಲಿ ನ್ಯಾಯಾಲಯವು ನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

    ಬಿಭವ್‌ (Bibhav Kumar) ಪರ ವಕೀಲರು ಸಿಸಿಟಿವಿ ದೃಶ್ಯಾವಳಿ ಮತ್ತು ಡಿವಿಆರ್‌ಗಳನ್ನು ಸಂಗ್ರಹಿಸಿ ಸಂರಕ್ಷಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಸಿಸಿಟಿವಿಗಳು ನನ್ನ ಪ್ರಕರಣದ ಸತ್ಯಾಸತ್ಯತೆ ಸಾಬೀತುಪಡಿಸುತ್ತವೆ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದಾರೆ. ಇದನ್ನೂ ಓದಿ: ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಸ್ವಾತಿ ಮಲಿವಾಲ್‌

    ಸ್ವಾತಿ ಮಲಿವಾಲ್ ಅವರು ಸಿಎಂ ಸಿವಿಲ್ ಲೈನ್ಸ್ ನಿವಾಸಕ್ಕೆ ಅನಧಿಕೃತ ಪ್ರವೇಶ ಮಾಡಿದ್ದಲ್ಲದೇ ನಿಂದಿಸಿದ್ದಾರೆ ಎಂದು ಆರೋಪಿಸಿ ಬಿಭವ್‌ ಕುಮಾರ್‌ ಕೂಡ ಪ್ರತಿದೂರು ದಾಖಲಿಸಿದ್ದರು. ದೂರಿನ ಬೆನ್ನಲ್ಲೇ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.

    ತಮ್ಮ ದೂರಿನಲ್ಲಿ ಕುಮಾರ್ ಅವರು ಮಲಿವಾಲ್ ವಿರುದ್ಧ ಅನಧಿಕೃತ ಪ್ರವೇಶ, ಮೌಖಿಕ ನಿಂದನೆ ಮತ್ತು ಬೆದರಿಕೆಗಳ ಆರೋಪ ಹೊರಿಸಿದ್ದಾರೆ. ಈ ವಿಷಯದಲ್ಲಿ ಬಿಜೆಪಿ ಕೈವಾಡವೂ ಇದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಪೊಲೀಸರಿಗಾಗಿ ನಾನು, ನನ್ನ ಪೋಷಕರು, ಹೆಂಡತಿ ಕಾಯುತ್ತಿದ್ದೇವೆ: ಕೇಜ್ರಿವಾಲ್‌ ಪೋಸ್ಟ್‌

    ಸಿಎಂ ಕೇಜ್ರಿವಾಲ್‌ ಆಪ್ತನ ವಿರುದ್ಧ ಸ್ವಾತಿ ಮಲಿವಾಲ್‌ ಅವರು ಮೇ 13 ರಂದು ದೂರು ದಾಖಲಿಸಿದ್ದರು. ನನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ದೂರಿದ್ದರು.

  • ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಸ್ವಾತಿ ಮಲಿವಾಲ್‌

    ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಸ್ವಾತಿ ಮಲಿವಾಲ್‌

    ನವದೆಹಲಿ: ನನ್ನ ರಾಜ್ಯಸಭಾ (Rajya Sabha) ಸ್ಥಾನ ಯಾರಿಗಾದರೂ ಬೇಕಾಗಿದ್ದರೆ, ಪ್ರೀತಿಯಿಂದ ಕೇಳಿದ್ದರೆ ನಾನು ಬಿಟ್ಟುಕೊಡುತ್ತಿದ್ದೆ. ಈಗ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಸಂಸದೆ ಸ್ವಾತಿ ಮಲಿವಾಲ್ (Swati Maliwal) ಹೇಳಿದ್ದಾರೆ.

    ತಮ್ಮ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಯಾವುದೇ ಪದವಿಗೆ ಆಸೆ ಪಟ್ಟಿಲ್ಲ. ಅವರಿಗೆ ಬೇಕಿದ್ದರೆ ನಾನು ಜೀವವನ್ನು ಕೊಡುತ್ತಿದ್ದೆ. ಈ ಘಟನೆ ಬಳಿಕ ಭೂಮಿಯ ಮೇಲಿರುವ ಯಾವುದೇ ಶಕ್ತಿ ಬಂದರೂ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸರಿಗಾಗಿ ನಾನು, ನನ್ನ ಪೋಷಕರು, ಹೆಂಡತಿ ಕಾಯುತ್ತಿದ್ದೇವೆ: ಕೇಜ್ರಿವಾಲ್‌ ಪೋಸ್ಟ್‌

    ಅಧಿಕಾರವು ಬಂದಾಗ ಕ್ರಮೇಣ ಅಹಂಕಾರವೂ ಬರುತ್ತದೆ. ಯಾವುದು ಸರಿ, ಯಾವುದು ತಪ್ಪು ಎಂದು ನೋಡುವುದಿಲ್ಲ. ಒಬ್ಬ ಮಹಿಳೆಯ ಮೇಲೆ‌ ಹಲ್ಲೆ ಮಾಡುವುದಲ್ಲದೇ ಚಾರಿತ್ರ್ಯಹರಣ ಮಾಡಬಹುದು ಎಂದು ಊಹಿಸಿರಲಿಲ್ಲ ಎಂದು ಮಾತನಾಡಿದ್ದಾರೆ.

    ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ನಿವಾಸದಲ್ಲಿ ಎಲ್ಲವೂ ನಡೆಯಿತು. ಅಂದು ನನ್ನ ಮೇಲೆ ಹಲ್ಲೆ ನಡೆಯುವಾಗ ಕೂಗಿಕೊಂಡೆ. ಯಾರು ನನ್ನ ಸಹಾಯಕ್ಕೆ ಬರಲಿಲ್ಲ. ಈಗ ಆರೋಪಿಯ ಸಹಾಯಕ್ಕೆ ಸಿಎಂ ಅರವಿಂದ್ ಕೇಜ್ರಿವಾಲ್ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರನ್ನು ಪಾರು ಮಾಡಲು ಎಲ್ಲ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸ್ವಾತಿ ಮಲಿವಾಲ್‌ ಹಲ್ಲೆ ಪ್ರಕರಣ; ಕೊನೆಗೂ ಮೌನ ಮುರಿದ ಕೇಜ್ರಿವಾಲ್‌

  • ಪೊಲೀಸರಿಗಾಗಿ ನಾನು, ನನ್ನ ಪೋಷಕರು, ಹೆಂಡತಿ ಕಾಯುತ್ತಿದ್ದೇವೆ: ಕೇಜ್ರಿವಾಲ್‌ ಪೋಸ್ಟ್‌

    ಪೊಲೀಸರಿಗಾಗಿ ನಾನು, ನನ್ನ ಪೋಷಕರು, ಹೆಂಡತಿ ಕಾಯುತ್ತಿದ್ದೇವೆ: ಕೇಜ್ರಿವಾಲ್‌ ಪೋಸ್ಟ್‌

    ನವದೆಹಲಿ: ನಾನು, ನನ್ನ ಪೋಷಕರು ಮತ್ತು ಹೆಂಡತಿಯೊಂದಿಗೆ ಪೊಲೀಸರಿಗಾಗಿ ಕಾಯುತ್ತಿದ್ದೇನೆ ಎಂದು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಹೇಳಿದ್ದಾರೆ.

    ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ (Swati Maliwal) ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಕ್ಸ್‌ನಲ್ಲಿ ಕೇಜ್ರಿವಾಲ್‌ ಪೋಸ್ಟ್‌ ಹಾಕಿದ್ದಾರೆ. ಪೋಷಕರು, ಪತ್ನಿ ಜೊತೆ ಮನೆಯಲ್ಲಿ ಕಾಯುತ್ತಿರುವ ವೀಡಿಯೋ ಕೂಡ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸ್ವಾತಿ ಮಲಿವಾಲ್‌ ಹಲ್ಲೆ ಪ್ರಕರಣ; ಕೊನೆಗೂ ಮೌನ ಮುರಿದ ಕೇಜ್ರಿವಾಲ್‌

    ನಾನು, ನನ್ನ ಪೋಷಕರು ಮತ್ತು ಹೆಂಡತಿಯೊಂದಿಗೆ ಪೊಲೀಸರಿಗಾಗಿ ಕಾಯುತ್ತಿದ್ದೇನೆ. ನಿನ್ನೆ ಪೊಲೀಸರು ಕರೆ ಮಾಡಿ ನನ್ನ ಪೋಷಕರ ವಿಚಾರಣೆಗೆ ಸಮಯ ಕೇಳಿದ್ದಾರೆ. ಆದರೆ ಅವರು ಬರುತ್ತಾರೋ ಇಲ್ಲವೋ ಎಂಬ ಬಗ್ಗೆ ಇನ್ನೂ ಮಾಹಿತಿ ನೀಡಿಲ್ಲ ಎಂದು ತಿಳಿಸಿದ್ದಾರೆ.

    ಸ್ವಾತಿ ಮಲಿವಾಲ್‌ ಅವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್‌ ಆಪ್ತ ಬಿಭವ್‌ ಕುಮಾರ್‌ (Bibhav Kumar) ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಇದನ್ನೂ ಓದಿ: ರಾಗಾ ಒಬ್ಬ ಮಹಾನ್‌ ವ್ಯಕ್ತಿ, ಗಾಂಧೀಜಿ ಕನಸು ನನಸು ಮಾಡ್ತಿದ್ದಾರೆ: ಆಚಾರ್ಯ ಪ್ರಮೋದ್ ಕೃಷ್ಣಂ ಕಿಡಿ

    ಪ್ರಕರಣ ಸಂಬಂಧ ಬುಧವಾರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದ ಕೇಜ್ರಿವಾಲ್‌ ಅವರು, ನ್ಯಾಯಯುತ ತನಿಖೆ ಆಗಬೇಕು ಎಂದು ಕೋರಿದ್ದರು.