Tag: aap

  • ಕೇಜ್ರಿವಾಲ್‌ ನಿವಾಸದ ಸಿಸಿಟಿವಿ ಟ್ಯಾಂಪರಿಂಗ್‌ ಮಾಡಲಾಗುತ್ತಿದೆ: ಸ್ವಾತಿ ಮಲಿವಾಲ್‌

    ಕೇಜ್ರಿವಾಲ್‌ ನಿವಾಸದ ಸಿಸಿಟಿವಿ ಟ್ಯಾಂಪರಿಂಗ್‌ ಮಾಡಲಾಗುತ್ತಿದೆ: ಸ್ವಾತಿ ಮಲಿವಾಲ್‌

    ನವದೆಹಲಿ: ದೆಹಲಿ ಸಿಎಂ ಕೇಜ್ರಿವಾಲ್‌ (Delhi CM Arvind Kejriwal) ನಿವಾಸದ ಸಿಸಿಟಿವಿಯನ್ನು ಟ್ಯಾಂಪರಿಂಗ್‌ (CCTV Tampering ) ಮಾಡುತ್ತಿದ್ದಾರೆ ಎಂದು ಆಪ್‌ (AAP) ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ (Swati Maliwal) ಗಂಭೀರ ಆರೋಪ ಮಾಡಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಅವರು, ಈಗ ಈ ವ್ಯಕ್ತಿಗಳು ಮನೆಯ ಸಿಸಿಟಿವಿಯನ್ನು ಟ್ಯಾಂಪರಿಂಗ್ ಮಾಡುತ್ತಿದ್ದಾರೆ ಎಂಬ ಮಾಹಿತಿ ನನಗೆ ಸಿಕ್ಕಿದೆ ಎಂದು ಆರೋಪಿಸಿ ತಮ್ಮ ಪೋಸ್ಟ್‌ನಲ್ಲಿ ದೆಹಲಿ ಪೊಲೀಸರನ್ನು ಟ್ಯಾಗ್ ಮಾಡಿದ್ದಾರೆ.

    ಶುಕ್ರವಾರದವರೆಗೆ ಸ್ವಾತಿ ಮಲಿವಾಲ್‌ ಅವರ ಡಿಪಿಯಲ್ಲಿ ಬಂಧನಕ್ಕೆ ಒಳಗಾದ ಕೇಜ್ರಿವಾಲ್‌ ಅವರ ಚಿತ್ರವಿತ್ತು. ಆದರೆ ಈಗ ಕಪ್ಪು ಬಣ್ಣದ ಚಿತ್ರವನ್ನು ಹಾಕಿದ್ದಾರೆ. ಇದನ್ನೂ ಓದಿ: ಸ್ವಾತಿ ಆರೋಪ ಸುಳ್ಳು – ಮಲಿವಾಲ್‌ ಸಿಎಂ ಮನೆಗೆ ಕಳುಹಿಸಿದ್ದೇ ಬಿಜೆಪಿ: ಸಚಿವೆ ಅತಿಶಿ ತಿರುಗೇಟು!

    ಸ್ವಾತಿ ಮಲಿವಾಲ್‌ ದೂರಿನ ಬೆನ್ನಲ್ಲೇ ವಿಧಿವಿಜ್ಞಾನ ತಜ್ಞರು, ಪೊಲೀಸರ ತಂಡ ಶುಕ್ರವಾರ ಸಂಜೆ ಮುಖ್ಯಮಂತ್ರಿ ಅವರ ನಿವಾಸಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿತು. ತನಿಖೆಯ ಭಾಗವಾಗಿ ವಿಡಿಯೋ ಸೆರೆ ಹಿಡಿದ ನಂತರ ಶನಿವಾರ ನಸುಕಿನ ಜಾವ 2:15ಕ್ಕೆ ತಂಡ ಸಿಎಂ ನಿವಾಸದಿಂದ ಹೊರಟಿತು.

    ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ನಿವಾಸದ ಸಿಸಿಟಿವಿ ಪೊಲೀಸರು ಸೀಲ್ ಮಾಡಿದ್ದಾರೆ. ತನಿಖೆಯ ದೃಷ್ಟಿಯಿಂದ ತಾಂತ್ರಿಕ ಸಾಕ್ಷಿಯಾಗಿ ಪರಿಗಣನೆ ಮಾಡಲು ಡಿವಿಆರ್‌ ಸಹಿತ ದತ್ತಾಂಶವನ್ನು ದೆಹಲಿ ಪೊಲೀಸ್ ಸೀಲ್ ಮಾಡಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ED ಜಾಹೀರಾತು ನೋಡುತ್ತಿದ್ದೇವೆ: ಬಾಂದ್ರಾ-ವರ್ಲಿ ಸೀ ಲಿಂಕ್ ಉದಾಹರಿಸಿ ರಶ್ಮಿಕಾಗೆ ಕೇರಳ ಕಾಂಗ್ರೆಸ್‌ ತಿರುಗೇಟು

     

    ಪ್ರತಿ ಬಾರಿಯಂತೆ ಈ ಬಾರಿಯೂ ಈ ರಾಜಕೀಯ ಹಿಟ್‌ಮ್ಯಾನ್ ತನ್ನನ್ನು ಉಳಿಸಿಕೊಳ್ಳುವ ಪ್ರಯತ್ನಗಳನ್ನು ಪ್ರಾರಂಭಿಸಿದ್ದಾನೆ. ತನ್ನ ಜನರ ಮೂಲಕ ಸರಿಯಾದ ವಿವರ ಇಲ್ಲದ ವೀಡಿಯೋವನ್ನು ಟ್ವೀಟ್‌ ಮಾಡಿ ತಪ್ಪು ಮಾಡಿಯೂ ತಾನು ಪಾರಾಗಬಹುದು ಎಂದು ಭಾವಿಸಿದ್ದಾನೆ. ಮನೆಯಲ್ಲಿ ಥಳಿಸುವ ವಿಡಿಯೋವನ್ನು ಯಾರಾದರೂ ಮಾಡುತ್ತಾರಾ? ಕೊಠಡಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗಲೇ ಸತ್ಯಾಂಶ ಎಲ್ಲರಿಗೂ ಬಹಿರಂಗವಾಗುವುದು. ನೀವು ಯಾವ ಮಟ್ಟಕ್ಕೆ ಇಳಿಯುತ್ತಿದ್ದೀರಿ. ದೇವರು ಎಲ್ಲವನ್ನೂ ನೋಡುತ್ತಿದ್ದಾನೆ. ಮುಂದೊಂದು ದಿನ ಪ್ರತಿಯೊಬ್ಬರ ಸತ್ಯವೂ ಜಗತ್ತಿನ ಮುಂದೆ ಅನಾವರಣವಾಗಲಿದೆ ಎಂದು ಸ್ವಾತಿ ಮಲಿವಾಲ್‌ ಶುಕ್ರವಾರ ಹೇಳಿದ್ದರು.

  • ಸ್ವಾತಿ ಆರೋಪ ಸುಳ್ಳು – ಮಲಿವಾಲ್‌ ಸಿಎಂ ಮನೆಗೆ ಕಳುಹಿಸಿದ್ದೇ ಬಿಜೆಪಿ: ಸಚಿವೆ ಅತಿಶಿ ತಿರುಗೇಟು!

    ಸ್ವಾತಿ ಆರೋಪ ಸುಳ್ಳು – ಮಲಿವಾಲ್‌ ಸಿಎಂ ಮನೆಗೆ ಕಳುಹಿಸಿದ್ದೇ ಬಿಜೆಪಿ: ಸಚಿವೆ ಅತಿಶಿ ತಿರುಗೇಟು!

    ನವದೆಹಲಿ: ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರ ನಿವಾಸದಲ್ಲಿ ತನ್ನ ಮೇಲೆ ಹಲ್ಲೆ ನಡೆದಿದೆ ಎನ್ನುವ ಸ್ವಾತಿ ಮಲಿವಾಲ್‌ ಅವರ ಆರೋಪ ಸುಳ್ಳು. ಇದು ಬಿಜೆಪಿಯ ಒಳಸಂಚು, ಆ ದಿನ ಸ್ವಾತಿ ಮಲಿವಾಲ್‌ರನ್ನ ಸಿಎಂ ಮನೆಗೆ ಕಳುಹಿಸಿದ್ದೇ ಬಿಜೆಪಿ ಎಂದು ಸಚಿವೆ ಅತಿಶಿ (Atishi) ತಿರುಗೇಟು ನೀಡಿದ್ದಾರೆ.

    ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ವಿರುದ್ಧ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ (Swati Maliwal) ಮಾಡುತ್ತಿರುವ ಆರೋಪಗಳೆಲ್ಲವೂ ಆಧಾರ ರಹಿತ ಮತ್ತು ಸುಳ್ಳು. ಇದು ಬಿಜೆಪಿಯ ಸಂಚು ಎಂದು ಅಲ್ಲಗಳೆದಿದ್ದಾರೆ.

    ಈ ಆರೋಪವು ಬಿಜೆಪಿ (BJP) ಒಳಸಂಚು, ಸ್ವಾತಿ ಮಲಿವಾಲ್‌ ಅದರ ಮುಖವಾಡ. ಮೇ 13ರಂದು ಬೆಳಗ್ಗೆ ಕೇಜ್ರಿವಾಲ್‌ ನಿವಾಸಕ್ಕೆ ಮಲಿವಾಲ್‌ರನ್ನ ಕಳುಹಿಸಿದ್ದೇ ಬಿಜೆಪಿ. ಮುಖ್ಯವಾಗಿ ಸ್ವಾತಿಗೆ ಸಿಎಂ ಮೇಲೆಯೇ ಆರೋಪ ಮಾಡುವ ಉದ್ದೇಶವಿತ್ತು. ಆ ಸಂದರ್ಭದಲ್ಲಿ ಸಿಎಂ ಇಲ್ಲದಿದ್ದ ಕಾರಣ ಬಚಾವ್‌ ಆಗಿದ್ದಾರೆ. ಸಿಎಂ ಇಲ್ಲದಿದ್ದರಿಂದ ಅವರ ಆಪ್ತ ಸಹಾಯಕನ ವಿರುದ್ಧ ದೂರು ನೀಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

    ಮುಂದುವರಿದು ಮಾತನಾಡಿ, ಸ್ವಾತಿ ಮಲಿವಾಲ್‌ ಪೊಲೀಸರಿಗೆ ನೀಡಿದ ದೂರಿನಲ್ಲಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆದ್ರೆ ಸಿಸಿಟಿವಿ ವೀಡಿಯೋದಲ್ಲಿ, ಮಲಿವಾಲ್‌ ಸಿಎಂ ಮನೆ ಡ್ರಾಯಿಂಗ್‌ ರೂಮಿನಲ್ಲಿ ಆರಾಮಾಗಿ ಕುಳಿತಿರುವುದು ಕಂಡುಬಂದಿದೆ. ಅವರೇ ಅಲ್ಲಿದ್ದ ಪೊಲೀಸರಿಗೆ ಮತ್ತು ಬಿಭವ್‌ ಕುಮಾರ್‌ಗೆ ಬೆದರಿಕೆ ಹಾಕಿದ್ದಾರೆ. ಇದಕ್ಕಿಂತ ಸಾಕ್ಷಿ ಇನ್ನೇನು ಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

    ನನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ರಾಜ್ಯಸಭೆ ಆಪ್‌ ಸಂಸದೆ ಸ್ವಾತಿ ಮಾಲಿವಾಲ್‌ ಅವರು ಆರೋಪಿಸಿರುವುದು ದೇಶಾದ್ಯಂತ ಸುದ್ದಿಯಾಗಿದೆ. ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತ ಸಹಾಯಕ ವಿಭವ್‌ ಕುಮಾರ್‌ ಅವರೇ ಹಲ್ಲೆ ಮಾಡಿದ್ದಾರೆ ಎಂದು ಸ್ವಾತಿ ಮಾಲಿವಾಲ್‌ ಅವರು ಆರೋಪಿಸಿ ಎಫ್‌ಐಆರ್‌ ಕೂಡ ದಾಖಲಿಸಿದ್ದಾರೆ. ಆದರೆ, ಈ ಪ್ರಕರಣಕ್ಕೀಗ ಟ್ವಿಸ್ಟ್‌ ಸಿಕ್ಕಿದ್ದು, ಸ್ವಾತಿ ಮಾಲಿವಾಲ್‌ ಆರೋಪ ಸುಳ್ಳು ಎಂದು ಆಪ್‌ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ದೆಹಲಿ ಸಿಎಂ ಕಚೇರಿಯಲ್ಲಿ ಗಲಾಟೆ ನಡೆದಿದೆ ಎನ್ನಲಾದ ವೀಡಿಯೋ ಕೂಡ ಬಿಡುಗಡೆ ಮಾಡಿದ್ದಾರೆ.

  • ದೆಹಲಿ ಅಬಕಾರಿ ನೀತಿ ಹಗರಣ ಕೇಸ್‌ – ದೇಶದಲ್ಲೇ ಮೊದಲ ಬಾರಿಗೆ `ಎಎಪಿ’ ಅನ್ನು ಆರೋಪಿ ಎಂದು ಹೆಸರಿಸಿದ ಇಡಿ!

    ದೆಹಲಿ ಅಬಕಾರಿ ನೀತಿ ಹಗರಣ ಕೇಸ್‌ – ದೇಶದಲ್ಲೇ ಮೊದಲ ಬಾರಿಗೆ `ಎಎಪಿ’ ಅನ್ನು ಆರೋಪಿ ಎಂದು ಹೆಸರಿಸಿದ ಇಡಿ!

    – ದೆಹಲಿ ವಿಶೇಷ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

    ನವದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ ಜಾರಿ ನಿರ್ದೇಶನಾಲಯ (ED) ಪ್ರಕರಣವೊಂದರಲ್ಲಿ ರಾಜಕೀಯ ಪಕ್ಷವನ್ನು ಆರೋಪಿ ಎಂದು ಹೆಸರಿಸಿದೆ. ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಇಡಿ ಚಾರ್ಜ್‌ ಶೀಟ್‌ ಸಲ್ಲಿಸಿದ್ದು, ಆಮ್‌ ಆದ್ಮಿ ಪಕ್ಷವನ್ನು ಆರೋಪಿ ಎಂದು ಹೆಸರಿಸಿದೆ.

    ಜಾರಿ ನಿರ್ದೇಶನಾಲಯವು ದೆಹಲಿಯ ವಿಶೇಷ ಕೋರ್ಟ್‌ಗೆ ಪೂರಕ ದಾಖಲೆಗಳೊಂದಿಗೆ ಚಾರ್ಜ್‌ಶೀಟ್‌ ಸಲ್ಲಿಸಿದೆ. ಒಟ್ಟಾರೆ ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ 8ನೇ ಚಾರ್ಜ್‌ಶೀಟ್‌ ಇದಾಗಿದ್ದು, ಒಟ್ಟು 18 ಮಂದಿಯನ್ನ ಬಂಧಿಸಲಾಗಿದೆ. ಎಎಪಿ ನಾಯಕರು, ಇತರ ವ್ಯಕ್ತಿಗಳೊಂದಿಗೆ ಈ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂದು ಇಡಿ ಜಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.

    ಮದ್ಯ ಮಾರಾಟಗಾರರರಿಗೆ ಅನುಕೂಲವಾಗಲಿ ಎಂಬ ದಿಸೆಯಲ್ಲಿ ಅರವಿಂದ್‌ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ ಸೇರಿ ಹಲವು ನಾಯಕರು ನೀತಿ ರೂಪಿಸಿದ್ದಾರೆ. ದಕ್ಷಿಣ ಭಾರತದ ಹಲವು ವ್ಯಕ್ತಿಗಳು ಇದರ ಲಾಭ ಪಡೆದಿದ್ದಾರೆ. ಲಾಭದ ಸ್ವಲ್ಪ ಮೊತ್ತವನ್ನು ಎಎಪಿಗೆ ನೀಡಲಾಗಿದೆ. ಆ ಮೊತ್ತವನ್ನು ಗೋವಾ ಚುನಾವಣೆಗೂ ಬಳಸಲಾಗಿದೆ. ಅಲ್ಲದೇ ಈ ಪ್ರಕರಣದ ಮಾತುಕತೆ ನಡೆಸಲು ಕೇಜ್ರಿವಾಲ್ ಅವರು ಸೆವೆನ್ ಸ್ಟಾರ್ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದರು ಎಂಬುದಕ್ಕೆ ನಮ್ಮ ಬಳಿ ಪೂರಕ ದಾಖಲೆಗಳಿವೆ. ಅವರು ತಂಗಿದ್ದ ಹೋಟೆಲ್‌ ಬಿಲ್‌ ಅನ್ನು ಪ್ರಕರಣದ ಆರೋಪಿಯೊಬ್ಬರು ಭಾಗಶಃ ಪಾವತಿಸಿದ್ದಾರೆ ಎಂಬುದಕ್ಕೂ ಪುರಾವೆಗಳಿವೆ ಎಂಬ ಮಾಹಿತಿಯನ್ನ ಚಾರ್ಜ್‌ಶೀಟ್‌ನಲ್ಲಿ ದಾಖಲಿಸಿದೆ.

    ಮತ್ತೊಂದೆಡೆ, ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಮನವಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಕಾಯ್ದಿರಿಸಿದೆ. ನ್ಯಾ. ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠವು ತೀರ್ಪನ್ನು ಕಾಯ್ದಿರಿಸಿದ್ದರೂ, ಕಕ್ಷಿದಾರರ ವಾದಗಳಿಗೆ ಯಾವುದೇ ಧಕ್ಕೆಯಾಗದಂತೆ ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯಕ್ಕೆ ತೆರಳಲು ಕೇಜ್ರಿವಾಲ್ ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಿದೆ.

    ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಕಳೆದ ಮಾರ್ಚ್ 21 ರಂದು ಬಂಧಿಸಲಾಗಿತ್ತು. ಸದ್ಯ ಜೂ.1 ರ ವರೆಗೆ ಅವರು ಮಧ್ಯಂತರ ಜಾಮೀನು ಪಡೆದುಕೊಂಡಿದ್ದಾರೆ. ಮೇ 25 ರಂದು ದೆಹಲಿಯ 7 ಸ್ಥಾನಗಳಿಗೆ ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ಎಎಪಿ ಮತ್ತು ಇಂಡಿಯಾ ಬ್ಲಾಕ್‌ ಪರ ಕೇಜ್ರಿವಾಲ್‌ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

  • ಕೇಜ್ರಿವಾಲ್ ನಾಚಿಕೆಯಿಲ್ಲದೆ ಆರೋಪಿಯೊಂದಿಗೆ ತಿರುಗಾಡುತ್ತಿದ್ದಾರೆ: ಮಲಿವಾಲ್‌ ಹಲ್ಲೆಗೆ ಸೀತಾರಾಮನ್ ಕಿಡಿ

    ಕೇಜ್ರಿವಾಲ್ ನಾಚಿಕೆಯಿಲ್ಲದೆ ಆರೋಪಿಯೊಂದಿಗೆ ತಿರುಗಾಡುತ್ತಿದ್ದಾರೆ: ಮಲಿವಾಲ್‌ ಹಲ್ಲೆಗೆ ಸೀತಾರಾಮನ್ ಕಿಡಿ

    ನವದೆಹಲಿ: ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ (Swati Malival) ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಗುಡುಗಿದ್ದಾರೆ.

    ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಅವರೊಂದಿಗೆ ತಿರುಗಾಡುತ್ತಿದ್ದಾರೆ ಎಂದು ಕೇಜ್ರಿವಾಲ್‌ (Arvind Kejriwal) ವಿರುದ್ಧ ನಿರ್ಮಲಾ ಕಿಡಿಕಾರಿದ್ದಾರೆ. ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸೀತಾರಾಮನ್, ಎಎಪಿ ಸಂಚಾಲಕರು ಈ ವಿಷಯದ ಬಗ್ಗೆ ಮಾತನಾಡಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ತಪ್ಪು ಮಾಡಿದ್ರೂ ರಾಜಕೀಯ ಹಿಟ್‌ಮ್ಯಾನ್‌ ಪಾರಾಗಬಹುದು ಅಂದ್ಕೊಂಡಿದ್ದಾನೆ: ಸ್ವಾತಿ ಮಲಿವಾಲ್‌ ಕಿಡಿ

    ನವದೆಹಲಿ ಲೋಕಸಭಾ ಅಭ್ಯರ್ಥಿ ಸೋಮನಾಥ್‌ ಭಾರ್ತಿ ಸೇರಿದಂತೆ ಹಲವು ಎಎಪಿ ನಾಯಕರ ವಿರುದ್ಧ ಮಹಿಳೆಯರ ಮೇಲಿನ ಹಲ್ಲೆಯ ಆರೋಪಗಳಿವೆ. ಇದು ಮಹಿಳಾ ವಿರೋಧ ಪಕ್ಷ (ಎಎಪಿ) ಎಂದು ಸೀತಾರಾಮನ್‌ ವಾಗ್ದಾಳಿ ನಡೆಸಿದ್ದಾರೆ.

    ಎಎಪಿ ಸಂಸದ ಸಂಜಯ್ ಸಿಂಗ್, ಮಲಿವಾಲ್ ಪ್ರಕರಣದಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಒಂದು ದಿನದ ನಂತರ ಆರೋಪಿ ಬಿಭವ್ ಕುಮಾರ್ ಅವರು ಲಕ್ನೋದಲ್ಲಿ ಕೇಜ್ರಿವಾಲ್ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ. ಕೇಜ್ರಿವಾಲ್ ಅವರು ತಮ್ಮ ಪಕ್ಷದ ಮಹಿಳಾ ಸಂಸದರ (ರಾಜ್ಯಸಭೆ) ಮೇಲಿನ ದಾಳಿಯ ಬಗ್ಗೆ ಒಂದು ಮಾತನ್ನೂ ಆಡದಿರುವುದು ಸ್ವೀಕಾರಾರ್ಹವಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಎದೆ, ಹೊಟ್ಟೆ, ಸೊಂಟಕ್ಕೆ ಒದ್ದು, ಕೆನ್ನೆಗೆ ಹೊಡೆದಿದ್ದಾನೆ – ಕೇಜ್ರಿವಾಲ್ ಆಪ್ತನ ವಿರುದ್ಧ ಮಲಿವಾಲ್ ದೂರು

    ಮುಖ್ಯಮಂತ್ರಿ ಕೇಜ್ರಿವಾಲ್‌ ಅವರ ನಿವಾಸದಲ್ಲಿ ಅವರ ಆಪ್ತ ಸಹಾಯಕರೊಬ್ಬರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಲಿವಾಲ್‌ ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ಕೂಡ ದಾಖಲಿಸಿದ್ದಾರೆ. ಪ್ರಕರಣದಲ್ಲಿ ಬಿಭವ್‌ ಕುಮಾರ್ ಅವರನ್ನು ಆರೋಪಿ ಎಂದು ಹೆಸರಿಸಿದ್ದಾರೆ.

  • ತಪ್ಪು ಮಾಡಿದ್ರೂ ರಾಜಕೀಯ ಹಿಟ್‌ಮ್ಯಾನ್‌ ಪಾರಾಗಬಹುದು ಅಂದ್ಕೊಂಡಿದ್ದಾನೆ: ಸ್ವಾತಿ ಮಲಿವಾಲ್‌ ಕಿಡಿ

    ತಪ್ಪು ಮಾಡಿದ್ರೂ ರಾಜಕೀಯ ಹಿಟ್‌ಮ್ಯಾನ್‌ ಪಾರಾಗಬಹುದು ಅಂದ್ಕೊಂಡಿದ್ದಾನೆ: ಸ್ವಾತಿ ಮಲಿವಾಲ್‌ ಕಿಡಿ

    ನವದೆಹಲಿ: ತಪ್ಪು ಮಾಡಿದ್ರೂ ರಾಜಕೀಯ ಹಿಟ್‌ಮ್ಯಾನ್‌ ಪಾರಾಗಬಹುದು ಅಂತ ಭಾವಿಸಿದ್ದಾನೆ. ಕೊಠಡಿಯ ಸಿಸಿಟಿವಿಯನ್ನು (CCTV) ಪರಿಶೀಲಿಸಿದರೆ ಸತ್ಯಾಂಶ ಪ್ರಕಟವಾಗಲಿದೆ ಎಂದು ಆಪ್‌ (AAP) ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ (Swati Maliwal) ಕಿಡಿಕಾರಿದ್ದಾರೆ.

    ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಆಪ್ತ ಬಿಭವ್ ಕುಮಾರ್ ವಿರುದ್ಧ ಸ್ವಾತಿ ಮಲಿವಾಲ್‌ ದೂರು ನೀಡಿದ್ದು ಎಫ್‌ಐಆರ್‌ (FIR) ದಾಖಲಾಗಿದೆ. ಈ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ವಿಡಿಯೋ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ನನ್ನ ಎದೆ, ಹೊಟ್ಟೆ, ಸೊಂಟಕ್ಕೆ ಒದ್ದು, ಕೆನ್ನೆಗೆ ಹೊಡೆದಿದ್ದಾನೆ – ಕೇಜ್ರಿವಾಲ್ ಆಪ್ತನ ವಿರುದ್ಧ ಮಲಿವಾಲ್ ದೂರು

    ಪೋಸ್ಟ್‌ನಲ್ಲಿ ಏನಿದೆ?
    ಪ್ರತಿ ಬಾರಿಯಂತೆ ಈ ಬಾರಿಯೂ ಈ ರಾಜಕೀಯ ಹಿಟ್‌ಮ್ಯಾನ್ ತನ್ನನ್ನು ಉಳಿಸಿಕೊಳ್ಳುವ ಪ್ರಯತ್ನಗಳನ್ನು ಪ್ರಾರಂಭಿಸಿದ್ದಾನೆ. ತನ್ನ ಜನರ ಮೂಲಕ ಸರಿಯಾದ ವಿವರ ಇಲ್ಲದ ವೀಡಿಯೋವನ್ನು ಟ್ವೀಟ್‌ ಮಾಡಿ ತಪ್ಪು ಮಾಡಿಯೂ ತಾನು ಪಾರಾಗಬಹುದು ಎಂದು ಭಾವಿಸಿದ್ದಾನೆ.

    ಮನೆಯಲ್ಲಿ ಥಳಿಸುವ ವಿಡಿಯೋವನ್ನು ಯಾರಾದರೂ ಮಾಡುತ್ತಾರಾ? ಕೊಠಡಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗಲೇ ಸತ್ಯಾಂಶ ಎಲ್ಲರಿಗೂ ಬಹಿರಂಗವಾಗುವುದು. ನೀವು ಯಾವ ಮಟ್ಟಕ್ಕೆ ಇಳಿಯುತ್ತಿದ್ದೀರಿ. ದೇವರು ಎಲ್ಲವನ್ನೂ ನೋಡುತ್ತಿದ್ದಾನೆ. ಮುಂದೊಂದು ದಿನ ಪ್ರತಿಯೊಬ್ಬರ ಸತ್ಯವೂ ಜಗತ್ತಿನ ಮುಂದೆ ಅನಾವರಣವಾಗಲಿದೆ.

     

  • ಸ್ವಾತಿ ಮಲಿವಾಲ್ ದೌರ್ಜನ್ಯದ ಬಗ್ಗೆ ಪ್ರಶ್ನಿಸಿದ್ದಕ್ಕೆ ಮೈಕ್‌ ಪಕ್ಕಕ್ಕಿಟ್ಟ ಕೇಜ್ರಿವಾಲ್‌

    ಸ್ವಾತಿ ಮಲಿವಾಲ್ ದೌರ್ಜನ್ಯದ ಬಗ್ಗೆ ಪ್ರಶ್ನಿಸಿದ್ದಕ್ಕೆ ಮೈಕ್‌ ಪಕ್ಕಕ್ಕಿಟ್ಟ ಕೇಜ್ರಿವಾಲ್‌

    ಲಕ್ನೋ : ಮುಖ್ಯಮಂತ್ರಿಗಳ ಕಚೇರಿಯಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ (Swati Maliwal) ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮಾತನಾಡಲು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Aravind Kejriwal) ನಿರಾಕರಿಸಿದ್ದಾರೆ.

    ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಜೊತೆಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಲು ನಿರಾಕರಿಸಿದ ಅವರು ತಮ್ಮ ಮುಂದಿದ್ದ ಮೈಕ್ ಅನ್ನು ಪಕ್ಕಟ್ಟಿದ್ದಾರೆ. ಇದನ್ನೂ ಓದಿ: ಸಿಎಂ ನಿವಾಸದಲ್ಲೇ ಕೇಜ್ರಿವಾಲ್‌ ಆಪ್ತನಿಂದ ಹಲ್ಲೆ : ಸ್ವಾತಿ ಮಲಿವಾಲ್‌ ಆರೋಪ

    ಅರವಿಂದ್ ಕೇಜ್ರಿವಾಲ್ ಮಾತನಾಡಲು ನಿರಾಕರಿಸುತ್ತಿದ್ದಂತೆ ಈ ಬಗ್ಗೆ ಮಾತನಾಡಿದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ (Sanjay Sing), ಮಣಿಪುರದಲ್ಲಿ ನಡೆದ ಘಟನೆಗಳನ್ನು ನೋಡಿ ಇಡೀ ದೇಶವೇ ನೋವು ಅನುಭವಿಸಿದೆ ಆದರೆ ಪ್ರಧಾನಿ ಮೋದಿ ಈ ಬಗ್ಗೆ ಮೌನವಾಗಿದ್ದರು. ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದರು ಆಗಲೂ ಸುಮ್ಮನಿದ್ದರು. ನಮ್ಮ ಕುಸ್ತಿಪಟುಗಳು ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಡಿಸಿಡಬ್ಲ್ಯು ಮುಖ್ಯಸ್ಥೆ ಸ್ವಾತಿ ಮಲಿವಾಲ್‌ಗೆ ಪೊಲೀಸರು ಥಳಿಸಿದ್ದರು. ಈ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಮೌನ ವಹಿಸಿದ್ದರು ಎಂದು ಹೇಳಿದರು.

    ಉತ್ತರ ಪ್ರದೇಶದಲ್ಲಿಯೂ, ಕುಲದೀಪ್ ಸೆಂಗಾರ್ (2017 ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ) ಅಥವಾ ಹತ್ರಾಸ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಪ್ರಧಾನಿ ಸುಮ್ಮನಿದ್ದರು. ಮೊದಲು ನಾನು ಹೇಳಿದ ಈ ಎಲ್ಲಾ ವಿಚಾರಗಳಿಗೆ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಉತ್ತರಿಸಬೇಕು, ಸ್ವಾತಿ ಮಲಿವಾಲ್ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಸ್ವಾತಿ ಮಲಿವಾಲ್ ಪ್ರಕರಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ಸಂಸದ ಸಂಜಯ್ ಸಿಂಗ್ ತಿರುಗೇಟು ನೀಡಿದರು.

  • ಸಿಎಂ ನಿವಾಸದಲ್ಲೇ ಕೇಜ್ರಿವಾಲ್‌ ಆಪ್ತನಿಂದ ಹಲ್ಲೆ : ಸ್ವಾತಿ ಮಲಿವಾಲ್‌ ಆರೋಪ

    ಸಿಎಂ ನಿವಾಸದಲ್ಲೇ ಕೇಜ್ರಿವಾಲ್‌ ಆಪ್ತನಿಂದ ಹಲ್ಲೆ : ಸ್ವಾತಿ ಮಲಿವಾಲ್‌ ಆರೋಪ

    ನವದೆಹಲಿ:ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ನಿರ್ದೇಶನದ ಮೇರೆಗೆ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (AAP) ನಾಯಕಿ ಸ್ವಾತಿ ಮಲಿವಾಲ್ (Swati Maliwal) ಸೋಮವಾರ ಆರೋಪಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

    ದೆಹಲಿ (Delhi) ಸಿಎಂ ನಿವಾಸದಿಂದ ಪೊಲೀಸ್‌ ಕಂಟ್ರೋಲ್‌ ರೂಂಗೆ (PCR) ಮೊಬೈಲಿನಿಂದ ಎರಡು ಕರೆಗಳು ಬಂದಿದೆ. ಬೆಳಗ್ಗೆ 9:34 ರ ಸುಮಾರಿಗೆ ಮೊದಲ ಕರೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಮೊಬೈಲ್‌ ಸಂಖ್ಯೆ ಸ್ವಾತಿ ಮಲಿವಾಲ್‌ ಅವರಿಗೆ ಸಂಬಂಧಿಸಿದ ಸಂಖ್ಯೆಯಾಗಿದೆ ಎಂದು ವರದಿ ತಿಳಿಸಿದೆ.

    ಹಲ್ಲೆಯ ಬಗ್ಗೆ ಸಿಎಂ ನಿವಾಸ ಅಥವಾ ಆಪ್ ಆಗಲಿ ತಕ್ಷಣದ ಪ್ರತಿಕ್ರಿಯೆ ನೀಡಿಲ್ಲ. ಪೊಲೀಸ್‌ ಠಾಣೆಯಲ್ಲಿರುವ ಪುಸ್ತಕದಲ್ಲಿ ದೂರು ದಾಖಲಾಗಿದೆ. ಈ ವಿಚಾರದ ಬಗ್ಗೆ ಸ್ವಾತಿ ಮಲಿವಾಲ್‌ ಇಲ್ಲಿಯವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

    ಸ್ವಾತಿ ಮಲಿವಾಲ್ ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆಯಾಗಿದ್ದು ರಾಜ್ಯಸಭಾ ಸದಸ್ಯರಾಗಿದ್ದಾರೆ. ಇದನ್ನೂ ಓದಿ: 1998: ಮತ್ತೆ ದಿಲ್ಲಿ ಗದ್ದುಗೆಯೇರಿದ ವಾಜಪೇಯಿ – ಕರ್ನಾಟಕದಲ್ಲಿ ಬಿಜೆಪಿ ಎರಡಂಕಿಗೆ ಜಿಗಿತ

    ಸ್ವಾತಿ ಮಲಿವಾಲ್ ಮಹಿಳಾ ಆಯೋಗದ ಅಧ್ಯಕ್ಷರಾಗಿದ್ದಾಗ 223 ಸಿಬ್ಬಂದಿಯನ್ನು ನೇಮಿಸಿದ್ದರು. 40 ಹುದ್ದೆಗಳು ಮಂಜೂರಾಗಿದ್ದರೂ 223 ಮಂದಿಯನ್ನು ಅನುಮತಿ ಇಲ್ಲದೆ ಅಕ್ರಮವಾಗಿ ನೇಮಕಾತಿ ಮಾಡಿದ್ದಕ್ಕೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ 223 ಮಂದಿ ಉದ್ಯೋಗಿಗಳನ್ನು ವಜಾಗೊಳಿಸಿದ್ದರು.

  • ‘ಲೋಕ’ ಚುನಾವಣೆಯಲ್ಲಿ ಎಎಪಿ ಗೆದ್ದರೆ ವಿದ್ಯುತ್‌, ಆರೋಗ್ಯ ಸೇವೆ ಉಚಿತ – 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್‌

    ‘ಲೋಕ’ ಚುನಾವಣೆಯಲ್ಲಿ ಎಎಪಿ ಗೆದ್ದರೆ ವಿದ್ಯುತ್‌, ಆರೋಗ್ಯ ಸೇವೆ ಉಚಿತ – 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್‌

    ನವದೆಹಲಿ: 2024 ರ ಲೋಕಸಭಾ (Lok Sabha Elections 2024) ಚುನಾವಣೆಯಲ್ಲಿ ಎಎಪಿ (AAP) ಗೆದ್ದರೆ 10 ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಭರವಸೆ ನೀಡಿದ್ದಾರೆ.

    ಉಚಿತ ವಿದ್ಯುತ್‌ (Free Electricity), ಉಚಿತ ಆರೋಗ್ಯ ಸೇವೆ ಸೇರಿದಂತೆ 10 ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ. ಬಿಜೆಪಿ ಯಾವಾಗಲೂ ತನ್ನ ಭರವಸೆಗಳಲ್ಲಿ ವಿಫಲವಾಗಿದೆ. ನನ್ನ ಭರವಸೆಗಳು ದಾಖಲೆಯನ್ನು ಸಾಬೀತುಪಡಿಸಿವೆ. ‘ಕೇಜ್ರಿವಾಲ್ ಕಿ ಗ್ಯಾರಂಟಿ’ ಅಥವಾ ‘ಮೋದಿ ಗ್ಯಾರಂಟಿ’ ಯಾವುದು ಬೇಕು ಎಂದು ಜನತೆಗೆ ಕೇಜ್ರಿವಾಲ್‌ ಕೇಳಿದ್ದಾರೆ. ಇದನ್ನೂ ಓದಿ: ಮೋದಿಗೆ 75 ವರ್ಷವಾದ್ರೂ ಪ್ರಧಾನಿ ಆಗಿಯೇ ಆಗ್ತಾರೆ- ಕೇಜ್ರಿವಾಲ್‌ಗೆ ಅಮಿತ್ ಶಾ ಟಕ್ಕರ್

    ಉಚಿತ ವಿದ್ಯುತ್‌ ನೀಡುವುದು ಕೇಜ್ರಿವಾಲ್‌ ಅವರ ಚುನಾವಣೆಯ ಪ್ರಮುಖ ಭರವಸೆಯಾಗಿದೆ. ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಗಳಿಗೆ ಈ ಸೌಲಭ್ಯ ಒದಗಿಸಲಾಗುವುದು. ದೆಹಲಿಯ ನಿರಂತರ ವಿದ್ಯುತ್ ಪೂರೈಕೆಯ ಮಾದರಿಯನ್ನು ರಾಷ್ಟ್ರವ್ಯಾಪಿ ಪುನರಾವರ್ತಿಸಬೇಕಿದೆ ಎಂದು ತಿಳಿಸಿದ್ದಾರೆ.

    10 ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ, ನಾವು ದೇಶದಲ್ಲಿ 24 ಗಂಟೆಗಳ ವಿದ್ಯುತ್ ಅನ್ನು ಒದಗಿಸುತ್ತೇವೆ. ದೇಶದಲ್ಲಿ 3 ಲಕ್ಷ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯವಿದ್ದರೂ ಬಳಕೆ 2 ಲಕ್ಷ ಮೆಗಾವ್ಯಾಟ್ ಮಾತ್ರ. ನಮ್ಮ ದೇಶವು ಬೇಡಿಕೆಗಿಂತ ಹೆಚ್ಚು ವಿದ್ಯುತ್ ಉತ್ಪಾದಿಸಬಲ್ಲದು. ನಾವು ಅದನ್ನು ದೆಹಲಿ ಮತ್ತು ಪಂಜಾಬ್‌ನಲ್ಲಿ ಮಾಡಿದ್ದೇವೆ. ನಾವು ಅದನ್ನು ದೇಶದಲ್ಲೂ ಮಾಡುತ್ತೇವೆ. ಎಲ್ಲಾ ಬಡವರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುತ್ತೇವೆ. ಇದಕ್ಕೆ 1.25 ಲಕ್ಷ ಕೋಟಿ ವೆಚ್ಚವಾಗಲಿದೆ. ನಾವು ಅದನ್ನು ವ್ಯವಸ್ಥೆಗೊಳಿಸಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದರೂ ಮೋದಿ ಪ್ರಧಾನಿಯಾಗಲ್ಲ: ಅರವಿಂದ್ ಕೇಜ್ರಿವಾಲ್ ಭವಿಷ್ಯ

    ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಬೇಕು. ಇದಕ್ಕಾಗಿ 5 ಲಕ್ಷ ಕೋಟಿ ರೂ. ಬೇಕಾಗುತ್ತದೆ. ಒಟ್ಟು ವೆಚ್ಚವನ್ನು ಸರಿದೂಗಿಸಲು ರಾಜ್ಯ ಸರ್ಕಾರಗಳು ಮತ್ತು ಕೇಂದ್ರವು ತಲಾ 2.5 ಲಕ್ಷ ಕೋಟಿ ರೂ. ನೀಡಬೇಕು ಎಂದು ಪ್ರತಿಪಾದಿಸಿದ್ದಾರೆ.

    ಇಂದು ನಮ್ಮ ಸರ್ಕಾರಿ ಶಾಲೆಗಳ ಸ್ಥಿತಿ ಚೆನ್ನಾಗಿಲ್ಲ. ಎಲ್ಲರಿಗೂ ಒಳ್ಳೆಯ ಮತ್ತು ಅತ್ಯುತ್ತಮವಾದ ಉಚಿತ ಶಿಕ್ಷಣದ ವ್ಯವಸ್ಥೆ ಮಾಡುತ್ತೇವೆ. ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ಸಿಗುವಂತೆ ದೆಹಲಿ ಮತ್ತು ಪಂಜಾಬ್‌ನಲ್ಲಿ ನಾವು ಮಾಡಿದ್ದೇವೆ. ಇದಕ್ಕಾಗಿ ರಾಜ್ಯ ಸರ್ಕಾರ 2.5 ಲಕ್ಷ ಕೋಟಿ ಹಾಗೂ ಕೇಂದ್ರ ಸರ್ಕಾರ 2.5 ಕೋಟಿ ರೂ. ನೀಡಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜೈಲಿನಿಂದ ಹೊರ ಬರುತ್ತಿದ್ದಂತೆ ಟೆಂಪಲ್ ರನ್ – ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕೇಜ್ರಿವಾಲ್!

  • ಡೆಲ್ಲಿ, ರಾಜಸ್ಥಾನ ಪಂದ್ಯದ ವೇಳೆ ಆಪ್ ಕಾರ್ಯಕರ್ತರಿಂದ ಪ್ರತಿಭಟನೆ – ಹಲವರು ವಶಕ್ಕೆ

    ಡೆಲ್ಲಿ, ರಾಜಸ್ಥಾನ ಪಂದ್ಯದ ವೇಳೆ ಆಪ್ ಕಾರ್ಯಕರ್ತರಿಂದ ಪ್ರತಿಭಟನೆ – ಹಲವರು ವಶಕ್ಕೆ

    ನವದೆಹಲಿ: ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಾಜಸ್ಥಾನ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ (IPL 2024) ಪಂದ್ಯದ ವೇಳೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಬಂಧನ ವಿರೋಧಿಸಿ ಪ್ರತಿಭಟಿಸಿದ ಹಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

    ಪಂದ್ಯದ ವೇಳೆ ಆಪ್ (AAP) ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ ಎಂದು ತಿಳಿದು ಬಂದಿದೆ. ಸಾರ್ವಜನಿಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಎಲ್ಲಾ ಪ್ರೇಕ್ಷಕರು ಆಟವನ್ನು ಆನಂದಿಸಲು ನಾವು ಪ್ರೋತ್ಸಾಹಿಸುತ್ತೇವೆ. ಕ್ರೀಡಾಂಗಣದಲ್ಲಿ ಪ್ರೇಕ್ಷಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸರನ್ನು ನಿಯೋಜಿಸಲಾಗಿದೆ. ಇಂತಹ ಘಟನೆಗಳಿಗೆ ಕ್ರೀಡಾಂಗಣದಲ್ಲಿ ಅವಕಾಶ ನೀಡುವುದಿಲ್ಲ ಎಂದು ಪೊಲಿಸರು ತಿಳಿಸಿದ್ದಾರೆ.

    ಅಭಿಮಾನಿಗಳು ಕಂಬಿಯ ಹಿಂದೆ ಕೇಜ್ರಿವಾಲ್ ಅವರ ಫೋಟೋ ಇರುವ ಹಳದಿ ಟೀ ಶರ್ಟ್ ಧರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

  • ಕೇಜ್ರಿವಾಲ್ ವಿರುದ್ಧ ಎನ್‍ಐಎ ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಶಿಫಾರಸು

    ಕೇಜ್ರಿವಾಲ್ ವಿರುದ್ಧ ಎನ್‍ಐಎ ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಶಿಫಾರಸು

    ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ (VK Saxena) ಅವರು ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ವಿರುದ್ಧ ಎನ್‍ಐಎ (NIA) ತನಿಖೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

    ಕೇಜ್ರಿವಾಲ್ ವಿರುದ್ಧ ನಿಷೇಧಿತ ಭಯೋತ್ಪಾದಕ ಸಂಘಟನೆ `ಸಿಖ್ಸ್ ಫಾರ್ ಜಸ್ಟೀಸ್’ನಿಂದ ದೇಣಿಗೆ ಪಡೆದ ಆರೋಪದ ಮೇಲೆ ಎನ್‍ಐಎ ತನಿಖೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದು ರಾಜಭವನ ಮೂಲಗಳು ತಿಳಿಸಿವೆ.

    ಈ ಸಂಬಂಧ ಸಕ್ಸೆನಾ ಅವರು ಕೇಂದ್ರ ಗೃಹ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಕೇಜ್ರಿವಾಲ್ ನೇತೃತ್ವದ ಎಎಪಿಯು ದೇವೇಂದ್ರ ಪಾಲ್ ಭುಲ್ಲರ್ ಬಿಡುಗಡೆಗೆ ಅನುಕೂಲವಾಗುವಂತೆ ಉಗ್ರ ಖಲಿಸ್ತಾನಿ ಗುಂಪುಗಳಿಂದ ದೇಣಿಗೆ ಪಡೆದಿರುವ ಬಗ್ಗೆ ತಮಗೆ ದೂರು ಬಂದಿದೆ. ದೂರುದಾರರು ಕಳುಹಿಸಿರುವ ಸಾಕ್ಷ್ಯಗಳನ್ನು ವಿಧಿವಿಜ್ಞಾನ ಪರೀಕ್ಷೆ ಒಳಪಡಿಸುವುದು ಹಾಗೂ ಈ ಪ್ರಕರಣದ ತನಿಖೆ ಎನ್‍ಐಎಗೆ ವಹಿಸುವ ಅಗತ್ಯವಿದೆ ಎಂದು ಸಕ್ಸೆನಾ ಹೇಳಿದ್ದಾರೆ.

    ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಮುಂದಾಗಿರುವ ಹೊತ್ತಲ್ಲೇ ಸಕ್ಸೆನಾ ಅವರ ಈ ಶಿಫಾರಸು ಕೇಜ್ರಿವಾಲ್ ಅವರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ.

    ಎನ್‍ಐಎ ತನಿಖೆ ಶಿಫಾರಸು ಬಿಜೆಪಿಯ (BJP )ಮತ್ತೊಂದು ಪಿತೂರಿ ಎಂದು ಆಪ್ (AAP) ಆರೋಪಿಸಿದೆ. ಕೇಜ್ರಿವಾಲ್ ಪ್ರಸ್ತುತ ನೂತನ ಮದ್ಯ ನೀತಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.