Tag: aap

  • ತೆರಿಗೆ ಹಣ ಕಳ್ಳ ರಾಜಕಾರಣಿಗಳ ಜೇಬು ಸೇರುವುದನ್ನು ತಪ್ಪಿಸುವುದು ಹೇಗೆಂದು ಕೇಜ್ರಿವಾಲ್ ತೋರಿಸಿಕೊಟ್ಟಿದ್ದಾರೆ: ಪೃಥ್ವಿ ರೆಡ್ಡಿ

    ತೆರಿಗೆ ಹಣ ಕಳ್ಳ ರಾಜಕಾರಣಿಗಳ ಜೇಬು ಸೇರುವುದನ್ನು ತಪ್ಪಿಸುವುದು ಹೇಗೆಂದು ಕೇಜ್ರಿವಾಲ್ ತೋರಿಸಿಕೊಟ್ಟಿದ್ದಾರೆ: ಪೃಥ್ವಿ ರೆಡ್ಡಿ

    ಬೆಂಗಳೂರು: ಭ್ರಷ್ಟಾಚಾರವಿಲ್ಲದ ಆಡಳಿತ ನೀಡಬಹುದು ಎಂಬುದನ್ನು ದೆಹಲಿಯ ಕೇಜ್ರಿವಾಲ್ ನೇತೃತ್ವದ ಸರ್ಕಾರ ಕಳೆದ ಏಳು ವರ್ಷಗಳಲ್ಲಿ ತೋರಿಸಿಕೊಟ್ಟಿದೆ. ತೆರಿಗೆ ಹಣವು ಕಳ್ಳ ರಾಜಕಾರಣಿಗಳ ಜೇಬು ಸೇರುವುದನ್ನು ತಪ್ಪಿಸಿ, ಅಲ್ಲಿನ ಆರೋಗ್ಯ, ಶಿಕ್ಷಣ, ನೀರು, ವಿದ್ಯುತ್ ಮುಂತಾದ ಮೂಲಸೌಕರ್ಯ ನೀಡುವುದಕ್ಕೆ ಬಳಸಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ತಿಳಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೃಥ್ವಿ ರೆಡ್ಡಿ, ಕೇಜ್ರಿವಾಲ್‍ರವರು ಏಪ್ರಿಲ್ 21ರಂದು ಬೆಂಗಳೂರಿಗೆ ಆಗಮಿಸಲಿದ್ದು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆಯಲಿರುವ ಬೃಹತ್ ರೈತ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರಿನ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಸಮಾವೇಶ ಆರಂಭವಾಗಲಿದೆ. ದೆಹಲಿ ಮಾದರಿಯಿಂದ ಪ್ರೇರಣೆ ಹೊಂದಿರುವ ರಾಜ್ಯ ರೈತ ಸಂಘವು ಕೇಜ್ರಿವಾಲ್‍ರವರಿಗೆ ವಿಶೇಷ ಆಹ್ವಾನ ನೀಡಿದ್ದು, ಅವರು ಆಗಮಿಸಿ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಾಡಿನ ಸುಮಾರು 50 ಸಾವಿರ ರೈತರು ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಿನವಾಗಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಇಬ್ಬರು, ಮೂವರು ಸಚಿವರನ್ನು ಬಿಟ್ಟು ಎಲ್ರೂ 40% ಕಮಿಷನ್ ಪಡೆಯುತ್ತಿದ್ದಾರೆ: ಎಂ.ಬಿ ಪಾಟೀಲ್

    ಜನಸಾಮಾನ್ಯರ ಕುಂದುಕೊರತೆಗಳನ್ನು ಅರಿತುಕೊಂಡು ಬದಲಾವಣೆ ತರುತ್ತಿರುವ ಏಕೈಕ ಪಕ್ಷವೆಂದರೆ ಆಮ್ ಆದ್ಮಿ ಪಾರ್ಟಿ. ಪ್ರಾಮಾಣಿಕ ವ್ಯಕ್ತಿಗಳು ರಾಜಕಾರಣಕ್ಕೆ ಬಂದರೆ ಜನಪರ ಕೆಲಸಗಳನ್ನು ದೊಡ್ಡ ಮಟ್ಟದಲ್ಲಿ ಮಾಡಬಹುದು. ಕಳೆದ 75 ವರ್ಷಗಳಲ್ಲಿ ಕರ್ನಾಟಕದ ರೈತರು ಮೂರೂ ಪಕ್ಷಗಳಿಗೆ ಮತ ನೀಡಿ ಗೆಲ್ಲಿಸಿ ಕಳುಹಿಸಿದರು. ಮೂರೂ ಪಕ್ಷಗಳಲ್ಲಿ ಯಾರೂ ರೈತನ ಬವಣೆ ಅರ್ಥ ಮಾಡಿಕೊಳ್ಳಲಿಲ್ಲ. ಎಲ್ಲರಿಂದ ಅನ್ಯಾಯ ಎದುರಿಸಿ ತಾವೇ ರಾಜಕಾರಣಕ್ಕಿಳಿಯಲು ರೈತರು ತೀರ್ಮಾನಿಸಿದ್ದಾರೆ. ಅವರ ಮುಂದಿರುವ ಎಲ್ಲಾ ಆಯ್ಕೆಗಳನ್ನು ಪರಿಶೀಲಿಸಿ, ಆಮ್ ಆದ್ಮಿ ಪಾರ್ಟಿಯೊಂದೇ ತಮಗೆ ನ್ಯಾಯ ದೊರಕಿಸಿಕೊಡಲು ಸಾಧ್ಯ ಎಂಬ ತೀರ್ಮಾನಕ್ಕೆ ರೈತರು ಬಂದಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಬಿಜೆಪಿ ಸೇರ್ತಾರಾ ಸಂಸದೆ ಸುಮಲತಾ ಆಪ್ತ?

    ಇತ್ತೀಚೆಗೆ ನಡೆದ ಪಂಜಾಬ್ ಚುನಾವಣೆಯಲ್ಲಿ 117 ಸ್ಥಾನಗಳ ಪೈಕಿ 92 ಸ್ಥಾನಗಳಲ್ಲಿ ಎಎಪಿ ಗೆದ್ದಿದೆ. ಇದರಲ್ಲಿ 82 ಜನರು ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸಿದವರು. ಬೇರೆ ಪಕ್ಷದವರ ರೀತಿ ಎಎಪಿ ವ್ಯಕ್ತಿಯ ಬ್ಯಾಂಕ್ ಬ್ಯಾಲೆನ್ಸ್ ನೋಡುವುದಿಲ್ಲ. ಬದಲಾಗಿ, ಆತನ ಸಾಮಾಜಿಕ ಕಾಳಜಿ ಹಾಗೂ ಮತದಾರರ ಬಗ್ಗೆ ಇರುವ ಕಳಕಳಿಯನ್ನು ನೋಡುತ್ತದೆ. ಸಾಮಾನ್ಯರನ್ನು ನಾಯಕರನ್ನಾಗಿ ಮಾಡುವ ಎಎಪಿಯನ್ನು ಜನಸಾಮಾನ್ಯರು ಬಳಸಿಕೊಳ್ಳಬೇಕು ಎಂದು ಪತ್ರಿಕಾ ಗೋಷ್ಟಿಯಲ್ಲಿ ಉಪಸ್ಥಿತರಿದ್ದ ಭಾಸ್ಕರ್ ರಾವ್ ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಎಎಪಿ ರಾಜ್ಯ ಉಪಾಧ್ಯಕ್ಷ ವಿಜಯ್ ಶರ್ಮಾ, ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ, ಸಂಚಿತ್ ಸೆಹ್ವಾನಿ, ಜಗದೀಶ್ ವಿ ಸದಂ, ಬಿ.ಟಿ ನಾಗಣ್ಣ, ಸುರೇಶ್ ರಾಥೋಡ್, ಚನ್ನಪ್ಪಗೌಡ ನಲ್ಲೂರು, ಜಗದೀಶ್ ಚಂದ್ರ, ಅಶೋಕ್ ಮೃತ್ಯುಂಜಯ, ವಿಜಯ್ ಶಾಸ್ತ್ರಿಮಠ ಕುಶಲ ಸ್ವಾಮಿ, ಉಷಾ ಮೋಹನ್ ಸೇರಿದಂತೆ ಹಲವಾರು ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಯೋಗಿ ತರಹ ಮೈ ಕೊಡವಿ ನಿಲ್ಲಿ ಬಸವರಾಜ್ ಬೊಮ್ಮಾಯಿ ಅವರೇ.. : ಪ್ರಮೋದ್ ಮುತಾಲಿಕ್

  • ಬಂಜಾರ ಮುಖಂಡ ಗುರು ಚವಾಣ್ ಎಎಪಿ ಸೇರ್ಪಡೆ

    ಬಂಜಾರ ಮುಖಂಡ ಗುರು ಚವಾಣ್ ಎಎಪಿ ಸೇರ್ಪಡೆ

    ಬೆಂಗಳೂರು: ಬಂಜಾರ ಸಮುದಾಯದ ಹಿರಿಯ ಮುಖಂಡ ಹಾಗೂ ಬೆಂಗಳೂರು ಎಸ್‍ಸಿ-ಎಸ್‍ಟಿ ನೌಕರರ ಕಲ್ಯಾಣ ಸಂಘಟನೆಯ ಅಧ್ಯಕ್ಷ ಗುರು ಎಂ.ಚವಾಣ್ ಅವರು ಆಮ್ ಆದ್ಮಿ ಪಾರ್ಟಿ ಸೇರಿದರು.

    ಬೆಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಗುರು ಚವಾಣ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಬೆಂಗಳೂರು ಎಎಪಿ ಉಪಾಧ್ಯಕ್ಷ ಸುರೇಶ್ ರಾಥೋಡ್ ಮಾತನಾಡಿದರು. ಈ ವೇಳೆ ಅವರು, ಕೇಂದ್ರೀಯ ವಿದ್ಯಾಲಯ ಸಂಘಟನಾ ಮೇಲ್ವಿಚಾರಕರಾಗಿ, ಜನಪದ ವಿಶ್ವವಿದ್ಯಾಲಯದ ಬೆಂಗಳೂರು ಜಿಲ್ಲಾ ಕ್ಷೇತ್ರ ಪ್ರತಿನಿಧಿಯಾಗಿ ಹಾಗೂ ಬೆಂಗಳೂರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನೌಕರರ ಕಲ್ಯಾಣ ಸಂಘಟನೆ ಅಧ್ಯಕ್ಷರಾಗಿ ಗುರು ಚವಾಣ್ ಅವರು ಸಮಾಜಕ್ಕಾಗಿ ದುಡಿದರು. ಇದನ್ನೂ ಓದಿ: ಪಾಕ್ ಹೊಗಳುವ ಹಾಡು ಹಾಕಿದ ಇಬ್ಬರ ವಿರುದ್ಧ ಕೇಸ್

    ಲಂಬಾಣಿ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸಲು ಶ್ರಮಿಸಿದ್ದಾರೆ. ಸುಮಾರು 30 ವರ್ಷಗಳು ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಇಂತಹ ಅನುಭವಿ ನಾಯಕರು ಆಮ್ ಆದ್ಮಿ ಪಾರ್ಟಿಯನ್ನು ಸೇರುತ್ತಿರುವುದು ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ ಎಂದು ಹೇಳಿದರು.

    ಗುರು ಚವಾಣ್ ಅವರು ಮಾತನಾಡಿ, ದೇಶ ಹಾಗೂ ರಾಜ್ಯವನ್ನು ಆಳಿದ ಬಿಜೆಪಿ, ಕಾಂಗ್ರೆಸ್ ಮತ್ತಿತರ ಪಕ್ಷಗಳು ದಲಿತರು ಹಾಗೂ ಹಿಂದುಳಿದ ಸಮುದಾಯದವರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ. ಅದನ್ನು ಬಿಟ್ಟು ಆ ವರ್ಗಗಳ ಜನರ ಏಳಿಗೆಗೆ ಶ್ರಮಿಸಲಿಲ್ಲ. ಆದರೆ ಆಮ್ ಆದ್ಮಿ ಪಾರ್ಟಿಯು ಬಂಜಾರ ಸಮುದಾಯ ಸೇರಿದಂತೆ ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುತ್ತಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆಡಳಿತದಲ್ಲಿ ಅಲ್ಲಿನ ಎಲ್ಲ ಸಮುದಾಯಗಳಿಗೆ ಅನುಕೂಲವಾಗುತ್ತಿದೆ. ಕರ್ನಾಟಕದಲ್ಲೂ ಅದೇ ಮಾದರಿಯ ಆಡಳಿತ ಬರಬೇಕು ಎಂದು ಹೇಳಿದರು.

    ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ಪ್ರದಾನ ಕಾರ್ಯದರ್ಶಿ ಜಗದೀಶ್‍ಚಂದ್ರ ಮಾತನಾಡಿ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್‍ನಂತಹ ಭ್ರಷ್ಟ ಪಕ್ಷಗಳನ್ನು ಕರ್ನಾಟಕದ ಜನತೆ ತಿರಸ್ಕರಿಸಲು ಆರಂಭಿಸಿದ್ದಾರೆ. ಕೇಜ್ರಿವಾಲ್ ಅವರ ಪಾರದರ್ಶಕ ಹಾಗೂ ಜನಪರ ಆಡಳಿತದತ್ತ ಮುಖ ಮಾಡುತ್ತಿದ್ದಾರೆ. ಈಗಾಗಲೇ ಅನೇಕ ಯುವಕರು, ಗಣ್ಯರು, ಸಾಧಕರು ಪಕ್ಷವನ್ನು ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಇದು ದೊಡ್ಡ ಪ್ರಮಾಣದಲ್ಲಿ ಮುಂದುವರಿಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗಲ್ಲಿ ಬಾಯ್ ರಣವೀರ್ ಚಿತ್ರಕ್ಕೆ ಚಾರ್ಲಿ ಚಾಪ್ಲಿನ್‍ನಿಂದ ಪ್ರೇರಣೆ?

    ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಎಎಪಿ ಮುಖಂಡ ಬೋಪಣ್ಣ ಹಾಗೂ ಇನ್ನಿತರ ಮುಖಂಡರು, ಗುರು ಚವಾಣ್ ಬೆಂಬಲಿಗರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

  • ಬಿಜೆಪಿ ಬಲೆಗೆ ಬೀಳದಿರಿ – ಕೊಟ್ಟ ಕೊಡುಗೆಗಳನ್ನೂ ಹಿಂಪಡೆಯುತ್ತದೆ: ಸಿಸೋಡಿಯಾ

    ಬಿಜೆಪಿ ಬಲೆಗೆ ಬೀಳದಿರಿ – ಕೊಟ್ಟ ಕೊಡುಗೆಗಳನ್ನೂ ಹಿಂಪಡೆಯುತ್ತದೆ: ಸಿಸೋಡಿಯಾ

    ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಮುಂದಾಗುತ್ತಿರುವ ಆಮ್ ಆದ್ಮಿ ಪಕ್ಷ ಇದೀಗ ಹಿಮಾಚಲ ಪ್ರದೇಶದತ್ತ ತನ್ನ ಗಮನಹರಿಸಿದೆ. ಅದಕ್ಕಾಗಿ ಪ್ರಮುಖ ನಾಯಕರನ್ನು ಆಪ್‌ಗೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದು, ಬಿರುಸಿನ ಪ್ರಚಾರ ನಡೆಸಲು ಮುಂದಾಗುತ್ತಿದೆ.

    ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿರುವ ದೆಹಲಿ ಉಪಮುಖ್ಯಮಂತ್ರಿ ಮನಿಷ್ ಸಿಸೋಡಿಯಾ, ಎಎಪಿಗೆ ಮತ ನೀಡಿ ಬೆಂಬಲಿಸುವಂತೆ ಕೋರಿದ್ದು, ಬಿಜೆಪಿಯ ಬಲೆಗೆ ಬೀಳದಂತೆಯೂ ಎಚ್ಚರಿಸಿದರು. ಇದನ್ನೂ ಓದಿ: ಹಿಮಾಚಲ ಪ್ರದೇಶದ ಸರ್ಕಾರಿ ಬಸ್‍ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ 50% ರಿಯಾಯಿತಿ: ಸಿಎಂ ಠಾಕೂರ್

    AAP 01

    ಬಿಜೆಪಿ ಸೋಲುವ ಭಯದಿಂದ ಹತ್ತು ಹಲವು ಉಚಿತ ಕೊಡುಗೆಗಳನ್ನು ಘೋಷಿಸುತ್ತಿದೆ. ಇದಕ್ಕೆ ಮಣಿಯದೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕುವಂತೆ ಮನವಿ ಮಾಡಿದರು.

    ಬಿಜೆಪಿ ಮತ್ತೆ ಹಿಮಾಚಲ ಪ್ರದೇಶದಲ್ಲಿ ಸರ್ಕಾರ ರಚಿಸಿದರೆ, ವಿದ್ಯುತ್, ಸಾರಿಗೆ ದರ ಸೇರಿದಂತೆ ಎಲ್ಲ ಉಚಿತ ಕೊಡುಗೆಗಳನ್ನು ಹಿಂಪಡೆಯುತ್ತದೆ, ಇದು ಸತ್ಯ. ಜನರಿಗೆ ಅಗತ್ಯವಸ್ತುಗಳನ್ನು ಕಡಿಮೆ ದರದಲ್ಲಿ ಒದಗಿಸಬೇಕು ಎಂಬ ಪರಿಕಲ್ಪನೆ ಎಂದಿಗೂ ಬಿಜೆಪಿಗೆ ಇಲ್ಲ. ಇದೀಗ ಆಪ್‌ನೊಂದಿಗೆ ಹೋರಾಡಲು ಹೆದರಿ ಬಿಜೆಪಿ ಉಚಿತ ಕೊಡುಗೆಗಳನ್ನು ನೀಡುತ್ತಿದೆ ಎಂದು ಸಿಸೋಡಿಯಾ ಹೇಳಿದ್ದಾರೆ. ಇದನ್ನೂ ಓದಿ: ಅಮಿತ್ ಶಾ ಆಗಮನದ ವೇಳೆ ಕೇಬಲ್ ವಯರ್ ಸ್ಫೋಟ – ವರದಿ ಕೇಳಿದ ಗೃಹ ಸಚಿವಾಲಯ

    ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು, ಹಿಮಾಚಲ ಪ್ರದೇಶದ ನಿವಾಸಿಗಳಿಗೆ 125 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಿದ್ದೇವೆ. ಶೂನ್ಯದಿಂದ 125 ಯೂನಿಟ್ ವಿದ್ಯುತ್ ಬಳಸುವ ಕುಟುಂಬಗಳು ಇನ್ನುಮುಂದೆ ಬಿಲ್ ಪಾವತಿಸಬೇಕಾಗಿಲ್ಲ. ಒಟ್ಟು 11.5 ಲಕ್ಷ ಕುಟುಂಬಗಳು ಇದರ ಪ್ರಯೋಜನ ಪಡೆಯಲಿವೆ. ಅಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಬಿಲ್‌ಗಳನ್ನು ಮನ್ನಾ ಮಾಡಲಾಗುವುದು ಎಂದು ಘೋಷಿಸಿದರು.

    ವರ್ಷದ ಕೊನೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ ಸತತ 2ನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳುವ ಗುರಿ ಹೊಂದಿದೆ. ಇದಕ್ಕೆ ಜನತೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

  • ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಎಎಪಿ ಪ್ರತಿಭಟನೆ

    ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಎಎಪಿ ಪ್ರತಿಭಟನೆ

    ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಸಂಬಂಧಿಸಿ ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿಯ ನೂರಾರು ಕಾರ್ಯಕರ್ತರು ನಗರದ ಶಿವಾನಂದ ವೃತ್ತದಿಂದ ಬೃಹತ್ ಪ್ರತಿಭಟನೆ ನಡೆಸಿದರು.

    ಪ್ರತಿಭಟನಾನಿರತ ಎಎಪಿ ಮುಖಂಡರು ಹಾಗೂ ಕಾರ್ಯಕರ್ತರು ಈಶ್ವರಪ್ಪ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕುಮಾರಕೃಪಾದಲ್ಲಿರುವ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಸಾಗುತ್ತಿದ್ದ ಎಎಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಮಾರ್ಗಮಧ್ಯದಲ್ಲೇ ವಶಕ್ಕೆ ಪಡೆದು ಹೈಗ್ರೌಂಡ್ಸ್ ಠಾಣೆಗೆ ಕರೆದೊಯ್ದರು. ಇದನ್ನೂ ಓದಿ: ದೇಶಿ ನಿರ್ಮಿತ ಪಿಸ್ತೂಲ್ ಇಟ್ಟುಕೊಂಡಿದ್ದ ಶಿಕ್ಷಕಿ ಅರೆಸ್ಟ್

    ಇದೇ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ, ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಧೈರ್ಯ ತೋರಿದ್ದ ಸಂತೋಷ್ ಪಾಟೀಲ್‍ರವರಿಗೆ ನ್ಯಾಯ ಸಿಗಬೇಕೆಂದರೆ ಶೀಘ್ರವೇ ಈಶ್ವರಪ್ಪನವರ ಬಂಧನವಾಗಬೇಕು. ರಾಜ್ಯ ಸಚಿವ ಸಂಪುಟದಲ್ಲಿ ಈಶ್ವರಪ್ಪನವರು ಪ್ರಭಾವಿ ಸಚಿವರಾಗಿದ್ದು, ಈ ಕೂಡಲೇ ಅವರನ್ನು ಬಂಧಿಸದಿದ್ದರೆ ಸಾಕ್ಷ್ಯಾಧಾರಗಳನ್ನು ನಾಶ ಪಡಿಸುವ ಸಾಧ್ಯತೆ ದಟ್ಟವಾಗಿದೆ. ಆರೋಪಿ ಈಶ್ವರಪ್ಪನವರನ್ನು ಬಂಧಿಸುವ ಬದಲು ಆಮ್ ಆದ್ಮಿ ಪಾರ್ಟಿ ನಾಯಕರು ಹಾಗೂ ಕಾರ್ಯಕರ್ತರನ್ನು ಬಂಧಿಸಿರುವ ಪೊಲೀಸರ ನಡೆ ಖಂಡನೀಯ ಎಂದು ಹೇಳಿದರು. ಇದನ್ನೂ ಓದಿ: ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಹುತಾತ್ಮರಾದವರ ತ್ಯಾಗ ಮುಂದಿನ ಪೀಳಿಗೆಗೆ ಪ್ರೇರಣೆ: ಮೋದಿ

    ಸಂತೋಷ್ ಸಾವಿಗೆ ಈಶ್ವರಪ್ಪನವರೇ ಕಾರಣವೆಂದು ಡೆತ್‍ನೋಟ್‍ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದರೂ ಈಶ್ವರಪ್ಪನವರ ಬಂಧನವಾಗಿಲ್ಲ. ಸಚಿವರನ್ನು ಬಂಧಿಸದಿದ್ದರೆ ಜನಸಾಮಾನ್ಯರಿಗೇ ಒಂದು ಕಾನೂನು, ಸಚಿವರಿಗೆ ಮತ್ತೊಂದು ಕಾನೂನು ಇದೆ ಎಂಬ ತಪ್ಪು ಸಂದೇಶ ಸಮಾಜಕ್ಕೆ ಹೋಗಲಿದೆ. ಸಚಿವ ಸಂಪುಟದಿಂದ ಈಶ್ವರಪ್ಪನವರನ್ನು ಹೊರಹಾಕಿ, ಅವರನ್ನು ಬಂಧಿಸಿದಿದ್ದರೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಮೋಹನ್ ದಾಸರಿ ಹೇಳಿದರು.

    ಆಮ್ ಆದ್ಮಿ ಪಾರ್ಟಿ ನಾಯಕರಾದ ಜಗದೀಶ್ ವಿ ಸದಂ, ಚನ್ನಪ್ಪಗೌಡ ನೆಲ್ಲೂರು, ಕುಶಲಸ್ವಾಮಿ, ಉಷಾ ಮೋಹನ್, ಪ್ರಕಾಶ್ ನೆಡುಂಗಡಿ, ಸೀತಾರಾಮ್, ನಂಜಪ್ಪ ಕಾಳೇಗೌಡ, ಗೋಪಿನಾಥ್, ಕುದ್ರತ್, ಜಗದೀಶ್ ಬಾಬು, ಅಬ್ಬಾಸ್ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಿದ್ದರು.

  • ಬಿಜೆಪಿ ಸರ್ಕಾರ ಜನರ ಗಮನ ಕೋಮುಸಂಘರ್ಷದತ್ತ ಸೆಳೆದು ಬೆಲೆ ಏರಿಕೆ ಮಾಡುತ್ತಿದೆ: AAP

    ಬಿಜೆಪಿ ಸರ್ಕಾರ ಜನರ ಗಮನ ಕೋಮುಸಂಘರ್ಷದತ್ತ ಸೆಳೆದು ಬೆಲೆ ಏರಿಕೆ ಮಾಡುತ್ತಿದೆ: AAP

    ಬೆಂಗಳೂರು: ಕಳ್ಳರು ಜನರ ಗಮನವನ್ನು ಬೇರೆಡೆ ಸೆಳೆದು ಪಿಕ್‍ಪಾಕೆಟ್ ಮಾಡುವಂತೆ, ಬಿಜೆಪಿ ಸರ್ಕಾರವು ಜನರ ಗಮನಗಳನ್ನು ಕೋಮುಸಂಘರ್ಷದತ್ತ ಸೆಳೆದು ಬೆಲೆ ಏರಿಕೆ ಮಾಡುತ್ತಿದೆ ಎಂದು ಎಎಪಿಯ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ದುರಾಡಳಿತದಿಂದಾಗಿ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕೇಂದ್ರ ಸರ್ಕಾರವು ಅಡುಗೆ ಅನಿಲ, ಇಂಧನ ತೈಲ ಮುಂತಾದವುಗಳ ಬೆಲೆ ಏರಿಕೆ ಮಾಡುತ್ತಿದ್ದರೆ, ರಾಜ್ಯ ಸರ್ಕಾರವು ವಿದ್ಯುತ್, ಹಾಲಿನ ಬೆಲೆಯನ್ನು ಏರಿಸುತ್ತಿದೆ. ಉದ್ಯಮಿಗಳಿಗೆ ಲಾಭ ಮಾಡಿಕೊಟ್ಟು ಅವರಿಂದ ಪಕ್ಷಕ್ಕೆ ದೇಣಿಗೆ ಪಡೆಯುವ ದುರುದ್ದೇಶದಿಂದ ಸರ್ಕಾರಗಳು ಈ ರೀತಿ ಮಾಡುತ್ತಿವೆ. ಇದರ ಪರಿಣಾಮವಾಗಿ ಸಾಮಾನ್ಯ ಜನರು ಕಷ್ಟ ಅನುಭವಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಹಿಜಬ್, ಹಲಾಲ್‍ನಿಂದಾಗಿ ಬೆಲೆ ಏರಿಕೆಯ ಗಮನ ದೂರವಾಗಿದೆ: ಶಶಿ ತರೂರ್

    ಕಳ್ಳರು ಜನರ ಗಮನವನ್ನು ಬೇರೆಡೆ ಸೆಳೆದು ಪಿಕ್‍ಪಾಕೆಟ್ ಮಾಡುವಂತೆ, ಬಿಜೆಪಿ ಸರ್ಕಾರವು ಜನರ ಗಮನಗಳನ್ನು ಕೋಮುಸಂಘರ್ಷದತ್ತ ಸೆಳೆದು ಬೆಲೆ ಏರಿಕೆ ಮಾಡುತ್ತಿದೆ. ಇದನ್ನು ಸೂಕ್ತ ರೀತಿಯಲ್ಲಿ ಪ್ರಶ್ನಿಸುವುದರಲ್ಲಿ ಪ್ರತಿಪಕ್ಷಗಳ ಕಾಂಗ್ರೆಸ್, ಜೆಡಿಎಸ್ ವಿಫಲವಾಗಿದೆ. ಆಮ್ ಆದ್ಮಿ ಪಾರ್ಟಿಯು ಜನಸಾಮಾನ್ಯರ ಬಗ್ಗೆ ಕಾಳಜಿ ಹೊಂದಿರುವ ಏಕೈಕ ಪಕ್ಷವಾಗಿದ್ದು, ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರವನ್ನು ಪ್ರಶ್ನಿಸಲಿದ್ದೇವೆ ಎಂದು ಕುಶಲಸ್ವಾಮಿ ಹೇಳಿದ್ದಾರೆ.

    ಆಮ್ ಆದ್ಮಿ ಪಾರ್ಟಿ ವಕ್ತಾರರಾದ ಉಷಾ ಮೋಹನ್ ಮಾತನಾಡಿ, ದೆಹಲಿಯ ಎಎಪಿ ಸರ್ಕಾರವು ರಿಯಾಯಿತಿ ದರ ಅಥವಾ ಉಚಿತವಾಗಿ ಮೂಲ ಸೌಕರ್ಯಗಳನ್ನು ನೀಡಿ ಜನಸಾಮಾನ್ಯರಿಗೆ ನೆರವಾಗುತ್ತಿದೆ. ಅದಕ್ಕೆ ವಿರುದ್ಧವಾಗಿ, ಬಿಜೆಪಿ ಸರ್ಕಾರಗಳು ಜನರ ಬದುಕನ್ನು ಹೈರಾಣಾಗಿಸುತ್ತಿದೆ. ಒಂದೆಡೆ ಭ್ರಷ್ಟಾಚಾರದ ಮೂಲಕ ಜನರ ತೆರಿಗೆ ಹಣವನ್ನು ಲೂಟಿ ಮಾಡಿ, ಮತ್ತೊಂಡೆದೆ ಬೆಲೆ ಏರಿಕೆ ಮೂಲಕ ಜನರ ಉಳಿತಾಯದ ಹಣಕ್ಕೂ ಬಿಜೆಪಿ ಸರ್ಕಾರ ಕನ್ನ ಹಾಕುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಎಲ್ಲ PIL ಗಳನ್ನು ನಾವೇ ವಿಚಾರಣೆ ನಡೆಸುವುದಾದರೆ ಜನ ಸರ್ಕಾರವನ್ನು ಆಯ್ಕೆ ಮಾಡಿರುವುದ್ಯಾಕೆ? – ಸುಪ್ರೀಂಕೋರ್ಟ್ ಗರಂ

    ಅಡುಗೆ ಅನಿಲ, ಖಾದ್ಯ ತೈಲ, ಇಂಧನ ತೈಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಏಪ್ರಿಲ್ 9ರ ಶನಿವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಆಮ್ ಆದ್ಮಿ ಪಾರ್ಟಿ ನಿರ್ಧರಿಸಿದೆ.

    ಪಕ್ಷದ ಮಹಿಳಾ ಮುಖಂಡರಾದ ಸುಹಾಸಿನಿ ಫಣಿರಾಜ್ ಹಾಗೂ ಪಲ್ಲವಿ ಚಿದಂಬರ್ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

  • ಬೇರೆ ಪಕ್ಷಗಳು ಹಣಬಲದಲ್ಲಿ ಶ್ರೀಮಂತ, AAP ವಿಚಾರ ಧಾರೆಯಲ್ಲಿ ಶ್ರೀಮಂತ: ಭಾಸ್ಕರ್ ರಾವ್

    ಬೇರೆ ಪಕ್ಷಗಳು ಹಣಬಲದಲ್ಲಿ ಶ್ರೀಮಂತ, AAP ವಿಚಾರ ಧಾರೆಯಲ್ಲಿ ಶ್ರೀಮಂತ: ಭಾಸ್ಕರ್ ರಾವ್

    ಬೆಂಗಳೂರು: ಬೇರೆ ಪಕ್ಷಗಳಿಗೂ ಆಮ್ ಆದ್ಮಿ ಪಾರ್ಟಿಗೂ ಸಾಕಷ್ಟು ವ್ಯತ್ಯಾಸವಿದೆ. ಬೇರೆ ಪಕ್ಷಗಳು ಹಾಗೂ ಅವುಗಳ ನಾಯಕರು ಹಣಬಲದಲ್ಲಿ ಮಾತ್ರ ಶ್ರೀಮಂತರಾಗಿದ್ದಾರೆ. ನೈತಿಕತೆಯಲ್ಲಿ ಅವರೆಲ್ಲ ಬಡವರು. ಆದರೆ ಆಮ್ ಆದ್ಮಿ ಪಾರ್ಟಿಯು ವಿಚಾರದಲ್ಲಿ ಶ್ರೀಮಂತವಾಗಿದೆ. ಪ್ರಾಮಾಣಿಕತೆ ಹಾಗೂ ಸ್ವಚ್ಛ ರಾಜಕೀಯಕ್ಕೆ ಸಂಬಂಧಿಸಿದ ವಿಚಾರಗಳನ್ನು ಮಾತನಾಡುವ ನೈತಿಕತೆಯನ್ನು ಎಎಪಿ ಉಳಿಸಿಕೊಂಡಿದೆ ಎಂದು ಎಎಪಿ ಮುಖಂಡ ಭಾಸ್ಕರ್ ರಾವ್ ಅಭಿಪ್ರಾಯಪಟ್ಟಿದ್ದಾರೆ.


    ಬೆಂಗಳೂರಿನ ಪ್ರೆಸ್‍ಕ್ಲಬ್ ಸಭಾಂಗಣದಲ್ಲಿ ಮಾತನಾಡಿದ ಭಾಸ್ಕರ್ ರಾವ್, ಕರ್ನಾಟಕಕ್ಕೆ ನೆಲ, ಜಲ, ಸಂಪನ್ಮೂಲಗಳ ಕೊರತೆಯಿಲ್ಲ. ಇವೆಲ್ಲ ಇದ್ದರೂ ಆಡಳಿತಗಾರರ ನಿರ್ಲಕ್ಷ್ಯದಿಂದಾಗಿ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಆಳುವ ರಾಜಕಾರಣಿಗಳು ಸಾಮಾನ್ಯ ಜನರ ಬಗ್ಗೆ ಎಷ್ಟು ನಿರ್ಲಕ್ಷ್ಯ ವಹಿಸುತ್ತಾರೆ ಎನ್ನುವುದನ್ನು ಕೋವಿಡ್ ಸಂದರ್ಭದಲ್ಲಿ ಗಮನಿಸಿದ್ದೇನೆ. ಸರ್ಕಾರದ ಬೊಕ್ಕಸದಿಂದ ಲಕ್ಷ ಕೋಟಿ ರೂಪಾಯಿ ಖರ್ಚಾಗುತ್ತಿದ್ದರೂ, ಜನರಿಗೆ ಮಾತ್ರ ಯಾವುದೇ ಸೌಲಭ್ಯ ಸಿಗುತ್ತಿಲ್ಲ. ಎಲ್ಲ ಹಣವು ಭ್ರಷ್ಟ ರಾಜಕಾರಣಿಗಳ ಪಾಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಗುಡ್ ಬೈ


    ಯಾವ ಸರ್ಕಾರಗಳ ಬಳಿಯೂ ಹಣದ ಕೊರತೆಯಿಲ್ಲ. ಆದರೆ ಪ್ರಾಮಾಣಿಕತೆ ಹಾಗೂ ಇಚ್ಛಾಶಕ್ತಿಯ ಕೊರತೆಯಿದೆ. ದೆಹಲಿಯ ಆಮ್ ಆದ್ಮಿ ಪಾರ್ಟಿ ಸರ್ಕಾರವು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದ್ದರಿಂದಲೇ, ಅಲ್ಲಿ ಭಾರೀ ಪ್ರಮಾಣದ ಹಣ ಉಳಿತಾಯವಾಯಿತು. ಅದನ್ನು ಜನರ ಕಲ್ಯಾಣಕ್ಕೆ ಅಲ್ಲಿನ ಸರ್ಕಾರ ಬಳಸಿಕೊಂಡಿತು. ವಿದ್ಯುತ್, ಗುಣಮಟ್ಟದ ಶಿಕ್ಷಣ, ಕುಡಿಯುವ ನೀರು, ಸಾರಿಗೆ ಮುಂತಾದ ಸೌಲಭ್ಯಗಳನ್ನು ಉಚಿತವಾಗಿ ಕೊಡುವುದರಲ್ಲಿ ದೆಹಲಿ ಸರ್ಕಾರ ಯಶಸ್ವಿಯಾಗಿದೆ ಎಂದರು.

    ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ ಮಾತನಾಡಿ, ಕರ್ನಾಟಕದಲ್ಲಿ ಯಾವಾಗ ಎಎಪಿಯು ಚುನಾವಣೆಗೆ ಸ್ಪರ್ಧಿಸಬೇಕು ಎಂದು ನಾವೆಲ್ಲ ಬಹಳ ವರ್ಷಗಳ ಹಿಂದೆಯೇ ಕೇಜ್ರಿವಾಲ್‍ರವರನ್ನು ಕೇಳುತ್ತಿದ್ದೆವು. ಈ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳಬಾರದು, ಜನರು ತೆಗೆದುಕೊಳ್ಳಬೇಕು ಎಂದು ಕೇಜ್ರಿವಾಲ್ ಉತ್ತರಿಸುತ್ತಿದ್ದರು. ಆ ಸಮಯ ಈಗ ಬಂದಿದ್ದು, ಕರ್ನಾಟಕದ ಜನರು ಎಎಪಿಯತ್ತ ಒಲವು ತೋರುತ್ತಿದ್ದಾರೆ. ಹಿರಿಯ ಅಧಿಕಾರಿಗಳು, ಗಣ್ಯರು ಹಾಗೂ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷ ಸೇರಲು ಬಯಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಲಾಠಿ ಬಿಟ್ಟು ಪೊರಕೆ ಹಿಡಿದಿರುವುದು ಸ್ವಚ್ಛತೆಗಾಗಿಯೇ: ಭಾಸ್ಕರ್ ರಾವ್

    ಆಮ್ ಆದ್ಮಿ ಪಾರ್ಟಿಯ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ, ರಾಜ್ಯ ಸಂಘಟನಾ ಪ್ರಮುಖ ಡಾ. ದಾಮೋದರನ್, ರಾಜ್ಯ ಸಂಘಟನಾ ಕಾರ್ಯದರ್ಶಿ ವಿಜಯ್ ಶರ್ಮ, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಮತ್ತಿತರ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

  • ಲಾಠಿ ಬಿಟ್ಟು ಪೊರಕೆ ಹಿಡಿದಿರುವುದು ಸ್ವಚ್ಛತೆಗಾಗಿಯೇ: ಭಾಸ್ಕರ್ ರಾವ್

    ಲಾಠಿ ಬಿಟ್ಟು ಪೊರಕೆ ಹಿಡಿದಿರುವುದು ಸ್ವಚ್ಛತೆಗಾಗಿಯೇ: ಭಾಸ್ಕರ್ ರಾವ್

    ನವದೆಹಲಿ: ಮೊದಲು ಲಾಠಿ ಹಿಡಿದು ನಗರವನ್ನು ಸ್ವಚ್ಛ ಮಾಡುತ್ತಿದ್ದೆವು. ಈಗ ಪೊರಕೆ ಹಿಡಿದು ಸ್ವಚ್ಛ ಮಾಡುತ್ತೇವೆ ಅಷ್ಟೇ ಎಂದು ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

    ಕೇಜ್ರಿವಾಲ್ ನೇತೃತ್ವದಲ್ಲಿ ಆಪ್ ಸದಸ್ಯತ್ವ ಸ್ವೀಕರಿಸಿದ ಬಳಿಕ ಮಾತನಾಡಿದ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಎಲ್ಲ ರೀತಿಯ ಸಂಪನ್ಮೂಲ ಇದ್ದರೂ ಸ್ವಚ್ಛ ನಾಯಕತ್ವದ ಕೊರತೆಯಿದೆ. ಜನರೂ ಸಹ ಎಲ್ಲ ಪಕ್ಷಗಳನ್ನು ನೋಡಿ ಜಿಗುಪ್ಸೆಗೊಂಡಿದ್ದಾರೆ. ಆಪ್‌ಗೆ ಕರ್ನಾಟಕದಲ್ಲಿ ಉತ್ತಮವಾದ ನೆಲೆಯಿದೆ. ಚಾಮರಾಜನಗರದಿಂದ ಬೀದರ್ ವರೆಗೂ ಲಕ್ಷಾಂತರ ಮಂದಿ ಸೇರಿಕೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಅವರ ನಾಯಕತ್ವ ಮೆಚ್ಚಿ ನಾನೂ ಆಪ್ ಸೇರಿದ್ದೇನೆ ಎಂದು ಹೇಳಿದ್ದಾರೆ. ಇದನೂ ಓದಿ: ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್ ಸೇರಿದ ಭಾಸ್ಕರ್ ರಾವ್ 

    IPS

    ಆಮ್ ಆದ್ಮಿ ಪಕ್ಷದ ಸಾಧನೆಗೆ ದೇಶದೆಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ. ಕರ್ನಾಟಕದಲ್ಲಿ 3 (ಜೆಡಿಎಸ್, ಕಾಂಗ್ರೆಸ್, ಬಿಜೆಪಿ) ಪಕ್ಷಗಳ ಬಗ್ಗೆ ಜನ ಬೇಸರ ಗೊಂಡಿದ್ದಾರೆ. ಆದರೆ ಅರವಿಂದ ಕೇಜ್ರಿವಾಲ್ ಬಗ್ಗೆ ವಿದೇಶಗಳಲ್ಲೂ ಮೆಚ್ಚುಗೆ ವ್ಯಕ್ತವಾಗಿದೆ ಈ ಹಿನ್ನೆಲೆಯಲ್ಲಿ ಆಪ್ ಸೇರಿದ್ದೇನೆ ಎಂದು ಹೇಳಿದ್ದಾರೆ.

    ರಾಜ್ಯದಲ್ಲಿ ೩ ಪಕ್ಷಗಳು ಅಂದರ್ ಬಾಹರ್ ಆಡುತ್ತಿವೆ. ನಾವೂ 30 ವರ್ಷದಿಂದ ಪಕ್ಷದ ಹೊರಗು, ಒಳಗನ್ನು ನೋಡಿದ್ದೇವೆ. ಹಾಗಾಗಿ, ದೆಹಲಿ, ಪಂಜಾಬ್ ರೀತಿ ಕರ್ನಾಟಕದಲ್ಲೂ ಬದಲಾವಣೆ ಆಗಬೇಕಿದೆ. ಜನರೂ ಅದನ್ನು ಬಯಸಿದ್ದಾರೆ ಎಂದಿದ್ದಾರೆ.  ಇದನೂ ಓದಿ: ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿ ಅಪಘಾತದಲ್ಲಿ ಸಾವು

    ದುರಾಡಳಿತದಿಂದ ಅಂತಾರಾಷ್ಟ್ರೀಯ ಮಟ್ಟದ ಬೆಂಗಳೂರು ನಗರ ಬೆಳವಣಿಗೆ ಆಗುತ್ತಿಲ್ಲ. ಎಸಿಬಿ, ಲೋಕಾಯುಕ್ತ ಇದ್ದರೂ ಭ್ರಷ್ಟಾಚಾರ ನಿರ್ಮೂಲನೆ ಆಗುತ್ತಿಲ್ಲ. ಶಾಲೆ, ಆಸ್ಪತ್ರೆ, ಕೆರೆ ಹಾಗೂ ಮೂಲ ಸೌಕರ್ಯಗಳ ಅಭಿವೃದ್ಧಿಯಾಗುತ್ತಿಲ್ಲ. ನಾವು ಕಾರ್ಯಾಂಗದಲ್ಲಿ ಬದಲಾವಣೆ ತರುತ್ತೇವೆ. ಆದರೆ, ಶಾಸಕಾಂಗದಲ್ಲೂ ಬದಲಾವಣೆ ತರುವುದು ಅವಶ್ಯವಾಗಿದೆ ಎಂದು ಹೇಳಿದ್ದಾರೆ.

     

  • ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್ ಸೇರಿದ ಭಾಸ್ಕರ್ ರಾವ್

    ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್ ಸೇರಿದ ಭಾಸ್ಕರ್ ರಾವ್

    ಬೆಂಗಳೂರು: ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ.

    ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಎಎಪಿ ಕಚೇರಿಯಲ್ಲಿ ಇಂದು ಆಪ್ ನಾಯಕ ಹಾಗೂ ದೆಹಲಿಯ ಮುಖ್ಯಮಂತ್ರಿಯೂ ಆಗಿರುವ ಅರವಿಂದ ಕೇಜ್ರಿವಾಲ್ ಅವರಿಂದ ಸದಸ್ಯತ್ವ ಸ್ವೀಕರಿಸಿದ್ದಾರೆ.

    IPS

    ಈ ಸಂದರ್ಭದಲ್ಲಿ ಮನೀಶ್ ಸಿಸೋಡಿಯಾ ಮತ್ತಿತರ ನಾಯಕರು ಉಪಸ್ಥಿತರಿದ್ದರು. ಇದನ್ನೂ ಓದಿ: ವಿಶ್ವಕಪ್‍ನಲ್ಲಿ ದಾಖಲೆ ಬರೆದ ಮಿಚೆಲ್ ಸ್ಟಾರ್ಕ್, ಅಲಿಸ್ಸಾ ಹೀಲಿ ದಂಪತಿ

    ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ಸ್ವಯಂ ನಿವೃತ್ತಿ ಕೋರಿ ಸೆಪ್ಟೆಂಬರ್ 2021ರಲ್ಲಿ ಭಾಸ್ಕರ್ ರಾವ್ ರಾಜೀನಾಮೆ ಸಲ್ಲಿಸಿದ್ದರು. ನಿರ್ಧಾರ ಪುನರ್ ಪರಿಶೀಲನೆಗೆ ಕೇಂದ್ರ ಗೃಹ ಸಚಿವಾಲಯ ಅವಕಾಶ ನೀಡಿತ್ತು. ಆದರೆ ಈ ನಿರ್ಧಾರದಿಂದ ಹಿಂದೆ ಸರಿಯದ ಹಿನ್ನೆಲೆಯಲ್ಲಿ ಸರ್ಕಾರ ರಾಜೀನಾಮೆ ಅಂಗೀಕರಿಸಿತ್ತು.

    1954ರಂದು ಜನಿಸಿದ ಭಾಸ್ಕರ್ ರಾವ್ ಅವರು 2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಆಂತರಿಕ ಭದ್ರತಾ ವಿಭಾಗದಲ್ಲಿ ಕೂಡ ಕೆಲಸ ನಿರ್ವಹಿಸಿದ್ದರು.

     

  • ಸೋಮವಾರ ಆಪ್‌ ಧ್ವಜ ಹಿಡಿಯಲಿದ್ದಾರೆ ಭಾಸ್ಕರ್‌ ರಾವ್‌

    ಸೋಮವಾರ ಆಪ್‌ ಧ್ವಜ ಹಿಡಿಯಲಿದ್ದಾರೆ ಭಾಸ್ಕರ್‌ ರಾವ್‌

    ಬೆಂಗಳೂರು: ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ ಸೋಮವಾರ ಆಮ್ ಆದ್ಮಿ ಪಕ್ಷವನ್ನು ಸೇರಲಿದ್ದಾರೆ.

    ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಎಎಪಿ ಕಚೇರಿಯಲ್ಲಿ ಸೋಮವಾರ ಮಧ್ಯಾಹ್ನ ಅವರು ಆಪ್‌ ಪಕ್ಷದ ಧ್ವಜ ಹಿಡಿಯಲಿದ್ದಾರೆ. ಈ ಸಂದರ್ಭದಲ್ಲಿ ಮನೀಶ್ ಸಿಸೋಡಿಯಾ ಮತ್ತಿತರ ನಾಯಕರು ಉಪಸ್ಥಿತರಿರುವ ಸಾಧ್ಯತೆಯಿದೆ.  ಇದನ್ನೂ ಓದಿ: ವಿಶ್ವಕಪ್‍ನಲ್ಲಿ ದಾಖಲೆ ಬರೆದ ಮಿಚೆಲ್ ಸ್ಟಾರ್ಕ್, ಅಲಿಸ್ಸಾ ಹೀಲಿ ದಂಪತಿ

    ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ಸ್ವಯಂ ನಿವೃತ್ತಿ ಕೋರಿ ಸೆಪ್ಟೆಂಬರ್ 2021ರಲ್ಲಿ ಭಾಸ್ಕರ್ ರಾವ್ ರಾಜೀನಾಮೆ ಸಲ್ಲಿಸಿದ್ದರು. ನಿರ್ಧಾರ ಪುನರ್ ಪರಿಶೀಲನೆಗೆ ಕೇಂದ್ರ ಗೃಹ ಸಚಿವಾಲಯ ಅವಕಾಶ ನೀಡಿತ್ತು. ಆದರೆ ಈ ನಿರ್ಧಾರದಿಂದ ಹಿಂದೆ ಸರಿಯದ ಹಿನ್ನೆಲೆಯಲ್ಲಿ ಸರ್ಕಾರ ರಾಜೀನಾಮೆಯನ್ನು ಅಂಗೀಕರಿಸಿತ್ತು. ಇದನ್ನೂ ಓದಿ: ಮಹಾರಾಷ್ಟ್ರದ ಹಳ್ಳಿಗೆ ಆಕಾಶದಿಂದ ಬಿತ್ತು ವಸ್ತು – ಚೀನಾದ ರಾಕೆಟ್ ಬಗ್ಗೆ ಅನುಮಾನ

    1954ರಂದು ಜನಿಸಿದ ಭಾಸ್ಕರ್ ರಾವ್ ಅವರು 2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಆಂತರಿಕ ಭದ್ರತಾ ವಿಭಾಗದಲ್ಲಿ ಕೂಡ ಕೆಲಸ ನಿರ್ವಹಿಸಿದ್ದರು.

  • ಬಿಜೆಪಿಯವರಿಗೆ ದುರಹಂಕಾರ, ಎಎಪಿಗೆ ಒಂದು ಚಾನ್ಸ್ ಕೊಡಿ: ಗುಜರಾತ್ ಜನತೆಗೆ ಕೇಜ್ರಿವಾಲ್ ಮನವಿ

    ಬಿಜೆಪಿಯವರಿಗೆ ದುರಹಂಕಾರ, ಎಎಪಿಗೆ ಒಂದು ಚಾನ್ಸ್ ಕೊಡಿ: ಗುಜರಾತ್ ಜನತೆಗೆ ಕೇಜ್ರಿವಾಲ್ ಮನವಿ

    ಗಾಂಧಿನಗರ: ಪಂಜಾಬ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತವರು ಗುಜರಾತ್‌ನತ್ತ ತನ್ನ ಗಮನವನ್ನು ಹರಿಸಿದೆ.

    ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್‌ರೊಂದಿಗೆ ಕೇಜ್ರಿವಾಲ್ ಶನಿವಾರ ಅಹಮದಾಬಾದ್‌ನ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದರು. ಬಳಿಕ ಎಎಪಿ ತಿರಂಗ ಯಾತ್ರೆ (ರೋಡ್‌ಶೋ) ನಡೆಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಕೇಜ್ರಿವಾಲ್, ಬಿಜೆಪಿ ಗುಜರಾತ್‌ನಲ್ಲಿ ಕಳೆದ 25 ವರ್ಷಗಳಿಂದ ಅಧಿಕಾರದಲ್ಲಿದೆ. ಆದರೆ ಇಲ್ಲಿನ ಭ್ರಷ್ಟಾಚಾರ ಇಂದಿನವರೆಗೂ ಕೊನೆಯಾಗಿಲ್ಲ. ನಾನು ಯಾವುದೇ ಪಕ್ಷವನ್ನು ಟೀಕಿಸಲು ಇಲ್ಲಿಗೆ ಬಂದಿಲ್ಲ. ಬಿಜೆಪಿ ಅಥವಾ ಕಾಂಗ್ರೆಸ್ ಅನ್ನು ಸೋಲಿಸುವುದೂ ನನ್ನ ಗುರಿಯಲ್ಲ. ನಾನಿಲ್ಲಿಗೆ ಬಂದಿರುವ ಉದ್ದೇಶ ಗುಜರಾತ್ ಅನ್ನು ಗೆಲ್ಲಿಸುವುದು, ಗುಜರಾತಿಗಳನ್ನು ಗೆಲ್ಲಿಸುವುದು ಹಾಗೂ ಭ್ರಷ್ಟಾಚಾರವನ್ನು ಕೊನೆಗಾಣಿಸುವುದು ಎಂದರು. ಇದನ್ನೂ ಓದಿ: ಗಾಂಧೀಜಿ ಆಶ್ರಮದಲ್ಲಿ ಚರಕ ಹಿಡಿದು ನೂಲು ತೆಗೆದ, ಭಗವಂತ್ ಮಾನ್, ಕೇಜ್ರಿವಾಲ್

     

    25 ವರ್ಷಗಳ ಅಧಿಕಾರದ ಬಳಿಕ ಬಿಜೆಪಿ ದುರಹಂಕಾರದಿಂದ ಕೂಡಿದೆ. ಇನ್ನು ಮುಂದೆ ಅವರು ಜನರ ಮಾತು ಕೇಳುವುದಿಲ್ಲ. ದೆಹಲಿಯ ಜನರು ಆಮ್ ಆದ್ಮಿಗೆ ಅವಕಾಶ ನೀಡಿದ್ದಾರೆ. ಬಳಿಕ ಪಂಜಾಬ್ ಕೂಡಾ ಆಮ್ ಆದ್ಮಿಗೆ ಅವಕಾಶ ನೀಡಿದೆ. ಇದೀಗ ನಿಮ್ಮ ಸರದಿ. ನಮಗೆ ಒಂದು ಬಾರಿ ಅವಕಾಶ ನೀಡಿ. ಒಂದು ವೇಳೆ ನಿಮಗೆ ನಮ್ಮ ಆಡಳಿತ ಇಷ್ಟವಾಗಿಲ್ಲ ಎಂದರೆ ಮುಂದಿನ ಬಾರಿ ಬದಲಾಯಿಸಿ. ನೀವು ಒಂದು ಸಲ ಎಎಪಿ ಪಕ್ಷಕ್ಕೆ ಅವಕಾಶ ನೀಡಿದರೆ ಉಳಿದ ಎಲ್ಲಾ ಪಕ್ಷಗಳನ್ನು ಮರೆತುಬಿಡುತ್ತೀರಿ ಎಂದು ಕೇಜ್ರಿವಾಲ್ ಭಾಷಣದಲ್ಲಿ ತಿಳಿಸಿದರು. ಇದನ್ನೂ ಓದಿ: ಅಯೋಧ್ಯೆ ದೇವಾಲಯಗಳಿಗೆ ತೆರಿಗೆ ವಿನಾಯ್ತಿ: ಯೋಗಿ ಆದಿತ್ಯನಾಥ್

    ಪಂಚರಾಜ್ಯ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ ಅಧಿಕಾರ ಗಟ್ಟಿಸಿಕೊಂಡಿರುವ ಎಎಪಿ ಇದೀಗ ಪಕ್ಕದ ಗುಜರಾತ್ ಕಡೆ ತನ್ನ ದೃಷ್ಟಿ ನೆಟ್ಟಿದೆ. ಮುಂಬರುವ ಗುಜರಾತ್ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಎಎಪಿ ಈಗಿನಿಂದಲೇ ಜನರ ಗಮನ ಸೆಳೆಯುವ ಕೆಲಸ ಮಾಡುತ್ತಿದೆ.