Tag: aap

  • ಆರೋಗ್ಯ ಕೇಂದ್ರವನ್ನು ನಿರಾಶ್ರಿತರ ಕೇಂದ್ರವನ್ನಾಗಿಸುತ್ತಿರುವ ಎಸ್.ಆರ್.ವಿಶ್ವನಾಥ್ ವಿರುದ್ಧ AAP ಆಕ್ರೋಶ

    ಆರೋಗ್ಯ ಕೇಂದ್ರವನ್ನು ನಿರಾಶ್ರಿತರ ಕೇಂದ್ರವನ್ನಾಗಿಸುತ್ತಿರುವ ಎಸ್.ಆರ್.ವಿಶ್ವನಾಥ್ ವಿರುದ್ಧ AAP ಆಕ್ರೋಶ

    ಬೆಂಗಳೂರು: ದೊಡ್ಡಬೆಟ್ಟಹಳ್ಳಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನಿರಾಶ್ರಿತರ ಕೇಂದ್ರವನ್ನಾಗಿ ಪರಿವರ್ತಿಸುತ್ತಿರುವ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ನಡೆಗೆ ಆಮ್ ಆದ್ಮಿ ಪಾರ್ಟಿ (AAP) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

    ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬೆಂಗಳೂರು ಎಎಪಿ ಉಪಾಧ್ಯಕ್ಷರಾದ ಬಿ.ಟಿ.ನಾಗಣ್ಣ, ಯಲಹಂಕ ವಿಧಾನಸಭಾ ಕ್ಷೇತ್ರದ ದೊಡ್ಡಬೆಟ್ಟಹಳ್ಳಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವು ಮೂರೂವರೆ ವರ್ಷಗಳಿಂದ ಮುಚ್ಚಲ್ಪಟ್ಟಿತ್ತು. ಸ್ಥಳೀಯರ ಅಪೇಕ್ಷೆಯಂತೆ ಆಮ್ ಆದ್ಮಿ ಪಾರ್ಟಿಯು ಇದನ್ನು ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತಂದು, ಆರೋಗ್ಯ ಕೇಂದ್ರವನ್ನು ಪುನರಾರಂಭಿಸಬೇಕು ಎಂದು ಒತ್ತಾಯಿಸಿತ್ತು. ಪಾಳು ಬಿದ್ದಿದ್ದ ಕಟ್ಟಡವನ್ನು ಸ್ವಚ್ಛಗೊಳಿಸಿ ಕೊಟ್ಟಿದ್ದೆವು. ಆದರೆ ಈಗ ಆರೋಗ್ಯ ಕೇಂದ್ರವನ್ನು ತೆರೆಯುವ ಬದಲು ಅದನ್ನು ನಿರಾಶ್ರಿತರ ಕೇಂದ್ರವನ್ನಾಗಿ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಬೆಳಗ್ಗೆ 3-4 ಗಂಟೆಯವರೆಗೆ ನನ್ನ ಮಕ್ಕಳ ಹೋಮ್ ವರ್ಕ್ ಮಾಡಿಸುತ್ತಿದ್ದೆ: ಪ್ರಿಯಾಂಕಾ ಗಾಂಧಿ

    ಶಾಸಕ ಎಸ್.ಆರ್.ವಿಶ್ವನಾಥ್‍ರವರು ಈ ವಿಚಾರವನ್ನು ರಾಜಕೀಯ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಆರೋಗ್ಯ ಕೇಂದ್ರ ಪುನರಾರಂಭಿಸಿದರೆ ಆಮ್ ಆದ್ಮಿ ಪಾರ್ಟಿಯ ಆಗ್ರಹಕ್ಕೆ ಮನ್ನಣೆ ಸಿಕ್ಕಂತಾಗುತ್ತದೆ ಎಂಬ ಒಂದೇ ಒಂದು ಕಾರಣಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ. ಅವರ ಕೀಳುಮಟ್ಟದ ರಾಜಕೀಯದಿಂದಾಗಿ ದೊಡ್ಡಬೆಟ್ಟಹಳ್ಳಿ ಹಾಗೂ ಸುತ್ತಮುತ್ತಲಿನ ಜನರು ಆರೋಗ್ಯ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಕೋವಿಡ್ ಆತಂಕದ ಸಂದರ್ಭದಲ್ಲೂ ರೋಗಿಗಳು ನೂರು ರೂಪಾಯಿಗೂ ಹೆಚ್ಚು ಖರ್ಚು ಮಾಡಿಕೊಂಡು ದೂರದ ಆಸ್ಪತ್ರೆಗಳಿಗೆ ಪ್ರಯಾಣಿಸಬೇಕಾಗಿದೆ ಎಂದು ಬಿ.ಟಿ.ನಾಗಣ್ಣ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಕ್ರಮವಾಗಿ ಒತ್ತುವರಿಯಾಗಿದ್ದ ಜಾಗ ಶಾಲೆಗೆ ವಾಪಸ್ – ತಹಶೀಲ್ದಾರ್‌ಗೆ ಗ್ರಾಮಸ್ಥರಿಂದ ಅಭಿನಂದನೆ

    ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸುಹಾಸಿನಿ ಫಣಿರಾಜ್ ಮಾತನಾಡಿ, ಸ್ಥಳೀಯ ಶಾಸಕರನ್ನು ಎದುರುಹಾಕಿಕೊಂಡು ಆರೋಗ್ಯ ಕೇಂದ್ರ ಮುಂದುವರಿಸಲು ಸಾಧ್ಯವಿಲ್ಲವೆಂದು ಬಿಬಿಎಂಪಿ ಅಧಿಕಾರಿಗಳು ಹೇಳುತ್ತಿದ್ದಾರೆ. ಶಾಸಕರಿಗೆ ಹೆದರಿ ಕೆಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾದ ಸ್ಥಿತಿಯಲ್ಲಿ ಅಧಿಕಾರಿಗಳಿರುವುದು ನಿಜಕ್ಕೂ ದುರಂತ. ಬಡ ಹಾಗೂ ಮಧ್ಯಮ ವರ್ಗದ ಜನರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲದ ರಾಜಕಾರಣಿ ಎಂದರೆ ಅದು ಎಸ್.ಆರ್.ವಿಶ್ವನಾಥ್. ಸುಮಾರು 4 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಆರೋಗ್ಯ ಕೇಂದ್ರದಿಂದ ಜನರಿಗೆ ಯಾವುದೇ ಲಾಭ ಸಿಗದಂತೆ ಮಾಡುತ್ತಿದ್ದಾರೆ. ಬಿಡಿಎಯಲ್ಲಿ ಭ್ರಷ್ಟಾಚಾರ ಮಾಡುವುದಕ್ಕಷ್ಟೇ ಅವರು ಯೋಗ್ಯರು. ಇದನ್ನು ಆರೋಗ್ಯ ಕೇಂದ್ರವನ್ನಾಗಿಯೇ ಮುಂದುವರಿಸಿ, ನಿರಾಶ್ರಿತರ ಕೇಂದ್ರವನ್ನು ಬೇರೆಡೆ ತೆರೆಯಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: UP Election- 30 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

    ಯಲಹಂಕ ವಿಧಾನಸಭಾ ಕ್ಷೇತ್ರದ ಎಎಪಿ ಮುಖಂಡರಾದ ನಿತಿನ್ ರೆಡ್ಡಿ ಹಾಗೂ ಸ್ಥಳೀಯ ನಾಯಕರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

  • ಆರೋಪಿಗಳ ರಕ್ಷಣೆಗೆ ಲಂಚ – ರವಿ ಡಿ.ಚನ್ನಣ್ಣನವರ್ ಅಮಾನತಿಗೆ AAP ಆಗ್ರಹ

    ಆರೋಪಿಗಳ ರಕ್ಷಣೆಗೆ ಲಂಚ – ರವಿ ಡಿ.ಚನ್ನಣ್ಣನವರ್ ಅಮಾನತಿಗೆ AAP ಆಗ್ರಹ

    ಬೆಂಗಳೂರು: ಅಕ್ರಮ ಮರಳು ದಂಧೆ ಪ್ರಕರಣವನ್ನು ಮುಚ್ಚಿ ಹಾಕಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್‌ರನ್ನು ಅಮಾನತು ಮಾಡಿ, ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ ಆಗ್ರಹಿಸಿದ್ದಾರೆ.

    ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಜಗದೀಶ್ ವಿ ಸದಂ, ಕ್ರಷರ್ ಉದ್ಯಮಿ ಸೇರಿ ಹಲವರಿಂದ 3.96 ಕೋಟಿ ಮೊತ್ತ ವಂಚನೆಯಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರನ್ನು ಆಧರಿಸಿ ಆರೋಪಿಗಳ ವಿರುದ್ಧ ರವಿ ಡಿ.ಚನ್ನಣ್ಣನವರ್ ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಬೇಕಾಗಿತ್ತು. ಆದರೆ ಬೇಲಿಯೇ ಎದ್ದು ಹೊಲ ಮೇಯ್ತು ಎಂಬ ಗಾದೆಯಂತೆ, ಪೊಲೀಸ್ ಅಧಿಕಾರಿಗಳೇ ಆರೋಪಿಗಳಿಂದ 50 ಲಕ್ಷ ರೂ. ಲಂಚ ಪಡೆದಿರುವ ಆರೋಪ ಕೇಳಿಬಂದಿದೆ. ಇಂತಹ ಗಂಭೀರ ಆರೋಪ ಹೊತ್ತಿರುವ ರವಿ ಡಿ.ಚನ್ನಣ್ಣನವರ್ ಸಿಐಡಿ ಎಸ್‍ಪಿ ಹುದ್ದೆಯಲ್ಲಿ ಮುಂದುವರಿಯುವುದು ಸರಿಯಲ್ಲ. ತಕ್ಷಣವೇ ಅಮಾನತು ಮಾಡಿ ಸಮಗ್ರ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಮೋದಿಯ ಮೆಚ್ಚುಗೆಗೆ ಪಾತ್ರವಾಗಿದ್ದ ಕಾಮೇಗೌಡರ ಸಾಮಾಜಿಕ ಸೇವೆಗೆ ಅಧಿಕಾರಿಗಳು ಅಡ್ಡಿ

    ಪ್ರಕರಣ ಸಂಬಂಧ ಮಂಜುನಾಥ್ ಎಂಬುವವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ರವಿ ಚನ್ನಣ್ಣನವರ್ 25 ಲಕ್ಷ, ಡಿವೈಎಸ್‍ಪಿ 15 ಲಕ್ಷ ಹಾಗೂ ಮತ್ತೊಬ್ಬ ಅಧಿಕಾರಿ 10 ಲಕ್ಷ ರೂಪಾಯಿ ಸ್ವೀಕರಿಸಿರುವ ಕುರಿತು ದೂರಿನಲ್ಲಿ ಸ್ಪಷ್ವವಾಗಿ ಉಲ್ಲೇಖಿಸಿದ್ದಾರೆ. ಪ್ರಭಾವಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲು ಕೂಡ ಪೊಲೀಸ್ ಅಧಿಕಾರಿಗಳು ಲಕ್ಷಗಟ್ಟಲೆ ಲಂಚ ಕೇಳಿರುವ ಮಾಹಿತಿ ದೂರಿನಲ್ಲಿದೆ. ಆರೋಪಗಳಿಗೆ ಸಂಬಂಧಿಸಿ ಧ್ವನಿ ಮುದ್ರಣ, ವಾಟ್ಸಪ್ ಸಂದೇಶ ಮುಂತಾದ ಸಾಕ್ಷಿಗಳಿವೆ ಎಂದು ಮಂಜುನಾಥ್ ಹೇಳಿದ್ದಾರೆ. ಅವೆಲ್ಲದರ ಆಧಾರದಲ್ಲಿ ತನಿಖೆ ನಡೆಸಿ, ನೈಸರ್ಗಿಕ ಸಂಪತ್ತನ್ನು ಕೊಳ್ಳೆ ಹೊಡೆದವರಿಗೆ ಹಾಗೂ ಅವರನ್ನು ರಕ್ಷಣೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾಚಿಕೆಗೇಡಿನ ಶಿಕ್ಷಣ ಸಚಿವ: ಬಿ.ಸಿ.ನಾಗೇಶ್ ವಿರುದ್ಧ ಹೆಚ್.ಡಿ.ರೇವಣ್ಣ ಕಿಡಿ

  • ಖಾಸಗಿ ಲ್ಯಾಬ್‍ಗಳಲ್ಲೂ ಉಚಿತ ಆರ್‌ಟಿ-ಪಿಸಿಆರ್  ಪರೀಕ್ಷೆಗೆ ಎಎಪಿ ಆಗ್ರಹ

    ಖಾಸಗಿ ಲ್ಯಾಬ್‍ಗಳಲ್ಲೂ ಉಚಿತ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಎಎಪಿ ಆಗ್ರಹ

    ಬೆಂಗಳೂರು: ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆ ಎಂಬ ಭೇದವಿಲ್ಲದೇ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಎಲ್ಲೆಡೆ ಉಚಿತವಾಗಿ ಮಾಡಬೇಕು ಎಂದು ಆಮ್ ಆದ್ಮಿ ಪಾರ್ಟಿ ಆಗ್ರಹಿಸಿದೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ವೈದ್ಯರ ಘಟಕದ ಅಧ್ಯಕ್ಷರಾದ ಬಿ.ಎಲ್.ವಿಶ್ವನಾಥ್, ಶೇ.75ಕ್ಕೂ ಹೆಚ್ಚು ಬೆಂಗಳೂರಿಗರು ಖಾಸಗಿ ಆಸ್ಪತ್ರೆಗಳು ಅಥವಾ ಲ್ಯಾಬೊರೇಟರಿಗಳ ಮೇಲೆ ಅವಲಂಬಿತರಾಗಿದ್ದಾರೆ. ಸಮೀಪದಲ್ಲಿ ಸರ್ಕಾರಿ ಆಸ್ಪತ್ರೆಯಿಲ್ಲದ ಕಾರಣಕ್ಕೆ ಬಡವರು ಹಾಗೂ ಮಧ್ಯಮ ವರ್ಗದವರೂ ಖಾಸಗಿ ಮೊರೆ ಹೋಗಬೇಕಾಗಿದೆ. ಖಾಸಗಿ ಲ್ಯಾಬೊರೇಟರಿಗಳು 500 ರೂ. ಪರೀಕ್ಷಾ ಶುಲ್ಕ ಹಾಗೂ 300 ರೂ.ವರೆಗೆ ಇತರೆ ಶುಲ್ಕ ಸೇರಿ 800 ರೂಪಾಯಿವರೆಗೂ ವಸೂಲಿ ಮಾಡುತ್ತಿವೆ. ಎಲ್ಲೆಡೆಯು ಉಚಿತ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಸರ್ಕಾರವು ವ್ಯವಸ್ಥೆ ಕಲ್ಪಿಸಿ ಜನರಿಗೆ ನೆರವಾಗಬೇಕು ಎಂದು ಒತ್ತಯಿಸಿದರು. ಇದನ್ನೂ ಓದಿ: ಪಾದಯಾತ್ರೆ ಕೈ ಬಿಡುವಂತೆ ಸಿದ್ದರಾಮಯ್ಯ, ಡಿಕೆಶಿಗೆ ಸಿಎಂ ಬೊಮ್ಮಾಯಿ ಪತ್ರ

    ಕೋವಿಡ್ ಟೆಸ್ಟಿಂಗ್ ಕಿಟ್‍ಗಳನ್ನು ಸರ್ಕಾರವು ಖಾಸಗಿ ಆಸ್ಪತ್ರೆಗಳ ಮೂಲಕವೂ ಉಚಿತವಾಗಿ ವಿತರಿಸಬೇಕು. ಇದರಿಂದ ಟೆಸ್ಟಿಂಗ್ ಪ್ರಮಾಣ ಹೆಚ್ಚಾಗಿ ಕೋವಿಡ್ ರೋಗಿಗಳ ನಿಜವಾದ ಸಂಖ್ಯೆ ತಿಳಿಯಲಿದೆ. ಮೂರನೇ ಅಲೆಯಲ್ಲಿ ಐಸಿಯುಗಳಿಗಿಂತ ಹೊರ ರೋಗ ಚಿಕಿತ್ಸಾ ವಿಭಾಗದ ಅವಶ್ಯಕತೆ ಹೆಚ್ಚಿದ್ದು, ಸರ್ಕಾರ ಈ ನಿಟ್ಟಿನಲ್ಲಿ ವ್ಯವಸ್ಥೆ ಕಲ್ಪಿಸಿಕೊಳ್ಳಬೇಕು. ಕೋವಿಡ್ ರೋಗಿಗಳ ಸಿಆರ್‌ಪಿ ಡಿ ಡೈಮರ್ ರಕ್ತ ಪರೀಕ್ಷೆಗೆ ಕೆಲವು ಲ್ಯಾಬೊರೇಟರಿಗಳಲ್ಲಿ 2,500ವರೆಗೆ ಬಿಲ್ ಮಾಡಲಾಗುತ್ತಿದೆ. ಸರ್ಕಾರ ಇದಕ್ಕೆ ರಿಯಾಯಿತಿ ದರದಲ್ಲಿ ನಿರ್ದಿಷ್ಟ ಮೊತ್ತವನ್ನು ನಿಗದಿ ಪಡಿಸಬೇಕು ಎಂದು ಆಗ್ರಹಿಸಿದರು.

    ಕೋವಿಡ್‍ಗೆ ಐವರ್‌ಮೆಕ್ಟಿನ್ ಹಾಗೂ ಡಾಕ್ಸಿಸೈಕ್ಲಿನ್ ಮಾತ್ರೆಗಳು ಔಷಧಿಗಳೆಂದು ಸಾಬೀತಾಗಿಲ್ಲ. ಆ ಮಾತ್ರೆಗಳಿಂದ ತೀವ್ರ ಗ್ಯಾಸ್ಟ್ರಿಕ್ ಹಾಗೂ ವಾಂತಿ ಆಗುವ ಸಾಧ್ಯತೆಯಿದೆ. ಕೇಂದ್ರ ಆರೋಗ್ಯ ಸಚಿವಾಲಯವು ಅವುಗಳನ್ನು ಆರು ತಿಂಗಳ ಹಿಂದೆಯೇ ಪಟ್ಟಿಯಿಂದ ಕೈಬಿಟ್ಟಿದೆ. ಆದರೆ ಈಗಲೂ ಆ ಮಾತ್ರೆಗಳಿರುವ ಕಿಟ್‍ಗಳನ್ನು ಬಿಬಿಎಂಪಿ ವಿತರಿಸುತ್ತಿದೆ. ಜನರ ಆರೋಗ್ಯದ ವಿಚಾರದಲ್ಲಿ ಬಿಬಿಎಂಪಿ ಎಷ್ಟು ನಿರ್ಲಕ್ಷ್ಯ ವಹಿಸುತ್ತಿದೆ ಎಂಬುದು ಇದರಿಂದಲೇ ತಿಳಿಯುತ್ತದೆ ಎಂದು ವೈದ್ಯ ಘಟಕದ ಡಾ.ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರಕ್ಕೆ ನಿಷೇಧ

  • ಆಪ್‌ಗೆ ಶಾಕ್‌ – ಚಂಡೀಗಢದಲ್ಲಿ 12 ಸ್ಥಾನ ಗೆದ್ದ ಬಿಜೆಪಿಗೆ ಮೇಯರ್‌ ಪಟ್ಟ

    ಆಪ್‌ಗೆ ಶಾಕ್‌ – ಚಂಡೀಗಢದಲ್ಲಿ 12 ಸ್ಥಾನ ಗೆದ್ದ ಬಿಜೆಪಿಗೆ ಮೇಯರ್‌ ಪಟ್ಟ

    – ಮೇಯರ್‌ ಚುನಾವಣೆಯಲ್ಲಿ ಭಾರೀ ಹೈಡ್ರಾಮಾ
    – ತಲಾ 14 ಮತಗಳನ್ನು ಪಡೆದಿದ್ದ ಬಿಜೆಪಿ, ಆಪ್‌ ಅಭ್ಯರ್ಥಿಗಳು

    ಚಂಡೀಗಢ: ಪಾಲಿಕೆಯ ಒಟ್ಟು 35 ಸ್ಥಾನಗಳ ಪೈಕಿ 12 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಚಂಡೀಗಢ ಮೇಯರ್‌ ಚುನಾವಣೆಯ ವೇಳೆ ಮ್ಯಾಜಿಕ್‌ ಮಾಡಿದ್ದು ಮತ್ತೆ ಅಧಿಕಾರದ ಗದ್ದುಗೆ ಏರಿದೆ.

    ಇಂದು ನಡೆದ ಮೇಯರ್‌ ಚುನಾವಣೆಯಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಆಪ್‌ ಮತ್ತು ಬಿಜೆಪಿ ಅಭ್ಯರ್ಥಿಗಳು ತಲಾ 14 ಮತಗಳನ್ನು ಪಡೆದಿದ್ದರು. ಆದರೆ ಕೊನೆಯಲ್ಲಿ ಆಪ್‌ ಪರ ಚಲಾವಣೆಯಾದ ಮತ ಅಸಿಂಧು ಎಂದು ಘೋಷಣೆಯಾದ ಹಿನ್ನೆಲೆಯಲ್ಲಿ ಬಿಜೆಪಿಯ ಕೌನ್ಸಿಲರ್ ಸರಬ್ಜಿತ್ ಕೌರ್ ಮೇಯರ್‌ ಆಗಿ ಆಯ್ಕೆಯಾಗಿದ್ದಾರೆ. ಮೇಯರ್‌ ಅಲ್ಲದೇ ಬಿಜೆಪಿಯ ದಲೀಪ್‌ ಶರ್ಮಾ ಸೀನಿಯರ್‌ ಡೆಪ್ಯೂಟಿ ಮೇಯರ್‌, ಅನೂಪ್‌ ಗುಪ್ತಾ ಡೆಪ್ಯೂಟಿ ಮೇಯರ್‌ ಆಗಿ ಆಯ್ಕೆ ಆಗಿದ್ದಾರೆ.

    ಪಾಲಿಕೆಯ 35 ವಾರ್ಡ್‌ಗಳಿಗೆ ಗಳಿಗೆ ನಡೆದ ಚುನಾವಣೆ ಫಲಿತಾಂಶ ಡಿಸೆಂಬರ್ 27 ರಂದು ಪ್ರಕಟವಾಗಿತ್ತು. ಅದರಲ್ಲಿ ಆಮ್ ಆದ್ಮಿ ಪಕ್ಷ 14 ಮತ್ತು ಬಿಜೆಪಿ 12 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಕಾಂಗ್ರೆಸ್ ಎಂಟು ಮತ್ತು ಶಿರೋಮಣಿ ಅಕಾಲಿ ದಳ ಒಂದು ಸ್ಥಾನ ಪಡೆದಿತ್ತು. ಫಲಿತಾಂಶದ ಬಳಿಕ ಕಾಂಗ್ರೆಸ್ ಕೌನ್ಸಿಲರ್ ಹರ್ಪೀತ್ ಕೌರ್ ಬಬ್ಲಾ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

    35 ಕಾನ್ಸಿಲರ್ ಗಳಲ್ಲದೆ ಮುನ್ಸಿಪಲ್ ಕಾರ್ಪೋರೇಷನ್ ನಲ್ಲಿ ಪದನಿಮಿತ್ತ ಸದಸ್ಯರಾಗಿರುವ ಚಂಡೀಗಢದ ಬಿಜೆಪಿ ಸಂಸದೆ ಕಿರಣ್‌ ಖೇರ್‌ ಮತದಾನದ ಹಕ್ಕನ್ನು ಹೊಂದಿದ್ದರು.

    ಇಂದು ಏನಾಯ್ತು?
    ಇಂದು ನಡೆದ ಮೇಯರ್‌ ಚುನಾವಣೆಯ ಒಟ್ಟು 36 ಮತಗಳಲ್ಲಿ 28 ಮತ ಮಾತ್ರ ಚಲಾವಣೆಯಾಗಿತ್ತು. ಏಳು ಕಾಂಗ್ರೆಸ್ ಕೌನ್ಸಿಲರ್ ಗಳು ಮತ್ತು ಶಿರೋಮಣಿ ಅಕಾಲಿದಳದ ಏಕೈಕ ಕೌನ್ಸಿಲರ್ ಗೈರಾಗಿದ್ದರು. ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ ಶಿವರಾಜ್‌ ಕುಮಾರ್‌

    ಬಿಜೆಪಿ ಮೇಯರ್‌ ಅಭ್ಯರ್ಥಿ ಪರವಾಗಿ ಸಂಸದೆ ಕಿರಣ್‌ ಖೇರ್‌ ಮತದಾನ ಮಾಡಿದ್ದರಿಂದ 14 ಮತಗಳು ಬಿದ್ದಿತ್ತು. ಒಂದು ವೋಟ್‌ ಅಂಸಿಂಧುಗೊಂಡಿದ್ದರಿಂದ ಆಪ್‌ ಅಭ್ಯರ್ಥಿ ಕತ್ಯಾಲ್ 13 ಮತಗಳನ್ನು ಮಾತ್ರ ಪಡೆದರು. ಫಲಿತಾಂಶ ಪ್ರಕಟವಾದ ನಂತರ ಎಎಪಿ ಸದಸ್ಯರು ಗದ್ದಲ ನಡೆಸಿದ್ದರು. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಇದನ್ನೂ ಓದಿ: ಪ್ರೋಮೋ ಶೇರ್ ಮಾಡಿ ಸಚಿನ್ ತಂಡವನ್ನು ಕ್ಷಮೆಯಾಚಿಸಿದ ಬಿಗ್ ಬಿ

    ಪಂಜಾಬ್‌ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮತ್ತು ಅಕಾಲಿ ದಳ ಮೇಯರ್‌ ಚುನಾವಣೆಯಲ್ಲಿ ಯಾರಿಗೆ ಬೆಂಬಲ ನೀಡಬಹುದು ಎಂಬ ಪ್ರಶ್ನೆ ಎದ್ದಿತ್ತು. ಆದರೆ ಎರಡೂ ಪಕ್ಷಗಳು ಯಾರ ಪರವಾಗಿಯೂ ಬೆಂಬಲ ನೀಡದೇ ಚುನಾವಣೆಯಿಂದ ಹಿಂದೆ ಸರಿದಿತ್ತು. ಒಂದು ವೇಳೆ ಬಿಜೆಪಿ ಅಥವಾ ಆಪ್‌ಗೆ ಬೆಂಬಲ ನೀಡಿದ್ದರೆ ವಿಧಾನಸಭಾ ಚುನಾವಣೆಯಲ್ಲಿ ಟೀಕೆ ಎದುರಾಗಬಹುದು ಎಂಬ ಕಾರಣಕ್ಕೆ ಚುನಾವಣೆಯಿಂದಲೇ ದೂರ ಉಳಿದಿದ್ದವು.

  • ಚಂಡೀಗಢ ಬಿಜೆಪಿ, ಕಾಂಗ್ರೆಸ್‍ಗೆ ಮುಖಭಂಗ – ನಗರಪಾಲಿಕೆ ಚುನಾವಣೆಯಲ್ಲಿ ಎಎಪಿ ಮೇಲುಗೈ

    ಚಂಡೀಗಢ ಬಿಜೆಪಿ, ಕಾಂಗ್ರೆಸ್‍ಗೆ ಮುಖಭಂಗ – ನಗರಪಾಲಿಕೆ ಚುನಾವಣೆಯಲ್ಲಿ ಎಎಪಿ ಮೇಲುಗೈ

    ಚಂಡೀಗಢ: ನಗರಪಾಲಿಕೆ ಚುನಾವಣೆಯಲ್ಲಿ ಆಡಳಿತ ರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿಗಿಂತಲೂ ಅಧಿಕ ಸ್ಥಾನವನ್ನು ಗೆಲ್ಲುವ ಮೂಲಕ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮುನ್ನಡೆ ಸಾಧಿಸಿದೆ.

    ಚಂಡೀಗಢ ನಗರಪಾಲಿಕೆಯ 35 ವಾರ್ಡ್‍ಗಳಿಗೆ ನಡೆದ ಚುನಾವಣೆಯಲ್ಲಿ 14 ಸ್ಥಾನಗಳನ್ನು ಎಎಪಿ, 12 ಬಿಜೆಪಿ, 8 ಕಾಂಗ್ರೆಸ್ ಮತ್ತು 1 ಸ್ಥಾನವನ್ನು  ಅಕಾಲಿಕದಳ ಗೆದ್ದುಕೊಂಡಿದೆ. ಈ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗವಾದಂತಾಗಿದೆ. ಇದನ್ನೂ ಓದಿ: ಯೋಗಿ ಮತ್ತೆ ಅಧಿಕಾರಕ್ಕೆ ಬಂದರೆ ಅಸಾದುದ್ದೀನ್ ಓವೈಸಿ ಜನಿವಾರ ಧರಿಸುತ್ತಾರೆ – ಯುಪಿ ಸಚಿವ

    ಈ ಬಗ್ಗೆ ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿರುವ ಕೇಜ್ರಿವಾಲ್, ಪಂಜಾಬ್‍ನಲ್ಲಿ ಬದಲಾವಣೆಯ ಗಾಳಿ ಬೀಸಿದೆ. ಜನ ಭ್ರಷ್ಟ ರಾಜಕೀಯ ಪಕ್ಷವನ್ನು ತಿರಸ್ಕರಿಸಿ ಎಎಪಿಗೆ ಮಣೆ ಹಾಕಿದ್ದಾರೆ. ಇದು ಮುಂದಿನ ವಿಧಾನಸಭಾ ಚುನಾವಣೆಗೆ ಮುನ್ಸೂಚನೆ. ಪಂಜಾಬ್ ಬದಲಾವಣೆಗೆ ಸಿದ್ಧಗೊಂಡಿದೆ ಎಂದು ಟ್ವೀಟ್ ಮಾಡಿ ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗರೇ ಎಚ್ಚರ – ರಾತ್ರಿ ಅನಗತ್ಯ ಓಡಾಡಿದ್ರೆ ಬೀಳುತ್ತೆ ಕೇಸ್

    2016ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 77%, ಕಾಂಗ್ರೆಸ್ 15%, ಅಕಾಲಿಕದಳ 4% ಗೆದ್ದಿತ್ತು. ಆದರೆ ಎಎಪಿ ಒಂದೇ ಒಂದು ಸ್ಥಾನವನ್ನು ಜಯಿಸಿರಲಿಲ್ಲ. ಈ ಬಾರಿ ಎಎಪಿ 40%, ಬಿಜೆಪಿ 34%, ಕಾಂಗ್ರೆಸ್ 23%, ಅಕಾಲಿಕದಳ 3% ಸ್ಥಾನಗಳನ್ನು ಗೆದ್ದಿದೆ. ಈ ಮೂಲಕ ಎಎಪಿ ದೊಡ್ಡ ಮಟ್ಟದ ಯಶಸ್ಸುಗಳಿಸಿದೆ.

    ಈ ಚುನಾವಣೆಯ ಫಲಿತಾಂಶವನ್ನು ಗಮನಿಸುತ್ತಿದ್ದಂತೆ 2022ರ ಆರಂಭದಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆ ಭಾರೀ ಕುತೂಹಲ ಮೂಡಿಸಿದೆ. ದೆಹಲಿಯಲ್ಲಿ ಉತ್ತಮವಾಗಿ ಅಧಿಕಾರವನ್ನು ನಿರ್ವಹಿಸುತ್ತಿರುವ ಎಎಪಿ ಪಂಜಾಬ್‍ನಲ್ಲಿ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿದೆ. ಇದನ್ನೂ ಓದಿ: 15 ರಿಂದ 18 ವರ್ಷದವರು ಜ. 1ರಿಂದ ಕೋವಿನ್‌ನಲ್ಲಿ ಲಸಿಕೆಗೆ ಹೆಸರು ನೋಂದಾಯಿಸಬಹುದು

  • ಯೋಗಿ ಆದಿತ್ಯನಾಥ್‌ ಸರ್ಕಾರ ಜಾಹೀರಾತಿಗೆ ವಾರ್ಷಿಕ 2,000 ಕೋಟಿ ಖರ್ಚು ಮಾಡ್ತಿದೆ: ಎಎಪಿ

    ಯೋಗಿ ಆದಿತ್ಯನಾಥ್‌ ಸರ್ಕಾರ ಜಾಹೀರಾತಿಗೆ ವಾರ್ಷಿಕ 2,000 ಕೋಟಿ ಖರ್ಚು ಮಾಡ್ತಿದೆ: ಎಎಪಿ

    ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಜಾಹೀರಾತುಗಳಿಗೆ ಅನವಶ್ಯಕವಾಗಿ ಕೋಟ್ಯಂತರ ವೆಚ್ಚ ಮಾಡುತ್ತಿದ್ದಾರೆ ಎಂಬ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಟೀಕೆಗೆ ಆಮ್‌ ಆದ್ಮಿ ಪಕ್ಷ (ಎಎಪಿ) ತಿರುಗೇಟು ನೀಡಿದೆ.

    ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಎಎಪಿ, ದೆಹಲಿ ಸರ್ಕಾರ ವಾರ್ಷಿಕವಾಗಿ ಜಾಹೀರಾತಿಗೆ 70 ಕೋಟಿ ರೂ. ಮಾತ್ರ ವೆಚ್ಚ ಮಾಡಿದೆ. ಆದರೆ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಸರ್ಕಾರ ವಾರ್ಷಿಕವಾಗಿ ಜಾಹೀರಾತಿಗೆ 2,000 ಕೋಟಿ ರೂ. ವಿನಿಯೋಗಿಸಿದೆ ಎಂದು ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: ಬಿಜೆಪಿಯಿಂದ ದೆಹಲಿಯಲ್ಲಿ ಮೂಲಸೌಕರ್ಯ ಸುಧಾರಿಸಿದೆ: ಅಮಿತ್ ಶಾ

    ಬಿಜೆಪಿ ನೇತೃತ್ವದ ದೆಹಲಿ ನಗರಪಾಲಿಕೆಯು ವಿಶ್ವದಲ್ಲೇ ಅತ್ಯಂತ ಭ್ರಷ್ಟ ಪಾಲಿಕೆಯಾಗಿದೆ. ಭ್ರಷ್ಟಾಚಾರದ ಹಣವೆಲ್ಲ ಬಿಜೆಪಿ ನಾಯಕರ ಜೇಬು ಸೇರುತ್ತಿದೆ. ಜಾಹೀರಾತುಗಳಿಗೆ ಹಣ ವ್ಯಯಿಸುತ್ತಿರುವ ಬಿಜೆಪಿ ನಾಯಕರ ಜಾಹೀರಾತುಗಳೇ ದೆಹಲಿಯಾದ್ಯಂತ ತುಂಬಿವೆ ಎಂದು ಎಎಪಿ ಆರೋಪಿಸಿದೆ.

    ದೆಹಲಿಯ ಪತ್ರಿಕೆಗಳಲ್ಲಿ ನಿತ್ಯ ಯೋಗಿ ಜಿ ಮತ್ತು ಮೋದಿ ಜಿ ಅವರ ಜಾಹೀರಾತುಗಳೇ ಇರುತ್ತವೆ. ರಾಷ್ಟ್ರ ರಾಜಧಾನಿಯಲ್ಲಿ ದೆಹಲಿ ಸರ್ಕಾರಕ್ಕೆ ಸಂಬಂಧಿಸಿದ 108 ಜಾಹೀರಾತು ಫಲಕಗಳಿವೆಯಷ್ಟೆ. ಆದರೆ ಮೋದಿ ಜಿ ಮತ್ತು ಯೋಗಿ ಜಿ ಅವರಿಗೆ ಸಂಬಂಧಿಸಿದಂತೆ 850 ಜಾಹೀರಾತು ಫಲಕಗಳಿವೆ. ಯೋಗಿ ಆದಿತ್ಯನಾಥ್‌ ಅವರು ಉತ್ತರ ಪ್ರದೇಶದ ಸಿಎಂ. ಆದರೆ ದೆಹಲಿಯಲ್ಲಿ ಯಾಕೆ ಜಾಹೀರಾತುಗಳನ್ನು ನೀಡುತ್ತಾರೆ ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ಬೂಸ್ಟರ್ ಡೋಸ್ ಬಗ್ಗೆ ಕೇಂದ್ರ ನನ್ನ ಸಲಹೆಯನ್ನು ಒಪ್ಪಿಕೊಂಡಿದೆ: ರಾಹುಲ್ ಗಾಂಧಿ

    ಸಣ್ಣ ಪುಟ್ಟ ಕೆಲಸಗಳಿಗೂ ಬಿಜೆಪಿ ಸರ್ಕಾರ ದೊಡ್ಡ ಪ್ರಚಾರವನ್ನು ಪಡೆಯುತ್ತಿದೆ ಎಂದು ಬಿಜೆಪಿ ವಿರುದ್ಧ ಎಎಪಿ ಹರಿಹಾಯ್ದಿದೆ.

  • ಪಠ್ಯಪುಸ್ತಕ ವಿತರಿಸದಿರುವುದು ಶಿಕ್ಷಣ ಸಚಿವರ ಅಸಮರ್ಥತೆಯ ಸಂಕೇತ: ಎಎಪಿ

    ಪಠ್ಯಪುಸ್ತಕ ವಿತರಿಸದಿರುವುದು ಶಿಕ್ಷಣ ಸಚಿವರ ಅಸಮರ್ಥತೆಯ ಸಂಕೇತ: ಎಎಪಿ

    ಬೆಂಗಳೂರು: ಶಾಲೆಗಳು ಆರಂಭವಾಗಿ ಆರು ತಿಂಗಳಾದರೂ ಪಠ್ಯ ಪುಸ್ತಕ ವಿತರಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದು ಎಎಪಿಯ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷರಾದ ಕುಶಲಸ್ವಾಮಿ ಟೀಕಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲಿಕೆಯು ಸುಗಮವಾಗಿ ಸಾಗಲು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಅವಶ್ಯಕವಾಗಿದೆ. ತರಗತಿಗಳು ಆರಂಭವಾಗಿ ಆರು ತಿಂಗಳು ಕಳೆದರೂ ಶಿಕ್ಷಣ ಇಲಾಖೆಯು ಪಠ್ಯಪುಸ್ತಕ ವಿತರಿಸಿಲ್ಲ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ನಿರ್ಲಕ್ಷ್ಯದಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಇನ್ನಾದರೂ ಸಚಿವರು ಎಚ್ಚೆತ್ತುಕೊಂಡು ಪಠ್ಯಪುಸ್ತಕ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಸಾಧ್ಯವಾಗದಿದ್ದರೆ ಅವರು ಸಚಿವ ಸ್ಥಾನವನ್ನು ಸಮರ್ಥರಿಗೆ ಬಿಟ್ಟುಕೊಡಲಿ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ

    ಆಮ್ ಆದ್ಮಿ ಪಾರ್ಟಿಯ ಹಿರಿಯ ಮುಖಂಡರಾದ ರಮೇಶ್ ಬೆಳ್ಳಕೊಂಡರವರು ಮಾತನಾಡಿದ್ದು, ಪಠ್ಯಪುಸ್ತಕ ವಿತರಣೆಗೆ ಸಂಬಂಧಿಸಿ ಬಿ.ಸಿ.ನಾಗೇಶ್ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ನಿರುತ್ಸಾಹದಿಂದಾಗಿ 1.2 ಕೋಟಿ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಪಠ್ಯಪುಸ್ತಕ ಇಲ್ಲದಿರುವುದರಿಂದ ಮಕ್ಕಳಿಗೆ ಪಾಠವನ್ನು ಅರ್ಥ ಮಾಡಿಸಲು ಶಿಕ್ಷಕರಿಗೆ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.

    ಪಠ್ಯಪುಸ್ತಕ ಮುದ್ರಣವಾಗದಿರುವುದು ಈವರೆಗೆ ಗಮನಕ್ಕೆ ಬಂದಿರಲಿಲ್ಲ ಎಂಬ ಅರ್ಥದಲ್ಲಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಸೆಲ್ವ ಕುಮಾರ್ ಹೇಳಿಕೆ ನೀಡಿರುವುದು ಖಂಡನೀಯ. ಎರಡು ಜೊತೆ ಸಮವಸ್ತ್ರ ವಿತರಣೆ ಕೂಡ ಶಿಕ್ಷಣ ಸಚಿವರಿಗೆ ಸಾಧ್ಯವಾಗಿಲ್ಲ. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸಂಬಂಧಿಸಿ ಶಿಕ್ಷಣ ಸಚಿವರು ಜಾಣಕುರುಡುತನ ತೋರುತ್ತಿದ್ದಾರೆ’ ಎಂದು ಟೀಕಿಸಿದರು.

  • ಉತ್ತರಾಖಂಡದಲ್ಲಿ ಅಧಿಕಾರಕ್ಕೆ ಬಂದ್ರೆ ಪ್ರತಿ ತಿಂಗಳು ಮಹಿಳೆಯರ ಖಾತೆಗೆ 1,000 ರೂ. ಠೇವಣಿ: ಕೇಜ್ರಿವಾಲ್‌

    ಉತ್ತರಾಖಂಡದಲ್ಲಿ ಅಧಿಕಾರಕ್ಕೆ ಬಂದ್ರೆ ಪ್ರತಿ ತಿಂಗಳು ಮಹಿಳೆಯರ ಖಾತೆಗೆ 1,000 ರೂ. ಠೇವಣಿ: ಕೇಜ್ರಿವಾಲ್‌

    ಡೆಹ್ರಾಡೂನ್: ಉತ್ತರಖಾಂಡ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ಅಧಿಕಾರಕ್ಕೆ ಬಂದರೆ, 18 ವರ್ಷ ಮೇಲ್ಪಟ್ಟ ಮಹಿಳೆಯರ ಬ್ಯಾಂಕ್‌ ಖಾತೆಯಲ್ಲಿ ಪ್ರತಿ ತಿಂಗಳು 1,000 ರೂ. ಠೇವಣಿ ಇರಲಿಸಲಾಗುವುದು ಎಂದು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಘೋಷಿಸಿದ್ದಾರೆ.

    ಯುಎಸ್‌ ನಗರದ ಕಾಶಿಪುರಕ್ಕೆ ಕೇಜ್ರಿವಾಲ್‌ ಅವರು ಭೇಟಿ ನೀಡಿದ್ದರು. ಯುಎಸ್‌ ನಗರ, ಉತ್ತರಾಖಂಡ ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಅವರ ತವರು ಜಿಲ್ಲೆಯಾಗಿದೆ. ಇದನ್ನೂ ಓದಿ: ಸಿಬಿಐ, ಇ.ಡಿ ನಿರ್ದೇಶಕರ ಅಧಿಕಾರವಧಿ ವಿಸ್ತರಣೆಗೆ ಸಂಸತ್‌ ಒಪ್ಪಿಗೆ

    ಉತ್ತರಾಖಂಡದ ಬಜೆಟ್‌ 55,000 ಕೋಟಿ ರೂಪಾಯಿ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗೆ ಶೇ. 60ರಿಂದ 80ರಷ್ಟು ಕಮಿಷನ್ ಪಡೆಯುತ್ತಾರೆಂದು ಹಲವರು ಹೇಳಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಒಂದು ವೇಳೆ ಶೇ. 20ರಷ್ಟು ಕಮಿಷನ್‌ ಪಡೆದರೂ, ಒಟ್ಟು ಬಜೆಟ್‌ ಮೊತ್ತದಲ್ಲಿ 11,000 ಕೋಟಿ ರೂಪಾಯಿ ರಾಜಕಾರಣಿಗಳ ಜೇಬು ಸೇರುತ್ತಿದೆ. ಅದನ್ನೆಲ್ಲ ಅವರು ಸ್ವಿಸ್‌ ಬ್ಯಾಂಕ್‌ನಲ್ಲಿ ಇಟ್ಟುಕೊಳ್ಳುತ್ತಿದ್ದಾರೆ ಎಂದು ಕೇಜ್ರಿವಾಲ್‌ ಗಂಭೀರ ಆರೋಪ ಮಾಡಿದ್ದಾರೆ.

    ರಾಜಕಾರಣಿಗಳ ಹಣ ಸ್ವಿಸ್‌ ಬ್ಯಾಂಕ್‌ಗೆ ಹೋಗುವುದನ್ನು ನಾನು ತಪ್ಪಿಸುತ್ತೇನೆ. ಆ ಹಣ ನೇರವಾಗಿ ಮಹಿಳೆಯರ ಖಾತೆಗೆ ಸಂದಾಯವಾಗುವಂತೆ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಮಿಸ್ ಯುನಿವರ್ಸ್ ಕಿರೀಟದ ಬೆಲೆ 37 ಕೋಟಿ ರೂ.- ಏನೇನು ವಿಶೇಷತೆ ಇದೆ?

    ಉತ್ತರಾಖಂಡ ರಾಜ್ಯಕ್ಕೆ ಕೇಜ್ರಿವಾಲ್‌ ಅವರ 5ನೇ ಭೇಟಿ ಇದಾಗಿದೆ. ಈ ಹಿಂದಿನ ಭೇಟಿಗಳಲ್ಲೂ ಪ್ರತಿ ಮನೆಗೆ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ, ಆರು ತಿಂಗಳಿಗೊಮ್ಮೆ 1 ಲಕ್ಷ ಸರ್ಕಾರಿ ಉದ್ಯೋಗ ನೇಮಕಾತಿಗೆ ಅರ್ಜಿ ಆಹ್ವಾನ ಸೇರಿದಂತೆ ಹಲವು ಭರವಸೆಗಳನ್ನು ರಾಜ್ಯದ ಜನತೆಗೆ ನೀಡಿದ್ದಾರೆ.

  • ಗುತ್ತಿಗೆ ಕಾಮಗಾರಿಗಳಲ್ಲಿ ಭ್ರಷ್ಟಾಚಾರ – ಪ್ರಧಾನಿಗೆ ಪತ್ರ ಬರೆದು ತನಿಖೆಗೆ ಆಗ್ರಹ

    ಗುತ್ತಿಗೆ ಕಾಮಗಾರಿಗಳಲ್ಲಿ ಭ್ರಷ್ಟಾಚಾರ – ಪ್ರಧಾನಿಗೆ ಪತ್ರ ಬರೆದು ತನಿಖೆಗೆ ಆಗ್ರಹ

    ಬೆಂಗಳೂರು: ಗುತ್ತಿಗೆ ಕಾಮಗಾರಿಗಳಲ್ಲಿ ಶೇ.40ರಷ್ಟು ಭ್ರಷ್ಟಾಚಾರ ಆಗುತ್ತಿರುವ ಕುರಿತು ಸ್ವತಃ ಗುತ್ತಿಗೆದಾರರ ಸಂಘವೇ ಪ್ರಧಾನಿಗೆ ಪತ್ರ ಬರೆದಿದ್ದರೂ ಯಾವುದೇ ತನಿಖೆಗೆ ಆದೇಶಿಸದಿರುವುದನ್ನು ಖಂಡಿಸಿ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ನಡೆಸಿ ಖಂಡಿಸಿದೆ.

    ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ಅಧ್ಯಕ್ಷರಾದ ಮೋಹನ್ ದಾಸರಿ, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿರುವ ಡಿ.ಕೆಂಪಣ್ಣರವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದಾರೆ. ಯಾವುದೇ ರಾಜಕಾರಣಿ ಅಥವಾ ವಿರೋಧ ಪಕ್ಷದವರಲ್ಲದ ಡಿ.ಕೆಂಪಣ್ಣರವರು ಲಿಖಿತ ರೂಪದಲ್ಲಿ ಮಾಡಿರುವ ಆರೋಪಕ್ಕೆ ಭಾರೀ ಮಹತ್ವವಿದೆ. ನರೇಂದ್ರ ಮೋದಿಯವರು ತಕ್ಷಣವೇ ಮಧ್ಯಪ್ರವೇಶಿಸಿ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಕ್ರಿಪ್ಟೋಕರೆನ್ಸಿಗೆ ನಿಷೇಧವಿಲ್ಲ- ನಿಯಂತ್ರಣಕ್ಕೆ ಮುಂದಾದ ಕೇಂದ್ರ ಸರ್ಕಾರ

    ಬೇರೆ ಪಕ್ಷದ ಆಡಳಿತವಿದ್ದಾಗ ಬೆಂಗಳೂರಿಗೆ ಬಂದಿದ್ದ ಮೋದಿಯವರು ಕರ್ನಾಟಕ ಸರ್ಕಾರವನ್ನು 10% ಸರ್ಕಾರವೆಂದು ಟೀಕಿಸಿದ್ದರು. ಆದರೆ ಈಗ ಡಿ.ಕೆಂಪಣ್ಣರವರು ಪತ್ರ ಬರೆದು ಒಂದು ವಾರವಾದರೂ ಮೋದಿಯವರು ಪ್ರತಿಕ್ರಿಯಿಸಿಲ್ಲ. ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ರಾಜ್ಯಕ್ಕೆ ಶಾಪವಾಗಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಗುತ್ತಿಗೆ ಭ್ರಷ್ಟಾಚಾರದ ಬಗ್ಗೆ ಪರಸ್ಪರ ಹೊಂದಾಣಿಕೆ ಮಾಡಿಕೊಂಡಿವೆ. ಆದ್ದರಿಂದಲೇ ಡಿ.ಕೆಂಪಣ್ಣರವರ ಪತ್ರವು ಸಂಚಲನ ಸೃಷ್ಟಿಸಿದ್ದರೂ ಮೂರು ಪಕ್ಷಗಳ ರಾಜಕಾರಣಿಗಳು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಪ್ರಕರಣವನ್ನು ಮುಚ್ಚಿ ಹಾಕಲು ಮೂರು ಪಕ್ಷಗಳೂ ಯತ್ನಿಸುತ್ತಿವೆ ಎಂದು ಮೋಹನ್ ದಾಸರಿ ಆರೋಪಿಸಿದ್ದಾರೆ. ಇದನ್ನೂ ಓದಿ: ಡಿಜೆ ಮ್ಯೂಸಿಕ್ ಶಬ್ದಕ್ಕೆ 63 ಕೋಳಿ ಬಲಿ

    ಆಮ್ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್ ವಿ. ಸದಂರವರು ಮಾತನಾಡಿ, ಗುತ್ತಿಗೆ ಕಾಮಗಾರಿಗಳ ಮೊತ್ತದಲ್ಲಿ ಸಚಿವರಿಗೆ 5%. ಸಂಸದರಿಗೆ 2%, ಸ್ಥಳೀಯ ಜನಪ್ರತಿನಿಧಿಗಳಿಗೆ 10%, ಬಿಲ್ ಪಾವತಿಸುವ ಅಧಿಕಾರಿಗಳಿಗೆ 6% ಹೀಗೆ ಶೇ. 40ರಷ್ಟು ಬಿಜೆಪಿ ಟ್ಯಾಕ್ಸ್ ಅಕ್ರಮವಾಗಿ ಜನಪ್ರತಿನಿಧಿಗಳ ಜೇಬು ಸೇರುತ್ತಿರುವುದನ್ನು ಡಿ.ಕೆಂಪಣ್ಣರವರು ಪತ್ರದಲ್ಲಿ ಬಹಿರಂಗಪಡಿಸಿದ್ದಾರೆ. ಕೆಲವೇ ವರ್ಷಗಳಲ್ಲಿ ತಮ್ಮ ಆಸ್ತಿಪಾಸ್ತಿಗಳನ್ನು ಅನೇಕ ಪಟ್ಟು ಹೆಚ್ಚಿಸಿಕೊಂಡಿರುವ ಜನಪ್ರತಿನಿಧಿಗಳ ಆಸ್ತಿ ಗಳಿಕೆಯ ಮೂಲದ ಕುರಿತು ಸಮಗ್ರ ತನಿಖೆ ನಡೆಯಲೇಬೇಕು, ಕಳೆದ ಹತ್ತು ವರ್ಷಗಳಲ್ಲಿ ಯಾವ್ಯಾವ ಕಾಮಗಾರಿಗಳಲ್ಲಿ ಎಷ್ಟೆಷ್ಟು ಮೊತ್ತ ಯಾವ್ಯಾವ ರಾಜಕಾರಣಿಯ ಜೇಬು ಸೇರಿದೆ ಎಂಬುದು ಜನರಿಗೆ ತಿಳಿಯಬೇಕು ಎಂದು ಹೇಳಿದರು.

    ಎಎಪಿ ಮುಖಂಡರಾದ ಬಿ.ಟಿ.ನಾಗಣ್ಣ, ಸುರೇಶ್ ರಾಥೋಡ್, ಪ್ರಕಾಶ್ ನೆಡುಂಗಡಿ, ವಿಜಯ್ ಶಾಸ್ತ್ರಿಮಠ್, ಮಹೇಶ್ ಬಾಬು, ಜಗದೀಶ್ ಚಂದ್ರ, ಉಷಾ ಮೋಹನ್, ಸುಹಾಸಿನಿ, ಡಾ. ರಮೇಶ್ ಹಾಗೂ ಅನೇಕ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

  • ಸುರೇಶ್ ಕುಮಾರ್ ಕಚೇರಿಗೆ ಮುತ್ತಿಗೆ, ಪೊರಕೆ ಸೇವೆ- ಎಎಪಿ ಎಚ್ಚರಿಕೆ

    ಸುರೇಶ್ ಕುಮಾರ್ ಕಚೇರಿಗೆ ಮುತ್ತಿಗೆ, ಪೊರಕೆ ಸೇವೆ- ಎಎಪಿ ಎಚ್ಚರಿಕೆ

    ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕೋವಿಡ್ ಸಂತ್ರಸ್ತರಿಗೆ ಹದಿನೈದು ದಿನಗಳೊಳಗೆ ಪರಿಹಾರಧನ ವಿತರಿಸದಿದ್ದರೆ ಬೃಹತ್ ಮೆರವಣಿಗೆ ಮೂಲಕ ಶಾಸಕ ಸುರೇಶ್ ಕುಮಾರ್ ಕಚೇರಿಗೆ ಮುತ್ತಿಗೆ ಹಾಕಿ ಪೊರಕೆ ಸೇವೆ ಮಾಡಲು ಆಮ್ ಆದ್ಮಿ ಪಾರ್ಟಿ ನಿರ್ಧರಿಸಿದೆ.

    ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಾರ್ಟಿ ಅಧ್ಯಕ್ಷರಾದ ಬಿ.ಟಿ.ನಾಗಣ್ಣ, ಕೋವಿಡ್ ಪರಿಹಾರ ಕೋರಿ ರಾಜಾಜಿನಗರ ಕ್ಷೇತ್ರದಲ್ಲಿ ಸೇವಾ ಸಿಂಧು ಮೂಲಕ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಇದರಲ್ಲಿ ಹೆಚ್ಚಿನವರು ಮನೆಗೆಲಸದವರು, ಗಾರ್ಮೆಂಟ್ಸ್ ನೌಕರರು, ಕ್ಯಾಬ್ ಚಾಲಕರು, ದಿನಗೂಲಿ ನೌಕರರು ಹಾಗೂ ಬಡ-ಮಧ್ಯಮ ವರ್ಗದವರಾಗಿದ್ದಾರೆ. ಕ್ಷೇತ್ರದಲ್ಲಿ 50ಕ್ಕೂ ಹೆಚ್ಚು ಜನರು ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಈ ವರೆಗೆ ಒಬ್ಬರಿಗೂ ಒಂದು ರೂಪಾಯಿ ಪರಿಹಾರ ದೊರೆತಿಲ್ಲ. ಕೋವಿಡ್‍ನಿಂದ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ ಘೋಷಿಸಿರುವ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಕ್ಷೇತ್ರದ ಸಂತ್ರಸ್ತರಿಗೆ ಕೊಡಿಸಲು ಶಾಸಕ ಸುರೇಶ್ ಕುಮಾರ್ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಹೊಸ ಇತಿಹಾಸ ಸೃಷ್ಟಿಸಿದ ಜಮೀರ್ ಪುತ್ರ ಝೈದ್ ಖಾನ್ ನಟನೆಯ ‘ಬನಾರಸ್’ ಚಿತ್ರ

    ಬೆಂಗಳೂರು ನಗರದ ಆಮ್ ಆದ್ಮಿ ಪಾರ್ಟಿಯ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ ಮಾತನಾಡಿ, ಕೋವಿಡ್‍ನಿಂದ ದುಡಿಮೆ, ಉದ್ಯೋಗ, ಕುಟುಂಬ ಸದಸ್ಯರನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಜನರಿಗೆ ಪರಿಹಾರ ವಿತರಿಸಲು ಸತಾಯಿಸುತ್ತಿರುವ ಸುರೇಶ್ ಕುಮಾರ್‍ರವರಿಗೆ ನಾಚಿಕೆಯಾಗಬೇಕು. ಅವರ ನಿಷ್ಕ್ರಿಯತೆಯಿಂದಾಗಿ ರಾಜಾಜಿನಗರ ಕ್ಷೇತ್ರವು ಅಭಿವೃದ್ಧಿಯಲ್ಲಿ ಹಿಂದುಳಿದಿದ್ದು, ಜನರು ಸರಿಯಾದ ಮೂಲಸೌಕರ್ಯವಿಲ್ಲದೇ ತೊಂದರೆ ಅನುಭವಿಸುತ್ತಿದ್ದಾರೆ. ಜನರ ಹಿತಾಸಕ್ತಿಯನ್ನು ಮರೆತಿರುವ ಶಾಸಕರಿಗೆ ಆಮ್ ಆದ್ಮಿ ಪಾರ್ಟಿಯು ತಕ್ಕ ಪಾಠ ಕಲಿಸಲಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ಬೃಹತ್ ಮೆರವಣಿಗೆಯಲ್ಲಿ ಸಾಗಿ ಅವರ ಕಚೇರಿಗೆ ಮುತ್ತಿಗೆ ಹಾಕಿ ಪೊರಕೆ ಸೇವೆ ಮಾಡಲಿದ್ದೇವೆ ಎಂದು ಎಚ್ಚರಿಕೆ ನೀಡಿದರು. ರಾಜಾಜಿನಗರದಲ್ಲಿ ಕೋವಿಡ್‍ನಿಂದ ಮೃತಪಟ್ಟವರ ಕುಟುಂಬಗಳ ನಾಲ್ವರು ಸಂತ್ರಸ್ತರು ಹಾಗೂ 30 ಸೇವಾಸಿಂಧು ಅರ್ಜಿದಾರರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.