Tag: aap

  • Delhi Assembly Election | 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಎಎಪಿ

    Delhi Assembly Election | 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಎಎಪಿ

    ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಗೆ (Assembly Election) ಆಮ್ ಆದ್ಮಿ ಪಕ್ಷ (Aam Aadmi Party) 11 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

    70 ವಿಧಾನಸಭಾ ಕ್ಷೇತ್ರಗಳಿಗೆ 2025ರ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದ್ದು, ಇಂದು (ನ.21) 11 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಪಟ್ಟಿ ಬಿಡುಗಡೆ ಮಾಡಿದೆ.ಇದನ್ನೂ ಓದಿ: ಅದಾನಿ ವಿರುದ್ಧದ ಪ್ರಕರಣ: ಷೇರುಪೇಟೆಯಲ್ಲಿ ಅದಾನಿ ಸಮೂಹದ ಷೇರುಗಳ ಮೌಲ್ಯದಲ್ಲಿ ಭಾರೀ ಕುಸಿತ

    ಬಿಜೆಪಿ ಹಾಗೂ ಕಾಂಗ್ರೆಸ್ ಬಿಟ್ಟು ಎಎಪಿ ಸೇರಿದ್ದ 6 ನಾಯಕರು ಸೇರಿದಂತೆ ಒಟ್ಟು 11 ಅಭ್ಯರ್ಥಿಗಳ ಹೆಸರು ಪಟ್ಟಿಯಲ್ಲಿದೆ. ಬಿಜೆಪಿಯಿಂದ ಬ್ರಹ್ಮ ಸಿಂಗ್ ತನ್ವಾರ್, ಬಿಬಿ ತ್ಯಾಗಿ, ಅನಿಲ್ ಝಾ ಹಾಗೂ ಕಾಂಗ್ರೆಸ್‌ನಿಂದ ಜುಬೇರ್ ಚೌಧರಿ, ವೀರ್ ಸಿಂಗ್ ದಿಂಗನ್, ಸೋಮೇಶ್ ಶೋಕೀನ್ ಆಮ್ ಆದ್ಮಿ ಪಕ್ಷವನ್ನು ಸೇರಿದ್ದರು. ಇವರನ್ನು ಒಳಗೊಂಡಂತೆ ರಾಮ್ ಸಿಂಗ್ ನೇತಾಜಿ, ಗೌರವ್ ಶರ್ಮಾ, ಮನೋಜ್ ತ್ಯಾಗಿ, ದೀಪಕ್ ಸಿಂಘಾಲ್ ಹಾಗೂ ಸರಿತಾ ಸಿಂಗ್‌ರವರ ಹೆಸರು ಪಟ್ಟಿಯಲ್ಲಿದೆ.

    2020 ಚುನಾವಣೆಯಲ್ಲಿ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದ ಮೂರು ಹಾಲಿ ಶಾಸಕರನ್ನು ಎಎಪಿ ಕೈಬಿಡಲು ನಿರ್ಧರಿಸಿದೆ.

    ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಎಎಪಿ ಸಂಚಾಲಕ ಗೋಪಾಲ್ ರೈ (Gopal Rai), ಈ 11 ಅಭ್ಯರ್ಥಿಗಳ ಪಟ್ಟಿಯೊಂದಿಗೆ ಚುನಾವಣಾ ಪ್ರಚಾರವನ್ನು ತ್ರೀವಗೊಳಿಸುತ್ತೇವೆ. 2020ರ ವಿಧಾನಸಭಾ ಚುನಾವಣೆಯಲ್ಲಿ ಸಾರ್ವಜನಿಕರ ಪ್ರತಿಕ್ರಿಯೆ ಆಧಾರದ ಮೇಲೆ ಹಾಲಿ ಶಾಸಕರನ್ನು ಕೈಬಿಟ್ಟಿದ್ದೇವೆ. ಇದೀಗ ನಾವು ಅತ್ಯುತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದೇವೆ ಎಂದು ತಿಳಿಸಿದರು.

    2015ರ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ ಎಎಪಿ 67 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. 2020ರ ಚುನಾವಣೆಯಲ್ಲಿ 62 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.ಇದನ್ನೂ ಓದಿ: 4 ಮಕ್ಕಳು ಹೆತ್ತರೆ 1 ಲಕ್ಷ ರೂ. ಬಹುಮಾನ – ಕೊಡವ ಸಮಾಜದಿಂದ ವಿಶಿಷ್ಟ ಆಫರ್

  • ಚುನಾವಣೆ ಹೊತ್ತಿನಲ್ಲಿ ಶಾಕ್‌- ಆಪ್‌ಗೆ ಸಚಿವ ಕೈಲಾಶ್‌ ಗಹ್ಲೋಟ್‌ ರಾಜೀನಾಮೆ

    ಚುನಾವಣೆ ಹೊತ್ತಿನಲ್ಲಿ ಶಾಕ್‌- ಆಪ್‌ಗೆ ಸಚಿವ ಕೈಲಾಶ್‌ ಗಹ್ಲೋಟ್‌ ರಾಜೀನಾಮೆ

    – ಇಡಿ, ಸಿಬಿಐ ಒತ್ತಡಕ್ಕೆ ರಾಜೀನಾಮೆ – ಆಪ್‌

    ನವದೆಹಲಿ: ದೆಹಲಿಯ (Delhi) ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ (Kailash Gahlot) ಅವರು ಆಮ್ ಆದ್ಮಿ ಪಕ್ಷಕ್ಕೆ (AAP) ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರದಲ್ಲಿ ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನು ಈಡೇರಿಸದ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಸಾರಿಗೆ ಆಡಳಿತ ಸುಧಾರಣೆ, ಐಟಿ, ಗೃಹ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಗಳನ್ನು ಹೊಂದಿದ್ದ ಕೈಲಾಶ್ ಗಹ್ಲೋಟ್ ಅವರು ತಮ್ಮ ರಾಜೀನಾಮೆಯನ್ನು ದೆಹಲಿಯ ಸರ್ಕಾರದ ಮಂತ್ರಿ ಮಂಡಳಿಗೆ ಸಲ್ಲಿಸಿದ್ದಾರೆ.

    ಮುಖ್ಯಮಂತ್ರಿ ಅತಿಶಿ, ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಗಹ್ಲೋಟ್, ದೆಹಲಿಯ ಜನರಿಗೆ ನೀಡಿದ ಪ್ರಮುಖ ಭರವಸೆಗಳನ್ನು ಈಡೇರಿಸಲು ಪಕ್ಷದ ಅಸಮರ್ಥತೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಮುನಾ ನದಿಯನ್ನು ಶುಚಿಗೊಳಿಸುವಲ್ಲಿ ವಿಫಲವಾಗಿರುವುದನ್ನು ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಅರವಿಂದ್ ಕೇಜ್ರಿವಾಲ್ ಅವರ ಹೊಸ ಅಧಿಕೃತ ಬಂಗಲೆಯ ಶೀಶ್‌ ಮಹಲ್‌ ವಿಚಾರದಲ್ಲಿ ಹಲವಾರು ಮುಜುಗರದ ಅಂಶಗಳಿವೆ. ಇದು ಸಾಮಾನ್ಯ ಜನರ ಪಕ್ಷವೇ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಇದಕ್ಕೆ ಏನು ಉತ್ತರಿಸುವುದು ಎಂದು ಅವರು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವಿನ ನಿರಂತರ ಜಗಳ ನಗರದ ಪ್ರಗತಿಗೆ ಅಡ್ಡಿಯಾಗಿದೆ. ದೆಹಲಿ ಸರ್ಕಾರವು ಕೇಂದ್ರದೊಂದಿಗೆ ಹೋರಾಡಲು ಹೆಚ್ಚಿನ ಸಮಯವನ್ನು ಕಳೆದರೆ, ದೆಹಲಿಯ ನಿಜವಾದ ಪ್ರಗತಿ ಸಾಧ್ಯವಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ. ಇದೆಲ್ಲ ಕಾರಣದಿಂದ ಪಕ್ಷದಿಂದ ದೂರ ಉಳಿಯುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಪತ್ರದಲ್ಲಿ ಬರೆದಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಆಪ್‌, ಬಿಜೆಪಿ (BJP) ತನ್ನ ಷಡ್ಯಂತ್ರ, ಕೀಳುಮಟ್ಟದ ರಾಜಕಾರಣದಲ್ಲಿ ಯಶಸ್ವಿಯಾಗಿದೆ. ಬಿಜೆಪಿಯ ಒತ್ತಡಕ್ಕೆ ಒಳಗಾದ ಜಾರಿ ನಿರ್ದೇಶನಾಲಯ (ಇಡಿ)ಯಿಂದ ವಿಚಾರಣೆಗೆ ಒಳಗಾದ ಗಹ್ಲೋಟ್ ಅವರನ್ನು ಸಿಬಿಐ ಸೇರಿದಂತೆ ಕೇಂದ್ರೀಯ ಏಜೆನ್ಸಿಗಳು ಗುರಿಯಾಗಿಸುತ್ತಿವೆ ಎಂದು ಆರೋಪಿಸಿದೆ.

    ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ಚುನಾವಣೆಗೆ ಮುಂಚಿತವಾಗಿ ಗಹ್ಲೋಟ್ ಅವರ ರಾಜೀನಾಮೆಯು ಆಮ್ ಆದ್ಮಿ ಪಕ್ಷಕ್ಕೆ ಗಮನಾರ್ಹ ಹಿನ್ನಡೆಯಾಗಿದೆ.

  • Waqf Board Case: ಎಎಪಿ ಶಾಸಕ ಅಮಾನತುಲ್ಲಾ ಖಾನ್‌ಗೆ ಜಾಮೀನು

    Waqf Board Case: ಎಎಪಿ ಶಾಸಕ ಅಮಾನತುಲ್ಲಾ ಖಾನ್‌ಗೆ ಜಾಮೀನು

    ನವದೆಹಲಿ: ದೆಹಲಿ ವಕ್ಫ್ ಬೋರ್ಡ್ (Delhi Waqf Board) ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್ (Amanatullah Khan) ಅವರನ್ನು ಬಿಡುಗಡೆ ಮಾಡುವಂತೆ ರೋಸ್ ಅವೆನ್ಯೂ ನ್ಯಾಯಾಲಯವು ಆದೇಶಿಸಿದೆ. ಅವರ ವಿರುದ್ಧ ಸಲ್ಲಿಸಲಾದ ಆರೋಪಪಟ್ಟಿಯನ್ನು ಸ್ವೀಕರಿಸಲು ನಿರಾಕರಿಸಿದೆ.

    ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರು ಖಾನ್ ವಿರುದ್ಧ ಮುಂದುವರೆಯಲು ಸಾಕಷ್ಟು ಸಾಕ್ಷ್ಯಾಧಾರಗಳಿದ್ದರೂ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಯಾವುದೇ ಅನುಮತಿ ಇಲ್ಲ. ಆದ್ದರಿಂದ ಚಾರ್ಜ್‌ಶೀಟ್ ನಿರಾಕರಿಸಲಾಗಿದೆ ಎಂದು ನ್ಯಾಯಾಧೀಶರು ಹೇಳಿದರು. ಒಂದು ಲಕ್ಷ ರೂ. ಜಾಮೀನು ಬಾಂಡ್ ಮತ್ತು ಅಂತಹ ಮೊತ್ತದ ಒಂದು ಶ್ಯೂರಿಟಿಯ ಮೇಲೆ ಖಾನ್ ಅವರನ್ನು ತಕ್ಷಣವೇ ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವಂತೆ ನ್ಯಾಯಾಲಯ ಸೂಚಿಸಿದೆ. ಇದನ್ನೂ ಓದಿ: ನಕ್ಸಲರು ಊಟ ಮಾಡಿದ್ದ ಮನೆಗೆ ಎಎನ್‍ಎಫ್ ತಂಡ ಭೇಟಿ – ಚುರುಕುಗೊಂಡ ಕೂಂಬಿಂಗ್

    ಅಮಾನತುಲ್ಲಾ ಖಾನ್ ಅವರು ದೆಹಲಿ ವಕ್ಫ್ ಬೋರ್ಡ್‌ನಲ್ಲಿ ಭ್ರಷ್ಟಾಚಾರದ ಮೂಲಕ ಗಳಿಸಿದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಕ್ಟೋಬರ್ 29 ರಂದು 110 ಪುಟಗಳ ಮೊದಲ ಪೂರಕ ಪ್ರಾಸಿಕ್ಯೂಷನ್ ದೂರನ್ನು (ಇಡಿ ಚಾರ್ಜ್‌ಶೀಟ್‌ಗೆ ಸಮನಾಗಿರುತ್ತದೆ) ಸಲ್ಲಿಸಿತ್ತು. ಚಾರ್ಜ್‌ಶೀಟ್‌ನಲ್ಲಿ ಮರಿಯಮ್ ಸಿದ್ದಿಕಿ ಎಂಬುವರನ್ನು ಹೆಸರಿಸಲಾಗಿತ್ತು. ಅವರು ಪ್ರಕರಣದಲ್ಲಿ ಆರೋಪಿಯಾಗಿದ್ದರೂ ಇ.ಡಿ ಅವರನ್ನು ಬಂಧಿಸಿಲ್ಲ. ಸಿದ್ದಿಕಿ ವಿರುದ್ಧ ಮುಂದುವರಿಯಲು ಯಾವುದೇ ಪುರಾವೆಗಳಿಲ್ಲ ಎಂದು ನ್ಯಾಯಾಲಯ ಹೇಳಿದ್ದು, ಆಕೆಯನ್ನು ಬಿಡುಗಡೆ ಮಾಡಿದೆ. ಅಮಾನತುಲ್ಲಾ ಖಾನ್ ಅವರನ್ನು ಸೆಪ್ಟಂಬರ್ 2ರಂದು ಅವರ ನಿವಾಸದ ಮೇಲೆ ದಾಳಿ ನಡೆಸಿದ ನಂತರ ಇಡಿ ಬಂಧಿಸಿತ್ತು. ಇದನ್ನೂ ಓದಿ: ನವೀಕರಿಸಬಹುದಾದ ಇಂಧನದಲ್ಲಿ ಭಾರತ ಗಮನಾರ್ಹ ಸಾಧನೆ – 24.2 GW ಸಾಮರ್ಥ್ಯ ವೃದ್ಧಿ: ಜೋಶಿ

  • ದೆಹಲಿಗೆ ಕಲುಷಿತ ನೀರು ಪೂರೈಕೆ – ಸಿಎಂ ಮನೆ ಮುಂದೆ ಕೊಳಕು ನೀರು ಸುರಿದ ಸ್ವಾತಿ ಮಲಿವಾಲ್

    ದೆಹಲಿಗೆ ಕಲುಷಿತ ನೀರು ಪೂರೈಕೆ – ಸಿಎಂ ಮನೆ ಮುಂದೆ ಕೊಳಕು ನೀರು ಸುರಿದ ಸ್ವಾತಿ ಮಲಿವಾಲ್

    15 ದಿನಗಳಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಟ್ಯಾಂಕರ್‌ನೊಂದಿಗೆ ಬರೋದಾಗಿ ಎಚ್ಚರಿಕೆ 

    ನವದೆಹಲಿ: ರಾಷ್ಟ್ರ ರಾಜಧಾನಿಯ ನಿವಾಸಿಗಳಿಗೆ ಪೂರೈಕೆಯಾಗುತ್ತಿರುವ ನೀರಿನ ಸ್ಥಿತಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಆಮ್ ಆದ್ಮಿ ಪಕ್ಷದ (AAP) ಸಂಸದೆ ಸ್ವಾತಿ ಮಲಿವಾಲ್ (Swati Maliwal), ಬಾಟಲಿಯಲ್ಲಿ ಕಲುಷಿತ ನೀರನ್ನು ತುಂಬಿಸಿ ದೆಹಲಿ ಸಿಎಂ ಅತಿಶಿಯವರ (Atishi) ನಿವಾಸದ ಹೊರಗೆ ಸುರಿದಿದ್ದಾರೆ.

    ದ್ವಾರಕಾ ನಿವಾಸಿಗಳ ಮನೆಗಳನ್ನು ಸಮೀಕ್ಷೆ ಮಾಡಿ, ಸರಬರಾಜಾಗುತ್ತಿರುವ ನೀರಿನ ಗುಣಮಟ್ಟವನ್ನು ಮೌಲ್ಯಮಾಪನ ಮಾಡಲಾಗಿದೆ. ಜನರಿಗೆ ಕೊಳಕು, ದುರ್ವಾಸನೆಯ ನೀರು ಸರಬರಾಜು ಮಾಡಲಾಗುತ್ತಿದೆ. ಇದನ್ನು ಸಿಎಂ ಗಮನಕ್ಕೆ ತರಲು ಮನೆಯೊಂದರ ನಲ್ಲಿ ನೀರನ್ನು ಬಾಟಲಿಯಲ್ಲಿ ಸಂಗ್ರಹಿಸಿ ದೆಹಲಿ ಮುಖ್ಯಮಂತ್ರಿಯ ನಿವಾಸದ ಹೊರಗೆ ಸುರಿದಿದ್ದಾರೆ.

    ಬಳಿಕ ಮಾತನಾಡಿ, ಸಾಗರಪುರ, ದ್ವಾರಕಾದ ಜನರು ನೀರಿನ ಸಮಸ್ಯೆ ವಿಚಾರವಾಗಿ ನನಗೆ ಕರೆ ಮಾಡಿದ್ದರು. ನಾನು ಒಂದು ಮನೆಗೆ ಹೋದೆ, ಅಲ್ಲಿ ಕಲುಷಿತ ನೀರು ಸರಬರಾಜು ಮಾಡಲಾಗುತ್ತಿದೆ. ನಾನು ಆ ಕಲುಷಿತ ನೀರನ್ನು ಬಾಟಲಿಯಲ್ಲಿ ತುಂಬಿಸಿ ಆ ನೀರನ್ನು ಇಲ್ಲಿಗೆ ತಂದಿದ್ದೇನೆ. ಜನರಿಗೆ 2015ರಿಂದಲೂ ಮುಂದಿನ ವರ್ಷ ಎಲ್ಲವೂ ಸರಿಹೋಗುತ್ತದೆ ಎಂದು ಕೇಳುತ್ತಲೇ ಇದ್ದೇವೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

    ಈ ಪ್ರದೇಶದಲ್ಲಿ ನೀರು ಪೂರೈಕೆಯ ಸ್ಥಿತಿ 15 ದಿನಗಳಲ್ಲಿ ಸುಧಾರಿಸದಿದ್ದರೆ, ಈಗ ಬಾಟಲಿಯಲ್ಲಿ ತಂದಿದ್ದೇನೆ. ಇನ್ನೂ ದುರ್ವಾಸನೆ ಬೀರುವ ನೀರಿನ ಟ್ಯಾಂಕರ್‌ನೊಂದಿಗೆ ಹಿಂತಿರುಗಿ ಬರುವುದಾಗಿ ಅವರು ಎಚ್ಚರಿಸಿದ್ದಾರೆ.

  • ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆದ ವ್ಯಕ್ತಿಯನ್ನೇ ನೋಡಿಲ್ಲ – ಮೋದಿಗೆ ಕೇಜ್ರಿವಾಲ್ ತಿರುಗೇಟು

    ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆದ ವ್ಯಕ್ತಿಯನ್ನೇ ನೋಡಿಲ್ಲ – ಮೋದಿಗೆ ಕೇಜ್ರಿವಾಲ್ ತಿರುಗೇಟು

    ನವದೆಹಲಿ: ರಾಜಕೀಯ ಹಿತಾಸಕ್ತಿಗಳ ಕಾರಣದಿಂದ ಆಯುಷ್ಮಾನ್ ಭಾರತ್ (Ayushman Bharat) ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೊಳಿಸಲು ವಿಫಲವಾಗಿದೆ, ಸಾರ್ವಜನಿಕ ಆರೋಗ್ಯದ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ.

    ದೆಹಲಿ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೊಳಿಸಲು ವಿಫಲವಾಗಿದೆ ಎಂದು ಟೀಕಿಸಿದ ಪ್ರಧಾನಿ ಮೋದಿಗೆ (Narendra Modi) ಕೇಜ್ರಿವಾಲ್‌ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: Hyderabad | ಮೊಮೊಸ್ ತಿಂದು ಓರ್ವ ಮಹಿಳೆ ಸಾವು ಬೆನ್ನಲ್ಲೇ 20 ಜನರಿಗೆ ಫುಡ್ ಪಾಯ್ಸನ್

    ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಅವರು, ಸಾರ್ವಜನಿಕ ಆರೋಗ್ಯದ ವಿಷಯದ ಬಗ್ಗೆ ತಪ್ಪಾಗಿ ಮಾತನಾಡುವುದು ಮತ್ತು ಅದರ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ. ಪ್ರಧಾನಿ ಮೋದಿ ದೆಹಲಿ ಮಾದರಿಯ ಆರೋಗ್ಯ ರಕ್ಷಣೆ ಯೋಜನೆಯನ್ನು ಅಧ್ಯಯನ ಮಾಡಬೇಕು. ದೆಹಲಿ ಸರ್ಕಾರದ ಯೋಜನೆಯಡಿಯಲ್ಲಿ, ನಗರದ ಪ್ರತಿಯೊಬ್ಬ ವ್ಯಕ್ತಿಯು ಉಚಿತ ವೈದ್ಯಕೀಯ ಚಿಕಿತ್ಸೆಯನ್ನು ಪಡೆಯುತ್ತಾನೆ. 5 ರೂ. ಮಾತ್ರೆ ಅಥವಾ 1 ಕೋಟಿ ರೂ. ಮೌಲ್ಯದ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸುತ್ತದೆ ಎಂದು ಹೇಳಿದರು. ಇದನ್ನೂ ಓದಿ: Darshan Case File | ಜೂನ್‌ 8 ರಿಂದ ಅ.30ರ ವರೆಗೆ ಏನೆಲ್ಲಾ ಆಯ್ತು?

    ಜನರಿಗೆ ವಾಸ್ತವದಲ್ಲಿ ಆರೋಗ್ಯ ಪ್ರಯೋಜನಕ್ಕಾಗಿ ದೇಶದಾದ್ಯಂತ ದೆಹಲಿಯಂತೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯನ್ನು ಬದಲಿಸಬೇಕು ಎಂದು ಒತ್ತಾಯಿಸಿದ ಕೇಜ್ರಿವಾಲ್, ಈವರೆಗೂ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆದ ವ್ಯಕ್ತಿಯನ್ನು ತಾನು ಇನ್ನೂ ಭೇಟಿ ಮಾಡಿಲ್ಲ ಎಂದು ಕೇಜ್ರಿವಾಲ್ ವ್ಯಂಗ್ಯ ಮಾಡಿದರು. ಆಯುಷ್ಮಾನ್ ಭಾರತ್ ಯೋಜನೆಯಡಿ ಸಿಎಜಿ ಅದರಲ್ಲಿ ಹಲವಾರು ಅಕ್ರಮಗಳನ್ನು ಕಂಡುಹಿಡಿದಿದೆ ಎಂದು ಹೇಳಿದರು.

    ಆಯುಷ್ಮಾನ್ ಭಾರತ್ ʻವಿಫಲʼ ಯೋಜನೆಯಾಗಿದೆ ಎಂದು ದೆಹಲಿಯ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ. ಯೋಜನೆಯನ್ನು ಜಾರಿಗೊಳಿಸಿದ ಉತ್ತರ ಪ್ರದೇಶ, ಹರಿಯಾಣ ಮತ್ತು ರಾಜಸ್ಥಾನದಂತಹ ಬಿಜೆಪಿ ಆಡಳಿತ ರಾಜ್ಯಗಳ ಬಡ ರೋಗಿಗಳು ಶಸ್ತ್ರಚಿಕಿತ್ಸೆಗಾಗಿ ದೆಹಲಿಯ ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ ಎಂದು ಅವರು ತಿರಗೇಟು ನೀಡಿದರು. ಇದನ್ನೂ ಓದಿ: ದರ್ಶನ್‌ಗೆ ಜಾಮೀನು – ಪಾಸ್‌ಪೋರ್ಟ್‌ ಒಪ್ಪಿಸುವಂತೆ ಕೋರ್ಟ್‌ ಸೂಚಿಸಿದ್ದೇಕೆ?

  • ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ದೆಹಲಿ ಸಿಎಂ ಅತಿಶಿ

    ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ದೆಹಲಿ ಸಿಎಂ ಅತಿಶಿ

    ನವದೆಹಲಿ: ದೆಹಲಿ ಸಿಎಂ ಅತಿಶಿ (CM Atishi) ಇಂದು (ಅ.14) ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra Modi) ಭೇಟಿ ಮಾಡಿದ್ದಾರೆ.

    ಸೋಮವಾರ ಸಿಎಂ ಅತಿಶಿ ಪ್ರಧಾನಿಯನ್ನು ಭೇಟಿಯಾಗಿ ರಾಷ್ಟ್ರ ರಾಜಧಾನಿಯ ಅಭಿವೃದ್ಧಿಯ ಕುರಿತು ಚರ್ಚಿಸಿ, ಕೇಂದ್ರದ ಸಂಪೂರ್ಣ ಸಹಕಾರ ಕೋರಿದರು.ಇದನ್ನೂ ಓದಿ:ದರ್ಶನ್‌, ಪವಿತ್ರಾಗೆ ಜೈಲೇಗತಿ – ಜಾಮೀನು ಅರ್ಜಿ ವಜಾ

    ಪ್ರಧಾನಿ ಮೋದಿಯವರ ಭೇಟಿಯ ಕುರಿತು ದೆಹಲಿ ಸಿಎಂ ಅತಿಶಿ ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ನಾನು ಇಂದು ನರೇಂದ್ರ ಮೋದಿಜಿಯವರನ್ನು ಭೇಟಿಯಾಗಿದ್ದೆ. ರಾಷ್ಟ್ರ ರಾಜಧಾನಿಯ ಕಲ್ಯಾಣ ಮತ್ತು ಪ್ರಗತಿಗಾಗಿ ಕೇಂದ್ರ ಸರ್ಕಾರತದ ಸಂಪೂರ್ಣ ಸಹಕಾರದ ನಿರೀಕ್ಷೆಯಿದ್ದು, ದೊರೆಯುತ್ತದೆ ಎಂದು ಭಾವಿಸುತ್ತೇನೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

    ದೆಹಲಿ ಅಬಕಾರಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಜೈಲುವಾಸ ಅನುಭವಿಸಿದ್ದರು. ಬಿಡುಗಡೆಯ ನಂತರ ಕೇಜ್ರಿವಾಲ್ ರಾಜೀನಾಮೆ ಘೋಷಿಸಿದ್ದರು. ಬಳಿಕ ಸೆಪ್ಟೆಂಬರ್‌ನಲ್ಲಿ ಅತಿಶಿ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸುಷ್ಮಾ ಸ್ವರಾಜ್ ಮತ್ತು ಶೀಲಾ ದೀಕ್ಷಿತ್ ನಂತರ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿಯಾಗಿ ಅತಿಶಿ ಅಧಿಕಾರ ಸ್ವೀಕರಿಸಿದ್ದಾರೆ.ಇದನ್ನೂ ಓದಿ:ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ – ಮೂವರು ಆರೋಪಿಗಳಿಗೆ ಜಾಮೀನು

  • ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಕೈಕೊಟ್ಟು ಕಾಶ್ಮೀರದಲ್ಲಿ ಎನ್‌ಸಿ ಕೈ ಹಿಡಿದ ಆಪ್‌!

    ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಕೈಕೊಟ್ಟು ಕಾಶ್ಮೀರದಲ್ಲಿ ಎನ್‌ಸಿ ಕೈ ಹಿಡಿದ ಆಪ್‌!

    ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಕಾಶ್ಮೀರದಲ್ಲಿ (Jammu Kashmir) ನ್ಯಾಷನಲ್‌ ಕಾನ್ಫರೆನ್ಸ್‌ಗೆ (National Conference) ಆಪ್‌ ಬೆಂಬಲ ನೀಡಿದೆ.

    ಗುರುವಾರ ಎನ್‌ಸಿಗೆ 4 ಮಂದಿ ಪಕ್ಷೇತರ ಶಾಸಕರು ಬೆಂಬಲ ನೀಡಿದ್ದರು. ಈ ಮೂಲಕ ಕಾಂಗ್ರೆಸ್‌ ಬೆಂಬಲ ಇಲ್ಲದೇ ಬಹುಮತವನ್ನು ಸಾಧಿಸಿತ್ತು. ಈಗ ದೊಡಾ ಕ್ಷೇತ್ರದ ಆಪ್‌ (AAP) ಶಾಸಕ ಮೆಹರಾಜ್‌ ಮಲಿಕ್‌ ಅವರು ಎನ್‌ಸಿಗೆ ಬೆಂಬಲ ನೀಡಿದ್ದಾರೆ.

    ಲೋಕಸಭಾ ಚುನಾವಣೆ (Lok Sabha Election) ವೇಳೆ ಹರಿಯಾಣದಲ್ಲಿ (Haryana) ಕಾಂಗ್ರೆಸ್‌ ಮತ್ತು ಆಪ್‌ ಮೈತ್ರಿ ಮಾಡಿಕೊಂಡಿದ್ದರೆ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಜಮ್ಮು ಕಾಶ್ಮೀರದಲ್ಲಿ ಚುನಾವಣೆಗೂ ಮೊದಲೇ ನ್ಯಾಷನಲ್‌ ಕಾನ್ಫರೆನ್ಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿತ್ತು. ಆಪ್‌ ಪ್ರತ್ಯೇಕವಾಗಿ ಕಣಕ್ಕೆ ಇಳಿದಿತ್ತು. ಆದರೆ ಈಗ ನ್ಯಾಷನಲ್‌ ಕಾನ್ಫರೆನ್ಸ್‌ಗೆ ಆಪ್‌ ಬೆಂಬಲ ನೀಡುವ ಮೂಲಕ ಕಾಂಗ್ರೆಸ್‌ಗೆ ಶಾಕ್‌ ನೀಡಿದೆ.

    ಜಮ್ಮು ಕಾಶ್ಮೀರದಲ್ಲಿ ಒಟ್ಟು 90 ಸ್ಥಾನಗಳಿಗೆ ಚುನಾವಣೆ (Election) ನಡೆದಿದ್ದು ಸರ್ಕಾರ ರಚನೆಗೆ 46 ಶಾಸಕರ ಬೆಂಬಲ ಬೇಕು. ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌ 42, ಕಾಂಗ್ರೆಸ್‌ 6 ಸ್ಥಾನ ಗೆದ್ದರೆ 7 ಮಂದಿ ಪಕ್ಷೇತರರು ಗೆದ್ದಿದ್ದರು. 7 ಮಂದಿಯ ಪೈಕಿ 4 ಮಂದಿ ಎನ್‌ಸಿಗೆ ಬೆಂಬಲ ನೀಡಿದ್ದಾರೆ. ಉಳಿದ ಶಾಸಕರ ಜೊತೆ ಮಾತುಕತೆ ನಡೆಯುತ್ತಿದೆ ಎಂದು ಒಮರ್‌ ಅಬ್ದುಲ್ಲಾ ತಿಳಿಸಿದ್ದರು.

    ಪಕ್ಷೇತರರ ಜೊತೆ ಆಪ್‌ ಬೆಂಬಲ ನೀಡಿದ್ದರಿಂದ ಎನ್‌ಸಿ ಬಲ ಮತ್ತಷ್ಟು ಗಟ್ಟಿಯಾಗಲಿದೆ. ಪಕ್ಷೇತರರ ಬಲ ಇರುವ ಕಾರಣ ಮಂತ್ರಿ ಸ್ಥಾನ ಹಂಚುವ ವೇಳೆ ಕಾಂಗ್ರೆಸ್‌ ಶಾಸಕರಿಗೆ ಮಂತ್ರಿಗಿರಿ ಸಿಗುವ ಸಾಧ್ಯತೆ ಕಡಿಮೆಯಿದೆ.

    ಯಾರು ಎಷ್ಟು ಸ್ಥಾನ?
    ನ್ಯಾಷನಲ್‌ ಕಾನ್ಫರೆನ್ಸ್‌ – 42
    ಬಿಜೆಪಿ – 29
    ಕಾಂಗ್ರೆಸ್‌ – 06
    ಪಿಡಿಪಿ – 03
    ಜೆಪಿಸಿ – 1
    ಸಿಪಿಐ(ಎಂ)- 01
    ಆಪ್‌ – 01
    ಇತರರು – 07

    ಹರಿಯಾಣ ಚುನಾವಣೆಗೂ ಮುನ್ನ ಆಪ್‌ ಮತ್ತು ಕಾಂಗ್ರೆಸ್‌ ಮಧ್ಯೆ ಸೀಟು ಹಂಚಿಕೆಯ ಬಗ್ಗೆ ಮಾತುಕತೆ ನಡೆದಿತ್ತು. ಈ ವೇಳೆ ಆಪ್‌ 10 ಸ್ಥಾನ ನೀಡುವಂತೆ ಕೇಳಿಕೊಂಡಿತ್ತು. ಆದರೆ ಕಾಂಗ್ರೆಸ್‌ ಆಪ್‌ ಮನವಿಯನ್ನು ತಿರಸ್ಕರಿಸಿತ್ತು.  ಇದನ್ನೂ ಓದಿ:ಏಕಾಂಗಿಯಾಗಿ ಸ್ಪರ್ಧಿಸಿದ್ದರಿಂದ ಕಾಂಗ್ರೆಸ್‌ಗೆ ಸೋಲು – ಮೈತ್ರಿ ಪಕ್ಷವನ್ನೇ ಟೀಕಿಸಿದ ಶಿವಸೇನೆ

    ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಸೋಲಾದ ಬೆನ್ನಲ್ಲೇ INDIA ಒಕ್ಕೂಟದ ಸದಸ್ಯರು ನೇರವಾಗಿಯೇ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಲು ಆರಂಭಿಸಿದ್ದಾರೆ. ಮಿತ್ರ ಪಕ್ಷಗಳ ಜೊತೆ ಮಾತುಕತೆ ನಡೆಸಿ ಸ್ಥಾನ ಹಂಚಿಕೊಂಡಿದ್ದರೆ ಹರಿಯಾಣವನ್ನು ಗೆಲ್ಲಬಹುದಿತ್ತು ಎಂದು ಹೇಳಿವೆ.

     

    ಇನ್ನೊಂದು ಕಡೆ ಭಾರತ ರಾಷ್ಟ್ರ ಸಮಿತಿ ಉಪಾಧ್ಯಕ್ಷ ಮಾಜಿ ಸಚಿವ ಕೆಟಿ ರಾಮ ರಾವ್‌ ಒಮರ್‌ ಅಬ್ದುಲ್ಲಾ ಅವರನ್ನು ಅಭಿನಂದಿಸಿದ್ದಾರೆ. ತೆಲಂಗಾಣದಲ್ಲಿ ಕಾಂಗ್ರೆಸ್‌ ಮತ್ತು ಬಿಆರ್‌ಎಸ್‌ ಪಕ್ಷಗಳು ಪರಸ್ಪರ ಎದುರಾಳಿಗಳು ಎನ್ನುವುದು ವಿಶೇಷ.

     

  • ಬಿಜೆಪಿ ಒತ್ತಡಕ್ಕೆ ಮಣಿದು ಬಲವಂತವಾಗಿ ದೆಹಲಿ ಸಿಎಂ ಮನೆ ಖಾಲಿ ಮಾಡಿಸಲಾಗಿದೆ: ಎಎಪಿ ಆರೋಪ

    ಬಿಜೆಪಿ ಒತ್ತಡಕ್ಕೆ ಮಣಿದು ಬಲವಂತವಾಗಿ ದೆಹಲಿ ಸಿಎಂ ಮನೆ ಖಾಲಿ ಮಾಡಿಸಲಾಗಿದೆ: ಎಎಪಿ ಆರೋಪ

    ನವದೆಹಲಿ: ದೆಹಲಿ ಮುಖ್ಯಮಂತ್ರಿಗಳ (Delhi CM) ನಿವಾಸವನ್ನು ಬಿಜೆಪಿ (BJP) ಒತ್ತಡದಿಂದ ಬಲವಂತವಾಗಿ ಖಾಲಿ ಮಾಡಿಸಲಾಗಿದೆ ಎಂದು ಆಮ್‌ ಆದ್ಮಿ ಪಕ್ಷ (AAP) ಆರೋಪಿಸಿದೆ.

    ದೆಹಲಿ ಮುಖ್ಯಮಂತ್ರಿ ಅತಿಶಿ (Atishi) ಅವರು ತಮ್ಮ ಅಧಿಕೃತ ನಿವಾಸಕ್ಕೆ ತೆರಳಿದ ಎರಡು ದಿನಗಳ ನಂತರ ಅವರನ್ನು ಹೊರಹಾಕಲಾಗಿದೆ ಎಂದು ಎಎಪಿ ದೂರಿದೆ. ಈ ಆರೋಪವು ಎಎಪಿ ಮತ್ತು ಕೇಂದ್ರ ಸರ್ಕಾರದ ನಡುವಿನ ಜಟಾಪಟಿಗೆ ಕಾರಣವಾಗಿದೆ. ಇದನ್ನೂ ಓದಿ: ಇವಿಎಂ ಹ್ಯಾಕ್‌ ಮಾಡಲಾಗಿದೆ: ಹರಿಯಾಣ ಸೋಲಿನ ಬಗ್ಗೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು

    ದೆಹಲಿ ಮುಖ್ಯಮಂತ್ರಿ ಕಚೇರಿಯಿಂದ ಅತಿಶಿ ಅವರ ವಸ್ತುಗಳನ್ನು ಬಿಜೆಪಿ ಆಜ್ಞೆಯ ಮೇರೆಗೆ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಅವರು ಬಲವಂತವಾಗಿ ತೆಗೆಸಿದ್ದಾರೆ ಎಂದು ಎಎಪಿ ಆರೋಪಿಸಿದೆ. ಆದರೆ ಸಕ್ಸೇನಾ ಅವರು ಈ ಆರೋಪಗಳನ್ನು ತಳ್ಳಿಹಾಕಿದ್ದಾರೆ.

    ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಖ್ಯಮಂತ್ರಿ ನಿವಾಸವನ್ನು ತೆರವು ಮಾಡಲಾಗಿದೆ. ಬಿಜೆಪಿಯ ಆಜ್ಞೆಯ ಮೇರೆಗೆ ಲೆಫ್ಟಿನೆಂಟ್ ಗವರ್ನರ್, ಮುಖ್ಯಮಂತ್ರಿ ಅತಿಶಿ ಅವರ ವಸ್ತುಗಳನ್ನು ಮುಖ್ಯಮಂತ್ರಿ ನಿವಾಸದಿಂದ ಬಲವಂತವಾಗಿ ತೆಗೆದುಹಾಕಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಆರೋಪಿಸಿದ್ದಾರೆ. ಇದನ್ನೂ ಓದಿ: ವೈಜಾಗ್ ಸ್ಟೀಲ್ ಪುನಶ್ಚೇತನ ವಿಚಾರ – ನಿರ್ಮಲಾ ಸೀತಾರಾಮನ್, ನಾಯ್ಡು ಜೊತೆಗೆ ಹೆಚ್‌ಡಿಕೆ ಚರ್ಚೆ

    ಮುಖ್ಯಮಂತ್ರಿ ಅತಿಶಿ ಅವರಿಗೆ ಈ ಮನೆಯನ್ನು (ಸಿವಿಲ್‌ ಲೈನ್ಸ್‌ನ 6, ಫ್ಲ್ಯಾಗ್‌ ಸ್ಟಾಪ್‌ ರಸ್ತೆಯಲ್ಲಿರುವ ಸಿಎಂ ನಿವಾಸ) ಇನ್ನೂ ಮಂಜೂರು ಮಾಡಿಲ್ಲ. ಅವರಿಗೆ ಮಂಜೂರು ಮಾಡಿದ ನಿವಾಸವು ಇನ್ನೂ 17 ಎಬಿ ಮಥುರಾ ರಸ್ತೆಯಾಗಿದೆ. ಎರಡು ಮನೆಗಳನ್ನು ಹೇಗೆ ಮಂಜೂರು ಮಾಡಲು ಸಾಧ್ಯ ಎಂದು ಗವರ್ನರ್‌ ಕಚೇರಿ ಮೂಲಗಳು ತಿಳಿಸಿವೆ.

  • ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ – ಖಾತೆ ತೆರೆದ ಎಎಪಿ; ಬಿಜೆಪಿ ಅಭ್ಯರ್ಥಿ ವಿರುದ್ಧ ಮಲಿಕ್‌ ಜಯಭೇರಿ

    ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ – ಖಾತೆ ತೆರೆದ ಎಎಪಿ; ಬಿಜೆಪಿ ಅಭ್ಯರ್ಥಿ ವಿರುದ್ಧ ಮಲಿಕ್‌ ಜಯಭೇರಿ

    ಶ್ರೀನಗರ: ಜಮ್ಮು-ಕಾಶ್ಮೀರದ (Jammu Kashmir) ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ರಾಜ್ಯದಲ್ಲಿ ಆಮ್‌ ಆದ್ಮಿ ಪಕ್ಷ (AAP) ಖಾತೆ ತೆರೆದಿದೆ.

    ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ, ಜಮ್ಮು ಮತ್ತು ಕಾಶ್ಮೀರದ ದೋಡಾ ವಿಧಾನಸಭಾ ಕ್ಷೇತ್ರದಲ್ಲಿ ಜಯಗಳಿಸಿ ಇತಿಹಾಸ ಬರೆದಿದೆ. ಆಪ್ ಅಭ್ಯರ್ಥಿ ಮೆಹರಾಜ್ ಮಲಿಕ್, ಬಿಜೆಪಿಯ ಗಜಯ್ ಸಿಂಗ್ ರಾಣಾ ಅವರನ್ನು ಸೋಲಿಸಿದ್ದಾರೆ. ಇದನ್ನೂ ಓದಿ: Jammu Kashmir Election Results| ಉಗ್ರರಿಂದ ಹತ್ಯೆಯಾಗಿದ್ದ ವ್ಯಕ್ತಿಯ ಮಗಳಿಗೆ ಒಲಿದ ಜಯ

    36 ನೇ ವಯಸ್ಸಿನಲ್ಲಿ ಮಲಿಕ್ ಅವರು ತಮ್ಮ ಪರ್ವತ ಪ್ರದೇಶದ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಭರವಸೆಯ ಮೇಲೆ ಮತ ಕೇಳಿದ್ದರು. ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ದೋಡಾದಲ್ಲಿ ರ‍್ಯಾಲಿ ನಡೆಸಿದ್ದು, ಮಲಿಕ್‌ ಪ್ರಚಾರಕ್ಕೆ ಮತ್ತಷ್ಟು ಶಕ್ತಿ ನೀಡಿತ್ತು.

    2014 ರ ಬಳಿಕ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಿತು. ಸೆ.18 ರಂದು ಮೊದಲ ಹಂತದಲ್ಲಿ 24 ಸ್ಥಾನಗಳಿಗೆ ಮತದಾನ ನಡೆಯಿತು. ಸೆ.25 ರಂದು ಎರಡನೇ ಹಂತದಲ್ಲಿ 26 ಸ್ಥಾನ ಹಾಗೂ ಅ.1 ರಂದು ಕೊನೆ ಹಂತದಲ್ಲಿ 40 ಕ್ಷೇತ್ರಗಳಿಗೆ ಮತದಾನ ನಡೆಯಿತು. ಇದನ್ನೂ ಓದಿ: Haryana Results| ಕಾಂಗ್ರೆಸ್‌ ಸೋತಿದ್ದು ಹೇಗೆ? – ಇಲ್ಲಿದೆ 6 ಕಾರಣಗಳು

    ಕಾಶ್ಮೀರದಲ್ಲಿ ಎನ್‌ಸಿ-ಕಾಂಗ್ರೆಸ್ ಒಟ್ಟು 90 ಸ್ಥಾನಗಳಲ್ಲಿ 40-48, ಬಿಜೆಪಿ 27-32, ಪಿಡಿಪಿ 6-12 ಮತ್ತು ಇತರರು 6-11 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ರಾಜ್ಯದಲ್ಲಿ ಸರ್ಕಾರ ರಚಿಸಲು 46 ಸ್ಥಾನಗಳ ಅಗತ್ಯವಿದೆ. ಎನ್‌ಸಿ-ಕಾಂಗ್ರೆಸ್‌ ಮೈತ್ರಿಕೂಟ ರಾಜ್ಯದಲ್ಲಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ.

  • Haryana Results| ಕಾಂಗ್ರೆಸ್‌ ಸೋತಿದ್ದು ಹೇಗೆ? – ಇಲ್ಲಿದೆ 6 ಕಾರಣಗಳು

    Haryana Results| ಕಾಂಗ್ರೆಸ್‌ ಸೋತಿದ್ದು ಹೇಗೆ? – ಇಲ್ಲಿದೆ 6 ಕಾರಣಗಳು

    ನವದೆಹಲಿ: ಹರಿಯಾಣದಲ್ಲಿ ಬಿಜೆಪಿ (BJP) ಹ್ಯಾಟ್ರಿಕ್‌ ಸಾಧನೆ ಮಾಡಿದೆ. ಆಡಳಿತ ವಿರೋಧಿ ಅಲೆಯಿಂದ ಈ ಬಾರಿ ಗೆಲುವು ನಮ್ಮದೇ ಎಂದು ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್‌ ಸೋತಿದೆ.

    ಚುನಾವಣಾ (Haryana Election) ಪ್ರಚಾರ ಭಾಷಣದಲ್ಲಿ ಪ್ರಧಾನಿ ಮೋದಿ (PM Narendra Modi) ಅವರು ಕೇಂದ್ರದಲ್ಲಿ ಯಾವ ಪಕ್ಷ ಅಧಿಕಾರದಲ್ಲಿ ಇರುತ್ತದೋ ಆ ಪಕ್ಷಕ್ಕೆ ಹರಿಯಾಣ ಜನ ಮತ ಹಾಕುತ್ತಾರೆ ಎಂದು ಪದೇ ಪದೇ ಉಲ್ಲೇಖಿಸುತ್ತಿದ್ದರು. ಅದರಂತೆ ಮತ್ತೆ ಹರಿಯಾಣ ಜನತೆ ಬಿಜೆಪಿಗೆ ಮತ ನೀಡಿದ್ದಾರೆ.

    ಆಡಳಿತ ವಿರೋಧಿ ಅಲೆ, ರೈತರ ಆಕ್ರೋಶ, ಅಗ್ನಿವೀರ್‌ ನೇಮಕಾತಿ ಮತ್ತು ಕುಸ್ತಿಪಟುಗಳ ಪ್ರತಿಭಟನೆಯಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆ ಎಂದೇ ಊಹಿಸಲಾಗಿತ್ತು. ಆದರೆ ಹರಿಯಾಣದಲ್ಲಿ ಈ ವಿಚಾರಗಳು ಕೆಲಸ ಮಾಡಿಲ್ಲ.

    ಕಾಂಗ್ರೆಸ್‌ ಸೋತಿದ್ದು ಹೇಗೆ?
    ಜಾಟ್ ಮತದಾರರ ಮೇಲೆ ಅತಿಯಾದ ಅವಲಂಬನೆ
    ರಾಜ್ಯದ ಮತದಾರರ ಪೈಕಿ ಸುಮಾರು 27% ರಷ್ಟಿರುವ ಜಾಟ್ ಮತದಾರರ ಮೇಲೆ ಕಾಂಗ್ರೆಸ್ ಹೆಚ್ಚು ಅವಲಂಬಿತವಾಗಿತ್ತು. ಜಾಟ್ ಪ್ರಾಬಲ್ಯದ ಸ್ಥಾನಗಳ ಪೈಕಿ, ಕೈತಾಲ್, ಜುಲಾನಾ, ಉಚ್ಚಾನ ಕಲಾನ್, ತೋಹಾನಾ, ದಬ್ವಾಲಿ, ಎಲೆನಾಬಾದ್, ನಾರ್ನಾಂಡ್, ಮೆಹಮ್, ಗರ್ಹಿ ಸಂಪ್ಲಾ-ಕಿಲೋಯ್ ಮತ್ತು ಬದ್ಲಿಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದರೂ ಪಾಣಿಪತ್ ಗ್ರಾಮಾಂತರ, ಸೋನಿಪತ್, ಗೊಹಾನಾ, ಬಧ್ರಾ, ಜಜ್ಜರ್ ಬಿಜೆಪಿ ಪರವಾಗಿ ಮತ ಚಲಾಯಿಸಿದ್ದಾರೆ.

    ಇನ್ನೊಂದು ಕಡೆ ಬಿಜೆಪಿ ಜಾಟ್‌ ಜೊತೆ ಒಬಿಸಿ ಮತಗಳನ್ನು ಸೆಳೆಯಲು ಮುಂದಾಯಿತು. ಚುನಾವಣೆ ವೇಳೆ ಜಾಟ್‌ ಮತಗಳು ಕಾಂಗ್ರೆಸ್‌ಗೆ ಬಿದ್ದರೂ ಬಿಜೆಪಿಗೂ ಬಿದ್ದಿದೆ. ಒಬಿಸಿ ವರ್ಗದ ಮತಗಳು ಬಿಜೆಪಿಗೆ ಬಿದ್ದ ಪರಿಣಾಮ ಕಾಂಗ್ರೆಸ್‌ ಚುನಾವಣೆಯಲ್ಲಿ ಸೋತಿದೆ. ಇದನ್ನೂ ಓದಿ: ಸತ್ಯಕ್ಕೆ ಜಯವಾಗಿದೆ: ಚೊಚ್ಚಲ ಚುನಾವಣೆಯಲ್ಲಿ ಜಯಭೇರಿ ಭಾರಿಸಿದ ಫೋಗಟ್ ಮಾತು

    ಆಂತರಿಕ ಕಿತ್ತಾಟ
    ಆಂತರಿಕ ಕಲಹಗಳು, ವಿಶೇಷವಾಗಿ ದಲಿತ ನಾಯಕಿ ಮತ್ತು ಸಿರ್ಸಾ ಸಂಸದೆ ಕುಮಾರಿ ಸೆಲ್ಜಾ ಮತ್ತು ಮಾಜಿ ಸಿಎಂ ಮತ್ತು ಜಾಟ್ ನಾಯಕ ಭೂಪಿಂದರ್ ಸಿಂಗ್ ಹೂಡಾ ನಡುವಿನ ಕಲಹದಿಂದ ಕಾಂಗ್ರೆಸ್‌ ಭಾರೀ ನಷ್ಟ ಅನುಭವಿಸಿದೆ.

    ಹೂಡಾ ಹೇಳಿದ ಅಭ್ಯರ್ಥಿಗಳಿಗೆ  ಟಿಕೆಟ್‌ ನೀಡಿದ್ದಕ್ಕಾಗಿ ಪಕ್ಷದೊಂದಿಗೆ ಅಸಮಾಧಾನಗೊಂಡಿದ್ದ ಸೆಲ್ಜಾ ಕೆಲವು ದಿನಗಳ ಕಾಲ ಪ್ರಚಾರದಿಂದಲೇ ದೂರ ಉಳಿದಿದ್ದರು. ಅವರನ್ನು ಮನವೊಲಿಸಿದ ಬಳಿಕ ಕೊನೆಯ ಹಂತದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ಅಷ್ಟೇ ಅಲ್ಲದೇ ಅವರು ಪದೇ ಪದೇ ಸಿಎಂ ಕುರ್ಚಿಯ ಮೇಲೆ ಹಕ್ಕು ಸಾಧಿಸಿದ್ದು ಪಕ್ಷಕ್ಕೆ ಮುಳುವಾಯಿತು.

    ಸಿಎಂ ಸೈನಿ ಪ್ರಭಾವ:
    2014ರ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ್ದರೂ ಜಾಟ್‌ ಅಲ್ಲದ ಮನೋಹರ್‌ ಲಾಲ್‌ ಕಟ್ಟರ್‌ ಅವರನ್ನು ಸಿಎಂ ಹುದ್ದೆಗೆ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿತ್ತು.ರೈತರ ಹೋರಾಟ ತೀವ್ರಗೊಂಡ ಬಳಿಕ ಲೋಕಸಭೆ ಚುನಾವಣೆಗೂ ಮೊದಲು ಒಬಿಸಿ ಸಮುದಾಯ ನಯಾಬ್ ಸಿಂಗ್ ಸೈನಿಗೆ ಸಿಎಂ ಹುದ್ದೆ ನೀಡಿತ್ತು.

    ಕಾಂಗ್ರೆಸ್‌ ಯಾವಾಗಲೂ ಬಿಜೆಪಿಯನ್ನು ದಲಿತ ವಿರೋಧಿ ಎಂದು ದೂರಿಕೊಂಡೇ ಬಂದಿತ್ತು. ತನ್ನ ವಿರುದ್ಧ ಆರೋಪವನ್ನು ತೊಡೆದು ಹಾಕಲು ಬಿಜೆಪಿ ಸೈನಿಗೆ ಸಿಎಂ ಹುದ್ದೆ ನೀಡಿತ್ತು. ಇದರಿಂದಾಗಿ ಬಿಜೆಪಿ ದಲಿತ ಮತಗಳನ್ನು ಸೆಳೆಯುವಲ್ಲಿ ಯಶಸ್ವಿಯಾಯಿತು. ಅಷ್ಟೇ ಅಲ್ಲದೇ ಚುನಾವಣೆಯಲ್ಲಿ ಗೆದ್ದರೆ ನಯಾಬ್ ಸಿಂಗ್ ಸೈನಿಯೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದಾರೆ ಎಂದು ಹೇಳಿತ್ತು. ಆದರೆ ಕಾಂಗ್ರೆಸ್‌ ಈ ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿಯನ್ನು ಪ್ರಕಟಿಸಿರಲಿಲ್ಲ. ಇದನ್ನೂ ಓದಿ: Haryana Election Results | ಆಪ್‌ನಿಂದ ಬಿಜೆಪಿ ಮುನ್ನಡೆ?

    ಅಭ್ಯರ್ಥಿಗಳ ಆಯ್ಕೆಯಲ್ಲಿ ವಿಫಲ:
    ಹರಿಯಾಣದಲ್ಲಿ ಇರುವುದು ಒಟ್ಟು 90 ಕ್ಷೇತ್ರಗಳು. ಆದರೆ ಕಾಂಗ್ರೆಸ್ಸಿನ 2,565 ಮಂದಿ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದರು. ಬಂಡಾಯ ಶಮನ ಮಾಡಲು ಅಭ್ಯರ್ಥಿಗಳ 8 ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಅಷ್ಟೇ ಅಲ್ಲದೇ ನಾಮಪತ್ರ ಸಲ್ಲಿಸುವ ಕೊನೆಯ ದಿನ ಕಾಂಗ್ರೆಸ್‌ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

    ಟಿಕೆಟ್‌ ಹಂಚಿಕೆಯಲ್ಲೂ ಭೂಪಿಂದರ್ ಸಿಂಗ್ ಹೂಡಾ ಮಾತೇ ಬಹಳಷ್ಟು ಕಡೆ ಫೈನಲ್‌ ಆಗಿತ್ತು. ಅವರ ಬೆಂಬಲಿಗರಿಗೆ ಟಿಕೆಟ್‌ ನೀಡುವಂತೆ ಹೈಕಮಾಂಡ್‌ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ಹೂಡಾ ಶಿಫಾರಸು ಮಾಡಿದ ಶಾಸಕರ ಪೈಕಿ 13 ಮಂದಿ ಮಾತ್ರ ಗೆದ್ದಿದ್ದಾರೆ.

    ಅತಿಯಾದ ಆತ್ಮವಿಶ್ವಾಸ:
    ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಒಟ್ಟು 10 ಕ್ಷೇತ್ರಗಳ ಪೈಕಿ 5 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಹೀಗಾಗಿ ಕಾಂಗ್ರೆಸ್‌ ಈ ಚುನಾವಣೆಯನ್ನು ಗೆಲ್ಲಬಹುದು ಎಂದು ಅತಿಯಾದ ಆತ್ಮವಿಶ್ವಾಸವನ್ನು ಹೊಂದಿತ್ತು. ಆದರೆ ಲೋಕಸಭಾ ಚುನಾವಣೆಯಲ್ಲಿ ಸೋತ ಬಿಜೆಪಿ ತಳಮಟ್ಟದಿಂದ ಪಕ್ಷವನ್ನು ಸಂಘಟಿಸಲು ಆರಂಭಿಸಿತ್ತು.

    ಕೈ ಹಿಡಿಯದ ಗ್ಯಾರಂಟಿ:
    ಹರಿಯಾಣದಲ್ಲೂ ಕಾಂಗ್ರೆಸ್‌ ಭರ್ಜರಿ ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿತ್ತು. ಆದರೆ ಬಿಜೆಪಿ ಹಿಮಾಚಲ ಮತ್ತು ಕರ್ನಾಟಕದ ಉದಾಹರಣೆ ನೀಡಿ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಪ್ರಚಾರ ಮಾಡಿತ್ತು. ಅದರಲ್ಲೂ ಮೋದಿ ಅವರು ಹಲವು ಬಾರಿ ಈ ಎರಡು ರಾಜ್ಯಗಳ ಉದಾಹರಣೆಯನ್ನು ಕಾಂಗ್ರೆಸ್‌ ಗ್ಯಾರಂಟಿಯನ್ನು ಟೀಕೆ ಮಾಡಿದ್ದರು.