Tag: AB de Villiers

  • WPL 2024: ಆರ್‌ಸಿಬಿಯಲ್ಲಿ ಲೇಡಿ ʻಎಬಿಡಿʼ – ಸೋಶಿಯಲ್‌ ಮೀಡಿಯಾದಲ್ಲಿ ಫುಲ್‌ ಟ್ರೆಂಡ್‌!

    WPL 2024: ಆರ್‌ಸಿಬಿಯಲ್ಲಿ ಲೇಡಿ ʻಎಬಿಡಿʼ – ಸೋಶಿಯಲ್‌ ಮೀಡಿಯಾದಲ್ಲಿ ಫುಲ್‌ ಟ್ರೆಂಡ್‌!

    ಬೆಂಗಳೂರು: ವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ ಲೀಗ್‌ ಟೂರ್ನಿಯಲ್ಲಿ ಆರ್‌ಸಿಬಿ (RCB) ಪುರುಷರು ಹಾಗೂ ಮಹಿಳಾ ತಂಡಕ್ಕೆ ಸಾಕಷ್ಟು ಟ್ರೆಂಡ್‌ ಇದೆ. ಕಳೆದ ವರ್ಷದಿಂದ ಆರಂಭಗೊಂಡಿದ್ದರೂ ಆರ್‌ಸಿಬಿ ಮಹಿಳಾ ತಂಡಕ್ಕೆ ಇರುವ ಅಭಿಮಾನಿಗಳ (RCB Fans) ಸಂಖ್ಯೆ ಕಡಿಮೆಯೇನಿಲ್ಲ. ಹಾಗಾಗಿಯೇ ಇತರ ತಂಡಗಳಿಗಿಂತ ಆರ್‌ಸಿಬಿ ವಿಶೇಷವಾಗಿ ಗುರುತಿಸಿಕೊಂಡಿದೆ.

    ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ ನಡೆದ ಪಂದ್ಯ‌ವು ಕ್ರಿಕೆಟ್‌ ಅಭಿಮಾನಿಗಳ ಕಣ್ಣಿಗೆ ಹಬ್ಬವಾಗಿತ್ತು. 25 ಸಾವಿರಕ್ಕೂ ಹೆಚ್ಚು ಮಂದಿ ಮೈದಾನದಲ್ಲಿ ಸೇರಿದ್ದರು. ಆದ್ರೆ ಆರಂಭಿಕ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದ ಆರ್‌ಸಿಬಿ ತಂಡ ಮಹಿಳಾ ಪ್ರೀಮಿಯರ್ ಲೀಗ್​​ನ (TATA WPL 2024) ತನ್ನ 3ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 25 ರನ್​ಗಳ ಅಂತರದಿಂದ ಸೋಲು ಕಂಡಿತು.

    ಪ್ರತಿ ಆವೃತ್ತಿಗಳಲ್ಲೂ ಒಂದಿಲ್ಲೊಂದು ಸ್ಮರಣಿಕೆಯನ್ನು ಅಭಿಮಾನಿಗಳ ಕಣ್ಣಿಗೆ ಕಟ್ಟಿಕೊಡುವ ಆರ್‌ಸಿಬಿ ಗುರುವಾರ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ನಡೆದ ಪಂದ್ಯವನ್ನೂ ಅಭಿಮಾನಿಗಳ ನೆನಪಿನಲ್ಲಿ ಉಳಿಯುವಂತೆ ಮಾಡಿದೆ. ಇದನ್ನೂ ಓದಿ: ವ್ಯರ್ಥವಾಯ್ತು ಸ್ಮೃತಿ ಸ್ಫೋಟಕ ಅರ್ಧಶತಕ – ಡೆಲ್ಲಿಗೆ 25 ರನ್‌ಗಳ ಜಯ

    ಹೌದು. ಟಾಸ್‌ ಗೆದ್ದು ಮೊದಲು ಫೀಲ್ಡಿಂಗ್‌ ಆಯ್ದುಕೊಂಡ ಆರ್‌ಸಿಬಿ ಆರಂಭದಲ್ಲಿ ಉತ್ತಮ ಹಿಡಿತ ಸಾಧಿಸಿದರೂ ಡೆತ್‌ ಓವರ್‌ನಲ್ಲಿ ಹೆಚ್ಚು ರನ್‌ ಬಿಟ್ಟುಕೊಟ್ಟಿತು. ಈ ವೇಳೆ ಜಾರ್ಜಿಯಾ ವೇರ್ಹ್ಯಾಮ್ (Georgia Wareham) ಅವರ ಬೌಂಡರಿ ಲೈನ್ ಬಳಿ ಹಿಡಿದ ಬಾಲ್‌ವೊಂದು ಆರ್​ಸಿಬಿ ಮಾಜಿ ಆಟಗಾರ ಎಬಿಡಿ ವಿಲಿಯರ್ಸ್​ (Ab De Villiers) ಅವರ ಕ್ಯಾಚ್​ ಅನ್ನು ನೆನಪಿಸುವಂತೆ ಮಾಡಿತು. 11ನೇ ಓವರ್​ನ 3ನೇ ಎಸೆತದಲ್ಲಿ ಶಫಾಲಿ ವರ್ಮಾ ಆಕ್ರಮಣಕಾರಿ ಆಟವಾಡುತ್ತಿದ್ದರು. ಈ ವೇಳೆ ಡಿ-ಕ್ಲೆರ್ಕ್ ಅವರ ಚೆಂಡನ್ನು ಮಿಡ್​ ವಿಕೆಟ್​ ಕಡೆಗೆ ಸಿಕ್ಸರ್‌ ಬಾರಿಸಲು ಯತ್ನಿಸಿದರು. ಚೆಂಡು ಬೌಂಡರಿ ಗೆರೆಯಾಚೆ ಬಿದ್ದು ಸಿಕ್ಸರ್ ಆಗಬೇಕಾಗಿತ್ತು. ಆದರೆ, ಮೈದಾನದಲ್ಲಿ ಜಾರ್ಜಿಯಾ ವೇರ್ಹ್ಯಾಮ್ ಅದ್ಭುತ ಫೀಲ್ಡಿಂಗ್‌ನೊಂದಿಗೆ ಸಿಕ್ಸರ್‌ ಆಗುವುದನ್ನು ತಡೆದರು.

    ಜಾರ್ಜಿಯಾ ವೇರ್ಹ್ಯಾಮ್ ಬೌಂಡರಿ ಲೈನ್ ಮೇಲೆ ಹಾರಿ ಚೆಂಡು ಹಿಡಿದ ವೇಳೆ ಅದೇ ಸ್ಟೇಡಿಯಮ್​ನಲ್ಲಿ ಎಬಿ ಡಿವಿಲಿಯರ್ಸ್ ಅವರ ವಿಶೇಷ ಕ್ಯಾಚ್ ಅಭಿಮಾನಿಗಳ ನೆನಪಿಗೆ ಬಂತು. ಬೆಂಗಳೂರು ತಂಡದ ಮಾಜಿ ಬ್ಯಾಟರ್​​ ಐಪಿಎಲ್ 2018 ರಲ್ಲಿ ಅದೇ ರೀತಿ ಹಾರಿ ಒಂದೇ ಕೈನಲ್ಲಿ ಅದ್ಭುತ ಕ್ಯಾಚ್ ಹಿಡಿದಿದ್ದರು. ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಅಲೆಕ್ಸ್ ಹೇಲ್ಸ್ ಆರ್​ಸಿಬಿ ಬೌಲರ್​ ಮೊಯಿನ್ ಅಲಿ ಎಸೆತಕ್ಕೆ ಸಿಕ್ಸರ್‌ ಎತ್ತುವ ಪ್ರಯತ್ನ ಮಾಡಿದ್ದರು. ಚೆಂಡು ಸಿಕ್ಸರ್‌ಗೆ ಹೋಯ್ತು ಅನ್ನುವಷ್ಟರಲ್ಲೇ ಎಬಿಡಿ ಕ್ಯಾಚ್‌ ಹಿಡಿದು ಸರ್ಪ್ರೈಸ್‌ ಕೊಟ್ಟಿದ್ದರು. ಜಾರ್ಜಿಯಾ ಅವರ ಕ್ಯಾಚ್‌ ಈ ಸನ್ನಿವೇಶವನ್ನ ನೆನಪಿಸಿದ್ದು, ಸೋಶಿಯಲ್‌ ಮೀಡಿಯಾಗಳಲ್ಲೂ ʻಲೇಡಿ ಎಬಿಡಿʼ ಎಂಬ ಟ್ರೆಂಡ್‌ ಹುಟ್ಟಿಕೊಂಡಿದೆ. ಇದನ್ನೂ ಓದಿ: WPL 2024: ಆರ್‌ಸಿಬಿ ಸ್ಟಾರ್‌ ಶ್ರೇಯಾಂಕ ಪಾಟೀಲ್‌ಗೆ ಮದುವೆ ಪ್ರಪೋಸಲ್‌ ಕೊಟ್ಟ ಅಭಿಮಾನಿ 

  • ಸುಳ್ಳು ಮಾಹಿತಿ ಹರಡಿ ದೊಡ್ಡ ತಪ್ಪು ಮಾಡಿದೆ- ಕ್ಷಮೆಯಾಚಿಸಿದ ಎಬಿಡಿ

    ಸುಳ್ಳು ಮಾಹಿತಿ ಹರಡಿ ದೊಡ್ಡ ತಪ್ಪು ಮಾಡಿದೆ- ಕ್ಷಮೆಯಾಚಿಸಿದ ಎಬಿಡಿ

    ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಇತ್ತೀಚೆಗೆ ಬಹಿರಂಗಪಡಿಸಿದ್ದರು. ಆದರೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಎಬಿ ಡಿವಿಲಿಯರ್ಸ್ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

    ನಾನು ನನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿದಂತೆ ಕುಟುಂಬ ಮೊದಲ ಆದ್ಯತೆಯಾಗಿದೆ. ಅದೇ ಸಮಯದಲ್ಲಿ ನಾನು ದೊಡ್ಡ ತಪ್ಪೊಂದನ್ನು ಮಾಡಿದ್ದೇನೆ, ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದೆ. ವಿರಾಟ್ ಕೊಹ್ಲಿ ಅನುಷ್ಕಾ ಶರ್ಮಾ (Virat Kohli- Anushka Sharma) 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿದ್ದೇನೆ. ಇದಕ್ಕಾಗಿ ಕ್ಷಮೆ ಇರಲಿ ಎಂದು ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.

    ಎಬಿ ಡಿವಿಲಿಯರ್ಸ್ ಹೇಳಿದ್ದೇನು..?: ನಾನು ವಿಡಿಯೋ ಮೂಲಕ ಕುಟುಂಬ ಮೊದಲು ಎಂದು ಹೇಳಿದ್ದೆ. ಇದು ಸತ್ಯ ಕೂಡ. ಇದೇ ವೇಳೆ ಮಾತು ಮುಂದುವರಿಸಿ ಕೊಹ್ಲಿ ಹಾಗೂ ಅನುಷ್ಕಾ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಅಂತಾ ಹೇಳಿದ್ದೆ. ಆದರೆ ಈ ಮಾಹಿತಿ ತಪ್ಪಾಗಿದೆ. ವಿರಾಟ್ ಕೊಹ್ಲಿ ಅವರ ಕುಟುಂಬದ ಜೊತೆಗಿದ್ದಾರೆ. ಕೊಹ್ಲಿ ಟೆಸ್ಟ್ ಪಂದ್ಯಕ್ಕೆ ಗೈರಾಗಿರುವುದಕ್ಕೆ ಕಾರಣವೇನು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಕೊಹ್ಲಿ ವಿಶ್ರಾಂತಿಗೆ ಕಾರಣ ಏನೇ ಇರಬಹುದು. ಆದರೆ ಅವರಿಗೆ ನಾನು ಶುಭ ಹಾರೈಸುತ್ತೇನೆ. ವಿಶ್ರಾಂತಿ ಬಳಿಕ ವಿರಾಟ್ ಕೊಹ್ಲಿ ಮತ್ತಷ್ಟು ಪವರ್‌ಫುಲ್ ಆಗಿ ಕಮ್‌ಬ್ಯಾಕ್ ಮಾಡಲಿದ್ದಾರೆ ಎಂದು ಹೇಳುವ ಮೂಲಕ ಎಬಿ ಡಿವಿಲಿಯರ್ಸ್ (AB de Villiers) ಸ್ಪಷ್ಟನೆ ಕೊಟ್ಟಿದ್ದಾರೆ. ಇದನ್ನೂ ಓದಿ: ರೋಹಿತ್‌ ಪತ್ನಿ ರಿತಿಕಾ ಅಸಮಾಧಾನ ಬೆನ್ನಲ್ಲೇ ಪಾಂಡ್ಯನಿಗೆ ಬಿಗ್‌ ವಾರ್ನಿಂಗ್‌!

    ನವೆಂಬರ್ 2023 ರಲ್ಲಿ ಅನುಷ್ಕಾ ಅವರ ಎರಡನೇ ಗರ್ಭಧಾರಣೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಊಹಾಪೋಹಗಳು ಹರಿದಾಡಿದವು. ವಿಶೇಷವಾಗಿ ನೆದರ್ಲ್ಯಾಂಡ್ಸ್ ವಿರುದ್ಧ ಟೀಮ್ ಇಂಡಿಯಾದ ವಿಶ್ವಕಪ್ ಪಂದ್ಯದ ಮೊದಲು ಬೆಂಗಳೂರಿನಲ್ಲಿ ನಡೆದ ದೀಪಾವಳಿ ಬ್ಯಾಷ್‌ನಲ್ಲಿ ಭಾಗಿಯಾಗಿದ್ದರು. ಈ ವೇಳೆ ಅನುಷ್ಕಾ ಅವರ ಗರ್ಭಿಣಿ ಎಂದು ಕೆಲ ಬೇಬಿ ಬಂಪ್‌ ಫೋಟೋಗಳು ವೈರಲ್‌ ಆದವು.

    ವಿರಾಟ್ ಮತ್ತು ಅನುಷ್ಕಾ 2017ರ ಡಿಸೆಂಬರ್ 11 ರಂದು ಇಟಲಿಯಲ್ಲಿ ವಿವಾಹವಾದರು. 2021ರ ಜನವರಿ 11 ರಂದು ವಾಮಿಕಾ ಹುಟ್ಟಿದಳು.

  • World Cup 2023: ಹಿಟ್‌ಮ್ಯಾನ್‌ ಸಿಕ್ಸರ್‌ ಹೊಡೆತಕ್ಕೆ ಲೆಜೆಂಡ್‌ ABD ದಾಖಲೆ ಪುಡಿಪುಡಿ

    World Cup 2023: ಹಿಟ್‌ಮ್ಯಾನ್‌ ಸಿಕ್ಸರ್‌ ಹೊಡೆತಕ್ಕೆ ಲೆಜೆಂಡ್‌ ABD ದಾಖಲೆ ಪುಡಿಪುಡಿ

    ಬೆಂಗಳೂರು: ಟೀಂ ಇಂಡಿಯಾ (Team India) ಬ್ಯಾಟರ್‌ಗಳ ಅಬ್ಬರಕ್ಕೆ ವಿಶ್ವದಾಖಲೆಗಳು ನುಚ್ಚುನೂರಾಗುತ್ತಿವೆ. ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ (ODI) ಭಾರತದ ಪರ 300ಕ್ಕೂ ಅಧಿಕ ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದ ರೋಹಿತ್ ಶರ್ಮಾ (Rohit Sharma) ಇದೀಗ ಸಿಕ್ಸರ್‌ನಿಂದಲೇ ಮತ್ತೊಂದು ದಾಖಲೆ ಸಿಡಿಸಿದ್ದಾರೆ.

    ಭಾನುವಾರ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆದರ್ಲೆಂಡ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ ಮಾಡಿತು. ಆರಂಭದಿಂದಲೇ ಸಿಕ್ಸರ್‌, ಬೌಂಡರಿ ಅಬ್ಬರಿಸಿದ ರೋಹಿತ್‌ ಶರ್ಮಾ 54 ಎಸೆತಗಳಲ್ಲಿ 61 ರನ್ ಬಾರಿಸಿದರು. ಈ ವೇಳೆ 8 ಬೌಂಡರಿ, 4 ಸಿಕ್ಸರ್‌ಗಳನ್ನೂ ಸಿಡಿಸಿದರು. ಈ ಮೂಲಕ ಕ್ಯಾಲೆಂಡರ್ ವರ್ಷದಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ವಿಶ್ವದ ನಂ.1 ಬ್ಯಾಟರ್ ಎಂಬ ಖ್ಯಾತಿಯನ್ನು ಗಳಿಸಿದ್ದಾರೆ. ಇದನ್ನೂ ಓದಿ: World Cup 2023: ಮೈಲಿಗಲ್ಲು ಸ್ಥಾಪಿಸಲು RO-KO ವೇಯ್ಟಿಂಗ್‌ – ಸೂಪರ್‌ ಸಂಡೇ ಡಬಲ್‌ ಧಮಾಕ..!

    2015ರಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿಡಿ ವಿಲಿಯರ್ಸ್ (AB de Villiers) 58 ಸಿಕ್ಸರ್‌ ಹಾಗೂ 2019ರ ವರ್ಷದಲ್ಲಿ ವೆಸ್ಟ್ ಇಂಡೀಸ್‌ನ ಮಾಜಿ ಕ್ರಿಕೆಟಿಗ ಕ್ರಿಸ್‌ ಗೇಲ್ 56 ಸಿಕ್ಸರ್ ಸಿಡಿಸಿ ಒಂದು ವರ್ಷದಲ್ಲಿ ಅತಿಹೆಚ್ಚು ಸಿಕ್ಸರ್‌ ಸಿಡಿಸಿದ್ದ ದಾಖಲೆ ಬರೆದಿದ್ದರು. 2023ರಲ್ಲಿ ರೋಹಿತ್ ಶರ್ಮಾ 59 ಸಿಕ್ಸರ್ ಸಿಡಿಸಿ ಇಬ್ಬರು ದಿಗ್ಗಜರ ದಾಖಲೆಗಳನ್ನ ಉಡೀಸ್‌ ಮಾಡಿದ್ದಾರೆ. ಒಟ್ಟು ಈ ವರ್ಷದಲ್ಲಿ ರೋಹಿತ್‌ ಈವರೆಗೆ 60 ಸಿಕ್ಸರ್‌ಗಳನ್ನ ಸಿಡಿಸಿದ್ದಾರೆ. ಇದನ್ನೂ ಓದಿ: ಪಾಕ್‌ ಮುಂದಿರುವ ಘೋರ ಸವಾಲು ಯಾವುದು? – ಎಷ್ಟು ರನ್‌ ಅಂತರದಲ್ಲಿ ಗೆದ್ದರೆ ಸೆಮಿಸ್‌ ತಲುಪಬಹುದು?

    ಸೂಪರ್‌ ಸಂಡೇ ಮ್ಯಾಚ್‌ನಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಸ್ಫೋಟಕ ಆರಂಭ ಪಡೆಯಿತು. ಆರಂಭದಲ್ಲೇ ಡಚ್ಚರನ್ನು ಬೆಂಡೆತ್ತಲು ಶುರು ಮಾಡಿದ ರೋಹಿತ್‌ ಶರ್ಮಾ ಹಾಗೂ ಶುಭಮನ್‌ ಗಿಲ್‌ ಜೋಡಿ ಮೊದಲ ವಿಕೆಟ್‌ಗೆ 71 ಎಸೆತಗಳಲ್ಲಿ 100 ರನ್‌ಗಳ ಜೊತೆಯಾಟ ನೀಡಿತು. ಶುಭಮನ್‌ ಗಿಲ್‌ 32 ಎಸೆತಗಳಲ್ಲಿ 51 ರನ್‌ (4 ಸಿಕ್ಸರ್‌, 3 ಬೌಂಡರಿ) ಗಳಿಸಿದ್ರೆ, ರೋಹಿತ್‌ ಶರ್ಮಾ ಒಟ್ಟು 54 ಎಸೆತಗಳಲ್ಲಿ 61 ರನ್‌ (2 ಸಿಕ್ಸರ್‌, 8 ಬೌಂಡರಿ) ಚಚ್ಚಿ ಔಟಾದರು. ಇದನ್ನೂ ಓದಿ: ವಿಶ್ವಕಪ್‌ ಪವರ್‌ ಪ್ಲೇನಲ್ಲಿ ವಿಶೇಷ ಸಾಧನೆ ನಿರ್ಮಿಸಿದ ರೋಹಿತ್‌ ಶರ್ಮಾ

    14,000 ರನ್‌ ಕಂಪ್ಲೀಟ್‌: ನದರ್ಲೆಂಡ್ಸ್‌ ವಿರುದ್ಧ ಸ್ಫೋಟಕ ಇನ್ನಿಂಗ್ಸ್‌ ಕಟ್ಟಿದ ರೋಹಿತ್‌ ಶರ್ಮಾ ಆರಂಭಿಕನಾಗಿಯೇ 14 ಸಾವಿರ ರನ್‌ ಪೂರೈಸಿದ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: World Cup 2023: ಗೆದ್ದು ಆಟ ಮುಗಿಸಿದ ಇಂಗ್ಲೆಂಡ್‌ – ಹೀನಾಯ ಸೋಲಿನೊಂದಿಗೆ ಪಾಕ್‌ ಮನೆಗೆ

  • World Cup 2023: ಸಿಕ್ಸರ್‌ನಿಂದಲೇ ಮತ್ತೊಂದು ದಾಖಲೆ ಬರೆದ ಸಿಕ್ಸರ್ ಶರ್ಮಾ

    World Cup 2023: ಸಿಕ್ಸರ್‌ನಿಂದಲೇ ಮತ್ತೊಂದು ದಾಖಲೆ ಬರೆದ ಸಿಕ್ಸರ್ ಶರ್ಮಾ

    ಧರ್ಮಶಾಲಾ: ಟೀಂ ಇಂಡಿಯಾ (Team India) ಬ್ಯಾಟರ್‌ಗಳ ಅಬ್ಬರಕ್ಕೆ ವಿಶ್ವದಾಖಲೆಗಳು ನುಚ್ಚುನೂರಾಗುತ್ತಿವೆ. ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ (ODI) ಭಾರತದ ಪರ 300ಕ್ಕೂ ಅಧಿಕ ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದ ರೋಹಿತ್ ಶರ್ಮಾ (Rohit Sharma) ಇದೀಗ ಸಿಕ್ಸರ್ ನಿಂದಲೇ ಮತ್ತೊಂದು ದಾಖಲೆ ಸಿಡಿಸಿದ್ದಾರೆ.

    ನ್ಯೂಜಿಲೆಂಡ್ ವಿರುದ್ಧ ಭಾನುವಾರ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 40 ಎಸೆತಗಳಲ್ಲಿ 46 ರನ್ ಬಾರಿಸಿದ ರೋಹಿತ್ ಶರ್ಮಾ 4 ಬೌಂಡರಿ, 4 ಸಿಕ್ಸರ್‌ಗಳನ್ನೂ ಸಿಡಿಸಿದರು. ಈ ಮೂಲಕ ಕ್ಯಾಲೆಂಡರ್ ವರ್ಷದಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಭಾರತದ ನಂ.1 ಬ್ಯಾಟರ್ ಹಾಗೂ ವಿಶ್ವದ 3ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೊಹ್ಲಿ, ಶಮಿ ಮಿಂಚು; 20 ವರ್ಷಗಳ ನಂತರ ಕಿವೀಸ್‌ ಮಣಿಸಿದ ಭಾರತ

    2015ರಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿಡಿ ವಿಲಿಯರ್ಸ್ (AB de Villiers) 58 ಸಿಕ್ಸರ್‌ ಹಾಗೂ 2019ರ ವರ್ಷದಲ್ಲಿ ವೆಸ್ಟ್ ಇಂಡೀಸ್‌ನ ಮಾಜಿ ಕ್ರಿಕೆಟಿಗ ಕ್ರಿಸ್‌ ಗೇಲ್ 56 ಸಿಕ್ಸರ್ ಸಿಡಿಸಿ ದಾಖಲೆ ಬರೆದಿದ್ದರು. ಇದೀಗ 2023ರಲ್ಲಿ ರೋಹಿತ್ ಶರ್ಮಾ 53 ಸಿಕ್ಸರ್ ಸಿಡಿಸಿ ವಿಶೇಷ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ಶಮಿ ಹೊಸ ದಾಖಲೆ – ODI ವಿಶ್ವಕಪ್‌ ಇತಿಹಾಸದಲ್ಲೇ 2 ಬಾರಿ ಐದು ವಿಕೆಟ್‌ ಕಬಳಿಸಿದ ಮೊದಲ ಭಾರತೀಯ

    ಭಾನುವಾರ ನಡೆದ ರೋಚಕ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ 273 ರನ್‌ಗಳಿಗೆ ಸರ್ವಪತನ ಕಂಡಿತ್ತು. ಈ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ 48 ಓವರ್‌ಗಳಲ್ಲೇ 6 ವಿಕೆಟ್ ನಷ್ಟಕ್ಕೆ 274 ರನ್ ಸಿಡಿಸಿ ದಾಖಲೆ ಬರೆಯಿತು. ಇದನ್ನೂ ಓದಿ: ರೋಹಿತ್‌ ಶರ್ಮಾ ಸ್ಫೋಟಕ ಶತಕ – 8 ವಿಕೆಟ್‌ಗಳ ಜಯದೊಂದಿಗೆ ಪಾಕ್‌ ಹಿಂದಿಕ್ಕಿದ ಭಾರತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ʻಈ ಸಲ ಕಪ್‌ ನಮ್ದೆʼ – RCB ಅಭಿಮಾನಿಗಳನ್ನ ಹಾಡಿ ಹೊಗಳಿದ ಎಬಿಡಿ

    ʻಈ ಸಲ ಕಪ್‌ ನಮ್ದೆʼ – RCB ಅಭಿಮಾನಿಗಳನ್ನ ಹಾಡಿ ಹೊಗಳಿದ ಎಬಿಡಿ

    ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಅನ್‌ ಬಾಕ್ಸ್‌ ಕಾರ್ಯಕ್ರಮದಲ್ಲಿ ಬೆಂಗಳೂರು ಫ್ರಾಂಚೈಸಿಯು, ಎಬಿಡಿ ವಿಲಿಯರ್ಸ್ (AB de Villiers) ಹಾಗೂ ಕ್ರಿಸ್‌ ಗೇಲ್‌ (Chris Gayle) ಅವರಿಗೆ ಹಾಲ್‌ ಆಫ್‌ ಫೇಮ್‌ ನೀಡುವ ಮೂಲಕ ಭಾನುವಾರ ಗೌರವಿಸಿತು.

    ಈ ವೇಳೆ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ ಎಬಿಡಿ ವಿಲಿಯರ್ಸ್‌, ರಾಯಲ್‌ ಚಾಲೆಂಜರ್ಸ್ ಬೆಂಗಳೂರು (RCB) ಪರ ಆಡಲು ನನಗೆ ಇನ್ನು ಮುಂದೆ ಅವಕಾಶವಿಲ್ಲ. ಆದ್ರೆ, ಒಬ್ಬ ಅಭಿಮಾನಿಯಾಗಿ ಆರ್‌ಸಿಬಿ ತಂಡವನ್ನ ಬೆಂಬಲಿಸುತ್ತೇನೆ. ʻಈ ಸಲ ಕಪ್ ನಮ್ದೆʼ ಎಂದು ಅಭಿಮಾನಿಗಳನ್ನ ಹುರಿದುಂಬಿಸಿದ್ದಾರೆ. ಇದನ್ನೂ ಓದಿ: ಬಿಸಿಸಿಐ ಸೆಂಟ್ರಲ್ ಕಾಂಟ್ರ್ಯಾಕ್ಟ್ ಪಟ್ಟಿ ಔಟ್ – ಯಾರಿಗೆ ವರ್ಷಕ್ಕೆ ಎಷ್ಟು ಸಂಭಾವನೆ?

    ಈ ವೇಳೆ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಲು ಇಷ್ಟಪಡುತ್ತೀರಾ ಎಂದು ಅಭಿಮಾನಿಗಳು ಕೇಳಿದ ಪ್ರಶ್ನೆಗೆ, ಎಬಿ ಡಿವಿಲಿಯರ್ಸ್‌, ಆರ್‌ಸಿಬಿ ಪ್ಲೇಯಿಂಗ್‌ ಇಲೆವೆನ್‌ಗೆ ಮರಳಲು ನನ್ನಿಂದ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: WPLನಲ್ಲಿ ನೋಬಾಲ್‌ ವಿವಾದ – ಚಾಂಪಿಯನ್‌ ಪಟ್ಟ ಕೈತಪ್ಪಿಸಿದ ಆ ಒಂದು ಔಟ್‌

    ಆರ್‌ಸಿಬಿ ಅಭಿಮಾನಿಗಳು ಇಡೀ ವಿಶ್ವದಲ್ಲಿಯೇ ಅತ್ಯುತ್ತಮ ಅಭಿಮಾನಿಗಳು. ಇಲ್ಲಿ ಪಂದ್ಯವನ್ನು ಗೆಲ್ಲುವುದು ಅದ್ಭುತವಾಗಿರುತ್ತದೆ. ಪ್ರಸ್ತುತ ಸಂದರ್ಭದಲ್ಲಿ ಆರ್‌ಸಿಬಿ ತಂಡ ಬಲಿಷ್ಠವಾಗಿದೆ. ಹಾಗಾಗಿ ನನಗೆ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಆಡಲು ಅವಕಾಶ ಸಿಗುವುದಿಲ್ಲ. ಇದರ ಬದಲು ಅಭಿಮಾನಿಯಾಗಿ ಪ್ರಶಸ್ತಿ ಗೆಲ್ಲುವ ಹಾದಿಯಲ್ಲಿ ತಂಡವನ್ನು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ.

    ಆರ್‌ಸಿಬಿ ಪರ 156 ಪಂದ್ಯಗಳನ್ನಾಡಿರುವ ಎಬಿಡಿ 4,491 ರನ್‌ ರನ್‌ ಸಿಡಿಸಿದ್ದಾರೆ. ಈಗಾಗಲೇ ಆರ್‌ಸಿಬಿ ತಂಡ ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದೆ.

  • ವಿರಾಟ್‌ಕೊಹ್ಲಿ ಅಲ್ಲ, ಎಬಿಡಿ ನನ್ನ ರೋಲ್ ಮಾಡೆಲ್ – ಬಾಬರ್ ಅಜಮ್‌

    ವಿರಾಟ್‌ಕೊಹ್ಲಿ ಅಲ್ಲ, ಎಬಿಡಿ ನನ್ನ ರೋಲ್ ಮಾಡೆಲ್ – ಬಾಬರ್ ಅಜಮ್‌

    ಇಸ್ಲಾಮಾಬಾದ್: ಟಿ20 ವಿಶ್ವಕಪ್‌ನಲ್ಲಿ (T20 WorldCup) ಇಂಗ್ಲೆಂಡ್ (England) ಎದುರು ಸೋತು ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡ ಪಾಕಿಸ್ತಾನ (Pakistan), 17 ವರ್ಷಗಳ ಬಳಿಕ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಸಜ್ಜಾಗಿದೆ.

    ಇಂಗ್ಲೆಂಡ್ ತಂಡ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡು ಟೆಸ್ಟ್ ಸರಣಿಯಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ವಿಶೇಷ ಸಂದರ್ಶನದಲ್ಲಿ ಪಾಕ್ ತಂಡದ ನಾಯಕ ಬಾಬರ್ ಆಜಂ (Babar Azam) ಮಾತನಾಡಿದ್ದು, ನನ್ನ ರೋಲ್ ಮಾಡೆಲ್ ವಿರಾಟ್ ಕೊಹ್ಲಿ (Virat Kohli) ಅಲ್ಲ, ಎಬಿಡಿ ವಿಲಿಯರ್ಸ್ (AB de Villiers) ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಪಾಕ್ ಕದನಕ್ಕೂ ಮುನ್ನವೇ ಇಂಗ್ಲೆಂಡ್‌ಗೆ ಆಘಾತ – ಹೆಸರಿಲ್ಲದ ವೈರಸ್‌ಗೆ ತುತ್ತಾದ ಸ್ಟೋಕ್ಸ್ ಪಡೆ

    ಟಿ20 ವಿಶ್ವಕಪ್‌ನ ಆರಂಭಿಕ ಪಂದ್ಯಗಳಲ್ಲಿ ಫ್ಲಾಪ್ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಪಾಕ್ ತಂಡದ ನಾಯಕ ಬಾಬರ್ ಆಜಂ ಸೆಮಿಸ್ ಹಾಗೂ ಫೈನಲ್ ಪಂದ್ಯದಲ್ಲಿ ಭರ್ಜರಿ ಅರ್ಧ ಶತಕ ಸಿಡಿಸಿದ್ದರು. ಇದೀಗ ಇಂಗ್ಲೆಂಡ್‌ನೊಂದಿಗೆ ಟೆಸ್ಟ್ ಸರಣಿಯ ಮೇಲೆ ಚಿತ್ತ ನೆಟ್ಟಿರುವ ಬಾಬರ್ ಅಜಂ ತನ್ನ ನೆಚ್ಚಿನ ಕ್ರಿಕೆಟಿಗ ಯಾರು ಎಂಬುದನ್ನ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಒಂದೇ ಓವರ್‌ನಲ್ಲಿ 7 ಸಿಕ್ಸ್ ಸಿಡಿಸಿ ದಾಖಲೆ ಬರೆದ ಋತುರಾಜ್ ಗಾಯಕ್ವಾಡ್

    ಈ ವೇಳೆ, ಪ್ರಾಮಾಣಿಕವಾಗಿ ಹೇಳಬೇಕೆಂದರೆ ಎಬಿಡಿ ವಿಲಿಯರ್ಸ್ (AB de Villiers) ನನ್ನ ರೋಲ್ ಮಾಡೆಲ್. ನನಗೆ ಅವರೆಂದರೆ ಇಷ್ಟ. ವಿಶೇಷವಾಗಿ ಅವರು ಆಡುವ ಶೈಲಿ ಹಾಗೂ ಶಾಟ್‌ಗಳು ಬಹಳ ಇಷ್ಟ. ಅವರು ಆಡುವುದನ್ನು ಟಿವಿಯಲ್ಲಿ ನೋಡಿದ ಬಳಿಕ ಮರುದಿನ ನಾನು ನೆಟ್ಸ್‌ನಲ್ಲಿ ಅದೇ ರೀತಿಯಾಗಿ ಅಭ್ಯಾಸ ನಡೆಸುತ್ತಿದ್ದೆ. ನನಗೆ ಅವರು ಆದರ್ಶ ಕ್ರಿಕೆಟಿಗನಾಗಿದ್ದ ಕಾರಣದಿಂದಾಗಿ ಅವರಂತೆ ಆಡಲು ನಾನು ಪ್ರಯತ್ನಿಸುತ್ತೇನೆ ಎಂದು ಹೇಳಿಕೋಂಡಿದ್ದಾರೆ.

    ಟೀಂ ಇಂಗ್ಲೆಂಡ್‌ಗೆ ವೆಲ್‌ಕಮ್: ಮುಂದುವರಿದು ಮಾತನಾಡುತ್ತಾ, ಪಾಕಿಸ್ತಾನಕ್ಕೆ ಆಗಮಿಸಿರುವ ಇಂಗ್ಲೆಂಡ್ ತಂಡಕ್ಕೆ ಸ್ವಾಗತ ಕೋರುತ್ತಿದ್ದೇನೆ ಎಂದಿದ್ದಾರೆ. ನಾವು ಈ ಸರಣಿಗಾಗಿ ಎದುರುನೋಡುತ್ತಿದ್ದೇವೆ. ಮೊದಲನೆಯದಾಗಿ ನಾನು ಇಂಗ್ಲೆಂಡ್ ತಂಡಕ್ಕೆ ಸ್ವಾಗತ ಕೋರುತ್ತಿದ್ದೇನೆ. ಟಿ20 ಸರಣಿಗಾಗಿ ಕೆಲ ಆಟಗಾರರು ಆಗಮಿಸಿದ್ದರು. ಅವರು ಇಲ್ಲಿನ ಸಮಯವನ್ನು ಆನಂದಿಸಿದ್ದಾರೆ. ಇಲ್ಲಿನ ವಾತಾವರಣ, ಪಾಕಿಸ್ತಾನದ ಆತಿಥ್ಯವನ್ನು ಆನಂದಿಸಲಿದ್ದಾರೆ. ಈಗ ನಾವು ಸರಣಿಗಾಗಿ ಎದುರುನೋಡುತ್ತಿದ್ದೇವೆ. ಎಲ್ಲರೂ ಉತ್ತಮವಾಗಿ ಆಡಲಿ ಎಂದು ಶುಭ ಕೋರಿದ್ದಾರೆ.

    ಡಿಸೆಂಬರ್ 1 ರಿಂದ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆರಂಭವಾಗಲಿದ್ದು, ಡಿ.1 ರಿಂದ 5ರ ವರೆಗೆ ಮೊದಲ ಟೆಸ್ಟ್, ಡಿ.9 ರಿಂದ 13ರ ವರೆಗೆ 2ನೇ ಟೆಸ್ಟ್ ಹಾಗೂ ಡಿ.17 ರಿಂದ 21ರ ವರೆಗೆ 3ನೇ ಟೆಸ್ಟ್ ಪಂದ್ಯಗಳು ನಡೆಯಲಿವೆ.

    Live Tv
    [brid partner=56869869 player=32851 video=960834 autoplay=true]

  • ಮುಂಬೈ ಗಲ್ಲಿಯಲ್ಲಿ ಅಭಿಮಾನಿಗಳ ಜೊತೆ ಕ್ರಿಕೆಟ್ ಆಡಿದ ಎಬಿಡಿ

    ಮುಂಬೈ ಗಲ್ಲಿಯಲ್ಲಿ ಅಭಿಮಾನಿಗಳ ಜೊತೆ ಕ್ರಿಕೆಟ್ ಆಡಿದ ಎಬಿಡಿ

    ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ (AB de Villiers) ಮುಂಬೈನ (Mumbai) ಗಲ್ಲಿಯಲ್ಲಿ ಕ್ರಿಕೆಟ್ (Street Cricket) ಆಡಿರುವ ವೀಡಿಯೋವೊಂದು ವೈರಲ್ ಆಗುತ್ತಿದೆ.

    ಕೆಲ ದಿನಗಳ ಹಿಂದೆ 2023ರ ಐಪಿಎಲ್ ಮಿನಿ ಹರಾಜಿಗೂ ಮುನ್ನ ಎಬಿಡಿ ಬೆಂಗಳೂರಿಗೆ ಆಗಮಿಸಿ ಫ್ರಾಂಚೈಸ್ ಜೊತೆ ಕಾಣಿಸಿಕೊಂಡಿದ್ದರು. ಅದಕ್ಕೂ ಮೊದಲು ಕಾಂತರ ನಿರ್ದೇಶಕ, ನಟ ರಿಷಬ್ ಶೆಟ್ಟಿಯನ್ನು ಭೇಟಿ ಆಗಿರುವ ಫೋಟೋವೊಂದು ವೈರಲ್ ಆಗಿತ್ತು. ಇದೀಗ ಮುಂಬೈನ ಗಲ್ಲಿಯೊಂದರಲ್ಲಿ ಕ್ರಿಕೆಟ್ ಆಡುತ್ತಾ ಮಸ್ತಿ ಮಾಡುತ್ತಿರುವ ವೀಡಿಯೋವೊಂದು ಹರಿದಾಡುತ್ತಿದೆ.

    ಟ್ವಿಟ್ಟರ್ ಬಳಕೆದಾರನೊಬ್ಬ ಎಬಿಡಿ ಅಭಿಮಾನಿಗಳ ಜೊತೆಗೆ ಕ್ರಿಕೆಟ ಆಡುತ್ತಿರುವ 2 ವೀಡಿಯೋವನ್ನು ಹಂಚಿಕೊಂಡಿದ್ದಾನೆ. ಮೊದಲನೇ ವೀಡಿಯೋದಲ್ಲಿ ಮುಂಬೈನ ಮಹಾಲಕ್ಷ್ಮಿ ಗಲ್ಲಿಯೊಂದರಲ್ಲಿ ಅಭಿಮಾನಿಯೊಬ್ಬರು ಎಸೆದ ಬೌಲ್‍ಗೆ ಎಬಿಡಿ ವಿಲಿಯರ್ಸ್ ಬ್ಯಾಟಿಂಗ್ ಮಾಡುತ್ತಿದ್ದಾರೆ. ನಂತರ ಅಭಿಮಾನಿಗಳಿಂದ ಔಟ್ ಆಗುತ್ತಾರೆ. ಹಾಗೆಯೇ ಮತ್ತೊಂದು ವೀಡಿಯೋದಲ್ಲಿ ಕೀಪರ್ ಆಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಅಲೆಮಾರಿ ರಾಜಕಾರಣಿ, ರಾಜ್ಯದಲ್ಲಿ ಎಲ್ಲಿಯೇ ಸ್ಪರ್ಧಿಸಿದರೂ ಸೋಲುತ್ತಾರೆ : ಈಶ್ವರಪ್ಪ

    ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಎಬಿಡಿ ವಿಲಿಯರ್ಸ್ ಇದೀಗ ಹೊಸ ರೋಲ್‍ನಲ್ಲಿ ತಂಡದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಎಬಿಡಿ ಬೆಂಗಳೂರಿಗೆ ಆಗಮಿಸಿ ಫ್ರಾಂಚೈಸ್ ಜೊತೆ ಆಟಗಾರರ ರಿಲೀಸ್ ಪ್ರಕ್ರಿಯೆಯ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ. ಎಬಿಡಿ 16ನೇ ಆವೃತ್ತಿ ಐಪಿಎಲ್‍ನಲ್ಲಿ ಆರ್‌ಸಿಬಿ ತಂಡದ ಬ್ಯಾಟಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಪ್ರತಿ ಟನ್ ಕಬ್ಬಿಗೆ 3600 ರೂ. MSP ನಿಗದಿ ಪಡಿಸಿ

    Live Tv
    [brid partner=56869869 player=32851 video=960834 autoplay=true]

  • ಎಬಿಡಿ RCB ತಂಡದ ಬ್ಯಾಟಿಂಗ್ ಕೋಚ್?

    ಎಬಿಡಿ RCB ತಂಡದ ಬ್ಯಾಟಿಂಗ್ ಕೋಚ್?

    ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ಮಾಜಿ ಆಟಗಾರ ಎಬಿಡಿ ವಿಲಿಯರ್ಸ್ (AB de Villiers) ಇದೀಗ ಹೊಸ ರೋಲ್‍ನಲ್ಲಿ ತಂಡದಲ್ಲಿ ಕಾಣಿಸಿಕೊಳ್ಳಲು ಸಿದ್ಧರಾಗಿದ್ದಾರೆ.

    2023ರ ಐಪಿಎಲ್ (IPL) ಮಿನಿ ಹರಾಜಿಗೂ ಮುನ್ನ ಎಬಿಡಿ ಬೆಂಗಳೂರಿಗೆ ಆಗಮಿಸಿ ಫ್ರಾಂಚೈಸ್ ಜೊತೆ ಕಾಣಿಸಿಕೊಂಡಿದ್ದಾರೆ. ನಿನ್ನೆ ಎಬಿಡಿ ಬೆಂಗಳೂರಿಗೆ ಆಗಮಿಸಿ ಫ್ರಾಂಚೈಸ್ ಜೊತೆ ಆಟಗಾರರ ರಿಲೀಸ್ ಪ್ರಕ್ರಿಯೆಯ ಬಗ್ಗೆ ಚರ್ಚಿಸಿದ್ದಾರೆ. ಜೊತೆಗೆ ಎಬಿಡಿ 16ನೇ ಆವೃತ್ತಿ ಐಪಿಎಲ್‍ನಲ್ಲಿ ಆರ್​ಸಿಬಿ ತಂಡದ ಬ್ಯಾಟಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ ಜೋಶುವಾ ಲಿಟಲ್

    ಈ ಮೂಲಕ ಆರ್​ಸಿಬಿ ತಂಡದೊಂದಿಗಿನ ಪಯಣವನ್ನು ಮತ್ತೆ ಮುಂದುವರಿಸಲು ಎಬಿಡಿ ಮುಂದಾಗಿದ್ದಾರೆ. ಈ ಹಿಂದೆ ಆರ್​ಸಿಬಿ ತಂಡದ ಆಟಗಾರನಾಗಿ 2021ರ ವರೆಗೆ ಆಡಿದ್ದರು. ಇದೀಗ ಕೋಚ್ ಆಗಿ ಮತ್ತೆ ತಂಡದೊಂದಿಗೆ ಎಬಿಡಿ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ನವೆಂಬರ್ ಮಧ್ಯ ಭಾಗದಲ್ಲಿ ಐಪಿಎಲ್ ಮಿನಿ ಹರಾಜು ನಡೆಯುವ ಸಾಧ್ಯತೆ ಇದೆ. ಇದನ್ನೂ ಓದಿ: ಆಫ್ರಿಕಾಗೆ ಸೋಲು – ಚಿಗುರಿಕೊಂಡ ಪಾಕಿಸ್ತಾನದ ಸೆಮಿಫೈನಲ್ ಕನಸು

    ಈಗಾಗಲೇ ಐಪಿಎಲ್ ಫ್ರಾಂಚೈಸ್‍ಗಳು ಸಿದ್ಧತೆ ಆರಂಭಿಸಿದೆ. ಇದರೊಂದಿಗೆ ಮಹಿಳಾ ಐಪಿಎಲ್ ಕೂಡ ಈ ವರ್ಷದಿಂದ ಆರಂಭವಾಗುತ್ತಿದ್ದು, ಮಹಿಳಾ ತಂಡಗಳನ್ನು ಇದೀಗ ಇರುವ ಪುರುಷರ ಫ್ರಾಂಚೈಸ್‍ಗಳು ಖರೀದಿ ಮಾಡಲು ಮುಂದಾಗಿವೆ. ಐಪಿಎಲ್ ಆಡಳಿತ ಮಂಡಳಿ ಕೂಡ ಐಪಿಎಲ್ ಫ್ರಾಂಚೈಸ್‍ಗಳಿಗೆ ಮಹಿಳಾ ತಂಡಗಳನ್ನು ಖರೀದಿಸಲು ಮೊದಲ ಅವಕಾಶ ನೀಡಿದೆ. ಇದನ್ನೂ ಓದಿ: ಎಬಿಡಿ ಜೊತೆ ʼಕಾಂತಾರʼದ ರಿಷಬ್‌ ಶೆಟ್ಟಿ

    Live Tv
    [brid partner=56869869 player=32851 video=960834 autoplay=true]

  • ಕೊಹ್ಲಿಯ ಈ ಸಾಧನೆಗೂ ಮುನ್ನವೇ ವಿಶ್ ಮಾಡಿದ ದೋಸ್ತಿ ABD

    ಕೊಹ್ಲಿಯ ಈ ಸಾಧನೆಗೂ ಮುನ್ನವೇ ವಿಶ್ ಮಾಡಿದ ದೋಸ್ತಿ ABD

    ದುಬೈ: ಆರ್‌ಸಿಬಿ (ರಾಯಲ್ ಚಾಲೆಂಜರ್ಸ್ ಬೆಂಗಳೂರು) ತಂಡ ಶುರುವಾದಾಗಿನಿಂದಲೂ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಅವರಿಬ್ಬರ ಸ್ನೇಹ ಗೊತ್ತಿರದ ವಿಷಯವೇನಲ್ಲ. ಕೆಲ ವರ್ಷಗಳಲ್ಲಿ ಈ ಇಬ್ಬರ ಜೋಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಮೆಚ್ಚುವಂತೆ ಮಾಡಿದೆ. ಇಬ್ಬರು ಕ್ರೀಸ್‌ಗಿಳಿದು ಅಬ್ಬರಿಸಿದ ಅವಿಸ್ಮರಣೀಯ ಕ್ಷಣಗಳನ್ನು ಅಭಿಮಾನಿಗಳು ಇನ್ನೂ ಮರೆತಿಲ್ಲ.

    ಆದರೆ ಎಬಿಡಿ ಅವರು ನಿವೃತ್ತಿ ಘೋಷಿಸಿದ ನಂತರ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ ತೋರಿದ್ದಾರೆ. 2022ರ 15ನೇ ಆವೃತ್ತಿ ಐಪಿಎಲ್ ಹಾಗೂ ಆ ನಂತರದಲ್ಲಿ ನಡೆದ ಏಕದಿನ ಪಂದ್ಯಗಳಲ್ಲೂ ಕೊಹ್ಲಿ ಕಳಪೆ ಪ್ರದರ್ಶನ ತೋರಿದ್ದಾರೆ. ಆದರೆ ದೀರ್ಘ ವಿರಾಮದ ಬಳಿಕ ಏಷ್ಯಾಕಪ್-2022 ಟಿ20 ಮೂಲಕ ಮತ್ತೆ ತಂಡಕ್ಕೆ ಮರಳಿದ್ದಾರೆ. 

    Virat Kohli, AB De Villiers RCB

    ಅವರಿಂದು ತಮ್ಮ 100ನೇ ಪಂದ್ಯವನ್ನಾಡುವುದಕ್ಕೂ ಮುನ್ನವೇ ಕೊಹ್ಲಿ ಅವರ ಪಕ್ಕಾ ದೋಸ್ತಿ ಎಬಿಡಿ ಖ್ಯಾತಿಯ ಎಬಿ ಡಿವಿಲಿಯರ್ಸ್ ಶುಭ ಕೋರಿದ್ದಾರೆ. ಇದನ್ನೂ ಓದಿ: RCB ಫ್ಯಾನ್ಸ್‌ಗಳಿಗೆ ಭರ್ಜರಿ ಗುಡ್‌ನ್ಯೂಸ್ – ಎಬಿಡಿ ಮತ್ತೆ ಎಂಟ್ರಿ

    ವಿರಾಟ್ ಕೊಹ್ಲಿ ಇಂದು T20 ಆವೃತ್ತಿಯ ತಮ್ಮ 100ನೇ ಪಂದ್ಯವನ್ನಾಡಲಿದ್ದು, ಏಕದಿನ, ಟೆಸ್ಟ್ ಹಾಗೂ ಟಿ20 ಆವೃತ್ತಿಗಳಲ್ಲಿ 100 ಪಂದ್ಯಗಳನ್ನು ಪೂರೈಸಿದ ಮೊದಲ ಭಾರತೀಯನಾಗಲಿದ್ದಾರೆ. ಕೊಹ್ಲಿ ಇಲ್ಲಿಯವರೆಗೆ 102 ಟೆಸ್ಟ್ ಮತ್ತು 262 ಏಕದಿನ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. T20 ನಲ್ಲಿ 99 ಪಂದ್ಯಗಳನ್ನಾಡಿರುವ ಅವರು ಇಂದು ಇಂಡೋ-ಪಾಕ್ ಕದನದಲ್ಲಿ 100ನೇ ಪಂದ್ಯವನ್ನಾಡಲಿದ್ದಾರೆ. ಈ ವಿಶೇಷ ಸಾಧನೆಗೆ ಸಾಕ್ಷಿಯಾಗುವಂತೆ ಎಬಿಡಿ ಶುಭ ಕೋರಿದ್ದಾರೆ. ಇದನ್ನೂ ಓದಿ: ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ ಕಂಗೊಳಿಸಲಿದೆ ಆರ್‌ಸಿಬಿ

    ಈ ಕುರಿತು ಟ್ವೀಟ್‌ನಲ್ಲಿ ವೀಡಿಯೋ ಸಂದೇಶ ಹಂಚಿಕೊಂಡಿರುವ ಎಬಿಡಿ `ಎಲ್ಲಾ ಮೂರು ಮಾದರಿಗಳಲ್ಲೂ 100 ಪಂದ್ಯಗಳನ್ನಾಡಿದ ಮೊದಲ ಭಾರತೀಯನಾಗುತ್ತಿರುವ ನನ್ನ ಉತ್ತಮ ಸ್ನೇಹಿತ ವಿರಾಟ್ ಕೊಹ್ಲಿ ಅವರನ್ನು ನಾನು ಅಭಿನಂದಿಸಲು ಬಯಸುತ್ತೇನೆ. ಎಂತಹ ಅದ್ಭುತ ಸಾಧನೆ ವಿರಾಟ್ ನಿಮ್ಮದು. ನಿಮ್ಮ ಬಗ್ಗೆ ನಮಗೆಲ್ಲರಿಗೂ ತುಂಬಾ ಹೆಮ್ಮೆ ಇದೆ. ನಿಮ್ಮ 100ನೇ ಟಿ20 ಅಂತರಾಷ್ಟ್ರೀಯ ಆಟ ಎಲ್ಲರಿಗೂ ಅತ್ಯುತ್ತಮವಾಗಿರಲಿ. ನಾವು ನಿಮ್ಮನ್ನು ಗಮನಿಸುತ್ತಿರುತ್ತೇವೆ’ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • RCB ಫ್ಯಾನ್ಸ್‌ಗಳಿಗೆ ಭರ್ಜರಿ ಗುಡ್‌ನ್ಯೂಸ್ – ಎಬಿಡಿ ಮತ್ತೆ ಎಂಟ್ರಿ

    RCB ಫ್ಯಾನ್ಸ್‌ಗಳಿಗೆ ಭರ್ಜರಿ ಗುಡ್‌ನ್ಯೂಸ್ – ಎಬಿಡಿ ಮತ್ತೆ ಎಂಟ್ರಿ

    ಮುಂಬೈ: RCB ತಂಡ ಶುರುವಾದಾಗಿನಿಂದಲೂ ವಿರಾಟ್‌ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಅವರಿಬ್ಬರ ಸ್ನೇಹ ಗೊತ್ತಿರದ ವಿಷಯವೇನಲ್ಲ. ಕೆಲ ವರ್ಷಗಳಲ್ಲಿ ಈ ಇಬ್ಬರ ಜೋಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಮೆಚ್ಚುವಂತೆ ಮಾಡಿದೆ. ಆದರೆ, ಎಬಿಡಿ ನಿವೃತ್ತಿ ಘೋಷಿಸಿದ ನಂತರ ವಿರಾಟ್ ಕೊಹ್ಲಿ ಇದೇ ಮೊದಲಬಾರಿಗೆ ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ ತೋರಿದ್ದಾರೆ.

    Virat Kohli, AB De Villiers RCB

    ಸದ್ಯ ಪ್ಲೇ ಆಫ್‌ಗೆ ಇನ್ನೊಂದೆ ಹೆಜ್ಜೆ ತಲುಪಲು ಬಾಕಿ ಇರುವ ಹೊತ್ತಿನಲ್ಲೇ ವಿರಾಟ್ ಕೊಹ್ಲಿ ಆರ್‌ಸಿಬಿ ಅಭಿಮಾನಿಗಳಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಎಬಿಡಿ ಮತ್ತೆ ಆರ್‌ಸಿಬಿಗೆ ಮರಳುತ್ತಿದ್ದಾರೆ ಎನ್ನುವ ವಿಷಯವನ್ನು ಕೊಹ್ಲಿ ಅವರೇ ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ: ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ ಕಂಗೊಳಿಸಲಿದೆ ಆರ್‌ಸಿಬಿ

    ಮಿಸ್ಟರ್ 360 ಡಿಗ್ರಿ ಖ್ಯಾತಿಯ ಎಬಿ ಡಿವಿಲಿಯರ್ಸ್ ಆರ್‌ಸಿಬಿ ಜೆರ್ಸಿ (ಪೋಷಾಕು)ಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎನ್ನುವ ಮಾಹಿತಿ ಹೊರಬಿದ್ದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಟ್ವೀಟ್ ಖಾತೆಯಲ್ಲಿ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು, ಈ ವಿಡಿಯೋ ನಲ್ಲಿ ವಿರಾಟ್ ಕೊಹ್ಲಿ ಮತ್ತೆ ಎಬಿಡಿ ಆರ್‌ಸಿಬಿಗೆ ಮರಳುವುದನ್ನು ಮೌಖಿಕವಾಗಿ ಘೋಷಿಸಿದ್ದಾರೆ.

    ಎಬಿಡಿ ಎಲ್ಲಾ ಸ್ವರೂಪಗಳಿಂದ ನಿವೃತ್ತರಾಗಿದ್ದಾರೆ. ಹಾಗಾಗಿ ಈ ಬಾರಿ ಐಪಿಎಲ್‌ನಲ್ಲಿ ಆಡುವ ಪ್ರಶ್ನೆಯೇ ಇರಲಿಲ್ಲ. ಆದರೆ, ಮುಂದಿನ ಸೀಸನ್‌ಗೆ ಮರಳಲಿದ್ದಾರೆ. ಆರ್‌ಸಿಬಿ ಎಬಿಡಿಯನ್ನು ಮತ್ತೆ ಕರೆಸಿಕೊಳ್ಳುವ ಪ್ರಕ್ರಿಯೆ ಆರಂಭಿಸಿದೆ ಯಾವ ರೀತಿ ಎನ್ನುವುದು ತಿಳಿದು ಬಂದಿಲ್ಲ. ಇದನ್ನೂ ಓದಿ: ಹೈದ್ರಾಬಾದ್ ಹಾರಾಟಕ್ಕೆ ಬ್ರೇಕ್ ಹಾಕಿದ ‘ಗ್ರೀನ್‌ಬಾಯ್ಸ್’- RCBಗೆ 67 ರನ್‌ಗಳ ಭರ್ಜರಿ ಜಯ

    AB de Villiers

    ಇತ್ತೀಚಿನ ಸಂದರ್ಶನವೊಂದರಲ್ಲಿ ವಿರಾಟ್ ಕೊಹ್ಲಿ ಅವರು, ನಾನು ತುಂಬಾ ನೆನಪಿಸಿಕೊಳ್ಳುತ್ತೇನೆ. ಎಬಿಡಿ ಜೊತೆ ಪ್ರತಿದಿನ ಮಾತನಾಡುತ್ತೇನೆ. ನನಗೆ ಸಂದೇಶಗಳನ್ನು ಕಳುಹಿಸುತ್ತಲೇ ಇರುತ್ತಾರೆ. ನಾವು ನಿರಂತರವಾಗಿ ಸಂಪರ್ಕದಲ್ಲಿರುತ್ತೇವೆ. ಅವರೂ ಆರ್‌ಸಿಬಿ ಪಂದ್ಯಗಳನ್ನೂ ಉತ್ಸುಕತೆಯಿಂದ ವೀಕ್ಷಿಸುತ್ತಿದ್ದಾರೆ. ಮುಂದಿನ ವರ್ಷದಲ್ಲಿ ಅವರು ಆರ್‌ಸಿಬಿ ತಂಡಕ್ಕೆ ಮರಳುವ ಆಶಾದಾಯಕ ಬೆಳವಣಿಗೆ ಇದೆ ಎಂದು ಹೇಳಿದ್ದಾರೆ.