Tag: Abbey Falls

  • ಮೃತಪಟ್ಟಿದ್ದಾಳೆ ಎಂದುಕೊಂಡು 3 ದಿನದಿಂದ ಶವಕ್ಕಾಗಿ ಹುಡುಕಾಟ – ನನ್ನನ್ನು ಹುಡುಕ್ಬೇಡಿ ಅಂತ ಬೆಂಗ್ಳೂರಿಂದ ಬಂತು ಕರೆ

    ಮೃತಪಟ್ಟಿದ್ದಾಳೆ ಎಂದುಕೊಂಡು 3 ದಿನದಿಂದ ಶವಕ್ಕಾಗಿ ಹುಡುಕಾಟ – ನನ್ನನ್ನು ಹುಡುಕ್ಬೇಡಿ ಅಂತ ಬೆಂಗ್ಳೂರಿಂದ ಬಂತು ಕರೆ

    ಮಡಿಕೇರಿ: ಕಳೆದ 3 ದಿನಗಳಿಂದ ಮಹಿಳೆ ಮೃತಪಟ್ಟಿದ್ದಾಳೆ ಎಂದುಕೊಂಡು ಜಲಪಾತವೊಂದರಲ್ಲಿ (Falls) ಶವಕ್ಕಾಗಿ ಹುಡುಕಾಟ ನಡೆಸಲಾಗಿತ್ತು. ಆದರೆ ಕೊನೆಗೂ ಮಹಿಳೆ ಸಂಬಂಧಿಕರಿಗೆ ಕರೆ ಮಾಡಿ ನನ್ನನ್ನು ಹುಡುಕಬೇಡಿ ಎಂದು ಹೇಳಿದ್ದಾಳೆ.

    ನನ್ನನ್ನು ಹುಡುಕಬೇಡಿ, ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆಯಲಾಗಿದ್ದ ಡೆತ್ ನೋಟ್, ಜೊತೆಗೊಂದಿಷ್ಟು ದಾಖಲೆಗಳಿದ್ದ ಬ್ಯಾಗ್, ಪಕ್ಕದಲ್ಲಿಯೇ ಚಪ್ಪಲಿ, ಇವೆಲ್ಲಾ ದೊರೆತ್ತಿದ್ದು ಮಡಿಕೇರಿ ಸಮೀಪದ ಅಬ್ಬಿ ಜಲಪಾತದ (Abbey Falls) ಬಳಿ. ಈ ರೀತಿ ಪ್ರಕರಣಗಳು ಕಂಡು ಬಂದರೆ, ಸಾವು ಸಂಭವಿಸಿರಬಹುದು ಎಂದು ಶಂಕಿಸುವುದು ಸಹಜ. ಈ ನಿಟ್ಟಿನಲ್ಲಿ ಕಳೆದ 3 ದಿನಗಳಿಂದ ನಾಪತ್ತೆ ಯಾಗಿದ್ದ ಮಹಿಳೆಗಾಗಿ ಪೊಲೀಸರು, ಅಗ್ನಿಶಾಮಕದಳ, ಎನ್‌ಡಿಆರ್‌ಎಫ್ ತಂಡ ಜಲಪಾತದಲ್ಲಿ ತೀವ್ರ ಹುಡುಕಾಟ ನಡೆಸಿತ್ತು.

    ಮುಳುಗು ತಜ್ಞರು ನೀರಿಗಿಳಿದು ಶೋಧ ನಡೆಸುತ್ತಿದ್ದರು. ಆದರೆ ಆಕೆ ಇದೀಗ ಬೆಂಗಳೂರಿನಲ್ಲಿದ್ದಾಳೆ ಎಂಬುದು ಖಾತರಿಯಾಗಿದೆ. ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಬಾರಸೆ ಗ್ರಾಮದಿಂದ ಸೆಪ್ಟೆಂಬರ್ 5 ರಂದು ನಾಪತ್ತೆಯಾಗಿದ್ದ ಸರಸ್ವತಿಯ (33) ದಾಖಲೆಗಳು ಹಾಗೂ ಆಕೆ ಬರೆದಿಟ್ಟಿದ್ದಾಳೆ ಎನ್ನಲಾದ ಡೆತ್‌ನೋಟ್ ನಗರದ ಹೊರವಲಯದ ಅಬ್ಬಿ ಜಲಪಾತದ ಬಳಿ ಸೆಪ್ಟೆಂಬರ್ 8 ರಂದು ಪತ್ತೆಯಾಗಿತ್ತು. ಮಹಿಳೆ ನಾಪತ್ತೆಯಾದ ಕುರಿತು ಪಿರಿಯಾಪಟ್ಟಣ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಇದನ್ನೂ ಓದಿ: 22ರ ಹರೆಯದಲ್ಲಿ ಎಮ್ಮೆ ಕದ್ದವ 80ನೇ ವಯಸ್ಸಿನಲ್ಲಿ ಸಿಕ್ಕಿ ಬಿದ್ದ!

    ಅಬ್ಬಿ ಜಲಪಾತದ ಬಳಿ ಸರಸ್ವತಿಗೆ ಸೇರಿದ ವಸ್ತುಗಳು ದೊರೆತ ಹಿನ್ನೆಲೆ ಮಡಿಕೇರಿ (Madikeri) ಗ್ರಾಮಾಂತರ ಪೊಲೀಸರು ಪಿರಿಯಾಪಟ್ಟಣ ಪೊಲೀಸರನ್ನು ಸಂಪರ್ಕಿಸಿ ಈಕೆಯ ಕುರಿತು ಮಾಹಿತಿ ಪಡೆಯುವ ಸಂದರ್ಭ ಕೆಲವು ದಿನಗಳಿಂದ ನಾಪತ್ತೆಯಾಗಿರುವುದು ಗೊತ್ತಾಗಿದೆ. ತಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿ ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ ಸಹಾಯದಿಂದ ಕಳೆದ 3 ದಿನಗಳಿಂದ ಕಾರ್ಯಾಚರಣೆಗಿಳಿದಿತ್ತು. ಎಷ್ಟೇ ಹುಡುಕಾಟ ನಡೆಸಿದರೂ ಯಾವುದೇ ಕುರುಹು ಪತ್ತೆಯಾಗಿರಲಿಲ್ಲ.

    ಮೃತಪಟ್ಟಿದ್ದಾಳೆ ಎಂದುಕೊಂಡು ಜಲಪಾತದಲ್ಲಿ ಶೋಧ ಕಾರ್ಯ ನಡೆಸುವ ಸಂದರ್ಭದಲ್ಲಿ ನಾಪತ್ತೆಯಾಗಿದ್ದ ಸರಸ್ವತಿ ತನ್ನ ಸಹೋದರನಿಗೆ ಕರೆ ಮಾಡಿ ನಾನು ಬೆಂಗಳೂರಿನಲ್ಲಿ ಇದ್ದೇನೆ, ನನ್ನನ್ನು ಯಾರು ಕೂಡಾ ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಹೇಳಿ ಪೋನ್ ಕಟ್ ಮಾಡಿದ್ದಾಳೆ. ಇದೀಗ ಕುಟುಂಬಸ್ಥರು ಸರಸ್ವತಿಯನ್ನು ಹುಡುಕಿಕೊಂಡು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಇದನ್ನೂ ಓದಿ: ಎಂಜಿನಿಯರ್‌ ಮಿದುಳು ನಿಷ್ಕ್ರಿಯ – ಬೆಂಗಳೂರಿನಿಂದ ತಮಿಳುನಾಡಿಗೆ ಜೀವಂತ ಹೃದಯ ರವಾನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚೇತರಿಕೆ ಹಾದಿಯಲ್ಲಿ ಕೊಡಗಿನ ಪ್ರವಾಸೋದ್ಯಮ

    ಚೇತರಿಕೆ ಹಾದಿಯಲ್ಲಿ ಕೊಡಗಿನ ಪ್ರವಾಸೋದ್ಯಮ

    ಮಡಿಕೇರಿ: ಕೋವಿಡ್ ಮೂರನೇ ಅಲೆಯಲ್ಲಿ ನಷ್ಟ ಕಂಡಿದ್ದ ಕೊಡಗಿನ ಪ್ರವಾಸೋದ್ಯಮ ಈಗ ಚೇತರಿಕೆ ಹಾದಿಗೆ ಮರಳಿದೆ.

    ಡಿಸೆಂಬರ್ ತಿಂಗಳಿನಲ್ಲಿ ಒಂದಷ್ಟು ಆಶಾದಾಯಕ ಬೆಳವಣಿಗೆ ಕಂಡಿದ್ದ ಕೊಡಗಿನ ಪ್ರವಾಸೋದ್ಯಮ ನೈಟ್ ಕರ್ಫ್ಯೂ ಮತ್ತು ವಿಕೇಂಡ್ ಕರ್ಫ್ಯೂ ನಿಂದಾಗಿ ಸಂಪೂರ್ಣ ನೆಲಕಚ್ಚಿತ್ತು. ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ತೆರವು ಮಾಡಿದ 2 ವಾರಗಳ ಕಾಲವೂ ಕೊಡಗಿನತ್ತ ಪ್ರವಾಸಿಗರು ಮುಖ ಮಾಡಲೇ ಇಲ್ಲ. ಇದನ್ನೂ ಓದಿ: 2011ರ ವಿಶ್ವಕಪ್ ಫೈನಲ್‍ನಲ್ಲಿ ಯುವಿಗಿಂತ ಧೋನಿ ಕೀರ್ತಿ ಹೆಚ್ಚಿದ್ದು ಹೇಗೆ?

    3ನೇವಾರದಲ್ಲಾದರೂ ಪ್ರವಾಸಿಗರು ಬರಬಹುದೆಂಬ ನಿರೀಕ್ಷೆಯಲ್ಲಿ ಕೊಡಗಿನ ಪ್ರವಾಸೋದ್ಯಮಿಗಳಿದ್ದರು. ಈ ವಾರವೂ ಪ್ರವಾಸಿಗರು ಭಾರೀ ಸಂಖ್ಯೆಯಲ್ಲೇನು ಬಂದಿಲ್ಲ. ಆದರೆ ಕಳೆದ ಎರಡು ವಾರಗಳಿಗೆ ಹೋಲಿಸಿದರೆ ಒಂದಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಕೊಡಗಿಗೆ ಆಗಮಿಸಿದ್ದು ಪ್ರವಾಸಿತಾಣಗಳು ಒಂದಷ್ಟು ಕಳೆ ಪಡೆದುಕೊಂಡಿವೆ.

    ಮಡಿಕೇರಿ ಸಮೀಪದ ಅಬ್ಬಿಜಲಪಾತ, ಕುಶಾಲನಗರ ಸಮೀಪದ ಕಾವೇರಿ ನಿಸರ್ಗಧಾಮ ಸೇರಿದಂತೆ ಹಲವು ಪ್ರವಾಸಿ ತಾಣಗಳಲ್ಲಿ ಒಂದಷ್ಟು ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಆದರೆ ಕಳೆದ ವರ್ಷಗಳಿಗೆ ಹೋಲಿಸಿದರೆ ಡಿಸೆಂಬರ್, ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಕೊಡಗಿಗೆ ಬರುತ್ತಿದ್ದ ಪ್ರವಾಸಿಗರಷ್ಟು ಪ್ರಮಾಣದಲ್ಲಿ ಈ ಬಾರಿ ಇಲ್ಲ. ಹೀಗಾಗಿ ವೀಕೆಂಡ್ ಕರ್ಫ್ಯೂ, ನೈಟ್ಕರ್ಫ್ಯೂಗಳಿಂದ ನಷ್ಟ ಅನುಭವಿಸಿದ್ದ ಪ್ರವಾಸಿಗರ ಅವಲಂಬಿತ ವ್ಯಾಪಾರೋದ್ಯಮಿಗಳು ನಿರೀಕ್ಷಿತ ಪ್ರಮಾಣದಲ್ಲಿ ಲಾಭಗಳಿಸಲು ಸಾಧ್ಯವಾಗುತ್ತಿಲ್ಲ. ಇದನ್ನೂ ಓದಿ: ಕನ್ನಡಕ್ಕೂ ದನಿಗೂಡಿಸಿದ್ದ ಲತಾ ಮಂಗೇಶ್ಕರ್

    ಮತ್ತೊಂದೆಡೆ 3ನೇ ಅಲೆಯಲ್ಲಿ ಕೋವಿಡ್ ಸೋಂಕಿನಿಂದ ಅಷ್ಟೊಂದು ಅಪಾಯವಿಲ್ಲ ಎನ್ನುವ ಕಾರಣದಿಂದ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬರುತ್ತಿರುವ ಬಹುತೇಕ ಪ್ರವಾಸಿಗರು, ಕೊಡಗಿನ ಪ್ರವಾಸಿ ತಾಣಗಳಲ್ಲಿ ಮಾಸ್ಕ್ ಧರಿಸದೆ ತಮ್ಮ ಪಾಡಿಗೆ ತಾವು ಎಂಜಾಯ್ ಮಾಡುತ್ತಿದ್ದಾರೆ.

    ಇದು ಮಾಸ್ಕ್ ಧರಿಸಿ ಓಡಾಡುವ ಪ್ರವಾಸಿಗರಲ್ಲಿ ಒಂದಷ್ಟು ಆತಂಕಕ್ಕೂ ಕಾರಣವಾಗಿದೆ. ಒಟ್ಟಿನಲ್ಲಿ ವೀಕೆಂಡ್ ಕರ್ಫ್ಯೂ ತೆರವಾದ 3 ವಾರಗಳ ಬಳಿಕ ಕೊಡಗಿನ ಪ್ರವಾಸೋದ್ಯಮ ಈಗಷ್ಟೇ ಚೇತರಿಕೆ ಕಾಣುತ್ತಿದೆ.

  • ಇಂದಿನಿಂದ ಅಬ್ಬಿ ಜಲಪಾತ ಪ್ರವಾಸಿಗರಿಗೆ ಮುಕ್ತ

    ಇಂದಿನಿಂದ ಅಬ್ಬಿ ಜಲಪಾತ ಪ್ರವಾಸಿಗರಿಗೆ ಮುಕ್ತ

    ಮಡಿಕೇರಿ: ಕೋವಿಡ್ ಆತಂಕದ ಹಿನ್ನೆಲೆ ಕಳೆದ 80 ದಿನಗಳಿಂದ ಬಂದ್ ಆಗಿದ್ದ ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣದಲ್ಲೊಂದಾದ ಅಬ್ಬಿ ಜಲಪಾತ ವೀಕ್ಷಣೆಗೆ ಇಂದಿನಿಂದ ಪ್ರವಾಸಿಗರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.

    ಮಡಿಕೇರಿ ತಾಲೂಕಿನ ಕೆ.ನಿಡುಗಣೆ ಗ್ರಾ.ಪಂ ವ್ಯಾಪ್ತಿಯಲ್ಲಿರುವ ಅಬ್ಬಿ ಜಲಪಾತವನ್ನು ಪ್ರವಾಸಿಗರ ವೀಕ್ಷಣೆಗೆ ಮುಕ್ತಗೊಳಿಸಲು ಇಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಯ್ಯಪ್ಪ, ಮಾಜಿ ಅಧ್ಯಕ್ಷರಾದ ರೀಟಾ ಮುತ್ತಣ್ಣ ಎಂ.ಡಿ.ಬೋಪಣ್ಣ, ಸದಸ್ಯರಾದ ಜಾನ್ಸನ್ ಪಿಂಟೋ,ಸೇರಿದಂತೆ ಮತ್ತಿತರರು ಸಭೆ ನಡೆಸಿ, ಚರ್ಚಿಸಿ ಪ್ರವಾಸಿಗರಿಗೆ ಮುಕ್ತ ಮಾಡಲು ನಿರ್ಣಯ ಕೈಗೊಂಡಿದ್ದಾರೆ.

    ಬಳಿಕ ಅಬ್ಬಿ ಜಲಪಾತಕ್ಕೆ ತೆರಳಿ ಜಲಪಾತದ ಮುಂಭಾಗದಲ್ಲಿರುವ ಗೇಟ್ ತೆರೆದರು. ಅನ್‍ಲಾಕ್ ಅಗಿರುವ ಹಿನ್ನೆಲೆಯಲ್ಲಿ ಕಳೆದ ಎರಡ್ಮೂರು ದಿನಗಳಿಂದ ನೂರಾರು ಪ್ರವಾಸಿಗರು ಅಬ್ಬಿ ಜಲಪಾತದ ಸೊಬಗು ನೋಡಲು ಬಂದು ನಿರಾಶೆಯಿಂದ ಹೋರಹೋಗುತ್ತಿದ್ದರು. ಈ ಹಿನ್ನೆಲೆಯಲ್ಲಿ ಪಂಚಾಯತಿ ಅಧ್ಯಕ್ಷರು ಸಭೆ ನಡೆಸಿ ಪ್ರವಾಸಿಗರಿಗೆ ಜಲಪಾತ ವೀಕ್ಷಿಸಲು ಅನುವು ಮಾಡಿಕೊಟ್ಟಿದ್ದಾರೆ.

    ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಗಾಳಿ ಸಹಿತ ಮಳೆಯಾಗುತ್ತಿರುವುದರಿಂದ ಎಚ್ಚರ ವಹಿಸುವಂತೆ ಗ್ರಾ.ಪಂ ಪ್ರತಿನಿಧಿಗಳು ಪ್ರವಾಸಿಗರಿಗೆ ಎಚ್ಚರಿಸಿದ್ದಾರೆ.

  • ಇಯರ್ ಎಂಡ್ ಅಬ್ಬಿ ಜಲಪಾತದಲ್ಲಿ ಪ್ರವಾಸಿಗರ ದಂಡು

    ಇಯರ್ ಎಂಡ್ ಅಬ್ಬಿ ಜಲಪಾತದಲ್ಲಿ ಪ್ರವಾಸಿಗರ ದಂಡು

    ಮಡಿಕೇರಿ: ಇಂದು 2019ರ ಕೂನೆಯ ದಿನ ಆಗಿದ್ದು, ಎಲ್ಲೆಲ್ಲೂ ಹೂಸ ವರ್ಷದ ನಿರೀಕ್ಷೆಯಲ್ಲಿ ಜನರು ಕಾತರದಿಂದ ಕಾಯುತ್ತಿದ್ದಾರೆ. ಹಬ್ಬದ ಸಂಭ್ರಮ ಎಲ್ಲೆಲ್ಲೂ ಕಂಡು ಬರುತ್ತಿದೆ. ಪ್ರಕೃತಿಯ ತವರು, ಹಸಿರಸಿರಿಯ ನಡುವೆ ಸುಂದರ ಪ್ರವಾಸಿತಾಣಗಳನ್ನು ಹೂಂದಿರುವ ಕೊಡಗಿನಲ್ಲಂತೂ ಜನರು ಹರ್ಷದ ಹೂಳೆಯಲ್ಲಿ ತೇಲುತ್ತಿದ್ದಾರೆ.

    ಮಂಜಿನ ನಗರಿ ಮಡಿಕೇರಿಯಲ್ಲಿ ಪ್ರವಾಸಿಗರ ದಂಡು ಆಗಮಿಸುತ್ತಿದೆ. ಅಬ್ಬಿ ಜಲಪಾತದಲ್ಲಿ 2019ಕ್ಕೆ ವಿದಾಯ ಹೇಳುವುದಕ್ಕೆ ಇನ್ನೇನು ಕೆಲವೇ ಗಂಟೆಗಳು ಬಾಕಿಯಿದೆ. ಎಲ್ಲರೂ ಹೂಸ ವರ್ಷದ ನಿರೀಕ್ಷೆಯಲ್ಲಿದ್ದಾರೆ.

    ಹಲವು ಸಿಹಿಕಹಿಗಳನ್ನೆಲ್ಲಾ ಹುದುಗಿಸಿಕೂಂಡು ತೆರೆಮರೆಗೆ ಸರಿಯುತ್ತಿರುವ 2019ಕ್ಕೆ ಗುಡ್‍ಬೈ ಹೇಳಲು ದೇಶದ ನಾನಾ ಭಾಗಗಳಿಂದ ಜನರು ಪ್ರಕೃತಿ ತವರು ಮಡಿಕೇರಿಗೆ ಲಗ್ಗೆಯಿಟ್ಟಿದ್ದಾರೆ. ನಿಸರ್ಗದ ಮಡಿಲಲ್ಲಿ ಹೂಸ ವರ್ಷಕ್ಕೆ ಸ್ವಾಗತ ಕೋರಲು ಪ್ರವಾಸಿಗರು ಸಜ್ಜಾಗಿದ್ದಾರೆ.

    ಸುತ್ತಲೂ ಹಚ್ಚ ಹಸಿರಿನಿಂದ ಕಂಗೂಳಿಸುವ ಕಾನನ ನಡುವೆ ಹಾಲ್ನೊರೆಯಂತೆ ಭೋರ್ಗರೆಯುತ್ತಾ ಧುಮ್ಮಿಕ್ಕೋ ಜಲಧಾರೆ ಇನ್ನೇನು ಬೇಕು ಹೇಳಿ. ಇಷ್ಟು ಸಾಕಲ್ಲವೆ? ಒಂದು ಇಯರ್ ಎಂಡ್ ಅನ್ನು ರಸಭರಿತವಾಗಿ ನಂತರ ಪಾರ್ಟಿಗಳಲ್ಲಿ ಎಂಜಾಯ್ ಮಾಡಲು ಸಜ್ಜಾಗಿದ್ದಾರೆ.

  • ಹಸಿರ ಕಾನನದ ನಡ್ವೆ ಧುಮ್ಮಿಕ್ಕಿ ಹರಿತೀದೆ ಅಬ್ಬಿ ಜಲಪಾತ

    ಹಸಿರ ಕಾನನದ ನಡ್ವೆ ಧುಮ್ಮಿಕ್ಕಿ ಹರಿತೀದೆ ಅಬ್ಬಿ ಜಲಪಾತ

    ಮಡಿಕೇರಿ: ಪ್ರವಾಸಿಗರ ಹಾಟ್ ಸ್ಪಾಟ್ ಹಸಿರನಾಡು ಕೊಡಗು ಈಗ ಮತ್ತಷ್ಟು ರಂಗೇರಿದೆ. ಹಸಿರ ಕಾನನದ ನಡುವೆ ಧುಮ್ಮಿಕ್ಕಿ ಹರಿಯುವ ಅಬ್ಬಿ ಜಲಪಾತ ಮಳೆಗೆ ಹಾಲ್ನೊರೆಯಂತೆ ಹರಿಯುತ್ತಾ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

    ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಗೆ ಮೈದುಂಬಿರುವ ಅಬ್ಬಿ ಜಲಪಾತ ನೋಡಲು ಪ್ರವಾಸಿಗರ ದಂಡೆ ಹರಿದು ಬರುತ್ತಿದೆ. ಸಾಮಾನ್ಯವಾಗಿ ಬೇಸಿಗೆಯಲ್ಲಿ ನೀರಿಲ್ಲದೆ ಬಣಗುಡುವ ಅಬ್ಬಿ ಫಾಲ್ಸ್ ಮಳೆಗಾಲದಲ್ಲಿ ತನ್ನ ನೈಜ ಸೌಂದರ್ಯವನ್ನು ತೆರೆದುಕೊಂಡು ಪ್ರವಾಸಿಗರ ಹಾಟ್ ಸ್ಪಾಟ್ ಆಗಿ ಬದಲಾಗುತ್ತೆ.

    ರಾಜ್ಯದ ವಿವಿಧೆಡೆಗಳಿಂದ ಇಲ್ಲಿಗೆ ಬರುವ ಪ್ರವಾಸಿಗರು ಪ್ರಕೃತಿಯ ಮಡಿಲಲ್ಲಿ ಮೈಮರೆಯುತ್ತಾರೆ. ಮಡಿಕೇರಿ ಜನತೆಗೆ ಮಳೆಯ ಭಯವಾದರೆ, ಇತ್ತ ಪ್ರವಾಸಿಗರು ಮಳೆಯ ನಡುವೆಯೇ ಮಂಜಿನ ನಗರಿ ಮಡಿಕೇರಿಯ ಟೂರಿಸ್ಟ್ ಜಾಗಗಳಲ್ಲಿ ಸಖಾತ್ ಎಂಜಾಯ್ ಮಾಡುತ್ತಿದ್ದಾರೆ. ಜೊತೆಗೆ ಫೋಟೋ, ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ.

    ಮಂಜಿನ ನಗರಿಗೆ ಸಮೀಪದ ಅಬ್ಬಿ ಜಲಪಾತದ ದೃಶ್ಯ ಕಣ್ಮನ ಸೆಳೆಯುತ್ತಿದೆ. ನಾವು ಬೆಂಗಳೂರಿನಿಂದ ಇದೇ ಮೊದಲ ಬಾರಿಗೆ ಬಂದಿದ್ದೇವೆ. ತುಂಬಾ ಚೆನ್ನಾಗಿದೆ. ಬೋರ್ಗರೆಯುತ್ತಾ ಧುಮುಕುವ ಜಲಧಾರೆ ಮನಮೋಹಕವಾಗಿದೆ. 80 ಅಡಿ ಎತ್ತರದಿಂದ ಹಾಲ್ನೊರೆಯಂತೆ ಹರಿಯುವ ಜಲಪಾತವನ್ನು ನೋಡುತ್ತಾ ನಿಂತರೆ ಸ್ವರ್ಗವೇ ಧರೆಗಿಳಿದಂತೆ ಎಂದು ಪ್ರವಾಸಿಗರಾಧ ರೋಜಾ ಮತ್ತು ಸಚಿನ್ ಸಂತಸ ವ್ಯಕ್ತಪಡಿಸಿದ್ದಾರೆ.

  • ಹಾಲ್ನೊರೆ ಸೂಸುತ್ತಿರುವ ಅಬ್ಬೆ ಫಾಲ್ಸ್!

    ಹಾಲ್ನೊರೆ ಸೂಸುತ್ತಿರುವ ಅಬ್ಬೆ ಫಾಲ್ಸ್!

    ಮಡಿಕೇರಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧವಾದ ಅಬ್ಬಿ ಜಲಪಾತ ಬೋರ್ಗರೆಯುತ್ತಿದೆ. ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿರುವ ಈ ಜಲಧಾರೆಯ ಸೊಬಗನ್ನು ನೋಡುವುದೇ ಈಗ ಕಣ್ಣಿಗೆ ಹಬ್ಬವಾಗಿದೆ. ಸಾವಿರಾರು ಪ್ರವಾಸಿಗರು ಈ ಜಲಪಾತವನ್ನು ನೋಡಲು ಮುಗಿಬೀಳುತ್ತಿದ್ದಾರೆ.

    ಮಡಿಕೇರಿಯಲ್ಲಿ ಮಳೆ ಆರಂಭವಾಯಿತೆಂದರೆ ಇಲ್ಲಿಯ ಅಬ್ಬೆ ಫಾಲ್ಸ್ ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಗುತ್ತದೆ. ಕಾಫಿ ತೋಟದ ಮಧ್ಯೆ ಪ್ರವಾಸಿಗರ ದಂಡು ಸಾಗುತ್ತಿದೆ. ದೂರದಲ್ಲಿ ನೀರಿನ ನಿನಾದ ಕಿವಿಗೆ ಅಪ್ಪಳಿಸುತ್ತಿದೆ. ಆಗಾಗ ಬೀಳುವ ತುಂತುರು ಮಳೆಗೆ ಪ್ರವಾಸಿಗರು ಕಿಕ್ಕಿರಿದು ಸೇರಿದ್ದಾರೆ. ಈ ದೃಶ್ಯ ಮಡಿಕೇರಿಯ ಅಬ್ಬೆ ಜಲಪಾತದಲ್ಲಿ ಕಂಡು ಬರುತ್ತಿದೆ.

    ಮಡಿಕೇರಿಯಲ್ಲಿ ವರುಣ ಅಬ್ಬರಿಸುತ್ತಿರುವ ಕಾರಣ ಅಬ್ಬೆ ಜಲಪಾತ ದುಮ್ಮುಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಮಡಿಕೇರಿಯಿಂದ 8 ಕಿ.ಮೀ ದೂರದಲ್ಲಿರುವ ಈ ಜಲಪಾತವನ್ನು ನೋಡುವುದೇ ಕಣ್ಣಿಗೆ ಹಬ್ಬವಾಗಿದೆ. ಇದನ್ನು ನೋಡಲು ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಇಲ್ಲಿಗೆ ಪ್ರವಾಸಿಗರ ದಂಡು ಹರಿದು ಬರುತ್ತಿದೆ. ಜಲಪಾತ ಹಾಗೂ ಸುತ್ತಲಿನ ಪ್ರಕೃತಿ ಸೌಂದರ್ಯ ನೋಡಿ ಆನಂದಿಸುತ್ತಿದ್ದಾರೆ.

    ಅಬ್ಬೆ ಜಲಪಾತದ ವಿಶೇಷ ಎಂದರೆ ವಾಹನದಿಂದ ಇಳಿದು ಸುಮಾರು ಅರ್ಧ ಕಿ.ಮೀ ನಡೆದುಕೊಂಡು ಹೋಗಬೇಕು. ಇದು ಪ್ರವಾಸಿಗರಿಗೆ ಮತ್ತಷ್ಟು ಮಜಾ ನೀಡುತ್ತದೆ. ದೊಡ್ಡವರಿಂದ ಹಿಡಿದು ಪುಟ್ಟ ಪುಟ್ಟ ಮಕ್ಕಳವರೆಗೂ ಆಗಮಿಸಿ ಜಲಪಾತದ ಸೌಂದರ್ಯವನ್ನು ನೋಡಿ ಆನಂದಿಸುತ್ತಾರೆ. ಮಡಿಕೇರಿಯಿಂದ ಇಲ್ಲಿಗೆ ಬಸ್ ವ್ಯವಸ್ಥೆಯಿಲ್ಲ. ಆದ ಕಾರಣ ಪ್ರತಿಯೊಬ್ಬರು ವಾಹನದಲ್ಲಿ ಇಲ್ಲಿಗೆ ಆಗಮಿಸುತ್ತಾರೆ. ಇನ್ನೂ ಮುಂದಿನ ಐದು ತಿಂಗಳವರೆಗೂ ಜಲಪಾತದ ಈ ಸೌಂದರ್ಯ ಇದೇ ರೀತಿ ಇರುತ್ತದೆ.

    ಒಟ್ಟಿನಲ್ಲಿ ಧಾರಾಕಾರ ಮಳೆಯಿಂದಾಗಿ ಹಾಲ್ನೊರೆಯಂತೆ ಧುಮ್ಮುಕ್ಕುವ ಅಬ್ಬೆ ಫಾಲ್ಸ್ ವೀಕ್ಷಣೆ ಮಾಡುವುದೇ ಪ್ರವಾಸಿಗರ ಪಾಲಿಗೆ ಸ್ವರ್ಗ. ನೀವು ಕೂಡ ಬಿಡುವು ಮಾಡಿಕೊಂಡು ಬನ್ನಿ. ಅಬ್ಬೆ ಫಾಲ್ಸ್ ವನ್ನು ನೋಡಿ ಎಂಜಾಯ್ ಮಾಡಿ.

  • ಮುಂಗಾರಿನಲ್ಲಿ ಭೋರ್ಗರೆಯುತ್ತಾ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಮಡಿಕೇರಿ ಅಬ್ಬಿಫಾಲ್ಸ್!

    ಮುಂಗಾರಿನಲ್ಲಿ ಭೋರ್ಗರೆಯುತ್ತಾ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಮಡಿಕೇರಿ ಅಬ್ಬಿಫಾಲ್ಸ್!

    ಮಡಿಕೇರಿ: ಪ್ರವಾಸಿಗರ ಹಾಟ್ ಸ್ಪಾಟ್ ಹಸಿರನಾಡು ಕೊಡಗು ಈಗ ಮತ್ತಷ್ಟು ರಂಗೇರಿದೆ. ಹಸಿರ ಕಾಡಿನ ನಡುವೆ ಧುಮ್ಮಿಕ್ಕಿ ಹರಿಯುವ ಅಬ್ಬಿ ಜಲಪಾತ ಮಳೆಗೆ ಹಾಲ್ನೊರೆಯಂತೆ ಹರಿಯುತ್ತಾ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.

    ಹೌದು. ಇದು ಟೂರಿಸ್ಟ್ ಗಳ ಸ್ವರ್ಗ ಹಸಿರನಾಡು ಕೊಡಗಿನ ಅಬ್ಬಿ ಜಲಪಾತದ ವೈಭವ ದೃಶ್ಯ ಕಾವ್ಯದ ವಿಹಂಗಮ ನೋಟ ಎಲ್ಲರ ಕಣ್ಮನ ಸೆಳೆಯುತ್ತಿದೆ. ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಮೈದುಂಬಿರುವ ಅಬ್ಬಿ ಜಲಪಾತ ನೋಡಲು ಪ್ರವಾಸಿಗರ ದಂಡೇ ಈಗ ಹರಿದು ಬರುತ್ತಿದೆ.

    ಮಳೆಯ ನಡುವೆಯೂ ಹೆಚ್ಚಿನಸಂಖ್ಯೆಯಲ್ಲಿ ಆಗಮಿಸುತ್ತಿರುವ ಪ್ರವಾಸಿಗರು ಈ ಹಸಿರನಾಡು ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳುತ್ತಿದ್ದಾರೆ. ಕೈಕೆಟುಕುವಷ್ಟು ಹತ್ತಿದಲ್ಲಿ ಸಾಗುವ ಮೋಡಗಳೊಂದಿಗೆ ಚೆಲ್ಲಾಟವಾಡುತ್ತ ಚುಮು ಚುಮು ಚಳಿಯನ್ನ ಎಂಜಾಯ್ ಮಾಡುತ್ತಾರೆ. ಸಾಮಾನ್ಯವಾಗಿ ಬೇಸಿಗೆಯಲ್ಲಿ ನೀರಿಲ್ಲದೇ ಬಣಗುಡುವ ಅಬ್ಬಿಫಾಲ್ಸ್ ಮಳೆಗಾಲದಲ್ಲಿ ತನ್ನ ನೈಜ ಸೌಂದರ್ಯವನ್ನು ತೆರೆದುಕೊಂಡು ಪ್ರವಾಸಿಗರ ಹಾಟ್ ಸ್ಪಾಟ್ ಆಗಿ ಬದಲಾಗುತ್ತಿದೆ.

    80 ಅಡಿ ಎತ್ತರದಿಂದ ಹಾಲ್ನೊರೆಯಂತೆ ಹರಿಯುವ ಜಲಪಾತವನ್ನು ನೋಡುತ್ತಾ ನಿಂತರೆ ಸ್ವರ್ಗವೇ ಧರೆಗೆ ಇಳಿದಂತೆ ಕಾಣುತ್ತಿದೆ. ರಾಜ್ಯದ ವಿವಿಧ ಭಾಗಗಳಿಂದ ಇಲ್ಲಿಗೆ ಬರುವ ಪ್ರವಾಸಿಗರು ತಮ್ಮ ಎಲ್ಲ ನೋವುಗಳನ್ನು ಮರೆತು ಪ್ರಕೃತಿಯ ಮಡಿಲಲ್ಲಿ ಮೈಮರೆಯುತ್ತಾರೆ. ಜಲಧಾರೆಯ ಮೋಹಕ ಸೆಳೆತ ಒಂದೆಡೆಯಾದರೆ, ಮಂಜಿನ ಸ್ಪರ್ಶ, ಮೈಗೆ ಸೋಕುವ ತಂಗಾಳಿ ಮನಸ್ಸಿಗೆ ಹಿತನೀಡುತ್ತೆ.

    ಮಡಿಕೇರಿಯಿಂದ ಕೇವಲ 8 ಕಿ.ಮೀ. ದೂರದಲ್ಲಿರುವ ಅಬ್ಬಿ ಜಲಪಾತ ಮಳೆಗಾಲದಲ್ಲಿ ಹೆಚ್ಚು ಸುಂದರವಾಗಿ ಕಾಣುತ್ತೆ. ಅದಕ್ಕಾಗಿಯೇ ವೀಕೆಂಡ್ ಗಳಲ್ಲಿ ಜಲಪಾತನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಕಪ್ಪು ಕಲ್ಲುಗಳ ನಡುವೆ ಶ್ವೇತಧಾರೆಯಾಗಿ ಧರೆಗಿಳಿಯುವ ಜಲಪಾತದ ದೃಶ್ಯವನ್ನು ಸೆರೆಹಿಡಿಯುವ ಪ್ರವಾಸಿಗರು ತಮ್ಮ ಪ್ರವಾಸದ ನೆನಪನ್ನ ಹಸಿರಾಗಿಡಲು ಹಂಬಲಿಸುತ್ತಾರೆ. ಹಾಗಿದ್ದರೆ ತಡೆಯಾಕೆ ನೀವು ಒಮ್ಮೆ ಬನ್ನಿ ಹಸಿರನಾಡು ಕೊಡಗಿನ ಅಬ್ಬಿ ಜಲಪಾತದ ಸೊಬಗವನ್ನು ಕಣ್ತುಂಬಿಕೊಳ್ಳಿ.