Tag: ABD

  • ವಿರಾಟ್‌ಕೊಹ್ಲಿ ಅಲ್ಲ, ಎಬಿಡಿ ನನ್ನ ರೋಲ್ ಮಾಡೆಲ್ – ಬಾಬರ್ ಅಜಮ್‌

    ವಿರಾಟ್‌ಕೊಹ್ಲಿ ಅಲ್ಲ, ಎಬಿಡಿ ನನ್ನ ರೋಲ್ ಮಾಡೆಲ್ – ಬಾಬರ್ ಅಜಮ್‌

    ಇಸ್ಲಾಮಾಬಾದ್: ಟಿ20 ವಿಶ್ವಕಪ್‌ನಲ್ಲಿ (T20 WorldCup) ಇಂಗ್ಲೆಂಡ್ (England) ಎದುರು ಸೋತು ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡ ಪಾಕಿಸ್ತಾನ (Pakistan), 17 ವರ್ಷಗಳ ಬಳಿಕ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಸಜ್ಜಾಗಿದೆ.

    ಇಂಗ್ಲೆಂಡ್ ತಂಡ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡು ಟೆಸ್ಟ್ ಸರಣಿಯಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ವಿಶೇಷ ಸಂದರ್ಶನದಲ್ಲಿ ಪಾಕ್ ತಂಡದ ನಾಯಕ ಬಾಬರ್ ಆಜಂ (Babar Azam) ಮಾತನಾಡಿದ್ದು, ನನ್ನ ರೋಲ್ ಮಾಡೆಲ್ ವಿರಾಟ್ ಕೊಹ್ಲಿ (Virat Kohli) ಅಲ್ಲ, ಎಬಿಡಿ ವಿಲಿಯರ್ಸ್ (AB de Villiers) ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಪಾಕ್ ಕದನಕ್ಕೂ ಮುನ್ನವೇ ಇಂಗ್ಲೆಂಡ್‌ಗೆ ಆಘಾತ – ಹೆಸರಿಲ್ಲದ ವೈರಸ್‌ಗೆ ತುತ್ತಾದ ಸ್ಟೋಕ್ಸ್ ಪಡೆ

    ಟಿ20 ವಿಶ್ವಕಪ್‌ನ ಆರಂಭಿಕ ಪಂದ್ಯಗಳಲ್ಲಿ ಫ್ಲಾಪ್ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಪಾಕ್ ತಂಡದ ನಾಯಕ ಬಾಬರ್ ಆಜಂ ಸೆಮಿಸ್ ಹಾಗೂ ಫೈನಲ್ ಪಂದ್ಯದಲ್ಲಿ ಭರ್ಜರಿ ಅರ್ಧ ಶತಕ ಸಿಡಿಸಿದ್ದರು. ಇದೀಗ ಇಂಗ್ಲೆಂಡ್‌ನೊಂದಿಗೆ ಟೆಸ್ಟ್ ಸರಣಿಯ ಮೇಲೆ ಚಿತ್ತ ನೆಟ್ಟಿರುವ ಬಾಬರ್ ಅಜಂ ತನ್ನ ನೆಚ್ಚಿನ ಕ್ರಿಕೆಟಿಗ ಯಾರು ಎಂಬುದನ್ನ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಒಂದೇ ಓವರ್‌ನಲ್ಲಿ 7 ಸಿಕ್ಸ್ ಸಿಡಿಸಿ ದಾಖಲೆ ಬರೆದ ಋತುರಾಜ್ ಗಾಯಕ್ವಾಡ್

    ಈ ವೇಳೆ, ಪ್ರಾಮಾಣಿಕವಾಗಿ ಹೇಳಬೇಕೆಂದರೆ ಎಬಿಡಿ ವಿಲಿಯರ್ಸ್ (AB de Villiers) ನನ್ನ ರೋಲ್ ಮಾಡೆಲ್. ನನಗೆ ಅವರೆಂದರೆ ಇಷ್ಟ. ವಿಶೇಷವಾಗಿ ಅವರು ಆಡುವ ಶೈಲಿ ಹಾಗೂ ಶಾಟ್‌ಗಳು ಬಹಳ ಇಷ್ಟ. ಅವರು ಆಡುವುದನ್ನು ಟಿವಿಯಲ್ಲಿ ನೋಡಿದ ಬಳಿಕ ಮರುದಿನ ನಾನು ನೆಟ್ಸ್‌ನಲ್ಲಿ ಅದೇ ರೀತಿಯಾಗಿ ಅಭ್ಯಾಸ ನಡೆಸುತ್ತಿದ್ದೆ. ನನಗೆ ಅವರು ಆದರ್ಶ ಕ್ರಿಕೆಟಿಗನಾಗಿದ್ದ ಕಾರಣದಿಂದಾಗಿ ಅವರಂತೆ ಆಡಲು ನಾನು ಪ್ರಯತ್ನಿಸುತ್ತೇನೆ ಎಂದು ಹೇಳಿಕೋಂಡಿದ್ದಾರೆ.

    ಟೀಂ ಇಂಗ್ಲೆಂಡ್‌ಗೆ ವೆಲ್‌ಕಮ್: ಮುಂದುವರಿದು ಮಾತನಾಡುತ್ತಾ, ಪಾಕಿಸ್ತಾನಕ್ಕೆ ಆಗಮಿಸಿರುವ ಇಂಗ್ಲೆಂಡ್ ತಂಡಕ್ಕೆ ಸ್ವಾಗತ ಕೋರುತ್ತಿದ್ದೇನೆ ಎಂದಿದ್ದಾರೆ. ನಾವು ಈ ಸರಣಿಗಾಗಿ ಎದುರುನೋಡುತ್ತಿದ್ದೇವೆ. ಮೊದಲನೆಯದಾಗಿ ನಾನು ಇಂಗ್ಲೆಂಡ್ ತಂಡಕ್ಕೆ ಸ್ವಾಗತ ಕೋರುತ್ತಿದ್ದೇನೆ. ಟಿ20 ಸರಣಿಗಾಗಿ ಕೆಲ ಆಟಗಾರರು ಆಗಮಿಸಿದ್ದರು. ಅವರು ಇಲ್ಲಿನ ಸಮಯವನ್ನು ಆನಂದಿಸಿದ್ದಾರೆ. ಇಲ್ಲಿನ ವಾತಾವರಣ, ಪಾಕಿಸ್ತಾನದ ಆತಿಥ್ಯವನ್ನು ಆನಂದಿಸಲಿದ್ದಾರೆ. ಈಗ ನಾವು ಸರಣಿಗಾಗಿ ಎದುರುನೋಡುತ್ತಿದ್ದೇವೆ. ಎಲ್ಲರೂ ಉತ್ತಮವಾಗಿ ಆಡಲಿ ಎಂದು ಶುಭ ಕೋರಿದ್ದಾರೆ.

    ಡಿಸೆಂಬರ್ 1 ರಿಂದ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆರಂಭವಾಗಲಿದ್ದು, ಡಿ.1 ರಿಂದ 5ರ ವರೆಗೆ ಮೊದಲ ಟೆಸ್ಟ್, ಡಿ.9 ರಿಂದ 13ರ ವರೆಗೆ 2ನೇ ಟೆಸ್ಟ್ ಹಾಗೂ ಡಿ.17 ರಿಂದ 21ರ ವರೆಗೆ 3ನೇ ಟೆಸ್ಟ್ ಪಂದ್ಯಗಳು ನಡೆಯಲಿವೆ.

    Live Tv
    [brid partner=56869869 player=32851 video=960834 autoplay=true]

  • ಸಿಕ್ಸರ್‌ ವೀರ ಸೂರ್ಯ Vs ಎಬಿಡಿ – ಇಬ್ಬರಲ್ಲಿ ಯಾರು ಬೆಸ್ಟ್‌? – ಟ್ವಿಟ್ಟರ್‌ನಲ್ಲಿ ಟ್ರೆಂಡ್‌

    ಸಿಕ್ಸರ್‌ ವೀರ ಸೂರ್ಯ Vs ಎಬಿಡಿ – ಇಬ್ಬರಲ್ಲಿ ಯಾರು ಬೆಸ್ಟ್‌? – ಟ್ವಿಟ್ಟರ್‌ನಲ್ಲಿ ಟ್ರೆಂಡ್‌

    ವೆಲ್ಲಿಂಗ್ಟನ್: ಟಿ20 ಸ್ಪೆಷಲಿಸ್ಟ್ ಆಗಿರುವ ಟೀಂ ಇಂಡಿಯಾ (Team India) ಆಟಗಾರ ಸೂರ್ಯಕುಮಾರ್ ಯಾದವ್ (Suryakumar Yadav) ಅವರನ್ನ ಅಭಿಮಾನಿಗಳು ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ಮನ್ ಎಬಿ ಡಿ ವಿಲಿಯರ್ಸ್‌ಗೆ (Ab de Villiers) ಹೋಲಿಸಿ ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಶುರು ಮಾಡಿದ್ದಾರೆ.

    ಪ್ರತಿ ಇನ್ನಿಂಗ್ಸ್‌ನಲ್ಲೂ ಒಂದಿಲ್ಲೊಂದು ದಾಖಲೆ ಬರೆಯುತ್ತಿರುವ ಸೂರ್ಯಕುಮಾರ್ ಯಾದವ್ ಈ ವರ್ಷದಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್ ಬ್ಯಾಟ್ಸ್‌ಮನ್‌ ಸಹ ಆಗಿದ್ದಾರೆ. ಭಾರತದ ಮಿಸ್ಟರ್ 360 ಎಂದೇ ಕರೆಯುವ ಸೂರ್ಯಕುಮಾರ್ ಯಾದವ್‌ನನ್ನು ಅಭಿಮಾನಿಗಳು ಎಬಿಡಿಗೆ (Ab de Villiers) ಹೋಲಿಸಿ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಶುರು ಮಾಡಿದ್ದಾರೆ. ಅಲ್ಲದೇ ಇಬ್ಬರಲ್ಲಿ ಯಾರು ಬೆಸ್ಟ್‌? ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ಅಭಿಮಾನಿಗಳು ಸೂರ್ಯ ಟಿ20 (T20) ಸ್ಪೆಷಲಿಸ್ಟ್‌ ಆದ್ರೆ, ಎಬಿಡಿ ಎಲ್ಲ ಆವೃತ್ತಿಗಳಲ್ಲೂ ಬೆಸ್ಟ್‌ ಬ್ಯಾಟ್ಸ್‌ಮನ್‌ ಅವರ ಆಟ ಅವರವರಿಗೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  11 ಬೌಂಡರಿ, 7 ಸಿಕ್ಸ್ – ಶತಕ ಸಿಡಿಸಿದ ದಾಖಲೆ ವೀರ ಸೂರ್ಯ

    ಕೀವಿಸ್ (New Zealand) ವಿರುದ್ಧ ದ್ವಿಪಕ್ಷೀಯ ಸರಣಿಯ ಮೊದಲ ಪಂದ್ಯದಲ್ಲಿ ಅಬ್ಬರಿಸಿದ ಸೂರ್ಯ ಕೇವಲ 49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿ, 51 ಎಸೆತಗಳಲ್ಲಿ ಅಜೇಯ 111 ರನ್ ಚಚ್ಚಿ ಮಿಂಚಿದ್ದಾರೆ. ಈ ಮೂಲಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ನಂತರ ಸ್ಪೋಟಕ ಶತಕ ಸಿಡಿಸಿದ 2ನೇ ಆಟಗಾರರಾಗಿದ್ದರು. ಇದು ಟಿ20 ನಲ್ಲಿ ಸೂರ್ಯಕುಮಾರ್ ಸಿಡಿಸಿದ 2ನೇ ಶತಕವಾಗಿದೆ. ಇದನ್ನೂ ಓದಿ: ಶತಕ ಸಿಡಿಸಿ ಮೆರೆದ ಸೂರ್ಯ – ಕೀವಿಸ್ ಕಿವಿ ಹಿಂಡಿದ ಭಾರತ

    ಸೂರ್ಯ ಈಗ ಸಿಕ್ಸರ್ ವೀರ:
    ಸ್ಫೋಟಕ ಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್ ಈ ವರ್ಷದ ಆವೃತ್ತಿಯಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಟಾಪರ್ ಆಗಿದ್ದಾರೆ. ಈ ಆವೃತ್ತಿಯಲ್ಲಿ ಒಟ್ಟು 60 ಸಿಕ್ಸರ್ ಸಿಡಿಸಿದ ಸೂರ್ಯ ಮೊದಲ ಸ್ಥಾನದಲ್ಲಿದ್ದರೆ 43 ಸಿಕ್ಸರ್ ಸಿಡಿಸಿದ ಎಂ.ಡಿ ವಸೀಮ್ 2ನೇ ಸ್ಥಾನದಲ್ಲಿ ಹಾಗೂ 39 ಸಿಕ್ಸರ್ ಸಿಡಿಸಿದ ವೆಸ್ಟ್ ಇಂಡೀಸ್‌ನ ರೋವ್ಮನ್ ಪೋವೆಲ್ ನಂತರದ ಸ್ಥಾನದಲ್ಲಿದ್ದಾರೆ.

    ಭಾನುವಾರ ನ್ಯೂಜಿಲೆಂಡ್ (New Zealand) ವಿರುದ್ಧ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಕ್ರೀಸ್‌ಗಿಳಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿತು. ಬೃಹತ್ ಮೊತ್ತದ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ 18.5 ಓವರ್‌ಗಳಲ್ಲೇ ತನ್ನೆಲ್ಲಾ ವಿಕೆಟ್‌ಗಳನ್ನು ಕೆಳದುಕೊಂಡು 65 ರನ್‌ಗಳ ಅಂತರದಲ್ಲಿ ಹೀನಾಯ ಸೋಲನುಭವಿಸಿತು.

    Live Tv
    [brid partner=56869869 player=32851 video=960834 autoplay=true]

  • ಗೇಲ್, ಎಬಿಡಿಗೆ ಆರ್‌ಸಿಬಿ ಹಾಲ್ ಆಫ್ ಫೇಮ್ ಗೌರವ

    ಗೇಲ್, ಎಬಿಡಿಗೆ ಆರ್‌ಸಿಬಿ ಹಾಲ್ ಆಫ್ ಫೇಮ್ ಗೌರವ

    ಮುಂಬೈ: ಲೆಜೆಂಡರಿ ಕ್ರಿಕೆಟಿಗರಾದ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಲ್ ಆಫ್ ಫೇಮ್‍ಗೆ ಸೇರ್ಪಡೆಗೊಂಡ ಮೊದಲ ಇಬ್ಬರು ಆಟಗಾರರಾಗಿದ್ದಾರೆ.

    CHRIS GAYLE

    ಈ ಕುರಿತು ಆರ್‌ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಇಬ್ಬರು ಆತ್ಮೀಯ ಸ್ನೇಹಿತರ ಸೇರ್ಪಡೆಯ ಬಗ್ಗೆ ಮಾತನಾಡಿ, ಆರ್‌ಸಿಬಿ ಪ್ಲೇ ಬೋಲ್ಡ್ ತತ್ವವನ್ನು ನಿಜವಾಗಿಯೂ ತಂದಿದ್ದು ಅವರೇ. ಕ್ರೀಡಾಮನೋಭಾವದಿಂದ ಎಬಿಡಿ ಕ್ರಿಕೆಟ್ ಆಟವನ್ನು ನಿಜವಾಗಿಯೂ ಬದಲಾಯಿಸಿದ್ದಾರೆ ಎಂದು ಫ್ರಾಂಚೈಸಿಯ ವೆಬ್‍ಸೈಟ್‍ನಲ್ಲಿ ಪೋಸ್ಟ್ ಮಾಡಿ ಹೇಳಿದ್ದಾರೆ.

    ಇಬ್ಬರೂ ಆಟಗಾರರನ್ನು ಹಾಲ್ ಆಫ್ ಫೇಮ್‍ನಲ್ಲಿ ಸೇರ್ಪಡೆ ಮಾಡಿರುವುದು ಹೆಮ್ಮೆಯ ವಿಷಯ. ಅವರ ಆಟದ ವೀಡಿಯೊಗಳನ್ನು ನೋಡುವಾಗ ರೋಮಾಂಚನವಾಗುತ್ತದೆ. ಐಪಿಎಲ್ ಯಶಸ್ವಿಯಾಗಿ ಬೆಳೆಯುವಲ್ಲಿ ಇವರಿಬ್ಬರ ಕಾಣಿಕೆ ದೊಡ್ಡದು ಎಂದು ಕೊಹ್ಲಿ ಹೇಳಿದ್ದಾರೆ.

    2011 ರಿಂದ 2017 ರವರೆಗೆ ಆರ್‌ಸಿಬಿ ಪರ ಆಡಿರುವ ಗೇಲ್ ಮಾತನಾಡಿ, ನನಗೆ ತಂಡದಲ್ಲಿ ಅವಕಾಶ ನೀಡಿದ್ದಕ್ಕಾಗಿ ಆರ್‌ಸಿಬಿ ಕುಟುಂಬಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆ. ನನಗೆ ಇದು ನಿಜಕ್ಕೂ ವಿಶೇಷವಾಗಿತ್ತು. ಹಾಲ್ ಆಫ್ ಫೇಮ್‍ಗೆ ಸೇರ್ಪಡೆಗೊಂಡಿರುವುದು ನಿಜಕ್ಕೂ ಅದ್ಭುತವಾಗಿದೆ. ನಾನು ಯಾವಾಗಲೂ ಬೆಂಗಳೂರು ತಂಡವನ್ನು ನನ್ನ ಹೃದಯಕ್ಕೆ ಹತ್ತಿರ ಇಡುತ್ತೇನೆ ಎಂದು ಭಾವನಾತ್ಮಕವಾಗಿ ಹೇಳಿದ್ದಾರೆ.

    ABD

    ದಕ್ಷಿಣ ಆಫ್ರಿಕಾದ ದೈತ್ಯ ಆಟಗಾರ ಡಿವಿಲಿಯರ್ಸ್ 2011 ರಿಂದ 2021 ರವರೆಗೆ ಆರ್‌ಸಿಬಿ ತಂಡದ ಅವಿಭಾಜ್ಯ ಅಂಗವಾಗಿದ್ದರು. ವೆಸ್ಟ್ ಇಂಡೀಸ್‍ನ ಎಡಗೈ ಬ್ಯಾಟ್ಸ್‌ಮ್ಯಾನ್ ಗೇಲ್ ಆರು ವರ್ಷಗಳ ಕಾಲ ಫ್ರಾಂಚೈಸಿಯಲ್ಲಿದ್ದರು.

  • ಅರಬ್ ನಾಡಲ್ಲಿ ಘರ್ಜಿಸುತ್ತಾ ಆರ್​ಸಿಬಿ..? – ಇಂದು RCB-KKR ಮುಖಾಮುಖಿ 

    ಅರಬ್ ನಾಡಲ್ಲಿ ಘರ್ಜಿಸುತ್ತಾ ಆರ್​ಸಿಬಿ..? – ಇಂದು RCB-KKR ಮುಖಾಮುಖಿ 

    ದುಬೈ: ಐಪಿಎಲ್‍ನ 31ನೇ ಪಂದ್ಯದಲ್ಲಿ ಇಂದು ಬಲಿಷ್ಟ ತಂಡಗಳಾದ ಆರ್​ಸಿಬಿ ಹಾಗೂ ಕೆಕೆಆರ್ ಮುಖಾಮುಖಿಯಾಗಲಿದೆ. ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿರುವ ಬೆಂಗಳೂರು ತಂಡ ದ್ವಿತೀಯಾರ್ಧದಲ್ಲೂ ಗೆಲುವಿನ ಓಟ ಮುಂದುವರಿಸಲು ಕಾತರದಿಂದ ಕಾಯುತ್ತಿದೆ. ಮೊದಲಾರ್ಧದಲ್ಲಿ ಸೋತು ಸೊರಗಿರುವ ಕೆಕೆಆರ್ ತಂಡ ಗೆಲುವಿನ ಲಯಕ್ಕೆ ಮರಳಲು ಪ್ಲ್ಯಾನ್ ಮಾಡಿಕೊಂಡಿದೆ.

    ಈವರೆಗೂ ನಡೆದಿರುವ ಎಲ್ಲಾ ಪಂದ್ಯಗಳನ್ನು ಗಮನಿಸಿದರೆ ಕೆಕೆಆರ್ ಅಂಕಿ ಅಂಶಗಳಲ್ಲಿ ಆರ್​ಸಿಬಿ ತಂಡಕ್ಕಿಂತ ಮುಂದಿದೆ. ಉಭಯ ತಂಡಗಳು ಒಟ್ಟು 27 ಬಾರಿ ಐಪಿಎಲ್‍ನಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್​ಸಿಬಿ 13 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದ್ದರೆ, ಕೆಕೆಆರ್ 14 ಬಾರಿ ಜಯ ದಾಖಲಿಸಿದೆ. ಇದನ್ನೂ ಓದಿ: ಗಾಯಕ್ವಾಡ್ ಘರ್ಜನೆ – ಚೆನ್ನೈ ಸೂಪರ್ ಕಿಂಗ್ಸ್‌ಗೆ 20 ರನ್‍ಗಳ ಜಯ

    ಐಪಿಎಲ್ ಮೊದಲಾರ್ಧದಲ್ಲಿ ಕೆಕೆಆರ್ ಮತ್ತು ಆರ್​ಸಿಬಿ ಒಂದು ಪಂದ್ಯದಲ್ಲಿ ಸೆಣೆಸಿವೆ. ಬೆಂಗಳೂರು ರಾಯಲ್ ಚಾಲೆಂರ್ಜರ್ಸ್ ತಂಡದ ಆಟಗಾರ ಗ್ಲೆನ್ ಮಾಕ್ಸ್‍ವೆಲ್ (78) ಹಾಗೂ ಎಬಿ ಡಿವಿಲಿಯರ್ಸ್ ಬಿರುಸಿನ (76) ರನ್‍ಗಳೊಂದಿಗೆ 204 ರನ್‍ಗಳ ಬಹೃತ್ ಟಾರ್ಗೆಟ್ ಅನ್ನು ಆರ್​ಸಿಬಿ, ಕೆಕೆಆರ್ ತಂಡಕ್ಕೆ ನೀಡಿತ್ತು. ಈ ಗುರಿ ಬೆನ್ನತ್ತಿದ ನೈಟ್ ರೈಡರ್ಸ್ ಕೇವಲ 166 ರನ್‍ಗಳಿಸಿ ಆರ್​ಸಿಬಿ ಎದುರು ಮಂಡಿಯೂರಿತ್ತು. ಇದನ್ನೂ ಓದಿ: ಆರ್​ಸಿಬಿ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗುಡ್‍ ಬೈ!

    ಉಭಯ ತಂಡಗಳ ಬಲಾಬಲವನ್ನು ನೋಡುವುದಾದರೆ, ಮೆಲ್ನೋಟಕ್ಕೆ ಆರ್​ಸಿಬಿ ಕೆಕೆಆರ್ ವಿರುದ್ಧ ಕಳೆದ ಸೀಸನ್‍ನಿಂದ ಕೊಂಚ ಮೇಲುಗೈ ಸಾಧಿಸುತ್ತಾ ಬಂದಿದೆ. ಆರ್​ಸಿಬಿ ಪರ ನಾಯಕ ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಹೊಡಿಬಡಿ ಆಟಕ್ಕೆ ಹೆಸರುವಾಸಿಯಾದ ಗ್ಲೆನ್ ಮಾಕ್ಸ್‍ವೆಲ್, ಎಬಿ ಡಿವಿಲಿಯರ್ಸ್, ಬ್ಯಾಟಿಂಗ್‍ನಲ್ಲಿ ಅಬ್ಬರಿಸಬಲ್ಲರು. ಬೌಲಿಂಗ್ ವಿಭಾಗವನ್ನು ನೋಡುವುದಾದರೆ ಹರ್ಷಲ್ ಪಟೇಲ್, ಮಹಮದ್ ಸಿರಾಜ್, ಚಾಹಲ್, ಜೇಮೀಸನ್ ಎದುರಾಳಿ ತಂಡದ ಆಟಗಾರರನ್ನು ಕಟ್ಟಿಹಾಕುವ ಸಾಮಥ್ರ್ಯ ಹೊಂದಿದ್ದಾರೆ.

    ಕೆಕೆಆರ್ ಕೂಡ ಆರ್​ಸಿಬಿಯಷ್ಟೇ ಬಲಿಷ್ಟವಾಗಿದ್ದು, ಬ್ಯಾಟಿಂಗ್ ವಿಭಾಗದಲ್ಲಿ ಶುಭಮನ್ ಗಿಲ್, ನೀತೀಶ್ ರಾಣ, ಇಯಾನ್ ಮಾರ್ಗನ್, ದಿನೇಶ್ ಕಾರ್ತಿಕ್ ರನ್‍ಗಳ ಹೊಳೆಯನ್ನೆ ಹರಿಸಬಲ್ಲರು. ವೆಸ್ಟ್ ಇಂಡೀಸ್ ಆಲ್‍ರೌಂಡರ್ ಆಂಡ್ರೆ ರಸೆಲ್ ತಂಡದಲ್ಲಿರುವುದು ಬ್ಯಾಟಿಂಗ್ ವಿಭಾಗ ಮತ್ತಷ್ಟು ಶಕ್ತಿಶಾಲಿಯಾಗಿದೆ. ಇನ್ನು ಬೌಲಿಂಗ್ ವಿಭಾಗವನ್ನು ನೋಡುವುದಾದರೆ ಲಾಕಿ ಫರ್ಗುಸನ್, ಶಿವಂ ಮಾವಿ, ವರುಣ್ ಚಕ್ರವರ್ತಿ, ಸುನಿಲ್ ನರೈನ್ ಎದುರಾಳಿ ತಂಡವನ್ನು ಕಟ್ಟಿಹಾಕಬಲ್ಲರು.

    ಉಭಯ ತಂಡಗದಲ್ಲೂ ಸ್ಟಾರ್ ಆಟಗಾರರಿದ್ದು, ಎಬಿ ಡಿವಿಲಿಯರ್ಸ್ ಆರ್​ಸಿಬಿಯ ಟ್ರಾಂಪ್ ಕಾರ್ಡ್ ಪ್ಲೇಯರ್ ಎನಿಸಿಕೊಂಡಿದ್ದಾರೆ. ಕೆಕೆಆರ್ ಪರ ಆಂಡ್ರೆ ರಸೆಲ್ ಟ್ರಾಂಪ್ ಕಾರ್ಡ್ ಪ್ಲೇಯರ್ ಎನ್ನಬಹುದು. ಇಂದು ರಾತ್ರಿ 7:30ಕ್ಕೆ ಪಂದ್ಯ ಆರಂಭಗೊಳ್ಳಲಿದ್ದು ಎರಡು ತಂಡಗಳ ಅಭಿಮಾನಿಗಳು ಪಂದ್ಯಕ್ಕಾಗಿ ಕಾದು ಕುಳಿತಿದ್ದಾರೆ.

  • ಎಬಿಡಿ ಸಿಡಿಲಬ್ಬರದ ಶತಕಕ್ಕೆ ಬೆಚ್ಚಿಬಿದ್ದ ಆರ್​ಸಿಬಿ ಬೌಲರ್ಸ್

    ಎಬಿಡಿ ಸಿಡಿಲಬ್ಬರದ ಶತಕಕ್ಕೆ ಬೆಚ್ಚಿಬಿದ್ದ ಆರ್​ಸಿಬಿ ಬೌಲರ್ಸ್

    ದುಬೈ: ಇಂಟ್ರಾ ಸ್ಕ್ವಾಡ್ ಪಂದ್ಯದಲ್ಲಿ ಆರ್​ಸಿಬಿಯ ಬಿ ತಂಡದ ಬೌಲರ್​ಗಳನ್ನು ಬೆಂಡೆತ್ತಿ ಎಬಿ ಡಿವಿಲಿಯರ್ಸ್ ಶತಕ ಸಿಡಿಸಿ ಮಿಂಚಿದ್ದಾರೆ.

    ಐಪಿಎಲ್ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು ಎಲ್ಲಾ ತಂಡಗಳು ದುಬೈನಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದೆ. ಆರ್​ಸಿಬಿ ಆಟಗಾರರು ತಮ್ಮಲ್ಲೆ ಎರಡು ತಂಡಗಳನ್ನು ಮಾಡಿಕೊಂಡು ಅಭ್ಯಾಸ ಪಂದ್ಯವಾಡಿದ್ದಾರೆ. ಹರ್ಷಲ್ ಪಟೇಲ್ ಎ ತಂಡದ ನಾಯಕಾಗಿ ಹಾಗೂ ದೇವದತ್ ಪಡಿಕ್ಕಲ್ ಬಿ ತಂಡದ ನಾಯಕರಾಗಿ ತಂಡವನ್ನು ಮುನ್ನಡೆಸಿದ್ದಾರೆ. ಇದನ್ನೂ ಓದಿ:ಎಲ್ಲಾ ಮಾದರಿಯ ಕ್ರಿಕೆಟ್‍ಗೆ ಲಸಿತ್ ಮಾಲಿಂಗ ಗುಡ್ ಬೈ

    ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಎ ತಂಡಕ್ಕೆ ಎಬಿ ಡಿವಿಲಿಯರ್ಸ್ 10 ಸಿಕ್ಸರ್, 7 ಬೌಂಡರಿ ಸಹಿತ ಕೇವಲ 46 ಎಸೆತಗಳಲ್ಲಿ ಸ್ಪೋಟಕ 104 ರನ್ ಗಳನ್ನು ಸಿಡಿಸಿದ್ದಾರೆ. ಇದನ್ನೂ ಓದಿ:ಕ್ಯಾಪ್ಟನ್ ಪಟ್ಟದಿಂದ ಇಳಿಯಲಿದ್ದಾರೆ ಕೊಹ್ಲಿ, ರೋಹಿತ್‍ಗೆ ನಾಯಕತ್ವ

    ನಿಗದಿತ 20 ಓವರ್‍ನಲ್ಲಿ ಎ ತಂಡ 213 ರನ್ ಗಳಿಸಿ ಬೃಹತ್ ಟಾರ್ಗೆಟ್ ನೀಡಿದೆ. ಈ ಮೊತ್ತವನ್ನು ಬೆನ್ನತ್ತಿದ ಎ ತಂಡಕ್ಕೆ ನಾಯಕ ದೇವದತ್ ಪಡಿಕ್ಕಲ್ 21 ಎಸೆತಗಳಲ್ಲಿ 36 ರನ್ ಗಳಿಸಿ ಉತ್ತಮ ಆರಂಭ ನೀಡಿದ್ದಾರೆ. ಬಿರುಸಿನ ಬ್ಯಾಟಿಂಗ್ ಮಾಡಿದ ಕೆ.ಎಸ್ ಭರತ್ 47 ಎಸೆತಗಳಲ್ಲಿ ಭರ್ಜರಿ 95 ರನ್‍ಗಳನ್ನು ಚಚ್ಚಿ ಬಿ ತಂಡದ ಗೆಲುವಿಗೆ ಕಾರಣರಾಗಿದ್ದಾರೆ.

    ಐಪಿಎಲ್ ಆರಂಭಕ್ಕೂ ಮುನ್ನ ಆರ್​ಸಿಬಿ ಆಟಗಾರರು ಉತ್ತಮ ಫಾರ್ಮ್ ಕಂಡುಕೊಂಡಿರುವುದು ಅಭಿಮಾನಿಗಳಲ್ಲಿ ಸಂತಸ ಉಂಟು ಮಾಡಿದೆ.

    ಸೆ.19 ರಂದು ಚೆನ್ನೈ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯೊಂದಿಗೆ ಎರಡನೇ ಹಂತದ ಐಪಿಎಲ್ ಗೆ ಚಾಲನೆ ದೊರೆಯಲಿದ್ದು, ಸೆ.20 ರಂದು ಆರ್​ಸಿಬಿ, ಕೆಕೆಆರ್ ತಂಡವನ್ನು ಎದುರಿಸಲಿದೆ.

  • 47 ಎಸೆತಕ್ಕೆ 100 ರನ್ ಜೊತೆಯಾಟ – ಐಪಿಎಲ್‍ನಲ್ಲಿ ಎಬಿಡಿ, ಕೊಹ್ಲಿ ದಾಖಲೆ

    47 ಎಸೆತಕ್ಕೆ 100 ರನ್ ಜೊತೆಯಾಟ – ಐಪಿಎಲ್‍ನಲ್ಲಿ ಎಬಿಡಿ, ಕೊಹ್ಲಿ ದಾಖಲೆ

    ಶಾರ್ಜಾ: ಐಪಿಎಲ್ 2020ರ ಭಾಗವಾಗಿ ಇಂದು ನಡೆದ ಕೋಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ಎದುರಾಳಿ ತಂಡಕ್ಕೆ 195 ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ. ಈ ಪಂದ್ಯದಲ್ಲಿ ಶತಕದ ಜೊತೆಯಾಡುವ ಮೂಲಕ ಐಪಿಎಲ್‍ನಲ್ಲಿ ಕೊಹ್ಲಿ, ಎಬಿಡಿ ದಾಖಲೆ ಬರೆದಿದ್ದಾರೆ.

    16 ಓವರ್ ಗಳ ಅಂತ್ಯದ ವೇಳೆ ಆರ್ ಸಿಬಿ 129 ರನ್ ಗಳಿಸಿತ್ತು. ಈ ವೇಳೆ ಹೊಡಿಬಡಿ ಆಟಕ್ಕೆ ಮುಂದಾದ ಎಬಿ ಡಿವಿಲಿಯರ್ಸ್ 17ನೇ ಓವರಿನಲ್ಲಿ 2 ಸಿಕ್ಸರ್, ಬೌಂಡರಿ ಚಚ್ಚಿ ಓವರ್ ನಲ್ಲಿ 17 ರನ್ ಸಿಡಿಸಿದರು. 18ನೇ ಮೊದಲ 2 ಎಸೆತಗಳಲ್ಲಿ 10 ರನ್ ಗಳಿಸಿ ಅರ್ಧ ಶತಕ ಪೂರೈಸಿದರು. ಅಂತಿಮ 5 ಓವರ್ ಗಳಲ್ಲಿ ಎಬಿಡಿ, ಕೊಹ್ಲಿ ಜೋಡಿ 79 ರನ್ ಸಿಡಿಸಿತು.

    47 ಎಸೆತಗಳಲ್ಲಿ ಶತಕದ ಜೊತೆಯಾಟ ಆಡಿದ ಜೋಡಿ ನಿಗದಿತ 20 ಓವರ್ ಗಳಲ್ಲಿ ತಂಡ 2 ವಿಕೆಟ್ ನಷ್ಟಕ್ಕೆ 194 ರನ್ ಗಳಿಸಲು ಕಾರಣವಾಯಿತು. 28 ಎಸೆತಗಳಲ್ಲಿ ಕೊಹ್ಲಿ 33 ರನ್, ಎಬಿಡಿ 33 ಎಸೆತಗಳಲ್ಲಿ 5 ಬೌಂಡರಿ, 6 ಸಿಕ್ಸರ್ ನೆರವಿನಿಂದ 73 ರನ್ ಗಳಿಸಿ ಅಜೇಯರಾಗಿ ಉಳಿದರು. ಐಪಿಎಲ್‍ನಲ್ಲಿ ಎಬಿಡಿ, ಕೊಹ್ಲಿ ಜೋಡಿ 3 ಸಾವಿರ ಪೂರೈಸಿತು. ಅಲ್ಲದೇ ಐಪಿಎಲ್‍ನಲ್ಲಿ 10ನೇ ಬಾರಿಗೆ ಶತಕ ಜೊತೆಯಾಟವಾಡಿದ ಜೋಡಿ ಎಂಬ ದಾಖಲೆ ಬರೆದರು.

    ಇಲ್ಲಿಯವರೆಗೆ ಐಪಿಎಲ್‍ನಲ್ಲಿ ಕ್ರೀಸ್ ಗೇಲ್ – ವಿರಾಟ್ ಕೊಹ್ಲಿ 9, ಧವನ್ – ವಾರ್ನರ್ 6, ಜಾನಿ ಬೈರ್​ಸ್ಟೋ – ವಾರ್ನರ್ 5, ಗಂಭೀರ್ – ಉತ್ತಪ್ಪ ಜೋಡಿ 5 ಬಾರಿ ಶತಕದ ಜೊತೆಯಾಟವಾಡಿದೆ.

    ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆರ್ ಸಿಬಿಗೆ ಆರಂಭಿಕರಾದ ಪಡಿಕ್ಕಲ್ ಹಾಗೂ ಫಿಂಚ್ ಉತ್ತಮ ಆರಂಭ ನೀಡಿದರು. ಆರಂಭದಿಂದಲೇ ರನ್ ಗಳಿಸುವತ್ತ ಗಮನಹರಿಸಿದ ಜೋಡಿ ಪವರ್ ಪ್ಲೇನಲ್ಲಿ 47 ರನ್ ಗಳನ್ನು ಪೇರಿಸಿತ್ತು. ಅಲ್ಲದೇ ಮೊದಲ ವಿಕೆಟ್‍ಗೆ 50 ರನ್ ಗಳ ಜೊತೆಯಾಟವನ್ನು ನೀಡಿತು. ಟೂರ್ನಿಯಲ್ಲಿ 3 ಅರ್ಧ ಶತಕಗಳೊಂದಿಗೆ ಉತ್ತಮ ಫಾರ್ಮ್‍ನಲ್ಲಿದ್ದ ಪಡಿಕ್ಕಲ್ 23 ಎಸೆತಗಳಲ್ಲಿ 4 ಬೌಂಡರಿ, ಸಿಕ್ಸರ್ ನೊಂದಿಗೆ 32 ರನ್ ಗಳಿಸಿದ್ದ ಸಂದರ್ಭದಲ್ಲಿ ವಿಕೆಟ್ ಒಪ್ಪಿಸಿದರು. ಆ ವೇಳೆಗೆ ಆರ್ ಸಿಬಿ 67 ರನ್ ಗಳಿಸಿತ್ತು. ಈ ಆವೃತ್ತಿಯಲ್ಲಿ ಫಿಂಚ್, ಪಡಿಕ್ಕಲ್ ಜೋಡಿ ಮೊದಲ ವಿಕೆಟ್ 50 ರನ್ ಗಳಿಸಿದ ಯಾವುದೇ ಪಂದ್ಯವನ್ನು ಆರ್ ಸಿಬಿ ಸೋತಿಲ್ಲ ಎಂಬುವುದು ವಿಶೇಷ ಅಂಶವಾಗಿದೆ.

    ಪಡಿಕ್ಕಲ್ ಔಟಾದ ಬಳಿಕ ನಾಯಕ ವಿರಾಟ್ ಕೊಹ್ಲಿರೊಂದಿಗೆ ಕೂಡಿಕೊಂಡ ಫಿಂಚ್ ನಿಧಾನವಾಗಿ ರನ್ ಗಳಿಸುವುದರೊಂದಿಗೆ ಅರ್ಧ ಶತಕದತ್ತ ಮುನ್ನಡೆದಿದ್ದರು. ಆದರೆ 12ನೇ ಓವರಿನ 2 ಎಸೆತದಲ್ಲಿ ಪ್ರಸಿದ್ಧ ಕೃಷ್ಣ ಬೌಲಿಂಗ್ ನಲ್ಲಿ ಕ್ಲೀನ್ ಬೌಲ್ಡ್ ಆಗುವ ಮೂಲಕ ಅರ್ಧ ಶತಕದಿಂದ ವಂಚಿತರಾದರು. 37 ಎಸೆತಗಳಲ್ಲಿ 4 ಬೌಂಡರಿ, ಸಿಕ್ಸರ್ ನೊಂದಿಗೆ 46 ರನ್ ಗಳಿಸಿ ಫಿಂಚ್ ಪೆವಿಲಿಯನ್‍ಗೆ ಮರಳಿದರು.