Tag: Abdul Rahim

  • ಕಾಂಗ್ರೆಸ್‌ ಹುದ್ದೆಗಳಿಗೆ ರಾಜೀನಾಮೆ – ಸಿಡಿದ ದಕ್ಷಿಣ ಕನ್ನಡ ಮುಸ್ಲಿಮರು

    ಕಾಂಗ್ರೆಸ್‌ ಹುದ್ದೆಗಳಿಗೆ ರಾಜೀನಾಮೆ – ಸಿಡಿದ ದಕ್ಷಿಣ ಕನ್ನಡ ಮುಸ್ಲಿಮರು

    – ಪರ್ಯಾಯ  ಪಕ್ಷ ಕಟ್ಟುವ ಎಚ್ಚರಿಕೆ ನೀಡಿದ ನಾಯಕರು

    ಮಂಗಳೂರು: ದಕ್ಷಿಣ ಕನ್ನಡದಲ್ಲಿ (Dakshina Kannada) ಕಾಂಗ್ರೆಸ್‌ ಸರ್ಕಾರ ಕೋಮು ಹಿಂಸಾಚಾರ ತಡೆಯುವಲ್ಲಿ ವಿಫಲವಾಗಿದೆ ಎಂದು ಹೇಳಿ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಪೋಸ್ಟ್‌ಗಳಿಗೆ (Congress Minority Morcha) ಮುಸ್ಲಿಮ್ ಮುಖಂಡರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

    ಸಮುದಾಯದಲ್ಲಿ ಆಕ್ರೋಶ ಹೆಚ್ಚಾದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಅಶ್ರಫ್(K Ashraf) ರಾಜೀನಾಮೆ ನೀಡಿದ್ದಾರೆ.

    ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಇಂದು ಮಧ್ಯಾಹ್ನ ಮಂಗಳೂರಿನಲ್ಲಿ ನಮ್ಮ ಸಭೆ ನಡೆಯಲಿದ್ದು ಅಲ್ಲಿ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ. ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ. ನಮಗೆ ನ್ಯಾಯ ಸಿಗುವವರೆಗೂ ನಾವು ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಇಬ್ಬರು ಕನ್ನಡಿಗರು ಸೇರಿ 26 ಮೃತ ಪ್ರವಾಸಿಗರ ನೆನಪಿಗೆ ಪಹಲ್ಗಾಮ್‌ನಲ್ಲಿ ಸ್ಮಾರಕ – ಒಮರ್ ಅಬ್ದುಲ್ಲಾ

    ವೈಯುಕ್ತಿಕ ಕಾರಣಕ್ಕೆ ಅಬ್ದುಲ್ ರಹೀಂ ಕೊಲೆ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿಕೆ ಕೊಟ್ಟಿದ್ದಾರೆ. ಆ ಹೇಳಿಕೆಯನ್ನು ಸಚಿವರು ವಾಪಾಸ್ ಪಡೆಯಬೇಕು ಎಂದು ಒತ್ತಾಯ ಮಾಡಿದ್ದಾರೆ.

    ಬಂಟ್ವಾಳದಲ್ಲಿ ಅಬ್ದುಲ್ ರಹೀಂ (Abdul Rahim Murder) ಹತ್ಯೆಯಾದ ಬೆನ್ನಲ್ಲೇ ಮುಸ್ಲಿಂ ಮುಖಂಡರು (Muslim Leaders) ಕಾಂಗ್ರೆಸ್‌ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಕಾಂಗ್ರೆಸ್‌ (Congress) ಪಕ್ಷದಲ್ಲಿರುವ ಸಮುದಾಯದ ನಾಯಕರು ಸಾಮೂಹಿಕ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದರು.  ಇದನ್ನೂ ಓದಿ: ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್‌ ನವೀನ್ ಕುಮಾರ್ ಎನ್‌ಕೌಂಟರ್

    ಅಲ್ಪಸಂಖ್ಯಾತ ಘಟಕದ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ ಬಳಿಕ ಪರ್ಯಾಯ ಪಕ್ಷ ಕಟ್ಟುವ ಎಚ್ಚರಿಕೆಯನ್ನು ನೀಡಿದ್ದಾರೆ.

  • ರಹೀಂ ಹತ್ಯೆ| ಸಾಮೂಹಿಕ ರಾಜೀನಾಮೆ ನೀಡಿ: ಕಾಂಗ್ರೆಸ್‌ ವಿರುದ್ಧ ಮುಸ್ಲಿಮರ ಆಕ್ರೋಶ

    ರಹೀಂ ಹತ್ಯೆ| ಸಾಮೂಹಿಕ ರಾಜೀನಾಮೆ ನೀಡಿ: ಕಾಂಗ್ರೆಸ್‌ ವಿರುದ್ಧ ಮುಸ್ಲಿಮರ ಆಕ್ರೋಶ

    ಮಂಗಳೂರು: ಅಬ್ದುಲ್ ರಹೀಂ (Abdul Rahim Murder) ಹತ್ಯೆಯಾದ ಬೆನ್ನಲ್ಲೇ ಮುಸ್ಲಿಂ ಮುಖಂಡರು (Muslim Leaders) ಕಾಂಗ್ರೆಸ್‌ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಕಾಂಗ್ರೆಸ್‌ (Congress) ಪಕ್ಷದಲ್ಲಿರುವ ಸಮುದಾಯದ ನಾಯಕರು ಸಾಮೂಹಿಕ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.  ಇದನ್ನೂ ಓದಿ: ಅಬ್ದುಲ್ ರಹೀಂ ಹತ್ಯೆ| ಇಬ್ಬರು ಪರಿಚಯಸ್ಥರು ಸೇರಿ 15 ಮಂದಿ ವಿರುದ್ಧ ಎಫ್‌ಐಆರ್‌

     

    ನಮಗೆ ನಿಮ್ಮ ರಾಜಕೀಯ ಬೇಡ. ಜಿಲ್ಲೆಯಲ್ಲಿ ನಮ್ಮವರ ಕೊಲೆ ಎಷ್ಟಾಗಿದೆ? ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಆಗಮಿಸಬೇಕು. ಅಮಾಯಕರ ಸಾವಿಗೆ ನ್ಯಾಯ ಕೊಡಿಬೇಕೆಂದು ಪಟ್ಟು ಹಿಡಿದಿದ್ದಾರೆ. ಮುಸ್ಲಿಂ ಮುಖಂಡರು ಕಾಂಗ್ರೆಸ್‌ ನಾಯಕರನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಅಬ್ದುಲ್‌ ರಹೀಂ ಹತ್ಯೆ| ರಾತ್ರಿ ಆಸ್ಪತ್ರೆ ಮುಂದೆ ಮುಸ್ಲಿಮರ ಪ್ರತಿಭಟನೆ – ಮಂಗಳೂರಿಗೆ ಹೆಚ್ಚುವರಿ ಪೊಲೀಸರ ನಿಯೋಜನೆ

    ದುಷ್ಕರ್ಮಿಗಳಿಂದ ಕೊಲೆಯಾದ ಅಬ್ದುಲ್ ರಹೀಂ ಅವರ ಮೃತದೇಹವನ್ನು ಕೊಳತ್ತಮಜಲಿಗೆ ಇಂದು ಬೆಳಗ್ಗೆ ಸಾಗಿಸಲಾಯಿತು. ಕುತ್ತಾರ್ ಮದನಿ ನಗರ ಮಸೀದಿಯಲ್ಲಿ ರಹೀಂ ಅವರ ಮಯ್ಯತ್ ಸ್ನಾನ ಮಾಡಲಾಯಿತು. ನಂತರ ಮಯ್ಯತ್ ನಮಾಝ್ ಬಳಿಕ ಪೊಲೀಸ್ ಬಂದೋಬಸ್ತ್‌ನಲ್ಲಿ ಮೃತದೇಹವನ್ನು ಮೆರವಣಿಗೆಯ ಮೂಲಕ ಸಾಗಿಸಲಾಯಿತು.

  • ಅಬ್ದುಲ್ ರಹೀಂ ಹತ್ಯೆ| ಇಬ್ಬರು ಪರಿಚಯಸ್ಥರು ಸೇರಿ 15 ಮಂದಿ ವಿರುದ್ಧ ಎಫ್‌ಐಆರ್‌

    ಅಬ್ದುಲ್ ರಹೀಂ ಹತ್ಯೆ| ಇಬ್ಬರು ಪರಿಚಯಸ್ಥರು ಸೇರಿ 15 ಮಂದಿ ವಿರುದ್ಧ ಎಫ್‌ಐಆರ್‌

    ಮಂಗಳೂರು: ಅಬ್ದುಲ್ ರಹೀಂ (Abdul Rahim) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ (Bantwal Rural Police Station) ಪ್ರಕರಣ ದಾಖಲಾಗಿದೆ.

    ಗಾಯಗೊಂಡ ಕಲಂದರ್ ಶಫಿ ಮಾಹಿತಿ ಅನ್ವಯ ನಿಸಾರ್ ಎಂಬವರ ದೂರಿನಡಿ ರಹೀಂ ಪರಿಚಯಸ್ಥರೇ ಆಗಿರುವ ದೀಪಕ್, ಸುಮಿತ್ ಸೇರಿ 15 ಜನರ ವಿರುದ್ದ ಬಿಎನ್‌ಎಸ್‌ 103, 109, 118(1), 118(2), 190, 191(1), 191(2), 191(3) ಅಡಿ ಎಫ್‌ಐಆರ್‌ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ದೀಪಕ್‌, ಸುಮಿತ್‌ ಹೆಸರು ಮಾತ್ರ ಉಲ್ಲೇಖವಾಗಿದ್ದು ಉಳಿದ 13 ಮಂದಿ ಯಾರೂ ಎನ್ನುವುದು ತಿಳಿದು ಬಂದಿಲ್ಲ.

    ಹಲ್ಲೆಗೈದವರ ಪೈಕಿ ಇಬ್ಬರು ಪರಿಚಯಸ್ಥರು ಎಂದು ಹಲ್ಲೆಗೊಳಗಾಗಿ ಅಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಲಂದ‌ರ್ ಶಾಫಿ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಅಬ್ದುಲ್‌ ರಹೀಂ ಹತ್ಯೆ| ರಾತ್ರಿ ಆಸ್ಪತ್ರೆ ಮುಂದೆ ಮುಸ್ಲಿಮರ ಪ್ರತಿಭಟನೆ – ಮಂಗಳೂರಿಗೆ ಹೆಚ್ಚುವರಿ ಪೊಲೀಸರ ನಿಯೋಜನೆ

     

    ದೂರಿನಲ್ಲಿ ಏನಿದೆ?
    ಅಬ್ದುಲ್ ರಹೀಂ ಮತ್ತು ಕಲಂದರ್ ಶಾಫಿ ಅವರು ಹೊಳೆ ಬದಿಯಿಂದ ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ ಎಂಬವರ ಮನೆ ಬಳಿ ಇಳಿಸುತ್ತಿದ್ದರು. ಈ ವೇಳೆ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಜೈಲಿನಲ್ಲಿ ನಿತ್ಯ ಒಂದೊಂದು ಸೌಲಭ್ಯ ನೀಡುವಂತೆ ಹರ್ಷ ಕೊಲೆ ಆರೋಪಿಗಳು ಕಿರಿಕ್‌

     

    ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್ ಗಳೊಂದಿಗೆ ಯದ್ವಾ- ತದ್ವಾ ದಾಳಿ ನಡೆಸಿದ್ದಾರೆ. ಅಲ್ಲಿದ್ದವರು ಕೂಗಾಡಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದ್ದಾರೆ.