Tag: Abhijit Gangopadhyay

  • ಮಮತಾಗೆ ನಿಮ್ಮ ಬೆಲೆ ಎಷ್ಟು ಎಂದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ 24 ಗಂಟೆ ಪ್ರಚಾರದಿಂದ ನಿಷೇಧ

    ಮಮತಾಗೆ ನಿಮ್ಮ ಬೆಲೆ ಎಷ್ಟು ಎಂದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ 24 ಗಂಟೆ ಪ್ರಚಾರದಿಂದ ನಿಷೇಧ

    ನವದೆಹಲಿ: ಚುನಾವಣಾ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾಮರ್ಜಿ (Mamata Banerjee) ಅವರಿಗೆ ನಿಮ್ಮ ಬೆಲೆ ಎಷ್ಟು ಎಂದು ಪ್ರಶ್ನಿಸಿದ್ದ ಪಶ್ಚಿಮ ಬಂಗಾಳದ ತಮ್ಲುಕ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ (Abhijit Gangopadhyay) ಹೇಳಿಕೆಯನ್ನು ಚುನಾವಣಾ ಆಯೋಗ ಖಂಡಿಸಿದೆ. ಅಲ್ಲದೇ 24 ಗಂಟೆಗಳ ಚುನಾವಣಾ ಪ್ರಚಾರ ನಡೆಸದಂತೆ ನಿರ್ಬಂಧ ಹೇರಿದೆ.

    ಕೋಲ್ಕತ್ತಾ ಹೈಕೋರ್ಟ್ ನ್ಯಾಯಧೀಶರಾಗಿದ್ದ ಅಭಿಜಿತ್ ಗಂಗೋಪಾಧ್ಯಾಯ ಅವರು ರಾಜೀನಾಮೆ ನೀಡಿ ಬಿಜೆಪಿಯಿಂದ (BJP) ಚುನಾವಣೆಗೆ ಸ್ಪರ್ಧಿಸಿದ್ದಾರೆ. ಸಾರ್ವಜನಿಕ ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಟೀಕಿಸುವ ಭರದಲ್ಲಿ ನಿಮ್ಮ ಬೆಲೆ ಎಷ್ಟು ಎಂದು ಕೇಳಿದ್ದರು. ಈ ಹೇಳಿಕೆ ವಿರುದ್ಧ ದೂರು ನೀಡಿದ್ದ ಟಿಎಂಸಿ, ಇದು ಬಿಜೆಪಿ ಅಭ್ಯರ್ಥಿಯ ಸ್ತ್ರೀ ದ್ವೇಷದ ನಡವಳಿಕೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ. ನ್ಯಾಯಾಂಗದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದ ಅವರು, ಮಹಿಳೆಯರ, ವಿಶೇಷವಾಗಿ ಅಧಿಕಾರದ ಸ್ಥಾನದಲ್ಲಿರುವ ಮಹಿಳೆಯ ಘನತೆಯ ಮೇಲೆ ದಾಳಿ ಮಾಡಲು ಕೀಳು ಮಟ್ಟದ ದಾರಿ ಆರಿಸಿಕೊಂಡಿರುವುದು ದುರಾದೃಷ್ಟಕರ ಎಂದು ಹೇಳಿತ್ತು. ಇದನ್ನೂ ಓದಿ: ವೈಯಕ್ತಿಕ ಕೆಲಸಗಳಿಗಾಗಿ ವಸಂತ ಬಂಗೇರ ಯಾವತ್ತೂ ನನ್ನ ಬಳಿ ಬಂದಿಲ್ಲ: ಸಿಎಂ

    ದೂರಿನ ಅನ್ವಯ ಪ್ರತಿಕ್ರಿಯಿಸಿರುವ ಆಯೋಗ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಇದರಲ್ಲಿ ಅಭಿಜಿತ್ ಗಂಗೋಪಾಧ್ಯಾಯರ ಹೇಳಿಕೆಯನ್ನು ಮತ್ತೊಮ್ಮೆ ಪರಿಶೀಲಿಸಿದೆ. ಅವರು ‘ಕೆಳಮಟ್ಟದ ವೈಯಕ್ತಿಕ ದಾಳಿಯನ್ನು’ ಮಾಡಿದ್ದಾರೆ ಎಂದು ಮನವರಿಕೆಯಾಗಿದೆ. ಈ ಮೂಲಕ ಅವರು ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಿದೆ. ಇದನ್ನೂ ಓದಿ: ಸರ್ಕಾರ‌ 1 ವರ್ಷ ಪೂರೈಸಿದ್ದು ಮುಖ್ಯವಲ್ಲ, ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿರುವುದು ಮುಖ್ಯ: ಡಿಕೆಶಿ

    ಅಭಿಜಿತ್ ಗಂಗೋಪಾಧ್ಯಾಯರ ದುರ್ನಡತೆಯನ್ನು ಆಯೋಗವು ಬಲವಾಗಿ ಖಂಡಿಸುತ್ತದೆ. ಮೇ 21ರ ಸಂಜೆ 5 ಗಂಟೆಯಿಂದ ಜಾರಿಗೆ ಬರುವಂತೆ ಮುಂದಿನ 24 ಗಂಟೆಗಳ ಕಾಲ ಪ್ರಚಾರ ಮಾಡದಂತೆ ನಿರ್ಬಂಧಿಸಿದೆ. ಮುಂದೆ ಸಾರ್ವಜನಿಕವಾಗಿ ಮಾತನಾಡುವಾಗ ಜಾಗರೂಕರಾಗಿರಲು ಆಯೋಗವು ಅಭಿಜಿತ್ ಗಂಗೋಪಾಧ್ಯಾಯರಿಗೆ ಕಟ್ಟುನಿಟ್ಟಾಗಿ ಎಚ್ಚರಿಸುತ್ತದೆ ಎಂದು ತಿಳಿಸಿದೆ.  ಇದನ್ನೂ ಓದಿ: ಡಿಕೆಶಿ ಇನ್ನುಮುಂದೆ ಪೆನ್‌ಡ್ರೈವ್ ಬಗ್ಗೆ ಮಾತನಾಡೋದೆ ಬೇಡ: ಜಿ.ಸಿ ಚಂದ್ರಶೇಖರ್

  • ಎಲ್ಲಿಂದ ಸ್ಪರ್ಧಿಸಿದ್ರೂ ನಿಮಗೆ ಸೋಲು ಖಚಿತ- ಮಾಜಿ ಜಡ್ಜ್‌ಗೆ ದೀದಿ ಚಾಲೆಂಜ್ ‌

    ಎಲ್ಲಿಂದ ಸ್ಪರ್ಧಿಸಿದ್ರೂ ನಿಮಗೆ ಸೋಲು ಖಚಿತ- ಮಾಜಿ ಜಡ್ಜ್‌ಗೆ ದೀದಿ ಚಾಲೆಂಜ್ ‌

    ಕೋಲ್ಕತ್ತಾ: ಬಿಜೆಪಿ ಸೇರಿದ ಕೋಲ್ಕತ್ತಾ ಹೈಕೋರ್ಟ್ ಮಾಜಿ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ (Abhijit Gangopadhyay) ಅವರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ.

    ಅಭಿಜಿತ್ ಅವರು ಬಿಜೆಪಿ ಸೇರಿದ ಕೆಲ ಗಂಟೆಗಳಲ್ಲಿಯೇ ಪ್ರತಿಕ್ರಿಯೆ ನೀಡಿದ ದೀದಿ (Mamata Banerjee), ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೀವು ಎಲ್ಲಿಂದ ಸ್ಪರ್ಧಿಸಿದರೂ ನಿಮಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಹೇಳುವ ಮೂಲಕ ಸವಾಲೆಸೆದಿದ್ದಾರೆ. ಇದನ್ನೂ ಓದಿ: ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ 30 ಲಕ್ಷ ಸರ್ಕಾರಿ ಉದ್ಯೋಗ- ಯುವಕರಿಗೆ ರಾಗಾ ಗ್ಯಾರಂಟಿ

    ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರಾಗಿದ್ದ ಗಂಗೋಪಾಧ್ಯಾಯ ಅವರು ತಮ್ಮ ತೀರ್ಪುಗಳ ಮೂಲಕ ಸಾವಿರಾರು ಯುವಕರ ಉದ್ಯೋಗಗಳನ್ನು ಕಸಿದುಕೊಂಡಿದ್ದಾರೆ ಎಂದು ಆರೋಪಿಸಿದರು. ಜೊತೆಗೆ ಯುವಕರು ಯಾವುದೇ ಕಾರಣಕ್ಕೂ ನಿಮ್ಮನ್ನು ಕ್ಷಮಿಸುವುದಿಲ್ಲ. ನಿಮ್ಮ ಎಲ್ಲಾ ತೀರ್ಪುಗಳು ಪ್ರಶ್ನಾರ್ಹವಾಗಿವೆ. ನಿಮ್ಮ ಸೋಲನ್ನು ನಾವು ಖಚಿತಪಡಿಸುತ್ತೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

    ಮಂಗಳವಾರ ಬೆಳಗ್ಗೆ ಕೋಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿದ ಗಂಗೋಪಾಧ್ಯಾಯ ಅವರು ಗುರುವಾರ ಬಿಜೆಪಿ ಸೇರಿದ್ದಾರೆ. ಸಾಲ್ಟ್ ಲೇಕ್‌ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಅವರು ಮಾಜಿ ಜಡ್ಜ್‌ಗೆ ಪಕ್ಷದ ಧ್ವಜವನ್ನು ಹಸ್ತಾಂತರಿಸುವ ಮೂಲಕ ಬರಮಾಡಿಕೊಂಡರು.

  • ಮಮತಾ ಸವಾಲು ಸ್ವೀಕಾರ – ಸಕ್ರೀಯ ರಾಜಕಾರಣಕ್ಕೆ ಇಳಿದ ಕೋಲ್ಕತ್ತಾ ಹೈಕೋರ್ಟ್‌ ಜಡ್ಜ್‌ ಗಂಗೋಪಾಧ್ಯಾಯ

    ಮಮತಾ ಸವಾಲು ಸ್ವೀಕಾರ – ಸಕ್ರೀಯ ರಾಜಕಾರಣಕ್ಕೆ ಇಳಿದ ಕೋಲ್ಕತ್ತಾ ಹೈಕೋರ್ಟ್‌ ಜಡ್ಜ್‌ ಗಂಗೋಪಾಧ್ಯಾಯ

    ಕೋಲ್ಕತಾ: ಸಕ್ರಿಯ ರಾಜಕಾರಣಕ್ಕೆ ಬನ್ನಿ ಎಂಬ ಪಶ್ಚಿಮ ಬಂಗಾಳ ಮುಖ್ಯ ಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಸವಾಲನ್ನುಕೋಲ್ಕತಾ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ (Abhijit Gangopadhyay) ಸ್ವೀಕರಿಸಿದ್ದು ರಾಜಕೀಯಕ್ಕೆ ಬರಲು ಜಡ್ಜ್‌ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

    ಆಗಸ್ಟ್‌ನಲ್ಲಿ ನಿವೃತ್ತರಾಗಬೇಕಿದ್ದ ನ್ಯಾಯಾಧೀಶರು ಆಡಳಿತಾರೂಢ ಟಿಎಂಸಿ (TMC) ಮತ್ತು ಅದರ ನಾಯಕ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಪದೇ ಪದೇ ಕಟು ಪದಗಳನ್ನು ಬಳಸಿ ಟೀಕಿಸುತ್ತಿದ್ದರು. ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ನ್ಯಾ. ಅಭಿಜಿತ್ ಗಂಗೋಪಾಧ್ಯಾಯ ಅವರು ಸಿಬಿಐ ತನಿಖೆಗೆ ಆದೇಶಿಸಿದ್ದರು. ಅಲ್ಲದೇ ಸರ್ಕಾರದ ವಿರುದ್ಧ ಪದೇ ಪದೇ ಚಾಟಿ ಬೀಸುತ್ತಿದ್ದರು. ಹೀಗಾಗಿ ಟಿಎಂಸಿ ವಕ್ತಾರರು ಸಕ್ರಿಯ ರಾಜಕೀಯಕ್ಕೆ ಇಳಿಯುವಂತೆ ಅವರಿಗೆ ಸವಾಲು ಹಾಕಿದ್ದರು.  ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ – ಎನ್‌ಐಎಗೆ ಕೇಸ್‌ ವರ್ಗಾವಣೆ

    ನಾನು ರಾಜಕೀಯಕ್ಕೆ ಬರುತ್ತೇನೆ. ನಾನು ಯಾವ ಪಕ್ಷದಿಂದ ಆರಂಭಿಸುತ್ತೇನೆ ಎಂದು ಇಂದು ಹೇಳುತ್ತಿಲ್ಲ. ನ್ಯಾಯಾಲಯದಲ್ಲಿ ಇನ್ನೂ ಉಳಿದಿರುವ ಸಣ್ಣ ಕೆಲಸವನ್ನು ನಾನು ಮೊದಲು ಮುಗಿಸಲು ಬಯಸುತ್ತೇನೆ. ಸೋಮವಾರ ಮುಖ್ಯ ನ್ಯಾಯಮೂರ್ತಿಗೆ ಮೌಖಿಕವಾಗಿ ತಿಳಿಸುತ್ತೇನೆ ಮತ್ತು ಮಂಗಳವಾರ ಬೆಳಗ್ಗೆ ನನ್ನ ರಾಜೀನಾಮೆಯನ್ನು ರಾಷ್ಟ್ರಪತಿಗಳಿಗೆ ಕಳುಹಿಸುತ್ತೇನೆ ಅಭಿಜಿತ್ ಗಂಗೋಪಾಧ್ಯಾಯ ತಿಳಿಸಿದ್ದಾರೆ.

     

    ನ್ಯಾ. ಗಂಗೋಪಾಧ್ಯಾಯ ಇನ್ನೂ ರಾಜೀನಾಮೆ ಸಲ್ಲಿಸದಿದ್ದರೂ ಪಶ್ಚಿಮ ಬಂಗಾಳದ (West Bengal) ಕೆಲವರನ್ನು ಒಳಗೊಂಡಂತೆ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ (BJP) ಪ್ರಕಟಿಸಿದ  ಒಂದು ದಿನದ ನಂತರ ರಾಜೀನಾಮೆ ಘೋಷಣೆ ಹೊರಬಿದ್ದಿದೆ.

    ಸ್ಥಳೀಯ ಮಾಧ್ಯಮಕ್ಕೆ ತಿಳಿಸಿದ ಸಂದರ್ಶನದಲ್ಲಿ ಅವರು, ನಾನು ರಾಜಕೀಯಕ್ಕೆ ಬರಲು ಆಡಳಿತರೂಢ ಪಕ್ಷ ಕಾರಣ. ಇದಕ್ಕಾಗಿ ನಾನು ನಮ್ಮ ಆಡಳಿತ ಪಕ್ಷವನ್ನು ಅಭಿನಂದಿಸುತ್ತೇನೆ. ನನ್ನ ತೀರ್ಪು ಅವರಿಗೆ ಇಷ್ಟವಾಗದಿದ್ದರೆ ವಿವಿಧ ವಕ್ತಾರರನ್ನು ಬಳಸಿಕೊಂಡು ನ್ಯಾಯಾಧೀಶರು ಮತ್ತು ನ್ಯಾಯಾಂಗದ  ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದರು ಎಂದು ಹೇಳಿದರು.

    ನೀವು ಯಾವ ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ ಎಂಬ ಪ್ರಶ್ನೆಗೆ, ಕಾಂಗ್ರೆಸ್, ಎಡಪಕ್ಷಗಳು, ಬಿಜೆಪಿ ಮತ್ತು ಸಣ್ಣ ಪಕ್ಷಗಳು ಎಂದು ಉತ್ತರ ನೀಡಿದರು. ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಕೂಗಿದ್ದು ನಿಜ : ಉನ್ನತ ಪೊಲೀಸ್‌ ಮೂಲಗಳು

    ತೃಣಮೂಲ ಸರ್ಕಾರದ ಅಡಿಯಲ್ಲಿ ಪಶ್ಚಿಮ ಬಂಗಾಳವು ಕಳ್ಳರ ಸಾಮ್ರಾಜ್ಯ ಎಂದು ನಾನು ಹೇಳಿದ್ದೇನೆ. ಆ ಪಕ್ಷಕ್ಕೆ ಸೇರುವ ಪ್ರಶ್ನೆಯೇ ಇಲ್ಲ. ಪಶ್ಚಿಮ ಬಂಗಾಳದ ಘನತೆ ಈಗ ಹಾಳಾಗುತ್ತಿದ್ದು, ಅದನ್ನು ಉಳಿಸಲು ಸಾಧ್ಯವೇ ಎನ್ನುವುದೇ ದೊಡ್ಡ ಪ್ರಶ್ನೆ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ನ್ಯಾಯಾಲಯದ ಸಭಾಂಗಣದಿಂದ ಸಾಮಾನ್ಯ ಜನರನ್ನು ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದರು.

    ಬಂಗಾಳಿಯಾಗಿ ನಾನು ಈ ಅನ್ಯಾಯವನ್ನು ಒಪ್ಪಲಾರೆ. ದೊರೆಗಳಾಗಿ ಹೊರಹೊಮ್ಮಿದವರು ರಾಜ್ಯಕ್ಕೆ ಪ್ರಯೋಜನವಾಗುವಂತೆ ತೋರಲಿಲ್ಲ. ಸವಾಲು ಸ್ವೀಕರಿಸಿ ಮಂಗಳವಾರ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ನನ್ನ ಕೈಯಲ್ಲಿ ಸಾಕಷ್ಟು ಪ್ರಕರಣಗಳಿರುವುದರಿಂದ ಸೋಮವಾರ ನಾನು ನ್ಯಾಯಾಲಯಕ್ಕೆ ಹಾಜರಾಗುತ್ತೇನೆ ಎಂದು ತಿಳಿಸಿದರು.

    ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಮೇ 2018 ರಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಳ್ಳುವ ಮೊದಲು ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ವಕೀಲರಾಗಿದ್ದರು. 2020 ರಲ್ಲಿ ಅವರು ಕೋಲ್ಕತ್ತಾ ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರಾಗಿ ಬಡ್ತಿ ಪಡೆದರು.

     

  • ಕಲ್ಕತ್ತಾ ಹೈಕೋರ್ಟ್‌ Vs ಸುಪ್ರೀಂ  – ಸಂಜೆ ತುರ್ತು ವಿಚಾರಣೆ, ನ್ಯಾ. ಅಭಿಜಿತ್ ಗಂಗೋಪಾಧ್ಯಾಯ ಆದೇಶಕ್ಕೆ ತಡೆ

    ಕಲ್ಕತ್ತಾ ಹೈಕೋರ್ಟ್‌ Vs ಸುಪ್ರೀಂ – ಸಂಜೆ ತುರ್ತು ವಿಚಾರಣೆ, ನ್ಯಾ. ಅಭಿಜಿತ್ ಗಂಗೋಪಾಧ್ಯಾಯ ಆದೇಶಕ್ಕೆ ತಡೆ

    ನವದೆಹಲಿ: ಬಹಳ ಅಪರೂಪದ ಬೆಳವಣಿಗೆಯೊಂದರಲ್ಲಿ ಸುಪ್ರೀಂ ಕೋರ್ಟ್‌ (Supreme Court) ಶುಕ್ರವಾರ ಸಂಜೆ ದಿಢೀರ್‌ ವಿಚಾರಣೆ ನಡೆಸಿ ಕಲ್ಕತ್ತಾ ಹೈಕೋರ್ಟ್‌ (Calcutta High Court ) ಆದೇಶಕ್ಕೆ ತಡೆ ನೀಡಿದೆ.

    ತಾನು ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದ ವರದಿ ಮತ್ತು ಸುಪ್ರೀಂ ಆದೇಶದ ಅಧಿಕೃತ ಪ್ರತಿಯನ್ನು ರಾತ್ರಿ 12:15ರ ಒಳಗಡೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೆಕ್ರೆಟರಿ ಜನರಲ್‌ಗೆ ಹೈಕೋರ್ಟ್‌ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ (Justice Abhijit Gangopadhyay) ಆದೇಶಿಸಿದ್ದರು.

    ಈ ಆದೇಶ ಪ್ರಕಟವಾದ ಬೆನ್ನಲ್ಲೇ ಸುಪ್ರೀಂ ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಸಂಜೆ ತುರ್ತು ವಿಚಾರಣೆ ನಡೆಸಿ ಹೈಕೋರ್ಟ್‌ನ ಆದೇಶವು ಅಸಮರ್ಪಕ ಮತ್ತು ನ್ಯಾಯಾಂಗ ಶಿಸ್ತಿಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟು ಆದೇಶಕ್ಕೆ ತಡೆ ನೀಡಿದೆ. ಇದನ್ನೂ ಓದಿ: ದ್ವೇಷ ಭಾಷಣದ ವಿರುದ್ಧ ಸ್ವಯಂಪ್ರೇರಿತ ಕೇಸ್‌ ದಾಖಲಿಸಿ: ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಆದೇಶ

    ಏನಿದು ಪ್ರಕರಣ?
    ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಕರ ನೇಮಕಾತಿ ಹಗರಣದ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ನ್ಯಾ.ಗಂಗೋಪಾಧ್ಯಾಯ ನಡೆಸುತ್ತಿದ್ದರು. ವಿಚಾರಣೆ ನಡೆಸುತ್ತಿರುವಾಗಲೇ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದರು.

    ಟಿವಿ ವಾಹಿನಿಗೆ ಸಂದರ್ಶನ ನೀಡಿದ್ದನ್ನು ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್‌ ಬ್ಯಾನರ್ಜಿ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಮುಖ್ಯ ನ್ಯಾಯಾಧೀಶ ಡಿ.ವೈ ಚಂದ್ರಚೂಡ್‌ ಗರಂ ಆಗಿ ಬಾಕಿ ಉಳಿದಿರುವ ವಿಷಯಗಳ ಕುರಿತು ಸುದ್ದಿ ವಾಹಿನಿಗಳಿಗೆ ಸಂದರ್ಶನ ನೀಡುವುದು ನ್ಯಾಯಾಧೀಶರ ಕೆಲಸವಲ್ಲ. ಅರ್ಜಿದಾರರ ಬಗ್ಗೆ ನ್ಯಾಯಾಧೀಶರು ಅಭಿಪ್ರಾಯವನ್ನು ನೀಡಿದರೆ, ಅವರು ಆ ಪ್ರಕರಣದ ವಿಚಾರಣೆ ನಡೆಸಲು ಸಾಧ್ಯವಿಲ್ಲ.ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಹೊಸ ಪೀಠವನ್ನು ರಚಿಸಬೇಕು ಎಂದು ಸಿಜೆಐ ಸೂಚಿಸಿದ್ದರು.

    ಶಿಕ್ಷಕರ ನೇಮಕಾತಿ ಹಗರಣದ ವಿಚಾರಣೆಯನ್ನು ನ್ಯಾ. ಗಂಗೋಪಾಧ್ಯಾಯ ಅವರು  ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿತ್ತು. ಈ ಆದೇಶದ ಬೆನ್ನಲ್ಲೇ ನ್ಯಾ. ಅಭಿಜಿತ್ ಗಂಗೋಪಾಧ್ಯಾಯ ಅವರು ರಾತ್ರಿ 12 ಗಂಟೆಯ ಒಳಗಡೆ ತಾನು ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದ ವರದಿಯನ್ನು ನೀಡಬೇಕು. ನಾನು 12:15ರವರೆಗೆ ನನ್ನ ಚೇಂಬರ್‌ನಲ್ಲಿ ಕಾಯುತ್ತೇನೆ. ಇದರೊಂದಿಗೆ ಶಿಕ್ಷಕರ ನೇಮಕಾತಿ ಪ್ರಕರಣದ ವಿಚಾರಣೆಯಿಂದ ನನ್ನನ್ನು ತೆಗೆದುಹಾಕಲು ಕಾರಣವಾದ ದಾಖಲೆಗಳನ್ನು ತನ್ನ ಮುಂದೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್‌ನ ಸೆಕ್ರೆಟರಿ ಜನರಲ್‌ಗೆ ತಕ್ಷಣವೇ ತಿಳಿಸುವಂತೆ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಸೂಚಿಸಿದ್ದರು. ಈ ಆದೇಶಕ್ಕೆ ಸುಪ್ರೀಂ ಈಗ ತಡೆ ನೀಡಿದೆ.