Tag: Abhimanyu elephant

  • ಮುಂದಿನ ವರ್ಷ ಅಂಬಾರಿ ಹೊತ್ತರೆ ʻಅಭಿಮನ್ಯು ಯುಗʼ ಮುಗಿಯಿತು – ಮುಂದಿನ ಸಾರಥಿ ಯಾರು?

    ಮುಂದಿನ ವರ್ಷ ಅಂಬಾರಿ ಹೊತ್ತರೆ ʻಅಭಿಮನ್ಯು ಯುಗʼ ಮುಗಿಯಿತು – ಮುಂದಿನ ಸಾರಥಿ ಯಾರು?

    ಜಂಬೂ ಸವಾರಿಯಿಲ್ಲದೇ ಮೈಸೂರು ದಸರಾ ಊಹಿಸಿಕೊಳ್ಳೋದಕ್ಕೂ ಸಾಧ್ಯವಿಲ್ಲ. ಮೈಸೂರು ದಸರಾ ಮಹೋತ್ಸವಕ್ಕೆ ಶತಮಾನಗಳ ಇತಿಹಾಸವಿದೆ. ಈ ದಸರಾ ಮಹೋತ್ಸವದಲ್ಲಿ ಜಂಬೂ ಸವಾರಿ ಅಂದ್ರೆ ಆನೆಗಳೇ ಆಕರ್ಷಣೆ. ಮೈಸೂರು ಮಹಾರಾಜರ ಆಡಳಿತದ ನಂತರವೂ ಆನೆಯ ಮೇಲೆ ಅಂಬಾರಿ ಹೊರುವ ಪರಂಪರೆ ಸಾಗಿ ಬಂದಿದೆ. ಅದೇ ರೀತಿ ಈ ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತ ಆನೆಗಳ ಇತಿಹಾಸ ಅಷ್ಟೇ ವಿಸ್ಮಯ. ಹೀಗೆ ಇತಿಹಾಸ ನಿರ್ಮಿಸಿ ಹೋದ ಹಳೆಯ ಆನೆಗಳ ಸಾಲಿನ ಅಂಚಿನಲ್ಲಿ ಈಗ ಅಭಿಮನ್ಯು (Abhimanyu) ಕೂಡ ಇದ್ದಾನೆ. ದಶಕಗಳಿಂದ ಈಚೆಗೆ ಬಂದ ಆನೆಗೆ ಅಂಬಾರಿ ಹೊರುವ ಹೊಣೆ ಬಿಟ್ಟುಕೊಡುವ ಕಾಲ ಬಂದೇ ಬಿಟ್ಟಿದೆ.

    ದಸರಾ ಉತ್ಸವದ ಕೊನೆಯ ದಿನ ಜಂಬೂ ಸವಾರಿಯೊಂದಿಗೆ (Jamboo Savari) ಮುಕ್ತಾಯಗೊಳ್ಳುತ್ತದೆ. ಇಂದು ಸ್ತಬ್ಧಚಿತ್ರಗಳ ಮೆರವಣಿಗೆ ಬಳಿಕ ಅಭಿಮನ್ಯು ತಾಯಿ ಚಾಮುಂಡಿ ವಿಗ್ರಹ ಇರುವ ಚಿನ್ನದ ಅಂಬಾರಿ‌ ಹೊತ್ತು ರಾಜಬೀದಿಯಲ್ಲಿ ಸಾಗಲಿದ್ದಾನೆ.

    ಮುಂದಿನ ವರ್ಷ ಅಂಬಾರಿ ಹೊತ್ತರೆ ಮುಗಿಯಿತು:
    ದಸರಾ ಆನೆಗಳಿಗೂ ಶತಮಾನದ ನಂಟು ಇದೆ. ಎಲ್ಲೆಡೆ ಹೊಸ ಪೀಳಿಗೆ ಪ್ರವೇಶಿಸಿದಂತೆ ಮೈಸೂರಿನ ಆನೆಗಳಲ್ಲೂ ಬದಲಾವಣೆ ಆಗುತ್ತಿದೆ. ಆದರೆ, ಈಗ ಇರುವ ಹಳೆಯ ಆನೆಗಳ ಪೈಕಿ ಅಭಿಮನ್ಯುನೇ ಹಿರಿಯ. 59 ವರ್ಷ ವಯಸ್ಸಿನ ಅಭಿಮನ್ಯು ಮುಂದಿ ವರ್ಷ ಅಂಬಾರಿ ಹೊತ್ತರೆ ಮುಗಿಯಿತು. ಏಕೆಂದರೆ ಅರಣ್ಯ ಅಧಿಕಾರಿಗಳು ಹೇಳುವಂತೆ 60 ವರ್ಷ ತುಂಬಿದ ಆನೆಗಳಿಗೆ ನಿಯಮದಂತೆ ನಿವೃತ್ತಿ ಕೊಡಬೇಕು. ಅಭಿಮನ್ಯುವಿಗೆ ಈಗ 59 ವರ್ಷ ವಯಸ್ಸಾಗಿದ್ದು, ಮುಂದಿನ ವರ್ಷ 60ನೇ ವಯಸ್ಸಿಗೆ ಕಾಲಿಡಲಿದ್ದಾನೆ. ಮುಂದಿನ ವರ್ಷ ಅಂಬಾರಿ ಹೊತ್ತರೆ ಅಲ್ಲಿಗೆ ಅಭಿಮನ್ಯು ಇತಿಹಾಸ ಪುಟ ಸೇರಿಕೊಳ್ಳಲಿದ್ದಾನೆ ಎನ್ನುತ್ತಾರೆ ಡಿಸಿಎಫ್‌ ಪ್ರಭು. ಇದನ್ನೂ ಓದಿ: 6ನೇ ಬಾರಿ ಚಿನ್ನದ ಅಂಬಾರಿ ಹೊರಲಿರುವ ಅಭಿಮನ್ಯು ಬಗ್ಗೆ ನಿಮಗೆಷ್ಟು ಗೊತ್ತು?

    ಅಭಿಮನ್ಯು ಹೆಮ್ಮರವಾಗಿ ಬೆಳೆದಿದ್ದು ಹೇಗೆ?
    1951ರ ಸಮಯದಲ್ಲಿ ಸುರ್ಗುಜಾ ಮಧ್ಯಪ್ರದೇಶದ ಭಾಗವಾಗಿತ್ತು. ಆದ್ರೆ 2000 ಇಸವಿಯ ನಂತರ ಛತ್ತಿಸ್‌ಘಡದ ಜಿಲ್ಲೆಯಾಗಿ ಸೇರ್ಪಡೆಯಾಯಿತು. ಈ ಸ್ಥಳಕ್ಕೂ ನಮ್ಮ ಕರ್ನಾಟಕಕ್ಕೂ ನಂಟು ಇದೆ. ಅದು ಹೇಗೆ ಅಂತೀರಾ..? ಈ ಹಿಂದೆ ಸುಮಾರು 3 ದಶಕಗಳ ಕಾಲ ಸರ್ಗುಜಾದಲ್ಲಿ ಆನೆಗಳ ಹಾವಳಿ ಮಿತಿ ಮೀರಿತ್ತು. ಆನೆಗಳನ್ನ ಸೆರೆ ಹಿಡಿಯಬೇಕು, ಉಪಟಳ ತಪ್ಪಿಸಬೇಕು ಅನ್ನೋ ಕೂಗು ಸರ್ಗೂಜಾ ಭಾಗದಲ್ಲಿ ಜೋರಾಗಿತ್ತು. ಸ್ಥಳೀಯರ ಒತ್ತಡಕ್ಕೆ ಮಣಿದ ಅಂದಿನ ಮಧ್ಯಪ್ರದೇಶದ ರಾಜ್ಯ ಸರ್ಕಾರ ಆನೆಗಳನ್ನ ಸೆರೆ ಹಿಡಿಯೋದಕ್ಕೇನೋ ಅನುಮತಿ ನೀಡಿತು. ಆದ್ರೆ ಅವುಗಳನ್ನ ಸೆರೆ ಹಿಡಿಯುವ ಕಾರ್ಯಾಚರಣೆ ಅಷ್ಟು ಸುಲಭವಾಗಿರಲಿಲ್ಲ. ಆಗ ಮಧ್ಯಪ್ರದೇಶದ ಚಿತ್ತ ಹಾಯಿಸಿದ್ದು, ಕರ್ನಾಟಕದತ್ತ. ಖೆಡ್ಡಕ್ಕೆ ಕೆಡವುವ ಕಾರ್ಯಾಚರಣೆಯಲ್ಲಿ ಕರ್ನಾಟಕದ ಆನೆಗಳು ಆಗಲೇ ಬಲಶಾಲಿಗಳಾಗಿ ಗುರುತಿಸಿಕೊಂಡಿದ್ದವು. ಇಲ್ಲಿಂದ ಆನೆಗಳನ್ನ ಕರೆದುಕೊಂಡು ಬಂದು ಆನೆಗಳನ್ನ ಸೆರೆಹಿಡಿಯುವ ತೀರ್ಮಾನಕ್ಕೆ ಅಲ್ಲಿನ ಸರ್ಕಾರ ಮುಂದಾಯಿತು. ಅದರಂತೆ ಇಂದಿನ ಅಂಬಾರಿ ಹೊರುವ ಕ್ಯಾಪ್ಟನ್‌ ಅಭಿಮನ್ಯು ಸೇರಿ ಹಲವು ಆನೆಗಳ ತಂಡವನ್ನ ಸರ್ಗುಜಾಕ್ಕೆ ಕರೆದೊಯ್ಯಲಾಯ್ತು. ನೀರಿಕ್ಷೆಯಂತೆ ನಮ್ಮ ಆನೆಗಳು ಸರ್ಗುಜಾದಲ್ಲಿ ಸುಮಾರು 42 ದಿನಗಳ ಕಾಲ ಕಾರ್ಯಾಚರಣೆ ನಡೆಸಿ ಯಶಸ್ವಿಯಾದವು. ಈ ಆನೆ ಸೆರೆ ಕಾರ್ಯಾಚರಣೆ ಆಗ The Last Migration – Wild Elephant Captureʼ ಸಾಕ್ಷ್ಯಚಿತ್ರವಾಗಿ ರೂಪುಗೊಂಡಿತು. ಇದು ನಮ್ಮ ಅಭಿಮನ್ಯುವಿನ ಮೇಲಿನ ಅಭಿಮಾನ ಹೆಚ್ಚಿಸಿ ಈಗಲೂ ಅಪರೇಷನ್ ಎಂದರೆ ʻಅಭಿಮನ್ಯುʼ ಎನ್ನುವಷ್ಟರ ಮಟ್ಟಿಗೆ ಬೆಳೆದು ನಿಂತಿದೆ. ಆದ್ರೆ ಇನ್ನೊಂದು ವರ್ಷ ಕಳೆದರೆ ಆಮೇಲೆ ಅಭಿಮನ್ಯು ಅಂಬಾರಿ ಹೊರುವ ಸೌಭಾಗ್ಯದಿಂದ ದೂರವಾಗಲಿದ್ದಾನೆ ಅನ್ನೋದು ವಿಷಾದನೀಯ.

    ಅಂಬಾರಿ ಹೊತ್ತ ಆನೆಗಳು ಅಜರಾಮರ:
    ಮೈಸೂರು ದಸರಾ ಮಹೋತ್ಸವದಲ್ಲಿ ಹಲವು ಆನೆಗಳು ಭಾಗಿಯಾಗಿವೆ. ಇಂತ ಆನೆಗಳ ಪಟ್ಟಿ ನೂರಕ್ಕೂ ಅಧಿಕ. ಆದ್ರೆ ಅಂಬಾರಿ ಹೊತ್ತ ಆನೆಗಳ ಸಂಖ್ಯೆ ಕಡಿಮೆ. ಇದರಲ್ಲಿ ಶತಮಾನಗಳಷ್ಟು ಹಳೆಯಾದ ಜಯಮಾರ್ತಾಂಡ ಆನೆಯೇ ಅತ್ಯಂತ ಹಿರಿಯ. ಈತನೇ ಅಂಬಾರಿ ಹೊತ್ತ ಮೊದಲಿಗ. ಹಲವಾರು ವರ್ಷ ಮಾರ್ತಾಂಡ ಯಶಸ್ವಿಯಾಗಿ ತನ್ನ ಜವಾಬ್ದಾರಿ ನಿಭಾಯಿಸಿ ಮಹಾರಾಜರ ಪ್ರೀತಿಗೂ ಪಾತ್ರನಾಗಿದ್ದ. ಈಗಲೂ ಅರಮನೆಯ ದೊಡ್ಡ ದ್ವಾರದ (ಜಯಮಾರ್ತಾಂಡ ದ್ವಾರ) ರೂಪದಲ್ಲಿ ಅಜರಾಮರನಾಗಿದ್ದಾನೆ. ಆನಂತರ ವಿಜಯಬಹದ್ದೂರ್, ರಾಮಪ್ರಸಾದ್, ನಂಜುಂಡ, ಐರಾವತ, ಮೋತಿಲಾಲ್, ರಾಜೇಂದ್ರ, ಬಿಳಿಗಿರಿ, ದ್ರೋಣ, ಬಲರಾಮ, ಅರ್ಜುನನ ನಂತರ ಅಭಿಮನ್ಯು ಈ ಸ್ಥಾನ ಅಲಂಕರಿಸಿದ್ದಾನೆ.

    ಕೆಲ ಆನೆಗಳ ಅಕಾಲಿಕ ಮರಣ
    ಇನ್ನು ದಸರೆಯಲ್ಲಿ ಪಾಲ್ಗೊಂಡು ವಿಶ್ವವಿಖ್ಯಾತಿಯಾಗಿದ್ದ ಆನೆಗಳ ಪೈಕಿ ಕೆಲ ಆನೆಗಳು ಅಕಾಲಿಕ ಮರಣಕ್ಕೆ ತುತ್ತಾಗಿ ಕಹಿ ಸುದ್ದಿ ನೀಡಿದ ಘಟನೆಗಳೂ ನಮ್ಮ ಕಣ್ಣಮುಂದಿವೆ. ಹೌದು. ಈ ಹಿಂದೆ ದ್ರೋಣ ಆನೆ ವಿದ್ಯುತ್‌ ದುರಂತದಿಂದ ಸಾವನ್ನಪ್ಪಿತ್ತು. 2023ರಲ್ಲಿ ಎಲ್ಲರ ಮನೆ ಮಾತಾಗಿದ್ದ ಅರ್ಜುನ ಆನೆ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಹಾಸನದಲ್ಲಿ ಕಾಡಾನೆ ತಿವಿತದಿಂದ ಸಾವನ್ನಪ್ಪಿತ್ತು. ಕೋಟ್ಯಂತರ ಅಭಿಮಾನಿಗಳು ಅರ್ಜುನನ್ನ ನೆನೆದು ಕಣ್ಣೀರಿಟ್ಟಿದ್ದರು. ಇದೀಗ ಸರ್ಕಾರ ಅರ್ಜುನನ ಹೆಸರಿನಲ್ಲಿ ವಾರ್ಷಿಕ ಪ್ರಶಸ್ತಿಯನ್ನೂ ಘೋಷಣೆ ಮಾಡಿದೆ. ಇದಕ್ಕೆ ಒಂದು ವರ್ಷದ ಮುನ್ನವೇ ಅಂಬಾರಿ ಹೊರುವ ಆನೆಗಳ ಸಾಲಿನಲ್ಲಿದ್ದ ಗೋಪಾಲಕೃಷ್ಣ ಆನೆಯೂ ಅಯ್ಯಪ್ಪ ಎಂಬ ಆನೆ ಜೊತೆಗೆ ಕಾದಾಟ ನಡೆಸಿ ಸಾವನ್ನಪ್ಪಿತ್ತು. ದಸರೆ, ಗಜಪಯಣ ಬಂತೆಂದರೆ, ಆನೆ ಪ್ರಿಯರಿಗೆ ಇದು ಮರೆಯಲಾಗದ ಕಹಿ ಘಟನೆ. ಇದನ್ನೂ ಓದಿ: ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್‌

    ಅಭಿಮನ್ಯು ನಂತರದ ಯಜಮಾನ ಯಾರು?
    ದಸರಾ ಪ್ರತಿ ವರ್ಷದ ನಾಡ ಹಬ್ಬ. ಮೈಸೂರು ದಸರಾವೆಂದರೆ ಅದು ಜಂಬೂ ಸವಾರಿಯೂ ಹೌದು. ಅಭಿಮನ್ಯು ನಿವೃತ್ತಿ ನಂತರ ಹಳೆ ತಲೆಮಾರಿನ ಆನೆಗಳ ಕೊಂಡಿ ಮುಗಿಯಲಿದೆ. ಬಳಿಕ ಹೊಸ ತಲೆಮಾರಿನ ಆನೆಗಳದ್ದೇ ಕಾಲ. 2026ರ ನಂತರ ಹೊಸ ಕ್ಯಾಪ್ಟನ್ ಬೇಕೇ ಬೇಕು. ಇದಕ್ಕಾಗಿ ಈಗಿನಿಂದಲೇ ಅರಣ್ಯ ಇಲಾಖೆ ತಯಾರಿಯನ್ನೂ ಮಾಡಿಕೊಂಡಿದೆ. ದಶಕದ ಹಿಂದೆಯಷ್ಟೆ ಸೆರೆ ಸಿಕ್ಕು ನಾಲೈದು ವರ್ಷದಿಂದ ದಸರಾಕ್ಕೆ ಬರುತ್ತಿರುವ ಆನೆಗಳಿಗೂ ಅಂಬಾರಿ ಹೊರುವ ಅವಕಾಶ ಸಿಗಲಿದೆ. ಇದರಲ್ಲಿ ಧನಂಜಯ, ಮಹೇಂದ್ರ, ಭೀಮಾ, ಗೋಪಿ, ಪ್ರಶಾಂತ, ಏಕಲವ್ಯ ಆನೆಗಳಿವೆ. ಇವುಗಳಲ್ಲಿ ಧನಂಜಯ ಇಲ್ಲವೇ ಮಹೇಂದ್ರಗೆ ಮುಂದಿನ ಅವಕಾಶ ಸಿಗುವ ಸಾಧ್ಯತೆಗಳಿವೆ ಎನ್ನುತ್ತಾರೆ ಅರಣ್ಯಾಧಿಕಾರಿಗಳು.

    ಅಂಬಾರಿ ಆನೆಗಳ ಸಿನಿಮಾ ನಂಟು
    ಹಲವು ಆನೆಗಳು ಅಂಬಾರಿ ಹೊತ್ತು ಹೆಸರುವಾಸಿಯಾಗಿವೆ. ಅಲ್ಲದೇ ಸಿನಿಮಾ ನಂಟನ್ನು ಹೊಂದಿರುವುದು ವಿಶೇಷ. ಹೌದು. ಐರಾವತ ಆನೆಯಂತು ಹಾಲಿವುಡ್‌ ಸಿನಿಮಾದಲ್ಲೇ ನಟಿಸಿ ಸೈ ಎನಿಸಿಕೊಂಡಿದೆ. 1935ರಲ್ಲಿ ತೆರೆ ಕಂಡ ʻದಿ ಎಲಿಫೆಂಟ್‌ ಬಾಯ್‌ʼ ಅನ್ನೋ ಚಿತ್ರದಲ್ಲಿ ನಟಿಸಿದ್ದ. ಇನ್ನೂ ಅಣ್ಣಾವ್ರ ಸೂಪರ್‌ ಹಿಟ್‌ ಸಿನಿಮಾದಲ್ಲಿ ಕಾಣಿಸಿಕೊಂಡಿರೋದು ರಾಜೇಂದ್ರ ಆನೆ. ಅಣ್ಣಾವ್ರ ಗಂಧದ ಗುಡಿ ಸಿನಿಮಾ ನೋಡುವಾಗೆಲ್ಲ ರಾಜೇಂದ್ರ ಕಣ್ಮುಂದೆ ಬರುತ್ತಾನೆ. ಇನ್ನೂ ಅಭಿಮನ್ಯು ಕೂಡ ವಿಶೇಷ ಸಾಕ್ಷ್ಯಚಿತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾನೆ. ದ್ರೋಣ ಆನೆಯೂ ಸ್ಟೋರ್ಡ್‌ ಆಫ್‌ ಟಿಪ್ಪು ಸುಲ್ತಾನ್‌ ಧಾರಾವಾಹಿಯಲ್ಲಿ ಕಾಣಿಸಿಕೊಂಡಿತ್ತು. ಇದನ್ನೂ ಓದಿ: ಕೇಸರಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

    ಹೀಗೆ ಮೈಸೂರು ದಸರಾದ ಮುಕುಟ ಮಣಿಗಳಂತೆ ಕಾಣಿಸಿಕೊಳ್ಳುವ ದಸರಾ ಆನೆಗಳ ಇತಿಹಾಸ ಅವಿಸ್ಮರಣೀಯವಾಗಿದೆ. ಆದ್ರೆ ಅಭಿಮನ್ಯು ನಂತರ ಯಾರಾಗಲಿದ್ದಾರೆ ಅಂಬಾರಿಯ ಸಾರಥಿ ಅನ್ನೋದಕ್ಕೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

  • Public TV Explainer | ಮುಂದಿನ ವರ್ಷ ಅಂಬಾರಿ ಹೊತ್ತರೆ ʻಅಭಿಮನ್ಯು ಯುಗʼ ಮುಗಿಯಿತು – ಯಾರಾಗ್ತಾರೆ ಮುಂದಿನ ಸಾರಥಿ?

    Public TV Explainer | ಮುಂದಿನ ವರ್ಷ ಅಂಬಾರಿ ಹೊತ್ತರೆ ʻಅಭಿಮನ್ಯು ಯುಗʼ ಮುಗಿಯಿತು – ಯಾರಾಗ್ತಾರೆ ಮುಂದಿನ ಸಾರಥಿ?

    ಜಂಬೂ ಸವಾರಿಯಿಲ್ಲದೇ ಮೈಸೂರು ದಸರಾ (Mysuru Dasara) ಊಹಿಸಿಕೊಳ್ಳೋದಕ್ಕೂ ಸಾಧ್ಯವಿಲ್ಲ. ಮೈಸೂರು ದಸರಾ ಮಹೋತ್ಸವಕ್ಕೆ ಶತಮಾನಗಳ ಇತಿಹಾಸವಿದೆ. ಈ ದಸರಾ ಮಹೋತ್ಸವದಲ್ಲಿ ಜಂಬೂ ಸವಾರಿ ಅಂದ್ರೆ ಆನೆಗಳೇ ಆಕರ್ಷಣೆ. ಮೈಸೂರು ಮಹಾರಾಜರ ಆಡಳಿತದ ನಂತರವೂ ಆನೆಯ ಮೇಲೆ ಅಂಬಾರಿ ಹೊರುವ ಪರಂಪರೆ ಸಾಗಿ ಬಂದಿದೆ. ಅದೇ ರೀತಿ ಈ ಮೈಸೂರು ದಸರೆಯಲ್ಲಿ ಅಂಬಾರಿ ಹೊತ್ತ ಆನೆಗಳ ಇತಿಹಾಸ ಅಷ್ಟೇ ವಿಸ್ಮಯ. ಹೀಗೆ ಇತಿಹಾಸ ನಿರ್ಮಿಸಿ ಹೋದ ಹಳೆಯ ಆನೆಗಳ ಸಾಲಿನಲ್ಲಿ ಈಗ ಅಭಿಮನ್ಯುವೇ (Abhimanyu Elephant) ಕೊನೆಯವನಾಗಿದ್ದು, ದಶಕಗಳಿಂದ ಈಚೆಗೆ ಬಂದ ಆನೆಗೆ ಅಂಬಾರಿ ಹೊರುವ ಹೊಣೆ ಬಿಟ್ಟುಕೊಡುವ ಕಾಲ ಬಂದೇ ಬಿಟ್ಟಿದೆ.

    ಹೌದು. ಪ್ರಸಕ್ತ ವರ್ಷದ ದಸರಾ ಮಹೋತ್ಸವಕ್ಕೆ ಭರ್ಜರಿ ತಯಾರಿ ಶುರುವಾಗಿದೆ. ನಾಡಹಬ್ಬ ದಸರಾದ ಐತಿಹಾಸಿಕ ಜಂಬೂ ಸವಾರಿಯಲ್ಲಿ ಈ ಬಾರಿಯೂ 59 ವರ್ಷ ವಯಸ್ಸಿನ ಅಭಿಮನ್ಯು ಆನೆಯೇ ಅಂಬಾರಿ ಹೊರಲಿದೆ. ದಸರಾ ಮಹೋತ್ಸವಲ್ಲಿ ಪಾಲ್ಗೊಳ್ಳಲಿರುವ 14 ಆನೆಗಳ ಪೈಕಿ 9 ಆನೆಗಳ ಪಟ್ಟಿಯನ್ನ ಈಗಾಗಲೇ ಬಿಡುಗಡೆ ಮಾಡಿದ್ದು, ಆಗಸ್ಟ್‌ 4ರಂದು (ಸೋಮವಾರ) ಅವು ಗಜಪಯಣದ ಮೂಲಕ ಅರಮನೆ ಅಂಗಳಕ್ಕೆ ಬಂದಿಳಿಯಲಿವೆ.

    ಮೊದಲ ಹಂತದಲ್ಲಿ ನಾಡಿಗೆ ಬರಲಿರುವ 9 ಆನೆಗಳು

    ಮತ್ತಿಗೋಡು ಶಿಬಿರದಲ್ಲಿರುವ ಅಭಿಮನ್ಯು (59 ವರ್ಷ), ಮತ್ತಿಗೋಡು ಶಿಬಿರದ ಭೀಮ (25 ವರ್ಷ), ದುಬಾರೆ ಶಿಬಿರದ ಕಂಜನ್‌ (24), ಧನಂಜಯ (44), ಪ್ರಶಾಂತ (53), ಬಳ್ಳೆ ಶಿಬಿರದ ಮಹೇಂದ್ರ (42), ದೊಡ್ಡಹರವೆ ಶಿಬಿರದ ಏಕಲವ್ಯ (40), ದುಬಾರೆ ಶಿಬಿರದ ಕಾವೇರಿ (45/ಹೆಣ್ಣಾನೆ), ಬಳ್ಳೆಯ ಲಕ್ಷ್ಮಿ (53/ಹೆಣ್ಣಾನೆ).

    ಮುಂದಿನ ವರ್ಷ ಅಂಬಾರಿ ಹೊತ್ತರೆ ಮುಗಿಯಿತು:

    ದಸರಾ ಆನೆಗಳಿಗೂ (Dasara Elephants) ಶತಮಾನದ ನಂಟು ಇದೆ. ಎಲ್ಲೆಡೆ ಹೊಸ ಪೀಳಿಗೆ ಪ್ರವೇಶಿಸಿದಂತೆ ಮೈಸೂರಿನ ಆನೆಗಳಲ್ಲೂ ಬದಲಾವಣೆ ಆಗುತ್ತಿದೆ. ಆದ್ರೆ ಈಗ ಇರುವ ಹಳೆಯ ಆನೆಗಳ ಪೈಕಿ ಅಭಿಮನ್ಯುನೇ ಹಿರಿಯ. 59 ವರ್ಷ ವಯಸ್ಸಿನ ಅಭಿಮನ್ಯು ಮುಂದಿ ವರ್ಷ ಅಂಬಾರಿ ಹೊತ್ತರೆ ಮುಗಿಯಿತು. ಏಕೆಂದರೆ ಅರಣ್ಯ ಅಧಿಕಾರಿಗಳು ಹೇಳುವಂತೆ 60 ವರ್ಷ ತುಂಬಿದ ಆನೆಗಳಿಗೆ ನಿಯಮದಂತೆ ನಿವೃತ್ತಿ ಕೊಡಬೇಕು. ಅಭಿಮನ್ಯುವಿಗೆ ಈಗ 59 ವರ್ಷ ವಯಸ್ಸಾಗಿದ್ದು, ಮುಂದಿನ ವರ್ಷ 60ನೇ ವಯಸ್ಸಿಗೆ ಕಾಲಿಡಲಿದ್ದಾನೆ. ಮುಂದಿನ ವರ್ಷ ಅಂಬಾರಿ ಹೊತ್ತರೆ ಅಲ್ಲಿಗೆ ಅಭಿಮನ್ಯು ಇತಿಹಾಸ ಪುಟ ಸೇರಿಕೊಳ್ಳಲಿದ್ದಾನೆ ಎನ್ನುತ್ತಾರೆ ಡಿಸಿಎಫ್‌ ಪ್ರಭು.

    ಅಭಿಮನ್ಯು ಹೆಮ್ಮರವಾಗಿ ಬೆಳೆದಿದ್ದು ಹೇಗೆ?

    1951ರ ಸಮಯದಲ್ಲಿ ಸುರ್ಗುಜಾ ಮಧ್ಯಪ್ರದೇಶದ ಭಾಗವಾಗಿತ್ತು. ಆದ್ರೆ 2000 ಇಸವಿಯ ನಂತರ ಛತ್ತಿಸ್‌ಘಡದ ಜಿಲ್ಲೆಯಾಗಿ ಸೇರ್ಪಡೆಯಾಯಿತು. ಈ ಸ್ಥಳಕ್ಕೂ ನಮ್ಮ ಕರ್ನಾಟಕಕ್ಕೂ ನಂಟು ಇದೆ. ಅದು ಹೇಗೆ ಅಂತೀರಾ..? ಈ ಹಿಂದೆ ಸುಮಾರು 3 ದಶಕಗಳ ಕಾಲ ಸರ್ಗುಜಾದಲ್ಲಿ ಆನೆಗಳ ಹಾವಳಿ ಮಿತಿ ಮೀರಿತ್ತು. ಆನೆಗಳನ್ನ ಸೆರೆ ಹಿಡಿಯಬೇಕು, ಉಪಟಳ ತಪ್ಪಿಸಬೇಕು ಅನ್ನೋ ಕೂಗು ಸರ್ಗೂಜಾ ಭಾಗದಲ್ಲಿ ಜೋರಾಗಿತ್ತು. ಸ್ಥಳೀಯರ ಒತ್ತಡಕ್ಕೆ ಮಣಿದ ಅಂದಿನ ಮಧ್ಯಪ್ರದೇಶದ ರಾಜ್ಯ ಸರ್ಕಾರ ಆನೆಗಳನ್ನ ಸೆರೆ ಹಿಡಿಯೋದಕ್ಕೇನೋ ಅನುಮತಿ ನೀಡಿತು. ಆದ್ರೆ ಅವುಗಳನ್ನ ಸೆರೆ ಹಿಡಿಯುವ ಕಾರ್ಯಾಚರಣೆ ಅಷ್ಟು ಸುಲಭವಾಗಿರಲಿಲ್ಲ. ಆಗ ಮಧ್ಯಪ್ರದೇಶದ ಚಿತ್ತ ಹಾಯಿಸಿದ್ದು, ಕರ್ನಾಟಕದತ್ತ. ಖೆಡ್ಡಕ್ಕೆ ಕೆಡವುವ ಕಾರ್ಯಾಚರಣೆಯಲ್ಲಿ ಕರ್ನಾಟಕದ ಆನೆಗಳು ಆಗಲೇ ಬಲಶಾಲಿಗಳಾಗಿ ಗುರುತಿಸಿಕೊಂಡಿದ್ದವು. ಇಲ್ಲಿಂದ ಆನೆಗಳನ್ನ ಕರೆದುಕೊಂಡು ಬಂದು ಆನೆಗಳನ್ನ ಸೆರೆಹಿಡಿಯುವ ತೀರ್ಮಾನಕ್ಕೆ ಅಲ್ಲಿನ ಸರ್ಕಾರ ಮುಂದಾಯಿತು. ಅದರಂತೆ ಇಂದಿನ ಅಂಬಾರಿ ಹೊರುವ ಕ್ಯಾಪ್ಟನ್‌ ಅಭಿಮನ್ಯು ಸೇರಿ ಹಲವು ಆನೆಗಳ ತಂಡವನ್ನ ಸರ್ಗುಜಾಕ್ಕೆ ಕರೆದೊಯ್ಯಲಾಯ್ತು. ನೀರಿಕ್ಷೆಯಂತೆ ನಮ್ಮ ಆನೆಗಳು ಸರ್ಗುಜಾದಲ್ಲಿ ಸುಮಾರು 42 ದಿನಗಳ ಕಾಲ ಕಾರ್ಯಾಚರಣೆ ನಡೆಸಿ ಯಶಸ್ವಿಯಾದವು. ಈ ಆನೆ ಸೆರೆ ಕಾರ್ಯಾಚರಣೆ ಆಗ The Last Migration – Wild Elephant Captureʼ ಸಾಕ್ಷ್ಯಚಿತ್ರವಾಗಿ ರೂಪುಗೊಂಡಿತು. ಇದು ನಮ್ಮ ಅಭಿಮನ್ಯುವಿನ ಮೇಲಿನ ಅಭಿಮಾನ ಹೆಚ್ಚಿಸಿ ಈಗಲೂ ಅಪರೇಷನ್ ಎಂದರೆ ʻಅಭಿಮನ್ಯುʼ ಎನ್ನುವಷ್ಟರ ಮಟ್ಟಿಗೆ ಬೆಳೆದು ನಿಂತಿದೆ. ಆದ್ರೆ ಇನ್ನೊಂದು ವರ್ಷ ಕಳೆದರೆ ಆಮೇಲೆ ಅಭಿಮನ್ಯು ಅಂಬಾರಿ ಹೊರುವ ಸೌಭಾಗ್ಯದಿಂದ ದೂರವಾಗಲಿದ್ದಾನೆ ಅನ್ನೋದು ವಿಷಾದನೀಯ.

    ಅಂಬಾರಿ ಹೊತ್ತ ಆನೆಗಳು ಅಜರಾಮರ

    ಮೈಸೂರು ದಸರಾ ಮಹೋತ್ಸವದಲ್ಲಿ ಹಲವು ಆನೆಗಳು ಭಾಗಿಯಾಗಿವೆ. ಇಂತ ಆನೆಗಳ ಪಟ್ಟಿ ನೂರಕ್ಕೂ ಅಧಿಕ. ಆದ್ರೆ ಅಂಬಾರಿ ಹೊತ್ತ ಆನೆಗಳ ಸಂಖ್ಯೆ ಕಡಿಮೆ. ಇದರಲ್ಲಿ ಶತಮಾನಗಳಷ್ಟು ಹಳೆಯಾದ ಜಯಮಾರ್ತಾಂಡ ಆನೆಯೇ ಅತ್ಯಂತ ಹಿರಿಯ. ಈತನೇ ಅಂಬಾರಿ ಹೊತ್ತ ಮೊದಲಿಗ. ಹಲವಾರು ವರ್ಷ ಮಾರ್ತಾಂಡ ಯಶಸ್ವಿಯಾಗಿ ತನ್ನ ಜವಾಬ್ದಾರಿ ನಿಭಾಯಿಸಿ ಮಹಾರಾಜರ ಪ್ರೀತಿಗೂ ಪಾತ್ರನಾಗಿದ್ದ. ಈಗಲೂ ಅರಮನೆಯ ದೊಡ್ಡ ದ್ವಾರದ (ಜಯಮಾರ್ತಾಂಡ ದ್ವಾರ) ರೂಪದಲ್ಲಿ ಅಜರಾಮರನಾಗಿದ್ದಾನೆ. ಆನಂತರ ವಿಜಯಬಹದ್ದೂರ್, ರಾಮಪ್ರಸಾದ್, ನಂಜುಂಡ, ಐರಾವತ, ಮೋತಿಲಾಲ್, ರಾಜೇಂದ್ರ, ಬಿಳಿಗಿರಿ, ದ್ರೋಣ, ಬಲರಾಮ, ಅರ್ಜುನನ ನಂತರ ಅಭಿಮನ್ಯು ಈ ಸ್ಥಾನ ಅಲಂಕರಿಸಿದ್ದಾನೆ.

    ಕೆಲ ಆನೆಗಳ ಅಕಾಲಿಕ ಮರಣ

    ಇನ್ನು ದಸರೆಯಲ್ಲಿ ಪಾಲ್ಗೊಂಡು ವಿಶ್ವವಿಖ್ಯಾತಿಯಾಗಿದ್ದ ಆನೆಗಳ ಪೈಕಿ ಕೆಲ ಆನೆಗಳು ಅಕಾಲಿಕ ಮರಣಕ್ಕೆ ತುತ್ತಾಗಿ ಕಹಿ ಸುದ್ದಿ ನೀಡಿದ ಘಟನೆಗಳೂ ನಮ್ಮ ಕಣ್ಣಮುಂದಿವೆ. ಹೌದು. ಈ ಹಿಂದೆ ದ್ರೋಣ ಆನೆ ವಿದ್ಯುತ್‌ ದುರಂತದಿಂದ ಸಾವನ್ನಪ್ಪಿತ್ತು. 2023ರಲ್ಲಿ ಎಲ್ಲರ ಮನೆ ಮಾತಾಗಿದ್ದ ಅರ್ಜುನ ಆನೆ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಹಾಸನದಲ್ಲಿ ಕಾಡಾನೆ ತಿವಿತದಿಂದ ಸಾವನ್ನಪ್ಪಿತ್ತು. ಕೋಟ್ಯಂತರ ಅಭಿಮಾನಿಗಳು ಅರ್ಜುನನ್ನ ನೆನೆದು ಕಣ್ಣೀರಿಟ್ಟಿದ್ದರು. ಇದೀಗ ಸರ್ಕಾರ ಅರ್ಜುನನ ಹೆಸರಿನಲ್ಲಿ ವಾರ್ಷಿಕ ಪ್ರಶಸ್ತಿಯನ್ನೂ ಘೋಷಣೆ ಮಾಡಿದೆ. ಇದಕ್ಕೆ ಒಂದು ವರ್ಷದ ಮುನ್ನವೇ ಅಂಬಾರಿ ಹೊರುವ ಆನೆಗಳ ಸಾಲಿನಲ್ಲಿದ್ದ ಗೋಪಾಲಕೃಷ್ಣ ಆನೆಯೂ ಅಯ್ಯಪ್ಪ ಎಂಬ ಆನೆ ಜೊತೆಗೆ ಕಾದಾಟ ನಡೆಸಿ ಸಾವನ್ನಪ್ಪಿತ್ತು. ದಸರೆ, ಗಜಪಯಣ ಬಂತೆಂದರೆ, ಆನೆ ಪ್ರಿಯರಿಗೆ ಇದು ಮರೆಯಲಾಗದ ಕಹಿ ಘಟನೆ.

    elephant gopalaswamy

    ಅಭಿಮನ್ಯು ನಂತರದ ಯಜಮಾನ ಯಾರು?

    ದಸರಾ ಪ್ರತಿ ವರ್ಷದ ನಾಡ ಹಬ್ಬ. ಮೈಸೂರು ದಸರಾವೆಂದರೆ ಅದು ಜಂಬೂ ಸವಾರಿಯೂ ಹೌದು. ಅಭಿಮನ್ಯು ನಿವೃತ್ತಿ ನಂತರ ಹಳೆ ತಲೆಮಾರಿನ ಆನೆಗಳ ಕೊಂಡಿ ಮುಗಿಯಲಿದೆ. ಬಳಿಕ ಹೊಸ ತಲೆಮಾರಿನ ಆನೆಗಳದ್ದೇ ಕಾಲ. 2026ರ ನಂತರ ಹೊಸ ಕ್ಯಾಪ್ಟನ್ ಬೇಕೇ ಬೇಕು. ಇದಕ್ಕಾಗಿ ಈಗಿನಿಂದಲೇ ಅರಣ್ಯ ಇಲಾಖೆ ತಯಾರಿಯನ್ನೂ ಮಾಡಿಕೊಂಡಿದೆ. ದಶಕದ ಹಿಂದೆಯಷ್ಟೆ ಸೆರೆ ಸಿಕ್ಕು ನಾಲೈದು ವರ್ಷದಿಂದ ದಸರಾಕ್ಕೆ ಬರುತ್ತಿರುವ ಆನೆಗಳಿಗೂ ಅಂಬಾರಿ ಹೊರುವ ಅವಕಾಶ ಸಿಗಲಿದೆ. ಇದರಲ್ಲಿ ಧನಂಜಯ, ಮಹೇಂದ್ರ, ಭೀಮಾ, ಗೋಪಿ, ಪ್ರಶಾಂತ, ಏಕಲವ್ಯ ಆನೆಗಳಿವೆ. ಇವುಗಳಲ್ಲಿ ಧನಂಜಯ ಇಲ್ಲವೇ ಮಹೇಂದ್ರಗೆ ಮುಂದಿನ ಅವಕಾಶ ಸಿಗುವ ಸಾಧ್ಯತೆಗಳಿವೆ ಎನ್ನುತ್ತಾರೆ ಅರಣ್ಯಾಧಿಕಾರಿಗಳು.

    ಅಂಬಾರಿ ಆನೆಗಳ ಸಿನಿಮಾ ನಂಟು

    ಹಲವು ಆನೆಗಳು ಅಂಬಾರಿ ಹೊತ್ತು ಹೆಸರುವಾಸಿಯಾಗಿವೆ. ಅಲ್ಲದೇ ಸಿನಿಮಾ ನಂಟನ್ನು ಹೊಂದಿರುವುದು ವಿಶೇಷ. ಹೌದು. ಐರಾವತ ಆನೆಯಂತು ಹಾಲಿವುಡ್‌ ಸಿನಿಮಾದಲ್ಲೇ ನಟಿಸಿ ಸೈ ಎನಿಸಿಕೊಂಡಿದೆ. 1935ರಲ್ಲಿ ತೆರೆ ಕಂಡ ʻದಿ ಎಲಿಫೆಂಟ್‌ ಬಾಯ್‌ʼ ಅನ್ನೋ ಚಿತ್ರದಲ್ಲಿ ನಟಿಸಿದ್ದ. ಇನ್ನೂ ಅಣ್ಣಾವ್ರ ಸೂಪರ್‌ ಹಿಟ್‌ ಸಿನಿಮಾದಲ್ಲಿ ಕಾಣಿಸಿಕೊಂಡಿರೋದು ರಾಜೇಂದ್ರ ಆನೆ. ಅಣ್ಣಾವ್ರ ಗಂಧದ ಗುಡಿ ಸಿನಿಮಾ ನೋಡುವಾಗೆಲ್ಲ ರಾಜೇಂದ್ರ ಕಣ್ಮುಂದೆ ಬರುತ್ತಾನೆ. ಇನ್ನೂ ಅಭಿಮನ್ಯು ಕೂಡ ವಿಶೇಷ ಸಾಕ್ಷ್ಯಚಿತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾನೆ. ದ್ರೋಣ ಆನೆಯೂ ಸ್ಟೋರ್ಡ್‌ ಆಫ್‌ ಟಿಪ್ಪು ಸುಲ್ತಾನ್‌ ಧಾರಾವಾಹಿಯಲ್ಲಿ ಕಾಣಿಸಿಕೊಂಡಿತ್ತು.

    ಹೀಗೆ ಮೈಸೂರು ದಸರಾದ ಮುಕುಟ ಮಣಿಗಳಂತೆ ಕಾಣಿಸಿಕೊಳ್ಳುವ ದಸರಾ ಆನೆಗಳ ಇತಿಹಾಸ ಅವಿಸ್ಮರಣೀಯವಾಗಿದೆ. ಆದ್ರೆ ಅಭಿಮನ್ಯು ನಂತರ ಯಾರಾಗಲಿದ್ದಾರೆ ಅಂಬಾರಿಯ ಸಾರಥಿ ಅನ್ನೋದಕ್ಕೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

    ಮೋಹನ ಬನ್ನಿಕುಪ್ಪೆ

  • ಅಭಿಮನ್ಯು ನೇತೃತ್ವದಲ್ಲಿ ಅರ್ಜುನನ ಕೊಂದಿದ್ದ ಆನೆ ಸೆರೆ ಕಾರ್ಯಾಚರಣೆ

    ಅಭಿಮನ್ಯು ನೇತೃತ್ವದಲ್ಲಿ ಅರ್ಜುನನ ಕೊಂದಿದ್ದ ಆನೆ ಸೆರೆ ಕಾರ್ಯಾಚರಣೆ

    ಹಾಸನ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳ ಸೆರೆ ಕಾರ್ಯಾಚರಣೆ ನಾಳೆಯಿಂದ (ಶನಿವಾರ) ಮತ್ತೆ ಆರಂಭಗೊಳ್ಳಲಿದೆ. ದುಬಾರೆ ಹಾಗೂ ಮತ್ತಿಗೋಡು ಶಿಬಿರದಿಂದ ಎಂಟು ಸಾಕಾನೆಗಳು ಆಗಮಿಸಿದ್ದು, ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದ ಬಳಿಯ ಕ್ಯಾಂಪ್‌ನಲ್ಲಿವೆ. ಈ ಭಾರಿ ನುರಿತ ತಂಡದೊಂದಿಗೆ ಕಾರ್ಯಾಚರಣೆ ಆಗಮಿಸಲಿದ್ದು ಇದಕ್ಕೆ ಬೇಕಾದ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

    ಅಂಬಾರಿ ಹೊತ್ತಿದ್ದ ಅಭಿಮನ್ಯು (Abhimanyu Elephant) ಸಹ ಕಾಡಾನೆಗಳ ಹಂಟಿಂಗ್ ಕಾರ್ಯಾಚರಣೆಯಲ್ಲಿ ಭಾಗವಹಿಸಲಿದೆ. ಇಂದು (ಶುಕ್ರವಾರ) ಎಂಟು ಸಾಕಾನೆಗಳಿಗೆ ಪೂಜೆ ಸಲ್ಲಿಸಿ ಕಬ್ಬು, ಬೆಲ್ಲ ನೀಡಲಾಯಿತು. ಈಗಾಗಲೇ ಸೆರೆ ಹಿಡಿಯುವ ಸಲಗಗಳನ್ನು ಗುರುತಿಸಲಾಗಿದ್ದು, ನಾಳೆಯಿಂದ ಸತತ ಒಂದು ತಿಂಗಳ ಕಾಲ ಕಾರ್ಯಾಚರಣೆ ನಡೆಯಲಿದೆ. ಇದನ್ನೂ ಓದಿ: ಅರ್ಜುನನ ಕಾಲಿಗೆ ಗುಂಡೇಟು ಬಿದ್ದಿಲ್ಲ, ಯಾವುದೇ ಲೋಪ ಆಗಿಲ್ಲ: ವೈದ್ಯ ರಮೇಶ್ ಸ್ಪಷ್ಟನೆ

    ಮಲೆನಾಡ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ನ.24 ರಿಂದ ಕ್ಯಾಪ್ಟನ್ ಅರ್ಜುನ ನೇತೃತ್ವದಲ್ಲಿ ಆರು ಸಾಕಾನೆಗಳೊಂದಿಗೆ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಎರಡು ಹೆಣ್ಣಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಅಲ್ಲಿಯೇ ಬಿಡಲಾಗಿದ್ದರೆ, ಮೂರು ಪುಂಡಾನೆಗಳನ್ನು ಹಿಡಿದು ರೇಡಿಯೋ ಕಾಲರ್ ಅಳವಡಿಸಿ ಬೇರೆಡೆಗೆ ಸ್ಥಳಾಂತರ ಮಾಡಲಾಗಿತ್ತು. ಡಿ.4 ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮದಗಜದೊಂದಿಗೆ ಕಾದಾಟದ ವೇಳೆ ಅರ್ಜುನ ವೀರಮರಣವನ್ನಪ್ಪಿದ್ದ. ಅಂದಿನಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಕಾರ್ಯಾಚರಣೆ ಮುಂದುವರೆಸಲು ತೀರ್ಮಾನಿಸಲಾಗಿದ್ದು, ನಾಳೆಯಿಂದ ಕಾಡಾನೆ ಹಂಟಿಂಗ್ ಆಪರೇಷನ್ ಶುರುವಾಗಲಿದೆ.

    ದುಬಾರೆ, ಮತ್ತಿಗೋಡು ಆನೆ ಶಿಬಿರದಿಂದ ಅಭಿಮನ್ಯು, ಪ್ರಶಾಂತ, ಸುಗ್ರೀವ, ಅಶ್ವತ್ಥಾಮ, ಕರ್ನಾಟಕ ಭೀಮ, ಹರ್ಷ, ಮಹೇಂದ್ರ, ಧನಂಜಯ ಸೇರಿ ಎಂಟು ಸಾಕಾನೆಗಳು ಬಿಕ್ಕೋಡು ಬಳಿಯ ಶಿಬಿರಕ್ಕೆ ಆಗಮಿಸಿದ್ದು ಇಂದು ಸ್ಥಳೀಯ ಶಾಸಕ ಹೆಚ್.ಕೆ.ಸುರೇಶ್ ಹಾಗೂ ಅರಣ್ಯ ಅಧಿಕಾರಿಗಳು ಪೂಜೆ ಸಲ್ಲಿಸಿ ಕಬ್ಬು, ಬೆಲ್ಲ ನೀಡಿ ಆಪರೇಷನ್ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಬೇಲೂರು ಭಾಗದಲ್ಲಿ ಸುಮಾರು ನಲವತ್ತು ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು ಕಳೆದ ವಾರ ಮತ್ತಾವರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವಸಂತ ಎಂಬವರು ಬಲಿಯಾಗಿದ್ದರು. ಇದರಿಂದ ಸರ್ಕಾರದ ಹಾಗೂ ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆದ್ದರಿಂದ ನಾಳೆ ಬೇಲೂರು ಭಾಗದಿಂದಲೇ ನರಹಂತಕ ಆನೆ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭವಾಗಲಿದ್ದು, ಜನರಿಗೆ ಆಗುವ ಸಮಸ್ಯೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಹೆಚ್.ಕೆ.ಸುರೇಶ್ ಹೇಳಿದ್ದಾರೆ. ಇದನ್ನೂ ಓದಿ: ಸಕಲೇಶಪುರದ ಗ್ರಾಮದೊಳಗೆ ಎಂಟ್ರಿ ಕೊಟ್ಟ ಗಜಪಡೆ – ಗುಂಪಿನಲ್ಲಿ ಸೇರಿಕೊಂಡ ಅರ್ಜುನನನ್ನು ಕೊಂದ ಪುಂಡಾನೆ

    ಕಳೆದ ಬಾರಿಯ ಕಾರ್ಯಾಚರಣೆಯಲ್ಲಿ ಆದ ಅನಾಹುತದಿಂದ ಎಚ್ಚೆತ್ತಿರುವ ಅರಣ್ಯ ಇಲಾಖೆ ಅಧಿಕಾರಿಗಳು ಈ ಸಲ ನುರಿತ ಅರವಳಿಕೆ ವೈದ್ಯರು ಹಾಗೂ ತಂಡದೊಂದಿಗೆ ಕಾರ್ಯಾಚರಣೆ ನಡೆಸಲಿದ್ದಾರೆ. ಇಂದು ಪೂಜೆ ನಂತರ ಕಾರ್ಯಾಚರಣೆಯಲ್ಲಿ ಭಾಗಿಯಾಗುವ ತಂಡದ ಜೊತೆ ಹಿರಿಯ ಅರಣ್ಯ ಇಲಾಖೆ ಅಧಿಕಾರಿಗಳು ಸಮಾಲೋಚನೆ ನಡೆಸಿ ಅಗತ್ಯ ಸಲಹೆ ಹಾಗೂ ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದರು. ಮೊದಲು ಮುಂದುವರಿದ ಭಾಗವಾಗಿ ಮೂರು ಸಲಗಗಳನ್ನು ಸೆರೆ ಹಿಡಿದು ಸ್ಥಳಾಂತರ ಮಾಡಲಾಗುವುದು. ನಂತರ ಹೆಚ್ಚು ಉಪಟಳ ನೀಡುತ್ತಿರುವ ಕಾಡಾನೆಗಳ ಜೊತೆಗೆ ಅರ್ಜುನನ ಸಾವಿಗೆ ಕಾರಣವಾದ ನರಹಂತಕ ಆನೆಯನ್ನು ಸೆರೆ ಹಿಡಿದು ಸ್ಥಳಾಂತರ ಮಾಡಲಾಗುವುದು. ಇದಕ್ಕೆ ಬೇಕಾದಂತಹ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು ಎಲ್ಲರೂ ಸಹಕಾರ ನೀಡಬೇಕೆಂದು ಸಿಸಿಎಫ್ ರವಿಶಂಕರ್ ಮನವಿ ಮಾಡಿದ್ದಾರೆ.

    ಕಳೆದ ಎರಡು ದಶಗಳಿಂದ ಸಕಲೇಶಪುರ, ಆಲೂರು ಹಾಗೂ ನಾಲ್ಕೈದು ವರ್ಷಗಳಿಂದ ಬೇಲೂರು ಭಾಗದಲ್ಲಿ ಗಜಪಡೆ ಗಲಾಟೆ ಮಿತಿಮೀರಿದ್ದು ರೈತರು ಹಾಗೂ ಕಾಫಿ ಬೆಳೆಗಾರರು ಕಂಗಾಲಾಗಿ ಹೋಗಿದ್ದಾರೆ. ಆದರೆ ಸರ್ಕಾರಗಳು ಒಂದೆರಡು ಕಾಡಾನೆಗಳನ್ನು ಹಿಡಿದು ಸ್ಥಳಾಂತರ ಮಾಡಿದರೆ ಸಾಲದು. ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹಿಡಿಯಬೇಕೆಂಬುದು ಎಲ್ಲರ ಒಕ್ಕೊರಲ ಒತ್ತಾಯವಾಗಿದೆ. ಆದರೆ ಭರವಸೆಗಳನ್ನು ನೀಡುತ್ತಲೇ ಇರುವ ಸರ್ಕಾರ ಹಾಗೂ ಅರಣ್ಯ ಇಲಾಖೆ ಮಲೆನಾಡು ಭಾಗದ ಜನರ ನೆಮ್ಮದಿ ಕೆಡಿಸಿರುವ ಪುಂಡಾನೆಗಳನ್ನು ಸೆರೆ ಹಿಡಿದು ಸ್ಥಳಾಂತರ ಮಾಡುವ ಮೂಲಕ ತಾತ್ಕಾಲಿಕ ಪರಿಹಾರ ನೀಡಲು ಮುಂದಾಗಿವೆ. ಇದನ್ನೂ ಓದಿ: ಅರ್ಜುನನ ದುರಂತ ಅಂತ್ಯ – ಕಾಡಾನೆ ಸೆರೆ ಕಾರ್ಯಾಚರಣೆ ಸ್ಥಗಿತ

  • ಬರದ ನಡುವೆಯೂ ಬತ್ತದ ಜನೋತ್ಸಾಹ; ಲಕ್ಷಾಂತರ ಮಂದಿ ಸಾಕ್ಷಿಯಾದ ದಸರಾಗೆ ತೆರೆ

    ಬರದ ನಡುವೆಯೂ ಬತ್ತದ ಜನೋತ್ಸಾಹ; ಲಕ್ಷಾಂತರ ಮಂದಿ ಸಾಕ್ಷಿಯಾದ ದಸರಾಗೆ ತೆರೆ

    – 4ನೇ ಬಾರಿ ಚಿನ್ನದ ಅಂಬಾರಿ ಹೊತ್ತ ಕ್ಯಾಪ್ಟನ್‌ ಅಭಿಮನ್ಯು

    ಮೈಸೂರು: ರಾಜ್ಯದಲ್ಲಿ ಮಳೆ ಅಭಾವದಿಂದ ಬರದ ಛಾಯೆ ಆವರಿಸಿದೆ. ಹೀಗಾಗಿ ಈ ಬಾರಿ ಐತಿಹಾಸಿಕ ಮೈಸೂರು ದಸರಾವನ್ನು (Mysuru Dasara) ಅದ್ಧೂರಿಯಾಗಿ ಆಚರಿಸುವ ಬದಲು ಸಾಂಪ್ರದಾಯಿಕವಾಗಿ ಆಚರಿಸಲಾಯಿತು. ಬರದ ನಡುವೆಯೂ ಈ ಬಾರಿ ಲಕ್ಷಾಂತರ ಮಂದಿ ಭಾಗಿಯಾಗಿ ದಸರಾ ಜಂಬೂಸವಾರಿ (Dasara Jamboo Savari) ವೈಭವವನ್ನು ಕಣ್ತುಂಬಿಕೊಂಡಿದ್ದಾರೆ. ಲಕ್ಷಾಂತರ ಮಂದಿ ಸಾಕ್ಷಿಯಾಗಿ ದಸರಾ ಸಂಪನ್ನಗೊಂಡಿದೆ.

    ಇಂದು (ಮಂಗಳವಾರ) ಮೈಸೂರಿನಲ್ಲಿ (Mysuru) ನಾಡಹಬ್ಬ ದಸರಾ ವೈಭವ ಕಳೆಗಟ್ಟಿತ್ತು. ದಸರಾ ಪ್ರಮುಖ ಆಕರ್ಷಣೆಯಾದ ದಸರಾ ಜಂಬೂಸವಾರಿಯನ್ನು ಬಿಸಿಲನ್ನೂ ಲೆಕ್ಕಿಸದೇ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಜನ ಕಣ್ತುಂಬಿಕೊಂಡು ಧನ್ಯತಾ ಭಾವ ಮೆರೆದರು. ಜನ ಬೆಳಗ್ಗೆಯಿಂದಲೇ ಅರಮನೆ ಮೈದಾನದಿಂದ ಹಿಡಿದು ಮೆರವಣಿಗೆ ಸಾಗುವ ಮಾರ್ಗದ ಉದ್ದಕ್ಕೂ ಬನ್ನಿಮಂಟಪದ ವರೆಗೆ ಕಿಕ್ಕಿರಿದು ಸೇರಿದ್ದರು. ಅರಮೆಯಲ್ಲಿ ಹಲವು ಕಾರ್ಯಕ್ರಮಗಳು ನಡೆದವು. ವಜ್ರಮುಷ್ಠ ಕಾಳಗ ಕೂಡ ನಡೆಯಿತು. ಇದನ್ನೂ ಓದಿ: ಮೈಸೂರು ದಸರಾ ಜಂಬೂಸವಾರಿಗೆ ಚಾಲನೆ – ಚಿನ್ನದ ಅಂಬಾರಿ ಹೊತ್ತು ರಾಜಗಾಂಭೀರ್ಯದಿಂದ ಸಾಗಿದ ಅಭಿಮನ್ಯು

    ಮಧ್ಯಾಹ್ನದ ವೇಳೆ ಸಿಎಂ ಸಿದ್ದರಾಮಯ್ಯ ಅವರು ನಂದಿಧ್ವಜ ಪೂಜೆ ನೆರವೇರಿಸಿದರು. ನಂತರ ಸ್ತಬ್ಧಚಿತ್ರ ಹಾಗೂ ಕಲಾತಂಡಗಳ ಮೆರವಣಿಗೆಗೆ ಚಾಲನೆ ನೀಡಿದರು. ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದಲ್ಲಿ ಸಾಗಿದ ಚಿನ್ನದ ಅಂಬಾರಿ ಮೆರವಣಿಗೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ಈ ಬಾರಿ ಪೊಲೀಸ್‌ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ಸಮನ್ವಯದ ಕೊರತೆಯಿಂದ ನಿಗದಿಗಿಂತ 15 ನಿಮಿಷ ತಡವಾಗಿ ಮೆರವಣಿಗೆಗೆ ಚಾಲನೆ ದೊರೆಯಿತು. ಈ ವೇಳೆ ಸಿಎಂಗೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್‌.ಸಿ.ಮಹದೇವಪ್ಪ, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಮೇಯರ್‌ ಶಿವಕುಮಾರ್‌ ಸಾಥ್‌ ನೀಡಿದರು.

    ದಸರಾ ಜಂಬೂಸವಾರಿಗೆ ಸ್ತಬ್ಧಚಿತ್ರ ಹಾಗೂ ವಿವಿಧ ಕಲಾತಂಡಗಳು ಮೆರುಗು ನೀಡಿದವು. ರಾಜ್ಯದ ವಿವಿಧ ಜಿಲ್ಲೆಗಳ 31 ಹಾಗೂ ವಿವಿಧ ಇಲಾಖೆಗಳ 18 ಸೇರಿದಂತೆ ಒಟ್ಟು 49 ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ. ಇಸ್ರೋ ಯಶಸ್ವಿ ಚಂದ್ರಯಾನ-3 ಯೋಜನೆಗೆ ಸಂಬಂಧಿಸಿದ ಸ್ತಬ್ಧಚಿತ್ರ ಗಮನ ಸೆಳೆಯಿತು. ಅಲ್ಲದೇ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತ ಸ್ತಬ್ಧಚಿತ್ರ ಮೆರವಣಿಗೆಯ ವಿಶೇಷ ಆಕರ್ಷಣೆಯಾಗಿತ್ತು. ಜೊತೆಗೆ ಡೊಳ್ಳು ಕುಣಿತ, ವೀರಗಾಸೆ, ಪಟ ಕುಣಿತ ಹೀಗೆ ಅನೇಕ ಜನಪದ ಕಲಾತಂಡಗಳು ಮೆರವಣಿಗೆ ಉದ್ದಕ್ಕೂ ಸಾಗಿ ಜನರನ್ನು ರಂಜಿಸಿದವು. ಇದನ್ನೂ ಓದಿ: ದಸರಾ ಜಂಬೂ ಸವಾರಿಗೆ ಮೆರಗು ನೀಡಲಿವೆ 49 ವಿಶೇಷ ಸ್ತಬ್ಧ ಚಿತ್ರಗಳು – ಯಾವ್ಯಾವ ಜಿಲ್ಲೆಯಿಂದ ಏನೇನು?

    ಕ್ಯಾಪ್ಟನ್‌ ಅಭಿಮನ್ಯು ಆನೆ ಚಿನ್ನದ ಅಂಬಾರಿ ಹೊತ್ತು ಸಾಗಿದ್ದು ಇದು ನಾಲ್ಕನೇ ಬಾರಿ. ಸಂಜೆ 5:23 ಕ್ಕೆ ಅರಮನೆ ಬಿಟ್ಟಿದ್ದ ಅಭಿಮನ್ಯು. ರಾತ್ರಿ 7:25 ರ ಹೊತ್ತಿಗೆ ಬನ್ನಿಮಂಟಪ ತಲುಪಿದ. ಮೆರವಣಿಗೆಯಿಂದ ಅರಮನೆಯಿಂದ ಹೊರಟು, ಚಾಮರಾಜ ವೃತ್ತ, ಕೃಷ್ಣರಾಜ ವೃತ್ತ, ಸಯ್ಯಾಜಿರಾವ್‌ ರಸ್ತೆ, ಆಯುರ್ವೇದ ಕಾಲೇಜು ವೃತ್ತ. ನ್ಯೂ ಸಯ್ಯಾಜಿರಾವ್‌ ರಸ್ತೆ, ಹೈವೆ ವೃತ್ತದ ಮೂಲಕ ಐದು ಕಿ.ಮೀ. ದೂರದ ಬನ್ನಿಮಂಟಪವನ್ನು ತಲುಪಿತು.

    ಮೆರವಣಿಗೆ ಹಾದಿಯುದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನರು, ಚಿನ್ನದ ಅಂಬಾರಿಯ ಮೇಲೆ ವಿರಾಜಮಾನವಾಗಿ ದರ್ಶನ ನೀಡಿದ ತಾಯಿಯನ್ನು ಕಂಡು ಕೈಮುಗಿದು ಭಕ್ತಿ-ಭಾವ ಪ್ರದರ್ಶಿಸಿದರು. ‘ಜೈ ಚಾಮುಂಡಿ’ ಎಂದು ಕೂಗಿದರು. ಅನೇಕರು ತಮ್ಮ ಮೊಬೈಲ್‌ಗಳಲ್ಲಿ ಜಂಬೂಸವಾರಿ ಮೆರವಣಿಗೆ ದೃಶ್ಯವನ್ನು ಸೆರೆ ಹಿಡಿದರು. ಜಂಬೂಸವಾರಿ ಮುಂದೆ ಸಾಗುತ್ತಿದ್ದ ಸ್ತಬ್ಧಚಿತ್ರಗಳು ಹಾಗೂ ಕಲಾತಂಡಗಳ ವೈಶಿಷ್ಟ್ಯವನ್ನು ಕಣ್ತುಂಬಿಕೊಂಡರು. ಇದನ್ನೂ ಓದಿ: ಐತಿಹಾಸಿಕ ಮೈಸೂರು ದಸರಾ ಮಹೋತ್ಸವ- ಜಂಬೂಸವಾರಿ ಕಣ್ತುಂಬಿಕೊಳ್ಳಲು ಕಾತುರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೈಸೂರು ದಸರಾ ಜಂಬೂಸವಾರಿಗೆ ಚಾಲನೆ – ಚಿನ್ನದ ಅಂಬಾರಿ ಹೊತ್ತು ರಾಜಗಾಂಭೀರ್ಯದಿಂದ ಸಾಗಿದ ಅಭಿಮನ್ಯು

    ಮೈಸೂರು ದಸರಾ ಜಂಬೂಸವಾರಿಗೆ ಚಾಲನೆ – ಚಿನ್ನದ ಅಂಬಾರಿ ಹೊತ್ತು ರಾಜಗಾಂಭೀರ್ಯದಿಂದ ಸಾಗಿದ ಅಭಿಮನ್ಯು

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara 2023) ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ (Dasara Jamboo Savari) ಮೆರವಣಿಗೆಗೆ ಇಂದು (ಮಂಗಳವಾರ) ಚಾಲನೆ ನೀಡಲಾಯಿತು. ಅಲಂಕೃತಗೊಂಡ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ನಾಡ ಅಧಿದೇವತೆ ಚಾಮುಂಡಿತಾಯಿಯನ್ನು ಹೊತ್ತು ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದ. ದಸರಾ ಜಂಬೂಸವಾರಿ ವೈಭವವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಜನರು ನೆರೆದಿದ್ದರು.

    ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಐತಿಹಾಸಿಕ ದಸರಾ ವೈಭವ ಕಳೆಗಟ್ಟಿತ್ತು. ಅರಮನೆಯಲ್ಲಿ ರಾಜವೈಭೋಗ ಮರುಕಳಿಸಿತ್ತು. ಮಂಗಳವಾರ ಸಂಜೆ 4.40 ರಿಂದ 5 ಗಂಟೆಯ ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ದಸರಾ ಜಂಬೂಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಾಲನೆ ನೀಡಿದರು. ಅರಮನೆ ಅಂಗಳದಲ್ಲಿ ಅಂಬಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿದರು. ಈ ವೇಳೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ (Yaduveer Krishnadatta Chamaraja Wadiyar), ಡಿಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್‌.ಸಿ.ಮಹದೇವಪ್ಪ (H.C.Mahadevappa), ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಮೇಯರ್‌ ಶಿವಕುಮಾರ್‌ ಅಂಬಾರಿಗೆ ಪುಷ್ಪಾರ್ಚನೆ ಮಾಡಿ ಸಿಎಂಗೆ ಸಾಥ್‌ ನೀಡಿದರು. ಇದನ್ನೂ ಓದಿ: ದಸರಾ ಜಂಬೂ ಸವಾರಿಗೆ ಮೆರಗು ನೀಡಲಿವೆ 49 ವಿಶೇಷ ಸ್ತಬ್ಧ ಚಿತ್ರಗಳು – ಯಾವ್ಯಾವ ಜಿಲ್ಲೆಯಿಂದ ಏನೇನು?

    ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಾಡಿ ರಾಷ್ಟ್ರಗೀತೆ ನುಡಿಸುವ ವೇಳೆ 21 ಕುಶಾಲತೋಪು ಸಿಡಿಸಲಾಯಿತು. ರಾಷ್ಟ್ರಗೀತೆ ವೇಳೆ ಜನರು ಎದ್ದು ನಿಂತು ಗೌರವ ಸಲ್ಲಿಸಿದರು. ಅಲ್ಲದೇ ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ಚಾಮುಂಡಿತಾಯಿಯನ್ನು ಕಣ್ತುಂಬಿಕೊಂಡು ಜನರು ಧನ್ಯತಾ ಭಾವ ಮೆರೆದರು. ದಸರಾ ಜಂಬೂಸವಾರಿ ವೀಕ್ಷಿಸಲು ಅರಮನೆ ಅಂಗಳದಲ್ಲಿ 30 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿತ್ತು. ದಸರಾ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಅರ್ಜುನ ಹೆಜ್ಜೆ ಹಾಕಿದ. ನೌಫತ್‌ ಮತ್ತು ಸಾಲಾನೆಗಳಾಗಿ ಭೀಮ, ಗೋಪಿ, ಧನಂಜಯ, ಮಹೇಂದ್ರ, ಪ್ರಶಾಂತ್ ಆನೆಗಳು ಸಾಗಿದವು. ಅಂಬಾರಿ ಹೊತ್ತ ಕ್ಯಾಪ್ಟನ್‌ ಅಭಿಮನ್ಯು ಜೊತೆ ಕುಮ್ಕಿ ಆನೆಗಳಾಗಿ ವಿಜಯಾ, ವರಲಕ್ಷ್ಮಿ ಸಾಗಿದವು.

    ದಸರಾ ಜಂಬೂಸವಾರಿಗೆ ಸ್ತಬ್ಧಚಿತ್ರ ಹಾಗೂ ವಿವಿಧ ಕಲಾತಂಡಗಳು ಮೆರುಗು ನೀಡಿದವು. ರಾಜ್ಯದ ವಿವಿಧ ಜಿಲ್ಲೆಗಳ 31 ಹಾಗೂ ವಿವಿಧ ಇಲಾಖೆಗಳ 18 ಸೇರಿದಂತೆ ಒಟ್ಟು 49 ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ. ಇಸ್ರೋ ಯಶಸ್ವಿ ಚಂದ್ರಯಾನ-3 ಯೋಜನೆಗೆ ಸಂಬಂಧಿಸಿದ ಸ್ತಬ್ಧಚಿತ್ರ ಗಮನ ಸೆಳೆಯಿತು. ಅಲ್ಲದೇ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತ ಸ್ತಬ್ಧಚಿತ್ರ ಮೆರವಣಿಗೆಯ ವಿಶೇಷ ಆಕರ್ಷಣೆಯಾಗಿತ್ತು. ಜೊತೆಗೆ ಡೊಳ್ಳು ಕುಣಿತ, ವೀರಗಾಸೆ, ಪಟ ಕುಣಿತ ಹೀಗೆ ಅನೇಕ ಜನಪದ ಕಲಾತಂಡಗಳು ಮೆರವಣಿಗೆ ಉದ್ದಕ್ಕೂ ಸಾಗಿ ಜನರನ್ನು ರಂಜಿಸಿದವು. ಇದನ್ನೂ ಓದಿ: ಐತಿಹಾಸಿಕ ಮೈಸೂರು ದಸರಾ ಮಹೋತ್ಸವ- ಜಂಬೂಸವಾರಿ ಕಣ್ತುಂಬಿಕೊಳ್ಳಲು ಕಾತುರ

    ಇದಕ್ಕೂ ಮುನ್ನ ಮಧ್ಯಾಹ್ನ 1:46 ರಿಂದ 2:08 ರ ವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿಧ್ವಜ ಪೂಜೆ ನೆರವೇರಿಸಲಾಯಿತು. ಅರಮನೆ ಬಲರಾಮ ದ್ವಾರಕ್ಕೆ ಐರಾವತ ಬಸ್‌ನಲ್ಲಿ ಆಗಮಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ನಂದಿಧ್ವಜ ಪೂಜೆ ನೆರವೇರಿಸಿದರು. ಪೂಜೆ ಬಳಿಕ ಸಿಎಂ ಹಾಗೂ ಡಿಸಿಎಂಗೆ ಕಲಾವಿದ ರಾಜೇಶ್‌ ವಿಶೇಷ ಗಿಫ್ಟ್ ನೀಡಿದರು. ಸಿಎಂಗೆ 3ಡಿ ಪಂಚಲೋಹದ ರಾಕೇಶ್‌ ಸಿದ್ದರಾಮಯ್ಯ ಭಾವಚಿತ್ರ ಹಾಗೂ ಡಿಸಿಎಂಗೆ ತಂದೆ ಕೆಂಪೇಗೌಡರ ಭಾವಚಿತ್ರ ಉಡುಗೊರೆ ನೀಡಲಾಯಿತು. ನಂದಿಧ್ವಜ ಪೂಜೆ ಬಳಿಕ ಸ್ತಬ್ಧಚಿತ್ರ ಹಾಗೂ ಕಲಾತಂಡಗಳ ಮೆರವಣಿಗೆಗೆ ಸಿಎಂ ಚಾಲನೆ ನೀಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಭಿಮನ್ಯು ಕೇವಲ ದಸರಾ ಆನೆಯಲ್ಲ- ಈತ ಕೂಂಬಿಂಗ್ ಸ್ಪೆಷಲಿಸ್ಟ್

    ಅಭಿಮನ್ಯು ಕೇವಲ ದಸರಾ ಆನೆಯಲ್ಲ- ಈತ ಕೂಂಬಿಂಗ್ ಸ್ಪೆಷಲಿಸ್ಟ್

    – 150ಕ್ಕೂ ಹೆಚ್ಚು ಕಾಡಾನೆಗಳ ಪೊಗರು ಇಳಿಸಿರುವ ಅಭಿಮನ್ಯು
    – ಹುಲಿ ಕಾರ್ಯಾಚಾರಣೆಗೂ ಬೇಕು ಅಭಿಮನ್ಯು

    ಮೈಸೂರು: ವಿಶ್ವ ವಿಖ್ವಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಸೆಂಟ್ರಾಆಫ್ ಅಟ್ರಾಕ್ಷನ್ ಎಂದರೆ ಜಂಬೂ ಸವಾರಿ ಮೆರವಣಿಗೆ. ಕಳೆದ ಕಳೆದ ವರ್ಷದಿಂದ ಅಂಬಾರಿ ಹೊರುವ ಜವಾಬ್ದಾರಿಯನ್ನು ಅಭಿಮನ್ಯುವಿಗೆ ನೀಡಲಾಗಿದೆ. ಕಳೆದ ಬಾರಿ ಅರಮನೆಯ ಆವರಣದಲ್ಲೇ ಗಜ ಗಾಂಭೀರ್ಯ ನಡಿಗೆಯ ಮೂಲಕವೇ ಯಶಸ್ವಿಯಾಗಿ ಅಭಿಮನ್ಯು ಜಂಬೂ ಸವಾರಿ ಮೆರಣಿಗೆಯನ್ನು ಮುಗಿಸವ ಮೂಲಕ ನಾಡಿನ ಜನರ ಹೆಗ್ಗಳಿಕೆಗೆ ಪಾತ್ರವಾಗಿದ್ದ. ಅಭಿಮನ್ಯು ದಸರಾ ಆನೆ ಮಾತ್ರವಲ್ಲ ಈತನ ಸಾಧನೆ ಸಾಕಷ್ಟು ಇವೆ. ಇದನ್ನೂ ಓದಿ:  ಸಿದ್ದರಾಮಯ್ಯ, ಕುಮಾರಸ್ವಾಮಿ ವೋಟಿಗಾಗಿ ಜೊಲ್ಲು ಸುರಿಸ್ತಿದ್ದಾರೆ: ಆರಗ ಜ್ಞಾನೇಂದ್ರ

    Abhimanyu elephant publictv

    ಸತತ ಏಳು ಬಾರಿ ತಾಯಿ ಚಾಮುಂಡೇಶ್ವರಿಯನ್ನು ಕೂರಿಸಿದ ಚಿನ್ನದ ಅಂಬಾರಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ರಾಜ ಬೀದಿಗಳಲ್ಲಿ ಹೆಜ್ಜೆ ಹಾಕಿದ್ದ ಅರ್ಜುನನಿಗೆ 60 ವರ್ಷ ದಾಟಿದ ಕಾರಣ ಒಲ್ಲದ ಮನಸ್ಸಿನಿಂದಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಕಳೆದ ಬಾರಿ ಆತನನ್ನು ದಸರಾ ಮಹೋತ್ಸವದಿಂದ ದೂರವಿಟ್ಟರು. ಅರ್ಜುನನ ಜಾಗಕ್ಕೆ ತರುವುದು ಎಂದು ಅಧಿಕಾರಿಗಳು ಯೋಚನೆ ಮಾಡುವ ವೇಳೆ ಕಂಡಿದ್ದೆ ಅಭಿಮನ್ಯು. 56 ವರ್ಷದ ಅಭಿಮನ್ಯುವನ್ನು 1970 ರಲ್ಲಿ ಕೊಡಗಿನ ಹೆಬ್ಬಾಳ ಅರಣ್ಯ ಪ್ರದೇಶದಲ್ಲಿ ಸೆರೆಹಿಡಿಯಲಾಗಿತ್ತು. 21 ವರ್ಷಗಳಿಂದ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವ ಅಭಿಮನ್ಯು 2012 ರಿಂದ 2015ರವರೆಗೆ ದಸರಾ ಮಹೋತ್ಸವದ ಜಂಬೂ ಸವಾರಿ ಮೆರಣಿಗೆಯಲ್ಲಿ ಕರ್ನಾಟಕ ವಾದ್ಯಗೋಷ್ಠಿಯವರು ಕುಳಿತುಕೊಳ್ಳುವ ಗಾಡಿ ಎಳೆಯು ಜವಾಬ್ದಾರಿಯನ್ನು ಹೊತ್ತುಕೊಂಡಿದ್ದ. ಅರ್ಜುನ ಆನೆಯ ಜಾಗಕ್ಕೆ ಯಾರನ್ನು ತರುವುದು ಎಂದು ಹುಡುಕುವಾಗ ಕಣ್ಣಿಗೆ ಬಿದ್ದಿದ್ದು ಅಭಿಮನ್ಯು. ಇದಕ್ಕೆ ಕಾರಣ ಇತ ಬಹಳ ಸೌಮ್ಯ ಸ್ವಾಭಾವದ ಆನೆಯಾಗಿದ್ದು, ಇತನ ಬೆನ್ನು ಅಂಬಾರಿ ಕಟ್ಟಲು ಸೂಕ್ತವಾಗಿದೆ. ಜೊತೆಗೆ ಇತನ ತೂಕ 4720 ಕೆಜಿ, ಎತ್ತರ 2.72 ಮೀಟರ್, ಉದ್ದ 3.51 ಮೀಟರ್ ಇರುವ ಕಾರಣ ಜವಾಬ್ದಾರಿಯಾಗಿ ಅಭಿಮನ್ಯು ಅಂಬಾರಿಯನ್ನು ಹೊರಬಲ್ಲ ಎಂದು ಆಯ್ಕೆ ಮಾಡಲಾಗಿತ್ತು. ಅಧಿಕಾರಿಗಳ ನಿರೀಕ್ಷೆಯಂತೆ ಕಳೆದ ಬಾರಿ ಸಮರ್ಥವಾಗಿ ಚಿನ್ನದ ಅಂಬಾರಿ ಹೊತ್ತು ಅರಮನೆ ಆವರಣದಲ್ಲಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದನು. ಇದನ್ನೂ ಓದಿ:   ಪಟಾಕಿ, ವಾದ್ಯದ ಸದ್ದಿಗೆ ಬೆದರಿದ ಆನೆ – ಜಂಬೂ ಸವಾರಿ ಮೆರವಣಿಗೆ ಸ್ಥಗಿತ

    Abhimanyu elephant publictv

    ಬಹುತೇಕ ಜನರು ಅಭಿಮನ್ಯು ಎಲ್ಲಾ ಆನೆಗಳ ರೀತಿ ದಸರಾ ಆನೆ, ದಸರಾ ಮುಗಿದ ಬಳಿಕ ಈತ ಕಾಡಿನಲ್ಲಿ ಫುಲ್ ರೆಸ್ಟ್ ಮಾಡುತ್ತಾನೆ ಎಂದು ಎಲ್ಲರು ತಿಳಿದುಕೊಂಡಿದ್ದಾರೆ. ಆದ್ರೆ ಇತನಿಗೆ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವುದರಿಂದ. ಎಷ್ಟು ಹೆಸರಿದೆಯೋ ಅಷ್ಟೇ ಹೆಸರು ಕೂಂಬಿಂಗ್‍ನಲ್ಲೂ ಇದೆ. ಈ ಕಾರಣಕ್ಕೆ ಅಭಿಮನ್ಯುವನ್ನು ಕೂಂಬಿಂಗ್ ಸ್ಪೆಷಲಿಸ್ಟ್ ಎಂದು ಕರೆಯುತ್ತಾರೆ. ಕಾಡಂಚಿನ ಗ್ರಾಮಗಳಲ್ಲಿ ಕಾಡಿನಿಂದಬಂದು ಉಪಟಳ ಮಾಡುವ ಕಾಡಾನೆ ಹಾಗೂ ಹುಲಿ ಕಾರ್ಯಾಚರಣೆಗೆ ಅಭಿಮನ್ಯುವನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ. ಈ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳುವ ಸಾಕಾನೆಗಳಿಗೆ ತುಂಬಾ ಧೈರ್ಯ ಬೇಕಾಗಿದೆ. ಅಭಿಮನ್ಯು ಯಾವುದಕ್ಕೂ ಭಯಪಡದೇ ಧೈರ್ಯದಿಂದ ನುಗ್ಗುವ ಕಾರಣಕ್ಕೆ ಇತನನ್ನು ಕೂಂಬಿಂಗ್‍ಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇಲ್ಲಿಯವರೆಗೆ 150 ಕ್ಕೂ ಹೆಚ್ಚು ಕಾಡಾನೆಗಳ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಅಭಿಮನ್ಯು ಆ ಕಾಡಾನೆಗಳ ಪುಂಡಾಟವನ್ನು ಸದ್ದಿಲ್ಲಂದೆ ಅಡಗಿಸಿದ್ದಾನೆ. ಇನ್ನೂ ಇತ ಹೆಸರಿನಲ್ಲಿ 50ಕ್ಕೂ ಹೆಚ್ಚು ಹುಲಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಹೆಗ್ಗಳಿಕೆಯೂ ಸಹ ಇರುವುದು ಗಮನಾರ್ಹವಾಗಿದೆ. ಇದನ್ನೂ ಓದಿ: ದಸರಾ ಆನೆ ವಿಕ್ರಮನಿಗೆ ಮದ – ಈ ಬಾರಿ ದಸರಾದಿಂದ ವಿಕ್ರಮ ಔಟ್

    Abhimanyu elephant publictv

    ಒಟ್ಟಾರೆ ಕಳೆದ ವರ್ಷದಿಂದ ಯಶಸ್ಸಿಯಾಗಿ ಅಂಬಾರಿ ಹೊರುತ್ತಿರುವ ಅಭಿಮನ್ಯು ಮಾಡಿರು ಸಾಹಸ ಪರಾಕ್ರಮದಿಂದ ಇತನಿಗೆ ಕೂಂಬಿಂಗ್ ಸ್ಪೇಷಲಿಸ್ಟ್ ಎಂಬ ಬಿರುದನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ನೀಡಿದ್ದಾರೆ. ಅಭಿಮನ್ಯು ಇನ್ನಷ್ಟು ವರ್ಷಗಳ ಕಾಲ ಜಂಬೂ ಸವಾರಿಯ ಕ್ಯಾಪ್ಟನ್ ಶೀಪ್ ವಹಿಸಿಕೊಳ್ಳುವುದರ ಜೊತೆಗೆ ಇತನ ಈ ಯಶಸ್ವಿ ಕೂಂಬಿಂಗ್ ಜರ್ನಿಯನ್ನು ಮುಂದುವರೆಯಲಿ ಎನ್ನುವುದೇ ನಮ್ಮ ಆಶಯವಾಗಿದೆ.