Tag: Abhinava Halashree

  • ಅಭಿನವ ಹಾಲಶ್ರೀಗೆ ಸೇರಿದ ಎಲ್ಲಾ ಬ್ಯಾಂಕ್ ದಾಖಲೆ ಪರಿಶೀಲನೆ

    ಅಭಿನವ ಹಾಲಶ್ರೀಗೆ ಸೇರಿದ ಎಲ್ಲಾ ಬ್ಯಾಂಕ್ ದಾಖಲೆ ಪರಿಶೀಲನೆ

    ವಿಜಯನಗರ: ಚೈತ್ರಾ ಕುಂದಾಪುರ (Chaithra Kundapura) ಹಾಗೂ ಗ್ಯಾಂಗ್ ನಡೆಸಿರುವ ಡೀಲ್ ಪ್ರಕರಣದ ವಿಚಾರಣೆಯನ್ನು ಸಿಸಿಬಿ (CCB) ಪೊಲೀಸರು ತೀವ್ರವಾಗಿ ನಡೆಸುತ್ತಿದ್ದಾರೆ. ವಂಚನೆ ಪ್ರಕರಣದಲ್ಲಿ (Fraud Case) ಸಿಸಿಬಿ ಪೊಲೀಸರು ಬಂಧಿಸಿರುವ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲವೀರಪ್ಪ ಸ್ವಾಮೀಜಿಯನ್ನು (Halashree Swamiji) ಹರಪನಹಳ್ಳಿ ಸರ್ಕಾರಿ ಪ್ರವಾಸಿ ಮಂದಿರದ ಗಣ್ಯರ ಅತಿಥಿಗೃಹದಲ್ಲಿ ಇಡೀ ದಿನ ವಿಚಾರಣೆಗೆ ಒಳಪಡಿಸಿದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

    ಬುಧವಾರ ರಾತಿ ಹಾಲಶ್ರೀಯನ್ನು ಹಿರೇಹಡಗಲಿ ಮಠಕ್ಕೆ ಕರೆದೊಯ್ದು ಮಹಜರು ನಡೆಸಿದ ಬಳಿಕ ಮಧ್ಯರಾತ್ರಿ 12:30ಕ್ಕೆ ಹರಪನಹಳ್ಳಿಯ ಪ್ರವಾಸಿ ಮಂದಿರ ಮತ್ತು ಗಣ್ಯರ ಅತಿಥಿಗೃಹದ ತಲಾ ಎರಡು ಕೊಠಡಿಗಳನ್ನು ಸಿಸಿಬಿ ತಂಡ ಪಡೆದಿತ್ತು. ತಡರಾತ್ರಿ ಊಟ ಮಾಡಿ, ನಸುಕಿನ ಜಾವ 3:30ರವರೆಗೆ ವಿಚಾರಣೆ ನಡೆಯಿತು. ಇದನ್ನೂ ಓದಿ: ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟ – ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೇ ಸಾವು

    ಕೆಲ ಹೊತ್ತು ವಿಶ್ರಾಂತಿ ಪಡೆದ ಬಳಿಕ ಬೆಳಗ್ಗೆ 9 ಗಂಟೆಯಿಂದ ವಿಚಾರಣೆ ಮುಂದುವರೆಯಿತು. ಸಂಜೆ 4:30ಕ್ಕೆ ಪುನಃ ಹಿರೇಹಡಗಲಿಯತ್ತ ವಾಹನಗಳು ತೆರಳಿದಾಗ, ಹಾಲಶ್ರೀ ಸ್ವಾಮೀಜಿ ಮುಖವನ್ನು ಶಾಲಿನಿಂದ ಮುಚ್ಚಿ ಮಠಕ್ಕೆ ಕರೆತರಲಾಗಿತ್ತು. ಇದನ್ನೂ ಓದಿ: ಡಾನ್ಸ್‌ ಕ್ಲಾಸ್‌ಗೆ ಹೋಗಬೇಡ ಎಂದ ಪೋಷಕರು – ಮನನೊಂದು ಯುವತಿ ಆತ್ಮಹತ್ಯೆ

    ಹಿರೇಹಡಗಲಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ (KGB) ಮತ್ತು ಬಿಡಿಸಿಸಿ ಬ್ಯಾಂಕ್‌ಗೆ ಸಿಸಿಬಿ ಪೊಲೀಸರು ಭೇಟಿ ನೀಡಿ ಸ್ವಾಮೀಜಿ ಹೊಂದಿರುವ ಖಾತೆಗಳ ಮಾಹಿತಿ ಪಡೆದರು. ಪಡೆದರು. ಕೆಜಿಬಿ ಬ್ಯಾಂಕ್‌ನಲ್ಲಿ ಸ್ವಾಮೀಜಿಗೆ ಸೇರಿದ ಲಾಕರ್ ತೆಗೆಸಿ ಪರಿಶೀಲಿಸಿದರು. ಹೂವಿನಹಡಗಲಿ ಐಡಿಎಫ್‌ಸಿ ಬ್ಯಾಂಕ್‌ನಲ್ಲಿನ ಸ್ವಾಮೀಜಿ ಖಾತೆಯ ಹಣಕಾಸು ವಹಿವಾಟಿನ ದಾಖಲೆಯನ್ನು ಸಿಸಿಬಿ ಪೊಲೀಸರು ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಸಾಬೂನು ಕಾರ್ಖಾನೆಗೆ ತ್ವರಿತ ಗತಿಯಲ್ಲಿ ಕಾರ್ಪೊರೇಟ್ ರೂಪ: ಎಂ.ಬಿ ಪಾಟೀಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚೈತ್ರಾ ಹೇಳಿದಂತೆ ಕೇಳಿದ್ದೀನಿ – ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡ ಹಾಲಶ್ರೀ

    ಚೈತ್ರಾ ಹೇಳಿದಂತೆ ಕೇಳಿದ್ದೀನಿ – ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡ ಹಾಲಶ್ರೀ

    ಬೆಂಗಳೂರು: ಚೈತ್ರಾ (Chaitra Kundapura) ಅಂಡ್‌ ಗ್ಯಾಂಗ್‌ನ ವಂಚನೆ ಪ್ರಕರಣ ಬಹುತೇಕ ಮುಕ್ತಾಯ ಹಂತಕ್ಕೆ ಬಂದಿದೆ. ಸ್ವಾಮೀಜಿ ಬಂಧನದ ಬಳಿಕ ಎಲ್ಲಾ ಕಾನೂನು ಪ್ರಕ್ರಿಯೆಗಳು ಮುಗಿದಿದ್ದು, ಅಭಿನವ ಹಾಲಶ್ರೀ ಸಿಸಿಬಿ ತನಿಖಾಧಿಕಾರಿ (CCB Investigation Officer) ಮುಂದೆ ತಪ್ಪೊಪ್ಪಿಕೊಂಡಿದ್ದಾರೆ.

    ಉದ್ಯಮಿ ಗೋವಿಂದ ಬಾಬು ಪೂಜಾರಿಯಿಂದ (Govind Babu Poojari) ಹಣ ಪಡೆದಿದ್ದು ನಿಜ. ಎಂಎಎಲ್‌ಎ ಟಿಕೆಟ್ ವಿಚಾರವಾಗಿ (BJP MLA Ticket Scam) ಹಣ ಪಡೆದಿದ್ದೆ, ಆದರೆ ಟಿಕೆಟ್ ಸಿಗಲಿಲ್ಲವಾದ್ದರಿಂದ ಹಣ ವಾಪಸ್ ಕೊಡೋದಾಗಿ ಹೇಳಿದ್ದೆ. ಈಗಾಗಲೆ 50 ಲಕ್ಷ ಹಣ ವಾಪಸ್‌ ಕೊಟ್ಟಿದ್ದೇನೆ. ಉಳಿದ ಹಣ ಮಠದಲ್ಲಿದೆ ಅಂತ ಸ್ವಾಮೀಜಿ ಅಧಿಕಾರಿಗಳ ಮುಂದೆ ಸತ್ಯ ಬಾಯ್ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಅಲ್ಲದೇ ಈ ಪ್ರಕರಣದಲ್ಲಿ ನನ್ನದೇನೂ ತಪ್ಪಿಲ್ಲ, ಚೈತ್ರಾ ಹೇಳಿದಂತೆ ಕೇಳಿದ್ದೀನಿ. ತಪ್ಪಿಗೆ ನಾನೇ ಹೊಣೆಯಾಗಿದ್ದು, ಬೇರೆ ಯಾರೂ ಈ ಕೇಸ್ ನಲ್ಲಿ ಇಲ್ಲ ಅಂತಾ ಅಭಿನವ ಹಾಲಶ್ರೀ ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ಇದನ್ನೂ  ಓದಿ: ಕಾವೇರಿ ವಿಚಾರದಲ್ಲಿ ಸುಪ್ರೀಂ ತೀರ್ಪು ಕರ್ನಾಟಕಕ್ಕೆ ಗಾಯದ ಮೇಲೆ ಬರ ಎಳೆದಂತಾಗಿದೆ: ಸಿ.ಟಿ.ರವಿ

    ಈ ನಡುವೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಪಡೆಯಲು ಹೋಗಿ 5 ಕೋಟಿ ರೂ. ಕಳೆದುಕೊಂಡಿರುವುದಾಗಿ ದೂರು ನೀಡಿರುವ ಗೋವಿಂದ ಬಾಬು ಪೂಜಾರಿ ವಿರುದ್ಧವೇ ಈಗ ಜಾರಿ ನಿರ್ದೇಶನಾಲಯದಲ್ಲಿ (ಇಡಿ) ದೂರು ದಾಖಲಾಗಿದೆ. 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಟಿಕೆಟ್‌ಗೆ ನೀಡಿದ್ದು ಹವಾಲಾ ಹಣ. ಅವರು ನಗದು ರೂಪದಲ್ಲಿ ನೀಡಿರುವುದು ಅಪರಾಧವಾಗಿದ್ದು ಅವರ ವಿರುದ್ಧ ತನಿಖೆ ನಡೆಸಬೇಕೆಂದು ಕೋರಿ ವಕೀಲ ನಟರಾಜ ಶರ್ಮಾ (Nataraj Sharma) ದೂರು ನೀಡಿದ್ದಾರೆ. ಇದನ್ನೂ  ಓದಿ: ಎರಡು ಸಲ ನೀರು ಬಿಟ್ಟು ಈಗ ಸುಪ್ರೀಂಕೋರ್ಟ್‌ಗೆ ಹೋಗಿದ್ದಾರೆ: ಬೊಮ್ಮಾಯಿ ಆಕ್ರೋಶ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಭಿನವ ಹಾಲಶ್ರೀಗಿಲ್ಲ ಜಾಮೀನು – 10 ದಿನ ಪೊಲೀಸ್‌ ಕಸ್ಟಡಿಗೆ

    ಅಭಿನವ ಹಾಲಶ್ರೀಗಿಲ್ಲ ಜಾಮೀನು – 10 ದಿನ ಪೊಲೀಸ್‌ ಕಸ್ಟಡಿಗೆ

    ಬೆಂಗಳೂರು: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಅಭಿನವ ಹಾಲಶ್ರೀಯನ್ನು (Abhinava Halashree) 10 ದಿನ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

    ವಂಚನೆ ಪ್ರಕರಣದಲ್ಲಿ ಆರೋಪಿ ಹಾಲಶ್ರೀಗೆ ಜಾಮೀನು ನೀಡಲು ಕೋರ್ಟ್‌ ನಿರಾಕರಿಸಿದೆ. ಸೆ.29 ರ ತನಕ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಸೆ.29 ರಂದು ನಡೆಸಲಿದೆ. ಇದನ್ನೂ ಓದಿ: ಅಭಿನವ ಹಾಲಶ್ರೀ ನೇತೃತ್ವದಲ್ಲಿ ಗೋವಿಂದ್ ಬಾಬು ಪೂಜಾರಿ ಬಯೋಪಿಕ್

    ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹಾಲಶ್ರೀ ನಾಪತ್ತೆಯಾಗಿದ್ದರು. ಒಡಿಶಾದಲ್ಲಿ ಮಾರುವೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಲಶ್ರೀಯನ್ನು ರೈಲ್ವೆ ಪೊಲೀಸರ ನೆರವಿನಿಂದ ಬಂಧಿಸಿ ಬೆಂಗಳೂರಿಗೆ ವಾಪಸ್‌ ಕರೆತರಲಾಗಿತ್ತು. ಸಿಸಿಬಿ ಪೊಲೀಸರು ಇಂದು 19ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರು ಪಡಿಸಿದ್ದರು.

    ಆರೋಪಿಯನ್ನು 14 ದಿನ ಪೊಲೀಸ್‌ ಕಸ್ಟಡಿಗೆ ನೀಡಬೇಕು ಎಂದು ಸಿಸಿಬಿ, ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಈ ವೇಳೆ ಹಾಲಶ್ರೀ ಪರ ವಕೀಲ ಅರುಣ್‌ ಶ್ಯಾಂ ಕೂಡ ಹಾಜರಿದ್ದರು. ಪೊಲೀಸ್‌ ಕಸ್ಟಡಿಗೆ ಆಕ್ಷೇಪ ವ್ಯಕ್ತಪಡಿಸಿ, ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದನ್ನೂ ಓದಿ: ಕೊನೆ ಕ್ಷಣದಲ್ಲೂ ಪಾರಾಗೋಕೆ ಹಾಲಶ್ರೀ ಯತ್ನ- ಮೈಸೂರಿನ ರಾಜಕಾರಣಿ ಬಳಿ ರಾಜಿ ಪಂಚಾಯ್ತಿಗೆ ಮೊರೆ

    ಆರೋಪಿಗೆ ಜಾಮೀನು ನೀಡದಂತೆ ಪಬ್ಲಿಕ್‌ ಪ್ರಾಸಿಕ್ಯೂಟರ್‌ ವಕೀಲರು ಆಕ್ಷೇಪಿಸಿದರು. ತನಿಖೆ ನಡೆಯುವ ಮಧ್ಯೆ ಜಾಮೀನು ನೀಡಬಾರದು. ಸಾಕ್ಷಿ ನಾಶವಾಗುತ್ತದೆ ಎಂದು ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಆರೋಪಿಯನ್ನು 10 ದಿನ ಪೊಲೀಸ್‌ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಧ್ಯರಾತ್ರಿವರೆಗೂ ಟೆಕ್ನಿಕಲ್ ಸೆಲ್‍ನಲ್ಲಿ ಹಾಲಶ್ರೀ ವಿಚಾರಣೆ- ಇಂದು ಕೋರ್ಟ್ ಮುಂದೆ ಹಾಜರು

    ಮಧ್ಯರಾತ್ರಿವರೆಗೂ ಟೆಕ್ನಿಕಲ್ ಸೆಲ್‍ನಲ್ಲಿ ಹಾಲಶ್ರೀ ವಿಚಾರಣೆ- ಇಂದು ಕೋರ್ಟ್ ಮುಂದೆ ಹಾಜರು

    ಬೆಂಗಳೂರು: ವಂಚಕಿ ಚೈತ್ರಾ ಕುಂದಾಪುರ ಡೀಲ್ ಪ್ರಕರಣದ 3ನೇ ಆರೋಪಿ ಅಭಿನವ ಹಾಲಶ್ರೀಯನ್ನು (Abhinava Halashree) ಕೊನೆಗೂ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

    ಕಟಕ್ ರೈಲ್ವೇ ನಿಲ್ದಾಣದಲ್ಲಿ ಬಂಧಿಸಿ ಹಾಲಶ್ರೀಯನ್ನ ಬೆಂಗಳೂರಿಗೆ ಕರೆತರಲಾಗಿತ್ತು. ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದಾರೆ. ಅಭಿನವ ಹಾಲಶ್ರೀಗೆ 36 ವರ್ಷವಾಗಿರೋದ್ರಿಂದ ಬಿಪಿ, ಶುಗರ್, ಅಸ್ತಮಾ ಸಮಸ್ಯೆಯಿಲ್ಲ. ಎಲ್ಲವೂ ನಾರ್ಮಲ್ ಇದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ನಂತರ ಮಧ್ಯರಾತ್ರಿಯವರೆಗೂ ಟೆಕ್ನಿಕಲ್ ಸೆಲ್‍ನಲ್ಲಿ ವಿಚಾರಣೆ ನಡೆಸಿದ್ದಾರೆ.

    ವಿಚಾರಣೆ ವೇಳೆ ತನಿಖಾಧಿಕಾರಿಗಳಿಗೆ ಹಾಲಶ್ರೀ ಸ್ಪಂದಿಸಿದ್ದು, ಚೈತ್ರಾ, ಗಗನ್ ಇಬ್ಬರ ಬಗ್ಗೆಯೂ ಉತ್ತರಿಸಿದ್ದಾರೆ. ಒಟ್ಟಿನಲ್ಲಿ ಹಣಕಾಸಿನ ವ್ಯವಹಾರದ ಬಗ್ಗೆ ಹಾಲಶ್ರೀ ಸಿಸಿಬಿ ಅಧಿಕಾರಿಗಳ (CCB Officers) ಮುಂದೆ ಬಾಯ್ಬಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಹಾಲಶ್ರೀ ಬಂಧಿಸಲು ಅರ್ಚಕರ ವೇಷದಲ್ಲಿ ಫೀಲ್ಡ್‌ಗಿಳಿದಿದ್ದ ಅಧಿಕಾರಿಗಳು!

    ಇಂದು ಬೆಂಗಳೂರಿನ ಎಸಿಎಂಎಂ ಕೋರ್ಟ್‍ಗೆ ಹಾಲಶ್ರೀಯನ್ನು ಸಿಸಿಬಿ ಹಾಜರುಪಡಿಸಲಿದ್ದು, ಕೋರ್ಟಿಗೆ ಹಾಜರುಪಡಿಸಿದ ನಂತರ ಕಸ್ಟಡಿಗೆ ಪಡೆಯುವ ಸಾಧ್ಯತೆಗಳಿವೆ. ಹೀಗಾಗಿ ಅದಕ್ಕೆ ಬೇಕಾಗಿರುವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಕಸ್ಟಡಿಗೆ ಪಡೆದ ಬಳಿಕ ಸಿಸಿಬಿ ಮಹಜರು ಪ್ರಕ್ರಿಯೆ ನಡೆಸಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾಲಶ್ರೀ ಬಂಧಿಸಲು ಅರ್ಚಕರ ವೇಷದಲ್ಲಿ ಫೀಲ್ಡ್‌ಗಿಳಿದಿದ್ದ ಅಧಿಕಾರಿಗಳು!

    ಹಾಲಶ್ರೀ ಬಂಧಿಸಲು ಅರ್ಚಕರ ವೇಷದಲ್ಲಿ ಫೀಲ್ಡ್‌ಗಿಳಿದಿದ್ದ ಅಧಿಕಾರಿಗಳು!

    ಬೆಂಗಳೂರು: ಕೋಟಿ ಕೋಟಿ ವಂಚನೆ ಪ್ರಕರಣದ ಚೈತ್ರಾ ವಂಚನೆಯ ಕೂಟದಲ್ಲಿದ್ದ ಎ3 ಆರೋಪಿ ಹಾಲಶ್ರೀ (Halashree) ಕೊನೆಗೂ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಹಾಲಶ್ರೀ ಬಂಧನಕ್ಕೆ ಮಡಿತೊಟ್ಟು ಅಖಾಡಕ್ಕೆ ಇಳಿದಿದ್ದ ಸಿಸಿಬಿ ಪೊಲೀಸರ ಕಾರ್ಯಾಚರಣೆ ಬಲು ರೋಚಕವಾಗಿದೆ.

    ಎಂಟು ದಿನಗಳಿಂದ ಮೊಬೈಲ್ ಸ್ವಿಚ್ಡ್ ಆಫ್ ಮಾಡ್ಕೊಂಡು ತಲೆಮರೆಸಿಕೊಂಡಿದ್ದ ಹಾಲಶ್ರೀ ಹೈದರಾಬಾದ್ (Hyderabad) ಕಡೆಯಿಂದ ಉತ್ತರ ಭಾರತದ ಕಡೆ ಹೋಗಿರೋ ಮಾಹಿತಿ ಸಿಕ್ಕಿತ್ತು. ಹಾಲಶ್ರೀ ಮಠಗಳು, ದೇವಸ್ಥಾನಗಳಲ್ಲಿ ಇರಬಹುದೆಂಬ ಮಾಹಿತಿ ಆಧಾರದಲ್ಲಿ ಸಿಸಿಬಿಯ ಶಿವಕುಮಾರ್, ರಾಘವೇಂದ್ರ, ಸುರೇಶ್, ಅಣ್ಣಪ್ಪ ಅರ್ಚಕರ ವೇಷ ಹಾಕಿದ್ರು. ಶೃಂಗೇರಿ ದೇವಸ್ಥಾನದ ಅರ್ಚಕರ ರೀತಿ ಮಡಿಬಟ್ಟೆ ಧರಿಸಿ ಫೀಲ್ಡ್ ಗೆ ಇಳಿದಿದ್ರು.

    ನಾಲ್ವರು ಅರ್ಚಕರ ವೇಷದಲ್ಲಿ ಪ್ರತಿಯೊಂದು ದೇವಸ್ಥಾನ, ಮಠಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸೋ ನಾಟಕವಾಡಿದ್ರು. ಒಂದೊಂದೇ ಮಠ, ದೇವಸ್ಥಾನ ಮುಗಿಸಿ ಒಡಿಶಾದ ಪೂರಿ ಜಗನ್ನಾಥ್ ದೇವಸ್ಥಾನಕ್ಕೆ ಪೊಲೀಸರು ಹೋಗಿದ್ದರು. ಈ ವೇಳೆ ಪೂರಿ ಜಗನ್ನಾಥ್ ದೇವಸ್ಥಾನದಲ್ಲಿ ಹಾಲಶ್ರೀ ಇರೋದು ಪತ್ತೆಯಾಗಿತ್ತು. ನಾವು ಶೃಂಗೇರಿಯಿಂದ ಬಂದಿದ್ದೀವಿ, ಗಣೇಶ ಹಬ್ಬಕ್ಕೆ ವಿಶೇಷ ಪೂಜೆ ಮಾಡಿಸಬೇಕು ಅಂತ ಹೇಳಿದ್ರು. ಇದನ್ನೂ ಓದಿ: ಸಿಎಂ ನೇತೃತ್ವದಲ್ಲಿ ದೆಹಲಿಯಲ್ಲಿ ರಾಜ್ಯದ ಎಲ್ಲಾ ಸಂಸದರೊಂದಿಗೆ ಸಭೆ: ಡಿಕೆಶಿ

    ಈ ಮಾತನ್ನು ಕೇಳಿಸಿಕೊಂಡ ಹಾಲಶ್ರೀ ತಕ್ಷಣ ದೇವಸ್ಥಾನ ತೊರೆದು ಒಡಿಸ್ಸಾದ (Odisha) ಭುವನೇಶ್ವರದಿಂದ ಬಿಹಾರದ (Bihar) ಭೋದ್ಗಯ್‍ಗೆ ರೈಲು ಟಿಕೆಟ್ ಬುಕ್ ಮಾಡಿದ್ರು. ಭುವನೇಶ್ವರ ರೈಲ್ವೆ ನಿಲ್ದಾಣಕ್ಕೆ ಪೊಲೀಸರು ಬರಬಹುದು ಅಂತಾ ಶಂಕಿಸಿ ಅಲ್ಲಿಂದ 25 ಕಿ.ಮೀ. ಇರುವ ಕಟಕ್ ರೈಲ್ವೆ ನಿಲ್ದಾಣಕ್ಕೆ (Katak Railway Station) ಬಸ್‍ನಲ್ಲಿ ಪಯಾಣಿಸಿದ್ರು. ಅಷ್ಟೊತ್ತಿಗೆ ಕಟಕ್ ರೈಲ್ವೆ ನಿಲ್ದಾಣದ ಪೊಲೀಸರಿಗೆ ಸಿಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ರು. ಕಟಕ್ ರೈಲ್ವೆ ನಿಲ್ದಾಣಕ್ಕೆ ಹಾಲಶ್ರೀ ಬರ್ತಿದ್ದಂತೆ ಒಡಿಸ್ಸಾ ಪೊಲೀಸರು ಬಂಧಿಸಿದ್ರು.

    ಉದ್ಯಮಿಗೆ ಕೋಟಿ ಕೋಟಿ ವಂಚನೆ ಕೇಸ್‍ನಲ್ಲಿ ಎ-3 ಹಾಲಶ್ರೀಯ ಬಂಧನವಾಗಿದೆ. ಈಗ ಇರೋದು ಒಂದೇ ಕುತೂಹಲ. ಅಂದು ಚೈತ್ರಾ (Chaitra Kundapur) ಸ್ವಾಮೀಜಿ ಅರೆಸ್ಟ್ ಬಳಿಕ ದೊಡ್ಡವರ ಹೆಸರು ಹೊರಗೆ ಬರುತ್ತೆ ಅಂತ ಹೇಳಿದ್ದಳು. ಇದೀಗ ಸಿಸಿಬಿ ಪೊಲೀಸ್ರು ಅಭಿನವ ಹಾಲಶ್ರೀ ಸ್ವಾಮೀಜಿ ಅರೆಸ್ಟ್ ಮಾಡಿದ್ದಾರೆ. ಇಂದು ಸ್ವಾಮೀಜಿಯನ್ನ ಕಸ್ಟಡಿಗೆ ಪಡೆದು ಅಧಿಕೃತವಾಗಿ ವಿಚಾರಣೆ ಆರಂಭಿಸಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉದ್ಯಮಿಗೆ ವಂಚನೆ ಪ್ರಕರಣ – ಹಾಲಶ್ರೀ ಬಂಧನಕ್ಕೆ ಬಲೆ ಬೀಸಿದ ಸಿಸಿಬಿ

    ಉದ್ಯಮಿಗೆ ವಂಚನೆ ಪ್ರಕರಣ – ಹಾಲಶ್ರೀ ಬಂಧನಕ್ಕೆ ಬಲೆ ಬೀಸಿದ ಸಿಸಿಬಿ

    ಬಳ್ಳಾರಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿರುವ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯನ್ನು ಸಿಸಿಬಿ (CCB) ಅಧಿಕಾರಿಗಳು ತೀವ್ರಗೊಳಿಸಿದ್ದಾರೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತೋರ್ವ ಆರೋಪಿ ಹಾಲಶ್ರೀ ಸ್ವಾಮೀಜಿಗಾಗಿ (Abhinava Halashree) ಶೋಧ ಕಾರ್ಯ ಆರಂಭಗೊಂಡಿದೆ.

    ಸ್ವಾಮೀಜಿಯ ಮನೆ ಹಾಗೂ ಹಿರೇಹಡಗಲಿಯ ಮಠದಲ್ಲಿ ಸಿಸಿಬಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಅಲ್ಲದೇ ಹಾಲಶ್ರೀ ಮನೆ ಮತ್ತು ಮಠದ ಸಿಸಿಟಿವಿ ಡಿವಿಆರ್‌ನ್ನು ಸಿಸಿಬಿ ವಶಕ್ಕೆ ಪಡೆದಿದೆ. ಇಷ್ಟೇ ಅಲ್ಲದೇ ಆರೋಪಿಯ ಸಂಬಂಧಿಕರ ಮನೆಗಳಲ್ಲೂ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಇದಕ್ಕಾಗಿ ಹರಪನಹಳ್ಳಿ ಹಾಗೂ ದಾವಣಗೆರೆಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಹಲವು ಕಡೆ ಪರಿಶೀಲನೆ ನಡೆಸಿದೆ. ಇದನ್ನೂ ಓದಿ: ನಾನು ಓದಿದ್ದು 7ನೇ ಕ್ಲಾಸ್‌ – ಮೋಸಹೋದ ಕಥೆಯನ್ನು ವಿನಯ್‌ ಗುರೂಜಿಗೆ ಪತ್ರದಲ್ಲಿ ವಿವರಿಸಿದ್ದ ಗೋವಿಂದ ಪೂಜಾರಿ

    ಪ್ರಕರಣದ ಮೂರನೇ ಆರೋಪಿಯಾಗಿರುವ ಹಾಲಶ್ರೀ ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದು, ಯಾವುದೇ ಸುಳಿವಿಲ್ಲದಂತೆ ತಲೆಮರೆಸಿಕೊಂಡಿದ್ದಾರೆ. ಸ್ವಾಮೀಜಿ ವಿಚಾರವಾಗಿ ಈಗಾಗಲೇ ಬಂಧನವಾಗಿರುವ ಎ1 ಆರೋಪಿ ಚೈತ್ರಾ ಕುಂದಾಪುರ (Chaitra Kundapura) ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆತರುವಾಗ, ಸ್ವಾಮೀಜಿ ಬಂಧನವಾದ ಬಳಿಕ ದೊಡ್ಡವರ ಹೆಸರು ಹೊರ ಬರಲಿದೆ ಎಂದು ಹೇಳಿದ್ದಳು. ಈ ಹೇಳಿಕೆ ಪ್ರಕರಣದಲ್ಲಿ ಸಂಚಲನವನ್ನೂ ಮೂಡಿಸಿತ್ತು.

    ಕಳೆದ ಆಗಸ್ಟ್‌ನಲ್ಲಿ ಸ್ವಾಮೀಜಿ ಸಹ ದೂರು ನೀಡಿದ್ದು, ಗೋವಿಂದ ಬಾಬು ಅವರನ್ನು ಬೇಟಿಯಾಗಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಆದರೆ ಪ್ರಕರಣದ ಪ್ರಮುಖ ಹಾಗೂ ಮೂರನೇ ಆರೋಪಿ ಎನಿಸಿಕೊಂಡ ಅವರು ತಲೆ ಮರೆಸಿಕೊಂಡಿರುವುದು ಹಲವು ಅನುಮಾನಗಳಿಗೂ ಎಡೆಮಾಡಿಕೊಟ್ಟಿದೆ. ಸ್ವಾಮೀಜಿ ಬಂಧನದ ಬಳಿಕವಷ್ಟೇ ಪ್ರಕರಣದಲ್ಲಿ ಅವರ ಪಾತ್ರದ ಬಗ್ಗೆ ಖಚಿತ ಮಾಹಿತಿ ದೊರೆಯಲಿದೆ. ಇದನ್ನೂ ಓದಿ: ಚೈತ್ರಾ ಗ್ಯಾಂಗ್ ವಂಚನೆ ಪ್ರಕರಣ – ಸಿಸಿಬಿಯಿಂದ ಸ್ಥಳ ಮಹಜರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]