ಕೋಲ್ಕತ್ತಾ: ಮೋದಿ ಗ್ಯಾರಂಟಿಗೆ (Modi Guarantee) ವಾರಂಟಿ ಇಲ್ಲ. ಬಿಜೆಪಿ (BJP) ನಾಯಕರು ಬಂಗಾಳ ವಿರೋಧಿಗಳು ಎಂದು ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ (Abhishek Banerjee) ಟೀಕಿಸಿದ್ದಾರೆ.
ರಾಜ್ಯದ ಹಣವನ್ನು ತಡೆಹಿಡಿಯುವ ಕೇಸರಿ ಪಾಳಯಕ್ಕೆ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ. ಮೋದಿ ಗ್ಯಾರಂಟಿಗೆ ವಾರಂಟಿ ಇಲ್ಲ. ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ಮಾತ್ರ ಭರವಸೆಗಳನ್ನು ಈಡೇರಿಸುತ್ತದೆ ಎಂದು ತಿಳಿಸಿದ್ದಾರೆ.
ಬಿಜೆಪಿ ಮತ್ತು ಅದರ ನಾಯಕರು ಹೊರಗಿನವರು. ಬಂಗಾಳ ವಿರೋಧಿಗಳು. ಅವರು ರಾಜ್ಯಕ್ಕೆ ನೀಡಬೇಕಾದ ಹಣವನ್ನು ಏಕೆ ತಡೆಹಿಡಿದಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ತನ್ನ ಲೋಕಸಭಾ ಚುನಾವಣಾ ಪ್ರಚಾರವನ್ನು ಭಾನುವಾರದ ಮಹಾ ರ‍್ಯಾಲಿಯೊಂದಿಗೆ ಪ್ರಾರಂಭಿಸಿತು. ಇದನ್ನೂ ಓದಿ: ಸಂದೇಶ್‍ಖಾಲಿ ಹಿಂಸಾಚಾರ ಪ್ರಕರಣ – ಶೇಖ್ ಷಹಜಹಾನ್‍ಗೆ ಸಿಬಿಐ ಕಸ್ಟಡಿ ವಿಸ್ತರಣೆ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮುಗ್ಧ ಮತ್ತು ಬಡ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಹಾಗೂ ಭೂಕಬಳಿಕೆ ಆರೋಪ ಹೊತ್ತಿದ್ದ ತೃಣಮೂಲ ಕಾಂಗ್ರೆಸ್ ಪ್ರಭಾವಿ ನಾಯಕ ಶೇಖ್ ಷಹಜಹಾನ್‌ನನ್ನ ಬಂಧಿಸುವಂತೆ ಕೋಲ್ಕತ್ತಾ ಹೈಕೋರ್ಟ್ (Calcutta High Court) ಆದೇಶಿಸಿದೆ.
ಲೈಂಗಿಕ ಕಿರುಕುಳ ಹಾಗೂ ಭೂಕಬಳಿಕೆ ಆರೋಪ ಹೊತ್ತಿರುವ ಪ್ರಮುಖ ಆರೋಪಿ ಶೇಖ್ ಷಹಜಹಾನ್‌ನನ್ನು (Sheikh Shahjahan) ಬಂಧಿಸದಂತೆ ಬಂಗಾಳ ಪೊಲೀಸರಿಗೆ (Bengal Police) ಯಾರೂ ಹೇಳಿಲ್ಲ. ಯಾವುದೇ ಹಂತದಲ್ಲೂ ಬಂಧನಕ್ಕೆ ಅಡೆತಡೆ ಇಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸುತ್ತದೆ. ಷಹಜಹಾನ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಆರೋಪಿ ಎಂದು ಹೆಸರಿಸಲಾಗಿದೆ. ಆದ್ದರಿಂದ ನಿಸ್ಸಂಶಯವಾಗಿ ಅವರನ್ನು ಬಂಧಿಸಬೇಕು ಎಂದು ಕೋರ್ಟ್ ಹೇಳಿದೆ.
ಶಹಜಹಾನ್ ಮತ್ತು ಅವರ ಸಹಚರರಿಂದ ಬುಡಕಟ್ಟು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಮತ್ತು ಭೂಕಬಳಿಕೆ ಮಾಡಿದ್ದಾರೆ ಎಂದು ಟಿಎಂಸಿ ಪ್ರಭಾವಿ ವಿರುದ್ಧ ಆರೋಪಿಸಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಮಾನವ ಹಕ್ಕುಗಳ ಆಯೋಗ, ಸಂದೇಶ್‌ಖಾಲಿಯಲ್ಲಿ ಪ್ರಕರಣದ ತನಿಖೆಗೆ ವಿಶೇಷ ತಂಡವನ್ನೂ ಕಳುಹಿಸಿತ್ತು. ಇದಾದ ನಂತರ ಷಹಜಹಾನ್ ಬಂಧನ ವಿಳಂಭಕ್ಕೆ ನ್ಯಾಯಾಲಯವೇ ಕಾರಣ ಎಂದು ದೂರಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಬಂಧಿಸುವಂತೆ ತಿಳಿಸಿದೆ. ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲೂ ಕಾಂಗ್ರೆಸ್‌ಗೆ ಶಾಕ್- ಇಬ್ಬರು ಶಾಸಕರು ಬಿಜೆಪಿ ಸೇರ್ಪಡೆ
ಈ ಸಂಬಂಧ ಸೋಮವಾರ ವಿಚಾರಣೆ ನಡೆಸಿದ ಕೋರ್ಟ್, ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಡಿಸೆಂಬರ್ ವರೆಗೆ 43 ಎಫ್‌ಐಆರ್‌ಗಳು ದಾಖಲಾಗಿವೆ. 42 ಪ್ರಕರಣಗಳ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಇನ್ನೂ ಬುಡಕಟ್ಟು ಜನರ ಜಮೀನು ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 8 ರಿಂದ 26ರ ವರೆಗೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ 24 ಪ್ರಕರಣಗಳು ದಾಖಲಾಗಿದೆ ಎಂಬುದನ್ನು ಪರಿಗಣಿಸಿದೆ. ಅಲ್ಲದೇ ಈ ಪ್ರಕರಣದಲ್ಲಿ ಈವರೆಗೆ ಯಾರನ್ನೂ ಬಂಧಿಸದೇ ಇರೋದಕ್ಕೆ ಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ.
ಬಿಜೆಪಿಗೆ ಸೇರಿ ಪಾಪ ತೊಳೆದುಕೊಳ್ಳಿ: ಟಿಎಂಸಿ ಮುಖಂಡನ ಬಂಧನಕ್ಕೆ ಕೋರ್ಟ್ ಆದೇಶಿಸಿದ ನಂತರ ಬಿಜೆಪಿ ನಾಯಕರು ಮಮತಾ ಬ್ಯಾನರ್ಜಿ ಮತ್ತು ಅವರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ಟಿಎಂಸಿ ನಾಯಕರ ಮೇಲೆ ನಡೆಸಿದ್ದ ಇಡಿ ದಾಳಿಗಳನ್ನು ಉಲ್ಲೇಖಿಸುತ್ತಾ, ಬಿಜೆಪಿಗೆ ಸೇರಿ ಪಾಪ ತೊಳೆದುಕೊಳ್ಳಬಹುದು ಎಂದು ಕುಟುಕಿದ್ದಾರೆ.
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಸಂಸದ ಅಭಿಷೇಕ್ ಬ್ಯಾನರ್ಜಿಗೆ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಅಭಿಷೇಕ್ ಬ್ಯಾನರ್ಜಿ ಪತ್ನಿ ರೂಜಿರಾ ಅವರಿಗೂ ನೋಟಿಸ್ ನೀಡಲಾಗಿದೆ.
ಸೆಪ್ಟೆಂಬರ್ 3ರಂದು ಬ್ಯಾಂಕ್ ದಾಖಲೆಗಳ ಜೊತೆ ವಿಚಾರಣೆಗೆ ಹಾಜರಾಗುವಂತೆ ಅಭಿಷೇಕ್ ಬ್ಯಾನರ್ಜಿ ಅವರಿಗೆ ಇಡಿ ಸೂಚಿಸಿದೆ. ಅದೇ ರೀತಿ ಪತ್ನಿ ರೂಜಿರಾ ಅವರಿಗೆ ಸೆಪ್ಟೆಂಬರ್ 1ರಂದು ವಿಚಾರಣೆಗೆ ದಿನಾಂಕ ನೀಡಿದೆ. ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಗಳ ಖಾತೆಗೆ ಇಬ್ಬರು ತಮ್ಮ ಕಂಪನಿಯಿಂದ ಹಣ ವರ್ಗಾವಣೆ ಮಾಡಿರುವ ಆರೋಪ ಕೇಳಿ ಬಂದ ಹಿನ್ನೆಲೆ ಕೇಂದ್ರಿಯ ತನಿಖಾ ಸಂಸ್ಥೆ ಎಫ್‍ಐಆರ್ ದಾಖಲಿಸಿತ್ತು. ನಂತರ ಅಕ್ರಮ ಹಣ ವರ್ಗಾವಣೆ ಆರೋಪದಡಿ ಇಡಿ ಸಹ ಪ್ರಕರಣ ದಾಖಲಿಸಿತ್ತು. ಇದನ್ನೂ ಓದಿ:ದೇಶದ ಆಸ್ತಿ ಬಿಜೆಪಿ, ಮೋದಿಯ ಸ್ವಂತದ್ದಲ್ಲ: ಮಮತಾ ಬ್ಯಾನರ್ಜಿ
ಹಣ ವರ್ಗಾವಣೆ ಬದಲಾಗಿ ಕಂಪನಿ ಜೊತೆ ನಕಲಿ ಒಪ್ಪಂದಗಳನ್ನ ಮಾಡಿಕೊಂಡಿರುವ ಆರೋಪಗಳು ಅಭಿಷೇಕ್ ಬ್ಯಾನರ್ಜಿ ಅವರ ಮೇಲಿದೆ. ಅಭಿಷೇಕ್ ಬ್ಯಾನರ್ಜಿ ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಜೊತೆಗೆ ತೃಣಮೂಲ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಹ ಆಗಿದ್ದಾರೆ. ಇದನ್ನೂ ಓದಿ: ಮುಂದುವರಿದ ಸಂಘರ್ಷ – ಸಿಎಂ ಮಮತಾ ಬ್ಯಾನರ್ಜಿ 9 ಪ್ರಶ್ನೆಗಳಿಗೆ ಕೇಂದ್ರದ ಉತ್ತರ
ಕೋಲ್ಕತಾ: ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ಅಭಿಷೇಕ್ ಬ್ಯಾನರ್ಜಿ ಅವರು ದಾಖಲಿಸಿದ್ದ ಮಾನಹಾನಿ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಫೆಬ್ರವರಿ 22 ರಂದು ಖುದ್ದಾಗಿ ಅಥವಾ ವಕೀಲರ ಮೂಲಕ ವಿಚಾರಣೆಗೆ ಹಾಜರಾಗುವಂತೆ ಅಮಿತ್ ಶಾ ಅವರಿಗೆ ಸಮನ್ಸ್ ನಲ್ಲಿ ಸೂಚಿಸಿದೆ.
2018 ರ ಆಗಸ್ಟ್ 11 ರಂದು ಕೋಲ್ಕತ್ತಾದ ಮಾಯೊ ರಸ್ತೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಅಮಿತ್ ಶಾ ಅವರು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರಿಗೆ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದರು ಎಂದು ದೂರು ದಾಖಲಿಸಲಾಗಿತ್ತು. ಅಭಿಷೇಕ್ ಬ್ಯಾನರ್ಜಿ ಪರ ವಕೀಲ ಸಂಜಯ್ ಬಸು ಅವರು ನ್ಯಾಯಾಲಯದಲ್ಲಿ ವಾದಮಂಡಿಸಿದ್ದರು. ವಾದವನ್ನು ಆಲಿಸಿರುವ ನ್ಯಾಯಾಧೀಶರು ಖುದ್ದು ಅಮಿತ್ ಶಾ ಹಾಜರಾಗುವಂತೆ ತಿಳಿಸಿದ್ದಾರೆ ಎಂದು ಸಂಜಯ್ ಬಸು ತಿಳಿಸಿದ್ದಾರೆ.