Tag: ABP- CVoter Survey

  • ಮಧ್ಯಪ್ರದೇಶ ಚುನಾವಣೆ – ಬಿಜೆಪಿ, ಕಾಂಗ್ರೆಸ್‌ ಮಧ್ಯೆ ನೆಕ್‌ ಟು ನೆಕ್‌ ಫೈಟ್‌

    ಮಧ್ಯಪ್ರದೇಶ ಚುನಾವಣೆ – ಬಿಜೆಪಿ, ಕಾಂಗ್ರೆಸ್‌ ಮಧ್ಯೆ ನೆಕ್‌ ಟು ನೆಕ್‌ ಫೈಟ್‌

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

    ನವದೆಹಲಿ: ಈ ವರ್ಷಾಂತ್ಯದಲ್ಲಿ ನಡೆಯಲಿರುವ ಮಧ್ಯಪ್ರದೇಶ (Madhya Pradesh Election) ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ (BJP) ಮತ್ತು ಕಾಂಗ್ರೆಸ್‌ (Congress) ಮಧ್ಯೆ ಭಾರೀ ಸ್ಪರ್ಧೆ ನಡೆಯಲಿದೆ ಎಂದು ಎಬಿಪಿ ನ್ಯೂಸ್‌ ಹೇಳಿದೆ.

    ಎಬಿಪಿ-ಸಿವೋಟರ್‌ (ABP Cvoter Survey) ಚುನಾವಣಾಪೂರ್ವ ಸಮೀಕ್ಷೆ ಬಿಜೆಪಿ 106-118, ಕಾಂಗ್ರೆಸ್‌ 108-120 ಸ್ಥಾನ ಪಡೆಯಲಿದೆ. ಇತರರು 0-8 ಸ್ಥಾನಗಳನ್ನು ಪಡೆಯಬಹುದು ಎಂದು ಭವಿಷ್ಯ ನುಡಿದಿದೆ. ಎರಡು ಪಕ್ಷಗಳು 40% ಮತಗಳನ್ನು ಪಡೆಯಲಿದೆ ಎಂದು ಹೇಳಿದೆ.

    2018ಕ್ಕೆ ಹೋಲಿಸಿದರೆ 36.4% ಇದ್ದ ಕಾಂಗ್ರೆಸ್‌ ಮತ ಪ್ರಮಾಣ 41.4% ಏರಿಕೆಯಾಗಲಿದೆ. ಕಳೆದ ಬಾರಿ 44.9% ಇದ್ದ ಬಿಜೆಪಿ ಮತ ಪ್ರಮಾಣ ಈ ಬಾರಿ 41.3% ಇಳಿಕೆಯಾಗಲಿದೆ. ಮಾಯಾವತಿ ನೇತೃತ್ವದ ಬಿಎಸ್‌ಪಿ 2% ಮತವನ್ನು ಪಡೆಯಬಹುದು. ಸರ್ಕಾರ ರಚನೆಯಲ್ಲಿ ಪಕ್ಷೇತರರು ನಿರ್ಣಯಕ ಪಾತ್ರವಹಿಸಲಿದ್ದಾರೆ ಎಂದು ಹೇಳಿದೆ. ಒಟ್ಟು 230 ಸ್ಥಾನಗಳಿರುವ ಮಧ್ಯಪ್ರದೇಶದಲ್ಲಿ ಬಹುಮತಕ್ಕೆ 116 ಸ್ಥಾನಗಳ ಅಗತ್ಯವಿದೆ.

    2018ರಲ್ಲಿ ಏನಾಗಿತ್ತು?
    ಕಾಂಗ್ರೆಸ್‌ 114 ಸ್ಥಾನ ಪಡೆದರೆ ಬಿಜೆಪಿ 109 ಸ್ಥಾನ ಗೆದ್ದಿತ್ತು. ಈ ಸಂದರ್ಭದಲ್ಲಿ4 ಮಂದಿ ಪಕ್ಷೇತರರ ಬೆಂಬಲ ಪಡೆದು ಕಾಂಗ್ರೆಸ್‌ ಬಹುಮತ ಸಾಬೀತು ಪಡಿಸಿತ್ತು. ಕಮಲ್‌ನಾಥ್‌ ಮುಖ್ಯಮಂತ್ರಿ ಪಟ್ಟವನ್ನು ಏರಿದ್ದರು. ಇದನ್ನೂ ಓದಿ: ತನ್ನ 15 ಎಕರೆ ಆಸ್ತಿಯನ್ನು ಮೋದಿ ಹೆಸರಿಗೆ ಬರೆದುಕೊಡುವುದಾಗಿ 100ರ ವೃದ್ಧೆ ಘೋಷಣೆ

     

    ನಂತರ ಆಪರೇಷನ್‌ ಕಮಲ ನಡೆದು ಜ್ಯೋತಿರಾದಿತ್ಯ ಸಿಂಧಿಯಾ ಸೇರಿ 22 ಮಂದಿ ಕಾಂಗ್ರೆಸ್‌ ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾದರು. ನಂತರ 2020 ಮಾರ್ಚ್‌ 23 ರಂದು ಶಿವರಾಜ್‌ ಸಿಂಗ್‌ ಚೌಹಾಣ್‌ ಮುಖ್ಯಮಂತ್ರಿ ಪಟ್ಟವನ್ನು ಅಲಂಕರಿಸಿದರು. ಸದ್ಯ ಬಿಜೆಪಿಯಲ್ಲಿ 127 ಮಂದಿ ಶಾಸಕರಿದ್ದರೆ ಕಾಂಗ್ರೆಸ್‌ನಲ್ಲಿ 96 ಮಂದಿ ಶಾಸಕರಿದ್ದಾರೆ.

    2018-19ರ ಅವಧಿಯ 18 ತಿಂಗಳು ಹೊರತುಪಡಿಸಿ ಕಳೆದ 20 ವರ್ಷಗಳಿಂದ ಮಧ್ಯಪ್ರದೇಶವನ್ನು ಬಿಜೆಪಿ ಆಡಳಿತ ನಡೆಸುತ್ತಿದೆ.

  • ಕಾಂಗ್ರೆಸ್‍ಗೆ ಪೂರ್ಣ ಬಹುಮತ : ಎಬಿಪಿ ಸಿ- ವೋಟರ್ ಸಮೀಕ್ಷೆ

    ಕಾಂಗ್ರೆಸ್‍ಗೆ ಪೂರ್ಣ ಬಹುಮತ : ಎಬಿಪಿ ಸಿ- ವೋಟರ್ ಸಮೀಕ್ಷೆ

    ಕಾಂಗ್ರೆಸ್‌ಗೆ 115-127 ಸ್ಥಾನ ಕೊಟ್ಟ ಎಬಿಪಿ ಸಿ- ವೋಟರ್
    – ಝೀ ನ್ಯೂಸ್ ಸಮೀಕ್ಷೆಯಲ್ಲಿ ಅತಂತ್ರ ತೀರ್ಪು

    ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಈಗಾಗಲೇ ಪ್ರಕಟವಾಗಿದ್ದು, ವಿಧಾನಸಭೆ ಗದ್ದುಗೆ ಏರಲು ಮೂರೂ ಪಕ್ಷಗಳು ನಾನಾ ರಣತಂತ್ರಗಳನ್ನು ರೂಪಿಸುತ್ತಿದೆ. ಇದರ ಬೆನ್ನಲ್ಲೇ ಎಬಿಪಿ ಸಿ- ವೋಟರ್ ಸಮೀಕ್ಷೆ ಪಟ್ಟಿ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದೆ.

    ಎಬಿಪಿ ಸಿ- ವೋಟರ್ ಸಮೀಕ್ಷೆ ಈ ಕೆಳಗಿನಂತಿದೆ: ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ 115-127 ಸೀಟ್ ಬರುವ ನಿರೀಕ್ಷೆಯಿದೆ. ಅದೇ ರೀತಿ ಬಿಜೆಪಿಗೆ 68-80, ಜೆಡಿಎಸ್‍ಗೆ 23-35 ಹಾಗೂ ಇತರೆ 0-02 ಸೀಟ್ ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ.

    ಇನ್ನೂ ಝೀ ನ್ಯೂಸ್ ಕೂಡ ಸಮೀಕ್ಷೆ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಬಾರಿ ರಾಜ್ಯದಲ್ಲಿ ಯಾರಿಗೂ ಬಹುಮತವಿಲ್ಲ ಎಂದು ತಿಳಿಸಿದೆ. ಝೀ ನ್ಯೂಸ್‍ನ ಸಮೀಕ್ಷೆ ಈ ರೀತಿಯಿದೆ. ಬಿಜೆಪಿ 96 -106 ಸೀಟ್ ಪಡೆದರೆ, ಕಾಂಗ್ರೆಸ್ 88-98 ಸೀಟ್, ಜೆಡಿಎಸ್ – 23-33 ಹಾಗೂ ಇತರೆ 02-07 ಸೀಟ್ ಪಡೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ. Karnataka Election 2023- ಮೇ 10 ರಂದು ಮತದಾನ, ಮೇ 13ಕ್ಕೆ ಫಲಿತಾಂಶ

    ಬಿಎಸ್‌ವೈ ಪ್ರಭಾವ ಬೀರುತ್ತಾರಾ?: ಈ ಬಾರಿ ಕರ್ನಾಟಕ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಬಿಜೆಪಿಗೆ ಬಹುಮತ ತಂದುಕೊಡಲು ಪ್ರಭಾವ ಬೀರುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಜೀ ನ್ಯೂಸ್ ನಡೆಸಿದ್ದ ಸಮೀಕ್ಷೆಯಲ್ಲಿ ರಾಜ್ಯದ ಜನತೆಗೆ ಬಿ.ಎಸ್. ಯಡಿಯೂರಪ್ಪ ಅವರ ಬದಲಿಗೆ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದು ಪಕ್ಷಕ್ಕೆ ಅಧಿಕಾರವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಕೇಳಿತ್ತು. ಇದಕ್ಕೆ ಶೇ.31ರಷ್ಟು ಮಂದಿ ಕೇಸರಿ ಪಾಳಯಕ್ಕೆ ಇದರಿಂದ ಲಾಭವಾಗಲಿದೆ ಎಂದು ಹೇಳಿದರೆ, ಶೇ.21ರಷ್ಟು ಮಂದಿ ಬಿಜೆಪಿಗೆ ನಷ್ಟ ಎಂದು ಹೇಳಿದ್ದಾರೆ.

    ಚುನಾವಣಾ ಆಯೋಗದ (Election Commission) ಮುಖ್ಯಸ್ಥ ರಾಜೀವ್ ಕುಮಾರ್ ಕರ್ನಾಟಕ ವಿಧಾನಸಭಾ ಚುನಾವಣಾ (Karnataka Vidhanasabha Election 2023) ದಿನಾಂಕವನ್ನು ಪ್ರಕಟಿಸಿದ್ದಾರೆ. ಏಪ್ರಿಲ್‌ 13ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದಾರೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್‌ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್‌ 21 ನಾಮಪತ್ರ ಪರಿಶೀಲನೆ ನಡೆಲಿದ್ದು, ಏಪ್ರಿಲ್‌ 24 ನಾಮಪತ್ರ ವಾಪಸ್ಸಿಗೆ ಕೊನೆಯ ದಿನವಾಗಿದೆ.  ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಅಲ್ಲದೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ.