Tag: Abuse

  • ಕಾಫಿನಾಡು ಚಂದುಗೆ ತವರೂರಿನಲ್ಲೇ ನಿಂದನೆ: ನಮ್ಮಿಂದ ನೀನು ಹೋಗಲೋ ಎಂದ ಅಭಿಮಾನಿ

    ಕಾಫಿನಾಡು ಚಂದುಗೆ ತವರೂರಿನಲ್ಲೇ ನಿಂದನೆ: ನಮ್ಮಿಂದ ನೀನು ಹೋಗಲೋ ಎಂದ ಅಭಿಮಾನಿ

    ದಿನದಿಂದ ದಿನಕ್ಕೆ ಕಾಫಿನಾಡು ಚಂದು ಜನಪ್ರಿಯತೆ ಹೆಚ್ಚಾಗುತ್ತಿದೆ. ನಾನು ಪುನೀತ್ ಅಣ್ಣ, ಶಿವಣ್ಣನ ಅಭಿಮಾನಿ ಎಂದು ಹೇಳುತ್ತಲೇ ಸೋಷಿಯಲ್ ಮೀಡಿಯಾದಲ್ಲಿ ಚಂದು ಟ್ರೆಂಡ್ ಸೆಟ್ ಮಾಡುತ್ತಿದ್ದಾರೆ. ಅಭಿಮಾನಿಗಳ ಸಂಖ್ಯೆಯನ್ನೂ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಮೊನ್ನೆಯಷ್ಟೇ ತಮ್ಮ ನೆಚ್ಚಿನ ನಟ ಶಿವರಾಜ್ ಕುಮಾರ ಅವರನ್ನು ಭೇಟಿ ಮಾಡಿ ಖುಷಿಯಲ್ಲಿದ್ದರು. ಆ ಖುಷಿ ತುಂಬಾ ದಿನ ಉಳಿದಿಲ್ಲ.

    ಕಾಫಿನಾಡು ಚಂದು ಕೇವಲ ಬರ್ತಡೇ ಸಾಂಗ್ ಮೂಲಕ ಹೊಟ್ಟೆ ತುಂಬಿಸಿಕೊಳ್ಳುತ್ತಿಲ್ಲ. ಅವರ ವೃತ್ತಿ ಆಟೋ ಓಡಿಸುವುದು. ನಿತ್ಯವೂ ಬರೀ ಹಾಡುಗಳನ್ನೇ ಹಾಡುತ್ತಾ ಕೂತರೆ ಹೊಟ್ಟೆ ತುಂಬಬೇಕಲ್ಲ. ಹಾಗಾಗಿ ಇಂತಿಷ್ಟು ವೇಳೆಯನ್ನು ಅವರು ಆಟೋ ಓಡಿಸುವುದಕ್ಕಾಗಿ ಮೀಸಲಿಟ್ಟಿದ್ದಾರೆ. ಈಗ ಅದೇ ಅವರ ನಿಂದನೆಗೆ ಕಾರಣವಾಗಿದೆ. ಆಟೋ ಓಡಿಸುವ ವೇಳೆ ಅಹಿತಕರ ಘಟನೆಯೊಂದು ನಡೆದಿದ್ದು, ಅದೂ ಚಂದು ಅವರ ತವರೂರಿನಲ್ಲೇ ಎನ್ನುವುದು ವಿಷಾದನೀಯ. ಇದನ್ನೂ ಓದಿ:ಜಯಶ್ರೀ ಜೊತೆ ಸೋನು ಶ್ರೀನಿವಾಸ್ ಗೌಡ ಕಿರಿಕ್

    ಚಂದು ಆಟೋ ಓಡಿಸುತ್ತಿದ್ದಾಗ ವ್ಯಕ್ತಿಯೊಬ್ಬ ಹಾಡೊಂದನ್ನು ಮಾಡಿಕೊಡುವಂತೆ ಕೇಳುತ್ತಾರೆ. ಅದಕ್ಕೆ ಚಂದು ಒಪ್ಪುವದಿಲ್ಲ. ನಾನೀಗ ಆಟೋ ಓಡಿಸುತ್ತಿದ್ದೇನೆ. ಸಂಜೆ ನಂತರ ಬನ್ನಿ ಮಾಡಿಕೊಡುವೆ ಎಂದು ಕೇಳಿಕೊಳ್ಳುತ್ತಾರೆ. ಆದರೆ, ಆ ವ್ಯಕ್ತಿ ಅದನ್ನು ಒಪ್ಪುವುದಿಲ್ಲ. ಈಗಲೇ ಮಾಡಿಕೊಡುವಂತೆ ಒತ್ತಡ ಹಾಕುತ್ತಾರೆ. ಅದಕ್ಕೆ ಜಗ್ಗದ ಚಂದು ಅಲ್ಲಿಂದ ಹೊರಡಲು ಯತ್ನಿಸುತ್ತಾರೆ. ಆಗ ಆ ವ್ಯಕ್ತಿಯು ‘ನೀನು ಇದೀಗ ಬದುಕ್ತಿರೋದೇ ನಮ್ಮಂಥವರಿಂದ. ಹೋಗಲೋ ಎಂದು ನಿಂದಿಸುತ್ತಾರೆ. ಆ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    Live Tv
    [brid partner=56869869 player=32851 video=960834 autoplay=true]

  • ಫಿಲ್ಮ್ ಚೇಂಬರ್ ನಲ್ಲಿ ಅಕ್ರಮ : ಬಾಂಬ್ ಸಿಡಿಸಿದ ರಾಜೇಂದ್ರ ಸಿಂಗ್ ಬಾಬು

    ಫಿಲ್ಮ್ ಚೇಂಬರ್ ನಲ್ಲಿ ಅಕ್ರಮ : ಬಾಂಬ್ ಸಿಡಿಸಿದ ರಾಜೇಂದ್ರ ಸಿಂಗ್ ಬಾಬು

    ನಾಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಹೆಸರಾಂತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಹೊಸ ಬಾಂಬ್ ಒಂದನ್ನು ಸಿಡಿಸಿದ್ದಾರೆ. ಈ ಬಾಂಬ್ ಸದ್ಯ ಸಿನಿಮಾ ರಂಗದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಅಲ್ಲದೇ, ವಾಣಿಜ್ಯ ಮಂಡಳಿಯಲ್ಲೂ ಹೀಗೂ ಆಗಿದೆಯಾ ಎನ್ನುವ ಪ್ರಶ್ನೆ ಎದ್ದಿದೆ. ಇದನ್ನೂ ಓದಿ : ಹಾಲಿವುಡ್ ಖ್ಯಾತ ನಟ ರೇ ಲಿಯೊಟ್ಟಾ ಮಲಗಿದ್ದಾಗಲೇ ನಿಧನ

    ಐದಾರು ತಿಂಗಳು ಹಿಂದೆಯಷ್ಟೇ ರಾಜೇಂದ್ರ ಸಿಂಗ್ ಬಾಬು ಮತ್ತು ಇಪ್ಪತ್ತಕ್ಕೂ ಹೆಚ್ಚು ರಾಷ್ಟ್ರ ಪ್ರಶಸ್ತಿ ಪಡೆದ ನಿರ್ಮಾಪಕರು ಮತ್ತು ನಿರ್ದೇಶಕರು ಫಿಲ್ಮ್ ಚೇಂಬರ್ ಗೆ ಹೋಗಿದ್ದರಂತೆ. ಅಷ್ಟೂ ಜನರು ಫಿಲ್ಮ್ ಚೇಂಬರ್ ನಲ್ಲಿ ಆದ ಅಕ್ರಮದ ಕುರಿತು ದೂರು ನೀಡಿದರಂತೆ. ಆದರೆ, ಹಾಲಿ ಇರುವ ಕಮೀಟಿಯಿಂದ ಯಾವುದೇ ಉತ್ತರ ಬಂದಿಲ್ಲ ಎಂದಿದ್ದಾರೆ. ಇದನ್ನೂ ಓದಿ  : ಸಿನಿಮಾವಾಗಲಿದೆ ‘ಟೈಂಪಾಸ್’ ಬೆಡಗಿ ಪ್ರೋತಿಮಾ ಬೇಡಿ ಬಯೋಪಿಕ್

    ಮಾಧ್ಯಮಗಳ ಜೊತೆ ಮಾತನಾಡಿದ ರಾಜೇಂದ್ರ ಸಿಂಗ್ ಬಾಬು ಅವರು, ‘ನಾವೆಲ್ಲ ವಾಣಿಜ್ಯ ಮಂಡಳಿಗೆ ಹೋಗಿ ಕಾಫಿ ಮಿಷನ್ ಗಾಗಿ 26 ಸಾವಿರ ಖರ್ಚು ಮಾಡಿದ್ದೀರಿ. ಬಾತ್ ರೂಮ್ ಕಟ್ಟಲು 26 ಲಕ್ಷ, ಇನ್ನಾವುದೋ ಕಾರಣಕ್ಕಾಗಿ 40 ಲಕ್ಷ ಖರ್ಚು ಮಾಡಲಾಗಿದೆ. ಅಲ್ಲದೇ, ನಾನಾ ರೀತಿಯಲ್ಲಿ ಹಣ ದುರ್ಬಳಕೆ ಆಗಿದೆ. ಇದಕ್ಕೆ ಉತ್ತರ ಕೊಡಿ ಎಂದು ಕೇಳಿದೆವು. ಯಾರಿಂದಲೂ ಉತ್ತರ ಬರಲಿಲ್ಲ’ ಎಂದು ಆರೋಪ ಮಾಡಿದ್ದಾರೆ. ಇದನ್ನೂ ಓದಿ : ವಾರಕ್ಕೆ ಹತ್ತತ್ತು ಸಿನಿಮಾಗಳು ರಿಲೀಸ್ : ಥಿಯೇಟರ್ ಮಾತ್ರ ಖಾಲಿ ಖಾಲಿ

    ಇದೇ ಸಂದರ್ಭದಲ್ಲಿ ಏಳು ವಾರ ಬಿಟ್ಟು ಬೇರೆ ಭಾಷೆಯ ಸಿನಿಮಾಗಳು ಕನ್ನಡದಲ್ಲಿ ರಿಲೀಸ್ ಆಗಲಿ ಅಂತ ಡಾ.ರಾಜ್ ಕುಮಾರ್ ಅವರ ನೇತೃತ್ವದಲ್ಲಿ ಹೋರಾಟ ಮಾಡಿದೆವು. ವಿಧಾನ ಸಭೆಯ ಮುತ್ತಿಗೆ ಹಾಕಿದೆವು. ಇದೇ ಫಿಲ್ಮ್ ಚೇಂಬರ್ ನವರು ಆಗ ನಮ್ಮ ಹೋರಾಟದ ವಿರುದ್ಧ ಕೋರ್ಟಿಗೆ ಹೋಗಲು ಸಿದ್ಧರಾಗಿದ್ದರು. ಫಿಲ್ಮ್ ಚೇಂಬರ್ ಕನ್ನಡ ಪರವಾಗಿ ಕೆಲಸ ಮಾಡಬೇಕು ಎಂದು ಚುನಾವಣಾ ಸಂದರ್ಭದಲ್ಲಿ ಹಲವು ಘಟನೆಗಳನ್ನು ನೆನಪಿಸಿಕೊಂಡಿದ್ದಾರೆ.

  • ಕಾಫಿನಾಡ ನಗರಸಭೆ ಅಧ್ಯಕ್ಷ, ಆಯುಕ್ತರ ಮೇಲೆ ಕೇಸ್ ದಾಖಲು

    ಕಾಫಿನಾಡ ನಗರಸಭೆ ಅಧ್ಯಕ್ಷ, ಆಯುಕ್ತರ ಮೇಲೆ ಕೇಸ್ ದಾಖಲು

    ಚಿಕ್ಕಮಗಳೂರು: ನಗರಸಭೆ ಸದಸ್ಯರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಿನ್ನೆಲೆ ನಗರಸಭೆ ಅಧ್ಯಕ್ಷರು ಹಾಗೂ ಆಯುಕ್ತರ ಮೇಲೆ ಪ್ರಕರಣ ದಾಖಲಾಗಿದೆ.

    ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಹಾಗೂ ಆಯುಕ್ತ ಬಸವರಾಜ್ ಮೇಲೆ ದೂರು ದಾಖಲಿಸಲಾಗಿದೆ. ನಗರಸಭೆ ಸದಸ್ಯ ಗೋಪಿ ಅವರನ್ನು ಜಿಲ್ಲೆಯ ನಗರಸಭೆಯ ಅಧಿಕೃತ ವಾಟ್ಸಾಪ್ ಗ್ರೂಪಿನಿಂದ ತೆಗೆದು ಹಾಕಲಾಗಿತ್ತು. ಆ ವಿಚಾರದ ಬಗ್ಗೆ ಹಾಗೂ ತಮ್ಮ ವಾರ್ಡಿನ ಕೆಲಸದ ನಿಮಿತ್ತ ಅಧ್ಯಕ್ಷರ ಬಳಿ ಚರ್ಚಿಸಲು ಹೋಗಿದ್ದರು. ಈ ವೇಳೆ ನಗರಸಭೆ ಆಯುಕ್ತ ಬಸವರಾಜ್ ಕೂಡ ಅಲ್ಲೇ ಇದ್ದರು. ಇದನ್ನೂ ಓದಿ: ಗೋಮಾಂಸವನ್ನು ಹಿಂದೂಗಳು, ಕ್ರಿಶ್ಚಿಯನ್ ಕೂಡ ತಿನ್ನುತ್ತಾರೆ: ಸಿದ್ದರಾಮಯ್ಯ

    ಈ ವೇಳೆ ಅಧ್ಯಕ್ಷರು ಗೋಪಿ ಅವರಿಗೆ ಏನು ಮಾಡಿಕೊಳ್ಳುತ್ತೀಯಾ ಮಾಡಿಕೋ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಆಗ ಅಲ್ಲೇ ಇದ್ದ ಆಯುಕ್ತ ಬಸವರಾಜ್ ಕೂಡಾ ನೀನು ಸಿಎಂಸಿ ಗ್ರೂಪಿನಲ್ಲಿ ಇರಲು ಲಾಯಕ್ಕಿಲ್ಲ. ಅದಕ್ಕೆ ತೆಗೆದು ಹಾಕಿದ್ದೇನೆ. ನಿನ್ನ ಕೈಯಲ್ಲಿ ಏನು ಮಾಡಲು ಸಾಧ್ಯ. ಏನು ಬೇಕಾದರು ಮಾಡಿಕೋ ಎಂದು ಅವರೂ ಕೂಡ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಇದನ್ನೂ ಓದಿ: ಮದುವೆ ದಿಬ್ಬಣದಲ್ಲಿ ಟ್ರ್ಯಾಕ್ಟರ್ ಚಾಲಕನಾದ ಶಾಸಕ ರೇಣುಕಾಚಾರ್ಯ

    POLICE JEEP

    ನಗರಸಭೆ ಸದಸ್ಯರ ದೂರಿನ ಅನ್ವಯ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಅಧ್ಯಕ್ಷ ವೇಣು ಹಾಗೂ ಆಯುಕ್ತ ಬಸವರಾಜ್ ವಿರುದ್ಧ ಕಲಂ 504, (ಉದ್ದೇಶಪೂರ್ವಕ ಅವಮಾನ) 506 (ವಂಚನೆ)ರ ಅಡಿ ಪ್ರಕರಣ ದಾಖಲಾಗಿದೆ.

  • 3 ವರ್ಷದಿಂದ ದೈಹಿಕ ಸಂಪರ್ಕ ಬೆಳೆಸಿ ವಂಚನೆ- ಸತ್ಯ ತಿಳಿದ ಬಳಿಕ ಯುವತಿ ದೂರು

    3 ವರ್ಷದಿಂದ ದೈಹಿಕ ಸಂಪರ್ಕ ಬೆಳೆಸಿ ವಂಚನೆ- ಸತ್ಯ ತಿಳಿದ ಬಳಿಕ ಯುವತಿ ದೂರು

    ಪಾಟ್ನಾ: ವ್ಯಕ್ತಿಯೋರ್ವ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬಿಹಾರದ ಜಮುಯಿಯಲ್ಲಿ ನಡೆದಿದೆ.

    ಸೋನು ರಾಜ್ ಆರೋಪಿ. ಈತ ಜಮುಯಿ ಝಾಝಾ ನಿವಾಸಿಯ ಯುವತಿಗೆ ತನಗೆ ಇನ್ನೂ ಮದುವೆಯಾಗಿಲ್ಲ. ನಿನ್ನನ್ನು ಮದುವೆಯಾಗುತ್ತೇನೆ ಎಂದು ಹೇಳಿ ನಂಬಿಸಿದ್ದನು. ಇದನ್ನೇ ಲಾಭ ಪಡೆದುಕೊಂಡ ಆತ ಅವಳೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಆದರೆ ಅವನಿಗೆ ಮದುವೆಯಾಗಿರುವುದರ ಬಗ್ಗೆ ಸತ್ಯ ತಿಳಿದ ಯುವತಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಸೋನು ರಾಜ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ.

    STOP RAPE

    ದೂರಿನಲ್ಲಿ ಸೋನು ರಾಜ್ ಇನ್ನೂ ತನಗೆ ಮದುವೆ ಆಗಿಲ್ಲ ಎಂದು ನಂಬಿಸಿ, ಮದುವೆಯಾಗುವುದಾಗಿ ಭರವಸೆ ನೀಡಿದ್ದ. ಜೊತೆಗೆ ಸುಳ್ಳು ಹೇಳಿ 3 ವರ್ಷಗಳ ಕಾಲ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಯುವತಿ ಆರೋಪಿಸಿದ್ದಾಳೆ. ಈ ಬಗ್ಗೆ ಯುವತಿಯ ತಂದೆ ಮಾತನಾಡಿ, ಮಗಳ ಮದುವೆ ಮಾಡಲು ಯೋಚಿಸಿದಾಗಲೆಲ್ಲಾ ಸೋನುರಾಜ್ ಆಕೆಯನ್ನು ಅಪಹರಿಸುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ಹೇಳಿದ್ದಾರೆ. ಇದನ್ನೂ ಓದಿ: 16ರ ಹುಡುಗಿ ಮೇಲೆ ಅತ್ಯಾಚಾರ- ಕಾಂಡೋಮ್ ಬಳಸಿದ್ದಕ್ಕಾಗಿ ಜಾಮೀನು ಕೊಟ್ಟ ಹೈಕೋರ್ಟ್

    ಇದೇ ವೇಳೆ ಡಿಎಸ್ಪಿ ರಾಕೇಶ್ ಕುಮಾರ್  ಮಾತನಾಡಿ, ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ದೂರಿನ ಅನ್ವಯ ಪೊಲೀಸರು ಕ್ರಮ ಕೈಗೊಂಡಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ನಡೀತಿರೋ ಬೆಳವಣಿಗೆಗಳು ಆಡಳಿತ ಪಕ್ಷಕ್ಕೆ ಗೌರವ ತರುವುದಿಲ್ಲ: ಮಾಧುಸ್ವಾಮಿ ಅಸಮಾಧಾನ

  • ಮಾಹಿತಿ ಕೇಳಲು ಹೋದ ರೈತರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಅಧಿಕಾರಿ

    ಮಾಹಿತಿ ಕೇಳಲು ಹೋದ ರೈತರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಅಧಿಕಾರಿ

    ಕಲಬುರಗಿ: ಕೃಷಿ ಹೊಂಡದ ಮಾಹಿತಿ ಕೇಳಲು ಹೋದ ರೈತರಿಗೆ ಅಧಿಕಾರಿಯೋರ್ವ ಅವಾಚ್ಯ ಪದಗಳಿಂದ ನಿಂದಿಸಿದ ಘಟನೆ ಜಿಲ್ಲೆಯ ಅಫಜಲಪುರ್ ತಾಲೂಕಿನ ಕೃಷಿ ಇಲಾಖೆಯಲ್ಲಿ ನಡೆದಿದೆ.

    ತಾಲೂಕಿನ ಚಿಂಚೋಳಿ ಗ್ರಾಮದ ರೈತರು ನಾವು ದಾಖಲಾತಿ ನೀಡಿದ್ದರೂ ನಮ್ಮ ಜಮೀನಿನಲ್ಲಿ ಮಾತ್ರ ಯಾಕೆ ಕೃಷಿ ಹೊಂಡ ನಿರ್ಮಿಸಿಲ್ಲ ಅಂತಾ ಅಧಿಕಾರಿಯನ್ನು ಪ್ರಶ್ನಿಸಿದ್ದಾರೆ. ಇದರಿಂದ ಕೊಪಗೊಂಡ ಅಧಿಕಾರಿ ನಿಮ್ಮ ಫಾರಂ ರಿಜಕ್ಟ್ ಮಾಡಿ ಹರಿದು ಹಾಕಿದ್ದೇನೆ. ಸಿಒಡಿ-ಸಿಬಿಐ ಅಲ್ಲದೇ ಯಾರಿಗಾದರೂ ಕರೆದುಕೊಂಡು ಬನ್ನಿ ನಾನು ನೋಡ್ಕೊತೀನಿ ಅಂತ ಅವಾಚ್ಯ ಶಬ್ಧಗಳಿಂದ ರೈತರಿಗೆ ನಿಂದಿಸಿದ್ದಾನೆ.

    ಅಧಿಕಾರಿ ಅಸಭ್ಯ ವರ್ತನೆಗೆ ರೈತರು ಬೇಸತ್ತು ನಾವು ನಿಮ್ಮ ಮೇಲೆ ಯಾವ ತನಿಖೆಗೂ ಹಾಕಲ್ಲ, ಹಾಗೆ ಮಾಡೋದಾಗಿದ್ರೆ ನಿಮ್ಮ ಬಳಿ ಯಾಕೆ ಬರುತ್ತಿದ್ದೇವು? ಅಧಿಕಾರಿಗಳೇ ಹೀಗೆ ಹೇಳಿದರೆ ರೈತರು ಏನು ಮಾಡಬೇಕು ಎಂದು ಕೇಳಿದ್ದಾರೆ. ಅದಕ್ಕೆ ಕೋಪಗೊಂಡ ಅಧಿಕಾರಿ ಏನಾದರೂ ಮಾಡಿಕೊಳ್ಳಿ ನಾನು ಯಾರಿಗೂ ಹೆದರೋದಿಲ್ಲ ಎನ್ನುವ ರೀತಿ ಉತ್ತರ ನೀಡಿ ರೈತರಿಗೆ ಬಾಯಿಗೆ ಬಂದ ಹಾಗೆ ಬೈದಿದ್ದಾನೆ.

    ಈ ಘಟನೆಯನ್ನು ಸ್ಥಳದಲ್ಲಿದ್ದವರು ಮೊಬೈಲ್‍ನಲ್ಲಿ ಸೆರೆಹಿಡಿದಿದ್ದಾರೆ. ಅಲ್ಲದೆ ಅಧಿಕಾರಿಯ ದರ್ಪದ ವರ್ತನೆ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಳಪೆ ಕಾಮಗಾರಿ ಪ್ರಶ್ನಿಸಿದ ಜನರಿಗೆ ಶಾಸಕ ಲಮಾಣಿ ಪುತ್ರ ಅವಾಜ್!

    ಕಳಪೆ ಕಾಮಗಾರಿ ಪ್ರಶ್ನಿಸಿದ ಜನರಿಗೆ ಶಾಸಕ ಲಮಾಣಿ ಪುತ್ರ ಅವಾಜ್!

    ಗದಗ: ರಸ್ತೆ ಕಾಮಗಾರಿ ಗುಣಮಟ್ಟ ಕಳಪೆಯಾಗಿದೆ, ಸರಿಪಡಿಸಿ ಎಂದು ಕಾಮಗಾರಿ ತಡೆದ ಸಾರ್ವಜನಿಕರಿಗೆ ಶಾಸಕ ಲಮಾಣಿ ಪುತ್ರ ಲಕ್ಷ್ಮೇಶ್ವರ ಪಟ್ಟಣದಲ್ಲಿ ಅವಾಜ್ ಹಾಕಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

    ಲಕ್ಷ್ಮೇಶ್ವರ ಪಟ್ಟಣದ ಬಸ್ ನಿಲ್ದಾಣದಿಂದ ಗದಗ ನಾಕಾವರೆಗೆ ರಸ್ತೆ ಕಾಮಗಾರಿ ನಡೆಯುತ್ತಿತ್ತು. ಈ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಒಳ್ಳೆ ಕಾಮಗಾರಿ ಮಾಡಿ ಎಂದು ಸ್ಥಳಿಯರು ಪ್ರತಿಭಟಿಸಿ ಸ್ಥಗಿತಗೊಳಿಸಿದ್ದರು.

    ಈ ವಿಚಾರ ತಿಳಿದು ಗುತ್ತಿಗೆದಾರರ ಬೆಂಗಾವಲಾಗಿ ಬಂದ ಶಾಸಕರ ಪುತ್ರ ಮಹೇಶ ಲಮಾಣಿ ಜನರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಇದರಿಂದ ಅಂಬೇಡ್ಕರ್ ಸೇನಾ ಸಮಿತಿಯಿಂದ ಸಾರ್ವಜನಿಕರು ರಸ್ತೆ ತಡೆದು, ಜೆಸಿಬಿ ಅಡ್ಡನಿಲ್ಲಿಸಿ ಪ್ರತಿಭಟನೆ ಮಾಡಿದರು. ಸ್ಥಳಕ್ಕೆ ಆಗಮಿಸಿ ಮಹೇಶ ಲಮಾಣಿ ಕ್ಷಮೆ ಕೇಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೋರ್ಟ್ ಆವರಣದಲ್ಲಿ ಇನ್ಸ್‌ಪೆಕ್ಟರ್‌ಗೆ ಆವಾಜ್ ಹಾಕಿದ ಕೈದಿ

    ಕೋರ್ಟ್ ಆವರಣದಲ್ಲಿ ಇನ್ಸ್‌ಪೆಕ್ಟರ್‌ಗೆ ಆವಾಜ್ ಹಾಕಿದ ಕೈದಿ

    ಧಾರವಾಡ (ಹುಬ್ಬಳ್ಳಿ): ಜೈಲು ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಕೋರ್ಟ್ ಆವರಣದಲ್ಲಿಯೇ ಅಶ್ಲೀಲ ಪದ ಬಳಸಿ ಇನ್ಸ್‌ಪೆಕ್ಟರ್‌ಗೆ ಅವಾಜ್ ಹಾಕಿರುವ ಘಟನೆ ನಗರದಲ್ಲಿ ನಿನ್ನೆ ನಡೆದಿದೆ. ಉಡುಪಿ ಮೂಲದ ನಾಗರಾಜ್ ಬಳಿಗಾರ್ ಅವಾಚ್ಯ ಪದಗಳಿಂದ ನಿಂದಿಸಿದ ಕೈದಿ. ಅಶೋಕ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜಗದೀಶ್ ಹಂಚನಾಳ ಅವರಿಗೆ ನಾಗರಾಜ್ ಆವಾಜ್ ಹಾಕಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ.

    ಘಟನೆಯ ವಿವರ: ಸರಣಿ ಕಳ್ಳತನ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ನಾಗರಾಜ್ ನನ್ನು ಅಶೋಕ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಜಗದೀಶ್ ಹಂಚನಾಳ ನೇತೃತ್ವದ ತಂಡ ಬಂಧಿಸಿತ್ತು. ಬಳಿಕ ಆತನನ್ನು ಹುಬ್ಬಳ್ಳಿಯ 5ನೇ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ 8 ವರ್ಷ ಜೈಲು ಶಿಕ್ಷಿ ವಿಧಿಸಿ ತೀರ್ಪು ನೀಡಿತ್ತು. ಕೋರ್ಟ್ ನಿಂದ ಹೊರ ಬಂದು ಪೊಲೀಸ್ ವಾಹನದಲ್ಲಿ ಕುಳಿತಿದ್ದ ನಾಗರಾಜ್, ಜೈಲಿನಿಂದ ಹೊರಗಡೆ ಬಂದ ಮೇಲೆ ನಿನ್ನ ನೋಡಿಕೊಳ್ಳುತ್ತೇನೆ. ಧಮ್ ಇದ್ರೆ ಒಬ್ಬನೇ ಬಾ ನೋಡೋಣ ಅಂತ ಇನ್ಸ್‌ಪೆಕ್ಟರ್‌ ಜಗದೀಶ್ ಹಂಚನಾಳ ಅವರಿಗೆ ಆವಾಜ್ ಹಾಕಿದ್ದಾನೆ.

    ಅವಾಚ್ಯ ಪದಗಳಿಂದ ನಿಂದಿಸಿ, ಬೈಯುತ್ತಿದ್ದ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಈ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ವಿಡಿಯೋ ವೈರಲ್ ಆಗಿದೆ. ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಆವಾಜ್ ಹಾಕಿರುವುದು ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಕೈದಿ ನಾಗರಾಜ್ ವಿರುದ್ಧ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಖ್ಯಾತ ಗಾಯಕಿ ವಸುಂದರಾ ದಾಸ್‍ಗೆ ನಡುರಸ್ತೆಯಲ್ಲೇ ಕ್ಯಾಬ್ ಚಾಲಕನಿಂದ ಅವಾಜ್

    ಖ್ಯಾತ ಗಾಯಕಿ ವಸುಂದರಾ ದಾಸ್‍ಗೆ ನಡುರಸ್ತೆಯಲ್ಲೇ ಕ್ಯಾಬ್ ಚಾಲಕನಿಂದ ಅವಾಜ್

    ಬೆಂಗಳೂರು: ಖ್ಯಾತ ನಟಿ, ಗಾಯಕಿ ವಸುಂದರಾ ದಾಸ್ ಅವರಿಗೆ ಕ್ಯಾಬ್ ಚಾಲಕನೊಬ್ಬ ಅಡ್ಡಗಟ್ಟಿ ನಿಂದನೆ ಮಾಡಿರುವ ಘಟನೆ ನಗರದ ಮಲ್ಲೇಶ್ವರಂ ಮಾರ್ಗೋಸಾ ರಸ್ತೆಯಲ್ಲಿ ನಡೆದಿದೆ.

    ವಸುಂದರಾ ದಾಸ್ ಅವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕ್ಯಾಬ್ ಚಾಲಕ ತನ್ನ ಕಾರಿಗೆ ದಾರಿ ನೀಡಲಿಲ್ಲ ಎಂದು ಕೋಪಗೊಂಡು ನಿಂದಿಸಿದ್ದಾರೆ. ಈ ಕುರಿತು ವಸುಂದರಾ ದಾಸ್ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ನಡೆದಿದ್ದೇನು?
    ಆ.29 ರಂದು ನಗರದ ಮಲ್ಲೇಶ್ವರಂನ ಮಾರ್ಗೋಸಾ ರಸ್ತೆಯಲ್ಲಿ ಘಟನೆ ನಡೆದಿದ್ದು, ಸಂಜೆ 4.30 ರ ಸಮಯದಲ್ಲಿ ವಸುಂದರಾ ದಾಸ್ ಅವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಇಟಿಯೋಸ್ ಕಾರಿನ ಚಾಲಕ ಸಿಗ್ನಲ್ ನಲ್ಲಿ ನಿರಂತರ ಹಾರ್ನ್ ಮಾಡಿದ್ದಾನೆ. ಭಾಷ್ಯಂ ಸರ್ಕಲ್ ಸಿಗ್ನಲ್‍ನಿಂದ ಹಿಂಬಾಲಿಸಿ ಬಳಿಕ ಅವರ ಕಾರನ್ನು ಅಡ್ಡಗಟ್ಟಿ ನಿಂದನೆ ಮಾಡಿದ್ದಾನೆ. ಈ ವೇಳೆ ಕಾರಿನ ಡೋರ್ ತೆಗೆಯಲು ಯತ್ನಿಸಿ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

    ಈ ಕುರಿತು ವಸುಂದರಾ ದಾಸ್ ಅವರು ದೂರು ದಾಖಲಿಸಿದ್ದು, ಕಾರ್ ನಂಬರ್ ಕೆಎ-05 ಇ-3933 ನ ಕ್ಯಾಬ್ ಚಾಲಕನಿಂದ ಕೃತ್ಯ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಕ್ಯಾಬ್ ಚಾಲಕನ ವಿರುದ್ಧ ಐಪಿಸಿ ಸೆಕ್ಷನ್ 509, 341, 354 ಮತ್ತು 504ರ ಅಡಿ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಕಾರು ಚಾಲಕನಿಗಾಗಿ ಶೋಧ ನಡೆಸಿದ್ದಾರೆ. ವಾಹನ ಸಂಖ್ಯೆಯನ್ನು ಪರಿವಾಹನ್ ಪೋರ್ಟಲ್ ನಲ್ಲಿ ಪರಿಶೀಲನೆ ನಡೆಸಿದ ವೇಳೆ ಕಾರು ಅಮ್ಜದ್ ಪಾಷಾ ಎಂಬವರ ಹೆಸರಲ್ಲಿ ನೋಂದಣಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಾರ್ವಜನಿಕರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಡಿವೈಎಸ್‍ಪಿ!

    ಸಾರ್ವಜನಿಕರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಡಿವೈಎಸ್‍ಪಿ!

    ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ದಿನದಿಂದ ದಿನಕ್ಕೆ ಕಾನೂನು ಸುವ್ಯವಸ್ಥೆ ಹದಗೆಡುತ್ತಾ ಬರುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ ಚಾಮರಾಜನಗರ ಡಿವೈಎಸ್ ಪಿ ಜೈಕುಮಾರ್ ಸಾರ್ವಜನಿಕರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವುದಲ್ಲದೇ ಸಾರ್ವಜನಿಕರ ಮೇಲೆ ಕೈ ಮಾಡಿದ್ದಾರೆ.

    ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಸಿಗುತ್ತಿಲ್ಲ ಎಂದು ಪ್ರತಿಭಟನೆ ಮಾಡುತ್ತಿದ್ದವರ ಮೇಲೆ ಡಿವೈಎಸ್ ಪಿ ತಮ್ಮ ಪ್ರತಾಪ ತೋರಿದ್ದಾರೆ. ಪ್ರತಿಭಟನೆಯನ್ನು ವಿಡಿಯೋ ಮಾಡುತ್ತಿದ್ದ ಸಾರ್ವಜನಿಕರ ಮೊಬೈಲ್ ಕಿತ್ತು ಎಸೆದು ಅವರಿಗೆ ಬಾಯಿಗೆ ಬಂದಂತೆ ಬೈದದ್ದು ಅಲ್ಲದೇ, ಅವರ ಮೇಲೆ ಕೈ ಮಾಡಿದ್ದಾರೆ.

    ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಾ ಬರುತ್ತಿದ್ರೂ ಸಹ ಪೊಲೀಸರು ಮಾತ್ರ ಒಂದೇಲ್ಲಾ ಒಂದು ಪ್ರಕರಣದಲ್ಲಿ ಹೆಸರಾಗುತ್ತಿದ್ದಾರೆ. ಚಾಮರಾಜನಗರದಲ್ಲಿ ಇಷ್ಟೆಲ್ಲಾ ಆಗುತ್ತಿದ್ರು ಕೂಡ, ಜಿಲ್ಲೆಯ ಪೊಲೀಸ್ ಮುಖ್ಯಸ್ಥ ಎನ್ನಿಸಿಕೊಂಡ ಎಸ್ ಪಿ ಧರ್ಮೇಂದ್ರ ಕುಮಾರ್ ಮೀನಾ ಮಾತ್ರ ತನಗೆ ಏನು ತಿಳಿದಿಲ್ಲ ಎಂದು ವರ್ತನೆ ಮಾಡ್ತಾ ಇದ್ದಾರೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

  • ಅನಂತ್‍ಕುಮಾರ್ ಹೆಗ್ಡೆ ನಿಂದಿಸುವ ಭರದಲ್ಲಿ ಹಿಂದೂ ದೇವರ ಬಗ್ಗೆ ಅವಹೇಳನಕಾರಿ ಪೋಸ್ಟ್- ಪಿಎಚ್‍ಡಿ ವಿದ್ಯಾರ್ಥಿ ವಿರುದ್ಧ ದೂರು

    ಅನಂತ್‍ಕುಮಾರ್ ಹೆಗ್ಡೆ ನಿಂದಿಸುವ ಭರದಲ್ಲಿ ಹಿಂದೂ ದೇವರ ಬಗ್ಗೆ ಅವಹೇಳನಕಾರಿ ಪೋಸ್ಟ್- ಪಿಎಚ್‍ಡಿ ವಿದ್ಯಾರ್ಥಿ ವಿರುದ್ಧ ದೂರು

    -ಕೃಷ್ಣ, ರಾಮ, ಸೀತೆ, ಲಕ್ಷ್ಮಣನ ಬಗ್ಗೆ ಅವಹೇಳನ

    ಮೈಸೂರು: ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗ್ಡೆ ಅವರನ್ನ ನಿಂದಿಸುವ ಭರದಲ್ಲಿ ಹಿಂದೂ ದೇವರುಗಳ ಬಗ್ಗೆ ಬಾಯಿಗೆ ಬಂದಂತೆ ಒದರಿದ ಫೇಸ್‍ಬುಕ್ ಪುಡಾರಿ ವಿರುದ್ಧ ದೂರು ನೀಡಲಾಗಿದೆ.

    ಮೈಸೂರಿನ ಹಾರೋಹಳ್ಳಿ ರವೀಂದ್ರ ಹಿಂದೂ ದೇವರು ಹಾಗೂ ದೇವತೆಗಳ ಬಗ್ಗೆ ಅವಹೇಳನಕಾರಿಯಾಗಿ ಬರೆದು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾನೆ. ರಾಮ, ಲಕ್ಷ್ಮಣ, ಸೀತೆ, ಕೃಷ್ಣನ ಬಗ್ಗೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾನೆ. ಈತ ಮೈಸೂರು ವಿಶ್ವವಿದ್ಯಾಲಯದ ಪ್ರೊ. ಮಹೇಶ್‍ಚಂದ್ರ ಗುರು ಮಾರ್ಗದರ್ಶನದಲ್ಲಿ ಪಿಎಚ್.ಡಿ ಮಾಡುತ್ತಿದ್ದಾನೆ.

    ಫೇಸ್‍ಬುಕ್ ಪೋಸ್ಟ್ ನಲ್ಲಿ ಏನಿದೆ?: ಸೀತೆಗೂ ಲಕ್ಷ್ಮಣನಿಗೂ ಅಕ್ರಮ ಸಂಬಂಧವಿತ್ತು. ಸೀತೆ ತಾನಾಗಿಯೇ ರಾವಣನ ಬಳಿ ಲೈಂಗಿಕ ಸುಖಕ್ಕಾಗಿ ಹೋಗಿದ್ದಳು. ರಾವಣನ ಜೊತೆಗಿನ ಲೈಂಗಿಕ ಸಂಪರ್ಕದ ನಂತರವೇ ಲವಕುಶ ಹುಟ್ಟಿದ್ದು. ಹೀಗೆ ರಾಮ, ಲಕ್ಷಣ ಸೀತೆ ಕುರಿತು ಅವಹೇಳನಕಾರಿಯಾಗಿ ಬರೆದಿದ್ದಾನೆ. ಅಷ್ಟೇ ಅಲ್ಲದೇ ಅನಂತ್‍ಕುಮಾರ್ ಹೆಗ್ಡೆ ಹಾಗೂ ಯೋಗಿ ಆದಿತ್ಯನಾಥ್‍ರನ್ನ ಟೀಕಿಸಿ ಪೋಸ್ಟ್ ಹಾಕಿದ್ದಾನೆ.

    ಶ್ರೀಕೃಷ್ಣ ತನ್ನ ತಂಗಿ ಸುಭದ್ರೆ ಜೊತೆ ಲೈಂಗಿಕ ಸಂಪರ್ಕ ಇಟ್ಟುಕೊಂಡಿದ್ದ. ಕೃಷ್ಣ 16 ಸಾವಿರ ಗೋಪಿಕಾಸ್ತ್ರೀಯರ ಜೊತೆ ತನ್ನ ತಂಗಿಯ ಜೊತೆಯೂ ಲೈಂಗಿಕ ಸುಖ ಪಡೆದಿದ್ದಾನೆ. ಈಶ್ವರ ದಲಿತ ಸಮುದಾಯಕ್ಕೆ ಸೇರಿದವ. ಪಾರ್ವತಿ ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು ಎಂದು ಶಿವ, ಪಾರ್ವತಿ, ಅಗ್ನಿದೇವನ ಕುರಿತು ಅಸಹ್ಯ ಪದಗಳ ಬಳಸಿ ಬರೆದಿದ್ದಾನೆ. ಗಣೇಶ, ಸುಬ್ರಮಣ್ಯ ಸೇರಿದಂತೆ ಬಹುತೇಕ ಹಿಂದೂ ದೇವರುಗಳ ಬಗ್ಗೆ ಅವಹೇಳನ ಮಾಡಿದ್ದಾನೆ.

    ಈತನ ಪೋಸ್ಟ್ ಗೆ  ಆಕ್ರೋಶಭರಿತ ಕಾಮೆಂಟ್‍ಗಳು ಬಂದಿದ್ದು, ಫೇಸ್‍ಬುಕ್‍ನಲ್ಲೇ ಆತನ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಮೈಸೂರಿನ ಸಮಗ್ರ ರಕ್ಷಣಾ ವೇದಿಕೆ ವತಿಯಿಂದ ಡಿಸಿಪಿ ವಿಷ್ಣುವರ್ಧನ ಅವರಿಗೆ ದೂರು ನೀಡಲಾಗಿದೆ.