Tag: ACB raids

  • ಕಾಂಗ್ರೆಸ್‌ ಕನಸಿನ ಕೂಸಿನಿಂದಲೇ ಜಮೀರ್‌ ಲಾಕ್‌

    ಕಾಂಗ್ರೆಸ್‌ ಕನಸಿನ ಕೂಸಿನಿಂದಲೇ ಜಮೀರ್‌ ಲಾಕ್‌

    ಬೆಂಗಳೂರು: ಕಾಂಗ್ರೆಸ್‌ ಕನಸಿನ ಕೂಸಿನಿಂದಲೇ ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್‌ ಅಹ್ಮದ್‌ ಲಾಕ್‌ ಆಗಿದ್ದಾರೆ.

    ಲೋಕಾಯುಕ್ತ ಪ್ರಬಲವಾಗಿದ್ದಾಗ ಎಸಿಬಿ(ಭ್ರಷ್ಟಾಚಾರ ನಿಗ್ರಹ ದಳ) ತೆರೆದಿದ್ದೆ ಕಾಂಗ್ರೆಸ್ ಸರ್ಕಾರ. ಸಿದ್ದರಾಮಯ್ಯ ಅವಧಿಯಲ್ಲಿ ಎಸಿಬಿಯನ್ನು ತರಲಾಗಿತ್ತು.

    ಲೋಕಾಯುಕ್ತಗಿಂತ ಎಸಿಬಿಯನ್ನು ಪ್ರಬಲ ಮಾಡುತ್ತೇವೆ ಎಂದು ಸರ್ಕಾರ ಹೇಳಿದ್ದರೂ ಕೆಳಹಂತದ ಅಧಿಕಾರಿಗಳ ಬಂಧನಕ್ಕೆ ಮಾತ್ರ ಸೀಮಿತ ಆಗಿತ್ತು. ಆದರೆ ಈಗ ಕಾಂಗ್ರೆಸ್‌ನ ಪ್ರಭಾವಿ ಶಾಸಕನ ಮನೆ ಮೇಲೆ ಎಸಿಬಿ ದಾಳಿ ಮಾಡಿ ಸುದ್ದಿಯಾಗಿದೆ.  ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ – ಶಾಸಕ ಜಮೀರ್‌ ಮನೆ ಮೇಲೆ ಎಸಿಬಿ ದಾಳಿ

    ಪೋಷಿಸುತ್ತಿದೆ ಬಿಜೆಪಿ
    ಲೋಕಾಯುಕ್ತರ ಬಳಿ ಇದ್ದ ಭ್ರಷ್ಟಾಚಾರದ ವಿರುದ್ಧದ ದಾಳಿ, ತನಿಖೆ ನಡೆಸುವ ಅಧಿಕಾರವನ್ನು ಕಸಿದುಕೊಂಡು ಎಸಿಬಿಗೆ ನೀಡಲು 2016ರ ಮಾರ್ಚ್ 14 ರಂದು ಅಂದಿನ ಕಾಂಗ್ರೆಸ್‌ ಸರಕಾರ ಆದೇಶ ಹೊರಡಿಸಿತು. ಅದರ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್‌ ಮುಂದೆ ಬಾಕಿ ಇದೆ.

    ಎಸಿಬಿ ರದ್ದು ಮಾಡಿದಾಗ ಪ್ರತಿಪಕ್ಷದಲ್ಲಿದ್ದ ಬಿಜೆಪಿ ತಾನು ಅಧಿಕಾರಕ್ಕೆ ಬಂದರೆ ತಕ್ಷಣವೇ ಎಸಿಬಿ ರದ್ದು ಮಾಡಿ, ಲೋಕಾಯುಕ್ತಕ್ಕೆ ಮರಳಿ ಅಧಿಕಾರ ನೀಡಲಾಗುವುದೆಂದು ಹೇಳಿತ್ತು. ಆದರೆ ಸದ್ಯ ಬಿಜೆಪಿಯೇ ಅಧಿಕಾರದಲ್ಲಿದ್ದರೂ ಇಲ್ಲಿಯವರೆಗೆ ರದ್ದು ಮಾಡುವ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ.

    Live Tv

    [brid partner=56869869 player=32851 video=960834 autoplay=true]

  • ಆದಾಯ ಮೀರಿ ಆಸ್ತಿ ಗಳಿಕೆ – ಶಾಸಕ ಜಮೀರ್‌ ಮನೆ ಮೇಲೆ ಎಸಿಬಿ ದಾಳಿ

    ಆದಾಯ ಮೀರಿ ಆಸ್ತಿ ಗಳಿಕೆ – ಶಾಸಕ ಜಮೀರ್‌ ಮನೆ ಮೇಲೆ ಎಸಿಬಿ ದಾಳಿ

    ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಚಾಮರಾಜಪೇಟೆಯ  ಶಾಸಕ ಜಮೀರ್‌ ಅಹ್ಮದ್‌ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದೆ.

    ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯಿರುವ ಭವ್ಯ ಬಂಗಲೆ ಮೇಲೆ ಸೇರಿದಂತೆ ಜಮೀರ್‌ಗೆ ಸಂಬಂಧಿಸಿದ 5 ಕಡೆ ದಾಳಿ ನಡೆದಿದೆ.

    ಈ ಹಿಂದೆ ಇಡಿ ಜಮೀರ್‌ ನಿವಾಸದ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಹಲವು ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿ ಆಧಾರದ ಮೇಲೆ ಎಸಿಬಿ ದಾಳಿ ನಡೆಸಿದೆ. ಕಂಟೋನ್ಮೆಂಟ್ ರೈಲ್ವೇ ವಲಯದಲ್ಲಿರುವ ನಿವಾಸ, ಸಿಲ್ವರ್ ಓಕ್ ಅಪಾರ್ಟ್ಮೆಂಟ್‌ನಲ್ಲಿರುವ ಫ್ಲ್ಯಾಟ್‌, ಸದಾಶಿವನಗರದಲ್ಲಿರುವ ಅತಿಥಿ ಗೃಹ, ಬನಶಂಕರಿಯಲ್ಲಿರುವ ಜಿ ಕೆ ಅಸೋಸಿಯೇಟ್ಸ್ ಕಚೇರಿ, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ನಡೆದಿದ್ದು ಎಸಿಬಿ ತಂಡ ದಾಖಲೆಗಳನ್ನು ಪರಿಶೀಲಿಸುತ್ತಿದೆ.

    ಇಡಿ ಅಧಿಕಾರಿಗಳ ದಾಳಿ ವೇಳೆ ಸರ್ಕಾರಿ ಯೋಜನೆಯೊಂದರಲ್ಲಿ ಬಾರಿ ಅವ್ಯವಹಾರ ಆಗಿರುವ ಸಂಬಂಧ ದಾಖಲೆ ಲಭ್ಯವಾಗಿತ್ತು. 6 ತಿಂಗಳ ಹಿಂದೆ ಇಡಿ ಈ ಬಗ್ಗೆ ವರದಿ ನೀಡಿತ್ತು. 2 ತಿಂಗಳ ಎರಡನೇ ಬಾರಿಗೆ ವರದಿ ನೀಡಿತ್ತು. ಈ ದಾಖಲೆ ಅಧಾರದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಎಸಿಬಿ ಪ್ರಕರಣ ದಾಖಲಿಸಿತ್ತು.

    ಜಮೀರ್‌ ಮೇಲಿರುವ ಆರೋಪ ಏನು?
    ಮುಂಬೈನಲ್ಲಿ ಈಗಾಗಲೇ ಟ್ರಾವೆಲ್ಸ್ ಕಂಪನಿಯ ಮಾಲೀಕತ್ವ ಹೊಂದಿರುವ ಜಮೀರ್‌ ವಿದೇಶದಲ್ಲೂ ಆಸ್ತಿ ಮಾಡಿದ್ದಾರೆ ಎಂಬ ಆರೋಪ ಇದೆ. ದುಬೈನಲ್ಲಿ ಆಸ್ತಿ ಹೊಂದಿದ್ದಾರೆ ಎಂಬ ಆರೋಪವಿದ್ದು, ಐಎಂಎ ಹಗರಣದ ಆರೋಪಿ ಮನ್ಸೂರ್ ಖಾನ್ ಜೊತೆ ಸಂಬಂಧ ಹೊಂದಿದ್ದು ಮನ್ಸೂರ್ ಖಾನ್ ಕಂಪನಿಯ ಮೂಲಕ ಹಣಕಾಸಿನ ವ್ಯವಹಾರ ನಡೆಸಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಶ್ರೀಲಂಕಾದಲ್ಲಿ ಶಿಷ್ಯರ ಹೆಸರಿನಲ್ಲಿ ಕ್ಯಾಸಿನೋ ನಡೆಸುತ್ತಿದ್ದಾರೆ ಎನ್ನುವ ಆರೋಪವೂ ಇದೆ.

  • ಕಂದಾಯ ಸಚಿವರಿಗೆ ಲಂಚ ಕೊಡಬೇಕು ಎಂದಿದ್ದ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ!

    ಕಂದಾಯ ಸಚಿವರಿಗೆ ಲಂಚ ಕೊಡಬೇಕು ಎಂದಿದ್ದ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ!

    ಬಳ್ಳಾರಿ: ಕಂದಾಯ ಸಚಿವರಿಗೂ ನಾವು ಪ್ರತಿ ತಿಂಗಳು ಲಂಚ ಕೊಡಬೇಕು. ಅದಕ್ಕೆ ನಾವು ಜನರಿಂದ ಹಣ ವಸೂಲಿ ಮಾಡುತ್ತವೆ ಎಂದು ಹೇಳಿದ್ದ ಹೂವಿನ ಹಡಗಲಿಯ ಪ್ರಭಾರಿ ಸಬ್ ರಿಜಿಸ್ಟ್ರರ್ ಕೆ.ಮರಿಗಾದಿ ಅವರ ಮನೆ ಮೇಲೆ ಇಂದು ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಅಕ್ರಮ ಆಸ್ತಿ ಗಳಿಸಿದ ಹಿನ್ನಲೆಯಲ್ಲಿ ಕೆ.ಮರಿಗಾದಿಯವರ ಮನೆ ಮೇಲೆ ದಾಳಿ ನಡೆಸಿದ ಎಸಿಬಿ ತಂಡ, ಹೊಸಪೇಟೆಯ ಬಸವೇಶ್ವರ ಬಡಾವಣೆಯಲ್ಲಿರುವ ಮನೆ ಸೇರಿದಂತೆ ಏಕಕಾಲದಲ್ಲಿ 6 ಕಡೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

    ಅಧಿಕಾರಿ ಕೆ ಮರಿಗಾದಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ, ಹೊಸಪೇಟೆಗಳಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದರು. ಎಸಿಬಿ ಎಸ್‍ಪಿ ಅನಿತಾ ಹದ್ದಣ್ಣನವರ್ ಹಾಗೂ ಡಿವೈಎಸ್‍ಪಿ ಗಿರೀಶ್ ನೇತೃತ್ವದಲ್ಲಿ ದಾಳಿ ಮಾಡಿರುವ ಅಧಿಕಾರಿಗಳು ಪ್ರಭಾರಿ ಉಪನೊಂದವಣಾಧಿಕಾರಿಯಾಗಿರುವ ಕೆ.ಮರಿಗಾದಿಯವರ ಕಚೇರಿ ಮತ್ತು ಸಂಬಂಧಿಕರ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.

    ಈ ಹಿಂದೆ ಇದೇ ಅಧಿಕಾರಿ ಕಂದಾಯ ಸಚಿವರಿಗೂ ನಾವೂ ಪ್ರತಿ ತಿಂಗಳು ಲಂಚ ಕೊಡಬೇಕು ಅದಕ್ಕೆ ಜನರಿಂದ ಜಣ ವಸೂಲಿ ಮಾಡುತ್ತೇವೆ ಅಂತಾ ಬಹಿರಂಗವಾಗಿ ಹೇಳಿಕೊಂಡಿದ್ದ ಸುದ್ದಿಯನ್ನು ಪಬ್ಲಿಕ್ ಟಿವಿ ಪ್ರಸಾರ ಮಾಡಿತ್ತು. ಪಬ್ಲಿಕ್ ಟಿವಿ ವರದಿ ಪ್ರಸಾರದ ನಂತರ ಮರಿಗಾದಿಯಪ್ಪ ಅಮಾನತುಗೊಂಡು ಇದೀಗ ಮರಳಿ ಸೇವೆಗೆ ಆಗಮಿಸಿದ್ದರು.

  • ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಎಸಿಬಿ ಅಧಿಕಾರಿಗಳ ದಾಳಿ

    ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಎಸಿಬಿ ಅಧಿಕಾರಿಗಳ ದಾಳಿ

    ಮೈಸೂರು: ಗ್ರಾಮೀಣ ನೀರು ಪೂರೈಕೆ ಇಲಾಖೆಯ ಸೂಪರಿಟೆಂಡೆಂಟ್ ಇಂಜಿನಿಯರ್ ರಂಗನಾಥ್ ನಾಯಕ್ ಎಂಬವರ ಮನೆಯ ಮೇಲೆ ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಮೈಸೂರು ನಗರದ ವಿಜಯನಗರದ ಮೊದಲನೇ ಹಂತದಲ್ಲಿರುವ ಮನೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಂಗನಾಥ್ ನಗರದ ಗ್ರಾಮೀಣ ಪೂರೈಕೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರಿನ ಡಿವೈಎಸ್‍ಪಿ ಗಜೇಂದ್ರಪ್ರಸಾದ್ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

    ಸಖರಾಯಪಟ್ಟಣದ ನಿವಾಸ

    ರಂಗನಾಥ್ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ನಿವಾಸಿಯಾಗಿದ್ದಾರೆ. ಇತ್ತ ಸಖರಾಯಪಟ್ಟಣದ ನಿವಾಸದ ಮೇಲೂ ಚಿಕ್ಕಮಗಳೂರಿನ ಎಸಿಬಿ ಡಿವೈಎಸ್‍ಪಿ ರಾಜು ಅವರ ನೇತೃತ್ವದಲ್ಲಿ ದಾಳಿಯಾಗಿದ್ದು, ಅಧಿಕಾರಿಗಳು ಕಡತಗಳ ಪರಿಶೀಲನೆ ಕಾರ್ಯ ಮಾಡುತ್ತಿದ್ದಾರೆ.

    ಸಖರಾಯಪಟ್ಟಣದ ನಿವಾಸ