Tag: accident

  • ರಸ್ತೆಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ – ಕುಟುಂಬಸ್ಥರನ್ನ ರಕ್ಷಿಸಿದ ʻಪಬ್ಲಿಕ್ ಟಿವಿʼ ತಂಡ

    ರಸ್ತೆಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ – ಕುಟುಂಬಸ್ಥರನ್ನ ರಕ್ಷಿಸಿದ ʻಪಬ್ಲಿಕ್ ಟಿವಿʼ ತಂಡ

    ಮಡಿಕೇರಿ: ರಸ್ತೆಗುಂಡಿ (Pothole) ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಗ್ರಾಮದಲ್ಲಿಂದು ನಡೆದಿದೆ. ಇದೇ ಸಮಯಕ್ಕೆ ಅಲ್ಲಿಗೆ ಧಾವಿಸಿದ ನಿಮ್ಮ ʻಪಬ್ಲಿಕ್‌ ಟಿವಿʼ ತಂಡ (Public TV Team) ಕುಟುಂಬಸ್ಥರನ್ನ ರಕ್ಷಣೆ ಮಾಡಿದೆ.

    ಹೌದು. ಮಡಿಕೇರಿಯ (Madikeri) ತಲಕಾವೇರಿ ರಸ್ತೆ ಸಂಪೂರ್ಣವಾಗಿ ಗುಂಡಿಮಯವಾಗಿರುವ ಹಿನ್ನೆಲೆ ʻಪಬ್ಲಿಕ್ ಟಿವಿʼ ತಂಡ ರಿಯಾಲಿಟಿ ಚೆಕ್ ಮಾಡಲು ತೆರಳಿತ್ತು. ಇದೇ ರಸ್ತೆ ಗುಂಡಿ ತಪ್ಪಿಸಲು ಹೋದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿತ್ತು. ಈ ದೃಶ್ಯ ಕೂಡ ಪಬ್ಲಿಕ್‌ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೂಡಲೇ ʻಪಬ್ಲಿಕ್‌ ಟಿವಿʼ ತಂಡ ಕಾರಿನಲ್ಲಿದ್ದ ಕುಟುಂಬಸ್ಥರ ರಕ್ಷಣೆ ಮಾಡಿದೆ. ಕಾರಿನಲ್ಲಿದ್ದ ಮಕ್ಕಳು, ಕಾರು ಚಾಲಕ ಹಾಗೂ ವೃದ್ಧೆಯೊಬ್ಬರನ್ನ ರಕ್ಷಣೆ ಮಾಡಿದೆ, ಬಳಿಕ ಅವರನ್ನ ಮಡಿಕೇರಿ ಆಸ್ಪತ್ರೆಗೆ ಸುರಕ್ಷಿತವಾಗಿ ರವಾನೆ ಮಾಡಿದೆ. ಇದನ್ನೂ ಓದಿ: ದಸರಾ ದಶಮಂಟಪಗಳ ಶೋಭಯಾತ್ರೆಯಲ್ಲಿ ನಿಯಮ ಉಲ್ಲಂಘಿಸಿ ಡಿಜೆ ಬಳಕೆ – 62 ಮಂದಿ ವಿರುದ್ಧ ಕೇಸ್‌

    ಉಡುಪಿಯಿಂದ ನೇರವಾಗಿ ಮಡಿಕೇರಿ ತಾಲೂಕಿನ ಎಮ್ಮೆಮಾಡು ಗ್ರಾಮದಲ್ಲಿರುವ ದರ್ಗಾಕ್ಕೆ ತೆರಳುವ ವೇಳೆಯಲ್ಲಿ ಈ ಘಟನೆ ಸಂಭವಿಸಿರುವುದರಿಂದ ಕಾರಿನಲ್ಲಿ ಇದ್ದ ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ. ಅಪಘಾತದಿಂದ ಕಾರಿನ‌ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜು ಆಗಿದೆ. ಇದನ್ನೂ ಓದಿ: ಕುಟುಂಬಸ್ಥರ ಶವಸಂಸ್ಕಾರ ಮುಗಿಸಿ ನಾಲೆಯಲ್ಲಿ ಸ್ನಾನಕ್ಕೆ ತೆರಳಿದ ಯುವಕ ನೀರುಪಾಲು

    ಘಟನೆಗೆ ಸಂಬಂಧಿಸಿದಂತೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಪಬ್ಲಿಕ್ ಟಿವಿ ತಂಡ ಕುಟುಂಬಸ್ಥರು ರಕ್ಷಣೆ ಮಾಡಿದಕ್ಕೆ ಬೆಟ್ಟಗೇರಿ ಗ್ರಾಮಸ್ಥರು ‌ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ಗಣತಿದಾರರ ಪರದಾಟ – ಮುಂದುವರಿದ ಸರ್ವರ್​ ಸಮಸ್ಯೆ, 4 ದಿನಗಳಲ್ಲಿ ಕೇವಲ 1,133 ಮಂದಿ ದತ್ತಾಂಶ ಸಂಗ್ರಹ

  • Bengaluru| ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸರಣಿ ಅಪಘಾತ – 9 ವಾಹನಗಳಿಗೆ ಇವಿ ಬಸ್ ಡಿಕ್ಕಿ

    Bengaluru| ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸರಣಿ ಅಪಘಾತ – 9 ವಾಹನಗಳಿಗೆ ಇವಿ ಬಸ್ ಡಿಕ್ಕಿ

    ಬೆಂಗಳೂರು: ಇವಿ ಬಸ್ (EV Bus) ಚಾಲಕನ ನಿರ್ಲಕ್ಷ್ಯಕ್ಕೆ ಸರಣಿ ಅಪಘಾತ ಸಂಭವಿಸಿ, 9 ವಾಹನಗಳು ಜಖಂಗೊಂಡಿರುವ ಘಟನೆ ಬೆಂಗಳೂರಿನ (Bengaluru) ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಮುಂಭಾಗ ನಡೆದಿದೆ.

    ಬೆಳಗ್ಗೆ 11:30ರ ಸುಮಾರಿಗೆ ಸಿಗ್ನಲ್‌ನಲ್ಲಿ ವಾಹನಗಳು ನಿಂತಿದ್ದಾಗ ಏಕಾಏಕಿ ಬಸ್ ನುಗ್ಗಿದ ಪರಿಣಾಮ ಮುಂಭಾಗದಲ್ಲಿದ್ದ 4 ಕಾರು, 4 ಆಟೋ ಒಂದು ಬೈಕ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ವಾಹನಗಳು ಸಂಪೂರ್ಣ ಜಖಂ ಆಗಿದ್ದು, ಅದೃಷ್ಟವಶಾತ್ ವಾಹನಗಳಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಪವರ್ ಶೇರಿಂಗ್, ಸಂಪುಟ ವಿಸ್ತರಣೆ ಬಗ್ಗೆ ಯಾರು ಮಾತಾಡಬಾರದು: ಸಂತೋಷ ಲಾಡ್

    ಘಟನೆ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇವಿ ಬಸ್ ಚಾಲಕನನ್ನ ವಶಕ್ಕೆ ಪಡೆಯಲಾಗಿದೆ. ಘಟನೆ ಬಳಿಕ ಡ್ಯಾಮೇಜ್ ಆದ ವಾಹನ ಸವಾರರು ಬೇಸರ ವ್ಯಕ್ತಪಡಿಸಿದ್ದು, ಗುತ್ತಿಗೆ ಆಧಾರದಲ್ಲಿ ಯರ‍್ಯಾರನ್ನೋ ಚಾಲಕರಾಗಿ ತೆಗೆದುಕೊಂಡಿರುವ ಕಾರಣ ಹೀಗೆಲ್ಲ ಆಗುತ್ತಿದೆ, ಜನ ಹೇಗೆ ನಂಬಿಕೆ ಇಟ್ಟು ಬಸ್ ಹತ್ತೋದು? ನಮ್ಮ ನಷ್ಟಕ್ಕೆ ಹೊಣೆ ಯಾರೆಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬಿಜೆಪಿಯವರಿಗೆ ಕಾಮನ್ ಸೆನ್ಸ್ ಇಲ್ಲ, ಒಂದು ರೂಪಾಯಿ ತರುವ ಯೋಗ್ಯತೆ ಇಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

  • ಬಿಎಂಟಿಸಿ ಬಸ್ ಡಿಕ್ಕಿ – ಶಾಲೆ ಮುಗಿಸಿಕೊಂಡು ಮನೆಗೆ ಹೋಗ್ತಿದ್ದ ಬಾಲಕಿ ಸಾವು

    ಬಿಎಂಟಿಸಿ ಬಸ್ ಡಿಕ್ಕಿ – ಶಾಲೆ ಮುಗಿಸಿಕೊಂಡು ಮನೆಗೆ ಹೋಗ್ತಿದ್ದ ಬಾಲಕಿ ಸಾವು

    ಬೆಂಗಳೂರು: ಶಾಲೆ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಬಾಲಕಿ, ಬಿಎಂಟಿಸಿ ಬಸ್ ಹರಿದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    9 ವರ್ಷದ ಭುವನಾ ಮೃತ ದುರ್ದೈವಿ. ರಾಜಾಜಿನಗರ 1ನೇ ಬ್ಲಾಕ್‌ನ ಸಿಗ್ನಲ್‌ನಲ್ಲಿ ನಿಂತಿದ್ದ ಮಗುವಿಗೆ ಬಿಎಂಟಿಸಿ ಬಸ್ ಬಂದು ಗುದ್ದಿದೆ.

    ಮಗುವಿಗೆ ಡಿಕ್ಕಿ ಹೊಡೆದು ಬಿಎಂಟಿಸಿ ಬಸ್ ಚಾಲಕ ಪರಾರಿಯಾಗಿದ್ದಾನೆ. ಸದ್ಯ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿನ ಮೃತದೇಹ ಇದೆ.

  • Video | ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿ

    Video | ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿ

    ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದೆ. ಮಹದೇವಪುರದ ಗುಂಜೂರಿನ ಡೀನ್ಸ್ ಅಕಾಡಮಿ ಬಳಿ ದುರ್ಘಟನೆ ನಡೆದಿದೆ. ಬೈಕ್‌ವೊಂದಕ್ಕೆ ಸ್ಕೂಲ್‌ ಬಸ್‌ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಕುರಿತ ವಿಡಿಯೋ ಇಲ್ಲಿದೆ

  • ವಿಜಯ್ ದೇವರಕೊಂಡ ಕಾರು ಅಪಘಾತ – ಅಪಾಯದಿಂದ ಪಾರು

    ವಿಜಯ್ ದೇವರಕೊಂಡ ಕಾರು ಅಪಘಾತ – ಅಪಾಯದಿಂದ ಪಾರು

    ಟ ವಿಜಯ್ ದೇವರಕೊಂಡ (Vijay Deverakonda) ಅವರ (Car Accident) ಕಾರು ಅಪಘಾತಕ್ಕೊಳಗಾಗಿದೆ. ಗದ್ವಾಲ್ ಜಿಲ್ಲೆಯ ಉಂಡವೆಲ್ಲಿ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಈ ಅಪಘಾತ ಸಂಭವಿಸಿದೆ.

    ಪುಟ್ಟಪರ್ತಿಯಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಮತ್ತೊಂದು ಕಾರು ವಿಜಯ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿಗೆ ಭಾರೀ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಸ್ತೆ ಬದಿ `ಬಡವರ ಬರ್ಗರ್’ ತಿಂದು ಓವರ್‌ ಆ್ಯಕ್ಟಿಂಗ್ ಮಾಡಿದ್ರಾ ಶಿಲ್ಪಾ ಶೆಟ್ಟಿ?

    ಅಪಘಾತದ ನಂತರ, ನಟ ಸ್ನೇಹಿತನ ಕಾರಿನಲ್ಲಿ ತೆರಳಿದ್ದಾರೆ. ಎರಡು ದಿನಗಳ ಹಿಂದಷ್ಟೇ ನಟಿ ರಶ್ಮಿಕಾ ಮಂದಣ್ಣ ಅವರ ಜೊತೆ ವಿಜಯ್‌ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದನ್ನೂ ಓದಿ: ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

    ಕಾರು ಅಪಘಾತವಾದ ಬಗ್ಗೆ ಪ್ರತಿಕ್ರಿಯಿಸಿದ ದೇವರಕೊಂಡ, ಕಾರು ಅಪಘಾತವಾಗಿದ್ದರೂ ನಾವೆಲ್ಲ ಚೆನ್ನಾಗಿದ್ದೇವೆ. ವಿಚಾರರಿಸಿದ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.

    ವಿಜಯ್ ದೇವರಕೊಂಡಗೆ ದಕ್ಷಿಣದಲ್ಲಿ ಮಾತ್ರವಲ್ಲ ಉತ್ತರ ಭಾರತದಲ್ಲೂ  ಭಿಮಾನಿಗಳು ಇದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾಗಳನ್ನ ಮಾಡಿರುವ ವಿಜಯ್ ದೇವರಕೊಂಡ ಅಭಿಮಾನಿಗಳು ಆತಂಕಪಡಬಾರದು ಎನ್ನುವ ನಿಟ್ಟಿನಲ್ಲಿ ಕ್ಲಾರಿಟಿ ನೀಡಿದ್ದಾರೆ.

  • ಹೊಳೆನರಸೀಪುರ | ಜಾತಿಗಣತಿಗೆ ತೆರಳುವಾಗ ನಾಯಿಗೆ ಸ್ಕೂಟರ್ ಡಿಕ್ಕಿ – ಶಿಕ್ಷಕಿಗೆ ಗಂಭೀರ ಗಾಯ

    ಹೊಳೆನರಸೀಪುರ | ಜಾತಿಗಣತಿಗೆ ತೆರಳುವಾಗ ನಾಯಿಗೆ ಸ್ಕೂಟರ್ ಡಿಕ್ಕಿ – ಶಿಕ್ಷಕಿಗೆ ಗಂಭೀರ ಗಾಯ

    ಹಾಸನ: ಜಾತಿಗಣತಿಗೆ (Caste Census) ತೆರಳುವಾಗ ನಾಯಿಗೆ ಶಿಕ್ಷಕಿಯ ಸ್ಕೂಟರ್ ಡಿಕ್ಕಿಯಾಗಿ (Accident) ಗಂಭೀರವಾಗಿ ಗಾಯಗೊಂಡ ಘಟನೆ ಹೊಳೆನರಸೀಪುರದ (Holenarasipur) ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ.

    ವಡ್ಡರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ರಾಧಾ ಗಾಯಗೊಂಡವರು. ಬೆಳಗ್ಗೆ 10 ಗಂಟೆ ಸಮಯದಲ್ಲಿ ಅವರು ಸಮೀಕ್ಷೆಗೆ ತೆರಳುತ್ತಿದ್ದರು. ಈ ವೇಳೆ ಅವರ ಸ್ಕೂಟರ್‍ಗೆ ನಾಯಿ ಅಡ್ಡ ಬಂದಿದ್ದು, ಡಿಕ್ಕಿಯಾಗಿ ಬಿದ್ದಿದ್ದಾರೆ. ರಸ್ತೆಗೆ ಬಿದ್ದಿದ್ದರಿಂದ ಅವರಿಗೆ ಗಂಭಿರ ಗಾಯಗಳಾಗಿವೆ. ಇದನ್ನೂ ಓದಿ: ಜಾತಿಗಣತಿಗೆ ತರಳಿದ್ದ ಶಿಕ್ಷಕಿ ಮೇಲೆ ಬೀದಿನಾಯಿಗಳ ದಾಳಿ – ರಕ್ಷಣೆಗೆ ಬಂದ 7 ಮಂದಿಗೂ ಕಚ್ಚಿದ ಶ್ವಾನಗಳು

    ಸ್ಥಳದಲ್ಲೇ ಪ್ರಜ್ಞೆ ತಪ್ಪಿದ್ದ ಶಿಕ್ಷಕಿಗೆ ಸ್ಥಳೀಯರು ಉಪಚಾರ ಮಾಡಿದ್ದಾರೆ. ಬಳಿಕ ಅವರನ್ನು ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

    ಜಿಲ್ಲೆಯಲ್ಲಿ ಜಾತಿಗಣತಿಗೆ ತೆರಳುವವರಿಗೆ ನಾಯಿಗಳ ಉಪಟಳ ಹೆಚ್ಚಾಗಿದೆ. ಬೇಲೂರಿನ ಜೈಭೀಮ್ ನಗರದಲ್ಲಿ ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಯೊಬ್ಬರಿಗೆ ಬೀದಿನಾಯಿಗಳು ಕಚ್ಚಿ ಗಂಭಿರವಾಗಿ ಗಾಯಗೊಳಿಸಿದ್ದವು. ಈ ವೇಳೆ ಕಾಪಾಡಲು ಬಂದಿದ್ದ ಶಿಕ್ಷಕಿಯ ಪತಿ ಸೇರಿ ಇನ್ನಿತರ 7 ಜನರನ್ನು ನಾಯಿಗಳು ಕಚ್ಚಿ ಗಾಯಗೊಳಿಸಿದ್ದವು. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರು | ಸಿಲಿಂಡರ್ ಸ್ಫೋಟ – ಮೂರು ಗಂಟೆಗಳ ಕಾಲ ಹೊತ್ತಿ ಉರಿದ ಗೋಡೌನ್‌

  • ಹದಗೆಟ್ಟ ರಸ್ತೆ| ಗಣತಿ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿ ಬೈಕಿನಿಂದ ಬಿದ್ದು ಸಾವು

    ಹದಗೆಟ್ಟ ರಸ್ತೆ| ಗಣತಿ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿ ಬೈಕಿನಿಂದ ಬಿದ್ದು ಸಾವು

    ಬಾಗಲಕೋಟೆ: ಗಣತಿ ಕಾರ್ಯಕ್ಕೆ ಹೋದ ಶಿಕ್ಷಕಿ (Teacher) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ (Bagalkote) ತಾಲೂಕಿನ ತಿಮ್ಮಾಪೂರ ಕ್ರಾಸ್ ಬಳಿ ನಡೆದಿದೆ.

    ದಾನಮ್ಮ ವಿಜಯಕುಮಾರ ನಂದರಗಿ (52) ಸಾವನ್ನಪ್ಪಿರುವ ಶಿಕ್ಷಕಿ. ಗಣತಿ ಕಾರ್ಯ (Caste Census) ಮುಗಿಸಿಕೊಂಡು ಪುತ್ರನ ಜೊತೆ ಮನೆ ಕಡೆಗೆ ಬೈಕಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ.

    ಮೊದಲೇ ಗಣತಿ ಕಾರ್ಯದ ತಾಂತ್ರಿಕ ಸಮಸ್ಯೆಯಿಂದಾಗಿ ಎರಡ್ಮೂರು ದಿನಗಳಿಂದ ಶಿಕ್ಷಕಿ ದಾನಮ್ಮ ಟೆನ್ಶನ್‌ನಲ್ಲಿದ್ದರು. ಹೀಗಾಗಿ ಅವರನ್ನು ಕರೆದುಕೊಂಡು ಹೋಗಲು ಮಗ ವಿಕಾಸ್ ಬೈಕ್ ತೆಗೆದುಕೊಂಡು ಬಂದಿದ್ದ. ಮಗನ ಜೊತೆ ಬರುವಾಗ ಹದಗೆಟ್ಟ ರಸ್ತೆಯಿಂದ ಬ್ಯಾಲೆನ್ಸ್‌ ತಪ್ಪಿ ಜಾರಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.

    ಮೃತ ಶಿಕ್ಷಕಿ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ವಂದಾಲ ಗ್ರಾಮದವರು. ಬಾಗಲಕೋಟೆ ತಾಲೂಕಿನ ರಾಂಪೂರ ಸರ್ಕಾರಿ ಆಶ್ರಯ ಕಾಲೋನಿ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಕರ್ನಾಟಕದಲ್ಲಿ ಕೇಂದ್ರಕ್ಕೂ ಮೊದಲೇ ರಾಜ್ಯ ಚುನಾವಣಾ ಆಯೋಗದಿಂದ SIR

    ಬಾಗಲಕೋಟೆಯಲ್ಲಿ ವಾಸವಿದ್ದ ಕಾರಣ ಗಣತಿ ಕಾರ್ಯ ಮುಗಿಸಿ ಮನೆಗೆ ಹಿಂತಿರುಗುವಾಗ ಈ ಘಟನೆ ನಡೆದಿದೆ. ಈ ಕುರಿತು ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪ್ರಮುಖ ವೃತ್ತಗಳಿಗೆ ಸಿಗ್ನಲ್‌ ಅಳವಡಿಸೋದು ಯಾವಾಗ? – ಚಿಕ್ಕೋಡಿಯಲ್ಲಿ ಟ್ರಾಫಿಕ್ ಕಾಟ, ಜನರ ಪರದಾಟ

    ಪ್ರಮುಖ ವೃತ್ತಗಳಿಗೆ ಸಿಗ್ನಲ್‌ ಅಳವಡಿಸೋದು ಯಾವಾಗ? – ಚಿಕ್ಕೋಡಿಯಲ್ಲಿ ಟ್ರಾಫಿಕ್ ಕಾಟ, ಜನರ ಪರದಾಟ

    ಬೆಳಗಾವಿ: ಹೊಸ ಜಿಲ್ಲೆ ಘೋಷಣೆ ತವಕದಲ್ಲಿರುವ ಚಿಕ್ಕೋಡಿಯ (Chkkodi) ಪ್ರಮುಖ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್ (Traffic Signal) ಅಳವಡಿಸದೇ ಇರುವುದು ಅವಘಡಗಳಿಗೆ (Accident) ಕಾರಣವಾಗುತ್ತಿದೆ. ಅಡ್ಡಾದಿಡ್ಡಿಯಾಗಿ ಓಡಾಡುವುದರಿಂದ ಮೇಲಿಂದ ಮೇಲೆ ಅಪಘಾತಗಳು ಸಂಭವಿಸುತ್ತಿವೆ.

    ಚಿಕ್ಕೋಡಿ ಪಟ್ಟಣದಲ್ಲಿ ಅಂದಾಜು 50 ಸಾವಿರ ಜನಸಂಖ್ಯೆ ಇದೆ. ಬಹುತೇಕ ಎಲ್ಲ ಇಲಾಖಾ ಕಚೇರಿಗಳಿವೆ. ಹಲವು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಶಾಲಾ-ಕಾಲೇಜುಗಳಿರುವುದರಿಂದ ನಿತ್ಯ ಸಾವಿರಾರು ವಿದ್ಯಾರ್ಥಿಗಳು ಪಟ್ಟಣಕ್ಕೆ ಬರುತ್ತಾರೆ. ಆದರೆ, ಇಲ್ಲಿನ ಸಂಚಾರ ದಟ್ಟಣೆ, ರಸ್ತೆ ನಿಯಮ ಮಿರಿ ಓಡಾಡುವ ವಾಹನಗಳಿಂದ ಪಾದಚಾರಿಗಳು ಸುರಕ್ಷಿತವಾಗಿ ರಸ್ತೆ ದಾಟುವುದೇ ಸವಾಲಾಗಿದೆ.

    ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಅಪಘಾತದ ಅಪಾಯ ಹೆಚ್ಚಾಗಿದೆ. ಗೋಟೂರ-ವಿಜಯಪುರ ರಾಷ್ಟ್ರೀಯ ಹೆದ್ದಾರಿ, ನಿಪ್ಪಾಣಿ-ಮಹಾಲಿಂಗಪುರ ರಾಜ್ಯ ಹೆದ್ದಾರಿ ಕೂಡುವ ವೃತ್ತ ಇದಾಗಿದ್ದು, ಸಂಚಾರ ದಟಣೆ ಮಿತಿಮೀರುತ್ತಿದೆ. ಈ ವೃತ್ತದ ಬಳಿ ಪ್ರಮುಖ ಕಚೇರಿಗಳು, ಆಸ್ಪತ್ರೆ, ಅಂಚೆ ಕಚೇರಿ ಇರುವುದರಿಂದ ಜನರ ಓಡಾಟವೂ ಹೆಚ್ಚಾಗಿರುತ್ತದೆ.ಟ್ರಾಫಿಕ್ ಸಿಗ್ನಲ್ ಇಲ್ಲದ್ದರಿಂದ ನಿತ್ಯವೂ ಇಲ್ಲಿ ಸಣ್ಣಪುಟ್ಟ ಅಪಘಾತಗಳು ಸಾಮಾನ್ಯವಾಗಿವೆ.  ಇದನ್ನೂ ಓದಿ:  ಇದನ್ನೂ ಓದಿ: ಎನ್‌ಕೌಂಟರ್ ಭೀತಿ ಏಕಕಾಲಕ್ಕೆ 103 ನಕ್ಸಲರ ಶರಣಾಗತಿ

    ಬಸವೇಶ್ವರ ವೃತ್ತ ಮಾತ್ರವಲ್ಲದೆ ಇಂದಿರಾ ನಗರ ವೃತ್ತ, ಬಸ್ ನಿಲ್ದಾಣ ವೃತ್ತ, ಅಂಕಲಿಕೂಟ್, ಶಿಂಧಿಕೂಟ್ ವೃತ್ತಗಳಲ್ಲಿ ಸಂಚಾರ ದೀಪಗಳನ್ನು ಅಳವಡಿಸದ ಕಾರಣ ಸಂಚಾರ ನಿಮಯ ಮಿರಿ ವಾಹನಗಳು ಓಡಾಡುತ್ತಿದ್ದು, ಪಾದಚಾರಿಗಳಿಗೆ ಸುರಕ್ಷತೆ ಇಲ್ಲದಂತಾಗಿದೆ.

    ಸುಗಮ ಸಂಚಾರಕ್ಕೆ ನೆರವಾಗಲು ಹಾಗೂ ಸಂಚಾರ ದಟ್ಟಣೆ ನಿಯಂತ್ರಿಸಲು ಪಟ್ಟಣದಲ್ಲಿ 2023ರಲ್ಲಿ ಪ್ರತ್ಯೇಕ ಸಂಚಾರ ಪೊಲೀಸ್ ಠಾಣೆ ಆರಂಭಿಸಲಾಗಿದೆ. 31 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಷ್ಟಾದರೂ ಸಂಚಾರ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಟ್ಟಣದ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷದಲ್ಲಿ ಹಲವು ಅಪಘಾತಗಳು ಘಟಿಸಿದ್ದು, ಸಾಕಷ್ಟು ಸಾವು-ನೋವು ಸಂಭವಿಸಿವೆ. 2023ರಲ್ಲಿ 75, 2024 ರಲ್ಲಿ 76, 2025 ಸೆ.14ರ ವರೆಗೆ 49 ಅಪಘಾತಗಳು ನಡೆದಿದ್ದು, 2023 ರಲ್ಲಿ 34, 2024ರಲ್ಲಿ 20 ,2025 ರಲ್ಲಿ 14 ಜನ ಮೃತಪಟ್ಟಿದ್ದಾರೆ. ಒಟ್ಟಾರೆ 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

  • ಹಿಟ್ & ರನ್‌ಗೆ ವಿದ್ಯಾರ್ಥಿನಿ ಬಲಿ – ಟಿಪ್ಪರ್‌ ಚಾಲಕ ಅರೆಸ್ಟ್‌

    ಹಿಟ್ & ರನ್‌ಗೆ ವಿದ್ಯಾರ್ಥಿನಿ ಬಲಿ – ಟಿಪ್ಪರ್‌ ಚಾಲಕ ಅರೆಸ್ಟ್‌

    ಬೆಂಗಳೂರು: ಇತ್ತೀಚೆಗೆ ನಗರದ (Bengaluru) ಬೂದಿಗೆರೆ ಕ್ರಾಸ್ ಬಳಿ ವಿದ್ಯಾರ್ಥಿನಿಯನ್ನು ಬಲಿ ಪಡೆದಿದ್ದ ಹಿಟ್‌ & ರನ್‌ (Hit And Run) ಪ್ರಕರಣದ ಆರೋಪಿಯನ್ನು ಆವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳ ಮೂಲದ ಜೆರಾಲ್ಡ್ ಮಂಡಲ್ ಎಂದು ಗುರುತಿಸಲಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಟಿಪ್ಪರ್ ಪತ್ತೆ ಹಚ್ಚಿ ಚಾಲಕನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಹೊರವಲಯದಲ್ಲಿ ರಸ್ತೆ ಗುಂಡಿಗೆ ಬಿ.ಕಾಂ ಪದವೀಧರೆ ಬಲಿ

    ಅ.29ರ ಬೆಳಗ್ಗೆ 8:50 ಸುಮಾರಿಗೆ ಈ ಅಪಘಾತ ನಡೆದಿತ್ತು. ರಸ್ತೆ ಗುಂಡಿ ತಪ್ಪಿಸಲು ಹೋಗಿ ಸ್ಕಿಡ್ ಆಗಿ ವಿದ್ಯಾರ್ಥಿನಿ ಧನುಶ್ರೀ (21) ರಸ್ತೆಗೆ ಬಿದ್ದಿದ್ದಳು. ಈ ವೇಳೆ ಆಕೆಯ ಮೇಲೆ ಟಿಪ್ಪರ್‌ ಹರಿದಿತ್ತು. ಇದರಿಂದ ಯುವತಿ ಸಾವನ್ನಪ್ಪಿದ್ದಳು. ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿತ್ತು. ಇದನ್ನೂ ಓದಿ: ಬೆಂಗಳೂರು | ಮೂರೇ ದಿನದಲ್ಲಿ 37 ದರೋಡೆ – 6 ಜನ ಅಪ್ರಾಪ್ತರ ಗ್ಯಾಂಗ್ ಅರೆಸ್ಟ್

  • ಚಿಕ್ಕಮಗಳೂರು | ಮದ್ಯ ಕುಡಿದು ನನ್ನ ಬಳಿ ಬರಬೇಡಿ – ವಾಹನ ಸವಾರರಿಗೆ ಯಮರಾಜನ ಎಚ್ಚರಿಕೆ!

    ಚಿಕ್ಕಮಗಳೂರು | ಮದ್ಯ ಕುಡಿದು ನನ್ನ ಬಳಿ ಬರಬೇಡಿ – ವಾಹನ ಸವಾರರಿಗೆ ಯಮರಾಜನ ಎಚ್ಚರಿಕೆ!

    ಚಿಕ್ಕಮಗಳೂರು: ಕರ್ನಾಟಕದಲ್ಲಿ ರಸ್ತೆಗಳು ಚೆನ್ನಾಗಿವೆಯೋ ಇಲ್ಲವೋ, ಸರ್ಕಾರ ಬಡವರಿಗೆ ಒಳ್ಳೆಯ ಅಕ್ಕಿ ನೀಡುತ್ತಿದೆಯೋ ಇಲ್ಲವೋ ಎಂದು ದೇವಲೋಕದ ಯಮರಾಜ ಹಾಗೂ ಚಿತ್ರಗುಪ್ತ ಕಾಫಿನಾಡಿಗೆ (Chikkamagaluru) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ! ಅಲ್ಲದೇ ಕುಡಿದು ವಾಹನ ಚಾಲನೆ ಮಾಡುವವರು, ರಸ್ತೆಗುಂಡಿಗಳ ಬಗ್ಗೆಯೂ ಜಾಗೃತಿ ಮೂಡಿಸಿದ್ದಾರೆ.

    ಮೂಡಿಗೆರೆ (Mudigere) ತಾಲೂಕಿನ ನಿಡುವಾಳೆ ಗ್ರಾಮದ ರಸ್ತೆಗಳ ಪರಿಸ್ಥಿತಿ ಕಂಡು ನಿಡುವಾಳೆ ಗ್ರಾಮ ಪಂಚಾಯಿತಿ ಸದಸ್ಯ ನವೀನ್ ಹಾವಳಿ ಹಾಗೂ ಖಾಸಗಿ ವಾಹಿನಿಯ ʻಕಾಮಿಡಿ ಕಿಲಾಡಿಗಳುʼ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಮೇಶ್ ಯಾದವ್ ಈ ಪ್ರಯೋಗ ಮಾಡಿದ್ದಾರೆ. ಇಬ್ಬರೂ ಯಮರಾಜ ಹಾಗೂ ಚಿತ್ರಗುಪ್ತನ ವೇಷ ಧರಿಸಿ ಗುಂಡಿಗಳನ್ನ ಅಳತೆ ಮಾಡಿ ದಾಖಲು ಮಾಡಿಕೊಂಡಿದ್ದಾರೆ. ಈ ಮೂಲಕ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ

    ರಾಜ್ಯಾದ್ಯಂತ ರಸ್ತೆಗಳು ತೀವ್ರ ಗುಂಡಿ ಬಿದ್ದು ಜನ ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಇದರಿಂದ ಈ ವಿನೂತನ ಪ್ರಯೋಗಕ್ಕೆ ಇಬ್ಬರು ಮುಂದಾಗಿದ್ದಾರೆ. ಜೊತೆಗೆ ಹಳ್ಳಿಗಳ ಸೊಸೈಟಿಗೆ ತೆರಳಿದ್ದ ಯಮರಾಜ-ಚಿತ್ರಗುಪ್ತರು ಸೊಸೈಟಿಯಲ್ಲಿ ಅಕ್ಕಿಯನ್ನೂ ಚೆಕ್ ಮಾಡಿದ್ದಾರೆ. ಸೊಸೈಟಿಯಲ್ಲಿ ಅಕ್ಕಿ ಚೀಲದ ಆಳಕ್ಕೆ ಕೈಹಾಕಿ ಅಕ್ಕಿ ಗುಣಮಟ್ಟದ ಬಗ್ಗೆಯೂ ತಪಾಸಣೆ ನಡೆಸಿದ್ದಾರೆ.

    ವಾಹನಗಳನ್ನ ಚಾಲನೆ ಮಾಡುವಾಗ ಮದ್ಯ ಕುಡಿದು ಚಾಲನೆ ಮಾಡುವುದರಿಂದ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ. ಯುವಜನತೆ ಪ್ರಾಣ ಕೂಡ ಕಳೆದುಕೊಳ್ಳುತ್ತಿದ್ದಾರೆ. ಇದಕ್ಕಾಗಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿ ಯಾರೂ ನನ್ನ ಬಳಿ ಬರಬೇಡಿ ಎಂದು ʻಯಮʼ ಎಚ್ಚರಿಕೆ ನೀಡಿದ್ದಾನೆ.

    ಆಗ ನಿಡುವಾಳೆ ಗ್ರಾಮದ ಜನ ರಸ್ತೆ ತುಂಬಾ ಹಾಳಾಗಿದೆ. ನಾವು ಮದ್ಯಸೇವಿಸದೆ ವಾಹನ ಚಾಲನೆ ಮಾಡಿದರೂ ಗುಂಡಿಗಳಿಗೆ ಬಿದ್ದು ಜನ ಸಾಯ್ತಿದ್ದಾರೆ. ಕೆಲವರು ಕೈಕಾಲು ಮುರಿದುಕೊಳ್ಳುತ್ತಿದ್ದಾರೆ ಎಂದು ಯಮರಾಜನಿಗೆ ತಮ್ಮೂರಿನ ರಸ್ತೆ ಬಗ್ಗೆ ತಮಾಷೆಯಾಗಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು | ಮಲೆನಾಡಿಗರ ಸ್ಪೆಷಲ್‌ ಬರಗಾಪಿಗೆ ಮನಸೋತ ಪ್ರವಾಸಿಗರು!