Tag: accused

  • ದೇಶದ ಬದ್ಧತೆಗೆ ಧಕ್ಕೆ ತಂದವರು ದೇಶ ದ್ರೋಹಿಗಳೇ: ಕಾರಜೋಳ

    ದೇಶದ ಬದ್ಧತೆಗೆ ಧಕ್ಕೆ ತಂದವರು ದೇಶ ದ್ರೋಹಿಗಳೇ: ಕಾರಜೋಳ

    ಚಿಕ್ಕೋಡಿ(ಬೆಳಗಾವಿ): ದೇಶದ ಏಕತೆ ಹಾಗೂ ಬದ್ಧತೆಗೆ ಧಕ್ಕೆ ತಂದರೆ ಅವರು ದೇಶ ದ್ರೋಹಿಗಳೇ. ಅವರು ಯಾವುದೇ ಸಮುದಾಯದವರು ಆಗಲಿ, ಅವರು ದೇಶ ದ್ರೋಹಿಗಳೇ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

    ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಬಾಂಬರ್ ಆದಿತ್ಯ ರಾವ್ ಬಗ್ಗೆ ಮಾತನಾಡಿದ ಅವರು, ತಪ್ಪು ಮಾಡಿದವರಿಗೆ ಕಾನೂನಿನ ಪ್ರಕಾರ ಶಿಕ್ಷೆ ಆಗಲಿದೆ. ಆದಿತ್ಯ ರಾವ್, ಪ್ರಭಾಕರ್ ಭಟ್ ಜೊತೆಗಿನ ಫೋಟೋ ವಿಚಾರವಾಗಿ ಮಾತನಾಡಿದ ಅವರು, ಕರ್ನಾಟಕದಲ್ಲಿ ನನ್ನೊಂದಿಗೂ ಬಹಳ ಜನ ಫೋಟೋ ತೆಗೆದುಕೊಂಡಿದ್ದಾರೆ. ಅವರು ಏನಾದರೂ ಮಾಡಿದರೆ ನಾನು ಜವಾಬ್ದಾರಿ ಆಗ್ತೀನಾ ಎಂದು ಪ್ರಶ್ನಿಸಿದರು.

    ಇದೇ ವೇಳೆ ಪ್ರವಾಹ ಸಂತ್ರಸ್ತರ ವಿಚಾರವಾಗಿ ಮಾತನಾಡಿದ ಅವರು, ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕೊಡುವ ವಿಚಾರಕ್ಕೆ ಸರ್ಕಾರ ಬದ್ಧವಾಗಿದೆ. ಸರ್ಕಾರದ ಖಜಾನೆಯಲ್ಲಿ ಹಣ ಇಲ್ಲ ಎಂಬ ಆರೋಪ ಸುಳ್ಳು. ಕೇಂದ್ರಕ್ಕಿಂತ ಹೆಚ್ಚುವರಿಯಾಗಿ ಪರಿಹಾರ ಕೊಡುತ್ತಿದ್ದೇವೆ. ಎನ್.ಡಿ.ಆರ್.ಎಫ್ ಮಾನದಂಡಕ್ಕಿಂತ ಹೆಚ್ಚು ಪರಿಹಾರ ಕೊಟ್ಟಿದ್ದೇವೆ. ಕೆಲವೆಡೆ ತಾಂತ್ರಿಕ ತೊಂದರೆಯಿಂದಾಗಿ ಪರಿಹಾರ ವಿಳಂಬ ಆಗಿದೆ. ಆದರೆ ನೆರೆ ಪರಿಹಾರ ವಿಷಯದಲ್ಲಿ ಯಾವುದೇ ತಾರತಮ್ಯ ಇಲ್ಲ ಎಂದು ಅವರು ಸ್ಪಷ್ಟ ಪಡಿಸಿದರು.

    ಇದೇ ವೇಳೆ ಪರಿಹಾರ ವಿಚಾರವಾಗಿ ಡಿಸಿಎಂ ಕಾರಿಜೋಳ ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿ ತಕ್ಷಣವೇ ಬಾಕಿ ಇರುವ ಸಂತ್ರಸ್ತರ ಪರಿಹಾರ ಬಿಡುಗಡೆ ಮಾಡುವಂತೆ ಸೂಚನೆ ನೀಡಿದರು.

  • ಹಣಕ್ಕಾಗಿ ತಾಯಿ, ಮಗಳನ್ನು ಮರ್ಡರ್ ಮಾಡಿದ್ದವ ಅರೆಸ್ಟ್

    ಹಣಕ್ಕಾಗಿ ತಾಯಿ, ಮಗಳನ್ನು ಮರ್ಡರ್ ಮಾಡಿದ್ದವ ಅರೆಸ್ಟ್

    – ಬಡಿಗೆಯಿಂದ ಹೊಡೆದು ಕೊಂದು ಬಾವಿಗೆ ಹಾಕ್ದ

    ಮಡಿಕೇರಿ: ಹೆಂಡತಿ ಎಂದು ಹೇಳಿಕೊಂಡು ಅಕ್ರಮ ಸಂಸಾರ ಮಾಡುತ್ತಿದ್ದ ಮಹಿಳೆ ಮತ್ತು ಆಕೆಯ ಮಗಳನ್ನು ಕೊಲೆ ಮಾಡಿದ್ದ ಆರೋಪಿಯನ್ನು ಕೊಡಗು ಪೊಲೀಸರು ಪ್ರಕರಣ ಬೆಳಕಿಗೆ ಬಂದ 24 ಗಂಟೆಯಲ್ಲೇ ಬಂಧಿಸಿದ್ದಾರೆ.

    ಅಸ್ಸಾಂ ರಾಜ್ಯದ ದರಾಂಗ್ ಜಿಲ್ಲೆಯವನಾದ ಆಲಿ ಅದೇ ಜಿಲ್ಲೆಯ ಮುರ್ಷಿದಾ ಕತೂನ್ ಮತ್ತು ಆಕೆಯ ಮಗಳೊಂದಿಗೆ ಕೆಲಸ ಅರಸಿ ಕೊಡಗಿಗೆ ಬಂದಿದ್ದ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಬೈತೋಡಿನ ದೇವಯ್ಯ ಎಂಬವರ ಕಾಫಿತೋಟದಲ್ಲಿ ಕಳೆದ 10 ದಿನಗಳಿಂದ ಕೆಲಸಕ್ಕೆ ಸೇರಿದ್ದ.

    ನಾಲ್ಕು ದಿನಗಳ ಹಿಂದೆ ಆಲಿ ಮಹಿಳೆಯ ಬಳಿ ಇದ್ದ 13 ಸಾವಿರ ಹಣಕ್ಕಾಗಿ ಮುರ್ಷಿದಾ ಕತೂನ್ ಮತ್ತು ಆಕೆಯ 14 ವರ್ಷದ ಮಗಳನ್ನು ಬಡಿಗೆಯಿಂದ ಹೊಡೆದು ಕೊಲೆ ಮಾಡಿದ್ದ. ಬಳಿಕ ಪಕ್ಕದಲ್ಲಿಯೇ ಇದ್ದ ಬಾವಿಗೆ ಇಬ್ಬರ ಶವಗಳನ್ನು ಎಸೆದಿದ್ದ. ಗುರುವಾರ ಎರಡು ಶವಗಳು ಬಾವಿಯಲ್ಲಿ ತೇಲಿದಾಗ ಘಟನೆ ಬೆಳಕಿಗೆ ಬಂದಿತ್ತು. ಕೊಲೆ ಮಾಡಿದ್ದ ಆರೋಪಿ ಆಲಿ ಹೆಂಡತಿ ಮತ್ತು ಮಗಳು ಇಬ್ಬರು ಎಲ್ಲಿಯೋ ಹೋಗಿದ್ದಾರೆ ಎಂದು ಹೇಳಿ, ಹುಡುಕಿ ಬರುವುದಾಗಿ ಹೋದವನು ಮೂಡಿಗೆರೆಯಲ್ಲಿ ತಲೆಮರೆಸಿಕೊಂಡಿದ್ದ.

    ಗುರುವಾರ ಶವಗಳನ್ನು ಬಾವಿಯಿಂದ ಹೊರತೆಗೆದಿದ್ದ ಪೊಲೀಸರು, ಆಲಿಗಾಗಿ ಹುಡುಕಾಟ ನಡೆಸಿದ್ದರು. ನಂತರ ಆಲಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ತಾನೇ ಹಣಕ್ಕಾಗಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಪ್ರಕರಣ ಬೆಳಕಿಗೆ ಬಂದ 24 ಗಂಟೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

  • ಬಾಂಬ್ ಇಟ್ಟವನ ಶೂಟ್ ಮಾಡಿ: ಶ್ರೀರಾಮುಲು

    ಬಾಂಬ್ ಇಟ್ಟವನ ಶೂಟ್ ಮಾಡಿ: ಶ್ರೀರಾಮುಲು

    ಮೈಸೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ವ್ಯಕ್ತಿಯನ್ನು ಶೂಟ್ ಮಾಡಬೇಕೆಂದು ಮೈಸೂರಿನಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

    ಸಮಾಜಘಾತುಕ ಶಕ್ತಿಗಳನ್ನು ಬೆಳೆಯಲು ಬಿಡಬಾರದು. ಕೆಲವರು ಶೋಕಿ, ಪ್ರಚಾರದ ಆಸೆಗಾಗಿ ಹೀಗೆಲ್ಲಾ ಮಾಡುತ್ತಾರೆ. ಮಾನಸಿಕ ಸ್ಥಿಮಿತತೆ ಕಳೆದುಕೊಂಡವರು ಇಂತಹ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವುದನ್ನೂ ಗಮನಿಸಿದ್ದೇವೆ. ಆದ್ದರಿಂದ ಅಂತಹ ವ್ಯಕ್ತಿಗಳನ್ನು ಕಂಡಲ್ಲಿ ಗುಂಡಿಕ್ಕಿ ಕೊಲ್ಲಬೇಕು ಎಂದರು.

    ಮಂಗಳೂರು ಬಾಂಬ್ ಪ್ರಕರಣದ ಬಗ್ಗೆ ಹೆಚ್‍ಡಿಕೆ ಹೇಳಿಕೆಗೂ ಕಿಡಿಕಾರಿದ ಶ್ರೀರಾಮುಲು, ಕುಮಾರಸ್ವಾಮಿ ಸ್ವಲ್ಪ ಸೀರಿಯಸ್‍ನೆಸ್ ಕಲಿಯಬೇಕು. ಕುಮಾರಸ್ವಾಮಿಗೆ ಸೀರಿಯಸ್ ನೆಸ್ ಇಲ್ಲ ಎಂದು ಮೊದಲಿನಿಂದಲೂ ನಾನು ಹೇಳಿಕೊಂಡು ಬಂದಿದ್ದೀನಿ. ಯಾವ ವಿಚಾರ ಗೇಲಿ ಮಾಡಬೇಕು, ಯಾವ ವಿಚಾರವನ್ನು ಗಂಭೀರವಾಗಿ ಮಾತನಾಡಬೇಕು ಎಂಬುದನ್ನು ಅವರು ಕಲಿತುಕೊಳ್ಳಬೇಕು. ಹಿಂದೆ ಸೈನಿಕರ ಬಗ್ಗೆ ಹಗುರವಾಗಿ ಮಾತನಾಡಿದ್ದರು. ಈಗ ಬಾಂಬ್ ಪತ್ತೆ ಬಗ್ಗೆ ಗೇಲಿ ಮಾಡಿದ್ದಾರೆ. ಇವರು ಮಾಜಿ ಪ್ರಧಾನಿ ಮಗ, ಮುಖ್ಯಮಂತ್ರಿಯಾಗಿ ಕೆಲಸ ಮಾಡಿದವರು ಎಂಬುದನ್ನು ಅವರು ಮರೆಯಬಾರದು ಎಂದು ಹೇಳಿದರು.

    ಮಂಗಳೂರು ಗಲಭೆ ಪ್ರಕರಣಗಳಲ್ಲಿ ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳ ಕೈವಾಡವಿರುವ ಬಗ್ಗೆ ಅನುಮಾನವಿದೆ. ಮೈಸೂರಿನಲ್ಲಿ ತನ್ವೀರ್ ಸೇಠ್, ಬೆಂಗಳೂರಿನಲ್ಲಿ ಹ್ಯಾರಿಸ್ ಮೇಲೆ ಹಲ್ಲೆಯಾಗಿದೆ. ಜನಪ್ರತಿನಿಧಿಗಳನ್ನೇ ಗುರಿಯಾಗಿಸಿಕೊಂಡು ಹಲ್ಲೆ ಮಾಡಿದ್ದಾರೆ. ಸಮಾಜದ ಶಾಂತಿ ಕದಡುವ ವ್ಯಕ್ತಿ ಯಾರೇ ಆಗಿರಲಿ, ಯಾವುದೇ ಪಕ್ಷ, ಸಂಘಟನೆಯಾಗಿರಲಿ ಅವರ ವಿರುದ್ಧ ಶಿಸ್ತು ಕ್ರಮ ಆಗಬೇಕು ಎಂದು ಆಗ್ರಹಿಸಿದರು.

  • ಒಬ್ಬನೇ ಬಾಂಬ್ ಫಿಕ್ಸ್ ಮಾಡಲು ಸಾಧ್ಯವಿಲ್ಲ, ಬೇರೆಯವ್ರ ಸಹಾಯದಿಂದ ಮಾಡಿದ್ದಾನೆ: ಖಾದರ್

    ಒಬ್ಬನೇ ಬಾಂಬ್ ಫಿಕ್ಸ್ ಮಾಡಲು ಸಾಧ್ಯವಿಲ್ಲ, ಬೇರೆಯವ್ರ ಸಹಾಯದಿಂದ ಮಾಡಿದ್ದಾನೆ: ಖಾದರ್

    – ಸಮಾಜದ್ರೋಹಿ ಶಕ್ತಿಗಳು ಎಲ್ಲ ವರ್ಗದಲ್ಲಿವೆ

    ಮಂಗಳೂರು: ಒಬ್ಬನೇ ಬಾಂಬ್ ಫಿಕ್ಸ್ ಮಾಡಲು ಸಾಧ್ಯವಿಲ್ಲ, ಬೇರೆಯವರ ಸಹಾಯದಿಂದ ಮಾಡಿದ್ದಾನೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಂಗಳೂರು ಬಾಂಬರ್ ಬಂಧನ ವಿಚಾರವಾಗಿ ಮಾತನಾಡಿದ ಅವರು, ಇದೊಂದು ಗಂಭೀರ ವಿಚಾರ. ಸಮಾಜದ್ರೋಹಿ ಶಕ್ತಿಗಳು ಎಲ್ಲಾ ವರ್ಗದಲ್ಲಿ ಇದ್ದಾರೆ. ಒಂದೇ ವರ್ಗವನ್ನು ಗುರಿಯಾಗಿಸಬಾರದು. ಆರೋಪಿಯನ್ನು ಪತ್ತೆ ಹಚ್ಚುವ ಮೊದಲೇ ಸಮುದಾಯವನ್ನು ಗುರಿಯಾಗಿಸಿದ್ದಾರೆ ಎಂದು ಕಿಡಿಕಾರಿದರು.

    ಒಬ್ಬನೇ ಬಾಂಬ್ ಫಿಕ್ಸ್ ಮಾಡಲು ಸಾಧ್ಯವಿಲ್ಲ. ಬೇರೆಯವರ ಸಹಾಯದಿಂದ ಮಾಡಿದ್ದಾನೆ. ಆರೋಪಿಗೆ ತಲೆ ಸರಿಯಿಲ್ಲ ಅಂತ ಹೇಳುತ್ತಾರೆ, ಆರೋಪಿಗೆ ಬಾಂಬ್ ಫಿಕ್ಸ್ ಮಾಡುವುದಕ್ಕೆ ಸರಿಯಿದ್ಯಾ? ಆರೋಪಿ ಬೆಂಗಳೂರು ಮುಟ್ಟುವ ತನಕ ಪೊಲೀಸರು ಎಲ್ಲಿದ್ದರು. ಎಲ್ಲಾ ಸ್ಕ್ಯಾಡ್‍ಗಳು ಎಲ್ಲಿ ಹೋಗಿತ್ತು ಎಂದು ಖಾದರ್ ಪ್ರಶ್ನೆ ಮೇಲೆ ಪ್ರಶ್ನೆ ಹಾಕಿದರು. ಇದನ್ನು ಓದಿ: ಆದಿತ್ಯ ಶರಣಾಗಿರೋದು ನಾಟಕ, ಬೆಂಗ್ಳೂರಿಗೆ ಬಂದಿದ್ದು ಹೇಗೆ – ಎಚ್‍ಡಿಕೆ ಪ್ರಶ್ನೆ

    ಪೊಲೀಸರ ಬಳಿ ಸಿಸಿಟಿವಿ ದೃಶ್ಯ ಇತ್ತು. ಎಲ್ಲ ಮಾಹಿತಿಗಳೂ ಪೊಲೀಸರ ಬಳಿ ಇತ್ತು. ಆದರೂ ಆರಾಮಾಗಿ ಆತ ಬೆಂಗಳೂರಿಗೆ ಹೋಗಿದ್ದಾನೆ. ಆರಾಮಾಗಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಇದರ ಹಿಂದೆ ದೊಡ್ಡ ಸಂಚು ಇದೆ. ಇದರ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಖಾದರ್ ಆಗ್ರಹಿಸಿದರು.

    ಕಳೆದ ಸೋಮುವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಟಿಕೆಟ್ ಕೌಂಟರ್ ಬಳಿ ಒಂದು ಕಪ್ಪು ಲ್ಯಾಪ್ ಟಾಪ್ ಪತ್ತೆಯಾಗಿತ್ತು. ನಂತರ ಅದನ್ನು ಪರೀಕ್ಷಿಸಿದಾಗ ಬಾಂಬ್ ಇರುವುದು ಪತ್ತೆಯಾಗಿದ್ದು, ಬಳಿಕ ಅದನ್ನು ಕೆಂಜಾರು ಮೈದಾನದಲ್ಲಿ ಸ್ಫೋಟಿಸಿ ನಿಷ್ಕ್ರಿಯ ಮಾಡಲಾಗಿತ್ತು. ಬಾಂಬ್ ಅನ್ನು ಅಲ್ಲಿಗೆ ತಂದು ಇಟ್ಟಿದ್ದ ವ್ಯಕ್ತಿಯ ಫೋಟೋಗಳು ಸಿಸಿಟಿವಿಯಲ್ಲಿ ಲಭ್ಯವಾಗಿದ್ದವು. ಆದರೆ ಇಂದು ಆರೋಪಿ ಆದಿತ್ಯ ರಾವ್, ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರ ಕಚೇರಿಗೆ ತೆರಳಿ ನಾನೇ ಬಾಂಬ್ ಇಟ್ಟಿದ್ದು ಎಂದು ಶರಣಾಗಿದ್ದನು. ಸದ್ಯ ಆತನನ್ನು ಬೆಂಗಳೂರು ಪೊಲೀಸರು ಮಂಗಳೂರು ಪೊಲೀಸರಿಗೆ ಹಸ್ತಾಂತರ ಮಾಡಿದ್ದು, ಮಂಗಳೂರಿಗೆ ಕರೆದೊಯ್ದಿದ್ದಾರೆ. ನಾಳೆ 6 ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ.

  • I Am Fit And Fine- ವೈದ್ಯರ ಬಳಿ ಆದಿತ್ಯ ರಾವ್ ಡೈಲಾಗ್

    I Am Fit And Fine- ವೈದ್ಯರ ಬಳಿ ಆದಿತ್ಯ ರಾವ್ ಡೈಲಾಗ್

    ಬೆಂಗಳೂರು: ನನಗೆ ಏನೂ ಆಗಿಲ್ಲ. ನಾನು ಚೆನ್ನಾಗಿದ್ದೇನೆ ಎಂದು ಆದಿತ್ಯ ರಾವ್ ವೈದ್ಯರ ಜೊತೆ ಹೇಳಿದ್ದಾನೆ

    ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣದಲ್ಲಿ ಇಂದು ಬೆಳಗ್ಗೆ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಶರಣಾಗಿದ್ದ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವ ಮೊದಲು ಕೆಸಿ ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ವೈದ್ಯರು ಪರೀಕ್ಷೆ ನಡೆಸುತ್ತಿದ್ದಾಗ, “ಐ ಆ್ಯಮ್ ಆಲ್ ರೈಟ್ ಡಾಕ್ಟರ್, ಐ ಡೋಂಟ್ ನೀಡ್ ಎನಿ ಮೆಡಿಸಿನ್” ಅಂತ ಡೈಲಾಗ್ ಹೊಡೆದಿದ್ದಾನೆ. ಆರೋಪಿ ಆದಿತ್ಯ ರಾವ್ ವೈದ್ಯರ ಜೊತೆ ನಡೆಸಿದ ಸಂಭಾಷಣೆಯ ಎಕ್ಸ್ ಕ್ಲೂಸೀವ್ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

    ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಪೊಲೀಸರು ಆರೋಪಿಯನ್ನು ಕೆಸಿ ಜನರಲ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ವೈದ್ಯರು, ಏನಾದರೂ ಸಮಸ್ಯೆ ಇದ್ಯಾ? ಜ್ವರ ಶೀತ ಕೆಮ್ಮು ಏನಾದ್ರೂ ಇದೆಯೇ ಎಂದು ಪ್ರಶ್ನಿಸಿದರು. ಆಗ ಆದಿತ್ಯ ರಾವ್, ಐ ಆ್ಯಮ್ ಆಲ್ ರೈಟ್ ನಂಗೇನೂ ಸಮಸ್ಯೆಯೇ ಇಲ್ಲ. ನಂಗ್ಯಾವ ಮೆಡಿಸನ್ ಬೇಡ ಅಂತ ಹೇಳಿದ್ದಾನೆ. ಇದನ್ನೂ ಓದಿ: ಕುಟುಂಬದಿಂದಲೇ ಹೊರ ಹಾಕಿದ್ದೇವೆ, 2 ವರ್ಷದಿಂದ ಸಂಪರ್ಕ ಇಲ್ಲ – ಅಕ್ಷತ್ ರಾವ್

    ವೈದ್ಯರ ಎಲ್ಲಾ ತಪಾಸಣೆಗೂ ಸಕಾರಾತ್ಮಕವಾಗಿ ಸೈಕೋ ಬಾಂಬರ್ ಆದಿತ್ಯ ರಾವ್ ಸ್ಪಂದಿಸಿದ್ದಾನೆ. ಮಾನಸಿಕ ಸ್ಥಿತಿ ಬಗ್ಗೆ ನಾವೇನು ಜಡ್ಜ್ ಮಾಡುವುದಕ್ಕೆ ಆಗುವುದಿಲ್ಲ. ಆದರೆ ಆತ ಮಾತಾನಾಡುವ ಶೈಲಿ ನೋಡಿದರೆ ಆತ ಮಾನಸಿಕ ಅಸ್ವಸ್ಥ ಅಂತ ಹೇಳೋದಕ್ಕೆ ಬರಲ್ಲ. ಆದರೆ ಮಂಗಳೂರು ಪೊಲೀಸರು ಆಮೇಲೆ ಆತನ ಮಾನಸಿಕ ಸ್ಥಿತಿಯ ಬಗ್ಗೆ ವೈದ್ಯರ ಅಭಿಪ್ರಾಯ ಪಡೆದೇ ಪಡೆಯುತ್ತಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ತಾಯಿಗೆ ಕ್ಯಾನ್ಸರ್ ಆಗಿದ್ರೂ ಸಹಾಯಕ್ಕೆ ಬಂದಿರಲಿಲ್ಲ ಆದಿತ್ಯ ರಾವ್!

    ಆತನ ಬಿಪಿ ಪಲ್ಸ್ ಶುಗರ್ ಎಲ್ಲವೂ ನಾರ್ಮಲ್ ಆಗಿದೆ. ಹೃದಯಸಂಬಂಧಿ ಸಮಸ್ಯೆಯೂ ಆತನಿಗಿಲ್ಲ ಅಂತ ವೈದ್ಯರು ತಿಳಿಸಿದ್ದಾರೆ. ಇದೇ ವೇಳೆ ತಿಂಡಿ ಮಾಡಿದ್ರಾ ಎಂದು ವೈದ್ಯರ ಪ್ರಶ್ನೆಗೆ, ಹೌದು ಮಾಡಿದ್ದೀನಿ, ನಂಗ್ಯಾವ ಮಾತ್ರೆ ಬರೆದು ಕೊಡಬೇಡಿ. ಯಾವ ಟ್ಯಾಬ್ಲೆಟ್ ತೆಗೆದುಕೊಳ್ಳುವ ಸಮಸ್ಯೆ ನಂಗಿಲ್ಲವೆಂದು ವೈದ್ಯರಿಗೆ ಮಾಹಿತಿ ಕೊಟ್ಟಿದ್ದಾನೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ನಾಲ್ಕು ಸಿಮ್ ಇಟ್ಕೊಂಡಿದ್ದ, ಲ್ಯಾಪ್‍ಟಾಪ್ ಕದ್ದಿದ್ದ – ಎಸಿ ಹಾಕ್ತಾರೆ ಎಂದು ಬ್ಯಾಂಕ್ ಕೆಲಸ ಬಿಟ್ಟ

  • ಮೊದಲೇ ಮಾಹಿತಿ ಸಿಕ್ಕಿತ್ತು, ಪೊಲೀಸರ ತನಿಖೆಗೆ ಭಯಗೊಂಡು ಆರೋಪಿ ಶರಣಾಗಿದ್ದಾನೆ: ಬೊಮ್ಮಾಯಿ

    ಮೊದಲೇ ಮಾಹಿತಿ ಸಿಕ್ಕಿತ್ತು, ಪೊಲೀಸರ ತನಿಖೆಗೆ ಭಯಗೊಂಡು ಆರೋಪಿ ಶರಣಾಗಿದ್ದಾನೆ: ಬೊಮ್ಮಾಯಿ

    ಬೆಂಗಳೂರು: ಪೊಲೀಸರು ತನಿಖೆ ನಡೆಸಿದ ರೀತಿಯಿಂದಲೇ ಆರೋಪಿ ಶರಣಾಗಿದ್ದಾನೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

    ಆರೋಪಿಯ ವಿರುದ್ಧ ಸಿಕ್ಕ ಸಿಸಿಟಿವಿ ದೃಶ್ಯಾವಳಿ, ಆಟೋ ಹಾಗೂ ಇತರೆ ಸಾಕ್ಷ್ಯಗಳ ಜಾಲವನ್ನು ಹುಡುಕಿ ಹೊರಟಾಗ ಆದಿತ್ಯ ರಾವ್ ಬಗ್ಗೆ ಮಾಹಿತಿ ಸಿಕ್ಕಿತ್ತು. ಉಡುಪಿಯಲ್ಲಿರುವ ಆತನ ಮನೆಗೆ ಹೋಗಿ ತಂದೆ, ತಾಯಿ ಹಾಗೂ ಕುಟುಂಬಸ್ಥರ ಬಳಿ ಪೊಲೀಸರು ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿದ್ದರು. ಆ ಬಳಿಕ ಮೂರು ತನಿಖಾ ತಂಡ ರಚಿಸಿ ಈ ಸಂಬಂಧ ತನಿಖೆ ನಡೆಸಲಾಗುತ್ತಿತ್ತು. ಆದರೆ ಆರೋಪಿ ಉಡುಪಿಯಿಂದ ಬೆಂಗಳೂರಿಗೆ ಬಂದು ಪೊಲೀಸರಿಗೆ ಶರಣಾಗಿದ್ದಾನೆ. ಈ ಕೃತ್ಯವೆಸಗಲು ಏನು ಕಾರಣ? ಆತನ ಹಿಂದೆ ಯಾರಿದ್ದಾರೆ? ಎನ್ನುವ ಎಲ್ಲಾ ಮಾಹಿತಿ ತನಿಖೆ ಬಳಿಕ ತಿಳಿದು ಬರಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಇದನ್ನೂ ಓದಿ: ಹೌದು, ಬಾಂಬ್ ಇಟ್ಟಿದ್ದು ನಾನೇ – ತಪ್ಪೊಪ್ಪಿಕೊಂಡ ಆದಿತ್ಯ ರಾವ್

    ಈ ಪ್ರಕರಣದಲ್ಲಿ ನಮ್ಮ ಪೊಲೀಸರು ಕ್ಷಿಪ್ರವಾಗಿ ಕೆಲಸ ಮಾಡಿರುವುದು ಅವರ ದಕ್ಷತೆ ಮತ್ತು ಪ್ರಾಮಾಣಿಕತೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ. ಹೀಗಾಗಿ ಅನಾವಶ್ಯಕವಾಗಿ ಪೊಲೀಸರ ಬಗ್ಗೆ ಟೀಕೆ ಮಾಡಿ ಅವರ ನೈತಿಕತೆಯನ್ನು ಕುಗ್ಗಿಸುವ ಕೆಲಸವನ್ನು ಯಾರು ಮಾಡಬಾರದು. ಪೊಲೀಸರು ತನಿಖೆ ನಡೆಸಿದ ರೀತಿಯಿಂದಲೇ ಆರೋಪಿ ಶರಣಾಗಿದ್ದಾನೆ. ಅದಕ್ಕೆ ನಾವು ಮೊದಲು ಆರೋಪಿ ಇಂತಹ ಸಂಘಟನೆಗೆ ಸೇರಿದವರು ಅಥವಾ ಇಂತಹ ವ್ಯಕ್ತಿ ಎಂದು ಹೇಳಿರಲಿಲ್ಲ. ಯಾರೇ ಆರೋಪಿ ಇದ್ದರು ಅವನನ್ನು ಕಂಡು ಹಿಡಿಯುತ್ತೇನೆ ಎಂದಿದ್ದೆವು. ಆ ಪ್ರಕಾರ ಪೊಲೀಸರು ಪ್ರಾಮಾಣಿಕವಾಗಿ ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಗೃಹ ಸಚಿವರು ಪೊಲೀಸರನ್ನು ಶ್ಲಾಘಿಸಿದರು. ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಸಿಗದ್ದಕ್ಕೆ ಬೆದರಿಕೆ ಕರೆ ಮಾಡಿದ್ದ ಬಾಂಬರ್ ಈಗ ಬಾಂಬ್ ಇಟ್ಟ

    ಆರೋಪಿ ಬೇರೆ ಬೇರೆ ಮಾರ್ಗದಿಂದ ಬೆಂಗಳೂರಿಗೆ ಬಂದಿದ್ದಾನೆ. ಸರ್ಕಾರಿ ಬಸ್ ಅಥವಾ ಸಾಮಾನ್ಯ ಬಸ್‍ಗಳಲ್ಲಿ ಆತ ಬೆಂಗಳೂರಿಗೆ ಬಂದಿಲ್ಲ. ಪೊಲೀಸರ ಕಣ್ತಪ್ಪಿಸಿ ರಾತ್ರೋರಾತ್ರಿ ಬೆಂಗಳೂರಿಗೆ ಬಂದಿದ್ದಾನೆ. ಉಗ್ರ ಸಂಘಟನೆ ಜೊತೆ ಆರೋಪಿಗೆ ಲಿಂಕ್ ಇದೆಯೇ? ಇಲ್ಲವಾ? ಎನ್ನೋದು ಮುಂದಿನ ತನಿಖೆಯಲ್ಲಿ ಪತ್ತೆಯಾಗುತ್ತೆ ಎಂದರು.

    ಸಾಮಾನ್ಯವಾಗಿ ಬಾಂಬ್ ಪತ್ತೆ, ಬ್ಲಾಸ್ಟ್ ಪ್ರಕರಣ ನಡೆದಾಗ ಕೇಂದ್ರ ಸರ್ಕಾರಕ್ಕೆ ಮಾಹಿತಿ ತಲುಪಿರುತ್ತದೆ. ಈಗಾಗಲೇ ಎನ್‍ಎಸ್‍ಜಿ(ರಾಷ್ಟ್ರೀಯ ಭದ್ರತಾ ಗಾರ್ಡ್) ಸಿಬ್ಬಂದಿ ಮಂಗಳೂರು ಏರ್‌ಪೋರ್ಟ್‌ ಹಾಗೂ ಇತರೆ ಪ್ರದೇಶಗಳಲ್ಲಿ ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ತನಿಖೆ ಮೇಲೆ ಏನು ಬಯಲಾಗುತ್ತದೋ ಅದರ ಆಧಾರದ ಮೇಲೆ ಕ್ರಮ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದರು ಮಾಹಿತಿ ನೀಡಿದರು. ಇದನ್ನೂ ಓದಿ: ಮಂಗ್ಳೂರು ಸ್ಫೋಟ ಪ್ರಕರಣ- ಪಬ್ಲಿಕ್ ಟಿವಿಗೆ ಶಂಕಿತ ಉಗ್ರನ ವಿಡಿಯೋಗಳು ಲಭ್ಯ

    ಆರೋಪಿಯು ಪದವಿಧರನಾಗಿದ್ದು, ಮಂಗಳೂರಿನಲ್ಲಿ ಕೆಲಸ ಪಡೆಯುವಲ್ಲಿ ವಿಫಲವಾಗಿದ್ದನು. ಈ ಹಿಂದೆ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸೆಕ್ಯೂರಿಟಿ ಆಗಿ ಕೆಲಸಕ್ಕೆ ಸೇರಲು ಪ್ರಯತ್ನಿಸಿದ್ದ. ಮುಂಜಾನೆ ಆರೋಪಿ ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ. ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದು ಬರಲಿದೆ.

  • 6ರ ಬಾಲಕಿ ಮೇಲೆ ರೇಪ್, ಕೊಲೆ ಆರೋಪ- ವ್ಯಕ್ತಿಯನ್ನ ಜೀವಂತವಾಗಿ ಸುಟ್ಟ ಜನ

    6ರ ಬಾಲಕಿ ಮೇಲೆ ರೇಪ್, ಕೊಲೆ ಆರೋಪ- ವ್ಯಕ್ತಿಯನ್ನ ಜೀವಂತವಾಗಿ ಸುಟ್ಟ ಜನ

    – ಪೊಲೀಸರಿಗೆ ಒಪ್ಪಿಸಲು ಹೋಗುವಾಗ್ಲೇ ವ್ಯಕ್ತಿಯ ಕಗ್ಗೊಲೆ

    ಮೆಕ್ಸಿಕೊ: ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದಾನೆ ಎಂದು ಶಂಕಿಸಿ ಗ್ರಾಮಸ್ಥರು ವ್ಯಕ್ತಿಯೊಬ್ಬನನ್ನು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಮೆಕ್ಸಿಕೋದ ಚಿಯಾಪಾಸ್ ಗ್ರಾಮದಲ್ಲಿ ನಡೆದಿದೆ.

    ಆಲ್ಫ್ರೆಡೋ ರೊಬ್ಲೆರೊ ಕೊಲೆಯಾದ ವ್ಯಕ್ತಿ. ಈತನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಜೀವಂತವಾಗಿ ಸುಟ್ಟು ಹಾಕಿದ್ದಾರೆ.

    ಏನಿದು ಪ್ರಕರಣ?
    ಜನವರಿ 9 ರಂದು ಆರು ವರ್ಷದ ಬಾಲಕಿ ನಾಪತ್ತೆಯಾಗಿದ್ದಳು. ಪೋಷಕರು ಎಲ್ಲಾ ಕಡೆ ಹುಡುಕಾಡಿ ಕೊನೆಗೆ ಪೊಲೀಸ್ ಠಾಣೆಗೆ ಹೋಗಿ ನಾಪತ್ತೆ ದೂರು ದಾಖಲಿಸಿದ್ದರು. ಆದರೆ ಮರುದಿನ ಬಾಲಕಿಯ ಶವ ರಸ್ತೆ ಬದಿಯಲ್ಲಿ ಪತ್ತೆಯಾಗಿತ್ತು. ಹೀಗಾಗಿ ಪೋಷಕರು ಮತ್ತು ಗ್ರಾಮಸ್ಥರು ಬಾಲಕಿಯನ್ನು ಅತ್ಯಾಚಾರ ಮಾಡಿ, ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

    ಆಗ ಬಾಲಕಿಯ ಸಂಬಂಧಿಕರು ಆಲ್ಫ್ರೆಡೋ ರೊಬ್ಲೆರೊ ಈ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂದು ಶಂಕಿಸಿ ಪೊಲೀಸರಿಗೆ ಒಪ್ಪಿಸಲು ಮುಂದಾಗಿದ್ದರು. ಆದರೆ ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದರೆ ಬೇಗ ನ್ಯಾಯ ಸಿಗುವುದಿಲ್ಲ ಎಂದು ಆತನನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ನಂತರ ಕೈ ಕಾಲು ಕಟ್ಟಿ ಆತನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಜೀವಂತವಾಗಿ ಸುಟ್ಟು ಹಾಕಿದ್ದಾರೆ.

    ಮೃತ ವ್ಯಕ್ತಿ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಬಾಲಕಿ ಮೃತಪಟ್ಟಿದ್ದಾಳೆ. ಆದರೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವುದಾಗಿ ಪೋಷಕರು ಆರೋಪಿಸಿದ್ದಾರೆ. ಆದರೆ ಗ್ರಾಮಸ್ಥರು ಅನುಮಾನದ ಮೇರೆಗೆ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಿದ್ದಾರೆ. ಶಂಕಿತ ಆರೋಪಿಯ ಸಾವಿನ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

    ಶಂಕಿತ ಆರೋಪಿಯನ್ನು ಯಾರು ಕೊಂದರು ಎಂಬುದು ತಿಳಿದು ಬಂದಿಲ್ಲ. ಹೀಗಾಗಿ ಪೊಲೀಸರು ಅಪರಿಚಿತರ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಒಂದು ಹತ್ಯೆ ಯತ್ನ – ಆರು ಕೇಸ್ ರೀ ಓಪನ್

    ಒಂದು ಹತ್ಯೆ ಯತ್ನ – ಆರು ಕೇಸ್ ರೀ ಓಪನ್

    ಬೆಂಗಳೂರು: ಹಿಂದೂ ಮುಖಂಡರ ಹತ್ಯೆಗೆ ಯತ್ನಿಸಿ ಸಿಕ್ಕಿಬಿದ್ದ ಆರು ಆರೋಪಿಗಳಿಗೂ ಈಗ ದೊಡ್ಡ ಶಾಕ್ ಆಗಿದೆ. ನಾವು ಸಿಕ್ಕೇ ಬೀಳುವುದಿಲ್ಲ ಎಂದುಕೊಂಡಿದ್ದ ಪ್ರಕರಣಗಳೆಲ್ಲಾ ಈಗ ಬೆನ್ನಿಗೆ ಬಿದ್ದಿವೆ. ಏಕೆಂದರೆ ಒಂದು ಕೇಸ್‍ನಿಂದ ಈಗ ಆರು ಪ್ರಕರಣಗಳು ರೀ-ಓಪನ್ ಆಗಿದೆ.

    ಆರು ಆರೋಪಿಗಳು ಆರೋಪಕ್ಕೆ ಸಾಕ್ಷ್ಯವೇ ಇಲ್ಲದ ಪ್ರಕರಣಗಳಿಗೆ ರೂವಾರಿಯಾಗಿದ್ದರು. ಈ ಆರು ಆರೋಪಿಗಳ ಪೈಕಿ ನಾಲ್ವರು ಸಾಕಷ್ಟು ಆರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಆ ಆರು ಪ್ರಕರಣದಲ್ಲಿ ಮೈಸೂರಿನ ನಜರ್ ಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಯತ್ನ ಪ್ರಕರಣವೂ ಒಂದು. ಇದನ್ನೂ ಓದಿ: ಸಿಎಎ ಪರ ಬ್ಯಾಟಿಂಗ್ ಮಾಡಿದ್ದಕ್ಕೆ ಟಾರ್ಗೆಟ್ – ಸೂಲಿಬೆಲೆ, ತೇಜಸ್ವಿ ಕೊಲೆಗೆ ಸ್ಕೆಚ್

     

    ಕೊಲೆ ಯತ್ನ ಮಾಡಿ ಎಸ್ಕೇಪ್ ಆಗಿದ್ದ ಆರೋಪಿಗಳು ಬೆಂಗಳೂರಿನ ಮಹಮದ್ ಖಲಿ ಎಂಬವರ ಕಾರು ಸುಟ್ಟು ಹಾಕಿದ್ದರು. ಅದರಲ್ಲೂ ಇರ್ಫಾನ್ ಖಲಿಯ ಕಾರನ್ನು ಸುಟ್ಟು ಹಾಕಿದ್ದನು. ಎಸ್‍ಡಿಪಿಐ ವಿರುದ್ಧ ಮಾತನಾಡಿದ್ದ ಖಲಿ ವಿರುದ್ಧ ಸೇಡು ತೀರಿಸಿಕೊಳ್ಳುವುದೇ ಆರೋಪಿಗಳ ಮುಖ್ಯ ಉದ್ದೇಶ ಆಗಿತ್ತು.

    ಈ ಎಲ್ಲಾ ಪ್ರಕರಣದಲ್ಲೂ ಪೊಲೀಸರಿಗೆ ಸರಿಯಾದ ಸಾಕ್ಷ್ಯ ಸಿಕ್ಕದೇ ಸಿ-ರಿಪೋರ್ಟ್ ಹಾಕಿದ್ದರು. ಆರು ಪ್ರಕರಣಕ್ಕೂ ಸಾಕ್ಷ್ಯವೇ ಸಿಗದಂತೆ ಮಾಡಿ ಬಿಟ್ಟಿದ್ದರು. ಆದರೆ ಅದೃಷ್ಟ ಕೆಟ್ಟಿತ್ತು. ಈಗ ಎಲ್ಲಾ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ. ಆರೋಪಿಗಳ ಜೊತೆಗೆ ಹಳೆಯ ಪ್ರಕಣಕ್ಕೂ ಜೀವ ಬಂದಿದೆ. ಎಟಿಸಿಗೆ ಪ್ರಕರಣ ವರ್ಗಾವಣೆಯಾಗಿದ್ದು, ಇನ್ನಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ.

  • ಕದ್ದ ಚಿನ್ನಾಭರಣಕ್ಕೆ ಕಿತ್ತಾಟ – ನಟೋರಿಯಸ್ ಕಳ್ಳನನ್ನು ಕೊಂದ ಆರೋಪಿಗಳು ಅಂದರ್

    ಕದ್ದ ಚಿನ್ನಾಭರಣಕ್ಕೆ ಕಿತ್ತಾಟ – ನಟೋರಿಯಸ್ ಕಳ್ಳನನ್ನು ಕೊಂದ ಆರೋಪಿಗಳು ಅಂದರ್

    ಬೆಂಗಳೂರು: ಕದ್ದ ಚಿನ್ನಾಭರಣವನ್ನು ಹಂಚಿಕೆ ಮಾಡಿಕೊಳ್ಳುವ ವಿಚಾರಕ್ಕೆ ನಟೋರಿಯಸ್ ರಾಬರ್ ಶೋಯಬ್ ಪಾಷಾನನ್ನು ಕೊಲೆ ಮಾಡಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ರಾಯಣ್ಣ, ವಸೀಂ, ಅಬ್ರಾನ್, ಸಮೀರ್ ಹಾಗೂ ಚಪ್ಪರ್ ಬಾಬು ಬಂಧಿತ ಆರೋಪಿಗಳು. ಕೊಲೆಯಾದ ಶೋಯಬ್ ಪಾಷಾ ಹಾಗೂ ಬಂಧಿತ ಐವರು ಆರೋಪಿಗಳು ಹಲವು ಪ್ರಕರಣಗಳಲ್ಲಿ ಒಟ್ಟಿಗೆ ಕಳ್ಳತನ, ದರೋಡೆಗಳನ್ನು ಮಾಡಿದ್ದಾರೆ. ಕಳ್ಳತನ, ದರೋಡೆ ಪ್ರಕರಣಗಳಲ್ಲಿ ಕದ್ದ ಚಿನ್ನಾಭರಣಗಳನ್ನು ಹಂಚಿಕೆ ಮಾಡುವಾಗ ಕೊಲೆಯಾದ ಶೋಯಬ್ ಪಾಷಾ ಆರೋಪಿಗಳಿಗೆ ಸಮರ್ಪಕವಾಗಿ ಹಂಚದೇ ಮೋಸ ಮಾಡಿದ್ದ.

    ಇದೇ ವಿಚಾರಕ್ಕೆ ಹಲವು ಬಾರಿ ಆರೋಪಿಗಳು ಹಾಗೂ ಕೊಲೆಯಾದ ಪಾಷಾ ನಡುವೆ ಗಲಾಟೆ ನಡೆದಿತ್ತು. ಕಳೆದ ಭಾನುವಾರ ಕೊಲೆಯಾದ ಪಾಷಾ ಹಾಗೂ ಬಂಧಿತ ಆರೋಪಿ ರಾಯಣ್ಣ, ವಸೀಂ ಅಂಡ್ ಗ್ಯಾಂಗ್ ನಡುವೆ ಜೋರಾಗಿ ಗಲಾಟೆ ಆಗಿದೆ. ಗಲಾಟೆ ವಿಕೋಪಕ್ಕೆ ಹೋದಾಗ ಮುಂಜಾನೆ ಸಮಯದಲ್ಲಿ ಹಳೆ ಗುಡ್ಡದಲ್ಲಿ ಪಾಷಾನನ್ನು ಬರ್ಬರವಾಗಿ ಹತ್ಯೆ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದರು.

    ಘಟನೆ ಸಂಬಂಧ ಜೆ.ಜೆ. ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜೆ.ಜೆ. ನಗರ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆಯಾದ ಶೋಯಬ್ ಪಾಷಾನ ವಿರುದ್ಧ ಪಿಕ್ ಪ್ಯಾಕೆಟ್, ಕಳ್ಳತನ, ದರೋಡೆ, ರಾಬರಿ ಸೇರಿದಂತೆ ಒಟ್ಟು 17 ಪ್ರಕರಣಗಳಿದ್ದು ಹಲವಾರು ಠಾಣೆಗಳಿಗೆ ಬೇಕಿದ್ದ.

    ಬಂಧಿತ ಆರೋಪಿಗಳ ವಿರುದ್ಧವು ಕೂಡ ಹಲವು ಪ್ರಕರಣಗಳಿರುವುದು ತನಿಖೆಯ ವೇಳೆ ಬಹಿರಂಗವಾಗಿದೆ. ಜೆ.ಜೆ. ನಗರ ಪೊಲೀಸರು ಆರೋಪಿಗಳ ವಿಚಾರಣೆ ಮುಗಿಸಿದ್ದು, ಈಗ ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.