Tag: accused

  • ಅಪ್ರಾಪ್ತೆ ಅತ್ಯಾಚಾರಗೈದ ಆರೋಪಿಯನ್ನು ಕೋರ್ಟ್ ಆವರಣದಲ್ಲೇ ಥಳಿಸಿದ ವಕೀಲರು

    ಅಪ್ರಾಪ್ತೆ ಅತ್ಯಾಚಾರಗೈದ ಆರೋಪಿಯನ್ನು ಕೋರ್ಟ್ ಆವರಣದಲ್ಲೇ ಥಳಿಸಿದ ವಕೀಲರು

    ಭೋಪಾಲ್: ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಸಾರ್ವಜನಿಕರು ಸಹ ಅಷ್ಟೇ ಸಿಟ್ಟಿಗೇಳುತ್ತಿದ್ದು, ಇದೀಗ ಕೋರ್ಟ್ ಆವರಣದಲ್ಲಿ ವಕೀಲರ ಗುಂಪೊಂದು ಆರೋಪಿಗಳನ್ನು ಥಳಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

    ಮಧ್ಯಪ್ರದೇಶದ ಇಂದೋರ್ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ಈ ಪ್ರಕರಣ ನಡೆದಿದ್ದು, ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿ ವಿಚಾರಣೆಗೆಂದು ಕೋರ್ಟಿಗೆ ಆಗಮಿಸಿದಾಗ ವಕೀಲರ ಗುಂಪು ಥಳಿಸಿದೆ.

    ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಆರೋಪಿಯ ಮುಖಕ್ಕೆ ಪೊಲೀಸರು ಕಪ್ಪು ಬಟ್ಟೆ ಕಟ್ಟಿದ್ದು, ಪ್ರಕರಣದ ಕುರಿತು ಅರಿತ ವಕೀಲರು ಆರೋಪಿಯನ್ನು ಅಟ್ಟಾಡಿಸಿಕೊಂಡು ಥಳಿಸಿದ್ದಾರೆ. ನಂತರ ವಕೀಲರಿಂದ ಆರೋಪಿಯನ್ನು ರಕ್ಷಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

    ಆರೋಪಿಯು ನಾಲ್ಕು ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿದ ಘಟನೆ ಇಂದೋರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿತ್ತು. ಈತನ ಬಂಧನದ ನಂತರ ಆರೋಪಿಯನ್ನು ಮೂರು ದಿನಗಳ ಕಾಲ ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿತ್ತು. ಶನಿವಾರ ಅವಧಿ ಮುಕ್ತಾಯವಾಗಿದ್ದು, ಆರೋಪಿಯನ್ನು ಪೊಲೀಸರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

    ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯನ್ನು ಜೈಲಿಗೆ ಕರೆದೊಯ್ಯುತ್ತಿದ್ದ ವೇಳೆ ವಕೀಲರ ಗುಂಪು ಆತನನ್ನು ಥಳಿಸಿದೆ.

  • 2017ರಲ್ಲಿ ರೇಪ್ – ಈಗ ಆರೋಪಿಗೆ ಹಿಗ್ಗಾಮುಗ್ಗ ಥಳಿಸಿದ ಜನ

    2017ರಲ್ಲಿ ರೇಪ್ – ಈಗ ಆರೋಪಿಗೆ ಹಿಗ್ಗಾಮುಗ್ಗ ಥಳಿಸಿದ ಜನ

    ತಿರುವನಂತಪುರಂ: ಕೇರಳದಲ್ಲಿ 2017 ರಲ್ಲಿ ನಡೆದಿದ್ದ ವಲಯರ್ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಕೆಲ ಜನರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕೇರಳದ ಪಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದೆ.

    ಇಂದು ಬೆಳಗ್ಗೆ ವಲಯರ್ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಧು ಎಂಬವನ ಮೇಲೆ ಐದು ಜನರ ಗುಂಪೊಂದು ದಾಳಿ ಮಾಡಿ ಆತನನ್ನು ಚೆನ್ನಾಗಿ ಥಳಿಸಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಆರೋಪಿಯು ಪಲಕ್ಕಾಡ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    ಈ ವಿಚಾರದ ಬಗ್ಗೆ ಮಾಹಿತಿ ನೀಡಿರುವ ವಲಯರ್ ಪೊಲೀಸ್ ಠಾಣೆಯ ಅಧಿಕಾರಿಗಳು, ಮೊದಲಿಗೆ ಐದು ಜನರ ಗುಂಪೊಂದು ಆರೋಪಿ ಮಧುವಿನ ಜೊತೆ ವಾಗ್ವಾದಕ್ಕೆ ಇಳಿದಿದ್ದಾರೆ. ನಂತರ ಆರೋಪಿಯನ್ನು ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ಐದು ಮಂದಿಯಲ್ಲಿ ಮೂವರನ್ನು ನಾವು ವಶಕ್ಕೆ ಪಡೆದಿದ್ದೇವೆ. ಆಸ್ಪತ್ರೆಗೆ ಹೋಗಿ ಹಲ್ಲೆಗೊಳಾಗದ ಆರೋಪಿಯ ಬಳಿ ಹೇಳಿಕೆಯನ್ನು ಪಡೆದು ಬಂದಿದ್ದೇವೆ ಎಂದು ಹೇಳಿದ್ದಾರೆ.

    ಏನಿದು ವಲಯರ್ ಅತ್ಯಾಚಾರ ಪ್ರಕರಣ?
    2017 ರಲ್ಲಿ ಕೇರಳದ ಪಲಕ್ಕಾಡ್ ಜಿಲ್ಲೆಯ ವಲಯರ್ ಪ್ರದೇಶದ ಹಳೆಯ ಮನೆಯೊಂದರಲ್ಲಿ 13 ವರ್ಷದ ಅಪ್ರಾಪ್ತೆಯೋರ್ವಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆದರೆ ಮೃತಪಡುವುದಕ್ಕೂ ಮುನ್ನ ಆಕೆಯನ್ನು ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ ಎಂದು ತನಿಖೆ ವೇಳೆ ತಿಳಿದು ಬಂದಿತ್ತು. ಈ ಸಾವಿನ ಪ್ರಕರಣದಲ್ಲಿ ಸಂತ್ರಸ್ತೆಯ 9 ವರ್ಷದ ತಂಗಿ ಅಕ್ಕ ಸಾವನ್ನಪ್ಪಿದ ದಿನ ನಮ್ಮ ಮನೆ ಬಳಿ ಇಬ್ಬರು ಅನುಮಾಸ್ಪದವಾಗಿ ಓಡಾಡುತ್ತಿದ್ದರು ಎಂದು ಸಾಕ್ಷಿ ಹೇಳಿದ್ದಳು.

    ಈ ಘಟನೆಯಾದ ಎರಡು ತಿಂಗಳ ಬಳಿಕ 9 ವರ್ಷದ ತಂಗಿಯೂ ಸಹ ಅದೇ ಜಗದಲ್ಲಿ ಅದೇ ರೀತಿಯಾಗಿ ಕೊಲೆಯಾಗಿದ್ದಳು. ಆಕೆಯ ಮರಣೋತ್ತರ ಪರೀಕ್ಷೆಯ ನಂತರ ಸಂತ್ರಸ್ತೆಯನ್ನು ಅತ್ಯಾಚಾರ ಮಾಡಲಾಗಿದೆ ಎಂದು ವರದಿ ಬಂದಿತ್ತು. ಈ ಸಹೋದರಿಯರ ಪ್ರಕರಣವು ಕೇರಳದಲ್ಲಿ ಕೋಲಾಹಲನ್ನು ಸೃಷ್ಟಿಸಿತ್ತು. ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹಾಕಲಾಗಿತ್ತು.

    ಸಾರ್ವಜನಿಕರ ಒತ್ತಡಕ್ಕೆ ಮಣಿದ ಪೊಲೀಸ್ ಸಂತ್ರಸ್ತ ಸಹೋದರಿಯರ ಮನೆಗೆ ಸದಾ ಬರುತ್ತಿದ್ದ ಮೂವರನ್ನು ಈ ಪ್ರಕರಣದಲ್ಲಿ ಅರೆಸ್ಟ್ ಮಾಡಿದ್ದರು. ಆದರೆ ಸ್ಥಳೀಯ ನ್ಯಾಯಾಲಯವು ಈ ಪ್ರಕರಣದ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಈ ವಿಚಾರವಾಗಿ ಹೈಕೋರ್ಟಿನಲ್ಲಿ ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.

  • ದುರುಳರ ಕ್ರೌರ್ಯಕ್ಕೆ ಮತ್ತೊಂದು ಬಲಿ – ಬದುಕಲಿಲ್ಲ ಬೆಂಕಿಯಲ್ಲಿ ಬೆಂದ ಉನ್ನಾವ್ ಸಂತ್ರಸ್ತೆ

    ದುರುಳರ ಕ್ರೌರ್ಯಕ್ಕೆ ಮತ್ತೊಂದು ಬಲಿ – ಬದುಕಲಿಲ್ಲ ಬೆಂಕಿಯಲ್ಲಿ ಬೆಂದ ಉನ್ನಾವ್ ಸಂತ್ರಸ್ತೆ

    – ಫಲಿಸಲಿಲ್ಲ ಚಿಕಿತ್ಸೆ, ಈಡೇರಲಿಲ್ಲ ಕೊನೆಯಾಸೆ

    ಲಕ್ನೋ: ದುರುಳರ ಅಟ್ಟಹಾಸಕ್ಕೆ ಮತ್ತೊಂದು ಬಲಿಯಾಗಿದೆ. ದುಷ್ಟರು ಇಟ್ಟ ಬೆಂಕಿಯಲ್ಲಿ ಬೆಂದು ಉನ್ನಾವೋ ಸಂತ್ರಸ್ತೆ ಮೃತಪಟ್ಟಿದ್ದಾಳೆ. ದೆಹಲಿಯ ಸಫ್ದರ್‍ಜಂಗ್ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದ ಸಂತ್ರಸ್ತೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ. 11.40ಕ್ಕೆ ಕೊನೆಯುಸಿರೆಳೆದಿದ್ದಾಳೆ.

    ಸಂತ್ರಸ್ತ ಯುವತಿ ಮೇಲೆ 2018ರಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಮಾರ್ಚ್ 5 ಮತ್ತು 6 ರಂದು ಆರೋಪಿಗಳ ವಿರುದ್ಧ ಯುವತಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಪ್ರಮುಖ ಆರೋಪಿ ಶುಭಂ ತ್ರಿವೇದಿ ಎಂಬಾತನನ್ನು ಬಂಧಿಸಿದ್ದರು. ಕಳೆದ ನವೆಂಬರ್ 30ರಂದು ಆರೋಪಿ ಶುಭಂಗೆ ಕೋರ್ಟ್ ಜಾಮೀನು ನೀಡಿತ್ತು. ಡಿಸೆಂಬರ್ 5ರಂದು ಸಾಕ್ಷಿ ಹೇಳಲು ಕೋರ್ಟಿಗೆ ತೆರಳುತ್ತಿದ್ದ ಸಂತ್ರಸ್ತೆ ಮೇಲೆ ಆರೋಪಿಗಳು ಹಲ್ಲೆ ನಡೆಸಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು.

    ಘಟನೆಯಲ್ಲಿ ಸಂತ್ರಸ್ತೆಯ ದೇಹ ಶೇ 90 ರಷ್ಟು ಹೋಗಿತ್ತು. ಇನ್ನು ಸಾಯುವ ಮುನ್ನ ಸಂತ್ರಸ್ತೆ ‘ನನಗೆ ಸಾಯಲು ಇಷ್ಟವಿಲ್ಲ ನನ್ನನ್ನು ಈ ಪರಿಸ್ಥಿತಿಗೆ ತಂದವರು ಸಾಯುವುದನ್ನು ನಾನು ನೋಡಬೇಕು’ ಎಂದು ಹೇಳಿಕೊಂಡಿದ್ದರು. ಹೈದ್ರಾಬಾದ್ ಎನ್‍ಕೌಂಟರ್‍ನಿಂದ ಕೊಂಚ ಮಟ್ಟಿಗೆ ನಿರಾಳರಾಗಿದ್ದ ಬೆನ್ನಲ್ಲೇ ಈ ಆಘಾತಕಾರಿ ಬೆಳವಣಿಗೆಯಾಗಿದೆ.

    ಬೆಂಕಿ ಹಚ್ಚಿದ್ರು: ಬೆಂಕಿ ಹೊತ್ತಿಕೊಂಡಿದ್ದ ಸಂತ್ರಸ್ತೆಯು ಕಾಪಾಡಿ, ಕಾಪಾಡಿ ಎಂದು ಕೂಗುತ್ತಿದ್ದಳು. ಆದರೆ ಬೆಂಕಿಯನ್ನು ಕಂಡು ನಾವು ಭಯಭೀತರಾಗಿದ್ದೇವು. ಯಾರೊಬ್ಬರೂ ರಕ್ಷಣೆಗೆ ನಿಲ್ಲದ ಪರಿಣಾಮ ಸಂತ್ರಸ್ತೆಯು ಸಂಪೂರ್ಣವಾಗಿ ಸುಟ್ಟುಹೋದಳು. ಅಷ್ಟೇ ಅಲ್ಲದೆ ಆಕೆ ಮಾಟಗಾತಿ ಎಂದು ಭಾವಿಸಿದ್ದೇವೆ. ಹೀಗಾಗಿ ಆಕೆಯ ಹಿಂದೆ ಓಡಿ ಕೊಲೆಗೆ ಯತ್ನಿಸಿದ್ದೇವು. ಸಂತ್ರಸ್ತೆಯ ದೇಹ ಶೇ.90ರಷ್ಟು ಸುಟ್ಟ ನಂತರವೂ ಆಕೆ ಸಹಾಯಕ್ಕಾಗಿ ಸುಮಾರು ಒಂದು ಕಿಲೋಮೀಟರ್ ಓಡಿ, ಸ್ವತಃ ಪೊಲೀಸರಿಗೆ ಕರೆ ಮಾಡಿದ್ದಾಳೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

    ಬದುಕಲಿಲ್ಲ ಉನ್ನಾವೋ ಸಂತ್ರಸ್ತೆ!
    ಡಿ.18, 2018 : 24 ವರ್ಷದ ಯುವತಿಯನ್ನ ಅಪಹರಿಸಿ ಸಾಮೂಹಿಕ ಅತ್ಯಾಚಾರ
    ಮಾ.5, 2019 : ಉನ್ನಾವೋದಲ್ಲಿ ಯುವತಿ ದೂರು
    ಮಾ. 6, 2019 : ರಾಯ್‍ಬರೇಲಿಯಲ್ಲೂ ಸಂತ್ರಸ್ತೆ ದೂರು
    ಸೆ. 2019: ಪ್ರಮುಖ ಆರೋಪಿ ಶುಭಂ ಪೊಲೀಸರಿಗೆ ಶರಣಾಗತಿ
    ನ.30, 2019 : ಆರೋಪಿ ಶುಭಂಗೆ ನ್ಯಾಯಾಲಯದಿಂದ ಜಾಮೀನು
    ಡಿ.5, 2019 : ಕೋರ್ಟ್‍ಗೆ ಹೋಗುತ್ತಿದ್ದಾಗ ಸಂತ್ರಸ್ತೆ ಮೇಲೆ ಹಲ್ಲೆ ಮಾಡಿ ಬೆಂಕಿ ಹಚ್ಚಿದ ಐವರು ಆರೋಪಿಗಳು, ಜೀವ ಉಳಿಸಿಕೊಳ್ಳಲು ಬೆಂಕಿ ಹಚ್ಚಿದ ಸ್ಥಳದಿಂದ 1 ಕಿ.ಮೀ ನಡೆದು ಬಂದಿದ್ದ ಯುವತಿ
    ಡಿ.5, 2019 : ಮ್ಯಾಜಿಸ್ಟ್ರೇಟ್ ಬಳಿ ಆರೋಪಿಗಳ ಹೆಸರು ಹೇಳಿದ ಸಂತ್ರಸ್ತೆ (ಶುಭಂ ತ್ರಿವೇದಿ, ಶಿವಂ, ಹರಿಶಂಕರ್, ಉಮೇಶ್, ರಾಮಕಿಶೋರ್ ಆರೋಪಿಗಳು)
    ಡಿ.6, 2019 : ಚಿಕಿತ್ಸೆ ಫಲಿಸದೆ ದೆಹಲಿಯ ಸಫ್ದರ್‍ಜಂಗ್ ಆಸ್ಪತ್ರೆಯಲ್ಲಿ ರಾತ್ರಿ 11.40ಕ್ಕೆ ಕೊನೆಯುಸಿರು.

  • ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಇಬ್ಬರು ಪೊಲೀಸರಿಗೆ ಐಸಿಯುನಲ್ಲಿ ಚಿಕಿತ್ಸೆ

    ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಇಬ್ಬರು ಪೊಲೀಸರಿಗೆ ಐಸಿಯುನಲ್ಲಿ ಚಿಕಿತ್ಸೆ

    ಹೈದರಾಬಾದ್: ಪಶುವೈದ್ಯೆ ಅತ್ಯಾಚಾರಿಗಳ ಎನ್‍ಕೌಂಟರ್ ವೇಳೆ ಗಂಭೀರವಾಗಿ ಗಾಯಗೊಂಡ ಇಬ್ಬರು ಪೊಲೀಸರು ಐಸಿಯುನಲ್ಲಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

    ಎನ್‍ಕೌಂಟರ್‍ನಲ್ಲಿ ಗಾಯಗೊಂಡ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಸಾದ್ನಾಗರ್ ಆಸ್ಪತ್ರೆಯಿಂದ ಹೈದರಾಬಾದ್‍ನ ಕೇರ್ ಆಸ್ಪತ್ರಗೆ ದಾಖಲಿಸಲಾಗಿದೆ. ಸದ್ಯ ಆಸ್ಪತ್ರೆಯು ಮೆಡಿಕಲ್ ಬುಲೆಟಿನ್ ನೀಡಿದ್ದು, ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದೆ.

    35 ವರ್ಷದ ವೆಂಕಟೇಶ್ವರಲು ಅವರಿಗೆ ತಲೆಗೆ ಗಾಯವಾಗಿದ್ದು, ಚಿಕಿತ್ಸೆ ಕೊಡಲಾಗುತ್ತಿದೆ. ಅರವಿಂದ್ ಗೌಡ ಅವರ ಎಡಗೈ ಹಾಗೂ ಭುಜಕ್ಕೆ ಗಾಯವಾಗಿದೆ. ಇರಬ್ಬರನ್ನೂ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿಸಲಾಗಿದೆ.

    ಇದನ್ನೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್, ಪ್ರಕರಣದಲ್ಲಿ ಪೊಲೀಸ್ ಎಸ್‍ಐ ಸೇರಿದಂತೆ ಮತ್ತೊಬ್ಬ ಅಧಿಕಾರಿಯ ತಲೆಗೆ ಗಂಭೀರ ಪೆಟ್ಟಾಗಿದ್ದು, ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಮೊದಲು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೇರೆಡೆ ಶಿಫ್ಟ್ ಮಾಡಲಾಗಿದೆ. ಅಲ್ಲದೇ ಪೊಲೀಸರಿಗೆ ಯಾವುದೇ ಬುಲೆಟ್ ಗಾಯವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದರು.

  • ಪಿಸ್ತೂಲ್ ಕಸಿದುಕೊಂಡು ಪೊಲೀಸರ ಮೇಲೆ ಹಲ್ಲೆ ಎಸಗಿದ್ದಕ್ಕೆ ಗುಂಡೇಟು – ಕನ್ನಡದಲ್ಲಿ ವಿವರಿಸಿದ ಸಜ್ಜನರ್

    ಪಿಸ್ತೂಲ್ ಕಸಿದುಕೊಂಡು ಪೊಲೀಸರ ಮೇಲೆ ಹಲ್ಲೆ ಎಸಗಿದ್ದಕ್ಕೆ ಗುಂಡೇಟು – ಕನ್ನಡದಲ್ಲಿ ವಿವರಿಸಿದ ಸಜ್ಜನರ್

    – ಎನ್‍ಕೌಂಟರ್ ನಡೆಸಿಲ್ಲ, ಗುಂಡಿನ ಚಕಮಕಿಯಲ್ಲಿ ಸಾವು
    – ಆರೋಪಿಗಳಿಗೆ ಆಯುಧ ಬಳಕೆ ಗೊತ್ತಿತ್ತು
    – 4 ಭಾಷೆಯಲ್ಲಿ ವಿವರ ನೀಡಿದ ಸಜ್ಜನರ್

    ಹೈದರಾಬಾದ್: ನಾವು ಎನ್‍ಕೌಂಟರ್ ನಡೆಸಿದಲ್ಲ. ಪಿಸ್ತೂಲ್ ಕಸಿದುಕೊಂಡು ನಮ್ಮ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಕ್ಕೆ ಆತ್ಮರಕ್ಷಣೆಗಾಗಿ ನಾವು ಆರೋಪಿಗಳ ಮೇಲೆ ಶೂಟೌಟ್ ಮಾಡಿದ್ದೇವೆ ಎಂದು ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್ ತಿಳಿಸಿದ್ದಾರೆ.

    ಪಶುವೈದ್ಯೆ ದಿಶಾ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಡೆದ ಪೊಲೀಸ್ ಶೂಟೌಟ್ ಬಗ್ಗೆ ವಿಶ್ವನಾಥ್ ಸಜ್ಜನರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಇದನ್ನೂ ಓದಿ: 2008 ವಾರಂಗಲ್ ಎನ್‌ಕೌಂಟರ್‌ನಂತೆ ದಿಶಾ ‘ಹತ್ಯಾಚಾರಿ’ಗಳ ಹುಟ್ಟಡಗಿಸಿದ ವಿ.ಸಿ ಸಜ್ಜನರ್

    ಸುದ್ದಿಗೋಷ್ಠಿಯಲ್ಲಿ ಹೇಳಿದ್ದು ಹೀಗೆ:
    ದಿಶಾ ಅವರನ್ನು ನ.26 ರಂದು ಅಪಹರಣ ಮಾಡಿ ಬಳಿಕ ಲೈಂಗಿಕ ದಾಳಿ ನಡೆಸಿ ಬಳಿಕ ಕೊಲೆ ಮಾಡಿ ಸೇತುವೆ ಕೆಳಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದರು. ಯಾವುದೇ ಸಾಕ್ಷಿ ಇಲ್ಲದೇ ಆರಂಭವಾದ ತನಿಖೆಯಲ್ಲಿ ದೊರೆತ ಸಾಕ್ಷಿಗಳ ಆಧಾರವಾಗಿ ನಾಲ್ವರನ್ನು ಬಂಧಿಸಲಾಗಿತ್ತು. ಆ ಬಳಿಕ ನ್ಯಾಯಮೂರ್ತಿಗಳ ಎದುರು ಹಾಜರು ಪಡಿಸಿ ಬಂಧಿತ ಮೊಹಮದ್ ಆರಿಫ್, ಚನ್ನಕೇಶವಲು, ಜೊಲ್ಲು ನವಿನ್, ಜೊಲ್ಲು ಶಿವನನ್ನು ಚರ್ಲಪಾಲ್ಲಿ ಜೈಲಿನಲ್ಲಿ ಅವರನ್ನು ಇಡಲಾಗಿತ್ತು. ಪೊಲೀಸರ ಮನವಿಯಂತೆ ನ್ಯಾಯಾಲಯ ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿತ್ತು. ಡಿ.4 ಮತ್ತು 5 ರಂದು ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ನಡೆಸಿ ಪ್ರಕರಣ ಬಗ್ಗೆ ಆರೋಪಿಗಳಿಂದ ಸಾಕಷ್ಟು ಮಾಹಿತಿ ಸಂಗ್ರಹಿಸಲಾಗಿತ್ತು. ಇದನ್ನೂ ಓದಿ: ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

    ಕಸ್ಟಡಿಯಲ್ಲಿ ಇದ್ದ ಸಂದರ್ಭದಲ್ಲಿ ಅವರು ನೀಡಿದ ಮಾಹಿತಿ ಅನ್ವಯ ವೈಜ್ಞಾನಿಕ ಸಾಕ್ಷಿಗಳನ್ನು ಸಂಗ್ರಹಿಸಲು ಹಾಗೂ ದಿಶಾರ ಮೊಬೈಲ್ ಫೋನ್, ಇತರೇ ವಸ್ತುಗಳನ್ನು ವಶಕ್ಕೆ ಪಡೆಯಲು ಘಟನಾ ಸ್ಥಳಕ್ಕೆ ಕರೆತರಲಾಗಿತ್ತು. ಇದರಂತೆ ಬೆಳಗ್ಗೆ ಅವರನ್ನು ಸ್ಥಳ ಪರಿಶೀಲನೆಗೆ ಕರೆತಂದ ವೇಳೆ ಅವರು ಸರಿಯಾದ ಮಾಹಿತಿ ನೀಡದೆ ಸಮಯ ವ್ಯರ್ಥ ಮಾಡಿ ಅಲ್ಲಿದೆ, ಇಲ್ಲಿದೆ ಎಂದು ಹೇಳುತ್ತಿದ್ದರು. ಆ ಬಳಿಕ ಸ್ಥಳದಲ್ಲಿ ದೊರೆತ ಕಲ್ಲು, ದೊಣ್ಣೆಗಳನ್ನು ಹಿಡಿದು ಪೊಲೀಸರ ಮೇಲೆ ಹಲ್ಲೆ ನಡೆಸಿ ಪೊಲೀಸರಿಂದ 2 ಪಿಸ್ತೂಲ್ ಕಿತ್ತುಕೊಂಡು ದಾಳಿ ನಡೆಸಿದ್ದರು.

    ಪ್ರಕರಣ ಎ1 ಮತ್ತು ಎ2 ಆರೋಪಿಗಳಾದ ಆರಿಫ್, ಚನ್ನಕೇಶವಲು ಪೊಲೀಸರ ಮೇಲೆ ಫೈರ್ ಮಾಡಿದ್ದರು. ಈ ಸಂದರ್ಭದಲ್ಲಿ ಇಬ್ಬರು ಪೊಲೀಸರಿಗೆ ಗಾಯವಾಗಿದ್ದು, ಅವರು ಶೂಟ್ ಮಾಡಿದ ಕಾರಣ ಎಚ್ಚರಿಕೆ ನೀಡಿ ಪೊಲೀಸರು ಅನಿವಾರ್ಯವಾಗಿ ಪ್ರತಿದಾಳಿ ನಡೆಸಿದ್ದರು. ಸ್ವಲ್ಪ ಸಮಯದ ಬಳಿಕ ದಾಳಿ ನಿಂತ ಕಾರಣ ಸ್ಥಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ನಾಲ್ವರು ಸಾವನ್ನಪ್ಪಿದ್ದು ಖಚಿತವಾಗಿತ್ತು. ಆರೋಪಿಗಳ ಮೇಲೆ ಹಲವು ಅಪರಾಧ ಪ್ರಕರಣಗಳಿದ್ದು, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಮಾಹಿತಿ ಸಂಗ್ರಹಿಸಿದ್ದೇವೆ. ಅಲ್ಲದೇ ಈ ಹಿಂದೆ ಯಾವ ಯಾವ ಸ್ಥಳಗಳಲ್ಲಿ ಮಹಿಳೆಯರ ಮೃತದೇಹಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂಬ ಬಗ್ಗೆಯೂ ತನಿಖೆ ನಡೆಸಿದ್ದೇವೆ. ಇದನ್ನೂ ಓದಿ: ಎನ್‍ಕೌಂಟರ್ ಮಾಡುವ ಮೊದಲು ನೋಡಲು ಅವಕಾಶ ನೀಡಬೇಕಿತ್ತು: ಆರೋಪಿ ತಂದೆ

    ಘಟನೆ ಬಗ್ಗೆ ಕೇಳಿ ಬಂದ ಆರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಶ್ವನಾಥ್ ಅವರು, ಕಾನೂನು ತನ್ನ ಕೆಲಸವನ್ನು ಮಾಡಿದೆ ಅಷ್ಟೇ ಎಂದರು. ಅವರಿಗೆ ಯಾವುದೇ ಹ್ಯಾಂಡ್ ಕಪ್ ಹಾಕಿರಲಿಲ್ಲ. ಅಲ್ಲದೇ ಅವರು ಶಸ್ತ್ರಾಸ್ತಗಳನ್ನು ಬಳಕೆ ಮಾಡುವ ವಿಧಾನ ತಿಳಿದಿದ್ದರು. ಇದುವೇ ಅವರು ಬಹುಬೇಗ ಪೊಲೀಸರ ಮೇಲೆ ದಾಳಿ ನಡೆಸಲು ಕಾರಣವಾಯಿತು. ಅವರನ್ನು ನಾವು ಘಟನೆ ನಡೆದ ಸ್ಥಳಕ್ಕೆ ದಿಶಾರ ಮೊಬೈಲ್ ಹಾಗೂ ಇತರೇ ವಸ್ತುಗಳನ್ನು ವಶಕ್ಕೆ ಪಡೆಯಲು ಕರೆತಂದಿದ್ದೆವು. ಆದರೆ ಪ್ರಕರಣ ಮರುಸೃಷ್ಟಿಗೆ ಕರೆತಂದಿರಲಿಲ್ಲ. ಬೆಳಗ್ಗೆ 5.30 ರಿಂದ 6.15ರ ವೇಳೆಗೆ ಘಟನೆ ನಡೆದಿದೆ ಎಂದರು.

    ಪ್ರಕರಣದಲ್ಲಿ ಪೊಲೀಸ್ ಎಸ್‍ಐ ಸೇರಿದಂತೆ ಮತ್ತೊಬ್ಬ ಅಧಿಕಾರಿಯ ತಲೆಗೆ ಗಂಭೀರ ಪೆಟ್ಟಾಗಿದ್ದು, ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಮೊದಲು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೇರೆಡೆ ಶಿಫ್ಟ್ ಮಾಡಲಾಗಿದೆ ಎಂದರು. ಅಲ್ಲದೇ ಪೊಲೀಸರಿಗೆ ಯಾವುದೇ ಬುಲೆಟ್ ಗಾಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ತೆಲಂಗಾಣ ಎನ್‍ಕೌಂಟರ್: ಕೇಜ್ರಿವಾಲ್, ಶಶಿ ತರೂರ್, ಮನೇಕಾ ಗಾಂಧಿ ಅಪಸ್ವರ

    ಇದೇ ವೇಳೆ ದಿಶಾ ಕುಟುಂಬಕ್ಕೆ ಹೆಚ್ಚಿನ ಸಮಸ್ಯೆ ನೀಡದಂತೆ ಮನವಿ ಮಾಡಿದ ವಿಶ್ವನಾಥ್ ಅವರು, ಅವರ ಖಾಸಗಿ ಜೀವನವನ್ನು ಗೌರವಿಸಿ ಎಂದರು. ಅಲ್ಲದೇ ಪೊಲೀಸರ ತನಿಖೆಯನ್ನು ನಡೆಸಲು ಸಹಕಾರ ನೀಡಿ. ಪ್ರಕರಣ ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ನೀಡುತ್ತೇವೆ. ಆಡೋಪಿಗಳಿಗೆ ಎಷ್ಟು ಬುಲೆಟ್ ತಾಗಿದೆ ಎಂಬ ಬಗ್ಗೆಯೂ ಮರಣೋತ್ತರ ಪರೀಕ್ಷೆಯಲ್ಲಿ ಮಾಹಿತಿ ಲಭ್ಯವಾಗಲಿದೆ. ಇಲ್ಲಿವರೆಗೂ ನಡೆದ ಬೆಳವಣಿಗೆಗಳನ್ನು ನಾವು ಮುಂದಿಟ್ಟಿದ್ದೇವೆ ಎಂದರು.

    4 ಭಾಷೆಯಲ್ಲಿ ಮಾಹಿತಿ:
    ವಿಶ್ವನಾಥ್ ಸಜ್ಜನರ್ ಅವರು ತಮ್ಮ ಸುದ್ದಿಗೋಷ್ಠಿಯಲ್ಲಿ ಮೊದಲು ತೆಲುಗಿನಲ್ಲಿ ವಿವರಣೆ ನೀಡಿದರು. ಬಳಿಕ ಇಂಗ್ಲಿಷ್, ಹಿಂದಿಯಲ್ಲಿ ನೀಡಿ ಕೊನೆಗೆ ಕನ್ನಡದಲ್ಲೂ ಘಟನೆಯನ್ನು ವಿವರಿಸಿ ಕನ್ನಡ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಇದನ್ನೂ ಓದಿ: ಪಶುವೈದ್ಯೆ ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ್ದು ಸರಿಯಲ್ಲ: ಕಾರ್ತಿ ಚಿದಂಬರಂ

  • 2008 ವಾರಂಗಲ್ ಎನ್‌ಕೌಂಟರ್‌ನಂತೆ ದಿಶಾ ‘ಹತ್ಯಾಚಾರಿ’ಗಳ ಹುಟ್ಟಡಗಿಸಿದ ವಿ.ಸಿ ಸಜ್ಜನರ್

    2008 ವಾರಂಗಲ್ ಎನ್‌ಕೌಂಟರ್‌ನಂತೆ ದಿಶಾ ‘ಹತ್ಯಾಚಾರಿ’ಗಳ ಹುಟ್ಟಡಗಿಸಿದ ವಿ.ಸಿ ಸಜ್ಜನರ್

    ಹೈದರಾಬಾದ್: ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್ ಅವರ ನೇತೃತ್ವದಲ್ಲಿ ನಡೆದ ದಿಶಾ ಪ್ರಕರಣ ಅತ್ಯಚಾರಿಗಳ ಎನ್‌ಕೌಂಟರ್‌ನನ್ನು 2008ರಲ್ಲಿ ವಾರಂಗಲ್ ಆ್ಯಸಿಡ್ ಪ್ರಕರಣದ ಎನ್‌ಕೌಂಟರ್‌ಗೆ ಹೋಲಿಸಲಾಗುತ್ತಿದೆ. ಇದೇ ಮಾದರಿಯಲ್ಲೇ ಈ ಹಿಂದೆ ಸಜ್ಜನರ್ ಅವರ ತಂಡ ಆ್ಯಸಿಡ್ ದಾಳಿ ಆರೋಪಿಗಳನ್ನು ಕೂಡ ಎನ್‍ಕೌಂಟರ್ ಮಾಡಿತ್ತು.

    ಇಂದು ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಸೈದರಾಬಾದ್ ಪೊಲೀಸರು ದಿಶಾ ಅತ್ಯಾಚಾರ, ಕೊಲೆ ಪ್ರಕರಣದ ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ. ಹುಬ್ಬಳ್ಳಿ ಮೂಲದ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಅವರ ನೇತೃತ್ವದಲ್ಲಿ ಪೊಲೀಸರು ಪಶುವೈದ್ಯೆಯನ್ನು ಬೆಂಕಿ ಹಚ್ಚಿ ಸುಟ್ಟ ಸ್ಥಳದಲ್ಲೇ ಅತ್ಯಾಚಾರಿಗಳ ಮೇಲೆ ಫೈರಿಂಗ್ ಮಾಡಿ ಹತ್ಯೆ ಮಾಡಿದ್ದಾರೆ. ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಲಾಗಿದೆ. ಇದನ್ನೂ ಓದಿ: ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

    ಈ ಹಿಂದೆ 2008ರ ಡಿಸೆಂಬರ್ 13ರಂದು ಎಂಜಿನಿಯರಿಂಗ್ ವಿದ್ಯಾರ್ಥಿನಿಯರಿಬ್ಬರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ಪ್ರಕರಣ ಇಡೀ ಆಂಧ್ರಪ್ರದೇಶವನ್ನು ಬೆಚ್ಚಿಬೀಳಿಸಿತ್ತು. ಆ ಪ್ರಕರಣದ ಮೂವರು ಆರೋಪಿಗಳನ್ನು ಕೂಡ ವಿಶ್ವನಾಥ್ ಸಜ್ಜನರ್ ಅವರು ಎನ್‍ಕೌಂಟರ್ ಮಾಡಿದ್ದರು. ಇದನ್ನೂ ಓದಿ: ಎನ್‍ಕೌಂಟರ್ ‘ಯೋಜಿತ ಕೊಲೆ’, ಅಂಗಾಂಗಳ ಮೇಲೆ ಶೂಟ್ ಮಾಡಿದ್ದು ಯಾಕೆ – 4 ಪ್ರಶ್ನೆ ಮುಂದಿಟ್ಟ ಮಾನವಹಕ್ಕುಗಳ ಸಂಸ್ಥೆ

    ವಾರಂಗಲ್‍ನ ಕಾಕತೀಯ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಸ್ವಪ್ನಿಕ ಮತ್ತು ಪ್ರಣೀತಾ ಲವ್ ಪ್ರೊಪೊಸಲ್‍ಗೆ ಒಪ್ಪಿಕೊಳ್ಳದೆ ನಿರಾಕರಿಸಿದ್ದಕ್ಕೆ ಶ್ರೀನಿವಾಸ್(25), ಹರಿಕೃಷ್ಣಾ(24) ಮತ್ತು ಸಂಜತ್(22) ಆ್ಯಸಿಡ್ ದಾಳಿ ನಡೆಸಿದ್ದರು. ಇಬ್ಬರು ವಿದ್ಯಾರ್ಥಿನಿಯರು ತರಗತಿ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದಾಗ ಅವರ ಮೇಲೆ ಆರೋಪಿಗಳು ಆ್ಯಸಿಡ್ ಎರಚಿದ್ದರು.

    ಈ ಪ್ರಕರಣ ನಡೆದಿದ್ದಾಗ ವಿಶ್ವನಾಥ್ ಸಜ್ಜನರ್ ಅವರು ವಾರಂಗಲ್ ಎಸ್‍ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆಗ ವಿಶ್ವನಾಥ್ ನೇತೃತ್ವದ ತಂಡ ಘಟನೆಯಾದ 48 ಘಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿತ್ತು. ದಿಶಾ ಪ್ರಕರಣ ಆರೋಪಿಗಳನ್ನು ಘಟನಾ ಸ್ಥಳ ಮಹಜರು ಮಾಡಲು ಕರೆದುಕೊಂಡು ಹೋದಂತೆ ಬಂಧನವಾದ ಮರುದಿನ ಸಾಕ್ಷಿಗಳನ್ನು ಸಂಗ್ರಹಿಸಲು ಆ್ಯಸಿಡ್ ದಾಳಿ ಆರೋಪಿಗಳನ್ನು ಘಟನಾ ಸ್ಥಳಕ್ಕೆ ಪೊಲೀಸರು ಕರೆದೊಯ್ದಿದ್ದರು. ಇದನ್ನೂ ಓದಿ: ಎನ್‍ಕೌಂಟರ್ ಮಾಡುವ ಮೊದಲು ನೋಡಲು ಅವಕಾಶ ನೀಡಬೇಕಿತ್ತು: ಆರೋಪಿ ತಂದೆ

    ಈ ವೇಳೆ ಓರ್ವ ಆರೋಪಿ ಪೊಲೀಸರ ಮೇಲೆ ಕಚ್ಚಾ ಬಾಂಬ್‍ನಿಂದ ದಾಳಿ ಮಾಡಲು ಮುಂದಾಗಿದ್ದನು. ಆಗ ಆತ್ಮರಕ್ಷಣೆಗಾಗಿ ಸಜ್ಜನರ್ ಅವರು ತಮ್ಮ ಜೊತೆಗಿದ್ದ ಪೊಲೀಸರಿಗೆ ಎನ್‍ಕೌಂಟರ್ ಮಾಡಲು ಆದೇಶಿಸಿದ್ದರು. ಈ ವೇಳೆ ಮೂವರು ಆರೋಪಿಗಳು ಖಾಕಿ ಗುಂಡೇಟಿಗೆ ಬಲಿಯಾಗಿದ್ದರು.

    ವಾರಂಗಲ್ ಎನ್‍ಕೌಂಟರ್ ಬಳಿಕ ಸಜ್ಜನರ್ ಅವರು `ಎನ್‍ಕೌಂಟರ್ ಸ್ಪೆಷಲಿಸ್ಟ್’ ಆಗಿಬಿಟ್ಟರು. ಆ್ಯಸಿಡ್ ದಾಳಿ ನಡೆದ 48 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿ, ಒಂದೆ ದಿನದಲ್ಲಿ ದುಷ್ಟರಿಗೆ ಸಜ್ಜನರ್ ತಕ್ಕ ಪಾಠ ಕಲಿಸಿದ್ದರು. ಅದರಂತೆ ದಿಶಾ ಪ್ರಕರಣ ಸಂಬಂಧ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರ ಮೇಲೆ ದಾಳಿ ಮಾಡಿ, ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆ ಸಜ್ಜನರ್ ಅವರ ತಂಡ ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಿದೆ. ಹೀಗೆ ಈ ಎರಡು ಪ್ರಕರಣದ ಎನ್‍ಕೌಂಟರ್ ಒಂದೇ ಮಾದರಿಯಲ್ಲಿ ನಡೆದಿದೆ.

    ಈ ಹಿಂದೆ ವಾರಂಗಲ್ ಆ್ಯಸಿಡ್ ಪ್ರಕರಣ ಆರೋಪಿಗಳನ್ನು ಸಜ್ಜನರ್ ಎನ್‍ಕೌಂಟರ್ ಮಾಡಿದ್ದಾಗ ಸಂತ್ರಸ್ತ ವಿದ್ಯಾರ್ಥಿನಿಯರ ಪೋಷಕರು, ಸ್ನೇಹಿತರು ಹಾಗೂ ಸಾರ್ವಜನಿಕರು ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ವಿದ್ಯಾರ್ಥಿಗಳು ಇಡೀ ಕಾಲೇಜಿಗೆ ಸಿಹಿ ಹಂಚಿ ಸಂಭ್ರಮಿಸಿದ್ದರು. ಆ ಖುಷಿಯ ವಾತಾವರಣ ಇಂದು ಕೂಡ ಎಲ್ಲೆಡೆ ಮನೆ ಮಾಡಿದೆ. ದಿಶಾ ಪ್ರಕರಣದ ಅತ್ಯಚಾರಿಗಳನ್ನು ಸಜ್ಜನರ್ ಅವರ ತಂಡ ಎನ್‍ಕೌಂಟರ್ ಮಾಡಿರುವುದಕ್ಕೆ ದೇಶದ ಜನರು ಪೊಲೀಸರಿಗೆ ಭೇಷ್ ಎನ್ನುತ್ತಿದ್ದಾರೆ.

  • ಎನ್‍ಕೌಂಟರ್ ಮಾಡುವ ಮೊದಲು ನೋಡಲು ಅವಕಾಶ ನೀಡಬೇಕಿತ್ತು: ಆರೋಪಿ ತಂದೆ

    ಎನ್‍ಕೌಂಟರ್ ಮಾಡುವ ಮೊದಲು ನೋಡಲು ಅವಕಾಶ ನೀಡಬೇಕಿತ್ತು: ಆರೋಪಿ ತಂದೆ

    – ಇತರ ರೇಪ್ ಆರೋಪಿಗಳನ್ನು ಎನ್‍ಕೌಂಟರ್ ಮಾಡಿ
    – ನನ್ನ ಪತಿಯನ್ನು ಕೊಂದ ಜಾಗದಲ್ಲಿ ನನ್ನನ್ನು ಕೊಲ್ಲಿ: ಪತ್ನಿ ಕಣ್ಣೀರು

    ಹೈದರಾಬಾದ್: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣ ಆರೋಪಿಗಳನ್ನು ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ. ಎನ್‍ಕೌಂಟರ್ ವಿಷಯ ತಿಳಿದು ಭಾರತದೆಲ್ಲಡೆ ಸಂಭ್ರಮಾಚರಣೆ ಮಾಡಲಾಗುತ್ತಿದೆ. ಈ ನಡುವೆ ಆರೋಪಿಗಳ ಕುಟುಂಬಸ್ಥರು ಎನ್‍ಕೌಂಟರ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

    ಆರೋಪಿಗಳಾದ ಮೊಹಮ್ಮದ್ ಪಾಷಾ, ನವೀನ್, ಚೆನ್ನಕೇಶವುಲು ಹಾಗೂ ಶಿವಾ ನನ್ನು ಪೊಲೀಸರು ಎನ್‍ಕೌಂಟರ್ ಮಾಡಿದ್ದರು. ಪೊಲೀಸರ ಈ ಕಾರ್ಯಕ್ಕೆ ಇಡೀ ದೇಶ ಶ್ಲಾಘಿಸುತ್ತಿದೆ. ಅಲ್ಲದೆ ಹೈದರಾಬಾದ್ ವಿದ್ಯಾರ್ಥಿಗಳು ಪೊಲೀಸರಿಗೆ ಜೈಕಾರ ಹಾಕುತ್ತಿದ್ದಾರೆ. ಜೊತೆಗೆ ರಾಖಿ ಕಟ್ಟುವ ಮೂಲಕ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

    ಮೊಹಮ್ಮದ್ ಪಾಷಾನ ತಾಯಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಪೊಲೀಸರು ನನ್ನ ಮಗನಿಗೆ ಏನು ಮಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಆದರೆ ನನ್ನ ಮಗ ಈಗ ಇಲ್ಲ. ಖಂಡಿತಾ ಇದು ತಪ್ಪು. ಆದರೆ ಏನೂ ಮಾಡಲಿ ನನ್ನ ಮಗ ಈಗ ಬದುಕಿಲ್ಲ. ನನಗೆ ಮಾತನಾಡಲು ಸಹ ಆಗುತ್ತಿಲ್ಲ ಎಂದು ಕಣ್ಣೀರು ಹಾಕಿದರು. ಆರೋಪಿ ಶಿವಾ ತಾಯಿ ಮಾತನಾಡಿ, ನನ್ನ ಮಗ ತಪ್ಪು ಮಾಡಿದ್ದಾನೆ ಎಂದರೆ ಆತನನ್ನು ಶೂಟ್ ಮಾಡಿ ಎಂದು ಕಣ್ಣೀರು ಹಾಕುತ್ತಾ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತ ಶಿವಾ ತಂದೆ, ಕೇವಲ ನಾಲ್ವರು ಆರೋಪಿಗಳಿಗೆ ಮಾತ್ರ ಏಕೆ ಈ ಶಿಕ್ಷೆ? ಬೇರೆಯವರಿಗೂ ಇದೇ ಶಿಕ್ಷೆ ನೀಡಬೇಕು. ಅವರಿಗೇಕೆ ಈ ಶಿಕ್ಷೆ ನೀಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ- ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ ಪೊಲೀಸರು

    ನನ್ನ ಮಗ ಹಾಗೂ ಉಳಿದ ಆರೋಪಿಗಳಿಗೆ ಜೈಲಿಗೆ ಹಾಕುವ ಬದಲು ಕೊಂದು ಬಿಡಿ ಎಂದು ನಾನು ಮೊದಲೇ ಹೇಳಿದ್ದೆ. ಆದರೆ ಎನ್‍ಕೌಂಟರ್ ಮಾಡುವ ಮೊದಲು ನೋಡಲು ಅವಕಾಶ ನೀಡಬೇಕಿತ್ತು ಎಂದು ಆರೋಪಿ ನವೀನ್ ತಂದೆ ಪ್ರತಿಕ್ರಿಯಿಸಿದ್ದಾರೆ. ಈ ಮೊದಲು ಚೆನ್ನಕೇಶವುಲು ತಾಯಿ, ನನ್ನ ಮಗ ತಪ್ಪು ಮಾಡಿದ್ದಾನೆ ಎಂದರೆ ಆತನಿಗೆ ಶಿಕ್ಷೆ ನೀಡಿ. ನನ್ನ ಮಗ ಅಪರಾಧ ಮಾಡಿದ್ದಾನೆಂದರೆ ಆತನನ್ನು ಸುಟ್ಟು ಕೊಲೆ ಮಾಡಿ. ನನ್ನ ಮಗ ನನಗೆ ಏನೂ ಅಲ್ಲ. ತಪ್ಪು ಯಾರು ಮಾಡಿದರೂ ತಪ್ಪೇ. ಸಂತ್ರಸ್ತೆಯ ತಾಯಿ 9 ತಿಂಗಳ ನಂತರ ತನ್ನ ಮಗಳಿಗೆ ಜನ್ಮ ನೀಡಿದ್ದರು. ಆದರೆ ಅವರ ಮಗಳು ಇಂತಹ ಅಪರಾಧಕ್ಕೆ ಬಲಿಯಾಗಿದ್ದಾಳೆ. ಅವರು ಎಷ್ಟು ಕಷ್ಟಪಟ್ಟಿರಬಹುದು ಎಂದು ಹೇಳಿದ್ದರು. ಇದನ್ನು ಓದಿ: ದೇಶಕ್ಕಾಗಿ ಒಳ್ಳೆಯ ನಿರ್ಧಾರ- ವಿಶ್ವನಾಥ್ ಕೆಲಸಕ್ಕೆ ಸಹೋದರ ಶ್ಲಾಘನೆ

    ಚೆನ್ನಕೇಶವುಲು ಪತ್ನಿ ಪ್ರತಿಕ್ರಿಯೆ ನೀಡಿ, ಮದುವೆಯಾದ ಒಂದು ವರ್ಷದೊಳಗೆ ನನ್ನ ಪತಿ ನನ್ನನ್ನು ಬಿಟ್ಟು ಹೋಗಿದ್ದಾರೆ. ದಯವಿಟ್ಟು ನನಗೆ ಎನ್‍ಕೌಂಟರ್ ಆದ ಜಾಗಕ್ಕೆ ಕರೆದುಕೊಂಡು ಹೋಗಿ. ನಾನು ಅಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಅಥವಾ ನೀವೇ ನನ್ನನ್ನು ಕೊಲೆ ಮಾಡಿ. ನನ್ನ ಪತಿ ಇಲ್ಲದೆ ನನಗೆ ಬದುಕಲು ಆಗುವುದಿಲ್ಲ ಎಂದು ಕಣ್ಣೀರು ಹಾಕುವ ಮೂಲಕ ತನ್ನ ನೋವನ್ನು ಹೊರಹಾಕಿದ್ದಾಳೆ. ಇದನ್ನು ಓದಿ: ಕಳೆದ 7 ವರ್ಷಗಳಿಂದ ಪ್ರತಿದಿನವೂ ಸಾಯುತ್ತಿದ್ದೇವೆ: ನಿರ್ಭಯಾ ತಾಯಿ

    ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಪೊಲೀಸರು ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ. ಕಾಮುಕರು ಪಶುವೈದ್ಯೆಯನ್ನು ಬೆಂಕಿ ಹಚ್ಚಿ ಸುಟ್ಟ ಸ್ಥಳದಲ್ಲೇ ಪೊಲೀಸರು ಅತ್ಯಾಚಾರಿಗಳ ಮೇಲೆ ಫೈರಿಂಗ್ ಮಾಡಿ ಹತ್ಯೆಗೈದಿದ್ದಾರೆ. ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ.

  • ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ- ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ ಪೊಲೀಸರು

    ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ- ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ ಪೊಲೀಸರು

    – ಸ್ಪಾಟ್ ಮಹಜರು ವೇಳೆ ಪೊಲೀಸ್ರಿಂದ ಎನ್‍ಕೌಂಟರ್

    ಹೈದರಾಬಾದ್: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್‍ಕೌಂಟರ್ ಮಾಡಿ ಹತ್ಯೆಗೈದಿದ್ದಾರೆ.

    ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಪೊಲೀಸರು ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ. ಕಾಮುಕರು ಪಶುವೈದ್ಯೆಯನ್ನು ಬೆಂಕಿ ಹಚ್ಚಿ ಸುಟ್ಟ ಸ್ಥಳದಲ್ಲೇ ಪೊಲೀಸರು ಅತ್ಯಾಚಾರಿಗಳ ಮೇಲೆ ಫೈರಿಂಗ್ ಮಾಡಿ ಹತ್ಯೆ ಮಾಡಿದ್ದಾರೆ. ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಿದ್ದಾರೆ. ಇದನ್ನೂ ಓದಿ: ಸುಡುವಾಗ ಪಶುವೈದ್ಯೆ ಜೀವಂತವಾಗಿದ್ಳು: ಸತ್ಯ ಬಾಯಿಬಿಟ್ಟ ಮೃಗೀಯ ಮನುಷ್ಯ

    ಏನಿದು ಪ್ರಕರಣ?
    ನವೆಂಬರ್ 27ರಂದು 26 ವರ್ಷದ ಪಶುವೈದ್ಯೆಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮೊಹಮ್ಮದ್ ಪಾಷಾ, ಮೂವರು ಕ್ಲೀನರ್ ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಈ ಕೃತ್ಯಕ್ಕೆ ಇವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು. ಇದನ್ನೂ ಓದಿ: ಅತ್ಯಾಚಾರಿಗಳನ್ನು ಗಲ್ಲಿಗೇರಿಸುವುದಕ್ಕೆ ನನ್ನ ಸಹಮತವಿಲ್ಲ – ಪವನ್ ಕಲ್ಯಾಣ್

    ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ವಿಚಾರಗಳನ್ನು ಬಹಿರಂಗಪಡಿಸಿದ್ದರು. ಸಾಮೂಹಿಕ ಅತ್ಯಾಚಾರದ ಬಳಿಕ ಪಶುವೈದ್ಯೆ ಓಡಿಹೋಗಬಾರದು ಎನ್ನುವ ಉದ್ದೇಶದಿಂದ ಅವಳ ಕೈ ಕಾಲುಗಳನ್ನು ಕಟ್ಟಿದ್ದೆವು. ಅತ್ಯಾಚಾರದ ನಂತರವೂ ಸಂತ್ರಸ್ತೆಗೆ ಮದ್ಯಪಾನ ಮಾಡುವಂತೆ ಒತ್ತಾಯಿಸಿದ್ದೆವು. ಸಂತ್ರಸ್ತೆ ಪ್ರಜ್ಞೆ ತಪ್ಪಿದಾಗ ಆಕೆಯನ್ನು ಸೇತುವೆಯ ಕೆಳಗೆ ಸಾಗಿಸಲಾಗಿತ್ತು. ನಂತರ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ವಿ ಎಂದು ಮುಖ್ಯ ಆರೋಪಿ ಮೊಹಮ್ಮದ್ ಪಾಷಾ, ಪೊಲೀಸರ ಮುಂದೆ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಮೂಲಗಳನ್ನು ಆಧರಿಸಿ ಮಾಧ್ಯಮ ವರದಿ ಮಾಡಿತ್ತು. ಇದನ್ನೂ ಓದಿ: ಮಹಿಳೆಯರು ತಮ್ಮ ಜೊತೆ ಕಾಂಡೋಮ್ ಇಟ್ಟುಕೊಂಡು ಅತ್ಯಾಚಾರಿಗಳಿಗೆ ಸಹಕರಿಸಬೇಕು: ನಿರ್ದೇಶಕ

    ಬೆಂಕಿ ಹಚ್ಚುವುದಕ್ಕೂ ಮುನ್ನ ಪಶುವೈದ್ಯೆ ಮೃತಪಟ್ಟಿದ್ದಾಳೆ ಎಂದು ಭಾವಿಸಿದ್ದೇವು. ಆದರೆ ಬೆಂಕಿಯ ಹಚ್ಚಿದಾಗ ಅವಳು ಕಿರುಚಲು ಪ್ರಾರಂಭಿಸಿದಳು. ಹೀಗಾಗಿ ಸಂತ್ರಸ್ತೆ ಸಾಯುವವರೆಗೂ ನೋಡುತ್ತಲೇ ಇದ್ದೆವು. ಏಕೆಂದರೆ ಒಂದು ವೇಳೆ ಆಕೆ ಜೀವಂತವಾಗಿ ಉಳಿದರೆ ಪೊಲೀಸರು ನಮ್ಮನ್ನು ಹಿಡಿಯುತ್ತಾರೆ ಎನ್ನುವ ಭಯ ನಮ್ಮಲ್ಲಿತ್ತು ಎಂದು ಆರೋಪಿ ಪಾಷಾ ಬಾಯಿ ಬಿಟ್ಟಿದ್ದನು.

  • ಅತ್ಯಾಚಾರಿಗಳನ್ನು ಗಲ್ಲಿಗೇರಿಸುವುದಕ್ಕೆ ನನ್ನ ಸಹಮತವಿಲ್ಲ – ಪವನ್ ಕಲ್ಯಾಣ್

    ಅತ್ಯಾಚಾರಿಗಳನ್ನು ಗಲ್ಲಿಗೇರಿಸುವುದಕ್ಕೆ ನನ್ನ ಸಹಮತವಿಲ್ಲ – ಪವನ್ ಕಲ್ಯಾಣ್

    – ಇದು ಬೇಜವಾಬ್ದಾರಿ ಹೇಳಿಕೆ ಎಂದು ಭಾರೀ ವಿರೋಧ
    – ಕ್ಷಮೆಯಾಚಿಸುವಂತೆ ಆಗ್ರಹ

    ಹೈದರಾಬಾದ್: ಪಶುವೈದ್ಯೆ(ದಿಶಾ) ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ಬಗ್ಗೆ ನಟ ಹಾಗೂ ಜನ ಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ನೀಡಿದ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಅವರು ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ. ಇದು ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆಯಾಗಿದೆ ತಕ್ಷಣ ಕ್ಷಮೆಯಾಚಿಸಬೇಕು ಎಂಬ ಕೂಗು ಕೇಳಿಬರುತ್ತಿದೆ.

    ಜನಸೇನೆ ಕಾರ್ಯಕರ್ತರನ್ನುದ್ದೇಶಿಸಿ ಮಾತಾಡುವ ವೇಳೆ ಪವನ್ ಕಲ್ಯಾಣ್, ಸಹೋದರಿ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಪ್ರಕರಣದಲ್ಲಿ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಇಡೀ ದೇಶವೇ ಒತ್ತಾಯಿಸುತ್ತಿದೆ. ಜನ ಆಕ್ರೋಶಕ್ಕೊಳಗಾಗಿ ಹೀಗೆ ಆಗ್ರಹಿಸುತ್ತಿದ್ದಾರೆ. ಸಂವಿಧಾನ ಯಾರಿಗೂ ಯಾರನ್ನು ಕೊಲ್ಲುವ ಹಕ್ಕು ನೀಡಿಲ್ಲ. ಆದ್ದರಿಂದ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಬದಲಿಗೆ ಸಿಂಗಾಪುರ್ ಮಾದರಿಯಲ್ಲಿ ಶಿಕ್ಷೆ ನೀಡಬೇಕು. ಅತ್ಯಾಚಾರಿಗಳನ್ನು ಗಲ್ಲಿಗೇರಿಸುವ ವಿಚಾರಕ್ಕೆ ನನ್ನ ಸಹಮತವಿಲ್ಲ ಎಂದು ಹೇಳಿಕೆ ಕೊಟ್ಟಿದ್ದರು. ಸಿಂಗಾಪುರ್ ನಲ್ಲಿ ಅತ್ಯಾಚಾರಿಗಳಿಗೆ 20 ವರ್ಷ ಜೈಲು ಶಿಕ್ಷೆ, ದಂಡ ಹಾಗೂ ಕಬ್ಬಿನಿಂದ ಹೊಡೆಯುವ ಶಿಕ್ಷೆ ವಿಧಿಸಲಾಗುತ್ತದೆ. ಇದನ್ನೂ ಓದಿ: ಶೀಘ್ರದಲ್ಲೇ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ

    https://twitter.com/SucharitaYSRCP/status/1202189478137217024

    ಪವನ್ ಕಲ್ಯಾಣ್ ಹೇಳಿಕೆಗೆ ಈಗ ಪರ-ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಈ ಬಗ್ಗೆ ವೈಎಸ್‍ಆರ್ ಕಾಂಗ್ರೆಸ್ ಸಂಸದ ವಿಜಯ್ ಸಾಯ್ ರೆಡ್ಡಿ ಪ್ರತಿಕ್ರಿಯಿಸಿ, ಪವನ್ ಕಲ್ಯಾಣ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆಗಳು ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಇಡೀ ದೇಶವೇ ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಎಂದು ಆಗ್ರಹಿಸುತ್ತಿದೆ ಎಂದು ಕಿಡಿಕಾರಿದ್ದರು. ಇದನ್ನೂ ಓದಿ: ಮಹಿಳೆಯರು ತಮ್ಮ ಜೊತೆ ಕಾಂಡೋಮ್ ಇಟ್ಟುಕೊಂಡು ಅತ್ಯಾಚಾರಿಗಳಿಗೆ ಸಹಕರಿಸಬೇಕು: ನಿರ್ದೇಶಕ

    ಈ ಬೆನ್ನಲ್ಲೇ ಆಂಧ್ರ ಪ್ರದೇಶ ಸಚಿವರು ಕೂಡ ಪವನ್ ಕಲ್ಯಾಣ್ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಂಧ್ರ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವೆ ಪವನ್ ಕಲ್ಯಾಣ್ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಅವರ ಹೇಳಿಕೆಯನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ದಿಶಾ ಪ್ರಕರಣದ ಬಗ್ಗೆ ಪವನ್ ಅವರು ನೀಡಿರುವ ಹೇಳಿಕೆ ತಪ್ಪು. ಅತ್ಯಾಚಾರಿಗಳಿಗೆ ಕಬ್ಬಿನಿಂದ ಹೊಡೆದರೆ ಅವರ ಕೃತ್ಯಗಳನ್ನು ನಿಯಂತ್ರಿಸಲು ಆಗುತ್ತಾ ಎಂದು ಪ್ರಶ್ನಿಸಿದ್ದಾರೆ.

    ದೇಶದೆಲ್ಲೆಡೆ ಈ ಪ್ರಕರಣದ ಆರೋಪಿಗಳನ್ನು ಗಲ್ಲಿಗೇರಿಸಿ ಎಂಬ ಕೂಗು ಕೇಳಿಬರುತ್ತಿದೆ. ಹೀಗಿರುವಾಗ ಪವನ್ ಅವರು ಈ ರೀತಿ ಬೇಜವಾಬ್ದಾರಿ ಹೇಳಿಕೆ ಕೊಡುವುದು ಅವರು ಹೆಣ್ಣುಮಕ್ಕಳನ್ನು ಎಷ್ಟು ಗೌರವಿಸುತ್ತಾರೆ ಎನ್ನುವುದನ್ನು ತೋರಿಸುತ್ತದೆ. ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ದಿಶಾ ಪ್ರಕರಣದ ಬಗ್ಗೆ ಕೇಳಿದಾಗ ಬೇಸರವ್ಯಕ್ತಪಡಿಸಿದ್ದರು. ಅಲ್ಲದೆ ಈ ರೀತಿ ನೀಚ ಕೃತ್ಯವೆಸೆಗುವವರ ವಿರುದ್ಧ ಕಠಿಣ ಕ್ರಮ ತೆಗದುಕೊಳ್ಳುವುದಾಗಿ ಹೇಳಿದ್ದರು ಎಂದು ತಿಳಿಸಿ ಕಿಡಿಕಾರಿದ್ದಾರೆ.

    ಇನ್ನೊಂದು ಪತ್ರಿಕಾಗೋಷ್ಠಿಯಲ್ಲಿ ವೈಎಸ್‌ಆರ್‌ಸಿ ಶಾಸಕ ಮಾತನಾಡಿ, ಪವನ್ ಕಲ್ಯಾಣ್ ಅವರ ಹೇಳಿಕೆಯಿಂದ ಜನರು ಗೊಂದಲ ಹಾಗೂ ಆಶ್ಚರ್ಯಕ್ಕಿಡಾಗಿದ್ದಾರೆ. ಹಿಂದೊಮ್ಮೆ ಅವರು ತಮ್ಮ ಕೋಪದ ಬಗ್ಗೆ ಹೇಳುತ್ತಾ, ತಮ್ಮ ಸಹೋದರಿಯನ್ನು ಯಾರೋ ರೇಗಿಸಿದ್ದಕ್ಕೆ ಅವರನ್ನು ಹೊಡೆಯಲು ಕತ್ತಿ ತರಲು ಮನೆಗೆ ಓಡಿಹೋಗಿದ್ದ ಪ್ರಸಂಗದ ಬಗ್ಗೆ ತಿಳಿಸಿದ್ದರು. ಆದರೆ ಈಗ ದಿಶಾ ಪ್ರಕರಣ ಆರೋಪಿಗಳನ್ನು ಗಲ್ಲಿಗೇರಿಸಲು ಸಹಮತವಿಲ್ಲ ಎಂದಿದ್ದಾರೆ. ಇದು ಜನರಲ್ಲಿ ಗೊಂದಲ ಮೂಡಿಸಿದೆ ಎಂದು ಹೇಳಿದ್ದಾರೆ.

  • 9ನೇ ಕ್ಲಾಸ್ ವಿದ್ಯಾರ್ಥಿನಿಯನ್ನ ಅತ್ಯಾಚಾರಗೈದಿದ್ದ ನಾಲ್ವರು ಅರೆಸ್ಟ್

    9ನೇ ಕ್ಲಾಸ್ ವಿದ್ಯಾರ್ಥಿನಿಯನ್ನ ಅತ್ಯಾಚಾರಗೈದಿದ್ದ ನಾಲ್ವರು ಅರೆಸ್ಟ್

    ಚೆನ್ನೈ: 9 ನೇ ತರಗತಿಯ ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿದ ಎಲೆಕ್ಟ್ರಿಷಿಯನ್ ಸೇರಿ ನಾಲ್ವರನ್ನು ಚೆನ್ನೈ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    ಈ ಘಟನೆ ಡಿಸೆಂಬರ್ 1ರಂದು ಮರೀನಾ ಬೀಚ್‍ಗೆ ಸಂತ್ರಸ್ತೆ ಹೋಗಿದ್ದಾಗ ನಡೆದಿದೆ. ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿದ ಆರೋಪಿಗಳನ್ನು ಅನ್ಬಾಜಗನ್, ಪುಷ್‍ಪ್ರಾಜ್, ಆನಂದ್ ಮತ್ತು ವಿಕ್ಕಿ ಎಂದು ಗುರುತಿಸಲಾಗಿದೆ. ಈ ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    22 ವರ್ಷದ ಆರೋಪಿ ಅನ್ಬಾಜಗನ್ ಸಂತ್ರಸ್ತೆಯೊಂದಿಗೆ ಸ್ನೇಹ ಬೆಳೆಸಿದ್ದು, ಅವಳನ್ನು ತನ್ನ ಎಲೆಕ್ಟ್ರಿಷಿಯನ್ ಅಂಗಡಿಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಿದ್ದಾನೆ. ಪೊಲೀಸರ ತನಿಖೆ ಪ್ರಕಾರ ಆರೋಪಿಗಳು ಸಂತ್ರಸ್ತೆಯನ್ನು ನಾಲ್ಕು ವಿವಿಧ ಸ್ಥಳಗಳಲ್ಲಿ ಆತ್ಯಚಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

    ಸಂತ್ರಸ್ತೆಯನ್ನು ಚೆನ್ನೈ ಎಗ್ಮೋರ್ ರೈಲ್ವೆ ನಿಲ್ದಾಣದಿಂದ ಮಕ್ಕಳ ರಕ್ಷಣಾ ಕಾರ್ಯಕರ್ತರು ರಕ್ಷಿಸಿದ್ದರು. ಆರೋಪಿ ಎಲೆಕ್ಟ್ರಿಷಿಯನ್ ಅನ್ಬಾಜಗನ್ ವಿರುಧಾಚಲಂ ನಿವಾಸಿಯಾಗಿದ್ದು, ಬಾಲಕಿಯನ್ನು ವಿರುಧಾಚಲಂಗೆ ಕರೆದುಕೊಂಡು ಹೋಗುತ್ತಿದ್ದ ಎಂದು ತಿಳಿದು ಬಂದಿದೆ. ನಂತರ ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಅನ್ಬಾಜಗನ್ ಮತ್ತು ಇತರ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

    ಈ ವರ್ಷದ ಏಪ್ರಿಲ್ ನಲ್ಲಿಯೂ ಮನೆ ಮುಂದೆ ಆಟವಾಡುತ್ತಿದ್ದ 8 ವರ್ಷದ ಬಾಲಕಿಯನ್ನು ಆರೋಪಿ ಬಲವಂತವಾಗಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದ ಘಟನೆ ಚೆನ್ನೈನ ಕವಲನ್ ಗೇಟ್ ಬಳಿ ನಡೆದಿತ್ತು. ಹೋಟೆಲ್ ಒಂದರಲ್ಲಿ ಕೆಲಸ ಮಾಡುವಾತ ಬಾಲಕಿಯನ್ನು ಅತ್ಯಾಚಾರ ಮಾಡಿ ನಂತರ ಬಾಲಕಿಯನ್ನು ತಂದು ಮನೆಯ ಬಳಿ ಬಿಟ್ಟು ಹೋಗಿದ್ದ.

    ಮನೆಗೆ ಬಂದ ಬಾಲಕಿಯನ್ನು ತಾಯಿ ಮಾತನಾಡಿಸಿದಾಗ ಸಂತ್ರಸ್ತೆ ಸರಿಯಾಗಿ ಮಾತನಾಡಿರಲಿಲ್ಲ. ಅಲ್ಲದೇ ಆಕೆ ತುಂಬಾ ಸುಸ್ತಾದ್ದಂತೆ ಕಾಣಿಸಿದ್ದಳು. ಬಾಲಕಿ ಮೈಮೇಲೆ ಆಗಿರುವ ಗಾಯಗಳನ್ನು ನೋಡಿ ತಾಯಿ ಆಕೆಯನ್ನು ವೈದ್ಯರ ಬಳಿ ಕರೆದುಕೊಂಡು ಹೋದಾಗ ಪ್ರಕರಣ ಬೆಳಕಿಗೆ ಬಂದಿತ್ತು.