Tag: accused

  • ಮಾಜಿ ಮೇಯರ್ ರವಿಕುಮಾರ್ ಹತ್ಯೆ ಪ್ರಕರಣ: ಆರೋಪಿಯ ಮೇಲೆ ಫೈರಿಂಗ್!

    ಮಾಜಿ ಮೇಯರ್ ರವಿಕುಮಾರ್ ಹತ್ಯೆ ಪ್ರಕರಣ: ಆರೋಪಿಯ ಮೇಲೆ ಫೈರಿಂಗ್!

    ತುಮಕೂರು: ಮಾಜಿ ಮೇಯರ್ ರವಿಕುಮಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಮೇಲೆ ಪಿಎಸ್‍ಐ ಫೈರಿಂಗ್ ನಡೆಸಿದ್ದಾರೆ.

    ಆರೋಪಿ ರಾಜಿ ಅಲಿಯಾಸ್ ರಾಜೇಶ್ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಕೋರಾ ಪಿಎಸ್‍ಐ ರವಿಕುಮಾರ್ ಅವರು ಫೈರಿಂಗ್ ನಡೆಸಿದ್ದಾರೆ. ಈ ವೇಳೆ ಆರೋಪಿಗೆ ಗಾಯವಾಗಿದ್ದು, ಆತನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪಿಎಸ್‍ಐ ರವಿಕುಮಾರ್ ಮೇಲೆ ಹಲ್ಲೆಗೆ ಯತ್ನಿಸಿದ್ದರಿಂದ ಅವರಿಗೂ ಗಾಯವಾಗಿದ್ದೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ಏನಿದು ಪ್ರಕರಣ?
    ಟಾಟಾ ಏಸ್‍ನಲ್ಲಿ ಬಂದ 7 ಜನ ದುಷ್ಕರ್ಮಿಗಳು ರವಿಕುಮಾರ್ ಮೇಲೆ ಹಲ್ಲೆ ಮಾಡಿದ್ದರು. ಈ ವೇಳೆ ರವಿ ಅವರು ಕೈಯಲ್ಲಿದ್ದ ಟೀಯನ್ನು ದುಷ್ಕರ್ಮಿಗಳ ಮುಖದ ಮೇಲೆ ಎರಚಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಆದರೆ ಅವರು ರವಿಯ ತಲೆಗೆ ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದರು. ಹೊಡೆತದ ರಭಸಕ್ಕೆ ರವಿ ತಲೆ ಛಿದ್ರ ಛಿದ್ರವಾಗಿತ್ತು.

    ಈ ಹಿಂದೆ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ ರವಿ, ಕಳೆದ 10 ವರ್ಷ ಜೆಡಿಎಸ್ ಪಕ್ಷ ಕಾರ್ಯಕರ್ತನಾಗಿದ್ದರು. ಕಳೆದ 6 ತಿಂಗಳ ಜೆಡಿಎಸ್ ಪಕ್ಷದಿಂದಲೇ ಸ್ಪರ್ಧಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. 2015 ರಲ್ಲಿ ಹಟ್ಟಿ ಮಂಜಣ್ಣ ಕೊಲೆ ನಡೆದಿದ್ದು, ಅದರಲ್ಲಿ ರವಿಯ ಕೈವಾಡವಿತ್ತು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಟ್ಟಿ ಮಂಜ ಸಹಚರರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು.

    ಬಟವಾಡಿಯಲ್ಲಿರುವ ಫ್ಲೈಓವರ್ ನ ಕೆಳಗಡೆ ರವಿಕುಮಾರ್ ಶವ ಅಪಘಾತವಾದ ರೀತಿಯಲ್ಲಿ ಬಿದ್ದಿತ್ತು. ಆದ್ರೆ ಶವ ನೋಡಿದವರು ಇದೊಂದು ಕೊಲೆ ಎಂದು ಹೇಳುವ ಹಾಗಿತ್ತು. ಅಪಘಾತವಾದರೆ ಬದಿಯಲ್ಲಿ ಬೀಳಲು ಸಾಧ್ಯವಿಲ್ಲ. ರವಿಕುಮಾರ್ ರೌಡಿಶೀಟರ್ ಆಗಿದ್ದರಿಂದ ಅವರ ಮೇಲೆ ಅನೇಕರು ಕಣ್ಣಿಟ್ಟಿದ್ದರು. ಅಷ್ಟೇ ಅಲ್ಲದೇ ಅವರ ಮೇಲೆ 3-4 ಬಾರಿ ಹಲ್ಲೆ ಪ್ರಯತ್ನಗಳು ಕೂಡ ನಡೆದ್ದಿದ್ದವು. ಹೀಗಾಗಿ ಇದು ಕೊಲೆ ಎಂದು ಹೇಳಲಾಗುತ್ತಿತ್ತು. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಸೀಲನೆ ನಡೆಸಿ ತನಿಖೆ ನಡೆಸಿದ ವೇಳೆ ಟೆಂಪೋ ಪತ್ತೆಯಾಗಿದ್ದು, ಇದು ಕೊಲೆ ಎಂದು ಸ್ಪಷ್ಟವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವ್ರತಕ್ಕಾಗಿ ಗಂಗೆಯಲ್ಲಿ ಸ್ನಾನ ಮಾಡ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್!

    ವ್ರತಕ್ಕಾಗಿ ಗಂಗೆಯಲ್ಲಿ ಸ್ನಾನ ಮಾಡ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್!

    ಪಾಟ್ನಾ: ವ್ರತದ ಹಿನ್ನೆಲೆಯಲ್ಲಿ ಮಹಿಳೆ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ.

    ಈ ಘಟನೆ ಸೋಮವಾರ ನಡೆದಿದ್ದು, ಶಿವಪುಜಾನ್ ಮಹತ್ವ್ ಮತ್ತು ವಿಶಾಲ್ ಅತ್ಯಾಚಾರ ಎಸಗಿದ್ದ ದುಷ್ಕರ್ಮಿಗಳು. ವ್ರತದ ಹಿನ್ನೆಲೆಯಲ್ಲಿ ಮಹಿಳೆ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಈ ಕೃತ್ಯವನ್ನು ಮಾಡಿದ್ದಾರೆ. ಅಷ್ಟೇ ಅಲ್ಲದೇ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

    ಈ ವಿಡಿಯೋದಲ್ಲಿ ಮಹಿಳೆ ವ್ರತ ಮಾಡಲೆಂದು ಗಂಗಾ ನದಿ ಬಳಿ ಬಂದಿದ್ದಾಳೆ. ಈ ವೇಳೆ ಇಬ್ಬರು ದುಷ್ಕರ್ಮಿಗಳು ಬಂದು ಇಬ್ಬರಲ್ಲಿ ಒಬ್ಬ ನದಿಗೆ ಇಳಿದು ಆಕೆಯನ್ನು ಅತ್ಯಾಚಾರ ಮಾಡಿದ್ದಾನೆ. ಬಳಿಕ ಇನ್ನೊಬ್ಬ ಆಕೆಗೆ ಮೇಲೆ ಬರುವಂತೆ ಬೆದರಿಕೆಯನ್ನು ಹಾಕಿದ್ದಾನೆ.

    ಅತ್ಯಾಚಾರಕ್ಕೊಳಗಾದ ಮಹಿಳೆ ಪ್ರಕರಣವನ್ನು ದಾಖಲಿಸಿರಲಿಲ್ಲ. ಪೊಲೀಸರೇ ವೈರಲ್ ಆದ ವಿಡಿಯೋದಿಂದ ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಪುಜಾನ್ ಮಹತ್ವ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಆತನನ್ನು ಪಾಟ್ನಾದಲ್ಲಿ ಬಂಧಿಸಲಾಗಿದ್ದು ಮತ್ತೊಬ್ಬ ಆರೋಪಿಯನ್ನು ಬುಧವಾರ ಬೆಳಗ್ಗೆ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತುಮಕೂರು ಮಾಜಿ ಮೇಯರ್ ಹತ್ಯೆ: ಆರೋಪಿಗಳು ಪೊಲೀಸರಿಗೆ ಶರಣು

    ತುಮಕೂರು ಮಾಜಿ ಮೇಯರ್ ಹತ್ಯೆ: ಆರೋಪಿಗಳು ಪೊಲೀಸರಿಗೆ ಶರಣು

    ಚಿಕ್ಕಬಳ್ಳಾಪುರ: ತುಮಕೂರಿನ ಮಾಜಿ ಮೇಯರ್ ರವಿಕುಮಾರ್ ಅಲಿಯಾಸ್ ಗಡ್ಡ ರವಿ ಹತ್ಯೆ ಪ್ರಕರಣದ ಮೂಲ ರೂವಾರಿಯಾಗಿದ್ದ ರೌಡಿಶೀಟರ್ ಸುಜಯ್ ಭಾರ್ಗವ್ ಅಲಿಯಾಸ್ ಸುಜಿ ಹಾಗೂ ಆತನ ಸಹಚರರು ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ.

    ಭಾನುವಾರ ತುಮಕೂರು ನಗರದ ಬಟವಾಡಿ ಸೇತುವೆ ಬಳಿ ಬೆಳ್ಳಂಬೆಳಗ್ಗೆ ಮಾಜಿ ಮೇಯರ್ ಗಡ್ಡರವಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಹತ್ಯೆ ಪ್ರಕರಣದಲ್ಲಿ ರೌಡಿಶೀಟರ್ ಸುಜಯ್ ಹೆಸರು ಪ್ರಮುಖವಾಗಿ ಕೇಳಿಬಂದಿತ್ತು. ಪೊಲೀಸರು ಸಹ ಸುಜಯ್ ಹಾಗೂ ಆತನ ಸಹಚರರೇ ಹತ್ಯೆ ಮಾಡಿದ್ದರ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು. ಹೀಗಾಗಿ ಆರೋಪಿಗಳಿಗಾಗಿ ವ್ಯಾಪಕ ಶೋಧ ಕಾರ್ಯ ನಡೆಸಿದ್ದರು. ರಾಜಕಾರಣಿಗಳ ಒತ್ತಡದಿಂದ ಸುಜಯ್ ಮೇಲೆ ಎನ್‍ಕೌಂಟರ್ ಮಾಡುವ ಸುದ್ದಿಯೂ ಸಹ ಹಬ್ಬಿತ್ತು.

    ಪೊಲೀಸರ ಎನ್‍ಕೌಂಟರ್ ನಿಂದ ತಪ್ಪಿಸಿಕೊಳ್ಳಲು ಸುಜಯ್ ಹಾಗೂ ಆತನ ಸಹಚರರು ತಲೆ ಮರೆಸಿಕೊಂಡಿದ್ದರು. ಅಲ್ಲದೇ ಆರೋಪಿಗಳ ಬಲೆಗೆ ಪೊಲೀಸರು ಮೂರು ವಿಶೇಷ ತಂಡಗಳನ್ನು ಸಹ ರಚಿಸಿದ್ದರು. ಇದಲ್ಲದೇ ಸೋಮವಾರ ಆರೋಪಿಗಳು ಜಿಲ್ಲಾ ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎನ್ನುವ ಕಾರಣದಿಂದ ಪೊಲೀಸರು ನ್ಯಾಯಾಲಯದ ಆವರಣದಲ್ಲಿ ಕಾದು ಕುಳಿತಿದ್ದರು. ಆದರೆ ಇಂದು ಸುಜಯ್ ಸೇರಿದಂತೆ ಇತರೆ ಆರೋಪಿಗಳು ಸ್ವತಃ ಗೌರಿಬಿದನೂರಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ.

    ಏನಿದು ಪ್ರಕರಣ?
    ಭಾನುವಾರ ಬೆಳ್ಳಂಬೆಳಗ್ಗೆ 8 ಗಂಟೆಯ ಸುಮಾರಿಗೆ ರವಿ ಬಟವಾಡಿ ಸೇತುವೆ ಬಳಿ ಟೀ ಕುಡಿಯುತ್ತಾ ನಿಂತಿದ್ದರು. ಈ ವೇಳೇ ಟಾಟಾ ಏಸ್‍ನಲ್ಲಿ ಬಂದಿದ್ದ 7 ಜನ ದುಷ್ಕರ್ಮಿಗಳು ರವಿಕುಮಾರ್ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಸಿದರೂ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ರವಿಯ ತಲೆಗೆ ಹೊಡೆದಿದ್ದಾರೆ. ಮಾರಕಾಸ್ತ್ರಗಳ ದಾಳಿಯಿಂದಾಗಿ ತಲೆ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ರವಿ ಸಾವನ್ನಪ್ಪಿದ್ದರು. ರವಿ ಸಾವನ್ನಪ್ಪುತ್ತಿದ್ದಂತೆ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದರು.

    ಈ ಹಿಂದೆ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ ರವಿ, ಕಳೆದ 10 ವರ್ಷಗಳಿಂದ ಜೆಡಿಎಸ್ ಪಕ್ಷ ಕಾರ್ಯಕರ್ತನಾಗಿದ್ದರು. ಕಳೆದ 6 ತಿಂಗಳ ಹಿಂದೆಯಷ್ಟೇ ಜೆಡಿಎಸ್‍ನಿಂದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. 2015 ರಲ್ಲಿ ಹಟ್ಟಿ ಮಂಜಣ್ಣ ಕೊಲೆ ನಡೆದಿದ್ದು, ಅದರಲ್ಲಿ ರವಿಯ ಕೈವಾಡವಿತ್ತು. ಹೀಗಾಗಿ ಹಟ್ಟಿ ಮಂಜನ ಸಹಚರರೇ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೈ ಯುವ ಮುಖಂಡನ ಕೊಲೆ ಆರೋಪಿಗಳ ಮೇಲೆ ಪೊಲೀಸರ ಫೈರಿಂಗ್!

    ಕೈ ಯುವ ಮುಖಂಡನ ಕೊಲೆ ಆರೋಪಿಗಳ ಮೇಲೆ ಪೊಲೀಸರ ಫೈರಿಂಗ್!

    ಬೆಂಗಳೂರು: ಕಾಂಗ್ರೆಸ್ ಯುವ ಅಧ್ಯಕ್ಷನ ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ್ದಾರೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ದೊಡ್ಡಜಾಲ ಸಮೀಪ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದಾಗ ಈ ಘಟನೆ ನಡೆದಿದೆ.

    ಮನೋಜ್ ಅಲಿಯಾಸ್ ಕೆಂಚ ಮತ್ತು ಮಂಜೇಗೌಡ ಬಂಧಿತ ಆರೋಪಿಗಳು. ಚಿಕ್ಕಚಾಲ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಇವರನ್ನು ಖಚಿತ ಮಾಹಿತಿ ಮೇರೆಗೆ ವಿದ್ಯಾರಣ್ಯಪುರ ಹಾಗೂ ಯಲಹಂಕ ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಲು ಮುಂದಾಗಿದ್ದರು. ಈ ವೇಳೆ ಆರೋಪಿಗಳು ತಮ್ಮ ಬಳಿ ಇದ್ದ ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾರೆ. ಆತ್ಮರಕ್ಷಣೆಗಾಗಿ ಯಲಹಂಕ ಪೊಲೀಸರು ಇಬ್ಬರು ಆರೋಪಿಗಳ ಮೇಲೆ ಫೈರಿಂಗ್ ನಡೆಸಿದ್ದಾರೆ.

    ಆರೋಪಿ ಮನೋಜ್ ಅಲಿಯಾಸ್ ಕೆಂಚನ ಕಾಲಿಗೆ ಗುಂಡು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಅಳ್ಳಾಲಸಂದ್ರದ ಕಾಂಗ್ರೆಸ್ ಯುವ ಅಧ್ಯಕ್ಷ ಅರುಣ್ ಕುಮಾರ್ ನನ್ನು ಕೊಲೆ ಪ್ರಕರಣದಲ್ಲಿ ಆರೋಪಿಗಳ ಹೆಸರು ಕೇಳಿ ಬಂದಿವೆ. ಅರುಣ್ ತಡರಾತ್ರಿ ಸಿನೆಮಾ ನೋಡಿಕೊಂಡು ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಘಟನೆ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಯುವ ಕಾಂಗ್ರೆಸ್ ಅಧ್ಯಕ್ಷನ ಬರ್ಬರ ಹತ್ಯೆ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೆತ್ತಲೆಗೊಳಿಸಿ, ವಿಡಿಯೋ ಮಾಡಿ ರೌಡಿಶೀಟರಿಗೆ ಥರ್ಡ್ ಡಿಗ್ರಿ ಟ್ರೀಟ್ ಮೆಂಟ್

    ಬೆತ್ತಲೆಗೊಳಿಸಿ, ವಿಡಿಯೋ ಮಾಡಿ ರೌಡಿಶೀಟರಿಗೆ ಥರ್ಡ್ ಡಿಗ್ರಿ ಟ್ರೀಟ್ ಮೆಂಟ್

    ಬೆಂಗಳೂರು: ರೌಡಿಶೀಟರ್ ನನ್ನು ಬೆತ್ತಲೆಗೊಳಿಸಿ ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ ಮಾಡಿದ್ದು, ಈಗ ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ರೌಡಿಶೀಟರ್ ದಿಲೀಪ್ ಗೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ ನೀಡಲಾಗಿದೆ. ಬ್ಯಾಡರಹಳ್ಳಿ ಪೊಲೀಸರು ಬಟ್ಟೆ ಬಚ್ಚಿ ರೌಡಿಶೀಟರ್ ಗೆ ಈ ರೀತಿ ಟ್ರಿಂಟ್ ಮೆಂಟ್ ಮಾಡಿ ತಮ್ಮ ವಿಕೃತಿ ಮೆರೆದಿದ್ದಾರಾ ಎಂಬ ಪ್ರಶ್ನೆಗಳು ಕೇಳಿ ಬರುತ್ತಿದೆ.

    ಸೆಪ್ಟೆಂಬರ್ 3 ರಂದು ದಿಲೀಪ್ ಸಹೋದರ ಸ್ಕೋಪಿ ಕೊಲೆಯಾಗಿದ್ದನು. ವಿಶ್ವೇಶ್ವರಯ್ಯ ಲೇಔಟ್ ಬಳಿ ಸ್ಕೋಪಿ ಕೊಲೆಯಾಗಿತ್ತು. ತನ್ನ ಸಹೋದರನ್ನು ಕೊಲೆ ಮಾಡಿದ್ದ ದುರ್ಷ್ಕಮಿಗಳ ಮೇಲೆ ಪತ್ರಿಕಾರ ತೀರಿಸಿಕೊಳ್ಳಲು ದಿಲೀಪ್ ಸಿದ್ಧನಾಗಿದ್ದನು. ಅದೇ ರೀತಿ ಸ್ಕೆಚ್ ಕೂಡ ಹಾಕಿದ್ದು, ಇದನ್ನು ಅರಿತ ಪೊಲೀಸರು ಠಾಣೆಗೆ ಕರೆತಂದಿದ್ದರು.

    ವಿಡಿಯೋದಲ್ಲಿ ಆರೋಪಿ ದಿಲೀಪ್ ನನ್ನು ಬೆತ್ತಲೆಗೊಳಿಸಿ, ಹಿಂದೆಯಿಂದ ಅಂದರೆ ಮುಖಕಾಣದಂಗೆ ನಿಂತುಕೊಂಡು ಹಲ್ಲೆ ಮಾಡಿದ್ದಾರೆ. ಮುಂದೆ ಹಲ್ಲೆ ಮಾಡುತ್ತಿರುದನ್ನು ವಿಡಿಯೋ ಮಾಡಿದ್ದಾರೆ. ಆದರೆ ಹಲ್ಲೆ ಮಾಡಿದವರು, ವಿಡಿಯೋ ಮಾಡುತ್ತಿರುವವರು ಯಾರು ಎಂದು ತಿಳಿದುಬಂದಿಲ್ಲ. ಆದರೆ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆಯ ನೆಪದಲ್ಲಿ ವಿಕೃತಿ ಮೆರೆತಿದ್ದಾರೆ ಎಂದು ಜನರು ಆರೋಪಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೂಡಬಿದ್ರೆ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿಯ ಕೊಲೆಗೆ ಯತ್ನ

    ಮೂಡಬಿದ್ರೆ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿಯ ಕೊಲೆಗೆ ಯತ್ನ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ನೆತ್ತರು ಹರಿದಿದೆ. ಮೂಡಬಿದ್ರೆಯ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿಯ ಕೊಲೆಗೆ ಯತ್ನ ನಡೆದಿದೆ.

    ಮೂಡಬಿದ್ರೆ ಠಾಣೆ ವ್ಯಾಪ್ತಿಯ ಗಂಟಾಲ್ ಕಟ್ಟೆ ಎಂಬಲ್ಲಿ ಬೆಳಗ್ಗೆ 6.30ಕ್ಕೆ ಇನ್ನೋವಾ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಇಮ್ತಿಯಾಜ್ (30) ಮೇಲೆ ತಲವಾರಿನಿಂದ ಕಡಿದು ಪರಾರಿಯಾಗಿದೆ.

    ಇಮ್ತಿಯಾಜ್ ಗಂಟಾಲ್ಕಟ್ಟೆಯಲ್ಲಿ ಹೊಟೇಲ್ ಹೊಂದಿದ್ದು, ಇನ್ನೋವಾದಲ್ಲಿ ಬಂದಿದ್ದ ಯುವಕರು ಬೆಳಗ್ಗೆ ಚಹಾ ಕುಡಿಯಲೆಂದು ಹೊಟೇಲ್ ಒಳಗೆ ಬಂದಿದ್ದರು. ಹೀಗಾಗಿ ಟೀ ಮಾಡಲೆಂದು ಇಮ್ತಿಯಾಜ್ ಒಳ ಹೋದಾಗಲೇ ತಲವಾರಿನೊಂದಿಗೆ ನುಗ್ಗಿದ ತಂಡ, ಆತನ ತಲೆ ಮತ್ತು ಕಾಲಿಗೆ ಕಡಿದು ಪರಾರಿಯಾಗಿದೆ. ಗಂಭೀರವಾಗಿ ಹಲ್ಲೆಗೊಳಗಾದ ಇಮ್ತಿಯಾಜ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಇಮ್ತಿಯಾಜ್, ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣದ ಆರೋಪಿಯಾಗಿದ್ದಾನೆ. ಹೀಗಾಗಿ ಪ್ರತೀಕಾರಕ್ಕಾಗಿ ಕೊಲೆ ಯತ್ನ ನಡೆದಿರಬಹುದಾ ಎನ್ನುವ ಶಂಕೆ ವ್ಯಕ್ತವಾಗಿದೆ. ಪೊಲೀಸ್ ಕಮಿಷನರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಡಬಿದ್ರೆ ಠಾಣೆ ಪೊಲೀಸರು ಸ್ಥಳದಲ್ಲಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

    ಭಜರಂಗದಳ ಕಾರ್ಯಕರ್ತ ಪ್ರಶಾಂತ್ ಪೂಜಾರಿಯನ್ನು ಎರಡು ವರ್ಷಗಳ ಹಿಂದೆ ಮೂಡಬಿದ್ರೆ ಪೇಟೆಯಲ್ಲಿ ದುಷ್ಕರ್ಮಿಗಳು ಬೆಳ್ಳಂಬೆಳಗ್ಗೆ ಕಡಿದು ಹತ್ಯೆ ಮಾಡಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಸಂಚಲನವನ್ನೂ ಸೃಷ್ಟಿ ಮಾಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್?

    ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್?

    ಬೆಂಗಳೂರು: ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಆತ್ಮಹತ್ಯೆಗೆ ಶರಣಾಗಿದ್ದು, ಆರೋಪಿಯ ಸೂಸೈಡ್ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗುತ್ತಿದೆ.

    ಸತೀಶ್ ಮಂಜು ಆತ್ಮಹತ್ಯೆಗೆ ಶರಣಾದ ಆರೋಪಿ. ಕಳ್ಳತನ ಪ್ರಕರಣವೊಂದರಲ್ಲಿ ಅಮೃತಹಳ್ಳಿ ಠಾಣೆಯ ಪೊಲೀಸರು ಈತನನ್ನು ಬಂಧಿಸಿದ್ದರು. ಬಳಿಕ ಕಳ್ಳತನ ಪ್ರಕರಣದ ಹೆಚ್ಚಿನ ತನಿಖೆಗೆ ಠಾಣೆಯ ಎರಡನೇ ಮಹಡಿಗೆ ಆರೋಪಿ ಸತೀಶ್‍ನನ್ನ ಪೊಲೀಸರು ಕರೆದುಕೊಂಡು ಹೋಗುತ್ತಿದ್ದರು. ಆದರೆ ಸತೀಶ್ ಮಂಜು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.

    ಆರೋಪಿಯನ್ನ ತನಿಖೆ ಮಾಡುತ್ತಿದ್ದಾಗ ಆತ ಮೇಲಿಂದ ಜಂಪ್ ಮಾಡಿದ್ದಾನೆಂದು ಈಶಾನ್ಯ ವಿಭಾಗದ ಡಿಸಿಪಿ ಹೇಳುತ್ತಿದ್ದಾರೆ. ಆದರೆ ಸತೀಶ್ ಆತ್ಮಹತ್ಯೆ ಸುತ್ತ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ಸಿಐಡಿ ಡಿವೈಎಸ್‍ಪಿ ಜಗನ್ನಾಥ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿದೆ.

    ಶುಕ್ರವಾರ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಸ್ಥಳದ ಮಹಜರ್ ಮಾಡಲಾಗಿದ್ದು, ಅಮೃತಹಳ್ಳಿ ಠಾಣೆಗೆ ಎಸಿಪಿ ಹಾಗೂ ಎಲ್ಲ ಠಾಣೆಯ ಇನ್ಸ್ ಪೆಕ್ಟರ್ ಗಳು ಮತ್ತು ಸಿಬ್ಬಂದಿಗಳನ್ನೂ ಕರೆಸಿ ವಿಚಾರಣೆ ಮಾಡಲಾಗಿದೆ. ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಮೃತನ ಮರಣೋತ್ತರ ಪರೀಕ್ಷೆ ಕೂಡ ಮಾಡಲಾಗಿದೆ. ಈ ಎಲ್ಲ ತನಿಖೆಯ ಸಂಪೂರ್ಣ ಚಿತ್ರೀಕರಣ ಮಾಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಸಿಎಂ ಆರೋಪ ಸಾಬೀತಾದ್ರೆ, ನನ್ನೆಲ್ಲಾ ಆಸ್ತಿಯನ್ನು ಕೊಡಗು ಸಂತ್ರಸ್ತರಿಗೆ ನೀಡ್ತೀನಿ: ಜಿಮ್ ಸೋಮ

    ಸಿಎಂ ಆರೋಪ ಸಾಬೀತಾದ್ರೆ, ನನ್ನೆಲ್ಲಾ ಆಸ್ತಿಯನ್ನು ಕೊಡಗು ಸಂತ್ರಸ್ತರಿಗೆ ನೀಡ್ತೀನಿ: ಜಿಮ್ ಸೋಮ

    ಹಾಸನ: ಸಿಎಂ ಕುಮಾರಸ್ವಾಮಿಯವರ ರಾಜ್ಯ ಸರ್ಕಾರವನ್ನು ಉರುಳಿಸಲು ಬಿಜೆಪಿ ಕೈಹಿಡಿದಿದ್ದೇನೆ ಎನ್ನುವ ಆರೋಪ ಸಾಬೀತಾದರೆ ನನ್ನ ಎಲ್ಲ ಆಸ್ತಿಯನ್ನು ಕೊಡಗು ಸಂತ್ರಸ್ತರಿಗೆ ನೀಡುತ್ತೇನೆ ಎಂದು ಜಿಮ್ ಸೋಮ ಅಲಿಯಾಸ್ ನಾರ್ವೆ ಸೋಮಶೇಖರ್ ಹೇಳಿದ್ದಾರೆ.

    ಅರಸೀಕೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿಯವರ ಬಳಿಯೇ ಎಲ್ಲಾ ಇಲಾಖೆಗಳಿವೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಲಿ. ನಾನು ಅಕ್ರಮವಾಗಿ ಹಣ ಸಂಪಾದಿಸಿದ್ದರ ಬಗ್ಗೆ ಸಾಬೀತುಪಡಿಸಲಿ. ಸಾಬೀತಾದರೆ ನಾನು ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ಸುಖಾಸುಮ್ಮನೆ ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಸರ್ಕಾರ ಬೀಳಿಸುವ ಯಾವುದೇ ಪ್ರಯತ್ನಕ್ಕೆ ನಾನು ಕೈ ಹಾಕುವುದು ಇಲ್ಲ, ಮುಂದೆಯೂ ಮಾಡಲ್ಲ ಕುಮಾರಸ್ವಾಮಿ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.

    ಈಗಾಗಲೇ ಸಿಎಂ ಅವರಿಗೆ 48 ಗಂಟೆಗಳ ಕಾಲಾವಕಾಶವನ್ನು ನೀಡಿದ್ದೇನೆ. ಅವರು ಮಾಡಿರುವ ಆರೋಪ ಸಾಬೀತುಪಡಿಸದಿದ್ದರೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಆರೋಪ ಸಾಬೀತಾದಲ್ಲಿ ನನ್ನ ಎಲ್ಲಾ ಆಸ್ತಿಯನ್ನು ಕೊಡಗು ಸಂತ್ರಸ್ತರಿಗೆ ನೀಡುತ್ತೇನೆ. ನನ್ನ ಈ ಮಾತಿಗೆ ನಾನು ಬದ್ಧನಾಗಿದ್ದೇನೆ. ಆಪರೇಷನ್ ಕಮಲದ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

    ಅರಸೀಕೆರೆಯಲ್ಲಿ ನಡೆದ ಬಿಎಸ್‍ವೈ ಆಪ್ತ ಸಂತೋಷ್ ನಿಶ್ಚಿತಾರ್ಥದಲ್ಲಿ ಸಿ.ಪಿ ಯೋಗೇಶ್ವರ್, ಜಿಮ್ ಸೋಮ ಹಾಗೂ ಉದಯ್ ಗೌಡ ಭಾಗವಹಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರುಂಡ ಕತ್ತರಿಸಿ ಪರಾರಿಯಾಗಿದ್ದ ಆರೋಪಿಯ ಮೇಲೆ ಪೊಲೀಸರಿಂದ ಫೈರಿಂಗ್!

    ರುಂಡ ಕತ್ತರಿಸಿ ಪರಾರಿಯಾಗಿದ್ದ ಆರೋಪಿಯ ಮೇಲೆ ಪೊಲೀಸರಿಂದ ಫೈರಿಂಗ್!

    ಕಲಬುರಗಿ: ಯುವಕನ ರುಂಡ ಕತ್ತರಿಸಿ ಪರಾರಿಯಾಗಿದ್ದ ಆರೋಪಿಯ ಮೇಲೆ ಪೊಲೀಸರಿಂದ ಫೈರಿಂಗ್ ನಡೆಸಿರುವ ಘಟನೆ ಕಲಬುರಗಿ ಹೊರವಲಯದ ಆಳಂದ ರಸ್ತೆಯ ಕೆರೆಭೋಸ್ಗಾ ಬಳಿ ನಡೆದಿದೆ.

    ನಾಗರಾಜ್ ಅಲಿಯಾಸ್ ನಾಗಾ (24) ಎಂಬವನ ಮೇಲೆ ಚೌಕ್ ಠಾಣೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಸೆ 11 ರಂದು ಸಿದ್ದೋಜಿ ಎಂಬಾತನನ್ನ ಅಪಹರಿಸಿ ಅಲಗೋಡ್ ಗ್ರಾಮದ ಬಳಿ ನಾಗರಾಜ್ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದನು. ಬಳಿಕ ರುಂಡವನ್ನು ಕೆರೆಭೋಸ್ಗಾದ ನಿರ್ಜನ ಪ್ರದೇಶದಲ್ಲಿ ಬಿಸಾಕಿದ್ದನು. ಖಚಿತ ಮಾಹಿತಿ ಮೇರೆಗೆ ಚೌಕ್ ಠಾಣೆ ಸಿಪಿಐ ಎಸ್‍ಎಸ್ ಹಿರೇಮಠ್ ನೇತೃತ್ವದಲ್ಲಿ ಬಂಧನಕ್ಕೆ ತೆರಳಿದ್ದರು.

    ಈ ವೇಳೆ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದನು. ಆರೋಪಿಯನ್ನು ಬಂಧಿಸುವಾಗ ಪೊಲೀಸ್ ಪೇದೆಗಳಾದ ಸಿದ್ದರಾಜು ಮತ್ತು ರಮೇಶ್ ಎಂಬವರು ಗಾಯಗೊಂಡಿದ್ದು, ಗಾಯಾಳು ಆರೋಪಿಯನ್ನು ಹಾಗು ಪೇದೆಗಳನ್ನು ಜಿಲ್ಲಾಸ್ಪತ್ರಗೆ ದಾಖಲು ಮಾಡಲಾಗಿದೆ.

    ಆರೋಪಿ ನಾಗರಾಜ್ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದೋಜಿಯನ್ನ ಅಪಹರಿಸಿದ್ದನು ಎಂದು ಹೇಳಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪೊಲೀಸ್ ಅಧಿಕಾರಿ ಮಗನಿಂದ ಹುಡ್ಗಿಗೆ ಹಿಗ್ಗಾಮುಗ್ಗಾ ಥಳಿತ, ಮೊಣಕಾಲಿನಿಂದ ಮುಖಕ್ಕೆ ಪಂಚ್!

    ಪೊಲೀಸ್ ಅಧಿಕಾರಿ ಮಗನಿಂದ ಹುಡ್ಗಿಗೆ ಹಿಗ್ಗಾಮುಗ್ಗಾ ಥಳಿತ, ಮೊಣಕಾಲಿನಿಂದ ಮುಖಕ್ಕೆ ಪಂಚ್!

    – ಆರೋಪಿಯ ಮೃಗೀಯ ವರ್ತನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್

    ನವದೆಹಲಿ: ನಗರದ ಪೊಲೀಸ್ ಅಧಿಕಾರಿ ಅಶೋಕ್ ಸಿಂಗ್ ಅವರ ಮಗನೊಬ್ಬ ಹುಡುಗಿಗೆ ಹಿಗ್ಗಾಮುಗ್ಗಾ ಥಳಿಸಿ ಕೂದಲು ಎಳೆದಾಡಿ, ಕಾಲಿನಿಂದ ಒದ್ದು, ಮೊಣಕಾಲಿನಿಂದ ಮುಖಕ್ಕೆ ಪಂಚ್ ಕೊಡುವ ಮೂಲಕ ವಿಕೃತಿ ಮೆರೆದ ಘಟನೆ ನಡೆದಿದೆ.

    ಈ ಘಟನೆ ದೆಹಲಿಯ ತಿಲಕ್ ನಗರದಲ್ಲಿ ನಡೆದಿದ್ದು, ಆರೋಪಿಯನ್ನು ರೋಹಿತ್ ತೋಮರ್ ಎಂದು ಗುರುತಿಸಲಾಗಿದೆ. ಸದ್ಯ ಆರೋಪಿ ಹುಡುಗಿಗೆ ಥಳಿಸುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಸೆಪ್ಟೆಂಬರ್ 2ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಉತ್ತಮ್ ನಗರ ಪ್ರದೇಶದಲ್ಲಿದಲ್ಲಿರೋ ಬಿಪಿಒ ಆಫೀಸಿನಲ್ಲಿ ಈ ವಿಡಿಯೋ ರೆಕಾರ್ಡ್ ಆಗಿದೆ. ಈ ಆಫೀಸ್ ನ ಮಾಲೀಕ ರೋಹಿತ್ ಗೆಳೆಯನೇ ಆಗಿದ್ದಾನೆ. 21 ವರ್ಷದ ಆರೋಪಿ ರೋಹಿತ್ ನಿರುದ್ಯೋಗಿಯಾಗಿದ್ದು, ಇತ್ತೀಚೆಗಷ್ಟೇ ಬಿಪಿಓದಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದನು ಅಂತ ಮೂಲಗಳಿಂದ ತಿಳಿದುಬಂದಿರುವುದಾಗಿ ವರದಿಯಾಗಿದೆ.

    ಘಟನೆಗೆ ಸಂಬಂಧಿಸಿದಂತೆ ಥಳಿತಕ್ಕೊಳಗಾದ ಹುಡುಗಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಹೀಗಾಗಿ ಪೊಲೀಸರು ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 506(ಬೆದರಿಕೆ) ಹಾಗೂ 354(ಮಹಿಳೆಯ ಮೇಲೆ ದೌರ್ಜನ್ಯ)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಪೊಲೀಸರು ಘಟನೆಯ ಬಗ್ಗೆ ಮಾತುಕತೆ ನಡೆಸಲು ಆರೋಪಿ ತಂದೆ ಅಶೋಕ್ ತೋಮರ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಆದರೆ ಅಶೋಕ್ ಅವರು ತಮ್ಮ ಮೊಬೈಲ್ ಸ್ವಿಚ್ಚ್ ಆಫ್ ಮಾಡಿಕೊಂಡಿದ್ದಾರೆ. ಹೀಗಾಗಿ ಸದ್ಯ ಪೊಲೀಸರು ಪ್ರಕರಣವನ್ನು ಕೈಗೆತ್ತಿಕೊಂಡು ತನಿಖೆ ಆರಂಭಿಸಿದ್ದಾರೆ.

    ವಿಡಿಯೋದಲ್ಲೇನಿದೆ?:
    ಆರೋಪಿಯು ಹುಡುಗಿಯ ಕೂದಲನ್ನು ಹಿಡಿದು ಎಳೆದುಕೊಂಡು ಬರುತ್ತಾನೆ. ಆಕೆಗೆ ಬೈಯುತ್ತಾ ಆಕೆಯ ಹೊಟ್ಟೆಗೆ ಕಾಲಿನಿಂದ ಒದೆಯುತ್ತಾನೆ. ಒದ್ದ ರಭಸಕ್ಕೆ ಹುಡುಗಿ ಕೆಳಗೆ ಬಿದ್ದು, ತನ್ನನ್ನು ಏನೂ ಮಾಡಬೇಡವೆಂದು ಪರಿಪರಿಯಾಗಿ ಬೇಡಿಕೊಳ್ಳುತ್ತಾಳೆ. ಆದ್ರೆ ಆಕೆಯ ಮಾತನ್ನು ಲೆಕ್ಕಿಸದೆ ಆರೋಪಿ ಮನಬಂದಂತೆ ತನ್ನ ಕೈಯಿಂದ ಆಕೆಯ ತಲೆಗೆ ಹೊಡೆದಿದ್ದಾನೆ.

    ಬಳಿಕ ಬಿದ್ದಲ್ಲಿಂದ ಹುಡುಗಿ ಎದ್ದು ಕುಳಿತುಕೊಳ್ಳುವಾಗ ಮತ್ತೆ ಬೈಯುತ್ತಾ ಆಕೆಯ ಕೂದಲನ್ನು ಹಿಡಿದು ಎಳೆದಾಡಿಕೊಂಡು ನಡುಬಗ್ಗಿಸಿ ಬೆನ್ನಿಗೆ ತನ್ನ ಮುಂಗೈಯಿಂದ, ಮೊಣ ಕಾಲಿನಿಂದ ಹುಡುಗಿಯ ಮುಖಕ್ಕೆ ಒದೆಯುವ ಮೂಲಕ ತನ್ನ ರಾಕ್ಷಸ ಕೃತ್ಯ ಸೆಗಿದ್ದಾನೆ. ಇದೇ ವೇಳೆ ಪಕ್ಕದಲ್ಲಿ ಯುವಕನೊಬ್ಬ ಪಾಸಾಗುತ್ತಾನೆ. ಆದ್ರೆ ಆತ ಏನೂ ಮಾತಾಡದೆ ತನ್ನ ಪಾಡಿಗೆ ಆ ಕಡೆ ಈ ಕಡೆ ಹೋಗುತ್ತಾನೆ.

    ಈ ಎಲ್ಲಾ ಘಟನೆಗಳನ್ನು ಪಕ್ಕದಲ್ಲೇ ಇದ್ದ ವ್ಯಕ್ತಿಯೊಬ್ಬ ತನ್ನ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾನೆ. ಒಟ್ಟಿನಲ್ಲಿ ಆರೋಪಿ ಆ ಹುಡುಗಿಗೆ ಥಳಿಸಲು ಕಾರಣವೇನೆಂದು ತಿಳಿದುಬಂದಿಲ್ಲ. ಆದ್ರೆ ಈ ವಿಡಿಯೋ ನೋಡಿದ್ರೆ ಮನಕಲಕುತ್ತದೆ.

     ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv