Tag: Acharya Cinema

  • ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾ ಸೋಲು : ಹೊಣೆಹೊತ್ತು ಹಣ ಮರಳಿಸಿದ್ರಾ ನಿರ್ದೇಶಕ ಶಿವ

    ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾ ಸೋಲು : ಹೊಣೆಹೊತ್ತು ಹಣ ಮರಳಿಸಿದ್ರಾ ನಿರ್ದೇಶಕ ಶಿವ

    ಸಿನಿಮಾಗಳು ಲಾಸ್ ಆದಾಗ ಆ ಚಿತ್ರದ ಹೀರೋಗಳು ವಿತರಕರಿಗೆ ಅಥವಾ ನಿರ್ಮಾಪಕರಿಗೆ ಒಂದಷ್ಟು ಹಣವನ್ನು ವಾಪಸ್ಸು ಮಾಡಿದ ಉದಾಹರಣೆಗಳನ್ನು ತೆಲುಗು ಮತ್ತು ತಮಿಳು ಸಿನಿಮಾ ರಂಗದಲ್ಲಿ ಕೇಳುತ್ತಲೇ ಇರುತ್ತೇವೆ. ಅದರಲ್ಲೂ ನಿರ್ಮಾಪಕರು ಸಂಕಷ್ಟಕ್ಕೆ ಸಿಲುಕಿದಾಗ ಅಥವಾ ವಿತರಕರು ಕೈ ಸುಟ್ಟುಕೊಂಡಾಗ ಅವರ ನೆರವಿಗೆ ಅನೇಕ ಬಾರಿ ರಜನಿಕಾಂತ್ ಅವರು ನಿಂತದ್ದು ಇದೆ. ಇದೇ ಮೊದಲ ಬಾರಿಗೆ ನಿರ್ದೇಶಕರೊಬ್ಬರು ತಮ್ಮ ಸಿನಿಮಾ ಸೋಲಿನ ಹೊಣೆಹೊತ್ತು ಸಂಭಾವನೆಯನ್ನು ಹಿಂದುರಿಗಿಸಲು ಮುಂದಾಗಿದ್ದಾರಂತೆ. ಇದನ್ನೂ ಓದಿ: ಚಿರು ಮಗನನ್ನು ನಾನೇ ಲಾಂಚ್ ಮಾಡುತ್ತೇನೆ : ಅರ್ಜುನ್ ಸರ್ಜಾ

    ಇತ್ತೀಚೆಗೆ ಬಿಡುಗಡೆಯಾದ ಚಿರಂಜೀವಿ ನಟನೆಯ ಆಚಾರ್ಯ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಮಕಾಡೆ ಮಲಗಿತು. ಹೇಳಿಕೊಳ್ಳುವಷ್ಟು ಯಶಸ್ಸು ಕಾಣಲಿಲ್ಲ. ಚಿರಂಜೀವಿ ಸಿನಿಮಾಗಳು ಅಂದರೆ, ನೂರಾರು ಕೋಟಿ ರೂಪಾಯಿ ಕೊಟ್ಟು ವಿತರಣಾ ಹಕ್ಕುಗಳನ್ನು ಪಡೆದಿರುತ್ತಾರೆ. ಹಾಗಾಗಿ ವಿತರಕರಿಗೆ ನೂರಾರು ಕೋಟಿ ಲಾಸ್ ಆಗಿದೆ. ಸ್ವತಃ ವಿತರಕರೆ ತಮಗೆ ಹಣ ವಾಪಸ್ಸು ಮಾಡುವಂತೆ ಕೇಳಿದ್ದರು. ಹೀಗಾಗಿ ಸಿನಿಮಾ ಸೋಲಿನ ಹೊಣೆಯನ್ನು ನಿರ್ದೇಶಕ ಕೊರಟಾಲ ಶಿವ ಹೊತ್ತಿದ್ದಾರಂತೆ. ಹಾಗಾಗಿ ಮೂವತ್ತು ಕೋಟಿಗೂ ಅಧಿಕ ಹಣವನ್ನು ವಾಪಸ್ಸು ಮಾಡಿದ್ದಾರಂತೆ. ಇದನ್ನೂ ಓದಿ: ರೆಡ್ ಕಲರ್ ಡ್ರೆಸ್‌ನಲ್ಲಿ ಸಮಂತಾ ಮಿಂಚಿಂಗ್

    ವಿದೇಶ ಪ್ರವಾಸದಲ್ಲಿದ್ದ ಚಿರಂಜೀವಿ ಇದೀಗ ವಾಪಸ್ಸಾಗಿದ್ದಾರೆ. ಯಾವ ಏರಿಯಾದಿಂದ ಎಷ್ಟೆಷ್ಟು ಹಣ ಬಂದಿದೆ ಎಂದು ಲೆಕ್ಕಾಚಾರ ಹಾಕಿಸಿ, ಯಾರಿಗೆ ಎಷ್ಟು ಹಣವನ್ನು ಮರಳಿಸಬೇಕು ಎಂದು ಲೆಕ್ಕಹಾಕಿಸಿದ್ದಾರಂತೆ. ಸಿನಿಮಾ ಟೀಮ್‍ನಲ್ಲಿ ಯಾರು ಎಷ್ಟೆಷ್ಟು ಹಣ ಕೊಡಬೇಕು ಎಂದು ಸೂಚಿಸಿದ್ದರಂತೆ. ನಿರ್ದೇಶಕ ಕೊರಟಾಲ ಶಿವ ಅವರು ಚಿರಂಜೀವಿ ಅವರು ಹೇಳಿದ್ದಕ್ಕಿಂತಲೂ ಹೆಚ್ಚಿನ ಹಣ ನೀಡಿದ್ದಾರೆ ಎನ್ನುವ ಸುದ್ದಿಯಿದೆ. ಇದನ್ನೂ ಓದಿ: ಹೇಗಿದ್ದೀರಾ, ಚೆನ್ನಾಗಿದ್ದೀರಾ? ಎಂದು ಕೇಳುವುದನ್ನೇ ನಿಲ್ಲಿಸಿ ಬಿಟ್ಟಿದ್ದೆ : ಧ್ರುವ ಸರ್ಜಾ

    ಕೇವಲ ಕೊರಟಾಲ ಶಿವ ಮಾತ್ರವಲ್ಲ ಚಿರಂಜೀವಿ ಕೂಡ ಹಣವನ್ನು ವಾಪಸ್ಸು ಮಾಡಿದ್ದಾರಂತೆ. ಅಲ್ಲದೇ, ಅವಶ್ಯ ಬಿದ್ದರೆ ಮತ್ತಷ್ಟು ಕೊಡುವುದಾಗಿಯೂ ಅವರು ಹೇಳಿದ್ದಾರೆ. ಏಪ್ರಿಲ್ 29 ರಂದು ಬಿಡುಗಡೆಯಾದ ಆಚಾರ್ಯ ಸಿನಿಮಾದಲ್ಲಿ ಚಿರಂಜೀವಿ ಜೊತೆ ಪುತ್ರ ರಾಮ್ ಚರಣ್ ತೇಜ ಕೂಡ ನಟಿಸಿದ್ದರು. ಆದರೂ, ಈ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಗೆಲ್ಲುವುದಕ್ಕೆ ಆಗಿರಲಿಲ್ಲ.

  • ಪೂಜಾ ಹೆಗ್ಡೆಗೆ ಬೆನ್ನಬಿಡದ ಸೋಲು: ಸತತ ಮೂರು ಸಿನಿಮಾಗಳು ಫ್ಲಾಪ್

    ಪೂಜಾ ಹೆಗ್ಡೆಗೆ ಬೆನ್ನಬಿಡದ ಸೋಲು: ಸತತ ಮೂರು ಸಿನಿಮಾಗಳು ಫ್ಲಾಪ್

    ಸೌತ್ ಸಿನಿಮಾ ಮತ್ತು ಬಾಲಿವುಡ್‌ನಲ್ಲಿ ಸಿಕ್ಕಾಪಟ್ಟೆ ಬೇಡಿಕೆಯಿರೋ ನಟಿ ಪೂಜಾ ಹೆಗ್ಡೆ, ಸಾಕಷ್ಟು ಹಿಟ್ ಸಿನಿಮಾಗಳನ್ನ ಕೊಟ್ಟಿರೋ ನಟಿ ಪೂಜಾ, ಇತ್ತೀಚೆಗೆ ಬ್ಯಾಕ್ ಟು ಬ್ಯಾಕ್ ಮೂರು ಚಿತ್ರಗಳು ಬಾಕ್ಸ್ಆಫೀಸ್‌ನಲ್ಲಿ ಸೋಲಿನ ರುಚಿ ಕಂಡಿದೆ.

    ತಮಿಳಿನ `ಮುಗಮುಡಿ’ ಚಿತ್ರದ ಮೂಲಕ ಕಾಲಿವುಡ್‌ಗೆ ಲಗ್ಗೆಯಿಟ್ಟ ನಟಿ ಪೂಜಾ, ನಂತರ 2016ರಲ್ಲಿ `ಮೊಹೆಂಜೊ ದಾರೋ’ ಚಿತ್ರದಲ್ಲಿ ಹೃತಿಕ್ ರೋಷನ್‌ಗೆ ನಾಯಕಿಯಾಗುವ ಮೂಲಕ ಬಾಲಿವುಡ್‌ನಲ್ಲೂ ಗುರುತಿಸಿಕೊಂಡ್ರು. ಬಳಿಕ 2020ರಲ್ಲಿ `ಅಲ್ಲಾ ವೈಕುಂಠಪುರಮುಲೋ’ ಅಲ್ಲು ಅರ್ಜುನ್‌ಗೆ ನಾಯಕಿಯಾಗಿ ಸೈ ಎನಿಸಿಕೊಂಡ್ರು. ಈ ಚಿತ್ರದ ಮೂಲಕ ಪೂಜಾ ಕೆರಿಯರ್‌ಗೆ ಬಿಗ್ ಬ್ರೇಕ್ ಸಿಕ್ಕಿತ್ತು. ಆದರೆ `ರಾಧೆ ಶ್ಯಾಮ್’,`ಬೀಸ್ಟ್’, `ಆಚಾರ್ಯ’ ಸಾಲು ಸಾಲು ಸಿನಿಮಾ ಬಾಕ್ಸ್ಆಫೀಸ್‌ನಲ್ಲಿ ಮಕಾಡೆ ಮಲಗಿದೆ.

    ಪ್ರಭಾಸ್ ಮತ್ತು ಪೂಜಾ ನಟನೆಯ `ರಾಧೆ ಶ್ಯಾಮ್’ ಮಾರ್ಚ್ 11ರಂದು ತೆರೆ ಕಂಡಿತ್ತು. ಚಿತ್ರದಲ್ಲಿ ಪೂಜಾ ಪಾತ್ರಕ್ಕೂ ಸಾಕಷ್ಟು ಪ್ರಾಮುಖ್ಯತೆಯಿತ್ತು. ಆದರೆ ಚಿತ್ರಮಂದಿರದಲ್ಲಿ ಮೋಡಿ ಮಾಡೋದ್ರಲ್ಲಿ ಸೋತಿತ್ತು. `ಬೀಸ್ಟ್’ ಚಿತ್ರ ರಿಲೀಸ್‌ಗೂ ಮುನ್ನ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿತ್ತು. `ಬೀಸ್ಟ್’ ಚಿತ್ರನು ಕೂಡ ಪ್ರೇಕ್ಷಕರಿಗೆ ನಿರಾಸೆ ಮಾಡಿದೆ. `ಆಚಾರ್ಯ’ ಚಿತ್ರದಲ್ಲಿ ಪೂಜಾ ಹೆಗ್ಡೆ ನಾಲ್ಕು ದೃಶ್ಯಗಳಿಗೆ ಅಷ್ಟೇ ಸೀಮಿತವಾಗಿದ್ದು, ಈ ಚಿತ್ರ ಕೂಡ ಪ್ರೇಕ್ಷಕರಿಗೆ ಮನರಂಜನೆ ನೀಡುವಲ್ಲಿ ಸೋತಿದೆ. ಇದನ್ನೂ ಓದಿ: `ಪುಷ್ಪ’ ಬೆಡಗಿ ರಶ್ಮಿಕಾ ಒಂದೇ ದಿನ ಏನೆಲ್ಲಾ ತಿಂತಾರೆ ಗೊತ್ತಾ? ರಶ್ಮು ವಿಡಿಯೋ ವೈರಲ್

    ಹೀಗೆ ಕರಾವಳಿ ಬ್ಯೂಟಿ ಪೂಜಾ ನಟನೆಯ ಸತತ ಮೂರು ಸಿನಿಮಾಗಳು ಸೋತಿದೆ. ಪೂಜಾ ಕೆರಿಯರ್‌ಗೆ ಬಿಗ್ ಬ್ರೇಕ್ ಬೇಕಾಗಿದೆ. ಸದ್ಯ ಪೂಜಾ ಕೈಯಲ್ಲಿ `ಸರ್ಕಸ್’ ಮತ್ತು ಮಹೇಶ್ ಬಾಬು ಮತ್ತು ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಕಾಂಬಿನೇಷನ್ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರಗಳಿಂದಾದರೂ ಸಕ್ಸಸ್ ಸಿಗಲಿದೆಯಾ ಕಾದು ನೋಡಬೇಕಿದೆ.

     

     

  • ಟಾಲಿವುಡ್ ನಟ ಚಿರಂಜೀವಿಗೆ ಕೊರೊನಾ ಪಾಸಿಟಿವ್

    ಟಾಲಿವುಡ್ ನಟ ಚಿರಂಜೀವಿಗೆ ಕೊರೊನಾ ಪಾಸಿಟಿವ್

    ಹೈದರಾಬಾದ್: ಟಾಲಿವುಡ್ ಖ್ಯಾತ ನಟ ಚಿರಂಜೀವಿ ಕೊನಿಡೆಲಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

    ಈ ಕುರಿತು ಟ್ವೀಟ್ ಮಾಡುವ ಮೂಲಕ ಅವರು ಖಚಿತಪಡಿಸಿದ್ದು, ಆಚಾರ್ಯ ಸಿನಿಮಾ ಚಿತ್ರೀಕರಣ ಆರಂಭಿಸುವುದಕ್ಕೂ ಮುನ್ನ ಕೊರೊನಾ ಟೆಸ್ಟ್ ಗೆ ಒಳಗಾದೆ. ಈ ವೇಳೆ ಪಾಸಿಟಿವ್ ವರದಿ ಬಂದಿದೆ. ನನಗೆ ಯಾವುದೇ ರೀತಿಯ ರೋಗ ಲಕ್ಷಣಗಳಿಲ್ಲ. ಹೀಗಾಗಿ ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ.

    ಇತ್ತೀಚೆಗೆ ಕಳೆದ 5 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆಗೆ ಒಳಗಾಗಬೇಕೆಂದು ವಿನಂತಿಸುತ್ತೇನೆ. ನನ್ನ ಆರೋಗ್ಯದ ಸ್ಥಿತಿಯ ಬಗ್ಗೆ ನಿಮಗೆ ಶೀಘ್ರವೇ ಅಪ್‍ಡೇಟ್ ನೀಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಲೆಟರ್ ಹೆಡ್ ಇರುವ ಪತ್ರವನ್ನು ಹಂಚಿಕೊಳ್ಳುವ ಮೂಲಕ ಚಿರಂಜೀವಿ ಈ ಕುರಿತು ಖಚಿತಪಡಿಸಿದ್ದಾರೆ. ಸದ್ಯ ಹೋಮ್ ಐಸೋಲೇಶನ್‍ಗೆ ಒಳಪಟ್ಟಿದ್ದಾರೆ.

    ಇಂದಿನಿಂದ ಆಚಾರ್ಯ ಸಿನಿಮಾ ಶೂಟಿಂಗ್ ಆರಂಭವಾಗಿದ್ದು, ಚಿರಂಜೀವಿ ಹಾಗೂ ಕೊರಟಾಲ ಶಿವ ತಮ್ಮ ಭಾಗದ ಚಿತ್ರೀಕರಣಕ್ಕೆ ಹಾಜರಾಗಿದ್ದರು. ಕೊರೊನಾ ನಿಯಮದಂತೆ ಚಿತ್ರ ತಂಡದ ಎಲ್ಲ ಸದಸ್ಯರಿಗೆ ಪರೀಕ್ಷೆ ಮಾಡಲಾಗಿದ್ದು, ಈ ವೇಳೆ ಚಿರಂಜೀವಿ ಅವರಿಗೆ ಪಾಸಿಟಿವ್ ವರದಿ ಬಂದಿದೆ.

    ಕೊರೊನಾ ಲಾಕ್‍ಡೌನ್‍ನಿಮದಾಗಿ ಆಚಾರ್ಯ ಸಿನಿಮಾ ಚಿತ್ರೀಕರಣ ಸ್ಥಗಿತವಾಗಿತ್ತು. ಇದೀಗ ಮತ್ತೆ ಆರಂಭವಾಗಿದ್ದು, ಹೈದರಾಬಾದ್‍ನಲ್ಲಿ ಚಿತ್ರಕರಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಇಂದು ಚಿರಂಜೀವಿಗೆ ಪಾಸಿಟಿವ್ ಬಂದಿದೆ. ಚಿರಂಜೀವಿ ಸೇರಿದಂತೆ ಇತರ ಪ್ರಮುಖ ಪಾತ್ರಗಳ ಶೂಟಿಂಗ್ ಮಾಡಲು ಚಿತ್ರತಂಡ ಯೋಜಿಸಿತ್ತು. ಈ ಚಿತ್ರವನ್ನು ಮ್ಯಾಟನಿ ಎಂಟರ್ ಟೈನ್ಮೆಂಟ್ ಸಹಯೋಗದೊಂದಿಗೆ ಕೊನಿಡೆಲಾ ಪ್ರೊಡಕ್ಷನ್ಸ್ ನಿರ್ಮಿಸುತ್ತಿದ್ದು, ಕಾಜಲ್ ಅಗರ್ವಾಲ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.