Tag: Acharya Pramod Krishnam

  • ರಾಹುಲ್‌ ಗಾಂಧಿಗೆ ಕಸದ ಬುಟ್ಟಿಯ ಬಗ್ಗೆ ಸಾಕಷ್ಟು ಅನುಭವವಿದೆ: ಆಚಾರ್ಯ ಪ್ರಮೋದ್‌ ಕೃಷ್ಣಂ ಮತ್ತೆ ವಾಗ್ದಾಳಿ

    ರಾಹುಲ್‌ ಗಾಂಧಿಗೆ ಕಸದ ಬುಟ್ಟಿಯ ಬಗ್ಗೆ ಸಾಕಷ್ಟು ಅನುಭವವಿದೆ: ಆಚಾರ್ಯ ಪ್ರಮೋದ್‌ ಕೃಷ್ಣಂ ಮತ್ತೆ ವಾಗ್ದಾಳಿ

    ಲಕ್ನೋ: ಕಾಂಗ್ರೆಸ್‌ನ ಮಾಜಿ ನಾಯಕ ಆಚಾರ್ಯ ಪ್ರಮೋದ್‌ ಕೃಷ್ಣಂ (Acharya Pramod Krishnam) ಅವರು ರಾಹುಲ್ ಗಾಂದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಕಳೆದ 13-14 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಕಸದ ಬುಟ್ಟಿಗೆ ಎಸೆದಿರುವ ರಾಹುಲ್ ಗಾಂಧಿ ಅವರಿಗೆ ಸಾಕಷ್ಟು ಅನುಭವವಿದೆ ಎಂದು ಕಿಡಿಕಾರಿದ್ದಾರೆ.

    ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ‘ಅಗ್ನಿವೀರ್ ಯೋಜನೆ’ಯನ್ನು ಕಸದ ಬುಟ್ಟಿಗೆ ಎಸೆಯುವುದಾಗಿ ರಾಹುಲ್ ಗಾಂಧಿ ನಿರಂತರವಾಗಿ ಹೇಳುತ್ತಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಆಚಾರ್ಯ ಪ್ರಮೋದ್ ಕೃಷ್ಣಂ ಅವರು, ರಾಹುಲ್ ಗಾಂಧಿ (Rahul Gandhi) ಅವರಿಗೆ ಕಸದ ತೊಟ್ಟಿಗಳಲ್ಲಿ ಸಾಕಷ್ಟು ಅನುಭವವಿದೆ. ಮನಮೋಹನ್ ಜಿಯವರ ಸುಗ್ರೀವಾಜ್ಞೆಯನ್ನು ಹರಿದು ಕಸದ ಬುಟ್ಟಿಗೆ ಎಸೆದಿದ್ದರು. ಅವರು 13-14 ವರ್ಷಗಳಲ್ಲಿ ಇಡೀ ಕಾಂಗ್ರೆಸ್ ಅನ್ನು ಕಸದ ಬುಟ್ಟಿಗೆ ಎಸೆದರು ಎಂದರು.

    ಸೋನಿಯಾ, ರಾಜೀವ್, ಇಂದಿರಾ ಅವರ ಜೊತೆಗಿದ್ದ ಕಾಂಗ್ರೆಸ್‌ನ ದೊಡ್ಡ ನಾಯಕರನ್ನೂ ಕಸದ ಬುಟ್ಟಿಗೆ ಎಸೆಯಲಾಯಿತು. ರಾಹುಲ್ ಗಾಂಧಿ ಅವರೇ ಧೈರ್ಯ ಇದ್ದರೆ ಈ ದೇಶವನ್ನು ಕಸದ ಬುಟ್ಟಿಗೆ ಎಸೆಯಿರಿ. ಅವರೇ ಕಸದ ಒಡೆಯ. ಅವರು ಯಾರನ್ನೂ ಕಸದ ಬುಟ್ಟಿಗೆ ಎಸೆಯಬಹುದು. ಸನಾತನವನ್ನು ಕಸದ ಬುಟ್ಟಿಗೆ ಎಸೆಯಲು ಬಯಸುತ್ತಾರೆ ಎಂದು ರಾಗಾ ವಿರುದ್ಧ ಆಚಾರ್ಯರು ತೀವ್ರ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಗಾ ಒಬ್ಬ ಮಹಾನ್‌ ವ್ಯಕ್ತಿ, ಗಾಂಧೀಜಿ ಕನಸು ನನಸು ಮಾಡ್ತಿದ್ದಾರೆ: ಆಚಾರ್ಯ ಪ್ರಮೋದ್ ಕೃಷ್ಣಂ ಕಿಡಿ

    ಈ ಹಿಂದೆ ವಾಗ್ದಾಳಿ ನಡೆಸಿದ್ದ ಆಚಾರ್ಯರು, ಕಾಂಗ್ರೆಸ್ ತೊಲಗಬೇಕು ಎಂದು ಮಹಾತ್ಮ ಗಾಂಧೀಜಿ ಕನಸು ಕಂಡಿದ್ದರು, ಬಿಜೆಪಿಯಿಂದ ಆ ಕೆಲಸ ಮಾಡಲು ಸಾಧ್ಯವಿಲ್ಲ, ಆದರೆ ರಾಹುಲ್ ಗಾಂಧಿ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಮಹಾನ್ ವ್ಯಕ್ತಿ, ಅವರು ಏನು ಬೇಕಾದರೂ ಹೇಳಬಲ್ಲರು. ಕಾಂಗ್ರೆಸ್ ಅನ್ನು ನಾಶ ಮಾಡುವ ಕೆಲಸವನ್ನು ಅವರು ಚೆನ್ನಾಗಿ ಮಾಡುತ್ತಿದ್ದಾರೆ. ನನಗಷ್ಟೇ ಅಲ್ಲ, ದೇಶಾದ್ಯಂತ ಇರುವ ಕೋಟ್ಯಂತರ ಕಾಂಗ್ರೆಸ್ ಕಾರ್ಯಕರ್ತರಿಗೆ ಇದರ ಅರಿವಿದೆ ಎಂದಿದ್ದರು.

    ಇದೇ ವೇಳೆ ಲೋಕಸಭಾ ಚುನಾವಣೆಯ ಫಲಿತಾಂಶದ ಕುರಿತು ಹೇಳಿಕೆ ನೀಡಿದ್ದ ಅವರು, ಜೂನ್ 4 ರ ನಂತರ ಕಾಂಗ್ರೆಸ್ ಇಲ್ಲಿಯವರೆಗೆ ಕಡಿಮೆ ಸ್ಥಾನಗಳನ್ನು ಗೆದ್ದ ಪಕ್ಷವಾಗಲಿದೆ ಎಂದು ಭವಿಷ್ಯ ನುಡಿದಿದ್ದರು.

  • ಕಾಂಗ್ರೆಸ್‌ನಿಂದ ಆಚಾರ್ಯ ಪ್ರಮೋದ್ ಕೃಷ್ಣಂ ಉಚ್ಛಾಟನೆ- ಕೈ ನಾಯಕ ಹೇಳಿದ್ದೇನು?

    ಕಾಂಗ್ರೆಸ್‌ನಿಂದ ಆಚಾರ್ಯ ಪ್ರಮೋದ್ ಕೃಷ್ಣಂ ಉಚ್ಛಾಟನೆ- ಕೈ ನಾಯಕ ಹೇಳಿದ್ದೇನು?

    ನವದೆಹಲಿ: ಪಕ್ಷ ವಿರೋಧ ಹೇಳಿಕೆ ನೀಡಿರುವುದಕ್ಕಾಗಿ ಆಚಾರ್ಯ ಪ್ರಮೋದ್ ಕೃಷ್ಣಂ (Acharya Pramod Krishnam) ಅವರನ್ನು ಕಾಂಗ್ರೆಸ್‌ 6 ವರ್ಷಗಳ ಅವಧಿಗೆ ಉಚ್ಛಾಟನೆ ಮಾಡಿದೆ.

    ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಮರುದಿನವೇ ಕಾಂಗ್ರೆಸ್‌ ಹೈಕಮಾಂಡ್‌ (Congress Highcommand) ಆಚಾರ್ಯ ವಿರುದ್ಧ ಈ ಕ್ರಮ ಕೈಗೊಂಡಿದೆ. ಉಚ್ಛಾಟನೆಯ ಬೆನ್ನಲ್ಲೇ ಆಚಾರ್ಯ ಅವರು ಎಮ್ಮ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದಾರೆ, ರಾಮ ಮತ್ತು ರಾಷ್ಟ್ರ… ಯಾವುದೇ ರಾಜಿ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

    ಅಶಿಸ್ತು ಮತ್ತು ಪಕ್ಷದ ವಿರುದ್ಧ ಪದೇ ಪದೇ ಹೇಳಿಕೆ ನೀಡುತ್ತಿರುವ ದೂರುಗಳನ್ನು ಗಮನದಲ್ಲಿಟ್ಟುಕೊಂಡು, ಪ್ರಮೋದ್ ಕೃಷ್ಣಂ ಅವರನ್ನು ಆರು ವರ್ಷಗಳ ಕಾಲ ಉಚ್ಚಾಟಿಸುವ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಸ್ತಾವನೆಗೆ ಕಾಂಗ್ರೆಸ್ ಅಧ್ಯಕ್ಷರು ಅನುಮೋದನೆ ನೀಡಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ತಿಳಿಸಿದ್ದಾರೆ.

    ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಕಾಂಗ್ರೆಸ್ ಭಾಗವಹಿಸದಿರುವುದನ್ನು ಆಚಾರ್ಯ ಪ್ರಮೋದ್ ಕೃಷ್ಣಂ ಟೀಕಿಸಿದ್ದರು. ಅಲ್ಲದೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು (Bhart Jodo Nyay Yatre) ರಾಜಕೀಯ ಪ್ರವಾಸೋದ್ಯಮ ಎಂದು ಕರೆದಿದ್ದರು. ಕಾಂಗ್ರೆಸ್ ಇನ್ನೂ ಟ್ರಾವೆಲಿಂಗ್ ಮಾಡುತ್ತಿದೆ, ಆದರೆ ಇತರ ಪಕ್ಷಗಳು ಮುಂಬರುವ 2024 ರ ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿವೆ ಎಂದು ಪಕ್ಷ ವಿರುದ್ಧವೇ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಈಶ್ವರಪ್ಪ ಸ್ವಲ್ಪ ಉಗ್ರವಾದಿ, ಆದ್ರೆ ಗುಂಡು ಹಾರಿಸುವಷ್ಟು ಉಗ್ರರಲ್ಲ: ಸದಾನಂದ ಗೌಡ

    ಆಚಾರ್ಯ ಪ್ರಮೋದ್ ಕೃಷ್ಣಂ ಯಾರು?: 2019 ರ ಲೋಕಸಭಾ ಚುನಾವಣೆಯಲ್ಲಿ ಲಕ್ನೋದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಆದರೂ ಅವರು 1.8 ಲಕ್ಷ ಮತಗಳನ್ನು ಗಳಿಸುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದರು. 2014 ರಲ್ಲಿ ಯುಪಿಯ ಸಂಭಾಲ್‌ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ (Loksabha Election) ಸ್ಪರ್ಧಿಸಿ ವಿಫಲರಾಗಿದ್ದರು.

    ಆಚಾರ್ಯ ಪ್ರಮೋದ್ ಅವರು ಈ ಹಿಂದೆ ಉತ್ತರ ಪ್ರದೇಶ ಉಸ್ತುವಾರಿ ಹೊಂದಿದ ಪ್ರಿಯಾಂಕಾ ಗಾಂಧಿಯವರಿಗೆ ಸಲಹೆ ನೀಡಲು ರಚಿಸಿದ್ದ ಕಾಂಗ್ರೆಸ್ ನ ಉತ್ತರ ಪ್ರದೇಶ ಸಲಹಾ ಮಂಡಳಿಯ ಭಾಗವಾಗಿದ್ದರು. ತಾವು ಕಣ್ಣಿಟ್ಟಿದ್ದ ಸಂಭಾಲ್ ಮತ್ತು ಲಕ್ನೋ ಕ್ಷೇತ್ರಗಳಿಗೆ ಸಮಾಜವಾದಿ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ತಯಾರಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಈ ಉಚ್ಚಾಟನೆ ವಿಶೇಷ ಮಹತ್ವ ಪಡೆದಿದೆ.

  • ನಮ್ಮ ಪಕ್ಷದೊಳಗೆ ರಾಮ, ಹಿಂದೂಗಳನ್ನು ದ್ವೇಷಿಸುವ ನಾಯಕರಿದ್ದಾರೆ: ಕಾಂಗ್ರೆಸ್‌ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ

    ನಮ್ಮ ಪಕ್ಷದೊಳಗೆ ರಾಮ, ಹಿಂದೂಗಳನ್ನು ದ್ವೇಷಿಸುವ ನಾಯಕರಿದ್ದಾರೆ: ಕಾಂಗ್ರೆಸ್‌ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ

    ನವದೆಹಲಿ: ನಮ್ಮ ಪಕ್ಷದೊಳಗೆ ರಾಮ (Rama) ಮತ್ತು ಹಿಂದೂಗಳನ್ನು (Hindu) ದ್ವೇಷಿಸುವ ನಾಯಕರು ಇದ್ದಾರೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ (Congress) ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ (Acharya Pramod Krishnam) ಹೇಳಿದ್ದಾರೆ.

    ಕಾಂಗ್ರೆಸ್‌ನಲ್ಲಿ ರಾಮನನ್ನು ದ್ವೇಷಿಸುವ ಕೆಲವು ನಾಯಕರು ಇದ್ದಾರೆ ಎಂದು ನನಗೆ ಅನಿಸಿದೆ. ಈ ನಾಯಕರು ಹಿಂದೂ ಪದವನ್ನು ದ್ವೇಷಿಸುತ್ತಾರೆ. ಅವರು ಹಿಂದೂ ಧಾರ್ಮಿಕ ಗುರುಗಳನ್ನು ಅವಮಾನಿಸಲು ಬಯಸುತ್ತಾರೆ. ಅವರು ಪಕ್ಷದಲ್ಲಿ ಹಿಂದೂ ಧಾರ್ಮಿಕ ಗುರುಗಳು ಇರುವುದನ್ನು ಇಷ್ಟಪಡುವುದಿಲ್ಲ ಎಂದು ತಿಳಿಸಿದರು.

    ಆಚಾರ್ಯ ಕೃಷ್ಣಂ ಅವರ ಅಭಿಪ್ರಾಯಗಳು ಅಯೋಧ್ಯೆಯ ರಾಮಮಂದಿರ (Ram Mandir) ಲೋಕಾರ್ಪಣೆ ಸಮಾರಂಭಕ್ಕೆ ಕೇವಲ ಎರಡು ತಿಂಗಳ ಮೊದಲು ಬಂದಿರುವುದು ವಿಶೇಷ.  ಇದನ್ನೂ ಓದಿ: ನಾನು‌ ಪಕ್ಷದ ಶಿಸ್ತಿನ ಸಿಪಾಯಿ, ಬೆಂಗ್ಳೂರು ಉತ್ತರಕ್ಕೆ ನನ್ನ ಪುತ್ರನಿಗೆ ಟಿಕೆಟ್ ಕೊಟ್ರೆ ಕೆಲಸ ಮಾಡ್ತೀನಿ: ಅಶೋಕ್‌

    ಸನಾತನ ಧರ್ಮದ ಕುರಿತು ಉದಯನಿಧಿ ಸ್ಟಾಲಿನ್ (Udhayanidhi Stalin) ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸನಾತನ ಧರ್ಮದ (Sanatan Dharm) ವಿರುದ್ಧ ಮಾತನಾಡುವವರು ಭಾರತದ ವಿರುದ್ಧವೂ ಇರುತ್ತಾರೆ. ಏಕೆಂದರೆ ಈ ರಾಷ್ಟ್ರವನ್ನು ಸನಾತನಿಗಳು ಇಲ್ಲದೇ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಸನಾತನದ ವಿರುದ್ಧ ಮಾತನಾಡುವವರು ರಾವಣನ ವಂಶಸ್ಥರು ಮತ್ತು ಅವರ ವಿನಾಶ ಖಚಿತ ಎಂದು ಅಭಿಪ್ರಾಯಪಟ್ಟರು.

    ಸನಾತನ ಸಂಸ್ಥೆಯ ವಿರುದ್ಧ ಮಾತನಾಡುವ ರಾಜಕೀಯ ಪಕ್ಷದ ನಾಯಕರನ್ನು INDIA ಬಣದಿಂದ ಹೊರಹಾಕಬೇಕು ಎಂದು ನಾನು ಮೈತ್ರಿಕೂಟದ ಎಲ್ಲಾ ಹಿರಿಯ ನಾಯಕರಲ್ಲಿ ಮನವಿ ಮಾಡಲು ಬಯಸುತ್ತೇನೆ. ಸನಾತನ ಧರ್ಮವನ್ನು ವಿರೋಧಿಸುವುದನ್ನು ನಿಲ್ಲಿಸುವ ನಿರ್ಧಾರವನ್ನು ತೆಗೆದುಕೊಳ್ಳುವ ಸಮಯ ಬಂದಿದೆ ಎಂದು ಹೇಳಿದರು.

    ಕಳೆದ ತಿಂಗಳು ಲಕ್ನೋದ ಕಾಂಗ್ರೆಸ್ ನಾಯಕ ಅವರು ಬಿಎಸ್ಪಿ ವರಿಷ್ಠೆ ಮಾಯಾವತಿ (Mayawati) ಅವರನ್ನು ಮೈತ್ರಿಗೆ ಆಹ್ವಾನಿಸುವಂತೆ INDIA ನಾಯಕರಿಗೆ ಸಲಹೆ ನೀಡಿದ್ದರು. ಮಾಯಾವತಿ ಅವರನ್ನು ಒಕ್ಕೂಟಕ್ಕೆ ಸೇರಿಸದೇ ಇದ್ದರೆ ಬಿಜೆಪಿಯನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದರು.

     

    ಉತ್ತರ ಪ್ರದೇಶದಲ್ಲಿ ಮಾಯಾವತಿ 18%-22% ಮತದಾರರ ಮೇಲೆ ಪ್ರಭಾವ ಬೀರುವ ನಾಯಕಿಯಾಗಿದ್ದಾರೆ. ಮಾಯಾವತಿ ಇಲ್ಲದೆ INDIA ರಚನೆಯಾದರೆ ಅದನ್ನು ‘ಮಹಾಮೈತ್ರಿ’ ಎಂದು ಕರೆಯಲು ಸಾಧ್ಯವಿಲ್ಲ. ಬಿಜೆಪಿಯನ್ನು ಸೋಲಿಸಬೇಕಾದರೆ ಸಮಾಜವಾದಿ ಪಕ್ಷ, ರಾಷ್ಟ್ರೀಯ ಲೋಕದಳ, ಕಾಂಗ್ರೆಸ್ ಜೊತೆಗೆ ಮಾಯಾವತಿ ಜೊತೆ ಮೈತ್ರಿ ಮಾಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟಿದ್ದರು.

    ಆಚಾರ್ಯ ಪ್ರಮೋದ್ 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಪಡೆದು ಲಕ್ನೋದಿಂದ ಸ್ಪರ್ಧಿಸಿದ್ದರು. ಆದರೆ ಬಿಜೆಪಿಯ ರಾಜನಾಥ್ ಸಿಂಗ್ ವಿರುದ್ಧ ಸೋತಿದ್ದರು.