ಲಕ್ನೋ: ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (83) (Acharya Satyendra Das) ಅವರು ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನ ಸ್ನಾತಕೋತ್ತರ ಸಂಸ್ಥೆಯಲ್ಲಿ (SGPGI) ಬುಧವಾರ ನಿಧನರಾಗಿದ್ದಾರೆ.
ನವದೆಹಲಿ: ತಿರುಪತಿ ಲಡ್ಡು (Tirupati Laddoos) ಪ್ರಸಾದದಲ್ಲಿ ಮೀನಿನ ಎಣ್ಣೆಯನ್ನು ಬೆರೆಸಿರುವುದು ತಪಾಸಣೆಯಿಂದ ಸ್ಪಷ್ಟವಾಗಿದೆ ಎಂದು ರಾಮಜನ್ಮಭೂಮಿಯ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (Acharya Satyendra Das) ತಿಳಿಸಿದ್ದಾರೆ.
ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣ ಕುರಿತು ಮಾತನಾಡಿದ ಅವರು, ಇದೆಲ್ಲ ಯಾವಾಗ ನಡೆದಿದೆ ಎಂಬುದು ಇನ್ನೂ ತಿಳಿದಿಲ್ಲ. ಇದು ಪಿತೂರಿಯಾಗಿದೆ ಮತ್ತು ಸನಾತನ ಧರ್ಮದ ಮೇಲಿನ ದಾಳಿಯಾಗಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ತಪ್ಪಿತಸ್ಥರನ್ನು ಶಿಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆ – ಜಗನ್ ಅವಧಿಯಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ!
ತಿರುಪತಿ ದೇವಸ್ಥಾನ ಲಡ್ಡು ಪ್ರಸಾದದಲ್ಲಿ ಹಿಂದಿನ ಜಗನ್ಮೋಹನ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರ ತುಪ್ಪದ ಬದಲು ಪ್ರಾಣಿಗಳ ಕೊಬ್ಬು ಬಳಸುತ್ತಿತ್ತು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ.
ಅಯೋಧ್ಯೆ: ಕಳೆದ ವರ್ಷ ಜನವರಿ 22ರಂದು ಲೋಕಾರ್ಪಣೆಗೊಂಡ ಅಯೋಧ್ಯೆಯ ರಾಮ ಮಂದಿರದ ಗರ್ಭಗುಡಿಯಲ್ಲಿ (Ram Mandir sanctum) ಶನಿವಾರ ಭಾರೀ ಮಳೆಗೆ ಸೋರಿಕೆ ಕಂಡುಬಂದಿದೆ. ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (Acharya Satyendra Das) ಅವರು ಮಳೆ ನೀರು ಸೋರಿಕೆ ಖಚಿತಪಡಿಸಿದ್ದು, ದೇವಸ್ಥಾನ ನಿರ್ಮಾಣ ಕಾರ್ಯದಲ್ಲಿ ಲೋಪವಾಗಿದೆ ಎಂದು ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ. ಮಳೆಗೆ (Rain In Ayodhya) ದೇವಾಲಯದ ಗರ್ಭಗುಡಿಯ ಮೇಲ್ಛಾವಣಿಯಿಂದ ಭಾರೀ ನೀರು ಸೋರಿಕೆಯಾಗಿದೆ. ಮಳೆಗೆ ದೇವಸ್ಥಾನದ ಪವಿತ್ರ ಗರ್ಭಗುಡಿಯ ಚಾವಣಿಯಿಂದ ತೀವ್ರ ಸೋರಿಕೆಯಾಗಿದೆ. ಬಾಲರಾಮನ ವಿಗ್ರಹದ ಮುಂದೆ ಅರ್ಚಕರು ಕೂರುವ ಸ್ಥಳದಲ್ಲಿ, ವಿಐಪಿ ದರ್ಶನಕ್ಕಾಗಿ ಜನರು ಬರುವ ಸ್ಥಳದಲ್ಲಿಯೂ ನೀರು ಬೀಳುತ್ತಿದೆ. ಮಳೆಯ ನೀರು ಹೋಗಲು ಸರಿಯಾದ ಚರಂಡಿ ವ್ಯವಸ್ಥೆಯೂ ಇಲ್ಲ. ಹಿರಿಯ ಅಧಿಕಾರಿಗಳು ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಚಾರ್ಯ ಸತ್ಯೇಂದ್ರ ದಾಸ್ ಆಗ್ರಹಿಸಿದ್ದಾರೆ.
ದೇಶದ ಮೂಲೆ ಮೂಲೆಯಿಂದ ಬಂದ ಇಂಜಿನಿಯರುಗಳು ಶ್ರೀರಾಮ ಮಂದಿರ ನಿರ್ಮಿಸುತ್ತಿರುವುದು ಬಹಳ ಅಚ್ಚರಿ ಮೂಡಿಸುತ್ತಿದೆ. ಜನವರಿ 22ರಂದು ಮಂದಿರವನ್ನು ಉದ್ಘಾಟಿಸಲಾಗಿತ್ತು. ಆದರೆ ಮಳೆ ಬಂದರೆ ಚಾವಣಿ ಸೋರಲಿದೆ ಅಂತ ಯಾರಿಗೂ ತಿಳಿದಿರಲಿಲ್ಲ. ವಿಶ್ವ ಪ್ರಸಿದ್ಧ ದೇವಸ್ಥಾನದ ಚಾವಣಿ ಸೋರುತ್ತಿರುವುದು ಅಚ್ಚರಿಯ ವಿಷಯ. ಇದು ಏಕೆ ಆಯಿತು? ದೊಡ್ಡ ದೊಡ್ಡ ಇಂಜಿನಿಯರುಗಳಿದ್ದೂ ಇಂತಹ ಘಟನೆ ನಡೆದಿರುವುದು ದೊಡ್ಡ ತಪ್ಪು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟಿಸುತ್ತಿರುವುದು ವಿಪರ್ಯಾಸ: ಬಸವರಾಜ ಬೊಮ್ಮಾಯಿ
ಬಾಲರಾಮನ ವಿಗ್ರಹ ಪ್ರತಿಷ್ಠಾಪಿಸಲಾದ ಗರ್ಭಗುಡಿಯ ಮೇಲ್ಚಾವಣಿ, ಶನಿವಾರ ರಾತ್ರಿ ಸುರಿದ ಮಳೆಗೆ ನೀರು ಸೋರಿಕೆಯಾಗಿದೆ. ಹೀಗಾಗಿ ಗರ್ಭಗುಡಿಯಲ್ಲಿ ನೀರು ತುಂಬಿಕೊಂಡಿದ್ದು, ವಿಷಯ ಗಮನಕ್ಕೆ ಬರುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಮಂದಿರ ನಿರ್ವಹಣಾ ಸಿಬ್ಬಂದಿ ಸೋರಿಕೆಯಾಗಿರುವ ಗರ್ಭಗುಡಿಯ ಮೇಲ್ಚಾವಣೆ ಸರಿಪಡಿಸಲು ಕ್ರಮ ಕೈಗೊಂಡಿದ್ದಾರೆ.
ಗರ್ಭಗುಡಿಯಲ್ಲಿ ಮಳೆ ನೀರು ಸೋರಿಕೆ ಖಚಿತಪಡಿಸಿರುವ ಮಂದಿರ ನಿಮಾರ್ಣ ಉಸ್ತುವಾರಿ ಹೊತ್ತಿದ್ದ ನೃಪೇಂದ್ರ ಮಿಶ್ರಾ ಅವರು, ಗುರು ಮಂಟಪ ಇರುವ ಮೊದಲ ಮಹಡಿಗೆ ಯಾವುದೇ ಮೇಲ್ಚಾವಣಿ ಇಲ್ಲ. ಮಳೆ ನೀರು ತುಂಬಿಕೊಂಡು ಗರ್ಭಗುಡಿಯಲ್ಲಿ ಸೋರಿಕೆಯಾಗಿದೆ. ಶೀಘ್ರವೇ ದುರಸ್ತಿ ಮಾಡಲಾಗುತ್ತದೆ. ಗರ್ಭಗುಡಿ ನಿರ್ಮಾಣದಲ್ಲಿ ಯಾವುದೇ ಲೋಪವಾಗಿಲ್ಲ. ಗುರುಮಂಟಪಕ್ಕೆ ಮೇಲ್ಚಾವಣಿ ಇಲ್ಲದ ಕಾರಣ ನೀರು ಸೋರಿಕೆಯಾಗಿದೆ. ಮೊದಲ ಮಹಡಿಯ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಅದು ಈ ವರ್ಷದ ಜುಲೈ ವೇಳೆಗೆ ಅಂತ್ಯಗೊಳ್ಳಲಿದೆ. ಡಿಸೆಂಬರ್ ಕೊನೆಗೆ ದೇವಸ್ಥಾನ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.
ಅಯೋಧ್ಯೆ: 2024 ರ ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣ ಪ್ರತಿಷ್ಠಾಪನೆ (Pran Prathistha Ceremony) ನಡೆಯಲಿದೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ನಡೆಯುತ್ತಿವೆ. ಅಯೋಧ್ಯೆ ನಗರದಲ್ಲಿ ಆಸೀನನಾಗುವ ರಾಮನಿಗೆ ಭವ್ಯವಾದ ಮಂದಿರವು ಸಿದ್ಧವಾಗುತ್ತಿದೆ. ಈ ಸಂಬಂಧ ಅಂದು ಏನೇನು ಪೂಜೆಗಳು ನಡೆಯುತ್ತವೆ ಎಂಬುದನ್ನು ರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (Acharya Satyendra Das) ಅವರು ಮಾಹಿತಿ ನೀಡಿದ್ದಾರೆ.
#WATCH | Ayodhya, Uttar Pradesh | Chief Priest of Ram Janmabhoomi Teerth Kshetra, Acharya Satyendra Das gives details on the pranpratishtha ceremony of Ram Temple and the rituals before that.
He says, "Pranpratishtha is an extensive ritual so the puja will begin from 15-16… pic.twitter.com/wLiDBs1lgt
ಪೂಜೆಗೆ ಸಂಬಂಧಿಸಿದ ಮಾಹಿತಿಯನ್ನು ಮಾಧ್ಯಮಗಳ ಜೊತೆ ಹಂಚಿಕೊಂಡ ಅವರು, ಪ್ರಾಣ ಪ್ರತಿಷ್ಠಾಪನಾ ಒಂದು ಸಮಗ್ರ ಆಚರಣೆಯಾಗಿದೆ. ಹೀಗಾಗಿ ಪೂಜೆಗಳು ಜನವರಿ 15 – 16 ರಿಂದಲೇ ಪ್ರಾರಂಭವಾಗಲಿದೆ. ಜನವರಿ 14 ರಂದು ಧನುರ್ಮಾಸ ಕೊನೆಗೊಳ್ಳುವ ಕಾರಣ ಆಚರಣೆಗಳು ಆರಂಭವಾಗಲಿದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಪ್ರಧಾನಿ ಮೋದಿ 11 ದಿನಗಳ ವ್ರತದ ಮಹತ್ವ ಏನು?
ಧನುರ್ಮಾಸದಲ್ಲಿ ಯಾವುದೇ ಶುಭ ಕಾರ್ಯಗಳು ನಡೆಯುವುದಿಲ್ಲ. ಹೀಗಾಗಿ ಅದು ಮುಗಿದ ನಂತರವೇ ರಾಮ ಲಲ್ಲಾನನ್ನು ಪ್ರತಿಷ್ಠಾಪಿಸಲಾಗುತ್ತದೆ. ಬಾಲರಾಮನ ಪ್ರತಿಮೆಯನ್ನು ನಗರ ಪ್ರವಾಸಕ್ಕಾಗಿ ತೆಗೆದುಕೊಳ್ಳಲಾಗುತ್ತದೆ. ಬಳಿಕ ಇತರೆ ಧಾರ್ಮಿಕ ವಿಧಿ-ವಿಧಾನಗಳೂ ನಡೆಯಲಿವೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಗುಜರಾತ್‌ನಿಂದ ಅಯೋಧ್ಯೆಗೆ ಆಗಮಿಸಿದೆ 500 ಕೆಜಿಯ ಬೃಹತ್ ನಗಾರಿ
ಜನವರಿ 22 ರಂದು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಬ ಮೋದಿಯವರು ಈಗಾಗಲೇ ವ್ರತ ಕೈಗೊಂಡಿದ್ದಾರೆ. ಇಂದು ವ್ರತ ಆಚರಿಸಲಿರುವ ಪ್ರಧಾನಿಯವರು ಈ ಸಂಬಂಧ ಆಡಿಯೋ ಸಂದೇಶವೊಂದನ್ನು ಕಳುಹಿಸಿದ್ದಾರೆ. ಅದರಲ್ಲಿ ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣ ಪ್ರತಿಷ್ಠೆಗೆ ಕೇವಲ 11 ದಿನಗಳು ಉಳಿದಿವೆ. ಶುಭ ಸಮಾರಂಭಕ್ಕೆ ಸಾಕ್ಷಿಯಾಗುವ ಸೌಭಾಗ್ಯ ನನ್ನದು. ಸಮಾರಂಭದಲ್ಲಿ ಭಾರತದ ಜನರನ್ನು ಪ್ರತಿನಿಧಿಸಲು ಭಗವಂತ ನನ್ನನ್ನು ಕೇಳಿದ್ದಾನೆ. ಅದನ್ನು ಗಮನದಲ್ಲಿಟ್ಟುಕೊಂಡು ನಾನು ಇಂದಿನಿಂದ 11 ದಿನಗಳ ವಿಶೇಷ ಆಚರಣೆಯನ್ನು ಪ್ರಾರಂಭಿಸುತ್ತಿದ್ದೇನೆ. ಇದಕ್ಕಾಗಿ ನಾನು ನಿಮ್ಮೆಲ್ಲರ ಆಶೀರ್ವಾದವನ್ನು ಕೋರುತ್ತೇನೆ. ಈ ಕ್ಷಣದಲ್ಲಿ ನನ್ನ ಭಾವನೆಗಳನ್ನು ಪದಗಳಲ್ಲಿ ವ್ಯಕ್ತಪಡಿಸುವುದು ತುಂಬಾ ಕಷ್ಟ, ಆದರೆ ನಾನು ನನ್ನ ಕಡೆಯಿಂದ ಪ್ರಯತ್ನಿಸಿದ್ದೇನೆ ಎಂದಿದ್ದಾರೆ.
ಅಯೋಧ್ಯೆ: ವನವಾಸದಲ್ಲಿ ಶ್ರೀರಾಮ ಮಾಂಸಹಾರ ಸೇವಿಸುತ್ತಿದ್ದ ಎಂಬ ವಿಚಾರ ಸಂಪೂರ್ಣ ಸತ್ಯಕ್ಕೆ ದೂರವಾದದ್ದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (Acharya Satyendra Das) ಹೇಳಿದ್ದಾರೆ.
ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (Nationalist Congress Party) ನಾಯಕ ಜಿತೇಂದ್ರ ಅವ್ಹಾದ್ (Jitendra Awhad) ಅವರು ಭಗವಾನ್ ರಾಮನ ಕುರಿತು ನೀಡಿದ್ದ ಹೇಳಿಕೆ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಜಿತೇಂದ್ರ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಆಚಾರ್ಯರು, ಅವರ ಮಾತನಾಡುತ್ತಿರುವುದು ಸಂಪೂರ್ಣ ಸುಳ್ಳು, ಭಗವಾನ್ ರಾಮನು ವನವಾಸದ ಸಮಯದಲ್ಲಿ ಮಾಂಸಾಹಾರಿ ಆಹಾರವನ್ನು ಸೇವಿಸಿದ್ದಾನೆ ಎಂದು ನಮ್ಮ ಧರ್ಮಗ್ರಂಥಗಳಲ್ಲಿ ಎಲ್ಲಿಯೂ ಬರೆದಿಲ್ಲ. ಅವರು ಹಣ್ಣುಗಳನ್ನು ಸ್ವೀಕರಿಸುತ್ತಿದ್ದರು ಎಂದಿದ್ದಾರೆ. ಇದನ್ನೂ ಓದಿ: ಶ್ರೀರಾಮ ಮಾಂಸಾಹಾರಿಯಾಗಿದ್ದ.. ಬೇಟೆಯಾಡಿ ತಿನ್ನುವ ರಾಮ ನಮ್ಮವ: ಎನ್‌ಸಿಪಿ ನಾಯಕ ವಿವಾದಾತ್ಮಕ ಹೇಳಿಕೆ
ನಮ್ಮ ದೇವರು ಯಾವಾಗಲೂ ಸಸ್ಯಾಹಾರಿ. ಅವರು ನಮ್ಮ ಭಗವಾನ್ ರಾಮನನ್ನು ಅವಮಾನಿಸಲು ಕೀಳುಮಟ್ಟದ ಮಾತನಾಡುತ್ತಿದ್ದಾರೆ ಎಂದು ಆಚಾರ್ಯರು ಹೇಳಿದ್ದಾರೆ.
ಜಿತೇಂದ್ರ ಅವ್ಹಾದ್ ಅವರು, ರಾಮ ನಮ್ಮವನು. ರಾಮ ಬಹುಜನರಿಗೆ ಸೇರಿದವನು. ಬೇಟೆಯಾಡಿ ತಿನ್ನುವ ರಾಮ ನಮ್ಮವನು, ನಾವು ಬಹುಜನರಿಗೆ ಸೇರಿದವರು. ನೀವು ನಮ್ಮೆಲ್ಲರನ್ನು ಸಸ್ಯಾಹಾರಿಯನ್ನಾಗಿ ಮಾಡಲು ಹೋದಾಗ, ನಾವು ರಾಮನ ಆದರ್ಶಗಳನ್ನು ಅನುಸರಿಸುತ್ತೇವೆ. ಇಂದು ನಾವು ಕುರಿ ಮಾಂಸವನ್ನು ತಿನ್ನುತ್ತೇವೆ. ಇದು ರಾಮನ ಆದರ್ಶ. ರಾಮ ಸಸ್ಯಾಹಾರಿಯಾಗಿರಲಿಲ್ಲ, ಮಾಂಸಾಹಾರಿಯಾಗಿದ್ದ ಎಂದು ಕಾರ್ಯಕ್ರಮ ಒಂದರಲ್ಲಿ ಹೇಳಿದ್ದರು.
ಜಿತೇಂದ್ರ ಅವದ್ ನೀಡಿರುವ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಅವಹೇಳನಕಾರಿ ಮತ್ತು ರಾಮ ಭಕ್ತರ ಭಾವನೆಗೆ ಧಕ್ಕೆ ತಂದಿದೆ. ರಾಮನ ಬಗ್ಗೆ ಕೆಟ್ಟದಾಗಿ ಮಾತನಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಹಾಗೂ ಮಹಾರಾಷ್ಟ್ರ ಸರ್ಕಾರಕ್ಕೆ ಅನೇಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಯಂದು ಪಿಂಕ್ ಸಿಟಿ ಜೈಪುರದಲ್ಲಿ ಮಾಂಸ, ಮದ್ಯದಂಗಡಿ ಬಂದ್